Nada Prabhu Kempegowda – Peepal Media

ಬಿಜೆಪಿಯವರಿಗೆ ಜನ ಬೇಕಿದ್ದರೆ ನಾವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸುತ್ತೇವೆ: ಡಿಕೆಶಿ
ಬೆಂಗಳೂರು: ನವೆಂಬರ್‌ 11 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಜನರಿಲ್ಲದ ಕಾರಣ, ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರುತ್ತಿದ್ದಾರೆ. ಅದರ ಬದಲು ಅವರಿಗೆ ಜನ ಬೇಕು ಎಂದರೆ ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಈ ಕುರಿತು ಚಿತ್ರಕಲಾ ಪರಿಷತ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆ ತರಲು ಆದೇಶ ಹೊರಡಿಸಿದ್ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಗಳನ್ನು ಕೇಳಬೇಕು. ಈ ರೀತಿ ಮಾಡಿರುವುದು ನಾಚಿಕೆಗೇಡಿನ ವಿಚಾರವಲ್ಲವೇ? ಇದು ಬಿಜೆಪಿಯ ಜನಶಕ್ತಿ ಕುಸಿದಿರುವುದಕ್ಕೆ ಸಾಕ್ಷಿ. ಅವರಿಗೆ ಜನ ಬೇಕಿದ್ದರೆ ನಾವು ನಮ್ಮ ಪಕ್ಷದ ಕಾರ್ಯಕರ್ತರನ್ನು ಕಳುಹಿಸುತ್ತೇವೆ. ಆದರೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಸರ್ಕಾರದ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬಾರದು ಎಂದು ಟೀಕಿಸಿದರು.

‘ಜನ ಸಾಯುವಾಗ ಸರ್ಕಾರಕ್ಕೆ ಗುಂಡಿಗಳು ಕಾಣಲಿಲ್ಲ. ವಿರೋಧ ಪಕ್ಷಗಳು ಈ ಗುಂಡಿ ಮುಚ್ಚಲು ಹೋಮ, ಪೂಜೆ ಮಾಡಿದರು. ಆಗಲೂ ಸರ್ಕಾರ ತಲೆ ಕೆಡಿಸಿಕೊಳ್ಳಲಿಲ್ಲ. ಈಗ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಮುಚ್ಚುತ್ತಿದ್ದಾರೆ ಎಂದು ವ್ಯಂಗಿಸಿದ್ದಾರೆ. ಜೊತೆಗೆ ಪ್ರಧಾನಿ ಅವರು ಕಳೆದ ಬಾರಿ ಬಂದಾಗ ಡಾಂಬರು ಹಾಕಿದ ರಸ್ತೆಗಳು, ಅವರು ದೆಹಲಿಗೆ ಹೋಗುತ್ತಿದ್ದಂತೆ ಕಿತ್ತು ಬಂದವು ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಸರ್ಕಾರದ ಹಣದಲ್ಲಿ ಪ್ರತಿಮೆ ಮಾಡಿರುವುದು ದೊಡ್ಡ ಅಪರಾಧ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರಿಗೆ ನಾವು 2 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಪ್ರತಿ ಎಕರೆಗೆ 6 ಲಕ್ಷದಂತೆ ಹಾಗೂ ಹಣ ನೀಡಿದ್ದೇವೆ. ಅವರಿಗೆ ಹೇಳಿದ್ದರೆ ಅವರೇ ಪ್ರತಿಮೆ ನಿರ್ಮಾಣ ಮಾಡುತ್ತಿದ್ದರು. ಆದರೆ ಸರ್ಕಾರ ದುಡ್ಡು ಹಾಕಿದ್ದು ಯಾಕೆ? ಈ ವಿಚಾರವಾಗಿ ನಾನು ಶಂಕುಸ್ಥಾಪನೆ ದಿನವೇ ಹೇಳಿದ್ದೆ. ವಿಮಾನ ನಿಲ್ದಾಣದವರು ಇದರಿಂದ ಸಂಪಾದನೆ ಮಾಡುತ್ತಿಲ್ಲವೇ, ಧರ್ಮಕ್ಕೆ ಮಾಡುತ್ತಿದ್ದರೇ? ಇನ್ನು 2 ಸಾವಿರಕ್ಕೂ ಹೆಚ್ಚು ಎಕರೆ ಜಾಗವನ್ನು ವಾಣಿಜ್ಯ ಉದ್ದೇಶಕ್ಕೆ ನೀಡಿದ್ದೇವೆ. ಹೀಗಾಗಿ ವಿಮಾನ ನಿಲ್ದಾಣದವರೇ ಕಟ್ಟಬೇಕಿತ್ತು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಯಾಕೆ ಮೌನವಾಗಿದ್ದಾರೆ? ಕರ್ನಾಟಕ ಸರ್ಕಾರ ವಿಮಾನ ನಿಲ್ದಾಣ ಪ್ರಾಧಿಕಾರದ ಮುಖ್ಯಸ್ಥರಾಗಿದ್ದು, ನಿಲ್ದಾಣದಿಂದಲೇ ಕಟ್ಟಬಹುದಿತ್ತು. ಈಗ ಇದನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿಕೊಳ್ಳುತ್ತಿದ್ದಾರೆ’ಎಂದರು.

ಸಂಸತ್ತಿನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಿ ಎಂಬ ದೇವೇಗೌಡರ ಪತ್ರದ ಬಗ್ಗೆ ಕೇಳಿದಾಗ, ‘ಬಹಳ ಸಂತೋಷ, ಅಲ್ಲಿಯೂ ಪ್ರತಿಮೆ ನಿರ್ಮಾಣ ಮಾಡಲಿ, ವಿಧಾನಸೌಧ ಅವರಣದಲ್ಲೂ ಮಾಡಲಿʼಎಂದರು.

ಸಿದ್ದರಾಮಯ್ಯ ಅವರ ಬಗ್ಗೆ ಮುಕುಡಪ್ಪ ಅವರ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸಿದ್ದರಾಮಯ್ಯ ಅವರ ಬಗ್ಗೆ ಬೇರೆಯವರು ಏನು ಹೇಳಿದ್ದಾರೆ ಗೊತ್ತಿಲ್ಲ. ಇದು ಖಾಸಗಿಯಾಗಿ ಮಾತನಾಡಿರುವ ವಿಚಾರ. ಈ ಬಗ್ಗೆ ತಿಳಿದು ಮಾತನಾಡುತ್ತೇನೆ. ನಮ್ಮ ನಾಯಕರ ಘನತೆ ಹಾಳು ಮಾಡಲು ಷಡ್ಯಂತ್ರ ನಡೆಯುತ್ತಿದೆʼ ಎಂದರು.

ನವೆಂಬರ್ 11ಕ್ಕೆ ಪ್ರಧಾನಿ ಭೇಟಿ: ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸೂಚನೆ
ಬೆಂಗಳೂರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು

ಈ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದಕ್ಕೆ ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ.

ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ನಾಡ ಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ
ಬೆಂಗಳೂರು: ಇಂದು ಬೆಂಗಳೂರಿನ ವಿಮಾನ ನಿಲ್ದಾಣದ ಬಳಿಯ ನಾಡ ಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ನಿರ್ಮಾಣ ಕಾರ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರಿ ನಿರ್ಮಲಾನಂದನಾಥ ಸ್ವಾಮಿಜಿ ಅವರು ವೀಕ್ಷಿಸಿದರು.

ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯ ಆಡಳಿತಗಾರ, ಸಮಾಜ ಸುಧಾರಕ ಆಗಿದ್ದರು.  ಜಾಗತಿಕ ಪ್ರತಿಷ್ಠೆಯ ಬೆಂಗಳೂರನ್ನು ಅವರು ನಿರ್ಮಿಸಿದ್ದು ಐದು ಶತಮಾನಗಳ ಹಿಂದೆ.

ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಇನ್ನೇನು ಅನಾವರಣಗೊಳ್ಳಲಿದೆ. ಅದರ ಸುತ್ತ ಥೀಮ್‌ ಪಾರ್ಕ್‌ ಕೂಡ ಅಭಿವೃದ್ಧಿಯಾಗಲಿದೆ. ಖಡ್ಗಧಾರಿಯಾಗಿ ತಲೆ ಎತ್ತಿ ನಿಂತಿರುವ ಕೆಂಪೇಗೌಡರು ಕನ್ನಡಿಗರ ಸ್ವಾಭಿಮಾನದ ಪ್ರತೀಕವಾಗಿದೆ.