Petroleum Products – Peepal Media

ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆ ಬಗ್ಗೆ ಕೇಂದ್ರದ ಸ್ಪಷ್ಟನೆ
ಲೋಕಸಭಾ ಚುನಾವಣೆಗೂ ಮುನ್ನ ಪೆಟ್ರೋಲ್ ಡೀಸೆಲ್ ಇಳಿಕೆ ಸಂಬಂಧ ಹಬ್ಬಿರುವ ಸುದ್ದಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸುದ್ದಿಗಾರರೊಂದಿಗೆ ಮಾತನಾಡಿ, ಪೆಟ್ರೋಲ್‌, ಡೀಸಲೆ ಬೆಲೆಯಲ್ಲಿ ಇಳಿಕೆ ಮಾಡಲಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ವದಂತಿಯಷ್ಟೇ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಲಿದೆ ಎಂಬ ಸುದ್ದಿ ಹರಿದಾಡಿತ್ತು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಹರ್ದೀಪ್‌ ಸಿಂಗ್‌ ಪುರಿ, ಪೆಟ್ರೋಲ್‌, ಡೀಸೆಲ್‌ ಇಳಿಕೆ ಸಂಬಂಧ ಕೇಂದ್ರ ಸರ್ಕಾರವು ತೈಲ ಕಂಪನಿಗಳೊಂದಿಗೆ ಯಾವುದೇ ಮಾತುಕತೆಯೂ ನಡೆಸಿಲ್ಲ. ದರ ಇಳಿಕೆಯ ಪ್ರಸ್ತಾಪವೂ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದ್ದಾರೆ.

ಸೈಕಲ್ ತುಳಿದು, ಸಿಲಿಂಡರ್ ಹೊತ್ತು ಬಂದು ಮತ ಚಲಾಯಿಸಿದ ಕಾಂಗ್ರೆಸ್ ಶಾಸಕ
ಗುಜರಾತ್ : ಗುಜರಾತ್ ರಾಜ್ಯದ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆದಿದ್ದು, ಕಾಂಗ್ರೆಸ್ ಪಕ್ಷದ ಶಾಸಕರೊಬ್ಬರು.ಮತದಾನ ಮಾಡಲು ಸೈಕಲ್ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಬಂದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

ಗುಜರಾತ್ ನ ಅಮ್ರೇಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಪರೇಶ್ ಧನಾನಿ ಅವರು ಹೆಚ್ಚಿದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ, ಹಣದುಬ್ಬರ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಮಾರ್ಮಿಕವಾಗಿ ಪ್ರತಿಭಟಿಸುವ ಹಿನ್ನೆಲೆಯಲ್ಲಿ ಈ ರೀತಿಯಾಗಿ ಮತಗಟ್ಟೆಗೆ ಬಂದು ಮತ ಚಲಾವಣೆ ನಡೆಸಿದರು.

#WATCH | Amreli: Congress MLA Paresh Dhanani leaves his residence, to cast his vote, with a gas cylinder on a bicycle underscoring the issue of high fuel prices.#GujaratAssemblyPolls pic.twitter.com/QxfYf1QgQR
— ANI (@ANI) December 1, 2022

ಮತ ಚಲಾವಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರೇಶ್ ಧನಾನಿ ಬಿಜೆಪಿ ಸರ್ಕಾರದ ಬೆಲೆಯೇರಿಕೆ ನೀತಿ ಬಗ್ಗೆ ಮಾತನಾಡಿದರು. ‘ಗುಜರಾತ್ ರಾಜ್ಯವನ್ನು ಸ್ವಾರ್ಥ ಮತ್ತು ಭಯದ ಗೋಡೆಯೊಳಗೆ ಬಂಧಿಸಿ, ಭಾರತೀಯ ಜನತಾ ಪಕ್ಷ ಎಲ್ಲರನ್ನೂ ಗುಲಾಮರನ್ನಾಗಿ ಮಾಡಿಕೊಂಡಿದೆ’ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ಸರ್ಕಾರದ ವೈಫಲ್ಯದಿಂದ ಹಣದುಬ್ಬರ ಮತ್ತು ನಿರುದ್ಯೋಗ ನಿರಂತರವಾಗಿ ಹೆಚ್ಚುತ್ತಿದೆ. ಗ್ಯಾಸ್ ಸಿಲಿಂಡರ್ ಬೆಲೆ 1100 ಕ್ಕಿಂತ ಹೆಚ್ಚುತ್ತಿದೆ. ವಿದ್ಯುತ್ ಬೆಲೆ ದುಬಾರಿ ಆಗಿದೆ. ಸಾರಿಗೆ ಬೆಲೆ ದುಪ್ಪಟ್ಟಾಗಿದೆ. ಸರ್ಕಾರಿ ಶಾಲೆಗಳನ್ನು ಮುಚ್ಚಿ ಶಿಕ್ಷಣವನ್ನು ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದೆ. 3.5 ಲಕ್ಷ ಜನ ಕೊರೋನಾ ಕಾರಣದಿಂದ ಜೀವ ಕಳೆದುಕೊಂಡಿದ್ದಾರೆ. ಬಿಜೆಪಿ ಪಕ್ಷದ ಆಡಳಿತ ವೈಫಲ್ಯದಿಂದ ತೀವ್ರ ಸಂಕಷ್ಟ ಎದುರಾಗಿದೆ” ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ನ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಕಚ್, ಸೌರಾಷ್ಟ್ರ, ಮತ್ತು ದಕ್ಷಿಣ ಗುಜರಾತ್ ನ 19 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇಂದು ಸಂಜೆ 5 ಗಂಟೆಯೊಳಗೆ ರಾಜ್ಯದ ಮೊದಲ ಹಂತದ ಚುನಾವಣೆ ಮುಗಿಯಲಿದ್ದು 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 2,39,76,670 ಮಂದಿ ಮತ ಚಲಾಯಿಸಲಿದ್ದಾರೆ.
ಚುನಾವಣಾ ಆಯೋಗದ ಮಾಹಿತಿಯಂತೆ ಮೊದಲ ಹಂತದ ಮತದಾನದ 19 ಜಿಲ್ಲೆಗಳಲ್ಲಿ 13,065 ಮತಗಟ್ಟೆಗಳ ಲೈವ್ ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ.

ಮುಖ್ಯ ಚುನಾವಣಾಧಿಕಾರಿಯಿಂದ ಗಾಂಧಿನಗರದಲ್ಲಿ ರಾಜ್ಯ ಮಟ್ಟದ ಮೇಲ್ವಿಚಾರಣಾ ಘಟಕವು ಕಾರ್ಯ ನಿರ್ವಹಿಸುತ್ತಿದೆ. ಬೆಳಿಗ್ಗೆ 6.30 ರಿಂದ ಚುನಾವಣೆ ಮುಗಿಯುವ ವರೆಗೂ ನಿರಂತರ ವೀಕ್ಷಣೆ ನಡೆಯಲಾಗಿದೆ.

ಪ್ರಮುಖ ಅಭ್ಯರ್ಥಿಗಳ ಪೈಕಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಫಟ್ಲೋಡಿಯಾದಿಂದ ಸ್ಪರ್ಧೆಗಿಳಿದರೆ, ಎಎಪಿ ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗದ್ವಿ ಖಂಬಲಿಯಾದಿಂದ, ಬಿಜೆಪಿ ಅಭ್ಯರ್ಥಿ ಹಾರ್ದಿಕ್ ಪಟೇಲ್ ವಿರಾಮಗಾಮ್ ನಿಂದ ಸ್ಪರ್ಧೆಗೆ ಇಳಿದಿದ್ದಾರೆ.

ಡಿಸೆಂಬರ್ 8 ರಂದು ಒಟ್ಟಾರೆ ಗುಜರಾತ್ ರಾಜ್ಯದ ಚುನಾವಣಾ ಮತ ಎಣಿಕೆ ನಡೆಯಲಿದೆ. ಅದೇ ದಿನ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಕೂಡ ಹೊರಬೀಳಲಿದೆ.