nikhil – Peepal Media

ರಾಜಕೀಯಕ್ಕಿಂತ ಸಿನಿಮಾದಲ್ಲೇ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ
ನಟ, ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷರೂ ಆಗಿರುವ ನಿಖಿಲ್ ಕುಮಾರಸ್ವಾಮಿ ರಾಜಕೀಯದಲ್ಲಿ ಮುಂದುವರಿಯುವ ಮತ್ತು ಚುನಾವಣಾ ಸೋಲಿನಿಂದ ಹತಾಶರಾಗಿದ್ದಾರೆ ಎಂಬ ಚರ್ಚೆ ಹಲವು ದಿನಗಳಿಂದ ಮಾಧ್ಯಮಗಳಲ್ಲಿ ಹರಿದಾಡಿತ್ತು. ಇದಕ್ಕೆ ಉತ್ತರವಾಗಿ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

“ಅರೂವರೆ ಕೋಟಿ ಕನ್ನಡಿಗರು, ದೃಶ್ಯ ಮತ್ತು ಮುದ್ರಣ ಮಾಧ್ಯಮಕ್ಕೆ ನಿನ್ನೆಯ ದಿನ ಚರ್ಚೆಗೆ ಗ್ರಾಸವಾದ ವಿಷಯದ ಬಗ್ಗೆ ಸ್ಪಷ್ಟನೆ ನೀಡಲು ಇಚ್ಛಿಸುತ್ತೇನೆ. ಲೋಕಸಭೆ, ವಿಧಾನಸಭೆ ಚುನಾವಣೆಯ ಸೋಲಿನ ಬಳಿಕ ನಾನು ರಾಜಕಾರಣದಿಂದ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದೇನೆ ಎನ್ನುವ ಭಾವನೆ ಯಾರಿಗೂ ಬೇಡ” ಎಂದು ನಿಖಿಲ್ ಹೇಳಿದ್ದಾರೆ.

ಇತ್ತ ಎಲ್ಲವನ್ನೂ ಅರಿತು ಮತ್ತೆ ಚುನಾವಣಾ ಅಖಾಡಕ್ಕೆ ಇಳಿಯುವ ಬಗ್ಗೆ ತನ್ನ ವಿಚಾರ ವ್ಯಕ್ತಪಡಿಸಿದ ನಿಖಿಲ್ ಕುಮಾರಸ್ವಾಮಿ “ನಾನು ಜವಾಬ್ದಾರಿಯನ್ನು ಅರಿತಿದ್ದೇನೆ. ಚುನಾವಣೆಯ ಸೋಲು ತಾತ್ಕಾಲಿಕ, ಜನರು ನನಗೆ ಸದಾ ಕಾಲ ಪ್ರೀತಿ ವಿಶ್ವಾಸ, ಗೌರವದಲ್ಲಿ ಎಂದೂ ಕೊರತೆ ಮಾಡಿಲ್ಲ. ಸಮಯ, ಸಂದರ್ಭ, ಕಾಲ ಎಲ್ಲದ್ದಕ್ಕೂ ಉತ್ತರ ಕೊಡುತ್ತದೆ” ಎಂದು ಉತ್ತರಿಸಿದ್ದಾರೆ.

ಹಾಗೆಯೇ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಬಗ್ಗೆ ತನ್ನ ನಿಲುವು ವ್ಯಕ್ತಪಡಿಸಿದ ನಿಖಿಲ್ “ಮಾಜಿ ಪ್ರಧಾನಮಂತ್ರಿಗಳ ಮೊಮ್ಮಗ, ಮಾಜಿ ಮುಖ್ಯಮಂತ್ರಿಗಳ ಮಗ ಎನ್ನುವುದು ಒಂದು ಭಾಗವಾದರೆ, ಕನ್ನಡ ಚಿತ್ರರಂಗದಲ್ಲಿ ಒಬ್ಬ ಕಲಾವಿದನ ಸ್ಥಾನ ಕೊಟ್ಟಿರುವ ಸಮಸ್ತ ಕಲಾಭಿಮಾನಿಗಳಿಗೆ ನಾನು ಎಂದೆಂದಿಗೂ ಚಿರಋಣಿ” ಎಂದು ತಿಳಿಸಿದ್ದಾರೆ.

“ನನ್ನ ಮೊದಲ ಚಿತ್ರ ಜಾಗ್ವಾರ್ ಮತ್ತು ನಾನು ನಟಿಸಿರುವ ಎಲ್ಲಾ ಸಿನಿಮಾಗಳಲ್ಲೂ ಬೆನ್ನುತಟ್ಟಿ ಆಶೀರ್ವದಿಸಿ, ಪ್ರೋತ್ಸಾಹಿಸಿ ನನ್ನ ಯಶಸ್ಸಿಗೆ ನೀವೆಲ್ಲರೂ ಕಾರಣರಾಗಿದ್ದಿರಿ. ಅದಕ್ಕೆ ನಾನು ಆಭಾರಿ. ಇನ್ನೂ ಬೆಟ್ಟದಷ್ಟು ಕನಸು ಹೊತ್ತು ಹಲವಾರು ಚಿತ್ರಗಳಲ್ಲಿ ನಟಿಸಿ ನಿಮ್ಮನ್ನು ಮನರಂಜಿಸಬೇಕು ಎನ್ನುವುದು ನನ್ನ ಜೀವನದ ಗುರಿ” ಎಂದು ರಾಜಕೀಯಕ್ಕಿಂತ ನನ್ನ ಮೊದಲ ಆಸಕ್ತಿ ಇರುವುದು ಸಿನಿಮಾ ಮೇಲೆ ಎಂಬುದನ್ನು ನಿಖಿಲ್ ತಿಳಿಸಿದ್ದಾರೆ.

“ಇಲ್ಲಿಯವರೆಗೂ ನನ್ನ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದೆಯೂ ನಾನು ನಿಮ್ಮ ನಿರೀಕ್ಷೆಗೂ ಮೀರಿ ಚಿತ್ರಗಳನ್ನು ಮಾಡುವವನಿದ್ದೇನೆ. ಕೊನೆಯದಾಗಿ ಎಲ್ಲಾ ಮಾಧ್ಯಮದ ಮಿತ್ರರಿಗೆ ರಾಜಕಾರಣ ಮತ್ತು ಸಿನಿಮಾದ ವಿಚಾರವಾಗಿ ನನಗೆ ಸಂಬಂಧಿಸಿದ ವಿಷಯಗಳಿದ್ದರೆ ಆ ಪ್ರಶ್ನೆಗಳಿಗೆ ನಾನೇ ಉತ್ತರ ನೀಡಲು ಬಯಸುತ್ತೇನೆ” ಎನ್ನುವ ಮೂಲಕ ಸಧ್ಯಕ್ಕೆ ರಾಜಕೀಯ ಪ್ರವೇಶದಿಂದ ದೂರ ಸರಿದಿದ್ದೇನೆ, ಆದರೆ ಮುಂದೆ ಮತ್ತೆ ಬಂದೇ ಬರುತ್ತೇನೆ ಅದಕ್ಕೆ ಕಾಲವೇ ನಿರ್ಧರಿಸಲಿದೆ ಎಂಬುದಾಗಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ: ನಾಯಕಿ ಯಾರು ಗೊತ್ತಾ?
ದಕ್ಷಿಣ ಭಾರತದ ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯಿಂದ ನಿರ್ಮಾಣ .

ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು.

ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಿಖಿಲ್‌ ನಟಿಸುತ್ತಿದ್ದಾರೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

ಈ ಹಿಂದೆ “ಸೀತಾರಾಮ ಕಲ್ಯಾಣ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು. “ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು” ಎಂದು ಸುಭಾಸ್ಕರನ್ ಅವರು ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು.

ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಅವರು ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.