Nalin Kumar Kateel – Peepal Media

ಬಿಟ್ ಕಾಯಿನ್ ತನಿಖೆ ; ನಳಿನ್ ಕುಮಾರ್ ಕಟೀಲ್ ಕೂತಲ್ಲೇ ಬೆವರಿದ್ದೇಕೆ : ಕಾಂಗ್ರೆಸ್ ವ್ಯಂಗ್ಯ
ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿ ನಡೆದ ಹಗರಣಗಳ ತನಿಖೆ ನಡೆಸುವ ಬಗ್ಗೆ ಕಾಂಗ್ರೆಸ್ ಸರ್ಕಾರ ಹೇಳಿಕೆ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸುವ ಬಗ್ಗೆ ಹೇಳಿಕೆ ನೀಡುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೂತಲ್ಲೇ ಬೆವರಿದ್ದು ಯಾಕೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ‌.

ಬಿಜೆಪಿ ಆಡಳಿತದ ಅವಧಿಯಲ್ಲಿ ಬಿಟ್ ಕಾಯಿನ್ ಹಗರಣ ದೊಡ್ಡ ಸುದ್ದಿ ಮಾಡಿತ್ತು. ಮಾಧ್ಯಮಗಳು ಸಹ ಒಂದರ ಹಿಂದೆ ಒಂದರಂತೆ ಸುದ್ದಿ ಮಾಡಿದ್ದೇ ಮಾಡಿದ್ದು. ಆದರೆ ತನಿಖೆ ಯಾವ ಹಂತಕ್ಕೆ ಬಂದು ನಿಂತಿತ್ತು ಎಂಬುದು ಸದ್ದೇ ಇಲ್ಲದಂತೆ ಮರೆಮಾಚಿತ್ತು. ಒಂದು ಹಂತದಲ್ಲಿ ಬಿಜೆಪಿ ಪಕ್ಷವೇ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದೆ ಎಂಬ ಮಾತುಗಳು ಕೇಳಿ ಬಂದವು.

ಇನ್ನೊಂದು ಕಡೆ ಬಿಜೆಪಿಯ ಘಟಾನುಘಟಿ ನಾಯಕರ ಹೆಸರುಗಳು ಈ ಹಗರಣದ ಹಿಂದೆ ಕೇಳಿ ಬಂದಿತ್ತು. ಅದರಲ್ಲಿ ಮುಖ್ಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರೇ ಹೆಚ್ಚು ಕೇಳಿ ಬಂದಿತ್ತು. ನಂತರ ಸದ್ದೇ ಇಲ್ಲದೇ ಪ್ರಕರಣದ ತನಿಖೆ ಮೂಲೆಗುಂಪಾಗಿತ್ತು.

ಈ ಹಿಂದೆಯೇ ಬಿಟ್ ಕಾಯಿನ್ ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಹೆಸರು ಪ್ರಸ್ತಾಪಿಸಿ ಕಾಂಗ್ರೆಸ್ ವಕ್ತಾರ ಕೆ.ಲಕ್ಷ್ಮಣ್ ಆರೋಪಿಸಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಾದಿ ತಪ್ಪಿದಾಗಲೂ ಕೆ.ಲಕ್ಷ್ಮಣ್ ಆರೋಪಿಸಿದ್ದರು. ಅದಕ್ಕೆ ಸರಿಯಾಗಿ ಸಿಐಡಿ ತಂಡ ಪ್ರಕರಣವನ್ನು ಅರ್ಧಕ್ಕೆ ಸ್ಥಗಿತಗೊಳಿಸಿತ್ತು.

ಸಧ್ಯ ಬಿಟ್ ಕಾಯಿನ್ ಹಗರಣ ಈಗ ಮತ್ತೆ ಸುದ್ದಿಯಲ್ಲಿದ್ದು, ಕಾಂಗ್ರೆಸ್ ಸರ್ಕಾರ ಅದರ ಸಮಗ್ರ ತನಿಖೆ ಮಾಡಿಸಲು ಮುಂದಾಗಿದೆ. ಈ ಒಂದು ವಿಚಾರವನ್ನು ಇಟ್ಟು ಕಾಂಗ್ರೆಸ್ ಪಕ್ಷ ‘ನಮ್ಮ ಸರ್ಕಾರ ಬಿಟ್ ಕಾಯಿನಾ ಹಗರಣದ ಬುಡ ಬೇರುಗಳನ್ನು ಜಾಲಾಡಲಿದೆ, ಅಂದಹಾಗೆ ನಳಿನ್ ಕುಮಾರ್ ಕಟೀಲರು ಕೂತಲ್ಲೇ ಬೆವರುತ್ತಿದ್ದಾರಂತೆ.. ಏಕಿರಬಹುದು ಎಂದು ವ್ಯಂಗ್ಯ ಮಾಡಿದೆ

https://twitter.com/INCKarnataka/status/1673982651517259776?t=H4puuz_VowvZWP3LBLKOmA&s=19

ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು: ಡಿ.ಕೆ.ಶಿ ಟಾಂಗ್‌
ಬೆಂಗಳೂರು: ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ. ಹೀಗಾಗಿ ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಯಲಹಂಕದ ಗೋಲ್ಡ್ ಫಿಂಚ್ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ 2 ಲಕ್ಷ, 1 ಲಕ್ಷ ರೂ. ಡಿಡಿ ಪಡೆದರೆ ಬಿಜೆಪಿಯವರಿಗೇನು ನೋವು ಎಂದರು.

ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ಯಾರೂ ಕೂಡ ಅಸಮಾಧಾನ ವ್ಯಕ್ತಪಡಿಸಿಲ್ಲ. ಅಸಮಾಧಾನಗೊಳ್ಳುವವರು ಪಕ್ಷದಲ್ಲಿ ಇರುವುದು ಬೇಡ, ಅವರು ಪಕ್ಷ ತೊರೆಯಬಹುದು. ಪಕ್ಷದ ವತಿಯಿಂದ ಎಲ್ಲರನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದು ಪಕ್ಷದ ವಿಚಾರ. ಪಕ್ಷ ಉಳಿಯಬೇಕು. ಪಕ್ಷ ಹಾಗೂ ಪಕ್ಷದ ಬಾವುಟ ಕಟ್ಟುವವರು ಯಾರು? ಮಾತನಾಡುವವರು ಬಂದು ಪಕ್ಷ ಕಟ್ಟುತ್ತಾರಾ?’ ಎಂದು ಖಾರವಾಗಿ ಪ್ರಶ್ನಿಸಿದರು.

ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, ಉತ್ತರಿಸಿದ ಅವರು, ಈ ವಿಚಾರವನ್ನು ನಾನು ಮಾಧ್ಯಮಗಳಲ್ಲಿ ನೋಡಿದೆ. ಇಂತಹ ಘಟನೆ ಆಗಬಾರದಿತ್ತು, ಆಗಿಹೋಗಿದೆ. ಈ ರೀತಿ ಹೇಗೆ ಆಯಿತು ಎಂದು ಎಲ್ಲರಿಗೂ ಅನುಮಾನ ಬರುತ್ತದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡಿ ನ್ಯಾಯ ಒದಗಿಸಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಧೈರ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಕಾಂಗ್ರೆಸ್ ಬಾಗಿಲು ಕ್ಲೋಸ್ ಆಗಲಿದೆ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಬಾಗಿಲು ಮುಚ್ಚುವುದಾದರೆ, ಅವರು ಕಾಂಗ್ರೆಸ್ ಶಾಸಕರನ್ನು ಕಾಡಿ ಬೇಡಿ, ಕಾಲಿಗೆ ಬಿದ್ದು, ಹಣ ಕೊಟ್ಟು ಖರೀದಿ ಮಾಡಿದರಲ್ಲ, ನಮ್ಮ ಪಕ್ಷದ 13 ಹಾಗೂ ಜೆಡಿಎಸ್ ನ 3 ಸದಸ್ಯರನ್ನು ಕರೆದುಕೊಂಡರಲ್ಲ, ಆಗೇನು ಅವರ ಪಕ್ಷದ ಬಾಗಿಲು ಬಂದ್ ಆಗಿತ್ತಾ? ಅವರಿಗೆ ತಾಕತ್ತಿದ್ದರೆ ಜನಮತದ ಆಧಾರದ ಮೇಲೆ ಗೆಲ್ಲಬೇಕಿತ್ತು ಎಂದು ಕಿಡಿಕಾರಿದರು.

ಓಡಿ ಹೋಗುವ ಜಾಯಮಾನ ಬಿಜೆಪಿಯವರದೇ ಹೊರೆತು ಕಾಂಗ್ರೆಸ್‌ನವರದ್ದಲ್ಲ: ಪ್ರಿಯಾಂಕ್‌ ಖರ್ಗೆ
ಬೆಂಗಳೂರು: ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ವ್ಯಂಗ್ಯದ ಹೇಳಿಕೆಗೆ ಕೆಪಿಸಿಸಿ ಸಂಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕುರಿತು ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡುವುದರ  ಜೊತೆಗೆ ಇದು ಭಾರತ್‌ ಐಕ್ಯತಾ ಯಾತ್ರೆ ಅಲ್ಲ ಇದು ಯಶಸ್ವಿಯಾಗುವುದಿಲ್ಲ ಎಂದು ಟೀಕಿಸಿದ್ದರು.

ಈ ಹಿನ್ನಲೆ ಟ್ವೀಟ್‌ ಮಾಡುವ ಮೂಲಕ ತಿರುಗೇಟು ನೀಡಿರುವ ಪ್ರಿಯಾಂಕ್‌ ಖರ್ಗೆ ಅವರು, ಬ್ರಿಟಿಷರಿಗೆ ಹೆದರಿ ಕ್ಷಮೆ ಕೇಳಿ ಓಡಿದ್ದು ನಿಮ್ಮವರು, ಚೀನಾ ಅತಿಕ್ರಮಣ ಮಾಡಿದಾಗ ‘ಚೀನಾ’ ಎಂಬ ಹೆಸರನ್ನೂ ಹೇಳದೆ ಓಡಿದವರು ನರೇಂದ್ರ ಮೋದಿ, 8 ವರ್ಷದಿಂದ ಮಾಧ್ಯಮಗಳ ಮೈಕ್ ಮುಂದೆ ಬಾರದೇ ಓಡಿದವರು ಮೋದಿ, ಸುಳ್ಯದಲ್ಲಿ ಅಲ್ಲಾಡುವ ಕಾರ್ ಬಿಟ್ಟು ಓಡಿದ್ದು ನೀವು ನಳಿನ್‌ ಕುಮಾರ್‌ ಕಾಟೀಲ್‌ ಅವರೇ, ಓಡಿಹೋಗುವ ಜಾಯಮಾನ ನಿಮ್ಮದೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಟೀಕಿಸಿದರು.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಘಟಕವು ಟ್ವೀಟ್‌ ಮಾಡಿದ್ದು, ಸುಳ್ಯದಲ್ಲಿ ಕಾರು ಅಲ್ಲಾಡಿದಾಗ ಕಾರ್ ಬಿಟ್ಟು ತಪ್ಪಿಸಿಕೊಳ್ಳುವ ದಾರಿ ಹುಡುಕುತ್ತ ಓಡಿದ ನಳಿನ್‌ ಕುಮಾರ್‌ ಕಟೀಲ್‌ ಅವರೇ, ಮಹಿಳೆಯರನ್ನು ಗೌರವಿಸದ ನಿಮ್ಮ ಮಾತು ಮಹಾಭಾರತದ ದುಶ್ಯಾಸನನ ನೆನಪಿಸುತ್ತದೆ. ಹೀಗಾಗಿ ಭಾರತ ಐಕ್ಯತಾ ಯಾತ್ರೆ ಬಿಜೆಪಿಯ ಅಂತ್ಯಕ್ಕೆ ಕಾರಣವಾಗಲಿದೆ ಎಂದು ವ್ಯಂಗ್ಯವಾಡಿದೆ.

ಬ್ರಿಟಿಷರಿಗೆ ಹೆದರಿ ಕ್ಷಮೆ ಕೇಳಿ ಓಡಿದ್ದು ನಿಮ್ಮವರು,

ಚೀನಾ ಅತಿಕ್ರಮಣ ಮಾಡಿದಾಗ 'ಚೀನಾ' ಎಂಬ ಹೆಸರನ್ನೂ ಹೇಳದೆ ಓಡಿದವರು ಮೋದಿ,

8 ವರ್ಷದಿಂದ ಮಾಧ್ಯಮಗಳ ಮೈಕ್ ಮುಂದೆ ಬಾರದೇ ಓಡಿದವರು ಮೋದಿ,

ಸುಳ್ಯದಲ್ಲಿ ಅಲ್ಲಾಡುವ ಕಾರ್ ಬಿಟ್ಟು ಓಡಿದ್ದು ನೀವು.@nalinkateel ಅವರೇ,
ಓಡಿಹೋಗುವ ಜಾಯಮಾನ ನಿಮ್ಮದೇ ಹೊರತು ಕಾಂಗ್ರೆಸ್‌ನದ್ದಲ್ಲ. pic.twitter.com/yDY2J9Mk3d
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 7, 2022

ನೈಜ ಸ್ವಾತಂತ್ರ್ಯ ಸೇನಾನಿಗಳಿಗೆ ಅಪಮಾನ: ಸಿದ್ದರಾಮಯ್ಯ ವಿರುದ್ಧ ನಳಿನ್ ಕುಮಾರ್ ಕಟೀಲ್ ಆರೋಪ
ಬೆಂಗಳೂರು: ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನೈಜ ಸ್ವಾತಂತ್ರ್ಯ ಸೇನಾನಿಗಳನ್ನು ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ಹಿ೦ಪಡೆಯುವ ಮೂಲಕ ರಾಜ್ಯದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ನೀಡಿದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಭಯೋತ್ಪಾದಕ ಸಂಘಟನೆಗಳಿಗಿಂತಲೂ ಹೆಚ್ಚು ಅಪಾಯಕಾರಿ. ಇಂತಹ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಜನರೇ ಸೂಕ್ತ ಉತ್ತರ ಕೊಡುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ನಿಷೇಧಿಸಲಿದ್ದಾರೆ ಎಂದು ಹೇಳಿದರು.

ಮದನ್ ಲಾಲ್ ಧಿಂಗ್ರಾ, ವಾಸುದೇವ ಬಲವಂತ ಫಡಕೆ ಸಹಿತ ಕಾಂಗ್ರೆಸ್ ಪಡ್ಯಂತ್ರದಿಂದ ಇತಿಹಾಸದಲ್ಲಿ ಅಜ್ಞಾತವಾಗಿರುವ ಲಕ್ಷಾಂತರ ನೈಜ ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ನಮಗೆ ಸ್ವಾತ೦ತ್ರ್ಯ ಲಭಿಸಿದೆ. ಕಾಂಗ್ರೆಸ್ಸಿನಿಂದ ಸ್ವಾತಂತ್ರ್ಯ ಸಿಕ್ಕಿದೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ನೈಜ ಸ್ವಾತಂತ್ರ್ಯ ಸೇನಾನಿಗಳನ್ನು ಅಪಮಾನ ಮಾಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ, ಸರ್ದಾರ್ ವಲ್ಲಭಬಾಯ್ ಪಟೇಲ್ ಸಹಿತ ನೈಜ ದೇಶಭಕ್ತರು ಅಂದು ಕಟ್ಟಿದ್ದ ಕಾಂಗ್ರೆಸ್ ಮತ್ತು ಮೂರು ತಲೆಮಾರಿಗೆ ಬೇಕಾದಷ್ಟು ಮಾಡಿದ್ದೇವೆ ಎಂದು ಹೇಳುವ ಇಂದಿನ ಕಾಂಗ್ರೆಸ್ ಮುಖಂಡರಿಗೂ ವ್ಯತ್ಯಾಸವಿದೆ. ನಕಲಿ ಕಾಂಗ್ರೆಸ್ ನಿಷೇಧವಾಗಲಿ ಎಂದು ಜನರೇ ಬಯಸುತ್ತಿದ್ದಾರೆ ಎಂದು ಕಟೀಲ್ ಹೇಳಿದರು.

ಸ್ವಾತಂತ್ರ್ಯ ಸಿಕ್ಕಿದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮಾಗಾಂಧೀಜಿ ಹೇಳಿದ್ದರೂ ಸ್ವಪ್ರತಿಷ್ಟೆ, ಸ್ವಲಾಭಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಮುಂದುವರೆಸಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಸ್ಥಾನಮಾನ ಸಿಗಲಿಲ್ಲ ಎಂದು ಕಾಂಗ್ರೆಸ್ಸಿಗೆ ಜಿಗಿದ ನಕಲಿ ಗಾಂಧಿಗಳ ಗುಲಾಮರಿಗೆ ಅದೆಲ್ಲ ನೆನಪಿಲ್ಲವೇ? ಎಂದು ಕಟೀಲ್‌ ಪ್ರಶ್ನಿಸಿದರು.