Permanentization – Peepal Media

ಪೌರಕಾರ್ಮಿಕರನ್ನು ಖಾಯಂಗೊಳಿಸುವ ವಿಚಾರ: ಸರ್ಕಾರದ ವಿರುದ್ಧ ಪೌರಕಾರ್ಮಿಕರ ಆಕ್ರೋಶ
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 3,500 ಗುತ್ತಿಗೆ ಪೌರ ಕಾರ್ಮಿಕರನ್ನು ಕಾಯಂಗೊಳಿಸುವ ಸರ್ಕಾರದ ಇತ್ತೀಚಿನ ಕರಡಿನ ಬಗ್ಗೆ ಪೌರಕಾರ್ಮಿಕರು (ಕಸ ಸ್ವಚ್ಛಗೊಳಿಸುವವರು) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಮಿತ್ರರೊಂದಿಗೆ ತಮ್ಮ ನೋವನ್ನು ತೋಡಿಕೊಂಡ ಪೌರಕಾರ್ಮಿಕರು, ನಾವು ರಾಜ್ಯದ ನಿವಾಸಿಗಳು. ಇಡೀ ನಗರವನ್ನು ಸ್ವಚ್ಛವಾಗಿಡುತ್ತೇವೆ. ಆದರೆ ನಗರದಲ್ಲಿ ಕೆಲಸ ಮಾಡುತ್ತಿರುವ 18,000 ಪೌರಕಾರ್ಮಿಕರಲ್ಲಿ ಕೇವಲ 3,000 ಮಂದಿಗೆ ಖಾಯಂ ಉದ್ಯೋಗ ನೀಡುತ್ತಿರುವುದು ಅನ್ಯಾಯವಾಗಿದೆ ಎಂದು ಪೌರಕಾರ್ಮಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೆಪ್ಟೆಂಬರ್‌ನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿತ್ತು. ಆದರೆ, ಸರಕಾರ ಸೆ.26ರಂದು ಪ್ರಸ್ತಾಪಿಸಿದ ಕರಡಿನಲ್ಲಿ ಕೇವಲ 3,673 ಪೌರಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಈ ಕಾರಣ, ಮೈತ್ರೇಯಿ ಕೃಷ್ಣನ್, ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಫಾರ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು), ಲೋಡರ್‌ಗಳು, ಕಸದ ಟ್ರಕ್ ಚಾಲಕರು ಮತ್ತು ಒಳಚರಂಡಿ ಸ್ವಚ್ಛಗೊಳಿಸುವ ಕಾರ್ಮಿಕರು ಸೇರಿದಂತೆ, ಪೌರ ಕಾರ್ಮಿಕರು ತಮ್ಮ ಉದ್ಯೋಗಗಳನ್ನು ಕಾಯಂಗೊಳಿಸುವಂತೆ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಗಳ ನಂತರ, ಗುತ್ತಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುವುದು ಮತ್ತು ಎಲ್ಲಾ ಕಾರ್ಮಿಕರನ್ನು ಕಾಯಂಗೊಳಿಸಲಾಗುವುದು ಎಂದು ಸರ್ಕಾರವು ಜುಲೈನಲ್ಲಿ ಒಪ್ಪಿಕೊಂಡಿತ್ತು. ಹೀಗಾಗಿ ಇದೀಗ ನ.6ರಂದು ಸಮಾವೇಶ ನಡೆಸಿ ಭರವಸೆ ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ.

ಈ ಹಿನ್ನಲೆಯಲ್ಲಿ ಕಾರ್ಮಿಕ ಸಂಘಗಳು ಮತ್ತು ಪೌರಕಾರ್ಮಿಕರು ಸಮಾನ ವೇತನ, ಹೆರಿಗೆ ಸೌಲಭ್ಯಗಳು, ವಾರದ ರಜೆಗಳು ಮತ್ತು ಇತರ ಮೂಲಭೂತ ಕಾರ್ಮಿಕರ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.