NPS – Peepal Media

ನಾಳಿನ ಸಂಪುಟ ಸಭೆಯಲ್ಲಿ ಎನ್‌ಪಿಎಸ್‌ ರದ್ದು ಘೋಷಣೆ?
ಬೆಂಗಳೂರು: ಹಳೆಯ ಪಿಂಚಣಿ ಯೋಜನೆನ್ನು (ಒಪಿಎಸ್/OPS) ಮರಳಿ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗಕ್ಕೆ ಭರವಸೆ ನೀಡಿದರು.

ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್/NPS) ಅಡಿಯಲ್ಲಿರುವ ನೌಕರರ ಪರವಾಗಿ ನಿಲ್ಲುವ ಸರ್ಕಾರದ ಬದ್ಧತೆಗೆ ಒತ್ತು ನೀಡಿದ ಸಿದ್ದರಾಮಯ್ಯ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಂಘಕ್ಕೆ ಭರವಸೆ ನೀಡಿದರು.

OPS ಯೋಜನೆಯನ್ನು ಮರಳಿ ತರುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಆರಂಭಿಸಿದ್ದೇವೆ ಎಂದು ತಿಳಿಸಿದರು. ಎನ್‌ ಪಿ ಎಸ್‌ ಯೋಜನೆಗೆ ನೌಕರರ ವೇತನದಿಂದ ಕಡಿತಗೊಳಿಸುವುದನ್ನು ನಿಲ್ಲಿಸಲು ದಾರಿಗಳನ್ನು ಹುಡುಕುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.

7ನೇ ವೇತನ ಆಯೋಗದ ಅನುಷ್ಠಾನದ ಬಗ್ಗೆ ಇರುವ ಕಳವಳವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, ಸರ್ಕಾರ ರಚಿಸಿರುವ ಆಯೋಗವು ತನ್ನ ವರದಿಯನ್ನು ಸಲ್ಲಿಸಿದ ನಂತರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ಅಸೋಸಿಯೇಷನ್, ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಶಿಫಾರಸುಗಳನ್ನು ತ್ವರಿತವಾಗಿ ಜಾರಿಗೆ ತರುವಂತೆ ಸಿಎಂಗೆ ಒತ್ತಾಯಿಸಿದರು.

ಸಮಿತಿಯು ಯಾವುದೇ ಪ್ರಗತಿ ಕಾಣದೆ ಸುಮಾರು ಒಂದು ವರ್ಷ ಪೂರೈಸಿದೆ ಎಂದು ನಿಯೋಗ ಅಸಮಾಧಾನ ವ್ಯಕ್ತಪಡಿಸಿತು.

ಕಳೆದ ವರ್ಷ ಮಾರ್ಚ್ 1ರಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಏಕವ್ಯಕ್ತಿ ಸಮಿತಿಯನ್ನು ಸರ್ಕಾರ ರಚಿಸಿತ್ತು. ಒಪಿಎಸ್‌ ಯೋಜನೆಯನ್ನು ಮರಳಿ ಜಾರಿಗೊಳಿಸಿರುವ ದೇಶದ ಕೆಲವು ರಾಜ್ಯಗಳು ಯೋಜನೆಯನ್ನು ಹೇಗೆ ಜಾರಿಗೆ ತಂದಿವೆ ಎಂಬುದನ್ನು ಅಧ್ಯಯನ ಮಾಡುವುದು ಅದರ ಉದ್ದೇಶವಾಶವಾಗಿತ್ತು. ಸಮಿತಿಯು ಇನ್ನಷ್ಟೇ ತನ್ನ ವರದಿಯನ್ನು ಸಲ್ಲಿಸಬೇಕಿದೆ.

ಪಿಂಚಣಿ ಸಂಬಂಧಿತ ಚರ್ಚೆಗಳಲ್ಲದೆ, ಕರ್ನಾಟಕ ಆರೋಗ್ಯ ಸಂಜೀವನಿ ಯೋಜನೆ, ಆರೋಗ್ಯ ವಿಮಾ ಉಪಕ್ರಮವನ್ನು ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಿಗೆ ತ್ವರಿತವಾಗಿ ಜಾರಿಗೊಳಿಸಲಾಗುವುದು ಎಂದು ಸಿಎಂ ನೌಕರರಿಗೆ ಭರವಸೆ ನೀಡಿದರು.

ಇತ್ತೀಚಿನ ಸುದ್ದಿಗಳ ಪ್ರಕಾರ ನಾಳೆ ಎಂದರೆ ಜನವರಿ 18ರಂದು ಸಂಪುಟ ಸಭೆಯಲ್ಲಿ ಎನ್‌ಪಿಎಸ್‌ ರದ್ಧತಿ ಘೋಷಣೆ ನಡೆಯಲಿದೆ ಎನ್ನಲಾಗಿದೆ.

ದೆಹಲಿ | NPS, NEP ವಿರುದ್ಧ ಘರ್ಜಿಸಿದ ಲಕ್ಷಾಂತರ ಶಿಕ್ಷಕರು, ಉದ್ಯೋಗಿಗಳು, ಮತ್ತು ಪಿಂಚಣಿದಾರರು
ದೆಹಲಿ: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (OPS) ಮರುಸ್ಥಾಪಿಸದಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸರ್ಕಾರಕ್ಕೆ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಉದ್ಯೋಗದಾತ, ಶಿಕ್ಷಕರ, ಪಿಂಚಣಿದಾರರ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. ಜೊತೆಗೆ ಗುತ್ತಿಗೆ ನೇಮಕಾತಿಯನ್ನು ಸಹ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಶುಕ್ರವಾರ ರಾಮಲೀಲಾ ಮೈದಾನದಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಕಾರ್ಮಿಕರ ಒಕ್ಕೂಟ (CCGEW), ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ (AISGEF), ಶಾಲಾ ಶಿಕ್ಷಕರ ಒಕ್ಕೂಟ (STFI), ಅಖಿಲ ಭಾರತ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟ (AISGPF), ರಾಷ್ಟ್ರೀಯ ಸಮನ್ವಯ ಪಿಂಚಣಿದಾರರ ಸಂಘ (ಎನ್‌ಸಿಸಿಪಿಎ) ಜಂಟಿಯಾಗಿ ಆಯೋಜಿಸಿದ್ದ ರ್ಯಾಲಿಯಲ್ಲಿ ದೇಶಾದ್ಯಂತದ ಸಾವಿರಾರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು ಮತ್ತು ಪಿಂಚಣಿದಾರರು ಭಾಗವಹಿಸಿದ್ದರು.

ರಾಜಧಾನಿ ದೆಹಲಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಿಂಚಣಿದಾರರು ಇಂಗ್ಲಿಷ್ ಮತ್ತು ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ‘NPS ರದ್ದುಗೊಳಿಸುವಿಕೆ, OPS ಮರಳಿ ತನ್ನಿ, NEP ಹಿಂಪಡೆಯಿರಿ’ ಎಂದು ಒತ್ತಾಯಿಸುವ ಫಲಕಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಪ್ರತಿಭಟಿಸಿ, ಮೋದಿ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ನಂತರ ಸಂಘದ ಮುಖಂಡ ಸುಭಾಷ್ ಲಂಬಾ ಹಾಗೂ ಶಿಕ್ಷಕರ ಸಂಘದ ಮುಖಂಡ ಸಿ.ಎನ್.ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಾರ್ವಜನಿಕ ಸಭೆಯಲ್ಲಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್ ಮಾತನಾಡಿ, ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಗಳನ್ನು ತೀವ್ರವಾಗಿ ಟೀಕಿಸಲಾಯಿತು. ಸಾರ್ವಜನಿಕ ವಲಯದ ಸಂಸ್ಥೆಗಳ ಖಾಸಗೀಕರಣ ಮತ್ತು ಪಿಂಚಣಿ ಖಾಸಗೀಕರಣಕ್ಕೆ ಮೂಲ ಕಾರಣವಾಗಿರುವ ಮೋದಿ ಸರಕಾರವನ್ನು ಸೋಲಿಸುವುದೇ ತಕ್ಷಣದ ಗುರಿ ಎಂದರು.

ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಮಹಾಮಂಡಲದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎ. ಶ್ರೀಕುಮಾರ್ ಮಾತನಾಡಿ, “ದೇಶಾದ್ಯಂತ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ನೀಡಬೇಕು ಹಾಗೂ ಕಾಯಂಗೊಳಿಸಬೇಕು” ಎಂದು ಒತ್ತಾಯಿಸಿದರು

ಶಾಲಾ ಶಿಕ್ಷಕರ ಫೆಡರೇಶನ್ (ಎಸ್‌ಟಿಎಫ್‌ಐ) ಅಧ್ಯಕ್ಷ ಕೆ.ಎಸ್.ಹರಿಕೃಷ್ಣ ಮಾತನಾಡಿ, “ಶಿಕ್ಷಣದ ಕೇಂದ್ರೀಕರಣ, ವ್ಯಾಪಾರೀಕರಣ ಮತ್ತು ಕೇಸರಿಕರಣಕ್ಕೆ ಕಾರಣವಾಗುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದರು.

ಸಂವಿಧಾನದ ಗುರಿಗಳಿಗೆ ಅನುಗುಣವಾಗಿ ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದರು. ಹಿರಿಯ ನಾಯಕರಾದ ಎಸ್.ಬಿ.ಯಾದವ್, ರೂಪಕ್ ಸರ್ಕಾರ್, ಸಿ.ಎನ್.ಭಾರತಿ, ಅಶೋಕ್ ತುಳೆ, ಕೆ.ರಾಘವೇಂದ್ರನ್ ಮಾತನಾಡಿದರು.

OPS ಜಾರಿಗೆ ಸಮಿತಿ ರಚಿಸಲು ಸಿದ್ದರಾಮಯ್ಯ ಆದೇಶ
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, NPS (New pension scheme) ರದ್ಧತಿಗೆ ಆದೇಶ ಹೊರಡಿಸಿದೆ. OPS (Old Pension Scheme) ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಿತಿ ರಚನೆ ಮಾಡಲು ಆದೇಶ ಹೊರಡಿಸಿದ್ದಾರೆ. ಆ ಮೂಲಕ ಸರ್ಕಾರಿ ನೌಕರರ ಹಲವು ದಿನಗಳ ಬೇಡಿಕೆ, ಹೋರಾಟಕ್ಕೆ ಒಂದು ತಾತ್ವಿಕ ಹಂತಕ್ಕೆ ಬಂದು ನಿಂತಂತಾಗಿದೆ.

ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಹೊರಡಿಸಿದ್ದ NPS ರದ್ದು ಮಾಡುವುದಾಗಿ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಪಕ್ಷ ಭರವಸೆ ನೀಡಿತ್ತು. ಸಧ್ಯ ಈಗ ಹಲವು ದಿನಗಳ ಹೋರಾಟಕ್ಕೆ ಸರ್ಕಾರಿ ನೌಕರರು ನಿಟ್ಟುಸಿರು ಬಿಟ್ಟಂತಾಗಿದೆ.

ಸಧ್ಯ ನೌಕರರ ಹಲವು ದಿನಗಳ ಬೇಡಿಕೆಗೆ ಕಾಂಗ್ರೆಸ್ ಸರ್ಕಾರ OPS ಜಾರಿಗೆ ಸಮಿತಿ ರಚಿಸಲು ಆದೇಶಿಸುವ ಮೂಲಕ NPS ರದ್ಧಾಗುವ ಎಲ್ಲಾ ಮುನ್ಸೂಚನೆ ನೀಡಿದೆ.

ಎನ್.ಪಿ.ಎಸ್ ರದ್ದು ಮಾಡಿ ಓಪಿಎಸ್ ಜಾರಿಗೆ ಸಂಪುಟ ಸಭೆಯಲ್ಲಿ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂನ್ 13: ಹಳೇ ಪಿಂಚಣಿ ಯೋಜನೆ (OPS) ಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಚುನಾವಣೆಗೂ ಮುನ್ನ ಸರ್ಕಾರಿ ಅಧಿಕಾರಿಗಳು ಹೊಸ ಪಿಂಚಣಿ ಯೋಜನೆಯನ್ನು ರದ್ದುಪಡಿಸುವಂತೆ ಹಿಂದಿನ ಬಿಜೆಪಿ ಸರ್ಕಾರಕ್ಕೆ ಒತ್ತಡ ತರಲಾಗಿತ್ತು. ಆದರೆ ಅಂತಹ ಯಾವುದೇ ನಿರ್ಧಾರಕ್ಕೆ ನಮ್ಮ ಸರ್ಕಾರ ಬರುವುದಿಲ್ಲ ಎಂದು ಹಿಂದಿನ ಬಿಜೆಪಿ ಸರ್ಕಾರ ಕಡ್ಡಿ ಮುರಿದಂತೆ ಸರ್ಕಾರಿ ಅಧಿಕಾರಿಗಳಿಗೆ ತಿಳಿಸಿತ್ತು.

ಇದನ್ನೇ ಮುಂದಿರಿಸಿಕೊಂಡು ಕಾಂಗ್ರೆಸ್ ಪಕ್ಷ OPS ಜಾರಿ ಮಾಡುವ ಭರವಸೆಯನ್ನು ಸರ್ಕಾರಿ ನೌಕರರಿಗೆ ನೀಡುತ್ತಾ ಬಂದಿತ್ತು. ಮೇಲಾಗಿ ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಚುನಾವಣಾ ಪೂರ್ವದಲ್ಲಿ ನುಡಿದಂತೆ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು.

ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಪ್ರಾಮಾಣಿಕವಾಗಿ ಕಾರ್ಯಕ್ರಮ ಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ಸರ್ಕಾರಿ ನೌಕರರಿಗೆ ತಿಳಿಸಿದರು.

ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಮಾತನಾಡಿ, 01.04.2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. ಇದು 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒ.ಪಿ.ಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ವಿವರಿಸಿದರು.

ಹಾಗೆಯೇ ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವಿ.ಎಸ್.ಉಗ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆ.ಪಿ.ಟಿ.ಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಒಪಿಎಸ್‌ ಜಾರಿ: ಭಾಸ್ಕರ್‌ ರಾವ್
ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮರುಜಾರಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಆಮ್‌ ಆದ್ಮಿ ಪಾರ್ಟಿ ಬೆಂಬಲ ಸೂಚಿಸಿದ್ದು, ಪಕ್ಷದ ಮುಖಂಡರೊಂದಿಗೆ ಫ್ರೀಡಂ ಪಾರ್ಕ್‌ಗೆ ತೆರಳಿದ ರಾಜ್ಯ ಎಎಪಿ ಉಪಾಧ್ಯಕ್ಷ ಭಾಸ್ಕರ್‌ ರಾವ್‌ರವರು ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಶೀಘ್ರವೇ ಎನ್‌ಪಿಎಸ್‌ ರದ್ದುಪಡಿಸಿ, ಒಪಿಎಸ್‌ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಭಾಸ್ಕರ್‌ ರಾವ್‌, ʼಅಧಿಕಾರ ಸಿಕ್ಕರೆ ಒಪಿಎಸ್‌ ಜಾರಿಗೆ ತರುವುದಾಗಿ ಪಂಜಾಬ್‌ ಚುನಾವಣೆ ವೇಳೆ ಆಮ್‌ ಆದ್ಮಿ ಪಾರ್ಟಿಯು ಗ್ಯಾರೆಂಟಿ ನೀಡಿತ್ತು. ಅದರಂತೆ ಅಲ್ಲಿನ ಸಚಿವ ಸಂಪುಟವು ಒಪಿಎಸ್‌ ಜಾರಿಗೆ ನವೆಂಬರ್‌ ತಿಂಗಳಿನಲ್ಲಿ ಅನುಮೋದನೆ ನೀಡಿ, ಸರ್ಕಾರವು ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿದೆ. ಗುಜರಾತ್‌ನಲ್ಲಿ ಕೂಡ ಒಪಿಎಸ್‌ ಜಾರಿ ಕುರಿತು ಎಎಪಿ ಗ್ಯಾರೆಂಟಿ ನೀಡಿತ್ತಾದರೂ ಅಲ್ಲಿ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದರೆ ಒಪಿಎಸ್‌ ಜಾರಿಗೆ ತರಲು ಬದ್ಧರಾಗಿದ್ದೇವೆ. ಚುನಾವಣಾ ಪ್ರಣಾಳಿಕೆ ಹಾಗೂ ಜನರಿಗೆ ನೀಡುವ ಗ್ಯಾರೆಂಟಿ ಕಾರ್ಡ್‌ನಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸುತ್ತೇವೆ. ಎಎಪಿಯು ಸರ್ಕಾರಿ ನೌಕರರ ಹಿತ ಕಾಪಾಡಲು ಸದಾ ಬದ್ಧವಾಗಿರುತ್ತದೆʼ ಎಂದು ಹೇಳಿದ್ದಾರೆ.

ಆಮ್‌ ಆದ್ಮಿ ಪಾರ್ಟಿ ಮುಖಂಡರು ಹಾಗೂ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳಿಗೆ ಬಂಡವಾಳಶಾಹಿ ಉದ್ಯಮಿಗಳು ಮಾತ್ರ ಮುಖ್ಯವಾಗಿದ್ದಾರೆ. ನೌಕರರು, ಕಾರ್ಮಿಕರು, ರೈತರು, ಸಣ್ಣಪುಟ್ಟ ಉದ್ದಿಮೆದಾರರು ಸೇರಿದಂತೆ ಜನಸಾಮಾನ್ಯರ ಅಗತ್ಯಗಳು ಬಿಜೆಪಿ ಸರ್ಕಾರಗಳಿಗೆ ಲೆಕ್ಕಕ್ಕೇ ಇಲ್ಲ. ಇಷ್ಟು ದಿನ ಬೇರೆಬೇರೆ ವರ್ಗದ ಜನರು ಪ್ರತಿಭಟನೆ ನಡೆಸುತ್ತಿದ್ದು, ಈಗ ಸರ್ಕಾರಿ ನೌಕರರೇ ಬೀದಿಗಿಳಿಯುವ ಸ್ಥಿತಿ ಬಂದಿದೆ. ಸರ್ಕಾರಿ ನೌಕರರ ಬಗ್ಗೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಕಾಳಜಿಯಿದ್ದರೆ, ಶೀಘ್ರವೇ ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್‌ ಜಾರಿಗೆ ತರಲಿ’ ಎಂದು ಆಗ್ರಹಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ರವಿಶಂಕರ್‌ ಮಾತನಾಡಿ, ʼ2006ರ ನಂತರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಎನ್‌ಪಿಎಸ್‌ನಿಂದಾಗಿ ಅಭದ್ರತೆ ಕಾಡುತ್ತಿದೆ. ನಿವೃತ್ತಿ ನಂತರದ ಬದುಕಿನ ಬಗ್ಗೆ ಅವರು ಚಿಂತೆಗೀಡಾಗಿದ್ದಾರೆ. ಎನ್‌ಪಿಎಸ್‌ ರದ್ದುಪಡಿಸಿ ಒಪಿಎಸ್‌ ಜಾರಿಗೊಳಿಸುವುದರಿಂದ ಸರ್ಕಾರಕ್ಕೆ ಹೆಚ್ಚೇನೂ ಆರ್ಥಿಕ ಹೊರೆ ಆಗುವುದಿಲ್ಲ. ಎನ್‌ಪಿಎಸ್‌ ಟ್ರಸ್ಟ್‌ನಲ್ಲಿ ವಂತಿಗೆ ಮೊತ್ತವೇ 16 ಸಾವಿರ ಕೋಟಿಗೂ ಹೆಚ್ಚಿದ್ದು, ಒಪಿಎಸ್‌ ಜಾರಿಯಾದರೆ ವಂತಿಗೆ ಕಟ್ಟುವುದು ತಪ್ಪುತ್ತದೆ. ಎನ್‌ಪಿಎಸ್‌ ರದ್ದುಗೊಳಿಸಿದಾಗ ಬಡ್ಡಿಸಮೇತ ವಾಪಸ್‌ ಬರುವ ವಂತಿಗೆ ಹಣವನ್ನು ಸರಕಾರದ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದುʼ ಎಂದು ಹೇಳಿದ್ದಾರೆ.

ಈ ವೇಳೆ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಸುರೇಶ್‌ ರಾಥೋಡ್‌, ಮೋಹನ್‌ ದಾಸರಿ, ಜ್ಯೋತೀಶ್‌ ಕುಮಾರ್‌ ಮತ್ತಿತರರು ಭಾಗವಹಿಸಿದ್ದರು.

NPS ವಿರೋಧಿ ಆಂದೋಲನ : ಲಕ್ಷ ಲಕ್ಷ ಸಂಖ್ಯೆಯಲ್ಲಿ ರಾಜಧಾನಿ ಪ್ರವೇಶಿಸಿದ ಸರ್ಕಾರಿ ನೌಕರರು!
ಕೇಂದ್ರ ಸರ್ಕಾರದ NPS (ಹೊಸ ಪಿಂಚಣಿ ಯೋಜನೆ) ಯೋಜನೆಗೆ ಮೊದಲಿನಿಂದಲೂ ದೊಡ್ಡ ಮಟ್ಟದ ವಿರೋಧವಿದ್ದು, ಈಗ ಕರ್ನಾಟಕದಲ್ಲಿ ಸರ್ಕಾರದ ವಿರುದ್ಧ ದೊಡ್ಡ ಆಂದೋಲನವೇ ಶುರುವಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸರ್ಕಾರಿ ನೌಕರರು ಲಕ್ಷೋಪಾದಿಯಲ್ಲಿ ಬಂದು ಸೇರಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಹೊಸ ಪಿಂಚಣಿ ಯೋಜನೆಯಿಂದ ಸರ್ಕಾರಿ ನೌಕರರಿಗೆ ಭವಿಷ್ಯದಲ್ಲಿ ಆಗುವ ಸಮಸ್ಯೆಗಳನ್ನು ಮನಗಂಡು ಈಗಾಗಲೇ ದೇಶದ ಹಲವು ಕಡೆಗಳಲ್ಲಿ ವಿರೋಧ ವ್ಯಕ್ತವಾಗಿದ್ದು ಹಲವು ರಾಜ್ಯ ಸರ್ಕಾರಗಳು ಈ ಯೋಜನೆಯನ್ನೇ ರದ್ದುಪಡಿಸಿವೆ. ಕಳೆದ ಕೆಲವೇ ದಿನಗಳ ಹಿಂದೆ ಸರ್ಕಾರ ರಚಿಸಿದ ಹಿಮಾಚಲ ಪ್ರದೇಶ ರಾಜ್ಯ ಸರ್ಕಾರ ಕೂಡಾ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸುವ ಆಶ್ವಾಸನೆ ಕೊಟ್ಟಿದ್ದು, ಹೊಸ ಸರ್ಕಾರ ರಚನೆಯ ತಕ್ಷಣವೇ ಕೊಟ್ಟ ಭರವಸೆಯಂತೆ ಯೋಜನೆ ರದ್ದುಪಡಿಸಿದೆ.

ಸಧ್ಯ ಕರ್ನಾಟಕದಲ್ಲೂ ಹಿಂದಿನಿಂದ ಇದಕ್ಕೆ ವಿರೋಧವಿದ್ದು ಇಲ್ಲಿಯವರೆಗೆ ಅಲ್ಲಲ್ಲಿ ಈ ಯೋಜನೆ ವಿರೋಧಿಸಿ, ಪ್ರತಿಭಟನೆ, ಧರಣಿ ನಡೆಯುತ್ತಲೇ ಇತ್ತು. ಆದರೆ ಈಗ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ನೌಕರರ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಪ್ರಮಾಣದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭವಾಗಿದೆ.

ರಾಜ್ಯದ ನಾನಾ ಕಡೆಗಳಿಂದ ಸರ್ಕಾರಿ ನೌಕರರು ಫ್ರೀಡಂ ಪಾರ್ಕ್ ಬಳಿ ಸೇರಿದ್ದು ಸಧ್ಯ ಪ್ರೀಡಂ ಪಾರ್ಕ್ ನಲ್ಲಿ ಕಾಲಿಡಲೂ ಜಾಗವಿಲ್ಲದಂತಾಗಿದೆ. ಧರಣಿಯ ಹೆಚ್ಚಿನ ಕಡೆಗಳಲ್ಲಿ ಸರ್ಕಾರಕ್ಕೆ ನೌಕರರು ಎಚ್ಚರಿಕೆ ಕೊಡುತ್ತಿದ್ದು “ಹಿಮಾಚಲ ಪ್ರದೇಶದ ಫಲಿತಾಂಶ ಬೇಕೋ, ಗುಜರಾತ್ ಫಲಿತಾಂಶ ಬೇಕೋ ನೀವೇ ನಿರ್ಧರಿಸಿ” ಎಂಬಂತಹ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾದ ಎಲ್ಲಾ ಸರ್ಕಾರಿ ನೌಕರರು ನೀಲಿ ಟೀ ಶರ್ಟ್, ಗಾಂಧಿ ಟೋಪಿಯ ಸಮವಸ್ತ್ರ ಧರಿಸಿದ್ದು, ರಾಜ್ಯದ ಪ್ರತೀ ತಾಲ್ಲೂಕುಗಳಿಂದ ಫ್ರೀಡಂ ಪಾರ್ಕ್ ಗೆ ಬಂದಿಳಿದಿದ್ದಾರೆ. ಚನ್ನರಾಯಪಟ್ಟಣದಿಂದ ಸರ್ಕಾರಿ ನೌಕರರ ಒಂದು ದೊಡ್ಡ ಗುಂಪು ಸೈಕಲ್ ಜಾತಾ ಮೂಲಕ ಆಗಮಿಸಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಸರ್ಕಾರಿ ನೌಕರರೇ ತಿರುಗಿ ಬೀಳುವ ಎಲ್ಲಾ ಮುನ್ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ “ತೊಲಗಲಿ ತೊಲಗಲಿ NPS ತೊಲಗಲಿ, Vote for OPS” ಘೋಷಣೆಗಳು ಮುಗಿಲು ಮುಟ್ಡುತ್ತಿವೆ. ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯನ್ನೇ ನೌಕರರು ಗುರಿಯಾಗಿಟ್ಟುಕೊಂಡು ಸರ್ಕಾರಕ್ಕೆ ಸರಿಯಾದ ಬಿಸಿ ಮುಟ್ಟಿಸಲು ಹೊರಟಿದ್ದಾರೆ.