PFI – Peepal Media

ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲು : ಬಸವರಾಜ ಬೊಮ್ಮಾಯಿ
ಬೆಂಗಳೂರು: ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಸ್ಫೋಟ ಮಾಡುವುದಕ್ಕೆ ಪಿಎಫ್ಐ ಸಂಚು ಮಾಡಿತ್ತು ಎಂಬ ಪ್ರಶ್ನೆಗೆ ಬಗ್ಗೆ  ಪ್ರತಿಕ್ರಿಯೆ ನೀಡಿದರು. ಪಿಎಫ್ಐ ಸಂಘಟನೆ ಒಂದು ದೇಶದ್ರೋಹಿ ಸಂಘಟನೆ. ದೇಶವ್ಯಾಪಿ ವಿಧ್ವಂಸಕ ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ಮಾಡುತ್ತಿದೆ. ಈ ಹಿಂದೆ ಮುಂಬೈಯಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿದಂತೆ, ಏಕಕಾಲದಲ್ಲಿ ವಿವಿಧ ಕಡೆ ದುಷ್ಕೃತ್ಯಗಳನ್ನು ಮಾಡುವ ಅವರ ಷಡ್ಯಂತ್ರ ಈಗಾಗಲೇ ಬಯಲಾಗಿದೆ. ಭಾರತದ ಅಸ್ಮಿತೆಯನ್ನು ಪ್ರತಿನಿಧಿಸುವಂತಹ ಕಟ್ಟಡಗಳನ್ನು ಧ್ವಂಸ ಮಾಡುವ ಮೂಲಕ ಭಾರತದ ಅಸ್ಮಿತೆಗೆ ಧಕ್ಕೆ ತರುವುದು ಅವರ ಹುನ್ನಾರವಾಗಿದೆ ಎಂದರು.

ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.

ಮಹಾರಾಷ್ಟ್ರ: ಪನ್ವೇಲ್‌ನಲ್ಲಿ ನಾಲ್ವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ ಎಟಿಎಸ್
ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಗುರುವಾರ ಮುಂಬೈ ಸಮೀಪದ ಪನ್ವೇಲ್ ಪ್ರದೇಶದಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್‌ಐ) ನಾಲ್ವರು ಸದಸ್ಯರನ್ನು ಬಂಧಿಸಿದೆ.

ಎಟಿಎಸ್ ನೀಡಿರುವ ಮಾಹಿತಿ ಪ್ರಕಾರ, ಬಂಧಿತರು ಪಿಎಫ್‌ಐ ಸದಸ್ಯರುಗಳಾದ ಮೊಯಿಜ್ ಮತೀನ್ ಪಟೇಲ್, ಮೊಹಮ್ಮದ್ ಆಸಿಫ್ ಖಾನ್ ಮತ್ತು ತನ್ವಿರ್ ಹಮೀದ್ ಖಾನ್ ಹಾಗೂ ಪಿಎಫ್‌ಐ ಪನ್ವೇಲ್ ಘಟಕದ ಕಾರ್ಯದರ್ಶಿ ಅಬ್ದುಲ್ ರಹೀಮ್ ಯಾಕೂಬ್ ಸಯ್ಯದ್ ಎಂದು ತಿಳಿದು ಬಂದಿದೆ.

ಮುಂಬೈನ ಕಲಾಚೌಕಿ ಪೊಲೀಸ್ ಠಾಣೆಯಲ್ಲಿ, ಬಂಧಿತ ವ್ಯಕ್ತಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1967 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎಟಿಎಸ್‌ ತಿಳಿಸಿದೆ.

ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ ಆರೋಪದಲ್ಲಿ ಪಿಎಫ್‌ಐಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರಕರಣವೊಂದರಲ್ಲಿ ಮಹಾರಾಷ್ಟ್ರ ಎಟಿಎಸ್ ಈ ಹಿಂದೆ ಪಿಎಫ್‌ಐನ 22 ಜನ ಸದಸ್ಯರನ್ನು ಬಂಧಿಸಿತ್ತು.

ಕೇಂದ್ರ ಸರ್ಕಾರವು ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮೇಲೆ ಐದು ವರ್ಷಗಳ ನಿಷೇಧವನ್ನು ವಿಧಿಸಿದೆ.ಈ ಹಿನ್ನಲೆಯಲ್ಲಿ ಮಹರಾಷ್ಟ್ರ ಗೃಹ ವ್ಯವಹಾರಗಳ ಸಚಿವಾಲಯವು (MHA) ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯ ಮೂಲಕ ಪಿಎಫ್‌ಐ ಮತ್ತು ಅದರ ಸಹವರ್ತಿ ಅಂಗಸಂಸ್ಥೆಗಳನ್ನು  ಕಾನೂನುಬಾಹಿರ ಸಂಘಗಳು ಎಂದು ಘೋಷಿಸಿತು.

PFI ಜೊತೆಗೆ, ರಿಹಬ್ ಇಂಡಿಯಾ ಫೌಂಡೇಶನ್ (RIF) ಸೇರಿದಂತೆ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹಬ್ ಫೌಂಡೇಶನ್‌ ಸಂಘ ಸಂಸ್ಥೆಗಳನ್ನು ಕೂಡ ಕಾನೂನು ಬಾಹಿರ ಸಂಘಗಳು ಎಂದು ಘೋಷಿಸಲಾಯಿತು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಎರಡಕ್ಕೂ ಬಂದಿರುವ ಮಾಹಿತಿಯ ಪ್ರಕಾರ, ಪಿಎಫ್‌ಐ ವಿದೇಶದಿಂದ ಉತ್ತಮ ಸಂಘಟಿತ ಮತ್ತು ರಚನಾತ್ಮಕ ರೀತಿಯಲ್ಲಿ ಸಾಕಷ್ಟು ಹಣವನ್ನು ಸಂಗ್ರಹಿಸುತ್ತಿದ್ದು, ವಿದೇಶದಲ್ಲಿ ನಿಧಿ ಸಂಗ್ರಹಿಸುತ್ತಿದೆ ಮತ್ತು ಅವುಗಳನ್ನು ರಹಸ್ಯ ಮತ್ತು ಅಕ್ರಮ ಮಾರ್ಗಗಳ ಮೂಲಕ ಭಾರತಕ್ಕೆ ವರ್ಗಾಯಿಸುತ್ತಿದೆ ಎಂದು ಕೇಂದ್ರ ಏಜೆನ್ಸಿಗಳ ಗಮನಕ್ಕೆ ಬಂದಿತ್ತು ಎಂದು ಎಎನ್‌ಐ ವರದಿ ಮಾಡಿದೆ.

ಎಸ್‌ಡಿಪಿಐ, ಪಿಎಫ್‌ಐ ಕಾರ್ಯಕರ್ತರ ನಿವಾಸಗಳ ಮೇಲೆ ಕರ್ನಾಟಕ ಪೊಲೀಸರ ದಾಳಿ: 5 ಮಂದಿ ವಶ
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರ ನಿವಾಸಗಳ ಮೇಲೆ ಕರ್ನಾಟಕ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಪಣಂಬೂರು, ಸುರತ್ಕಲ್, ಉಳ್ಳಾಲ ಮತ್ತು ಮಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ದಾಳಿ ನಡೆಸಲಾಗಿದ್ದು, ಐವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ಈ ಹಿನ್ನೆಯಲ್ಲಿ, ನಿಷೇಧಾಜ್ಞೆ ಜಾರಿಯಾದ ನಂತರ ರಾಜ್ಯದಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ನಡೆದ ಮೊದಲ ದಾಳಿ ಇದಾಗಿದೆ.

ಮೂಲಗಳ ಪ್ರಕಾರ, ಪೊಲೀಸರು ವಶಕ್ಕೆ ಪಡಿಸಿಕೊಂಡಿರುವ ಎಲ್ಲಾ ವ್ಯಕ್ತಿಗಳು ನಿಷೇಧಿತ PFI ಗೆ ಸೇರಿದವರು ಎಂದು ತಿಳಿದು ಬಂದಿದೆ. ಪೊಲೀಸರು ಐಪಿಸಿ ಸೆಕ್ಷನ್ 121 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, UAPA ಕಾನೂನಿನ ಅಡಿಯಲ್ಲೂ ಕ್ರಮ ಕೈಗೊಂಡಿದ್ದಾರೆ.

ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ವಿಧ್ವಂಸಕ ಚಟುವಟಿಕೆಗಳು ಮತ್ತು ದೇಶವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಲಾಗಿದ್ದು, ಕರ್ನಾಟಕದ ಆಡಳಿತಾರೂಢ ಬಿಜೆಪಿ ನಾಯಕರು ಎಸ್‌ಡಿಪಿಐ ಎರಡನ್ನೂ ನಿಷೇಧಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ಕುಮಾರ್ ನೆತ್ತಾರೆ ಹತ್ಯೆ ಪ್ರಕರಣ ಹಾಗೂ ಕರ್ನಾಟಕ ಸರ್ಕಾರ ಪಿಎಫ್‌ಐ ಮೇಲೆ ನಿಷೇಧ ಹೇರುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಪ್ರಸ್ತಾಪಿಸಿತ್ತು. ಹೀಗಾಗಿ ಕೇಂದ್ರ ಸರ್ಕಾರ ಭಾರತದಲ್ಲಿ 5 ವರ್ಷಗಳ ಕಾಲ ಪಿಎಫ್‌ಐ ಅನ್ನು ನೀಷೇಧಿಸಿದೆ.

ʼಚಡ್ಡಿಗಳೇ ಎಚ್ಚರ! ನಾವು ಮತ್ತೆ ಬರುತ್ತೇವೆʼ : ರಸ್ತೆಯ ಮೇಲೆ PFI ಬರಹ, ಬಿಜೆಪಿ ದೂರು
ಬಂಟ್ವಾಳ : ಪಿಎಫ್‌ಐ ಬ್ಯಾನ್‌ ಹಿನ್ನಲೆ ನಾವು ಮತ್ತೆ ಬರುತ್ತೇವೆ ಎಂದು ರಸ್ತೆಯ ಮೇಲೆ ಎಚ್ಚರಿಕೆಯ ಬರಹವನ್ನು ಬರೆದಿರುವ ಘಟನೆ ಬಂಟ್ವಾಳದ ಸ್ನೇಹಗಿರಿ ಎಂಬಲ್ಲಿ ನಡೆದಿದೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಎನ್‌ಐಎ ದಾಳಿಯ ಸಂಬಂಧಪಟ್ಟಂತೆ ಸೆಪ್ಟಂಬರ್‌ನಲ್ಲಿ 5 ವರ್ಷಗಳ ಕಾಲ ಪಿಎಫ್‌ಐ ಬ್ಯಾನ್‌ ಮಾಡಿದ್ದು, ಎಂಟು ಪಿಎಫ್‌ಐ ಸಂಸ್ಥೆಗಳನ್ನು ಸಹ ಕೇಂದ್ರ ಸರ್ಕಾರ ಬ್ಯಾನ್‌ ಮಾಡಿತ್ತು. ಈ ಹಿನ್ನಲೆ ಪಿಲಾತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಪಿಎಫ್‌ಐ ಪರ ನಿಂತು ಪೋಲೀಸ್‌ ಠಾಣಾ ವ್ಯಾಪ್ತಿಯ  ರಸ್ತೆಯಲ್ಲೇ ಎಚ್ಚರಿಕೆಯನ್ನು ನೀಡಿದ್ದು, ರಸ್ತೆಯ  ಮೇಲೆ “ಚಡ್ಡಿಗಳೇ ಎಚ್ಚರ! PFI ನಾವು ಮರಳಿ ಬರುತ್ತೇವೆ “ ಎಂದು ಬರೆದಿದ್ದಾರೆ.

ಈ ಬಗ್ಗೆ ಅಲ್ಲಿನ ಸ್ಥಳೀಯ ಬಿಜೆಪಿ ಯುವಮೋರ್ಚ ಪುಂಜಾಲ್‌ ಕಟ್ಟೆ ಪೋಲೀಸ್‌ ಠಾಣೆಗೆ ದೂರು ನೀಡಿದ್ದು, ಕೂಡಲೇ  ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

🔸 ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo

ಇದನ್ನೂ ನೋಡಿ : ವಸಾಹತುಶಾಹಿಗೆ ಚಳ್ಳೆಹಣ್ಣು ತಿನ್ನಿಸಿದ ಶೂದ್ರ ರಾಣಿ ರಾಶ್ಮೋನಿ

ಕುಟಿಲ ವಸಾಹತುಶಾಹಿ ಕಂಪನಿಗೆ ಚಳ್ಳೆಹಣ್ಣು ತಿನ್ನಿಸಿ ಕೋಲ್ಕತಾದ ಹೂಗ್ಲಿ ನದಿ ತಟದಲ್ಲಿ ಕಾಳಿಕಾ ದೇವಿಗೆ ದಕ್ಷಿಣೇಶ್ವರ ದೇವಾಲಯ ನಿರ್ಮಿಸಿದ ಶೂದ್ರ ರಾಣಿ ರಾಶ್ಮೋನಿ ಭಾರತದ ಇತಿಹಾಸದ ಒಂದು ದಂತಕತೆ. ಸಹಾಯಕ ಪ್ರಾಧ್ಯಾಪಕರಾದ ಪುನೀತ್‌ ಕುಮಾರ್‌ ರಾಶ್ಮೋನಿಯ ಕತೆಯನ್ನು ಇಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳಿಕೆ ಕುರಿತು ಬಿ ಎಸ್‌ ವೈ ವ್ಯಂಗ್ಯ
ಬೆಂಗಳೂರು: ದೇಶದಲ್ಲಿ 5 ವರ್ಷಗಳ ಕಾಲ ಪಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರವು ನಿಷೇಧಿಸಿರುವಂತೆ, ಕೊಮುವಾದದ ಹೆಸರಲ್ಲಿ ಶಾಂತಿ ಕದಡುವ ಆರ್‌ಎಸ್‌ಎಸ್‌ ಸಂಘಟನೆಯನ್ನು ಸಹ ದೇಶದಲ್ಲಿ ನಿಷೇಧಿಸ ಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಇಡೀ ದೇಶದಲ್ಲಿ ಹಿಂದೂಗಳನ್ನು ಸಂಘಟಿಸುತ್ತ ಪ್ರಾಮಾಣಿಕ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ ಸಂಘಟನೆ ಬಗ್ಗೆ ದೇಶದ ಜನತೆ ಅಭಿಮಾನ ಹೊಂದಿದ್ದಾರೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ಕಲ್ಪನೆ ಇಲ್ಲದಿರುವ ಸಿದ್ದರಾಮಯ್ಯ ಅವರು ಯಾವಾಗಲೂ ತಲೆತಿರುಕು ಮಾತಾಡುವುದು ಸ್ವಾಭಾವಿಕ ಎಂದು ಯಡಿಯೂರಪ್ಪನವರು ವ್ಯಂಗ್ಯವಾಡಿದ್ದಾರೆ.

ಇಡೀ ದೇಶದಲ್ಲಿ ಹಿಂದೂಗಳನ್ನು ಸಂಘಟಿಸುತ್ತ ಪ್ರಾಮಾಣಿಕ ಕೆಲಸ ಮಾಡುತ್ತಿರುವ @RSSorg ಬಗ್ಗೆ ದೇಶದ ಜನತೆ ಅಭಿಮಾನ ಹೊಂದಿದ್ದಾರೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ಕಲ್ಪನೆ ಇಲ್ಲದಿರುವ ಸಿದ್ದರಾಮಯ್ಯ ಅವರು ಯಾವಾಗಲೂ ತಲೆತಿರುಕು ಮಾತಾಡುವುದು ಸ್ವಾಭಾವಿಕ.

– ಶ್ರೀ @BSYBJP#PFIbanned pic.twitter.com/TEuPbwEt9c
— BJP Karnataka (@BJP4Karnataka) September 29, 2022

ಕೇರಳದಲ್ಲಿ ಪಿಎಫ್‌ಐ ನಿಷೇಧ
ಕೇರಳ: ಪ್ಯಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಭಾರತದಲ್ಲಿ 5 ವರ್ಷಗಳ ಕಾಲ ಕೇಂದ್ರ ಸರ್ಕಾರ ನಿಷೇಧಿಸಿರುವ ಹಿನ್ನಲೆ ಕೇರಳದ ಪಿಣರಾಯಿ ನೇತೃತ್ವದ ಸರ್ಕಾರವು ಪಿಎಫ್‌ಐ ಹಾಗೂ ಅದರ ಸಹವರ್ತಿ ಸಂಸ್ಥೆಗಳನ್ನು ನಿಷೇಧಿಸಿದ್ದು, ಅವುಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಂಡಿದೆ.

ಈ ಕುರಿತು ಪಿಎಫ್‌ಐನ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ವಿಸರ್ಜಿಸಿರುವುದಾಗಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟನೆ ನೀಡಿರುವ ಅವರು, ‘ಎಲ್ಲಾ ಪಿಎಫ್‌ಐ ಸದಸ್ಯರು ಮತ್ತು ಸಾರ್ವಜನಿಕರಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಲು ಇಚ್ಚಿಸುತ್ತೇವೆ. ಕೇಂದ್ರ ಗೃಹ ಇಲಾಖೆ ಪಿಎಫ್‌ಐ ಅನ್ನು ನಿಷೇಧಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಹೀಗಾಗಿ ನಮ್ಮ ದೇಶದ ಕಾನೂನು ಪಾಲಿಸುವ ನಾಗರಿಕರಾಗಿ ಸಂಘಟನೆಯು ನಿರ್ಧಾರವನ್ನು ಒಪ್ಪಿಕೊಳ್ಳುತ್ತದೆ ಎಂದು ಸತ್ತಾರ್ ಹೇಳಿದ್ದಾರೆ.

ಕೆಲವುದಿನಗಳಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಜಾರಿನಿರ್ದೇಶನಾಲಯ (ಇಡಿ) ಮತ್ತು ವಿವಿಧ ರಾಜ್ಯಗಳ ಪೊಲೀಸರು ಪಿಎಫ್‌ಐ ಸಂಘಟನೆಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಕಾನೂನು ಬಾಹಿರ ಮತ್ತು ಹಿಂಸಾತ್ಮಕ ಕೃತ್ಯಗಳಲ್ಲಿ ಸಂಘಟನೆಯ ಮುಖಂಡರುಗಳು ಭಾಗಿಯಾಗಿದ್ದಾರೆ ಮತ್ತು ಸಂಘಟನೆಯು  ಐಸಿಸ್‌ ನಂತಹ ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದೆ ಎಂದು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅದರ ಹಲವಾರು ಸಹವರ್ತಿ ಸಂಘಟನೆಗಳನ್ನು ಮತ್ತು ಅವುಗಳ ಸಾಮಾಜಿಕ ಖಾತೆಗಳು, ವೆಬ್ ಸೈಟ್ ಗಳನ್ನು ಕೂಡ ನಿಷೇಧಿಸಿ ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದೆ.

ಪಿಎಫ್‌ಐ ಬ್ಯಾನ್‌ ಕುರಿತು ಕಾಂಗ್ರೆಸ್‌ ಪ್ರತಿಕ್ರಿಯೆ
ಬೆಂಗಳೂರು: ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿರುವ ಕ್ರಮವನ್ನು ಕುರಿತು ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ. PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ ಎಂದು ಹೇಳಿದೆ.

ಇನ್ನು ಕಾಂಗ್ರೆಸ್‌ ಹಿರಿಯ ಮುಖಂಡ ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಈ ಕುರಿತು ಪ್ರತಿಕ್ರಿಯಿಸಿದ್ದು, ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವ ಸಂಸ್ಥೆಗಳು ಹಿಂದು,‌ ಮುಸ್ಲಿಮ್ ಯಾರದ್ದೇ ಆಗಿರಲಿ ಮುಲಾಜಿಲ್ಲದೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಹೇಳುತ್ತಲೇ ಬಂದಿದ್ದನ್ನು ಪುನರುಚ್ಚರಿಸುತ್ತೇನೆ. ಜಾತಿ, ಧರ್ಮಗಳ ಆಧಾರದ ಪಕ್ಷಪಾತ, ಪೂರ್ವಗ್ರಹಗಳಿಂದ ಸರ್ಕಾರ ವರ್ತಿಸಬಾರದು ಎನ್ನುವುದಷ್ಟೇ ನನ್ನ ಸಲಹೆ ಎಂದು ಹೇಳಿದರು.

ಸಂವಿಧಾನದ ಆಶಯಕ್ಕೆ ಹಾಗೂ ಭಾರತದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿರುವ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿಕೊಂಡೇ ಬಂದಿದೆ.

PFI ಸೇರಿದಂತೆ ಸಮಾಜದಲ್ಲಿ ದ್ವೇಷ ಬಿತ್ತುವ, ಶಾಂತಿ, ಸಾಮರಸ್ಯ ಕದಡುವ ಯಾವುದೇ ಸಂಘಟನೆಗಳನ್ನು ನಿಷೇಧಿಸುವುದನ್ನು ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತದೆ.
— Karnataka Congress (@INCKarnataka) September 28, 2022

🔸ಪೀಪಲ್‌ ಗ್ರೂಪ್‌ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/GBc6sg7E2FQLuXblEdBxSi

ಇದನ್ನೂ ಓದಿ: ಒಂದಕ್ಕಿಂತಲೂ ಹೆಚ್ಚು ಬ್ಯಾಂಕ್‌ ಹೊಂದಿದ್ದೀರಾ? ಹಾಗಿದ್ದರೆ ಇದನ್ನು ಓದಿ!

ಒಂದು ಬ್ಯಾಂಕ್‌ ಅಕೌಂಟ್‌ ಓಪನ್‌ ಮಾಡುವುದು ಎಷ್ಟು ಸುಲಭವೋ ಅದನ್ನು ನಿರ್ವಹಿಸುವುದು ಅಷ್ಟೇ ಕಷ್ಟದ ಕೆಲಸ. ಯಾವುದೇ ವ್ಯಾಪಾರಿ ಉತ್ಪನ್ನ ನಿಮಗೆ ಉಚಿತವಾಗಿ ಸಿಗುವುದಿಲ್ಲ. ಅಷ್ಟಕ್ಕೂ ಲಾಭವಿಲ್ಲದೆ ಯಾರು ವ್ಯಾಪಾರ ಮಾಡುತ್ತಾರೆ ಹೇಳಿ?

https://peepalmedia.com/2022/09/disadvantages-of-having-multiple-savings-accounts/

ಶಾಂತಿ ಕದಡುವ ಆರ್‌ಎಸ್‌ಎಸ್‌ ಮತ್ತು ಇತರರ ಮೇಲೂ ಕ್ರಮಕೈಗೊಳ್ಳಿ: ಸಿದ್ದರಾಮಯ್ಯ
ಬೆಂಗಳೂರು: ಭಾರತದಾದ್ಯಂತ 5 ವರ್ಷಗಳ ಕಾಲ ಪಾಪ್ಯುಲರ್‌ ಆಫ್‌ ಇಂಡಿಯಾ (ಪಿಎಫ್‌ಐ) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ನಿಷೇಧ ಮಾಡಿರುವ ಕೇಂದ್ರ ಸರ್ಕಾರವು ದೇಶದಲ್ಲಿ ಶಾಂತಿ ಕದಡುತ್ತಿರುವ ಆರ್‌ಎಸ್‌ಎಸ್‌ ಸಂಘಪರಿವಾರ ಮತ್ತು ಇತರರ ಮೇಲು ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಪಿಎಫ್‌ಐ ಸಂಘಟನೆ ನಿಷೇಧ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿದ್ದರಾಮಯ್ಯ, ಶಾಂತಿ ಕದಡುವ ಅಥವಾ ಕಾನೂನಿಗೆ ವಿರುದ್ಧವಾಗಿರುವ ಯಾರೊಬ್ಬರ ವಿರುದ್ಧ ಕ್ರಮವನ್ನು ನಾವು ವಿರೋಧಿಸುವುದಿಲ್ಲ. ಆರ್‌ಎಸ್‌ಎಸ್ ಮತ್ತು ಇತರರು ಇದೇ ರೀತಿ ಶಾಂತಿ ಕದಡುತ್ತಿದ್ದಾರೆ, ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಮತ್ತು ಅಂತಹ ಯಾವುದೇ ಸಂಘಟನೆಗಳು ಇದ್ದರು ಅವುಗಳನ್ನು ನಿಷೇಧಿಸಬೇಕು ಎಂದು ಹೇಳಿದರು.

PFI ಸಂಘಟನೆ ಬಾಂಬ್ ತಯಾರಿಕಾ ಕೈಪಿಡಿ ಹೊಂದಿತ್ತು : ಏಜೆನ್ಸಿ ತನಿಖಾಧಿಕಾರಿಗಳು
ದೇಶದಲ್ಲಿ PFI ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ಬೆನ್ನಲ್ಲೇ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸದಸ್ಯರಿಂದ ವಶಪಡಿಸಿಕೊಂಡ ಮಾರಕಾಸ್ತ್ರಗಳ ಪೈಕಿ ಬಾಂಬ್ ತಯಾರಿಕೆಯ ಕೈಪಿಡಿಗಳು ಸೇರಿವೆ ಎಂದು ತನಿಖಾ ಸಂಸ್ಥೆಗಳು ಹೇಳಿಕೊಂಡಿವೆ.

ಮೂರು ದಶಕಗಳಷ್ಟು ಹಳೆಯದಾದ ಇಸ್ಲಾಮಿಕ್ ಹಿನ್ನೆಲೆ ಎಂದು ಗುರುತಿಸಲ್ಪಡುವ ಸಂಘಟನೆಯು ಜನರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿದೆ ಎಂದು ಹೇಳಿಕೊಂಡಿದೆ. ಆದರೆ ಕಳೆದ ವಾರ ಭಾರತದಾದ್ಯಂತ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಾರಿ ನಿರ್ದೇಶನಾಲಯ (ED) ಈ ಸಂಘಟನೆ ಮುಖ್ಯಸ್ಥರ ಮನೆ ಮತ್ತು ಕಛೇರಿಗಳ ಮೇಲೆ ದಾಳಿ ನಡೆಸಿತ್ತು. ದಾಳಿ ಪರಿಣಾಮವಾಗಿ 300 ಕ್ಕೂ ಹೆಚ್ಚು ಬಂಧನ ಪ್ರಕರಣ ನಡೆದಿದೆ. ಅದರ ನಂತರ ಇಂದು ಬೆಳಿಗ್ಗೆ, ಕೇಂದ್ರ ಗೃಹ ಸಚಿವಾಲಯವು PFI ಮತ್ತು ಎಲ್ಲಾ ಅಂಗಸಂಸ್ಥೆಗಳ ಮೇಲೆ ನಿಷೇಧವನ್ನು ಪ್ರಕಟಿಸಿತು.

ನಿಷೇಧದ ಬೆನ್ನಲ್ಲೇ ತನಿಖಾ ಸಂಸ್ಥೆಗಳು ಭಯೋತ್ಪಾದಕ ಚಟುವಟಿಕೆಗಳ ಆಪಾದಿತ ಪುರಾವೆಗಳ ವಿವರಗಳನ್ನು ಹಂಚಿಕೊಂಡಿವೆ. “IED” ಅಥವಾ ಸುಧಾರಿತ ಸ್ಫೋಟಕ ಸಾಧನವನ್ನು ಸುಲಭವಾಗಿ ಲಭ್ಯವಿರುವ ವಸ್ತುಗಳನ್ನು ಬಳಸಿ ಹೇಗೆ ತಯಾರಿಸುವುದು ಎಂಬುದರ ಕುರಿತು ವಿವರಗಳಿರುವ ಪುಸ್ತಕಗಳೂ ಇವುಗಳ ಪಟ್ಟಿಯಲ್ಲಿ ಸೇರಿವೆ ಎಂದು ತನಿಖಾ ತಂಡ ಹೇಳಿಕೊಂಡಿದೆ. “ಉತ್ತರ ಪ್ರದೇಶದ ಬಾರಾಬಂಕಿಯ ಪಿಎಫ್‌ಐ ಮುಖಂಡ ಮೊಹಮ್ಮದ್ ನದೀಮ್ ಅವರಿಂದ ಅಂತಹ ಒಂದು ದಾಖಲೆಯನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಏಜೆನ್ಸಿ ಅಧಿಕಾರಿಗಳು ಹೇಳಿದ್ದಾರೆ.

“ಸುಲಭವಾಗಿ ಲಭ್ಯವಿರುವ ವಸ್ತುಗಳನ್ನು ಬಳಸಿಕೊಂಡು ಐಇಡಿಗಳನ್ನು ಹೇಗೆ ತಯಾರಿಸುವುದು ಎಂಬುದರ ಕುರಿತು ಕಿರು ಕೋರ್ಸ್” ಶೀರ್ಷಿಕೆಯ ಡಾಕ್ಯುಮೆಂಟ್ ಅನ್ನು ಖಾದ್ರಾ, ಯುಪಿ ಪಿಎಫ್‌ಐ ನಾಯಕ ಅಹ್ಮದ್ ಬೇಗ್ ನದ್ವಿ ಅವರಿಂದ ವಶಪಡಿಸಿಕೊಳ್ಳಲಾಗಿದೆ” ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ವಿವರಿಸಿದ್ದಾರೆ.

ಇದರ ಜೊತೆಗೆ ಮಹಾರಾಷ್ಟ್ರ ರಾಜ್ಯದ PFI ಉಪಾಧ್ಯಕ್ಷರ ಕಡೆಯಿಂದ ‘ಮಿಷನ್ 2047’ ಕ್ಕೆ ಸಂಬಂಧಿಸಿದ “ನೂರಾರು ದೋಷಾರೋಪಣೆ ಸಾಮಗ್ರಿಗಳ” ವಿವರಗಳೊಂದಿಗೆ ಮತ್ತೊಂದು ಟಿಪ್ಪಣಿ… ಇದಕ್ಕೆ ಸಂಬಂಧಿಸಿದ ವೀಡಿಯೊಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಂಡ ಬಗ್ಗೆ ತನಿಖಾಧಿಕಾರಿಗಳು ವಿವರಿಸಿದ್ದಾರೆ.

ಇದೇ ಸಂದರ್ಭದಲ್ಲಿ ನಿಷೇಧಿತ PFI ಸಂಘಟನೆಗೆ ಸೇರಿದ್ದ ಮುಖಂಡರು “ಯುವಕರು ತೀವ್ರಗಾಮಿಯಾಗುವುದನ್ನು ತಡೆಯಲು ಮತ್ತು ದೇಶಭಕ್ತಿ, ದೇಶದ ಸಂವಿಧಾನಕ್ಕೆ ಬಲವಾದ ನಿಷ್ಠೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಲು ಪಿಎಫ್‌ಐ ಪ್ರಯತ್ನಿಸುತ್ತಿದೆ” ಎಂದು ಅದು ಹೇಳಿದ್ದಾರೆ. “ಪಾಪ್ಯುಲರ್ ಫ್ರಂಟ್ ಎಂದಿಗೂ ದೇಶದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಬಗ್ಗೆ ಯೋಚಿಸಿಲ್ಲ ಅಥವಾ ಪ್ರಯತ್ನಿಸಿಲ್ಲ.” ಎಂದೂ ಸಹ ಸ್ಪಷ್ಟಪಡಿಸಿದ್ದಾರೆ.

ಪಿಎಫ್ಐ ಸಂಘಟನೆಗಳಿಗೆ ಕಾಂಗ್ರೆಸ್‌ ಬೆಂಗಾವಲು: ಬಿಜೆಪಿ ಆರೋಪ
ಬೆಂಗಳೂರು: ಕಾನೂನು ಬಾಹಿರವಾಗಿರುವ ಪಾಪ್ಯುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್‌ಐ) ಮತ್ತು ಅದರ ಸಹವರ್ತಿ ಸಂಘಟನೆಗಳಿಗೆ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷವು ಬೆಂಗಾವಲಾಗಿತ್ತು ಎಂದು ರಾಜ್ಯ ಬಿಜೆಪಿ ಘಟವು ಆರೋಪಿಸಿದೆ.

ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕಾನೂನು ಬಾಹಿರ ಎಂದು ಪರಿಗಣಿಸಿ ಕೇಂದ್ರ ಸರ್ಕಾರ 5 ವರ್ಷಗಳ ವರೆಗೆ ಭಾರತದಲ್ಲಿ ನಿಷೇಧಿಸಿ ಇಂದು ಆದೇಶ ಹೊರಡಿಸಿರುವ ಹಿನ್ನಲೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ ಸಿದ್ದರಾಮಯ್ಯ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ ಬೆಂಗಾವಲಾಗಿ ನಿಂತಿತ್ತು. ಹೀಗಿರುವಾಗ ಸಂಘನೆಗಳ ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ? ಬಾಯಿ ತೆರೆದರೆ ಮತಬ್ಯಾಂಕ್‌ ಕಳೆದುಕೊಳ್ಳುವ ಭಯವೇ? ಎಂದು ಟೀಕಿಸಿದೆ.

ಪಿಎಫ್‌ಐ ಸೇರಿದಂತೆ ಅದರ ಸಹವರ್ತಿ ಸಂಘಟನೆಗಳು ಮಾಡುತ್ತಿದ್ದ ಎಲ್ಲಾ ದೇಶ ವಿರೋಧಿ ಚಟುವಟಿಕೆಗಳಿಗೆ @siddaramaiah ಮತ್ತು @INCKarnataka ಪಕ್ಷ ಬೆಂಗಾವಲಾಗಿ ನಿಂತಿತ್ತು.

ನಿಷೇಧದ ಕುರಿತು ಕೆಪಿಸಿಸಿ ಅಧ್ಯಕ್ಷ @DKShivakumar, ಸಿದ್ದರಾಮಯ್ಯ ಏಕೆ ಇನ್ನೂ ಬಾಯಿ ತೆರೆದಿಲ್ಲ?

ಮತಬ್ಯಾಂಕ್‌ ಕಳೆದುಕೊಳ್ಳುವ ಭಯವೇ?#PFIbanned
— BJP Karnataka (@BJP4Karnataka) September 28, 2022