Pen drive – Peepal Media

ಅಶ್ಲೀಲ ಪೆನ್ ಡ್ರೈವ್ ಪ್ರಕರಣ : ತನಿಖೆಗೆ ಆದೇಶಿಸುತ್ತಿದ್ದಂತೆ ವಿದೇಶಕ್ಕೆ ಹಾರಿದ ಪ್ರಜ್ವಲ್ ರೇವಣ್ಣ!
ರಾಜ್ಯದ ಮೊದಲ ಹಂತದ ಚುನಾವಣೆಗೆ ಕೆಲವೇ ದಿನಗಳು ಇರುವಾಗ ದೇಶದಾದ್ಯಂತ ದೊಡ್ಡದಾಗಿ ಸಂಚಲನ ಮೂಡಿಸಿದ ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣ ಈಗ ದೊಡ್ಡ ತಿರುವು ಪಡೆದುಕೊಳ್ಳಲಿದೆ. ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಮುಖ್ಯ ಆರೋಪಿ ಸ್ಥಾನದಲ್ಲಿ ನಿಲ್ಲುವ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ರಾಜ್ಯ ಮಹಿಳಾ ಆಯೋಗ ಹಾಗೂ ಪ್ರಮುಖ ಜನಪರ ಸಂಘಟನೆಗಳ ಒತ್ತಾಯದ ಮೇಲೆ ಪ್ರಜ್ವಲ್ ರೇವಣ್ಣನನ್ನು ಈ ಕೂಡಲೇ ಬಂಧಿಸಿ ತನಿಖೆಗೊಳಪಡಿಸಬೇಕು. ಅದಕ್ಕಾಗಿ ವಿಶೇಷ ತನಿಖಾ ತಂಡ ನೇಮಿಸಬೇಕು ಎಂಬ ಮನವಿಯ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ತನಿಖಾ ತಂಡವನ್ನು ನೇಮಿಸಿದೆ.

ಅಶ್ಲೀಲ ಪೆನ್ ಡ್ರೈವ್ ನಲ್ಲಿ ಮೇಲ್ನೋಟಕ್ಕೆ ಪ್ರಜ್ವಲ್ ರೇವಣ್ಣ, ಅಸಂಖ್ಯಾತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಕಂಡುಬಂದಿದ್ದು, ರಾಜ್ಯಾದ್ಯಾಂತ ಈ ಬಗ್ಗೆ ಅತಿ ಹೆಚ್ಚು ಸಂಚಲನ ಉಂಟುಮಾಡಿತ್ತು. ಅಷ್ಟೆ ಅಲ್ಲದೇ ಇತಿಹಾಸದಲ್ಲೆ ಯಾರೂ ಸಹ ಇಷ್ಟು ಕೆಳಮಟ್ಟಕ್ಕೆ ಇಳಿಯದ ಲೈಂಗಿಕ ದೌರ್ಜನ್ಯದ ಪ್ರಕರಣ ಇದಾಗಿರುವಾಗ, ಇದನ್ನು ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿ ಸಂತ್ರಸ್ತ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.

ಈ ನಡುವೆ ಹಾಲಿ ಸಂಸದ, ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿರುವ ಬಗ್ಗೆ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಯಾವ ಕ್ಷಣದಲ್ಲಿ ಬೇಕಾದರೂ ಪ್ರಜ್ವಲ್ ರೇವಣ್ಣ ಅರೆಸ್ಟ್ ಆಗಬಹುದಾದ ಹಿನ್ನೆಲೆಯಲ್ಲಿ, ಸರ್ಕಾರ ತನಿಖೆಗೆ ಆದೇಶಿಸುತ್ತಿದ್ದಂತೆ ಪ್ರಜ್ವಲ್ ರೇವಣ್ಣ ರಾಜ್ಯದಿಂದ ಕಾಲ್ಕಿತ್ತಿರುವ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.

ಪೆನ್ ಡ್ರೈವ್ ಪ್ರದರ್ಶನ : ಕುಮಾರಸ್ವಾಮಿ ವಿರುದ್ಧ ದೂರು ದಾಖಲು
ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ಹೊರಿಸಿ ಹೋದಲ್ಲಿ ಬಂದಲ್ಲಿ ಪೆನ್ ಡ್ರೈವ್ ತೋರಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೈಕೋರ್ಟ್ ನ ವಕೀಲರಾದ ಅಮೃತೇಶ್ ಎಂಬುವವರು ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದಲ್ಲಿ ಪ್ರತೀ ಬಾರಿಯೂ ಕುಮಾರಸ್ವಾಮಿ, ತನ್ನ ಬಳಿಯೂ ದಾಖಲೆಗಳಿವೆ, ಸೂಕ್ತ ಸಮಯದಲ್ಲಿ ಅದನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿಕೊಂಡು ಬಂದಿದ್ದಾರೆ. ಕೆಲವು ಖಾಸಗಿ ಚಾನಲ್ ಚರ್ಚೆಗಳಲ್ಲೂ ಸಹ ನನ್ನ ಪೆನ್ ಡ್ರೈವ್ ನಲ್ಲಿ ದಾಖಲೆ ಇರುವುದು ಸತ್ಯ ಎಂದೇ ಹೇಳಿಕೊಂಡು ಬಂದಿದ್ದಾರೆ.

ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕುಮಾರಸ್ವಾಮಿ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ದಾಖಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಬಗ್ಗೆ ಆರೋಪಿಸಿ ಎಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಇದೆ ಅಂತ ಹೇಳಿಕೆ ನೀಡಿದ್ದರು. ಎಚ್ಡಿಕೆ ವಿರುದ್ಧ ಬ್ಲಾಕ್ ಮೇಲ್, ಬೆದರಿಕೆ, ಅಪರಾಧಿಕ ಸಂಚು ಸೇರಿದಂತೆ ಇತರೆ ಹಲವು ಆರೋಪದಡಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಾಗಿದೆ.

ಅಲ್ಲದೆ ಇದೆ ವೇಳೆ ದೂರಿನಲ್ಲಿ ಎಚ್ಡಿಕೆ ಬಳಿ ಇರುವ ಪೆನ್ ಡ್ರೈವ್ ಅನ್ನು ಸೀಜ್ ಮಾಡಿ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸೌಧ ಪೊಲೀಸ್ ಠಾಣೆಗೆ ವಕೀಲ ಅಮೃತೇಶ್ ಎನ್ನುವರು ದೂರು ನೀಡಿದ್ದಾರೆ.