Partha Chatterjee's son-in-law – Peepal Media

ಅಕ್ರಮ ಹಣ ವರ್ಗಾವಣೆ ಪ್ರಕರಣ: ಪಾರ್ಥ ಚಟರ್ಜಿಯ ಅಳಿಯನನ್ನು ವಿಚಾರಣೆಗೊಳಪಡಿಸಿದ ಇಡಿ
ಕೋಲ್ಕತ್ತಾ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರ ಅಳಿಯ ಕಲ್ಯಾಣ್‌ಮೋಯ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೊಳಪಡಿಸಿದೆ.

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ತನಿಖೆಗೆ ಕೇಂದ್ರೀಯ ಸಂಸ್ಥೆಯು ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿದೆ.

ಪಾರ್ಥ ಚಟರ್ಜಿಯವರ ಮಗಳು ಸೋಹಿನಿಯನ್ನು ಮದುವೆಯಾಗಿರುವ ಕಲ್ಯಾಣ್ಮೋಯ್ ಭಟ್ಟಾಚಾರ್ಯ ಅವರು ನ್ಯೂಯಾರ್ಕ್‌ನಲ್ಲಿ ವಾಸಿಸುತ್ತಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಕಲ್ಯಾಣ್‌ಮೋಯ್‌ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿದೇಶದಲ್ಲಿರುವ ಕಾರಣ ಅವರು ಏಜೆನ್ಸಿಯ ಮುಂದೆ ಹಾಜರಾಗಲು ವಿಫಲರಾಗಿದ್ದರು. ಹೀಗಾಗಿ ಕಲ್ಯಾಣ್‌ಮೋಯ್ ಅವರನ್ನು ಸೋಮವಾರ ಕೋಲ್ಕತ್ತಾದಲ್ಲಿ ಇಡಿ ಎದುರು ಹಾಜರಾಗುವಂತೆ ಮನವಿ ಸಲ್ಲಿಸಲಾಗಿತ್ತು ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಪಾರ್ಥ ಚಟರ್ಜಿ ಅವರ ಅಳಿಯ ಇಂದು ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಿದ್ದು,  ಪ್ರಕರಣಕ್ಕೆ ಸಂಭಂದಿಸಿದಂತೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.