moral policing – Peepal Media

ಸುಳ್ಯದಲ್ಲಿ ಅನೈತಿಕ ಪೊಲೀಸ್‌ ಗಿರಿ: ಐವರ ವಿರುದ್ಧ ಕೇಸ್‌, ಒಬ್ಬನ ಕೈಗೆ ಪೊಲೀಸ್‌ ಬೇಡಿ
ಸುಳ್ಯ: ಅನೈತಿಕ ಪೊಲೀಸ್‌ ಗಿರಿಗೆ ತವರಾಗಿರುವ ದಕ್ಷಿಣ ಕನ್ನಡದಲ್ಲಿ ಇನ್ನೊಂದು ಅಂತಹ ಕೃತ್ಯದ ವರದಿಯಾಗಿದೆ. ಸಂತ್ರಸ್ಥ ವ್ಯಕ್ತಿಯ ದೂರಿನ ಮೇರೆಗೆ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ.

ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39ವರ್ಷ) ಎಂಬವರು ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್ ತೋಟವನ್ನು ಕಳೆದ 3 ತಿಂಗಳ ಹಿಂದೆ ಗುತ್ತಿಗೆ ಪಡೆದು ಅರಂತೋಡಿನಲ್ಲಿ ವಾಸವಾಗಿದ್ದು, ತನ್ನ ಪರಿಚಯದ ಯುವತಿಯೋರ್ವಳು ತಾನು ಮಡಿಕೇರಿಯಿಂದ ಸುಳ್ಯ, ಕಡೆಗೆ ಬರುತ್ತಿದ್ದು ತನಗೆ ವಿಶ್ರಾಂತಿ ಪಡೆಯಲು ರೂಮ್ ಬೇಕೆಂದು ಕೇಳಿಕೊಂಡ ಮೇರೆಗೆ ಜಲೀಲ್ ಅವರು ಸುಳ್ಯದಲ್ಲಿ ರೂಂ ವ್ಯವಸ್ಥೆ ಮಾಡಿ ಬಳಿಕ ವೈಯಕ್ತಿಕ ಕೆಲಸ ನಿಮಿತ್ತ ಸುಳ್ಯ ತಾಲೂಕು ತೋಡಿಕಾನಕ್ಕೆ ತೆರಳಿದ್ದರು.

ದಾರಿಯಲ್ಲಿ ಅವರನ್ನು 5 ಜನ ಆರೋಪಿಗಳು ಕಾರು ಮತ್ತು ಸ್ಕೂಟರ್ ಮೂಲಕ ಹಿಂಬಾಲಿಸಿ ಇವರ ಕಾರನ್ನು ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ ತರಳಿದ್ದಾರೆ. ಆರೋಪಿಗಳ ಪೈಕಿ ಮೂವರ ಹೆಸರು ಲತೀಶ್ ಗುಂಡ, ವರ್ಷಿತ್ ಹಾಗೂ ಪುನೀತ್ ಎಂಬುದಾಗಿ ಹಲ್ಲೆಯ ನಡೆಯುತ್ತಿದ್ದಾಗ ಇವರಿಗೆ ತಿಳಿದುಬಂದಿದೆ. ಮತ್ತಿಬ್ಬರು ಆರೋಪಿಗಳ ಪರಿಚಯ ಸಂತ್ರಸ್ಥ ವ್ಯಕ್ತಿಗೆ ತಿಳಿದುಬಂದಿಲ್ಲ.

ಪ್ರಸ್ತುತ ಇವರ ದೂರಿನ ಮೇರೆಗೆ ಸುಳ್ಯ, ಪೊಲೀಸ್ ಠಾಣೆಯಲ್ಲಿ ಅ.ಕ್ರ 87/2023 ಕಲಂ 143, 147, 341, 323, 504, 506, 153(A) ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ ಆರೋಪಿಗಳ ಪ್ರಕಿ ಸುಳ್ಯ, ಸೊಣಂಗೇರಿ ನಿವಾಸಿ ಪುನೀತ್ ಎಂಬಾತನನ್ನು ಬಂಧಿಸಿದ್ದು, ತನಿಖೆ ಪ್ರಗತಿಯಲ್ಲಿದೆ.

ಮಂಗಳೂರಿನಲ್ಲಿ ಮತ್ತೆ ತಲೆಯೆತ್ತಿದ ಅನೈತಿಕ ಪೊಲೀಸ್‌ ಗಿರಿಯೆನ್ನುವ ಅಸಹ್ಯ: ಇಬ್ಬರ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಮೀತಿ ಮೀರಿ ಬೆಳೆಯುತ್ತಿದ್ದು ಎರಡು ದಿನಗಳ ಹಿಂದೆ ವಿಟ್ಲದಲ್ಲಿ ಪೊಲೀಸ್ ಸಿಬಂದಿಯನ್ನು ಅಡ್ಡಗಟ್ಟಿ ನಿಂದಿಸಿದ ಪ್ರಕರಣ ಮಾಸುವ ಮುನ್ನವೇ ನಗರದ ಯುವ ವರದಿಗಾರನೋರ್ವನನ್ನು ತಡೆದ ಧರ್ಮದ ಹೆಸರಿನಲ್ಲಿ ಅವಾಚ್ಯವಾಗಿ ನಿಂದಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ಇಂಟರ್ನೆಟ್‌ ಮಾಧ್ಯಮವೊಂದರ ಪತ್ರಕರ್ತರೊಬ್ಬರು ಜುಲೈ 26ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಕಾವೂರು ಜಂಕ್ಷನ್ ಬಳಿಯ ಹೋಟೆಲ್ ಒಂದರಲ್ಲಿ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿ ಜೊತೆ ಊಟ ಮುಗಿಸಿ ಹೊರ ಬರುತ್ತಿದ್ದಾಗ ಅಪರಿಚಿತರಿಬ್ಬರು ಪತ್ರಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ. ಆ ರಿಪೋರ್ಟರ್‌ ತನ್ನ ಬಳಿಯಿದ್ದ ಪತ್ರಕರ್ತರ ಗುರುತಿನ ಚೀಟಿ ತೋರಿಸಿದರೂ ಬಿಡದೆ ಹೊಲಸು ಪದಗಳನ್ನು ಬಳಸಿ ಬಯ್ದಿದ್ದಾರೆ ಎನ್ನಲಾಗಿದೆ.

ಈ ಕುರಿತು ಪತ್ರಕರ್ತ ಅದೇ ದಿನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ವೇಳೆ ದೂರಿನಲ್ಲಿ ನಿಂದಿಸಿದ್ದ ವ್ಯಕ್ತಿಯ ಕಾರಿನ ನಂಬರ್ ನಮೂದಿಸಿದ್ದರು. ನಗರ ಪೊಲೀಸ್ ಆಯುಕ್ತ ಕುಲದೀಪ್ ಆರ್ ಜೈನ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅವರ ನಿರ್ದೇಶನದ ಮೇರೆಗೆ ಕಾವೂರು ಪೊಲೀಸರು ಕೋಟೆಕಾರ್ ನಿವಾಸಿ ಚೇತನ್ ಕುಮಾರ್ (38), ಯೆಯ್ಯಾಡಿ ನಿವಾಸಿ ನವೀನ್(39) ಎಂಬವರನ್ನು ಬಂಧಿಸಿದ್ದಾರೆ. ವಿಚಾರಣೆ ಬಳಿಕ ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಆರೋಪಿಗಳ ಪೈಕಿ ಚೇತನ್‌ ಕುಮಾರ್‌ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಇಬ್ಬರ ವಿರುದ್ಧ ಸೆಕ್ಷನ್‌ 506, 507ರ ಅಡಿ ಪ್ರಕರಣ ದಾಖಲಿಸಲಾಗಿದೆ.