multi-specialty hospital in Hassan – Peepal Media

ಹಿಮ್ಸ್‌ ನಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆ
ಹಾಸನ ಜಿಲ್ಲೆಯ ಜನಾರೋಗ್ಯ ಪರಿಸ್ಥಿತಿ; ಸಾರ್ವಜನಿಕ ವೈಧ್ಯಕೀಯ ವ್ಯವಸ್ಥೆ;
ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರ

ಹಾಸನ : ಕಳೆದ ತಿಂಗಳಿನಿಂದೀಚೆಗೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹಠಾತ್ ಸಾವುಗಳು ಎಲ್ಲರನ್ನೂ ಆತಂಕ ಸೃಷ್ಠಿ ಮಾಡುತ್ತಿರುವ ಬೆನ್ನೆಲ್ಲೆ ಹಾಸನದ ಪ್ರತಿಪರ, ಜೀವಪರರೆಲ್ಲರು ಒಟ್ಟಗೂಡಿ ಇಂದು ಹಿಮ್ಸ್‌ ನಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಗೆ ಒತ್ತಾಯಿಸಿ ದುಂಡು ಮೇಜಿನ ಸಭೆಯನ್ನು ಏರ್ಪಿಡಿಸಲಾಗಿತ್ತು ಸಬೇಯಲ್ಲಿ ಹಿಮ್ಸ್ ನ ಆಡಳಿತಾಧಿಕಾರಿಗಳು ಬಂದು ಸಲಹೆ ಸೂಚನೆಗಳನ್ನು ನೀಡಿದರು, ನಂತರ ಮಾತನಾಡಿದ ಧರ್ಮೇಶ್ ರವರು ಹೃದಯಾಘಾತ ಪ್ರಕರಣಗಳ ಬಗ್ಗೆ ಆತಂಕವನ್ನು ವ್ಯಪ್ತಪಡಿಸಿದರು. ಜಿಲ್ಲೆಯ ಹೃಧಯಾಘಾತದ ಸಾವುಗಳು ದೇಶದಾದ್ಯಂತ ಸುದ್ದಿಯಾದವು. ಅದರಲ್ಲೂ ಎಳೆಯರ ಮತ್ತು ಯುವಜನರ ಹಠಾತ್ ಸಾವು ತೀವ್ರ ಆತಂಕವನ್ನು ಸೃಷ್ಟಿಮಾಡಿದೆ. ಸರ್ಕಾರ ಈಗಾಗಲೇ ಈ ಹಠಾತ್ ಸಾವುಗಳ ಕುರಿತು ತಜ್ಞರ ಸಮಿತಿ ಮೂಲಕ ಅಧ್ಯಯನ ನಡೆಸಿ ವರದಿ ತರಿಸಿಕೊಂಡಿದೆ. ಹಾಗೂ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ತಜ್ಞರ ಸಮಿತಿಯ ವರದಿಯು ಹಠಾತ್ ಸಾವುಗಳಿಗೆ ಜೀವನ ಶೈಲಿ, ಆಹಾರ ಪದ್ದತಿ, ಪರಿಸರ ಮಾಲಿನ್ಯ ಮತ್ತು ಕೋವಿಡೋತ್ತರ ಪರಿಸ್ಥಿತಿಯ ಕಾರಣಗಳತ್ತ ಬೊಟ್ಟು ಮಾಡಿದೆ. ಉತ್ತಮ ಗುಣಮಟ್ಟದ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ನೈರ್ಮಲ್ಯ ಇವು ಯಾವುದೇ ಸಮಾಜದ ಮನುಷ್ಯರ ಮೂಲಭೂತ ಅವಶ್ಯಕತೆಗಳು. ಈ ಅಗತ್ಯಗಳು ಸಮರ್ಪಕವಾಗಿ ದೊರೆತಾಗ ಮಾತ್ರ ಮನುಷ್ಯರು ಮತ್ತು ಸಮಾಜ ಆರೋಗ್ಯ ಮತ್ತು ನೆಮ್ಮದಿಯಿಂದ ಇರಲು ಸಾಧ್ಯ.

ಈ ಸ್ಪರ್ಧಾತ್ಮಕ ಸಮಾಜದಲ್ಲಿ ಜನರು ಅನುಭವಿಸುತ್ತಿರುವ ಆರ್ಥಿಕ, ಸಾಮಾಜಿಕ ತಾರತಮ್ಯಗಳು ಮತ್ತು ಕೌಟುಂಬಿಕ ಒತ್ತಡಗಳು, ಆಹಾರ ಪದ್ದತಿ, ಜೀವನ ಶೈಲಿ, ಪರಿಸರ ಮಾಲಿನ್ಯ, ಕೋವಿಡೋತ್ತರ ಪರಿಸ್ಥಿತಿ ಮತ್ತಿತರೆ ಕಾರಣಗಳಿಂದಾಗಿ ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಬಹಳ ತೀವ್ರವಾದ ಮತ್ತು ಗಂಭೀರವಾದ ಪರಿಣಾಮಗಳನ್ನು ಬೀರುತ್ತವೆ. ಈ ಎಲ್ಲಾ ಪರಿಣಾಮಗಳಿಗೆ ಕೇವಲ ಜನರ ವಯಕ್ತಿಕ ಮಟ್ಟದ ಕಾರಣಗಳು ಮಾತ್ರವೇ ಆಗಿರದೆ ಪ್ರಮುಖವಾಗಿ ಅವುಗಳು ಸಾಮಾಜಿಕ ಆರ್ಥಿಕ ಕಾರಣಗಳಾಗಿವೆ. ಈ ಸಾಮಾಜಿಕ ಆರ್ಥಿಕ ಕಾರಣಗಳಿಗೆ ಮೊದಲು ಪರಿಹಾರ ದೊರಕಿಸಿಕೊಡುವ ಕೆಲಸ ಯಾವುದೇ ಪ್ರಜಾಸತ್ತಾತ್ಮಕ ನಾಗರಿಕ ಸರ್ಕಾರಗಳ ಮತ್ತು ಆಡಳಿತ ವ್ಯವಸ್ಥೆಯ ಹೊಣೆಗಾರಿಕೆಯಾಗಿದೆ. ಜನಾರೋಗ್ಯದ ಪರಿಸ್ಥಿತಿ ಎಷ್ಟು ತೀವ್ರವಾಗಿ ಉಲ್ಬಣಗೊಂಡಿದೆ ಎಂದರೆ ಜನರಲ್ಲಿ ಅದರಲ್ಲೂ ಎಳೆಯ ವಯಸ್ಸಿನವರನ್ನೂ ಒಳಗೊಂಡಂತೆ ರಕ್ತದೊತ್ತಡ, ಮದುಮೇಹ, ಥೈರಾಯ್ಡ್, ಸ್ಥೂಲಕಾಯತೆ ಮುಂತಾದ ದೈಹಿಕ ವ್ಯತ್ಯಾಸಗಳು ತೀವ್ರವಾಗಿ ಮತ್ತು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿವೆ. ಇದರಿಂದಾಗಿ ಹೃದ್ರೋಗ, ಪಾರ್ಶ್ವವಾಯು, ಕಿಡ್ನಿ ಸಮಸ್ಯೆ, ಮೆದುಳು ಮತ್ತು ನರರೋಗ, ಕ್ಯಾನ್ಸರ್ ಮತ್ತಿತರೆ ಮಾರಣಾಂತಿಕ ಖಾಯಿಲೆಗಳು ಎಲ್ಲಾ ವಯೋಮಾನದ ಜನರಲ್ಲಿ ಹೆಚ್ಚಾಗುತ್ತಿವೆ. ಹಾಗೂ ಸೂಕ್ತ ಸಮಯದಲ್ಲಿ ಸೂಕ್ತ ತಪಾಸಣೆ ಮತ್ತು ಸೂಕ್ತ ಚಿಕಿತ್ಸೆ ದೊರೆಯದೆ ಮರಣಗಳು ಹೆಚ್ಚಾಗುತ್ತಿವೆ. ಮತ್ತು ಅತ್ಯಂತ ದುಬಾರಿಯಾದ ತಪಾಸಣೆ ಮತ್ತು ಚಿಕೆತ್ಸೆಗೆ ಒಳಗಾದವರು ಅತ್ಯಂತ ಆರ್ಥಿಕ ಸುಸ್ಥಿತಿಗೆ ತಳ್ಳಲ್ಪಟ್ಟಿರುವ ಉದಾಹರಣೆಗಳು ಸಾಕಷ್ಟಿವೆ ಎಂದು ಬೇಸರ ವ್ಯಕ್ತಪಡಿಸಿದರು.
ಈ ದುಂಡು ಮೇಜಿನ ಸಭೆಯ ತೀರ್ಮಾನದ ಭಾಗವಾಗಿ ಈ ಶನಿವಾರದಂದು ಹಾಸನ ಜಿಲ್ಲಾಧಿಕಾರಿಗಳ ಮುಖಾಂತರ ಎಲ್ಲಾ ಜನಪರ ಚಳುವಳಿಗಳ ನೇತೃತ್ವದಲ್ಲಿ ಮೇಲ್ಕಂಡ ಬೇಡಿಕೆಗಳ ಆಧಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸುವುದು, ಮತ್ತು ಮಾನ್ಯ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಸಂಸದರು ಹಾಗೂ ಮಾನ್ಯ ಶಾಸಕರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಆರೋಗ್ಯ ಸಚಿವರು ಹಾಗೂ ಮಾನ್ಯ ವೈಧ್ಯಕೀಯ ಶಿಕ್ಷಣ ಸಚಿವರನ್ನು ಬೇಟಿಯಾಗಿ ಮನವಿ ಸಲ್ಲಿಸಿ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸುಧಾರಣೆ ಮತ್ತು ಬಲಪಡಿಸುವಿಕೆಗೆ ಹಾಗೂ ಹಿಮ್ಸ್‌ನ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಕಾರ್ಯಾರಂಭವನ್ನು ಶಿಘ್ರವೇ ಮಾಡುವಂತೆ ಒತ್ತಾಯಿಸುವುದು ಎಂದು ತೀರ್ಮಾನಿಸಲಾಯಿತು. ಸಭೆಯಲ್ಲಿ ಹಿಮ್ಸ್ ನ ಆಡಳಿತಾಧಿಕಾರಿಗಳು, ಸಿ.ಐಟಿಯು ಧರ್ಮೇಶ್, ಸಾಹಿತಿ ರೂಪ ಹಾಸನ, ನವೀನ್ ಕುಮಾರ್, ಹಿರಿಯ ಪತ್ರಕರ್ತರಾದ ಆರ್.ಪಿ ವೆಂಕಟೇಶ್ ಮೂರ್ತಿ, ಅಬ್ದುಲ್ ಬಶೀರ್, ಡಾ, ಸಾವಿತ್ರಿ, ಡಾ. ರಂಗಲಕ್ಷ್ಮೀ, ಹೆಚ್.ಕೆ ಸಂದೇಶ್, ದಂಡೋರ ವಿಜಯ್ ಕುಮಾರ್ ಇನ್ನಿತರು ಉಪಸ್ಥಿತರಿದ್ದರು.