mysore – Peepal Media

ಚಾಮುಂಡೇಶ್ವರಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಯುವಕನ ಮೇಲೆ ದೂರು ನೀಡಲು ಮುಂದಾದ ಹಿಂದೂ ಸಂಘಟನೆಗಳು
ಚಾಮುಂಡೇಶ್ವರಿಗೆ ಅವಹೇಳನ ಮಾಡಿದ್ದಕ್ಕಾಗಿ ರಕ್ಷಕ್ ಬುಲೆಟ್ ಎಂಬ ಯುವಕನ ಮೇಲೆ ಹಿಂದುಪರ ಸಂಘಟನೆಗಳು ದೂರು ನೀಡಲು ಮುಂದಾಗಿವೆ.

ಕನ್ನಡದ ಖಾಸಗಿ ವಾಹಿನಿಯೊಂದು ನಡೆಸಿದ್ದ ಬಿಗ್‌ ಬಾಸ್‌ ಎಂಬ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಈತನ ವಿರುದ್ಧ ಇಂದು ನಗರ ಪೊಲೀಸ್ ಆಯುಕ್ತರಿಗೆ ಹಿಂದು ಸಂಘಟನೆಗಳು ದೂರು ಸಲ್ಲಿಸಲಿವೆ. ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಬಗ್ಗೆ ಅವಹೇಳನಕಾರಿ ರಕ್ಷಕ್ ಬುಲೆಟ್ ಮಾತನಾಡಿದ್ದ ಎನ್ನುವ ಆರೋಪ ಕೇಳಿ ಬಂದಿದೆ.

ಸಹಸ್ಪರ್ಧಿಯನ್ನು ಹೊಗಳುತ್ತಾ ಈತ “ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕಿಕೊಂಡು ಸ್ವಿಟ್ಜರ್ಲೆಂಡ್‌‌ ನಲ್ಲಿ ಟ್ರಿಪ್ ಹೊಡೆಯುತ್ತಿದ್ದಾಳೆ ಎನಿಸುತ್ತಿದೆ,” ಎಂಬ ಡೈಲಾಗ್ ಹೇಳಿದ್ದಾನೆ. ಇದು ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಹಿಂದು ಸಂಘಟನೆಗಳು ಕಮಿಷನರ್‌ಗೆ ದೂರು ನೀಡಲು ಮುಂದಾಗಿದ್ದಾರೆ.

ಕನ್ನಡ ಸಾರಸ್ವತ ಭೂಮಿ ಸಂಶೋಧನೆಯ ಕನ್ನೆ ನೆಲವಾಗಿದೆ: ಪ್ರೊ.ಹಂಪ ನಾಗರಾಜಯ್ಯ
ನಮ್ಮ ಕನ್ನಡ ಸಾರಸ್ವತ ಭೂಮಿಯು ಯಾವತ್ತೂ ಬಂಜೆಯಲ್ಲ. ಅದು ಕಣ್ಣು ಹಾಯಿಸಿದಷ್ಟೂ ಸಂಶೋಧನೆಯ ಸಾಧ್ಯತೆಗಳತ್ತ ದಾರಿ ತೋರುವ ಕನ್ನೆ ನೆಲವಾಗಿದೆ ಎಂದು ನಾಡೋಜ ಪ್ರೊ.ಹಂಪ ನಾಗರಾಜಯ್ಯ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಕನ್ನಡ ಸಂಶೋಧನೆಯ ಹೊಸ ಸಾಧ್ಯತೆಗಳು” ಕುರಿತ 5 ದಿನಗಳ ರಾಷ್ಟ್ರಮಟ್ಟದ ‘ಸಂಶೋಧನ ಕಾರ್ಯಾಗಾರ’ವನ್ನು ಅಂತರ್ಜಾಲದ ಜೂಮ್ ವೇದಿಕೆಯ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂಶೋಧನೆ ಎಂದರೆ ಹುಡುಗಾಟವಲ್ಲ; ಅದು ನಿರಂತರವಾಗಿ ನಡೆಸಬೇಕಾದ ಹುಡುಕಾಟ. ಸಂಶೋಧನೆಗಿರುವುದು ಬೆವರಿನ ದಾರಿಯೇ ಹೊರತು ಯಾವುದೇ ಅಡ್ಡದಾರಿಗಳಿಲ್ಲ. ಶಿಸ್ತುಬದ್ಧವಾದ ಪೂರ್ವ ತಯಾರಿ, ಸತತ ಅಭ್ಯಾಸ, ವ್ಯಾಪಕವಾದ ಅಧ್ಯಯನವು ಸಂಶೋಧನೆಗೆ ಅತ್ಯವಶ್ಯಕ. ಭಾಷಾವಿಜ್ಞಾನದ ಅರಿವಿನೊಂದಿಗೆ ಸ್ವಭಾಷಾ ಜ್ಞಾನವೂ ಇರಬೇಕು. ಆಯ್ಕೆ ಮಾಡಿಕೊಳ್ಳುವ ವಸ್ತುವನ್ನು ಕುರಿತು ಈಗಾಗಲೇ ನಡೆದಿರುವ ಸಂಶೋಧನೆಯನ್ನು ಪರಾಮರ್ಶೆ ಮಾಡುವುದು ಔಚಿತ್ಯಪೂರ್ಣವಾದುದು. ಪೂರ್ವಸೂರಿಗಳ ಮಾರ್ಗದಲ್ಲಿ ನಾಲ್ಕು ಹೆಜ್ಜೆ ಮುನ್ನಡೆದು ಸ್ವೋಪಜ್ಞತೆಯಿಂದ ಹೊಸತಾದ ಸಂಶೋಧನೆಯನ್ನು ಕೈಗೊಳ್ಳಬೇಕು. ಹೇಳಿದ್ದನ್ನೇ ಹೇಳಿದರೆ ಸಂಶೋಧನೆಯಾಗದು. ಹಳೆ ಮಾತಿಗೆ ಹೊಸಮಾತನ್ನು ಕೂಡಿಸಿದರೆ ಕರಿಮೋಡಕ್ಕೆ ಬಿಳಿಚೌಕಟ್ಟು ಕಟ್ಟಿದಂತಾಗುತ್ತದೆ ಎಂದರು.

ಇಂದಿನ ಯುವಸಮುದಾಯವು ಸೃಜನಶೀಲ ಕ್ಷೇತ್ರದಲ್ಲಿ ಮಾಡುವಷ್ಟು ಕೆಲಸವನ್ನು ಸಂಶೋಧನ ಕ್ಷೇತ್ರದಲ್ಲೂ ಮಾಡಲು ಸಾಧ್ಯವಿದೆ. ಕನ್ನಡ ಸಂಶೋಧನ ಕ್ಷೇತ್ರಕ್ಕೆ ಇಂದು ದೊಡ್ಡ ದೊಡ್ಡ ವಿದ್ವಾಂಸರ ಬರಗಾಲ ಬಂದಿದೆ ಎಂದುಕೊಳ್ಳಬಾರದು. ಈಗಿನ ಹೊಸ ತಲೆಮಾರಿನ ಸಂಶೋಧಕರೇ ದೊಡ್ಡ ವಿದ್ವಾಂಸರಾಗಿ ರೂಪುಗೊಳ್ಳಬೇಕು. ಹಿಂದಿನ ಅನೇಕ ವಿದ್ವಾಂಸರ ಮಾದರಿಗಳು ನಮ್ಮ ಮುಂದಿವೆ. ಅವುಗಳನ್ನು ಅನುಸರಿಸಿ ಪುನರವಲೋಕನ ಮಾಡುವ ಮೂಲಕ ಮುಂದೆ ಸಾಗಬೇಕು ಎಂದು ಕಿವಿಮಾತು ಹೇಳಿದರು.

ಕನ್ನಡದ ಆದಿಕವಿಯಾದ ಪಂಪನು ಸಂಸ್ಕೃತ ಮೂಲದ ಮಹಾಭಾರತವನ್ನು ಮೊಟ್ಟಮೊದಲ ಬಾರಿಗೆ ತರುವಾದ ಪ್ರಾದೇಶಿಕ ಭಾಷೆಗಲ್ಲಿ ಒಂದಾದ ಕನ್ನಡಕ್ಕೆ ತಕ್ಕುದಾಗಿ ಪುನರ್ ಸೃಷ್ಠಿ ಮಾಡಿದನೇ ಹೊರತು ಯಥಾವತ್ತು ಅನುಸೃಷ್ಠಿ ಮಾಡಲಿಲ್ಲ. ಪಂಪನ ಸೃಜನಶೀಲ ಪ್ರತಿಭಾ ವ್ಯಕ್ತಿತ್ವದಿಂದ ಮೂಡಿಬಂದ ಪಂಪಭಾರತವು ತದನಂತರ ಇತರ ಪ್ರಾದೇಶಿಕ ಭಾಷೆಗಳಲ್ಲೂ ಮಹಾಭಾರತಗಳ ಸೃಷ್ಟಿಗೆ ಪ್ರೇರಣೆಯಾಯ್ತು. ತೆಲುಗಿನಲ್ಲಿ ನನ್ನಯ, ಎರ್ರನ, ತಿಕ್ಕನರ ಭಾರತಗಳು ಮೂಡಿಬಂದವು. ಪಂಪನು ಕನ್ನಡದ ಆದಿಕವಿಯಾದಂತೆ, ಆತನ ತಮ್ಮನಾದ ಜಿನವಲ್ಲಭನು ತೆಲುಗಿನ ಆದಿಕವಿಯೇ ಆಗಿದ್ದಾನೆ. ಯಾಕೆಂದರೆ ತಾಯಿ ಭಾಷೆಯಾದ ಕನ್ನಡದಲ್ಲಿ ಪಂಪ ಬರೆದರೆ, ತಂದೆ ಭಾಷೆಯಾದ ತೆಲುಗಿನಲ್ಲಿ ಜಿನವಲ್ಲಭನು ಕಾವ್ಯ ನೀಡುವ ಮೂಲಕ ಕನ್ನಡ ಹಾಗೂ ತೆಲುಗಿಗೆ ತನ್ನದೇ ಆದ ಅಮೂಲ್ಯ ಕಾಣಿಕೆ ನೀಡಿದ್ದಾನೆ. ಪಂಪನ ಮಹಾಕಾವ್ಯಗಳನ್ನು ಇತರ ಪ್ರಾದೇಶಿಕ ಹಾಗೂ ಜಾಗತಿಕ ಮಹಾಕಾವ್ಯಗಳೊಂದಿಗೆ ತೌಲನಿಕವಾಗಿ ಅಧ್ಯಯನ ನಡೆಸಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಆಶಯ ಮಾತುಗಳನ್ನಾಡಿದ ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರು ಹಾಗೂ ಮಾನವ ಸಂಪನ್ಮೂಲ ಕೇಂದ್ರದ ನಿರ್ದೇಶಕರೂ ಆದ ಫಾ.ಡಾ.ಜೋಶಿ ಮ್ಯಾಥ್ಯೂ ಅವರು, ಸಂಶೋಧನೆ ಎಂಬುದು ನಿರಂತರ ಹುಡುಕಾಟದ ಮೂಲಕ ನಿಚ್ಚಂಪೊಸತಾಗಿ ಮೂಡುವ ಲೋಕದ ಬೆಳಗು. ಕನ್ನಡ ಸಂಶೋಧನ ಚರಿತ್ರೆಯಲ್ಲಿ ವಿದ್ವನ್ಮಣಿಗಳಾಗಿ ಬೆಳಗಿದ ಹಿಂದಿನ ಸಂಶೋಧಕ ದೀಪಗಳನ್ನು ಇಂದಿನ ಸಂಶೋಧಕರು ತಮ್ಮೊಳಗೆ ಅಂತಸ್ಥ ಮಾಡಿಕೊಂಡು ಸಾಗಬೇಕಿದೆ ಎಂದರು.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರೂ ಪ್ರಾಧ್ಯಾಪಕರೂ ಆದ ಪ್ರೊ.ಎನ್.ಕೆ.ಲೋಲಾಕ್ಷಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾನವಿಕ ವಿಭಾಗದ ಡೀನರಾದ ಡಾ.ಎ.ವಿ.ಗೋಪಕುಮಾರ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಸ್ವಾಗತಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್. ಅವರು ವಂದಿಸಿದರು. ಕಾರ್ಯಾಗಾರದ ಸಂಯೋಜಕರಾದ ಕನ್ನಡ ಪ್ರಾಧ್ಯಾಪಕ ಡಾ.ಎಂ.ಭೈರಪ್ಪ ಅವರು ನಿರ್ವಹಿಸಿದರು. ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ಡಾ.ಪ್ರೇಮಕುಮಾರ್ ಕೆ., ಡಾ.ಕಿರಣಕುಮಾರ್ ಹೆಚ್.ಜಿ. ಅವರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಕರ್ನಾಟಕದಾದ್ಯಂತ ಸುಮಾರು 300 ಜನ ಸಂಶೋಧಕರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದರು.

ಟಿಪ್ಪು ಸುಲ್ತಾನ್ ಸ್ಮರಣಾರ್ಥ ರ್ಯಾಲಿಗೆ ಎಐಎಂಐಎಂಗೆ ಅನುಮತಿ ನೀಡಲಾಗಿದೆ: ಬಾಂಬೆ ಹೈಕೋರ್ಟ್‌ಗೆ ಪುಣೆ ಪೊಲೀಸರು
ಬೆಂಗಳೂರು: ಟಿಪ್ಪು ಸುಲ್ತಾನ್ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಡಿಸೆಂಬರ್ 24 ರಂದು ರ್ಯಾಲಿ ನಡೆಸಲು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಗೆ ಅನುಮತಿ ನೀಡಿರುವುದಾಗಿ ಪುಣೆ ಪೊಲೀಸರು ಡಿಸೆಂಬರ್ 17, ಮಂಗಳವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಅನುಮತಿ ನೀಡಿಕೆಗೆ ಸಂಬಂಧಿಸಿದ ಮಾಹಿತಿಯನ್ನು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪಿಕೆ ಚವಾಣ್ ಅವರ ವಿಭಾಗೀಯ ಪೀಠದ ಮುಂದೆ ಸಲ್ಲಿಸಲಾಗಿದೆ ಎಂದು ಬಾರ್ ಮತ್ತು ಪೀಠವು ವರದಿ ಮಾಡಿದೆ.

ರ್ಯಾಲಿಗೆ ಅನುಮತಿ ನಿರಾಕರಣೆ ವಿರುದ್ಧ ಎಐಎಂಐಎಂನ ಪುಣೆ ಜಿಲ್ಲಾಧ್ಯಕ್ಷರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮೆರವಣಿಗೆಯು ನಿಯಮಗಳು ಮತ್ತು ಷರತ್ತುಗಳಿಗೆ ಬದ್ಧವಾಗಿರಬೇಕು ಎಂದು ಒತ್ತಿ ಹೇಳಿದೆ.

“ಏನು ಈ ಕಾನೂನು ಸುವ್ಯವಸ್ಥೆ ಪರಿಸ್ಥಿತಿ? ಏನಾದರೂ ಆಗಬಹುದು ಎಂದು ನೀವು ನಿರೀಕ್ಷಿಸುತ್ತಿದ್ದೀರಿ. ಕಾನೂನು ಮತ್ತು ಸುವ್ಯವಸ್ಥೆ ನಿಮ್ಮ ಹಕ್ಕು. ಪ್ರತಿ ಬಾರಿ ನೀವು ಕಾನೂನು ಮತ್ತು ಸುವ್ಯವಸ್ಥೆಯ ವಿಷಯವನ್ನು ಎತ್ತಿದಾಗ, ಇಂತಹ ನಿಮ್ಮ ಮನಸ್ಥಿತಿಯನ್ನು ಯಾವಾಗ ಬದಲಾಯಿಸುತ್ತೀರಿ?” ಎಂದು ನ್ಯಾಯಾಲಯವು, “ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ” ಅನ್ನು ಮುಂದಿಟ್ಟು ಅನುಮತಿ ನಿರಾಕರಿಸುವ ಪೊಲೀಸರ ನಡವಳಿಕೆಯನ್ನು ಟೀಕಿಸಿತು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸೆಲಿಮೀನ್ (ಎಐಎಂಎಂ) ನಗರ ಅಧ್ಯಕ್ಷ ಫೈಯಾಜ್ ಶೇಖ್ ಅವರು ನವೆಂಬರ್ 26, 2024 ರಂದು ಸಂವಿಧಾನ ದಿನಾಚರಣೆಯ ಜೊತೆಗೆ ಟಿಪ್ಪು ಸುಲ್ತಾನ್ ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನಗಳನ್ನು ಸ್ಮರಿಸುವ ರ್ಯಾಲಿಯನ್ನು ಆಯೋಜಿಸಲು ಅನುಮತಿ ಕೋರಿದ್ದರು.

ಆದರೆ, ಇನ್ನೊಂದು ಸಮುದಾಯದಿಂದ ಬಂದ ಆಕ್ಷೇಪಣಾ ಪತ್ರಗಳನ್ನು ಉಲ್ಲೇಖಿಸಿ ಪುಣೆ ಪೊಲೀಸರು ಟಿಪ್ಪುವನ್ನು ಗೌರವಿಸುವ ರ್ಯಾಲಿಗೆ ಅನುಮತಿ ನಿರಾಕರಿಸಿದ್ದರು. ನಂತರ ಶೇಖ್ ಅವರು ಡಿಸೆಂಬರ್ 24 ರಂದು ರ್ಯಾಲಿ ನಡೆಸಲು ಅನುಮತಿ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು.

ಆಗ ಹೈಕೋರ್ಟ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಿಷೇಧವಿದೆಯೇ ಎಂದು ಪುಣೆ ಪೊಲೀಸರನ್ನು ಕೇಳಿತ್ತು . ನಂತರ, ರ್ಯಾಲಿಗಾಗಿ ಮಾರ್ಗವನ್ನು ನಿಗದಿಪಡಿಸುವಂತೆ ಪುಣೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಕೆಎಸ್ಡಿಎಲ್ ಲಾಭಾಂಶ ₹108 ಕೋಟಿ ಸರ್ಕಾರಕ್ಕೆ ಹಸ್ತಾಂತರ
ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

ಚಾಮುಂಡಿ ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ – ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ
ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ, ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸಲು ಸೂಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಸೆಪ್ಟೆಂಬರ್ 03: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನÀ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ. ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.

ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ

ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ. ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ. ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.

ಪ್ರತಿ ವರ್ಷ ದೇವಾಲಯಯದ ಆದಾಯ ಹೆಚ್ಚಳ

ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ ¯ಭ್ಯವಿದ್ದು, ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ. ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.

ವಸ್ತ್ರ ಸಂಹಿತೆ ಇಲ್ಲ

ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.

ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ

ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.

ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ

ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.

ಐದು ದೇವಾಲಯ ಸಮೂಹದ ಜೀರ್ಣೋದ್ಧಾರ

ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.

ಚಾಮುಂಡೇಶ್ವರಿ ಕ್ಷೇತ್ರವನ್ನು ಆಕರ್ಷಕವಾಗಿಸಿ ಹೆಚ್ಚು ಸವಲತ್ತು ನೀಡಲು ತೀರ್ಮಾನ

ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ, ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ 169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ ಎಂದರು.

ದೇವಸ್ಥಾನದ ಆಸ್ತಿಗಳ ಸರ್ವೆ

ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು. ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.

ತುಘಲಕ್ ಸರ್ಕಾರ ಕಟುಕನನ್ನು ಯಾಕೆ ವೈಭವೀಕರಿಸುತ್ತಿದೆ? – ಸಿಟಿ ರವಿ
ಮೈಸೂರು: ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡುವುದರ ಕುರಿತು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೆಡೆಸಿರುವ ಆಲೋಚನೆ ಕುರಿತು ಮತ್ತು ಅದರ ವಿರುದ್ದವಾಗಿ ಬಿಜೆಪಿ ಮುಖಂಡ ಸಿ.ಟಿ.ರವಿಯವರು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಮೈಸೂರು ವಿಮಾನ ನಿಲ್ದಾಣಕ್ಕೆ ಹಿಂದೂಗಳ ಕ್ರೂರ ಮತ್ತು ಕಟುಕ ಟಿಪ್ಪು ಸುಲ್ತಾನ್ ಹೆಸರನ್ನು ಇಡುವ ಬಗ್ಗೆ ಯೋಚಿಸಲು ಯಾರಾದರೂ ಬುದ್ಧಿಮಾಂದ್ಯರಾಗಿರಬೇಕು. ಆದರೆ ಹಿಂದೂಗಳನ್ನು ಅವಮಾನಿಸಲು ಯಾವುದೇ ಅವಕಾಶವನ್ನು ಬಿಡದ ಕಾಂಗ್ರೆಸ್ ನಾಯಕರು ತಮ್ಮ ವೋಟ್ ಬ್ಯಾಂಕ್‌ನ ಬೂಟುಗಳನ್ನು ನೆಕ್ಕಲು ಯಾವ ಮಟ್ಟಕ್ಕಾದರು ಇಳಿಯುತ್ತಾರೆ ಎಂದು ವ್ಯಂಗಿಸಿದ್ದಾರೆ.

ಈ ಟಿಪ್ಪು ಪ್ರೇಮಿಗಳು ಎಂದಾದರೂ ಮೈಸೂರು ನಾಲ್ವಡಿ ಕೃಷ್ಣ ರಾಜ ಒಡೆಯರ್ ಮತ್ತು ಅದರಾಚೆಗೆ ಅವರ ಅಪಾರ ಕೊಡುಗೆಗಳ ಬಗ್ಗೆ ಕೇಳಿದ್ದೀರಾ? ಎಂದು ಸಿ. ಟಿ. ರವಿಯವರು ಪ್ರಶ್ನಿಸಿದ್ದಾರೆ.

One must be mentally retarded to even think about naming Mysuru Airport after Tipu Sultan, the Tyrant and Butcher of Hindus.

But CONgress leaders who leave no opportunity to insult Hindus will stoop to any level to lick the boots of their Vote Bank.

Have these Tipu lovers ever…
— C T Ravi 🇮🇳 ಸಿ ಟಿ ರವಿ (@CTRavi_BJP) December 15, 2023

ನಿರಂಕುಶಾಧಿಕಾರಿ ಟಿಪ್ಪು ಸುಲ್ತಾನ್ ತನ್ನ ಸಾಮ್ರಾಜ್ಯವನ್ನು ಉಳಿಸಲು ಮತ್ತು ಹಿಂದೂಗಳನ್ನು ನಾಶಮಾಡಲು ಹೋರಾಡಿದರೆ, ಪೂಜ್ಯ ಮಹಾರಾಜ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರು ಹಲವಾರು ವಿರೋಧಾಭಾಸಗಳ ವಿರುದ್ಧ ಹೆಚ್ಚು ಪ್ರಗತಿಪರ ಮೈಸೂರು ರಾಜ್ಯವನ್ನು ನಿರ್ಮಿಸಲು ಪಟ್ಟುಬಿಡದೆ ಶ್ರಮಿಸಿದರು. ಆದರೆ ಇಂದಿಗೂ, ಭಾರತೀಯರು ಕೆಆರ್‌ಎಸ್ ಅಣೆಕಟ್ಟು, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಐಐಎಸ್‌ಸಿ, ಶಿಕ್ಷಣ ಸಂಸ್ಥೆಗಳು, ಕೈಗಾರಿಕೆಗಳು ಮತ್ತು ಇತರ ಯೋಜನೆಗಳಂತಹ “ರಾಜಋಷಿ”ಯ ದೂರದೃಷ್ಟಿಯ ಯೋಜನೆಗಳಿಂದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ ಕಾರ್ಯವೈಕರಿ ಮತ್ತು ಅಭಿವೃದ್ಧಿಯ ದೂರ ದೃಷ್ಟಿಯನ್ನು ಕುರಿತು ಹೊಗಳಿದ್ದಾರೆ.

ಮೈಸೂರು ಮತ್ತು ಭಾರತಕ್ಕೆ ತಮ್ಮ ನಿರಂಕುಶಾಧಿಕಾರಿಯ ಕೊಡುಗೆಗಳನ್ನು ವಿವರಿಸಲು ನಾನು ಈ “ವೋಟ್ ಬ್ಯಾಂಕ್ ರಾಜಕಾರಣಿಗಳಿಗೆ” ಸವಾಲು ಹಾಕುತ್ತೇನೆ. ಈ ತುಘಲಕ್ ಸರ್ಕಾರವು “ಕಟ್ಟಡ” ವನ್ನು ಆಚರಿಸುವ ಬದಲು “ಕಟುಕನನ್ನು” ಏಕೆ ವೈಭವೀಕರಿಸುತ್ತದೆ? ಮತ್ತು ಮುಸ್ಲಿಂ ಒಡಂಬಡಿಕೆಯ ಹೊಸ ಅವತಾರವಾದ ಕಾಂಗ್ರೆಸ್ ಯಾವಾಗಲೂ ಧರ್ಮಾಂಧರು, ಇಸ್ಲಾಮಿಕ್ ಮೂಲಭೂತವಾದಿಗಳು ಮತ್ತು ಹಿಂದೂ ದ್ವೇಷಿಗಳನ್ನು ಏಕೆ ಆರಾಧಿಸುತ್ತದೆ? ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ. ಟಿ.ರವಿಯವರು ಕಿಡಿಕಾರಿದ್ದಾರೆ.

ಪಿರಿಯಾಪಟ್ಟಣ : ಧಾರ್ಮಿಕ ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ನಿರಾಕರಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದ ದೇವಸ್ಥಾನವೊಂದರಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದ ವೇಳೆ ಡೋಲು ಬಾರಿಸಲು ನಿರಾಕರಿಸಿದ್ದಕ್ಕೆ 65 ವರ್ಷದ ದಲಿತ ವ್ಯಕ್ತಿಯೊಬ್ಬರ ಮೇಲೆ ಗ್ರಾಮಸ್ಥನೊಬ್ಬ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.

ಗ್ರಾಮದ ಬಸವೇಶ್ವರ ದೇವಸ್ಥಾನದ ವಾರ್ಷಿಕ ಪೂಜೆಯಲ್ಲಿ ಡೋಲು ಬಾರಿಸಲು ದಲಿತ ಪರಮಯ್ಯ ಅವರನ್ನು ಕರೆಯಲಾಗಿತ್ತು. ಆದರೆ ಪರಮಯ್ಯ ಅವರು ಹುಷಾರಿಲ್ಲದ ಕಾರಣ ಡೋಲು ಬಾರಿಸುವುದಕ್ಕೆ ನಿರಾಕರಿಸಿದ್ದಾರೆ. ಪರಮಯ್ಯನವರ ಪ್ರತಿಕ್ರಿಯೆಯಿಂದ ಕೋಪಗೊಂಡ ಅದೇ ಗ್ರಾಮದ ಕುಮಾರ್ ಎನ್ನುವ ವ್ಯಕ್ತಿ ಪರಮಯ್ಯನ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಜಾತಿಯ ಹೆಸರಿನಲ್ಲಿ ನಿಂದಿಸಿದ್ದಾರೆ” ಎಂದು ಪಿರಿಯಾಪಟ್ಟಣ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಧರ್ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನವಿದ್ದು, ದಶಕಗಳಿಂದ ಎಲ್ಲಾ ಸಮುದಾಯದವರು ಒಟ್ಟಾಗಿ ವಾರ್ಷಿಕ ಪೂಜೆಯನ್ನು ಆಚರಿಸುತ್ತಿದ್ದಾರೆ. ಡೋಲು ಬಾರಿಸುವುದು ದಲಿತ ಸಮುದಾಯದ ಸಾಂಪ್ರದಾಯಿಕ ಕೆಲಸವಾದ್ದರಿಂದ ಪರಮಯ್ಯ ಅವರಿಗೆ ಡೋಲು ಬಾರಿಸಲು ಒತ್ತಾಯಿಸಲಾಗಿದೆ.

“ನನ್ನ ತಂದೆ ಅಸ್ವಸ್ಥರಾಗಿದ್ದಾರೆ, ಅದಕ್ಕಾಗಿಯೇ ಅವರು ಡ್ರಮ್ ನುಡಿಸಲು ನಿರಾಕರಿಸಿದರು. ದೇವಸ್ಥಾನದ ಕಮಿಟಿಯವರಿಗೆ, ಡೋಲು ಬಾರಿಸುವ ಜವಾಬ್ದಾರಿ ನಾನು ವಹಿಸುತ್ತೇನೆ ಎಂದು ತಿಳಿಸಿದರೂ ಆರೋಪಿಗಳು ನನ್ನ ತಂದೆಗೆ ಡೋಲು ಬಾರಿಸುವಂತೆ ಒತ್ತಾಯಿಸಿದ್ದಾರೆ. ಅದಕ್ಕೆ ನನ್ನ ತಂದೆ ನಿರಾಕರಿಸಿದಾಗ ಹಲ್ಲೆ ನಡೆಸಿ, ಜಾತಿ ನಿಂದಿಸಿದ್ದಾರೆ’ ಎಂದು ಪರಮಯ್ಯ ಅವರ ಪುತ್ರ ಬಸವರಾಜು ದೂರಿದ್ದಾರೆ.

‘ಗ್ರಾಮದ ಆರಾಧ್ಯ ದೈವ ಎನಿಸಿರುವ ಬಸವೇಶ್ವರ ದೇವಸ್ಥಾನದ ಪೂಜೆಯಲ್ಲಿ ಮುಸ್ಲಿಮರು ಸೇರಿದಂತೆ ಎಲ್ಲ ಸಮುದಾಯದವರು ದಶಕಗಳಿಂದ ಪಾಲ್ಗೊಳ್ಳುತ್ತಿದ್ದಾರೆ. ಈ ಘಟನೆಯಿಂದ ಗ್ರಾಮದ ಐಕ್ಯತೆಗೆ ಧಕ್ಕೆ ಉಂಟಾಗಬಹುದು. ಆ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿ ಹಾಗೂ ಇತರರ ನಡುವಿನ ಬಿಕ್ಕಟ್ಟು ನಿವಾರಣೆಗೆ ಮುಂದಿನ ವಾರದಲ್ಲಿ ಎಲ್ಲ ಸಮುದಾಯಗಳ ಜತೆ ಸಭೆ ನಡೆಸಲಾಗುವುದು ಎಂದು ಮಾಕೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಶೈಲಜಾ ತಿಳಿಸಿದ್ದಾರೆ.

ಆರೋಪಿ ಕುಮಾರ್ ದೇವಸ್ಥಾನ ಸಮಿತಿಯ ನಿರ್ದೇಶಕರಾಗಿದ್ದು, ಹಿಂದಿನ ವರ್ಷಗಳಲ್ಲಿ ಮಾಡಿದಂತೆ ವಾರ್ಷಿಕ ದೇವಸ್ಥಾನದ ಪೂಜೆಯನ್ನು ಸುಗಮವಾಗಿ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಶೈಲಜಾ ತಿಳಿಸಿದ್ದಾರೆ.

“ನಾವು ಕುಮಾರ್ ವಿರುದ್ಧ ಎಸ್‌ಸಿ / ಎಸ್‌ಟಿ ತಡೆ ಕಾಯಿದೆ, ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ” ಎಂದು ಪಿರಿಯಾಪಟ್ಟಣ ಇನ್‌ಸ್ಪೆಕ್ಟರ್ ಶ್ರೀಧರ್ ಹೇಳಿದ್ದಾರೆ. ”ಪಿರಿಯಾಪಟ್ಟಣ ತಾಲೂಕು ಸರಕಾರಿ ಆಸ್ಪತ್ರೆಗೆ ಪರಮಯ್ಯ ಅವರನ್ನು ದಾಖಲು ಮಾಡಲಾಗಿದೆ. ಹಾಗೆಯೇ ಆರೋಪಿ ಕುಮಾರ್ ಹಾಗೂ ಘಟನೆ ಸಮಯದಲ್ಲಿ ಆರೋಪಿ ಪರ ನಿಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಇನ್‌ಸ್ಪೆಕ್ಟರ್ ಶ್ರೀಧರ್ ಹೇಳಿದ್ದಾರೆ.

ಈ ಬಾರಿ ಅದ್ದೂರಿ ದಸರಾ ಮಾಡಲು‌ ನಮ್ಮ ಸರ್ಕಾರ ತೀರ್ಮಾನ : ಸಚಿವ ಹೆಚ್.ಸಿ ಮಹದೇವಪ್ಪ
ಈ ಬಾರಿ ಅದ್ದೂರಿ ದಸರಾ ಮಾಡಲು‌ ನಮ್ಮ ಸರ್ಕಾರ ಮುಂದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಜಪಡೆಗಳನ್ನ ವಿದ್ಯುಕ್ತವಾಗಿ ಗಜಪಯಣ ಮೂಲಕ‌ ಸ್ವಾಗತ ಕೋರಲಾಗಿದೆ. 30 ಕೋಟಿ ಅನುದಾನ ಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ, ನಾಡ ದೇವತೆ ಚಾಮುಂಡೇಶ್ವರಿ ತಾಯಿಯ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ, ಮೊದಲ‌ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ ಎಂದು ಹೇಳಿದ್ದಾರೆ.

ಇನ್ನೂ‌ 5 ಆನೆಗಳು ತದ ನಂತರ ಅರಮನೆಗೆ ಬರುತ್ತದೆ, ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ಬರುತ್ತಾರೆ, ಅದ್ಧೂರಿ ದಸರಾ ಆಚರಣೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ, ಧಾರ್ಮಿಕ ವಿಚಾರ, ರಾಜ್ಯಡಳಿತವನ್ನು ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಬಾರಿ ದಸರಾ ಆಚರಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಪತಿ, ಮಗನ ಬಂಧನದ ನಂತರ ಮಹಿಳೆ ಆತ್ಮಹತ್ಯೆ; ಜೈಲಿನಲ್ಲಿದ್ದ ಗಂಡನಿಗೆ ಹಾರ್ಟ್‌ ಅಟ್ಯಾಕ್
ದಾರುಣ ಘಟನೆಯೊಂದರಲ್ಲಿ, ಕೊಲೆ ಆರೋಪದ ಮೇಲೆ ಪತಿ ಮತ್ತು ಮಗನನ್ನು ಬಂಧಿಸಿದ ನಂತರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು: ಕೊಲೆ ಆರೋಪದ ಮೇಲೆ ಪತಿ ಮತ್ತು ಮಗನನ್ನು ಬಂಧಿಸಿದ ನಂತರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ನಂತರ ಪತ್ನಿಯ ಸಾವಿನ ಸುದ್ದಿ ತಿಳಿದ ಪತಿ ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು 35 ವರ್ಷದ ಇಂದ್ರಾಣಿ ಎಂದು ಗುರುತಿಸಲಾಗಿದೆ. ಆಕೆಯ ಪತಿ ಸಾಮ್ರಾಟ್ ಜೈಲಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೈಸೂರಿನ ವಿದ್ಯಾನಗರದಲ್ಲಿ ಬಾಲರಾಜ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮ್ರಾಟ್ ಮತ್ತು ಆತನ ಪುತ್ರ ತೇಜಸ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್, ಆತನ ತಂದೆ ಸಾಮ್ರಾಟ್ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ನಂತರ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು. ಘಟನೆಯ ನಂತರ ತೇಜಸ್‌ನ ತಾಯಿ ಇಂದ್ರಾಣಿ ಖಿನ್ನತೆಗೆ ಒಳಗಾಗಿದ್ದು, ನೋವು ತಾಳಲಾರದೆ ಭಾನುವಾರ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ತಿಳಿದ ನಂತರ ಜೈಲು ಸೇರಿದ್ದ ಪತಿ ಸಾಮ್ರಾಟ್ ಆಘಾತಗೊಂಡು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇಂದಿನಿಂದ ‘Bengaluru -mysore express way’ಯಲ್ಲಿ ಟ್ಯಾಕ್ಟರ್, ಬೈಕ್, ಆಟೋಸಂಚಾರ ನಿಷೇಧ – 500 ದಂಡ
ರಾಮನಗರ : ಆಗಸ್ಟ್​ 1ರ ಇಂದಿನಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಆಟೋ, ಬೈಕ್ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಈ ದಶಪಥ ಹೆದ್ದಾರಿಯಲ್ಲಿ 80 – 100 ಕಿಲೋಮೀಟರ್ ವರೆಗೆ ವೇಗಮಿತಿಯಲ್ಲಿ ಚಲಿಸಲು ಅವಕಾಶ ಇರುವುದರಿಂದ ಅಪಘಾತ ತಡೆಯುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ ಈ‌ ಕ್ರಮಕ್ಕೆ ಮುಂದಾಗಿದೆ.

ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಈ ದಶಪಥ ಹೆದ್ದಾರಿಯಲ್ಲಿ ಆಗಸ್ಟ್ 1ರ ಇಂದಿನಿಂದ ಜಾರಿಗೆ ಬರುವಂತೆ ದ್ವಿಚಕ್ರ ಹಾಗೂ ಮೂರು ಚಕ್ರದ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡಲಾಗಿದೆ.

ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆಯಾದಾಗಿನಿಂದಲೂ ಈ ಬಗ್ಗೆ ಚರ್ಚೆಗಳು ಏರ್ಪಟ್ಟಿದ್ದವು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೆಲವು ವಾಹನಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಆಮೂಲಕ ನೂತನ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳಿಗೆ ತಡೆಯೊಡ್ಡಲು ಮುಂದಾಗಿದೆ ಎಂದು ಸೂಚಿಸಲಾಗಿದೆ.