news – Peepal Media

ಮಕ್ಕಳ ಕಳ್ಳಸಾಗಣೆ, ರಾಜ್ಯಗಳ ನೀತಿಗೆ – ‘ಸುಪ್ರೀಂ’ ಗರಂ
ನವದೆಹಲಿ : ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಕ್ಕಳ ಕಳ್ಳಸಾಗಣೆ (Child Trafficking) ಜಾಲಗಳ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರವನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ರಾಜ್ಯಗಳ ಗೃಹ ಕಾರ್ಯದರ್ಶಿಗಳಿಗೆ ಖಡಕ್ ಎಚ್ಚರಿಕೆ ನೀಡಿರುವ ನ್ಯಾಯಾಲಯ, ಕೂಡಲೇ ಸಂಘಟಿತ ಕ್ರಮಕ್ಕೆ ಮುಂದಾಗುವಂತೆ ನಿರ್ದೇಶನ ನೀಡಿದೆ.

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, ರಾಜ್ಯಗಳ ವಿಳಂಬ ಧೋರಣೆಯನ್ನು ತರಾಟೆಗೆ ತೆಗೆದುಕೊಂಡಿತು. ದೇಶಾದ್ಯಂತ ಮಕ್ಕಳ ಕಳ್ಳಸಾಗಣೆ ಜಾಲಗಳು ಸಕ್ರಿಯವಾಗಿವೆ. ನೀವು ಈಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಸಂಪೂರ್ಣವಾಗಿ ಕೈಮೀರಿ ಹೋಗಲಿದೆ ಎಂದು ನ್ಯಾಯಪೀಠವು ಗಂಭೀರ ಎಚ್ಚರಿಕೆ ನೀಡಿದೆ.

ಮಕ್ಕಳ ಕಳ್ಳಸಾಗಣೆಯನ್ನು ಕೇವಲ ಸಾಮಾನ್ಯ ಅಪರಾಧವೆಂದು ಪರಿಗಣಿಸಬೇಡಿ. ಇದೊಂದು ವ್ಯವಸ್ಥಿತ ಜಾಲವಾಗಿದ್ದು, ಇದನ್ನು ಬುಡ ಸಮೇತ ಕಿತ್ತೊಗೆಯಲು ರಾಜ್ಯ ಗೃಹ ಇಲಾಖೆಗಳು ಆದ್ಯತೆ ನೀಡಬೇಕು. ರಾಜ್ಯ ಸರ್ಕಾರಗಳು, ಪೊಲೀಸ್ ಮತ್ತು ಇತರ ತನಿಖಾ ಸಂಸ್ಥೆಗಳು ಈ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ. ಉನ್ನತ ನ್ಯಾಯಾಲಯವಾಗಿ ನಾವು ಕೇವಲ ಮೇಲ್ವಿಚಾರಣೆ ಮಾಡಬಹುದು, ಆದರೆ ತಳಮಟ್ಟದಲ್ಲಿ ಕೆಲಸ ಮಾಡಬೇಕಾದವರು ನೀವೇ ಎಂದು ಪೀಠವು ಸ್ಪಷ್ಟಪಡಿಸಿದೆ. ಕಾಣೆಯಾದ ಮಕ್ಕಳ ಪತ್ತೆ ಮತ್ತು ಕಳ್ಳಸಾಗಣೆಯಾದ ಮಕ್ಕಳ ರಕ್ಷಣೆಯ ಬಗ್ಗೆ ನಿಖರವಾದ ದತ್ತಾಂಶ ಹಾಗೂ ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಮಕ್ಕಳ ಕಳ್ಳಸಾಗಣೆ ಕೇವಲ ಒಂದು ರಾಜ್ಯದ ಗಡಿಯೊಳಗೆ ಸೀಮಿತವಾಗಿಲ್ಲ. ಇದು ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಕ್ರಿಮಿನಲ್ ಗ್ಯಾಂಗ್‌ಗಳ ಕೃತ್ಯವಾಗಿದೆ. ಆದ್ದರಿಂದ, ಗೃಹ ಕಾರ್ಯದರ್ಶಿಗಳು ಈ ವಿಷಯವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ, ಪೊಲೀಸ್ ಮಹಾನಿರ್ದೇಶಕರು ಮತ್ತು ಇತರ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ನ್ಯಾಯಾಲಯ ಹೇಳಿದೆ. ಈಗಾಗಲೇ ಹಲವು ರಾಜ್ಯಗಳು ಈ ವಿಷಯದಲ್ಲಿ ವರದಿ ನೀಡಲು ವಿಳಂಬ ಮಾಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠವು, ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ನಿಗದಿಪಡಿಸಿದೆ. ಅಷ್ಟರೊಳಗೆ ಕಳ್ಳಸಾಗಣೆ ತಡೆಗೆ ರೂಪಿಸಲಾಗಿರುವ ಕ್ರಿಯಾ ಯೋಜನೆಯ ಬಗ್ಗೆ ಸ್ಪಷ್ಟವಾದ ಮಾಹಿತಿಯನ್ನು ನೀಡುವಂತೆ ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತಾಕೀತು ಮಾಡಿದೆ.

ತಾಯಿಯ ಅಗಲಿಕೆಯಲ್ಲೆ ಪರೀಕ್ಷೆ ಬರೆದಿದ್ದ ದಿಶಾ ಇಂದು ರಾಜ್ಯಕ್ಕೆ ರ‍್ಯಾಂಕ್​​​​​​​
ದಕ್ಷಿಣ ಕನ್ನಡ : ಕರ್ನಾಟಕ ದ್ವಿತೀಯ ಪಿಯುಸಿ (PUC Result) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ವಿದ್ಯಾರ್ಥಿಗಳ ಸತತ ಪರಿಶ್ರಮದ ಫಲ ಸಿಕ್ಕಿದೆ. ಈ ಬಾರಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಆದರೆ ಈ ಅಮೋಘ ಸಾಧನೆಯ ಹಿಂದೆ ನೋವಿನ ಕಥೆಯೊಂದಿದೆ.

ತಾಯಿ ಕಳೆದುಕೊಂಡ ನೋವಿನಲ್ಲೂ ಪರೀಕ್ಷೆ ಬರೆದಿದ್ದ ದಿಶಾ

ಪರೀಕ್ಷೆ ನಡೆಯುತ್ತಿರುವಾಗಲೇ ತನ್ನ ತಾಯಿಯನ್ನು ಕಳೆದುಕೊಂಡ ದಿಶಾ, ಅತೀವ ದುಃಖದ ನಡುವೆಯೂ ಧೃತಿಗೆಡದೆ ಪರೀಕ್ಷೆ ಬರೆದು ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೊದಲ ಮೂರು ಪರೀಕ್ಷೆಗಳು ಮುಗಿದ ಬೆನ್ನಲ್ಲೇ ದಿಶಾ ಅವರ ತಾಯಿ ಆಕಸ್ಮಿಕವಾಗಿ ನಿಧನರಾಗಿದ್ದರು. ತಾಯಿಯ ಅಗಲಿಕೆಯಿಂದ ಕಂಗಾಲಾಗಿದ್ದ ದಿಶಾಗೆ ಉಳಿದ ಮೂರು ಪರೀಕ್ಷೆಗಳನ್ನು ಎದುರಿಸುವುದು ದೊಡ್ಡ ಸವಾಲಾಗಿತ್ತು. ಆದರೆ, ತನ್ನ ಮಗಳು ದೊಡ್ಡ ಸಾಧನೆ ಮಾಡಬೇಕು ಎಂಬ ತಾಯಿಯ ಆಸೆಯನ್ನು ಈಡೇರಿಸಲು ನಿರ್ಧರಿಸಿದ ದಿಶಾ, ಕಣ್ಣೀರನ್ನು ಎದೆಯಲ್ಲೇ ಅದುಮಿಟ್ಟುಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾದರು. ಈ ಕಷ್ಟದ ಸಮಯದಲ್ಲಿ ಆಳ್ವಾಸ್ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಆಕೆಗೆ ಬೆಂಬಲವಾಗಿ ನಿಂತು ಧೈರ್ಯ ತುಂಬಿದ್ದರು.

ತಮ್ಮ ಸಾಧನೆಯ ಬಗ್ಗೆ ಮಾತನಾಡುತ್ತಾ ಭಾವುಕರಾದ ದಿಶಾ, “ಅಮ್ಮ ಯಾವಾಗಲೂ ನನಗೆ ಧೈರ್ಯ ಹೇಳುತ್ತಿದ್ದರು. ಕಷ್ಟಪಟ್ಟು ಓದಿದರೆ ಫಲ ಸಿಕ್ಕೇ ಸಿಗುತ್ತದೆ ಎನ್ನುತ್ತಿದ್ದರು. ಪರೀಕ್ಷೆಯ ಸಂದರ್ಭದಲ್ಲಿ ಅವರ ಮಾತುಗಳೇ ನನಗೆ ಶಕ್ತಿಯಾದವು. ಇಂದು ಅಮ್ಮ ಬದುಕಿದ್ದಿದ್ದರೆ ತುಂಬಾ ಸಂತೋಷಪಡುತ್ತಿದ್ದರು,” ಎಂದು ಕಣ್ಣೀರಿಟ್ಟಿದ್ದಾರೆ. ಮುಂದೆ ಸಿಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸು ಹೊಂದಿರುವ ದಿಶಾ, ಕೇವಲ ಗಂಟೆಗಟ್ಟಲೆ ಓದುವುದಕ್ಕಿಂತ ಓದಿದ್ದನ್ನು ಅರ್ಥೈಸಿಕೊಂಡು ಅಭ್ಯಾಸ ಮಾಡುವುದು ಮುಖ್ಯ ಎಂದು ಕಿವಿಮಾತು ಹೇಳಿದ್ದಾರೆ. ಅಸಾಧಾರಣ ಛಲದ ಮೂಲಕ ಗುರಿ ತಲುಪಿದ ದಿಶಾ ಅವರ ಸಾಧನೆ ಇಂದು ಎಲ್ಲರಿಗೂ ಮಾದರಿಯಾಗಿದೆ.

ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
ಮಂಡ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ (Crime) ಆಕೆಯ ಸಾವಿಗೆ ಕಾರಣನಾದ ಆರೋಪಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಡ್ಯ ನಗರದ ತಾವರಗೆರೆ ಬಡಾವಣೆಯ ನಿವಾಸಿ ಅಖೀಬ್ ಆಲಂ ಎಂಬಾತನಿಗೆ 20 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂಪಾಯಿ ದಂಡ ವಿಧಿಸಿ ಮಂಡ್ಯದ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ದಿಲೀಪ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದ ಹಿನ್ನೆಲೆ

ಮಾಹಿತಿಗಳಪ್ರಕಾರ, ಆರೋಪಿ ಅಖೀಬ್ ಆಲಂ ಶಾಲಾ ಬಾಲಕಿಯನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಆಕೆಯನ್ನು ಪುಸಲಾಯಿಸುತ್ತಿದ್ದನು. ಒಂದು ವೇಳೆ ತನ್ನನ್ನು ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಬಾಲಕಿಯನ್ನು ಹೆದರಿಸಿದ್ದನು. 2023ರಜನವರಿ 27ರಂದು ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಶ್ರೀರಂಗಪಟ್ಟಣ ತಾಲ್ಲೂಕಿನ ಕರಿಘಟ್ಟ ಬೆಟ್ಟದ ಬಳಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅಲ್ಲದೆ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆಕೆಗೆ ಬೆದರಿಕೆ ಹಾಕಿದ್ದ.

ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಕಿ

ಆರೋಪಿಯ ಕಿರುಕುಳ ಹಾಗೂ ಈ ಘಟನೆಯಿಂದ ತೀವ್ರವಾಗಿ ಮನನೊಂದ ಬಾಲಕಿಯು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಬಾಲಕಿಯ ಮರಣದ ನಂತರ ನಡೆದ ವೈದ್ಯಕೀಯ ತಪಾಸಣೆಯಲ್ಲಿ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲುಮಾಡಲಾಗಿತ್ತು. ತನಿಖಾಧಿಕಾರಿಯಾದ ಇನ್ಸ್‌ಪೆಕ್ಟರ್ ಆನಂದಕುಮಾರ್ ಅವರು ಸರಿಯಾದ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಪು ಪ್ರಕಟಿಸಿದೆ. ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ದ್ವಿತೀಯ ಪಿಯು ಫಲಿತಾಂಶ ಅರ್ಪಿತಾ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ
ಹಾಸನ : ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅರ್ಪಿತಾ ಹೆಚ್.ಜಿ. ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಹಾಸನದ ಎಪಿಜೆ ಕಾಲೇಜಿನ ವಿದ್ಯಾರ್ಥಿನಿಯಾದ ಅರ್ಪಿತಾ, ಒಟ್ಟು 600ರಲ್ಲಿ 597 ಅಂಕಗಳನ್ನು ಗಳಿಸಿ ಶೇ.99.5 ಫಲಿತಾಂಶ ಸಾಧಿಸಿದ್ದಾರೆ. ಸಂಸ್ಕೃತ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.

ನಾಲ್ಕು ವಿಷಯಗಳಲ್ಲಿ ಪೂರ್ಣ ಅಂಕಗಳನ್ನು ಗಳಿಸಿರುವ ಅರ್ಪಿತಾ ಸಾಧನೆಗೆ ಜಿಲ್ಲೆಯಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ.

ಬೈಕ್ ನಲ್ಲಿ ಲಿಪ್ಟ್ ಕೊಡುವ ನೆಪ ಶಿಕ್ಷಕಿ ಮೇಲೆ ಅ*ತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲು
ಹಾಸನ: ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳಾ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಹಾಸನ ಜಿಲ್ಲೆಯ ದುದ್ದ ಹೋಬಳಿ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಸಿದ್ದಾಪುರ ಗ್ರಾಮದ ನಿವಾಸಿ ಗಂಗಾಧರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತೆ (ಹೆಸರು ಗೌಪ್ಯತೆಗಾಗಿ ಬಹಿರಂಗಪಡಿಸಲಾಗಿಲ್ಲ) ನೀಡಿದ ದೂರಿನ ಮೇರೆಗೆ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಮಾಹಿತಿ ಪ್ರಕಾರ, ಸಂಜೆ ಸುಮಾರು 4.45ರ ವೇಳೆಗೆ ಸಿದ್ದಾಪುರ ಗೇಟ್ ಬಳಿ ಬಸ್‌ಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಆರೋಪಿ ಲಿಫ್ಟ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾನೆ. ಶಿಕ್ಷಕಿ ನಿರಾಕರಿಸಿದರೂ ಬಲವಂತವಾಗಿ ಬೈಕ್ ಮೇಲೆ ಹತ್ತಿಸಿಕೊಂಡು ದುಡ್ಡದತ್ತ ಕರೆದೊಯ್ದಿದ್ದಾನೆ ಎನ್ನಲಾಗಿದೆ.

ಮುಂದೆ, ದುಡ್ಡ ತಲುಪಿದ ಬಳಿಕವೂ ಬೈಕ್ ನಿಲ್ಲಿಸದೆ ಮಾಯಸಮುದ್ರ–ಗೋಪನಹಳ್ಳಿ ಮಾರ್ಗವಾಗಿ ನಿರ್ಜನ ಪ್ರದೇಶದತ್ತ ಕರೆದೊಯ್ದು, ದೊಡ್ಡಪುರ ರೈಲ್ವೆ ಹಳಿಯ ಸಮೀಪ ಅತ್ಯಾಚಾರಕ್ಕೆ ಯತ್ನಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಯ ನಂತರ ಸಂತ್ರಸ್ತೆ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಅಪಹರಣ, ಜೀವ ಬೆದರಿಕೆ ಹಾಗೂ ಅತ್ಯಾಚಾರ ಯತ್ನದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ ಸಾ ಪ ಚುನಾವಣೆ ಇಂದು ಹಣಕ್ಕೆ ಸಿಲುಕಿದೆ – ಮೇಟಿಕೇರಿ ಹಿರಿಯಣ್ಣ
ಚನ್ನರಾಯಪಟ್ಟಣ: ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಅಸ್ಮಿತೆಯ ಧ್ವನಿಯಾಗಿದ್ದು ಇಂತಹ ಜಾಗಕ್ಕೆ ಕನ್ನಡ ಮನಸುಗಳನ್ನು ಸೆಳೆಯುವ ಸಂಘಟನಾ ಚಾತುರ್ಯ ಇರುವ ಹೋರಾಟದ ಹಿನ್ನೆಲೆ ಇಂದ ಬಂದಂತವರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಪರಿಷತ್ ನಿಂತ ನೀರಾಗದೆ ಒಳ್ಳೆಯ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಹಿರಿಯ ಸಾಹಿತಿ ಮೇಟಿಕೇರಿ ಹಿರಿಯಣ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಾದಿಗೆ ಪ್ರಬಲ ಆಕಾಂಕ್ಷಿಯಾಗಿರುವ ಸಾಮಾಜಿಕ ಹೋರಾಟಗಾರ ಕಾಳೇನಹಳ್ಳಿ ಆನಂದ್ ಅವರ ಹಿತೈಷಿಗಳ ಚಿಂತನಾಸಭೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಪರಿಷತ್ ಚುನಾವಣೆಗಳು ರಾಜಕೀಯ ಚುನಾವಣೆಗಳ ರೀತಿ ಹಣದ ಹೊಳೆಯನ್ನು ಹರಿಸುವ ಮಟ್ಟಕ್ಕೆ ಬಂದಿರುವುದು ಸಂಗತಿ ಕನ್ನಡ ಸಾಹಿತ್ಯ ಪರಿಷತ್ತು ಎಂದರೆ ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸುವ ತುಡಿತ ಇರುವ ವ್ಯಕ್ತಿಯನ್ನು ಆರಿಸಿ ಕಳಿಸುವಂತಹ ಒಂದು ವ್ಯವಸ್ಥೆ ಆದರೆ ಇಂದು ಉದ್ಯಮಿಗಳು ರಾಜಕೀಯ ಹಿನ್ನಡೆಯುಳ್ಳವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು ಚುನಾವಣೆಗಳಲ್ಲಿ ನಿಜವಾದ ಕನ್ನಡದ ಕಟ್ಟಾಳುಗಳು ಹಿಮ್ಮುಖವಾಗಲು ಕಾರಣವಾಗಿದೆ ಎಂದರು.

ಆನಂದ್ ಕಾಳೇನಹಳ್ಳಿ ಚಿಕ್ಕಂದಿನಿಂದಲೂ ಸಂಘಟನಾ ಚತುರತೆ ಇರುವ ವ್ಯಕ್ತಿಯಾಗಿದ್ದು ಅವರಿಗೆ ಕನ್ನಡಕ್ಕಾಗಿ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹಾರೈಸಿದರು.

ಈ ಸಭೆಯಲ್ಲಿ ನಾಡಪ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರು ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾದ ಕಾಳೇನಹಳ್ಳಿ ಆನಂದ್ ಕುಮಾರ್, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕರಾದ ಸಿ ಎನ್ ಪುಟ್ಟಸ್ವಾಮಿಗೌಡ, ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷರಾದ ಮೆಡಿಕಲ್ ವೆಂಕಟೇಶ್, ಮಾಜಿ ಅಧ್ಯಕ್ಷರಾದ ಕುಂಬಾರಹಳ್ಳಿ ರಮೇಶ್, ಮಾಜಿ ಉಪಾಧ್ಯಕ್ಷರಾದ ಸಿ ಜೆ ಜಗದೀಶ್, ಪುರಸಭಾ ಮಾಜಿ ಅಧ್ಯಕ್ಷರಾದ ಸಿ ನಾಗರಾಜು,ಕೋಟೆ ಮೋಹನ್, ಹಿರಿಯ ಸಾಹಿತಿಗಳಾದ ಮೇಟಿಕೆರೆ ಹಿರಿಯಣ್ಣ, ಪ್ರೊಫೆಸರ್ ಸಿದ್ದೇಗೌಡ,ಹೊನ್ನಶೆಟ್ಟಿಹಳ್ಳಿ ಗಿರಿರಾಜ್, ಶ್ರೀಮತಿ ಜಯಂತಿ ಚಂದ್ರಶೇಖರ್,ಕಾಳೇನಹಳ್ಳಿ ಚಂದ್ರು, ಹರಿಕಥೆ ವಿದ್ವಾಂಸರಾದ ಲೋಕೇಶ್ ದಾಸ್, ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಸಿ ಎನ್ ಅಶೋಕ್, ನವೋದಯ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಮುರಾಜಿ ಮಂಜಣ್ಣ, ಕಾರ್ಯದರ್ಶಿಗಳಾದ ಕೆಂಬಾಳು ಶರತ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ನಾಗರತ್ನ, ಉಪಾಧ್ಯಕ್ಷರಾದ ಪ್ರೇಮಮ್ಮ, ಸಮಾಜ ಸೇವಕರುಗಳಾದ ಗಜಾನನ ಮನೋಹರ್, ಅಬ್ದುಲ್ ಅಝೀಮ್, ಮಹದೇವ್, ಸಿದ್ದೇಶ್, ಕನ್ನಡ ಪರ ಹೋರಾಟಗಾರ ಜನಿವಾರ ಶರತ್, ರಾಜಕುಮಾರ, ಉಪನ್ಯಾಸಕರಾದ ಎಂ ಜೆ ರತ್ನಾಕರ್, ಹನುಮಂತಪ್ಪ,ಯಶವಂತ ಕುಮಾರ್, ಸೇರಿದಂತೆ ಇತರರು ಹಾಜರಿದ್ದರು.

ದತ್ತಪೀಠ ತಪ್ಪಲಿನ ಮಾಣಿಕ್ಯಾಧಾರ ಜಲಪಾತ ಬಳಿ 15 ವರ್ಷದ ಬಾಲಕಿ ನಾಪತ್ತೆ
ಚಿಕ್ಕಮಗಳೂರು: ದತ್ತಪೀಠ ತಪ್ಪಲಿನ ಮಾಣಿಕ್ಯಾಧಾರ ಜಲಪಾತ ಬಳಿ 15 ವರ್ಷದ ಬಾಲಕಿ ನಾಪತ್ತೆಯಾಗಿರುವ ಘಟನೆ ಆತಂಕ ಮೂಡಿಸಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆ ಮೂಲದ ಶ್ರೀನಂದ (15) ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದಳು. ಜಲಪಾತದ ಮೆಟ್ಟಿಲು ಇಳಿಯುವ ವೇಳೆ ಕುಟುಂಬದವರು ಮುಂದೆ ಸಾಗುತ್ತಿದ್ದಾಗ, ಹಿಂದೆ ಬರುತ್ತಿದ್ದ ಬಾಲಕಿ ಏಕಾಏಕಿ ಕಾಣೆಯಾಗಿದ್ದಾಳೆ. ತಕ್ಷಣ ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿಲ್ಲ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ, ಪೊಲೀಸರು ಹಾಗೂ ಅಗ್ನಿಶಾಮಕ ದಳ ಶೋಧ ಕಾರ್ಯ ಆರಂಭಿಸಿದ್ದು, ಬಳಿಕ ಎಸ್‌ಡಿಆರ್‌ಎಫ್ ತಂಡವೂ ಸೇರಿಕೊಂಡಿದೆ.

ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳಾಗಿ ವಿಭಜನೆಗೊಂಡು ಥರ್ಮಲ್ ಡ್ರೋನ್ ಸಹಾಯದಿಂದ ಹುಡುಕಾಟ ನಡೆಸುತ್ತಿದ್ದಾರೆ. ಕಡಿದಾದ ಬೆಟ್ಟ-ಗುಡ್ಡ ಹಾಗೂ ದಟ್ಟ ಕಾಡು ಪ್ರದೇಶವಾಗಿರುವುದರಿಂದ ಶೋಧ ಕಾರ್ಯ ಸವಾಲಾಗಿದೆ. ಬಾಲಕಿ ನಾಪತ್ತೆ ಪ್ರಕರಣ ನಿಗೂಢತೆಯನ್ನು ಹೆಚ್ಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ದಲಿತ ಎಂದು ಸ್ವಾಮೀಜಿಯನ್ನ ದೇವಸ್ಥಾನದಿಂದ ಹೊರಹಾಕಿದ ಆಡಳಿತ ಮಂಡಳಿ
ಕಲಬುರಗಿ : ಜಿಲ್ಲೆಯ ಸೇಡಂ ತಾಲೂಕಿನ ಪ್ರಸಿದ್ಧ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ದೇವಸ್ಥಾನದಲ್ಲಿ (Kalburgi)  ದಲಿತ ಎಂಬ ಕಾರಣಕ್ಕೆ ಸ್ವಾಮೀಜಿಯೊಬ್ಬರ ಮೇಲೆ ಹಲ್ಲೆ (Crime) ನಡೆಸಿ, ಅವರನ್ನು ದೇವಸ್ಥಾನದಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

7 -8 ವರ್ಷಗಳಿಂದ ಸೇವೆ ಮಾಡುತ್ತಿದ್ದ ಸ್ವಾಮೀಜಿ

ತೆಲಂಗಾಣ ಮೂಲದ ಬಂಡಿ ಬಾಲಕೃಷ್ಣ ಎಂಬುವವರೇ ಈ ಹಲ್ಲೆಗೆ ಒಳಗಾದ ದುರ್ದೈವಿ. ಕಳೆದ 7-8 ವರ್ಷಗಳಿಂದ ಇದೇ ದೇವಸ್ಥಾನದಲ್ಲಿ ನೆಲೆಸಿದ್ದ ಇವರು ಭಕ್ತಿಯಿಂದ ಸೇವೆ ಸಲ್ಲಿಸುತ್ತಿದ್ದರು. ಆದರೆ, ದೇವಸ್ಥಾನದ ಟ್ರಸ್ಟಿಗಳು ಇವರ ಜಾತಿಯನ್ನು ನೆಪವಾಗಿಟ್ಟುಕೊಂಡು ಅವಮಾನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯ ಮತ್ತು ಅವರ ಪುತ್ರ ಸುಮನ್ ಅವರು ಬಂಡಿ ಬಾಲಕೃಷ್ಣ ಅವರನ್ನು ದೇವಸ್ಥಾನದಿಂದ ಎಳೆದಾಡಿ ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. “ಕೆಳಜಾತಿಯವರು ದೇವಸ್ಥಾನ ಪ್ರವೇಶಿಸಬಾರದು” ಎಂದು ನಿಂದಿಸಿರುವ ಟ್ರಸ್ಟಿಗಳು, ಈ ಹಿಂದೆಯೂ ಹಲವು ಬಾರಿ ದೈಹಿಕವಾಗಿ ಉಪದ್ರವ ನೀಡಿದ್ದರು ಎನ್ನಲಾಗಿದೆ. ದಲಿತ ಸಮುದಾಯಕ್ಕೆ ಸೇರಿದವರು ಎಂಬ ಏಕೈಕ ಕಾರಣಕ್ಕೆ ಸ್ವಾಮೀಜಿಯವರನ್ನು ಹೀನಾಯವಾಗಿ ನಡೆಸಿ ಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ದೇವಸ್ಥಾನದಲ್ಲಿ ದಲಿತ ಯುವಕರ ಮೇಲೆ ಹಲ್ಲೆ, ಯಾದಗಿರಿಯಲ್ಲಿ ಅಮಾನವೀಯ ಘಟನೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಮಾನವೀಯತೆ ಮರೆತ ಘಟನೆಯೊಂದು ನಡೆದಿದ್ದು, ದೇವಸ್ಥಾನದ (Temple) ಕಟ್ಟೆಯ ಮೇಲೆ ಕುಳಿತಿದ್ದ ಕಾರಣಕ್ಕೆ ದಲಿತ (Dalit) ಸಮುದಾಯದ ಯುವಕರ (Youths) ಮೇಲೆ ಹಲ್ಲೆ (Assault) ನಡೆಸಲಾಗಿದೆ. ಗ್ರಾಮದ ಜಾತ್ರೆಯ ಸಂದರ್ಭದಲ್ಲಿ ಈ ಅಹಿತಕರ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಇಲ್ಲಿನ ಸ್ಥಳೀಯ ದೇವಸ್ಥಾನದ ಆವರಣದಲ್ಲಿ ಕುಳಿತಿದ್ದ ಯುವಕರನ್ನು ಕಂಡು ಕೆರಳಿದ ಮೇಲ್ವರ್ಗದ ಕೆಲವರು, ಅವರನ್ನು ಅಲ್ಲಿಂದ ಎದ್ದು ಹೋಗುವಂತೆ ಧಮಕಿ ಹಾಕಿದ್ದಾರೆ. ಕೇವಲ ಮಾತಿನ ಚಕಮಕಿಯಷ್ಟೇ ಅಲ್ಲದೆ, ಯುವಕರ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಯುವಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Act) ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ.

ಬಾಬು ಜಗಜೀವನ್ ರಾಂ ರವರ ಮಾರ್ಗದಲ್ಲಿ ನಾವೆಲ್ಲರು ನಡೆಯೋಣ ಎಸ್.ಪಿ -ಶುಭಾನ್ವಿತ
ಹಾಸನ:- ಸಮಾಜದಲ್ಲಿ ಶಾಂತಿಯುತವಾಗಿ, ಪರಸ್ಪರ ಬಾಂಧವ್ಯದಿಂದ, ಸರಳವಾಗಿ ಬದುಕನ್ನು ಯಾವ ರೀತಿಯಲ್ಲಿ ನೆಡಸಬೇಕು ಎಂದು ಬಾಬು ಜಗಜೀವನ್ ರಾಮ್ ರವರು ಅವರು ತಿಳಿಸಿಕೊಟ್ಟಿದ್ದಾರೆ. ಅವರ ನೀಡಿರುವ ಮಾರ್ಗದಲ್ಲಿ ಜೀವನ ಸಾಗಿಸುವ ಮೂಲಕ ಅವರಿಗೆ ಗೌರವ ಸಲ್ಲಿಸೋಣ ಎಂದು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭಾನ್ವಿತ ರವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಇಂದು ಬಾಬು ಜಗಜೀವನ್ ರಾಮ್ ರವರು ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಜಗದೀಶ್ ಗಂಗಣ್ಣ ನವರ್,ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್ ಫೀರ್ ಹಾಗೂ ಸಮುದಾಯ ಮುಖಂಡರುಗಳು ಹಾಜರಿದ್ದರು.

ಕೊಡಗಿನ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವತಿ ನಾಪತ್ತೆ – ತೀವ್ರ ಶೋಧ
ಕೊಡಗು : ಜಿಲ್ಲೆಯ ಮಡಿಕೇರಿ (Madikeri) ತಾಲೂಕಿನ ಕಕ್ಕಬ್ಬೆ (kakkabbe) ಗ್ರಾಮದ ವ್ಯಾಪ್ತಿಯಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ (kerala) ಮೂಲದ ಯುವತಿಯೊಬ್ಬರು ನಾಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಕೇರಳದ ಶರಣ್ಯ ಜಿ.ಎಸ್. ನಾಪತ್ತೆಯಾದ ಯುವತಿ ಎಂದು ತಿಳಿದುಬಂದಿದೆ.

ಶರಣ್ಯ ಅವರು ತಡಿಯಂಡಮೋಲ್ ಬೆಟ್ಟದ ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿದ್ದಾರೆ. ಇವರು ಖಾಸಗಿ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ನಿನ್ನೆ ಮಧ್ಯಾಹ್ನ ಸುಮಾರು 2:30ರ ವೇಳೆಗೆ ಇವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿರುವ ಕಾರಣ, ಹೋಂ ಸ್ಟೇ ಸಿಬ್ಬಂದಿ ಇವರ ಜೊತೆಗೆ ಇತರರನ್ನು ಕಳುಹಿಸಿಕೊಟ್ಟಿದ್ದರು ಎನ್ನಲಾಗಿದೆ.

ಶೋಧ ಕಾರ್ಯ ಚುರುಕು

ಯುವತಿ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪೊಲೀಸರು ಮತ್ತು ಅರಣ್ಯ ಇಲಾಖೆಯ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದ್ದು, ಶ್ವಾನ ದಳದ ಸಹಾಯವನ್ನೂ ಪಡೆಯಲಾಗುತ್ತಿದೆ.

ನಿನ್ನೆ ಸಂಜೆ ನಾನು ದಾರಿ ತಪ್ಪಿರುವುದಾಗಿ ಶರಣ್ಯ ಅವರು ತಮ್ಮ ಹೋಂ ಸ್ಟೇ ಮಾಲೀಕರಿಗೆ ಫೋನ್ ಮಾಡಿ ತಿಳಿಸಿದ್ದರು. ಆದರೆ, ಅದಾದ ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ (ನಾಟ್ ರೀಚಬಲ್) ಆಗಿದೆ. ಶರಣ್ಯ ಅವರು ಒಂಬತ್ತು ಜನರ ತಂಡದೊಂದಿಗೆ ಚಾರಣಕ್ಕೆ ತೆರಳಿದ್ದರು. ಚಾರಣದ ವೇಳೆ ನಾಯಿಗಳ ಜೊತೆ ಆಟವಾಡುತ್ತಾ ತಂಡದಿಂದ ಹಿಂದೆ ಉಳಿದ ಇವರು, ನಂತರ ಸಂಪರ್ಕ ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.