mukyamantri chandru – Peepal Media

ರಾಜ್ಯದ ಪರವಾಗಿ ಧ್ವನಿಯೆತ್ತಿದ ಏಕೈಕ ಸಂಸದ ಡಿಕೆ ಸುರೇಶ್ : ಡಾ. ಮುಖ್ಯಮಂತ್ರಿ ಚಂದ್ರು ಶ್ಲಾಘನೆ
ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಅವರು ಇಂದು ಚುನಾವಣಾ ಪ್ರಚಾರ ಮಾಡಿದರು.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪಟ್ಟಣದಲ್ಲಿ ತೆರೆದ ವಾಹನದಲ್ಲಿ ಡಿ.ಕೆ. ಸುರೇಶ್ ಜೊತೆಗೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಚಂದ್ರು, ಡಿ.ಕೆ. ಸುರೇಶ್ ರಾಜ್ಯದ ಅತ್ಯುತ್ತಮ ಸಂಸದರಾಗಿದ್ದು, ಅವರಿಗೆ ಈ ಬಾರಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳಿಗೆ ₹2000 ನೀಡುವ ಬಗ್ಗೆ ಹೆಚ್‌.ಡಿ. ಕುಮಾರಸ್ವಾಮಿ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿದ ಅವರು ಕೂಡ ಅದೇ ಮನಸ್ಥಿತಿಯನ್ನು ಬೆಳೆಸಿಕೊಂಡಿದ್ದಾರೆ. ಇಂತಹ ದುಷ್ಟಶಕ್ತಿಗಳನ್ನು ಅಧಿಕಾರದಿಂದ ದೂರವಿಡಲು ಈ ಬಾರಿ ಡಿ.ಕೆ. ಸುರೇಶ್ ಅವರಿಗೆ ಮತ ಹಾಕುವಂತೆ ಮನವಿ ಮಾಡಿದರು.

ಸೋಲುವ ಭಯದಿಂದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಅವರು ಬಂಧಿಸಿರುವುದು ಕೇಜ್ರಿವಾಲ್‌ ಅವರನ್ನು ಮಾತ್ರವಲ್ಲ ಪ್ರಜಾಪ್ರಭುತ್ವವನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬ್ಯಾಂಕ್‌ ಅಕೌಂಟ್‌ಗಳನ್ನು ಸ್ಥಗಿತಗೊಳಿಸಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂದು ಕೇಳಿಕೊಂಡರು.

ಇದು ಪಾಂಡವರು ಮತ್ತು ಕೌರವರು ನಡುವಿನ ಯುದ್ಧವಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜನಪರ ಯೋಜನೆಗಳನ್ನು ಮಾಡಿದ್ದರೆ, ಕೇಂದ್ರ ಸರ್ಕಾರ ಜನರ ಹಣವನ್ನು ಕೊಳ್ಳೆ ಹೊಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ಅವರು ಮಾಡಿದ ಯಾವ ಘೋಷಣೆಗಳನ್ನು ಕೂಡ ಈಡೇರಿಸಿಲ್ಲ ಎಂದರು.

ರಾಜ್ಯದ 28 ಸಂಸದರಲ್ಲಿ ಯಾರಾದರೂ ಗಂಡಸರು ಅಂತ ಇದ್ದರೆ ಅದು ಡಿ.ಕೆ. ಸುರೇಶ್ ಮಾತ್ರ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಡಿಕೆ ಸುರೇಶ್ ಧೈರ್ಯವಾಗಿ ಪ್ರಶ್ನಿಸಿದ್ದರೆ, ಉಳಿದ 27 ಸಂಸದರು ಗುಲಾಮಗಿರಿಯಲ್ಲಿ ಬಿದ್ದಿದ್ದಾರೆ ಎಂದರು ಹೇಳಿದರು. ರಾಜ್ಯದ ಹಿತಾಸಕ್ತಿ ಕಾಪಾಡಲು ಡಿ.ಕೆ. ಸುರೇಶ್ ಅವರನ್ನು ಆಯ್ಕೆ ಮಾಡಿ ಸಂಸತ್ತಿಗೆ ಕಳುಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು. ರಾಮನಗರ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೈರೇಗೌಡ ಸೇರಿದಂತೆ ಎಲ್ಲ ಜಿಲ್ಲಾ ಪದಾಧಿಕಾರಿಗಳು ಮುಖಂಡರುಗಳು ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಜನರ ನಿರೀಕ್ಷೆಗೆ ಈಡೇರಿಸುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ ಮೇಲೆ ರಾಜ್ಯದ ಜನ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸಿಎಂ ತಮ್ಮ ಬಜೆಟ್‌ನಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ನೀಗಿಸಲು ಮೇಕೆದಾಟು ಯೋಜನೆ ಪ್ರಾರಂಭಿಸುವುದಾಗಿ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈ ಬಗ್ಗೆ ಬಜೆಟ್‌ನಲ್ಲಿ ಏನೂ ಮಾತನಾಡಿಲ್ಲ. ಅಧಿಕಾರಕ್ಕೆ ಬರುವ ಮುನ್ನ ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ ಈಗ ಸುಮ್ಮನಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕನ್ನಡಪರ ಎಂದು ಹೇಳಿಕೊಳ್ಳುವ ಸಿಎಂ ಸಿದ್ದರಾಮಯ್ಯ ಕನ್ನಡದ ಬಗ್ಗೆ ಬಜೆಟ್‌ನಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ, ಕೇಂದ್ರ ಸರ್ಕಾರ ಬರಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸುತ್ತಾ ಕಾಲ ಕಳೆಯುತ್ತಿರುವ ರಾಜ್ಯ ಸರ್ಕಾರ, ಬಜೆಟ್‌ನಲ್ಲಿ ಬರ ಪರಿಹಾರ ಮೊತ್ತವನ್ನು ಏಕೆ ಹೆಚ್ಚಿಸಲ್ಲ. ₹2000 ನೀಡಿದರೆ ರೈತರಿಗೆ ಏನು ಪ್ರಯೋಜನ ಎಂದರು.

147 ಕಿಮೀ ವೈಟ್ ಟಾಪಿಂಗ್‌ ಯೋಜನೆಗೆ ₹1700 ಕೋಟಿ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಚಂದ್ರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೈಟ್ ಟಾಪಿಂಗ್ ಹೆಸರಿನಲ್ಲಿ ಈಗಾಗಲೇ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಈಗ ಹಣ ಹೊಡೆಯುವ ಉದ್ದೇಶದಿಂದ ವೈಟ್‌ ಟಾಪಿಂಗ್‌ಗೆ ಅನುದಾನ ನೀಡಲಾಗಿದೆ ಎಂದರು.

ಸುರಂಗ ರಸ್ತೆ ನಿರ್ಮಾಣಕ್ಕೆ ಆಮ್ ಆದ್ಮಿ ಪಾರ್ಟಿ ಮೊದಲಿಂದ ವಿರೋಧ ವ್ಯಕ್ತಪಡಿಸಿದೆ. ಸುರಂಗ ಮಾರ್ಗ ಅವೈಜ್ಞಾನಿಕ ಎಂದು ಹೇಳಿದ್ದರೂ, ಲಜ್ಜೆಗೆಟ್ಟ ಸರ್ಕಾರ ಭ್ರಷ್ಟಾಚಾರ ಮಾಡಲು, ವಿರೋಧವನ್ನು ಲೆಕ್ಕಿಸದೇ ಸುರಂಗ ಮಾರ್ಗ ಯೋಜನೆ ಕೈಗೆತ್ತಿಕೊಂಡಿದೆ ಎಂದು ಅವರು ಟೀಕಿಸಿದರು.

ಕಳಸ ಬಂಡೂರಿ ಯೋಜನೆ ಹಾಗೂ ನವಲಿ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯ ರಾಜ್ಯದ ಪಾಲನ್ನು ಇನ್ನು ಘೋಷಿಸಿಲ್ಲ. ನೀರಾವರಿ ಯೋಜನೆಗಳ ಆರ್ಥಿಕ ಸಂಪನ್ಮೂಲಗಳ ವಿವರಗಳನ್ನು ನೀಡಿಲ್ಲ ಎಂದರು.

ಶಿಕ್ಷಣ, ಆರೋಗ್ಯ ಕ್ಷೇತ್ರದ ಕಡೆಗಣನೆ
ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳಿಗೆ ನಮ್ಮ ವಿರೋಧವಿಲ್ಲ. ಆಮ್ ಆದ್ಮಿ ಪಕ್ಷದ ಯೋಜನೆಗಳನ್ನು ಕದ್ದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು, ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ಕಡೆಗಣಿಸಲಾಗಿದೆ ಎಂದರು.

ಈ ಬಾರಿ ₹27,353 ಕೋಟಿ ರಾಜಸ್ವ ಕೊರತೆ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಕೊಡಲು ಹಣ ಹೊಂದಿಸಲು ಆಗದ ಮೇಲೆ ಆಮ್ ಆದ್ಮಿ ಪಾರ್ಟಿಯ ಯೋಜನೆಗಳನ್ನು ಕಾಪಿ ಮಾಡಬಾರದಿತ್ತು ಎಂದರು. ದೆಹಲಿ ಸರ್ಕಾರ ಎಲ್ಲಾ ಉಚಿತಗಳನ್ನು ನೀಡಿದರೂ ಉಳಿತಾಯ ಬಜೆಟ್ ಮಂಡಿಸಿದೆ. ಭ್ರಷ್ಟಾಚಾರ ತೊಲಗಿಸಿದಿರೆ ರಾಜ್ಯದ ಜನರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಬಹುದು ಎಂದರು.

ಸಿಎಸ್ಆರ್ ಅನುದಾನ ನಂಬಿಕೊಂಡು ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವುದಾಗಿ ಹೇಳಿರುವುದು ದುರಂತ. ಗುಣಮಟ್ಟ ಶಾಲಾ ಕೊಠಡಿ ನಿರ್ಮಾಣದ ಘೋಷಣೆ ಮಾಡಿಲ್ಲ. ಪ್ರೌಢಶಾಲೆಗಳ ಉನ್ನತಿಕರಣಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹಣವನ್ನು ಆಶ್ರಯಿಸುತ್ತಿದ್ದಾರೆ ಇದು ಸರಕಾರದ ಬಳಿ ಹಣವಿಲ್ಲ ಎನ್ನುವುದನ್ನು ಸ್ಪಷ್ಟವಾಗಿ ತಿಳಿಸುತ್ತದೆ ಎಂದರು.

ಮಹಿಳಾ ಪಾಲಿಟೆಕ್ನಿಕ್​​ ಉನ್ನತೀಕರಣಕ್ಕೆ 30 ಕೋಟಿ ರೂ. ಅನುದಾನ ನೀಡಲಾಗಿದೆ. ರಾಜ್ಯದ 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ ₹10 ಕೋಟಿ ನೀಡಿರುವುದು ಅರೆಕಾಸಿನ ಮಜ್ಜಿಗೆ ನೀಡಿದಂತಾಗಿದೆ ಎಂದರು.

ಕೇವಲ 15 ಜಿಲ್ಲೆಗಳಿಗೆ ಮಾತ್ರ ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ ಮಾಡುತ್ತಿದ್ದು ಉಳಿದ ಜಿಲ್ಲೆಗಳಿಗೆ ಅನ್ಯಾಯ ಮಾಡಲಾಗಿದೆ ಎಂದರು. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆಗಳ ಬಗ್ಗೆಯೂ ಘೋಷಣೆ ಮಾಡಿಲ್ಲ, ಇದು ಕಾಂಗ್ರೆಸ್ ಸರ್ಕಾರಕ್ಕೆ ಜನರ ಆರೋಗ್ಯದ ಬಗ್ಗೆ ಇರುವ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದರು.

ಗ್ಯಾರಂಟಿಗಳಿಗೆ ಹಣ ಹೊಂದಿಸುವ ಸಲುವಾಗಿ ಮುದ್ರಾಂಕ ಶುಲ್ಕ ಹೆಚ್ಚಿಸಲಾಗಿದೆ. ಈಗ ಅಬಕಾರಿ ಮೇಲಿನ ತೆರಿಗೆ ಹೆಚ್ಚಿಸುವ ಮೂಲಕ ಹೊರೆ ಹೆಚ್ಚಿಸಿದೆ ಎಂದರು.

ಪರಿಷತ್ ಚುನಾವಣೆ: ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪ್ ರೆಡ್ಡಿಗೆ ಬೆಂಬಲ ಘೋಷಿಸಿದ ಆಮ್ ಆದ್ಮಿ ಪಕ್ಷ
ಬಳ್ಳಾರಿ: ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಾರಾ ಪ್ರತಾಪ್ ರೆಡ್ಡಿಯವರಿಗೆ ಆಮ್ ಆದ್ಮಿ ಪಕ್ಷ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಘೋಷಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1985ರಲ್ಲಿ ನಾನು ಮತ್ತು ಪ್ರತಾಪ್ ಜನತಾ ಪಾರ್ಟಿಯಲ್ಲಿ ಇದ್ದೆವು. ಇಬ್ಬರು ಬೇರೆ ಬೇರೆ ದಾರಿಯಲ್ಲಿ ನಡೆದರು ಚಿಂತನೆ ಒಂದೇ ಆಗಿದೆ. ಪಾರದರ್ಶಕ ಆಡಳಿತ, ಭ್ರಷ್ಟಾಚಾರ ಮುಕ್ತ ವ್ಯವಸ್ಥೆ, ಶೋಷಿತರ ಧ್ವನಿಯಾಗಬೇಕು, ಒಳ್ಳೇ ಕೆಲಸ ಮಾಡಬೇಕು ಎನ್ನವ ಚಿಂತನೆಯನ್ನು ಪ್ರತಾಪ್ ರೆಡ್ಡಿ ಹೊಂದಿದ್ದಾರೆ ಎಂದರು.

ಪಾರದರ್ಶಕ, ಪ್ರಾಮಾಣಿಕ ವ್ಯಕ್ತಿಗಳಿಗೆ ಬೆಂಬಲ ಕೊಡಲು ನಿರ್ಧರಿಸಿದಾಗ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ. ಪ್ರತಾಪ್ ರೆಡ್ಡಿ ಹೋರಾಟದ ಹಿನ್ನೆಲೆಯಿಂದ ಬಂದವರು. ನೀರಿಗಾಗಿ, ಮೂಲ ಸೌಕರ್ಯಗಳಿಗಾಗಿ ಹೋರಾಡಿ ಜನರಿಗೆ ವ್ಯವಸ್ಥೆ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಜೊತೆ ಆಮ್ ಆದ್ಮಿ ಪಕ್ಷ ಕೈ ಜೋಡಿಸಲಿದೆ. ಏಳು ಜಿಲ್ಲೆಯ ಜಿಲ್ಲಾಧ್ಯಕ್ಷರಿಗೆ ಬೆಂಬಲ ನೀಡಲು ಮನವಿ ಮಾಡಿದ್ದೇವೆ. ಕೇಂದ್ರದ ನಾಯಕರಿಗೆ ಕೂಡ ವಿಚಾರ ತಿಳಿಸಿದ್ದು, ಅವರು ಬೆಂಬಲ ನೀಡಲು ಒಪ್ಪಿದ್ದಾರೆ ಎಂದು ಹೇಳಿದರು.

ನಗರಸಭೆ, ಪುರಸಭೆ, ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದಾಗಿ ತೆರವಾಗಿರುವ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ ನಾವು ಸ್ಪರ್ಧಿಸಲಿದ್ದೇವೆ. ನಂಜನಗೂಡು ಪುರಸಭೆಯಲ್ಲಿ ಒಂದು ಕ್ಷೇತ್ರಕ್ಕೆ, ಶಿರಾ ನಗರಸಭೆಯಲ್ಲಿ ಒಂದು ಕ್ಷೇತ್ರ, ಮುದ್ದೇಬಿಹಾಳದಲ್ಲಿ ಒಂದು ಕ್ಷೇತ್ರ, ಮಂಗಳೂರಿನಲ್ಲಿ ಒಂದು ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ನಾರಾ ಪ್ರತಾಪ್ ರೆಡ್ಡಿ, ಬೆಂಬಲ ನೀಡಿದ್ದಕ್ಕೆ ಆಮ್ ಆದ್ಮಿ ಪಕ್ಷಕ್ಕೆ ಧನ್ಯವಾದಗಳನ್ನು ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಕೊಟ್ಟರೂ, ಕೊಡದಿದ್ದರೂ ಚುನಾವಣೆಗೆ ನಿಲ್ಲಲು ನಿರ್ಧರಿಸಲಾಗಿತ್ತು. ಪಕ್ಷೇತರವಾಗಿ ನಿಂತರೂ ಎಲ್ಲಾ ಕಡೆಯಿಂದ ಉತ್ತಮ ಬೆಂಬಲ ಸಿಗುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬಳ್ಳಾರಿ ಜಿಲ್ಲಾಧ್ಯಕ್ಷ ಮಂಜುನಾಥ, ಸ್ಥಳೀಯ ಮುಖಂಡರಾದ ಕೇಶವರೆಡ್ಡಿ ಕೂಡ ಭಾಗವಹಿಸಿದ್ದರು.

“ಕೆಂಪು ಕೋಟೆಯಲ್ಲಿ ಕನ್ನಡದ ಬಾವುಟ ಹಾರಲಿ” : I.N.D.IA ಕೂಟದ PM ಅಭ್ಯರ್ಥಿ ಖರ್ಗೆ ಬಗ್ಗೆ ಮು.ಮಂ ಚಂದ್ರು ಸಂತಸ
ಬೆಂಗಳೂರು: ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಚಂದ್ರು ನೇರವಾಗಿ ಖರ್ಗೆ ಅವರೊಂದಿಗೆ ಇಂದು ದೂರವಾಣಿಯಲ್ಲಿ ಮಾತನಾಡಿ ಶುಭಾಶಯಗಳು ತಿಳಿಸಿದರು ಹಾಗೂ ಖುದ್ದಾಗಿ ಪತ್ರವನ್ನು ಬರೆದಿದ್ದಾರೆ.. ಕೇಜ್ರಿವಾಲ್ ಅವರು ಖರ್ಗೆ ಹೆಸರನ್ನು ಪ್ರಸ್ತಾಪ ಮಾಡಿರುವುದು ನನಗೆ ವೈಯಕ್ತಿಕವಾಗಿ ಸಂತೋಷ ತಂದಿದೆ ಎಂದರು. ವಿಭಜಕ ರಾಜಕಾರಣ ಉತ್ತುಂಗದಲ್ಲಿದ್ದು, ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ. ನಮ್ಮ ದೇಶ ರಾಜಕೀಯ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಕಾಲದಲ್ಲಿ ಪ್ರಜಾಪ್ರಭುತ್ವ ಕೂಡ ಅಪಾಯದಲ್ಲಿದೆ ಎಂದರು.

ಇಂತಹ ಸಂದರ್ಭದಲ್ಲಿ ಅಪಾರ ರಾಜಕೀಯ ಅನುಭವ ಹೊಂದಿರುವ, ರಾಜಕೀಯ ಮುತ್ಸದ್ದಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿರುವುದು ಸಂತೋಷ ತಂದಿದೆ. 5 ದಶಕಗಳ ರಾಜಕೀಯ ಅನುಭವ ಹೊಂದಿರುವ ಖರ್ಗೆಯವರು ಎಲ್ಲಾ ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಇಂಡಿಯಾ ಒಕ್ಕೂಟವನ್ನು ಗೆಲ್ಲಿಸುವ ನಂಬಿಕೆ ಇದೆ. ಆ ಮೂಲಕ ಕೆಂಪು ಕೋಟೆಯ ಮೇಲೆ ಕನ್ನಡದ ಬಾವುಟ ಹಾರಲಿ ಎಂದರು.

ದೇಶದ ಬಹುತ್ವ ಮತ್ತು ವೈವಿಧ್ಯತೆಗೆ ಧಕ್ಕೆ ಉಂಟಾಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ನಾಯಕರೊಬ್ಬರು ದೇಶದ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮಿರುವುದು ಹೆಮ್ಮೆಯ ಸಂಗತಿ ಎಂದ ಅವರು, ಖರ್ಗೆ ಅವರಿಗೆ ರಾಜ್ಯದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದರು.

ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ
ಬೆಂಗಳೂರು: ಮಸಣ ಕಾರ್ಮಿಕರು ಯಾರೂ ಅನುಕೂಲವಂತರಲ್ಲ, ಶೋಷಿತ ಸಮುದಾಯ, ಆರ್ಥಿಕವಾಗಿ ತೀರಾ ಹಿಂದುಳಿದ ಸಮುದಾಯದ ಜನ ಮಾತ್ರ ಈ ರೀತಿ ಕೆಲಸ ಮಾಡುವುದು, ಅವರ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ನೀಡಬೇಕು, ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರ ನೆರವಿಗೆ ನಿಲ್ಲಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬುಧವಾರದಿಂದ ಪ್ರಾರಂಭವಾದ ಬೃಹತ್ ಪ್ರತಿಭಟನಾ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಅವರು ಮಸಣ ಕಾರ್ಮಿಕರ ಹೋರಾಟಕ್ಕೆ ಆಮ್ ಆದ್ಮಿ ಪಕ್ಷ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು.

ಮಸಣ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಹುಟ್ಟು ಆಕಸ್ಮಿಕ ಸಾವು ಅನಿವಾರ್ಯ, ಸತ್ತಾಗ ಸೇವೆ ಮಾಡುವವರಿಗೂ ಇಂದು ಸಾಕಷ್ಟು ಸಮಸ್ಯೆಗಳಿವೆ. ಮಸಣದಲ್ಲಿ ಕೆಲಸ ಮಾಡುವವರೆಗೆ ಯಾವುದೇ ಭದ್ರತೆ ಇಲ್ಲ, ಸಂವಿಧಾನದ ಪ್ರಕಾರ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ, ಆದರೆ ಮಸಣ ಕಾರ್ಮಿಕರು ಇಂದು ಸಮಸ್ಯೆಯ ಜೊತೆಯೇ ಬದುಕುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದುಳಿದ ವರ್ಗಗಗಳ ಅಭಿವೃದ್ಧಿಗಾಗಿ 30 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರ ಹೇಳಿದೆ. ಅದರಲ್ಲಿ 11 ಸಾವಿರ ಕೋಟಿಯನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಖರ್ಚು ಮಾಡಲಾಗಿದೆ. ಕೂಡಲೇ ಮಸಣ ಕಾರ್ಮಿಕರು ಬೇಡಿಕೆ ಇಟ್ಟಿರುವ 10 ಬೇಡಿಕೆಗಳನ್ನು ಈಡೇರಿಸಲಿ, ಅವರನ್ನು ನೌಕರರು ಎಂದು ಪರಿಗಣಿಸಿ ಎಂದರು.

ಸಫಾಯಿ ಕರ್ಮಚಾರಿಗಳ ಜೊತೆ ಮಸಣ ಶುಚಿ ಕಾರ್ಮಿಕರೆಂದು ಪರಿಗಣಿಸಿ ಒಪ್ಪಿ ನೆರವು ನೀಡಬಹುದು ಎಂದು ಅಧಿಕಾರಿಗಳು ಮತ್ತು ಮಂತ್ರಿಗಳು ಹಲವು ಬಾರಿ ಭರವಸೆ ನೀಡಿದ್ದಾರೆ. ಚಿತಾಗಾರಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗ ಭದ್ರತೆ ಒದಗಿಸಿ ಕನಿಷ್ಠ ವೇತನ ನೀಡುವುದಾಗಿ ಹೇಳಿದ್ದಾರೆ ಆದರೆ ಇದೆಲ್ಲವೂ ಬಾಯಿ ಮಾತಿನಲ್ಲಿದ್ದು ಮಸಣ ಕಾರ್ಮಿಕರನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.

ಮಸಣ ಕಾರ್ಮಿಕರ ಹೋರಾಟದಲ್ಲಿ ನಾನು ಎಂದಿಗೂ ಜೊತೆಯಾಗಿರುತ್ತೇನೆ, ಮುಖ್ಯಮಂತ್ರಿಗಳ ಭೇಟಿಗೂ ಜೊತೆ ಬರುತ್ತೇನೆ. ಯಾವುದೇ ತಾಲೂಕು, ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡಿದರೂ ಆಮ್ ಆದ್ಮಿ ಪಕ್ಷ ನಿಮ್ಮ ಜೊತೆ ಕೈ ಜೋಡಿಸಲಿದೆ ಎಂದು ಹೇಳಿದರು.

ಮಸಣ ಕಾರ್ಮಿಕರ ಪ್ರಮುಖ ಬೇಡಿಕೆಗಳು
ಪ್ರತಿ ಸಾರ್ವಜನಿಕ ಮಸಣಕ್ಕೆ ಕಾರ್ಮಿಕರೊಬ್ಬರನ್ನು ಸ್ಥಳೀಯ ಸಂಸ್ಥೆಗಳ ಮಸಣ ನಿರ್ವಾಹಕ ನೌಕರನನ್ನಾಗಿ ನೇಮಿಸಿಕೊಳ್ಳಬೇಕು. ಗುಂಡಿ ಅಗೆಯುವ ಮತ್ತು ಮುಚ್ಚುವ ಕೆಲಸವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗವೆಂದು ಪರಿಗಣಿಸಿ, ಗುಂಡಿ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹3500 ಕೂಲಿ ಪಾವತಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಗಿದೆ.

45 ವರ್ಷ ಮೇಲ್ಪಟ್ಟ ಮಸಣ ಕಾರ್ಮಿಕರಿಗೆ ಮಾಸಿಕ ₹3000 ಸಹಾಯಧನ ನೀಡಬೇಕು. ಗುಂಡಿ ಅಗೆಯಲು ಸಲಕರಣೆ ಒದಗಿಸಬೇಕು, ಅವರಿಗೆ ಭವಿಷ್ಯ ನಿಧಿ ಯೋಜನೆ ಜಾರಿ ಮಾಡಬೇಕು.

ಮಸಣ ಕಾರ್ಮಿಕರಿಗೆ 5 ಎಕರೆ ನೀರಾವರಿ ಜಮೀನು ಉಚಿತವಾಗಿ ನೀಡಬೇಕು. ಹಿತ್ತಲು ನಿವೇಶನ ಸಹಿತ 10 ಲಕ್ಷ ರೂ. ಮೌಲ್ಯದ ಮನೆ ನೀಡಬೇಕು. ಮಸಣ ಕಾರ್ಮಿಕ ಕುಟುಂಬದ ಸದಸ್ಯರಿಗೆ ಮಾಸಿಕ 10 ಕೆ.ಜಿ. ಸಮಗ್ರ ಆಹಾರ ಮತ್ತು ಆರೋಗ್ಯ ಸಾಮಗ್ರಿ ಕಿಟ್ ವಿತರಿಸಬೇಕು. ಕೋವಿಡ್ ವಿಮೆ ಜಾರಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಡಿ ಮಸಣ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷದಲ್ಲಿ ಕನಿಷ್ಠ 200 ದಿನ ಉದ್ಯೋಗ ನೀಡಬೇಕು. ಉದ್ಯೋಗ ನೀಡದೇ ಇರುವಾಗ ಹೈನುಗಾರಿಕೆ ಮತ್ತಿತರ ಉದ್ಯೋಗದಲ್ಲಿ ತೊಡಗಲು 75% ಸಹಾಯಧನ ಇರುವಂತೆ ₹ 5 ಲಕ್ಷ ಸಾಲ ನೀಡುವಂತೆ ಕೋರಲಾಗಿದೆ.

ಮಸಣ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಉದ್ಯೋಗ ಸಿಗದ 25 ವರ್ಷ ಮೇಲ್ಪಟ್ಟ ವಿದ್ಯಾವಂತರಿಗೆ ತಲಾ 10 ಸಾವಿರ ರೂಪಾಯಿ ನಿರುದ್ಯೋಗ ಭತ್ಯೆ ನೀಡಬೇಕು ಮತ್ತು ಎಲ್ಲಾ ಗ್ರಾಮಗಳಲ್ಲಿ ದಲಿತರಿಗೆ ಮಸಣಕ್ಕೆ ಸ್ಥಳ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮಸಣ ಕಾರ್ಮಿಕ ಸಂಘ ಒತ್ತಾಯಿಸಿದೆ.

ಮುಖ್ಯಮಂತ್ರಿ ಚಂದ್ರು ನೇತೃತ್ವದ ರಾಜ್ಯ ಎಎಪಿ ಮುಖಂಡರಿಂದ ದೇವೇಗೌಡರ ಭೇಟಿ
ದೆಹಲಿ ಸರ್ಕಾರದ ಮೇಲಿನ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ವಿರುದ್ಧ ದನಿಗೂಡಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ‌ ದೇವೇಗೌಡರಿಗೆ ರಾಜ್ಯ ಎಎಪಿ ಮುಖಂಡರು ಮನವಿ ಮಾಡಿದರು. ಜುಲೈ 26 ರ ಸಂಜೆ ದೇವೇಗೌಡರ ಮನೆಗೆ ತೆರಳಿದ ಮುಖ್ಯಮಂತ್ರಿ ಚಂದ್ರು ನೇತೃತ್ವದ ಆಮ್ ಆದ್ಮಿ ಪಕ್ಷದ ಮುಖಂಡರು ದೆಹಲಿ ಸರ್ಕಾರದ ಪರ ನಿಲ್ಲಲು ಕೋರಿಕೊಂಡರು.

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ರವರನ್ನು ಅವರ ಮನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೌಹಾರ್ದ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು. ನಂತರ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಹಾಗೂ ದೇಶದ ಒಕ್ಕೂಟ ವ್ಯವಸ್ಥೆಯನ್ನು ಉಳಿಸಲು ನೀವು ದನಿಗೂಡಿಸಬೇಕೆಂದು ಮನವಿ ಮಾಡಿದರು.

ಹಾಗೆಯೇ ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಸಂವಹನ ಉಸ್ತುವಾರಿ ಬ್ರಿಜೇಶ್ ಕಾಳಪ್ಪ, ಜಗದೀಶ್ ವಿ ಸದಂ, ದರ್ಶನ್ ಜೈನ್, ಬಸವರಾಜ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ರಾಜ್ಯ ಎಎಪಿಯಲ್ಲಿ ನಾಯಕತ್ವ ಬದಲಾವಣೆ ; ಮುಖ್ಯಮಂತ್ರಿ ಚಂದ್ರು ಗೆ ಸಾರಥ್ಯ
ವಿಧಾನಸಭಾ ಚುನಾವಣೆ ನಂತರದ ಮಹತ್ವದ ಬೆಳವಣಿಗೆಯಾಗಿ ರಾಜ್ಯ ಆಮ್ ಆದ್ಮಿ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಿದೆ. ಹಾಲಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ರಾಜೀನಾಮೆ ಸಲ್ಲಿಸಿದ್ದು, ಆ ಸ್ಥಾನಕ್ಕೆ ಹಿರಿಯ ನಟ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಮುಖ್ಯಮಂತ್ರಿ ಚಂದ್ರು ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಆಯ್ಕೆ ಮಾಡಿದೆ.

ಈ ಬಗ್ಗೆ ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ದೆಹಲಿಯಲ್ಲಿ ಘೋಷಣೆ ಮಾಡಿದ್ದಾರೆ. ಇವರೊಂದಿಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ಬಿ.ಟಿ. ನಾಗಣ್ಣ ಹಾಗೂ ಅರ್ಜುನ್ ಪರಪ್ಪ ಹಲಗಿಗೌಡರ್ ರವರುಗಳನ್ನು ನೇಮಿಸಲಾಗಿದೆ. ಈ ಹಿಂದಿನ ರಾಜ್ಯಾಧ್ಯಕ್ಷರಾಗಿದ್ದ ಪೃಥ್ವಿ ರೆಡ್ಡಿ ರವರನ್ನು ರಾಷ್ಟ್ರೀಯ ಜಂಟಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.

ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ಒಳಗೆ ನಾಯಕತ್ವದ ಬದಲಾವಣೆಯ ಮಾತುಗಳು ಈ ಹಿಂದೆ ಕೇಳಿ ಬಂದಿತ್ತು. ಹಾಲಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಚುನಾವಣಾ ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ

ಆಮ್ ಆದ್ಮಿ ಪಕ್ಷ ಸ್ಥಾಪನೆಯಾದ ದಿನದಿಂದಲೂ ರಾಜ್ಯದಲ್ಲಿ ಪಕ್ಷ ಸಂಘಟಿಸಲು ಪೃಥ್ವಿ ರೆಡ್ಡಿ ಶ್ರಮಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆಗೆ ಶುರುವಿನಿಂದಲೂ ಗುರುತಿಸಿಕೊಂಡಿದ್ದು, ಹಲವು ಜನಪರ ಚಳುವಳಿಗಳನ್ನು ರಾಜ್ಯದಲ್ಲಿ ಸಂಘಟಿಸಿದ ಹೆಸರು ಪೃಥ್ವಿ ರೆಡ್ಡಿಯವರಿಗಿದೆ. ಭ್ರಷ್ಟಾಚಾರದ ವಿರುದ್ಧದ ನಾಗರಿಕರ ಆಂದೋಲನದ ಸಂಸ್ಥಾಪಕರಲ್ಲಿ ಪೃಥ್ವಿ ರೆಡ್ಡಿ ಒಬ್ಬರಾಗಿದ್ದರು.

ನಂತರ ಇಂಡಿಯಾ ಎಗೇನ್ಸ್ಟ್ ಕರಪ್ಷನ್ (IAC) ರಾಷ್ಟ್ರೀಯ ಕೋರ್ ಕಮಿಟಿಯ ಸದಸ್ಯರಾಗಿ, ಪೃಥ್ವಿ ಅಣ್ಣಾ ಹಜಾರೆ, ಅರವಿಂದ್ ಕೇಜ್ರಿವಾಲ್ ಮತ್ತು ಇತರರೊಂದಿಗೆ ರಾಷ್ಟ್ರವ್ಯಾಪಿ ಪ್ರಚಾರವನ್ನು ಮುನ್ನಡೆಸುವಲ್ಲಿ ನಿಕಟವಾಗಿ ಕೆಲಸ ಮಾಡಿದ್ಥಾರೆ. ಪ್ರಸ್ತುತ ಆಮ್ ಆದ್ಮಿ ಪಕ್ಷದ ಜವಾಬ್ದಾರಿಯ ನೇತೃತ್ವವನ್ನು ಎರಡು ಬಾರಿ ವಹಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಸೋಲಿನ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸುವ ಬಗ್ಗೆ ಮಾತುಗಳು ಕೇಳಿ ಬಂದಿದೆ.

ನೂತನ ಅಧ್ಯಕ್ಷರ ಹೆಸರಿನಲ್ಲಿ ಹಲವು ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಚಂದ್ರು ಅವರ ಆಯ್ಕೆಯ ಬಗ್ಗೆ ಅಂತಿಮ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಚಂದ್ರು ಸಾರ್ವಜನಿಕ ಜೀವನದಲ್ಲಿ ನಟರಾಗಿ ಗುರುತಿಸಿಕೊಂಡು ನಂತರ ರಾಮಕೃಷ್ಣ ಹೆಗ್ಗಡೆಯವರ ಕಾಲದಲ್ಲಿ ಗೌರಿಬಿದನೂರು ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದರು. ನಂತರ ವಿಧಾನ ಪರಿಷತ್‌ನ ಸದಸ್ಯರಾಗಿ ಸೇವೆ ಸಲ್ಲಿಸಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸುನೀಲ್‌ ಕುಮಾರ್‌ ಬದಲು ರಾಜಕೀಯೇತರ ವ್ಯಕ್ತಿ ಕಅಪ್ರಾ ಅಧ್ಯಕ್ಷರಾಗಲಿ: ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಸಚಿವ ಸುನೀಲ್‌ ಕುಮಾರ್‌ರವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯೇತರ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಎಪಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರುರವರು, ʼಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಾಡಿನ ಅಸ್ಮಿತೆ ಕಾಪಾಡುವ ಸಂಸ್ಥೆ. ಇದು ಬಹುಕಾಲದಿಂದ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮಗಳನ್ನು ನಡೆಸುತ್ತಾ ಮತ್ತು ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸುತ್ತಾ ಬಂದಿದೆ. ಸಾರ್ವಜನಿಕ ವಲಯದಲ್ಲಿ ಕನ್ನಡ ಭಾಷೆಗೆ ಅಪಮಾನ ಅಥವಾ ಅನ್ಯಾಯವಾದಾಗ ಪ್ರಾಧಿಕಾರ ಪ್ರಶ್ನೆ ಮಾಡಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರನ್ನೂ ಬಿಟ್ಟಿಲ್ಲ. ಇದು ಮುಂದುವರಿಯಬೇಕಾದರೆ ರಾಜಕೀಯೇತರ ವ್ಯಕ್ತಿಯೇ ಪ್ರಾಧಿಕಾರದ ಅಧ್ಯಕ್ಷರಾಗಿರಬೇಕುʼ ಎಂದು ಹೇಳಿದ್ದಾರೆ.

ʼಕನ್ನಡ ನೆಲ, ಜಲ, ನುಡಿ ವಿಚಾರ ಬಂದಾಗಲೆಲ್ಲ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕರ್ತವ್ಯ. ರಾಜಕೀಯ ಸಿದ್ಧಾಂತಗಳನ್ನು ಬದಗಿಟ್ಟು ಕೇವಲ ಭಾಷಾಭಿಮಾನದಿಂದ ಕೆಲಸ ಮಾಡುವ ವ್ಯಕ್ತಿ ಅದರ ಅಧ್ಯಕ್ಷರಾಗಬೇಕು. ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದರೂ ಹಿಂದಿ ಹೇರಿಕೆ, ಕನ್ನಡಿಗರಿಗೆ ಉದ್ಯೋಗದಲ್ಲಾಗುತ್ತಿರುವ ಮೋಸ, ಗಡಿನಾಡ ಕನ್ನಡಿಗರ ಮೇಲೆ ಆಗುತ್ತಿರುವ ದೌರ್ಜನ್ಯ ಮುಂತಾದವುಗಳನ್ನು ವಿರೋಧಿಸದ ಪ್ರಭಾವಿ ಸಚಿವರು ಪ್ರಾಧಿಕಾರದ ಅಧ್ಯಕ್ಷರಾಗಿರುವುದು ಕಳವಳಕಾರಿʼ ಎಂದರು.

ʼರಾಜಕಾರಣವನ್ನೇ ಪೂರ್ಣಾವಧಿ ಕೆಲಸ ಮಾಡಿಕೊಂಡಿರುವ ಸುನೀಲ್‌ ಕುಮಾರ್‌ರವರು ಎರಡು ದೊಡ್ಡ ಇಲಾಖೆಗಳ ಸಚಿವರು. ಅದರ ಜೊತೆಗೆ ಪ್ರಾಧಿಕಾರದ ಕೆಲಸ ಮಾಡಲು ಅವರಿಗೆ ಸಾಧ್ಯವಾಗುವುದೂ ಇಲ್ಲ. ರಾಜಕಾರಣದ ಹಂಗಿಲ್ಲದೇ ಕಾರ್ಯನಿರ್ವಹಿಸುವ ವ್ಯಕ್ತಿಯನ್ನು ಶೀಘ್ರವೇ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ನೇಮಿಸಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆʼ ಎಂದು ತಿಳಿಸಿದ್ದಾರೆ.

ʼನಾಲ್ಕು ಎಂಜಿನ್‌ಗಳ ಸರ್ಕಾರವಿದ್ದರೂ ನಿರ್ಲಕ್ಷ್ಯʼ

ಬೆಳಗಾವಿ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಚಂದ್ರುರವರು, ʼಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರಗಳು ಬಂದಾಗಲೆಲ್ಲ ಗಡಿ ಮತ್ತು ನೀರಿನ ಸಮಸ್ಯೆಗಳನ್ನು ರಾಜಕೀಯ ಕುತಂತ್ರಕ್ಕೆ ಬಳಸಿಕೊಳ್ಳಲಾಗಿದೆ. ಕರ್ನಾಟಕದ್ದು ಕೇವಲ ರಕ್ಷಣಾತ್ಮಕ ಪ್ರತಿಕ್ರಿಯೆಯಾಗಿದ್ದರೆ, ಇಕ್ಕೆಲಗಳ ರಾಜ್ಯಗಳದ್ದು ಪ್ರಚೋದನಾತ್ಮಕ ಹಾಗೂ ಆಕ್ರಮಣಕಾರಿ ಪ್ರತಿಕ್ರಿಯೆಯಾಗಿದೆ. ಈಗಿನ ಸಿಎಂ ಬಸವರಾಜ ಬೊಮ್ಮಾಯಿಯವರಂತೂ ಸಮಸ್ಯೆಯನ್ನು ಜೀವಂತವಾಗಿಡಲು ಹಪಹಪಿಸುತ್ತಿದ್ದು, ಬಿಜೆಪಿಯ ಹಾಗೂ ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ವಿವಾದವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.

ʼಮಹಾಜನ್‌ ವರದಿ ಜಾರಿಗೆ ಸಂಬಂಧಿಸಿ ತಮ್ಮ ಇದುವರೆಗಿನ ಹೇಳಿಕೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಬದ್ಧರಾಗಿರಬೇಕು. ಗಡಿ ವಿಚಾರ ಬಗೆಹರಿಸಲು ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿದ್ದ ಸಲಹಾ ಸಮಿತಿಗೆ ನ್ಯಾ. ಮಂಜುನಾಥ್‌ರವರ ಮರಣಾ ನಂತರ ಎಂಟು ತಿಂಗಳ ಕಾಲ ಆ ಸ್ಥಾನವನ್ನು ಖಾಲಿ ಇಡಲಾಗಿತ್ತು. ಗಡಿ ವಿಚಾರದಲ್ಲಿ ಬಿಜೆಪಿ ಸರ್ಕಾರಕ್ಕೆ ಎಷ್ಟು ತಾತ್ಸಾರವಿದೆ ಎನ್ನುವುದಕ್ಕೆ ಇದು ಸಾಕ್ಷಿ. ರಾಜಕೀಯ ಒತ್ತಡಕ್ಕೆ ಮಣಿದು ಇತ್ತೀಚೆಗೆ ನ್ಯಾ. ಶಿವರಾಜ್‌ ಪಾಟೀಲ್‌ರವರನ್ನು ನೇಮಕ ಮಾಡಿದೆʼ ಎಂದು ಹೇಳಿದ್ದಾರೆ.

ʼ2018ರಲ್ಲಿ ಉತ್ತರ ಕರ್ನಾಟಕಕ್ಕೆ ಬಂದಿದ್ದ ಬಿಜೆಪಿಯ ಅಮಿತ್‌ ಶಾರವರು, ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ್ದರು. ಈ ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಬಿಜೆಪಿಯ ನಾಲ್ಕು ಎಂಜಿನ್‌ ಸರ್ಕಾರವಿದ್ದರೂ ವಿವಾದ ಬಗೆಹರಿಸುವ ಬದಲು ರಾಜಕೀಯ ಲಾಭಕ್ಕಾಗಿ ಸಮಸ್ಯೆಯನ್ನು ದೊಡ್ಡದು ಮಾಡಲಾಗುತ್ತಿದೆ. ಬೊಮ್ಮಾಯಿಯವರು ಧಮ್ಮು, ತಾಕತ್ತು ಇದ್ದರೆ ನಾಲ್ಕು ಎಂಜಿನ್‌ಗಳನ್ನು ಬಳಸಿಕೊಂಡು ಗಡಿ, ಜಲ ಸಮಸ್ಯೆಗಳನ್ನು ಬಗೆಹರಿಸಲಿʼ ಎಂದು ಮುಖ್ಯಮಮತ್ರಿ ಚಂದ್ರು ಸವಾಲು ಹಾಕಿದ್ದಾರೆ.