muruga – Peepal Media

ಇಂದು ಶಿವಮೂರ್ತಿಗಳು ಜಾಮೀನು ಅರ್ಜಿ ಸಲ್ಲಿಕೆ ಸಾಧ್ಯತೆ
ಮಠದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೊಲೀಸ್ ಕಸ್ಟಡಿಯಲ್ಲಿರುವ ಶಿವಮೂರ್ತಿಗಳು ಇಂದೂ ಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಈ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಶಿವಮೂರ್ತಿಗಳ ಜಾಮೀನು ಅರ್ಜಿ ವಿಚಾರಣೆಗೂ ಮುನ್ನವೇ ಅನಾರೋಗ್ಯದ ನೆಪವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದರು. ಯಾವುದೇ ವಿಚಾರಣೆ ನಡೆಯದ ಹಿನ್ನೆಲೆಯಲ್ಲಿ ಪೊಲೀಸರು 5 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ತಮ್ಮ ಗಮನಕ್ಕೆ ತರದೇ ಶಿವಮೂರ್ತಿಗಳನ್ನು ಆಸ್ಪತ್ರೆಗೆ ಕೊಂಡೊಯ್ದ ಬಗ್ಗೆ ಕೋರ್ಟ್ ಪೊಲೀಸರನ್ನು ಪ್ರಶ್ನಿಸಿತ್ತು. ನಂತರ ಜಾಮೀನು ಅರ್ಜಿ ವಜಾ ಮಾಡಿ 3 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.

ಅನಾರೋಗ್ಯದ ನೆಪದಿಂದ ಪೊಲೀಸ್ ವಿಚಾರಣೆಯಿಂದ ದೂರವಿದ್ದ ಶಿವಮೂರ್ತಿಗಳು ನಿನ್ನೆ ರಾತ್ರಿಗೆ ಚಿತ್ರದುರ್ಗದ ಡಿವೈಎಸ್ಪಿ ಕಛೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ ಎನ್ನಲಾಗಿದೆ. ಇಂದೂ ಸಹ ಶಿವಮೂರ್ತಿಗಳ ವಿಚಾರಣೆ ನಡೆಯಲಿದ್ದು ಇದರ ಬೆನ್ನಲ್ಲೇ ಆರೋಪಿ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಸಧ್ಯ ಪೋಕ್ಸೊ ಕಾಯ್ದೆ ಮತ್ತು ಅಟ್ರಾಸಿಟಿ ಕಾಯ್ದೆಯ ಅಡಿಯಲ್ಲಿ ಶಿವಮೂರ್ತಿಗಳ ಮೇಲೆ ಪ್ರಕರಣ ದಾಖಲಾಗಿವೆ. ಇವು ಗಂಭೀರ ಪ್ರಕರಣಗಳಾಗಿದ್ದು, ವಿಚಾರಣೆ ನಂತರ ಆರೋಪ ಸಾಭೀತಾದರೆ ಜೈಲು ಶಿಕ್ಷೆ ಕಾಯಂ ಆಗುವ ಸಾಧ್ಯತೆಯಿದೆ.

ಬಸವಶ್ರೀ ಪ್ರಶಸ್ತಿ ಹಿಂತಿರುಗಿಸಿದ ಪತ್ರಕರ್ತ ಪಿ ಸಾಯಿನಾಥ್
ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಬಂಧನದ ಹಿನ್ನಲೆಯಲ್ಲಿ ಖ್ಯಾತ ಪತ್ರಕರ್ತ ಪಿ ಸಾಯಿನಾಥ್ ಅವರು ಮಠವು ಅವರಿಗೆ ನೀಡಿರುವ ಬಸವಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.

2017 ರಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಯಿನಾಥ್ ಅವರ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿತ್ತು. ಈ ಪ್ರಶಸ್ತಿ ಐದು ಲಕ್ಷ ರೂಪಾಯಿಗಳನ್ನು ಒಳಗೊಂಡಿದ್ದು ಸಾಯಿನಾಥ್ ಪ್ರಶಸ್ತಿಯನ್ನು ಹಿಂತಿರುಗಿಸಿದ್ದಾರೆ.

ಅದೇ ಸಂದರ್ಭದಲ್ಲಿ ಸಾಯಿನಾಥ್ ಮಠದ ಸ್ವಾಮೀಜಿ ಹೈಸ್ಕೂಲ್ ಮಕ್ಕಳ ಮೇಲೆ ಎಸಗಿರುವ ಲೈಂಗಿಕ ದೌರ್ಜನ್ಯವನ್ನು ಖಂಡಿಸಿದ್ದಾರೆ.