POCSO CASE – Peepal Media

ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡನ ಮೇಲೆ ‘ಪೋಕ್ಸೋ’ ದಾಖಲು
ಎಸ್ಸೆಸ್ಸೆಲ್ಸಿ ಓದುತ್ತಿದ್ದ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಟ್ವಾಳ ಭಾಗದ ಬಿಜೆಪಿ ಮುಖಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿ ಕ್ಷೇತ್ರದ ಪ್ರಭಾವಿ ಬಿಜೆಪಿ ಮುಖಂಡ ಆಗಿರುವ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ತಡವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಬಗ್ಗೆಯೂ ಮಾತುಗಳು ಕೇಳಿ ಬಂದಿವೆ.

ಎಸ್ಸೆಸ್ಸೆಲ್ಸಿ ಓದುತ್ತಿದ್ದ 16 ವರ್ಷದ ಬಾಲಕಿಗೆ ಸುಳ್ಳು ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾಗಿ ಆರೋಪಿ ಪ್ರಯತ್ನಿಸಿದ್ದ ಎಂಬ ಮಾಹಿತಿಯೂ ಕೇಳಿಬಂದಿದೆ. ಬಂಟ್ವಾಳ ಭಾಗದ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕನೂ ಆಗಿರುವ ಬಿಜೆಪಿ ಮುಖಂಡ ಮಹೇಶ್ ಭಟ್ ಎಂಬ ವ್ಯಕ್ತಿ ಜಿಲ್ಲಾ ವ್ಯಾಪ್ತಿಯಲ್ಲೂ ಸಾಕಷ್ಟು ಪ್ರಭಾವ ಹೊಂದಿರುವ ಹಿನ್ನೆಲೆಯಲ್ಲಿ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದ.

ಆದರೆ ತಡವಾಗಿಯಾದರೂ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ. ಆರೋಪಿತ ವ್ಯಕ್ತಿಯ ಹಿಡಿಯಲು ಶೋಧ ಕಾರ್ಯ ನಡೆದಿದೆ.

ಬಾಲಕಿಯ ಪೋಷಕರು ಆರೋಪಿಗೆ ಸೇರಿದ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಈ ನಡುವೆ, ಕಳೆದ ಜನವರಿ ತಿಂಗಳಲ್ಲಿ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗುತ್ತಿದೆ.

ಎರಡು ತಿಂಗಳಿನಿಂದ ಬಾಲಕಿ ಶಾಲೆಗೆ ಹೋಗಿರಲಿಲ್ಲ. ಎಸ್ಸೆಸ್ಸೆಲ್ಸಿ ಪರೀಕ್ಷೆ ಇದ್ದರೂ ಯಾಕೆ ಶಾಲೆಗೆ ಬಂದಿಲ್ಲವೆಂದು ಶಾಲೆಯ ಶಿಕ್ಷಕರು ವಿಚಾರಿಸುವ ಸಲುವಾಗಿ ಆಕೆಯ ಮನೆಗೆ ತೆರಳಿದ್ದರು.

ಈ ವೇಳೆ, ಬಾಲಕಿಗೆ ಆರೋಗ್ಯ ಸರಿಯಿಲ್ಲ ಎಂದು ಹೇಳಿ ಶಿಕ್ಷಕರನ್ನು ನೋಡಲು ಬಿಟ್ಟಿರಲಿಲ್ಲ. ಆರೋಪಿ ಮಹೇಶ್ ಭಟ್ ರಾಜಕೀಯ ಪ್ರಭಾವದ ಕಾರಣಕ್ಕೆ ಶಿಕ್ಷಕರಿಗೆ ಬಾಲಕಿಯ ಭೇಟಿಗೂ ಅವಕಾಶ ನೀಡಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ವಿಷಯ ಪೊಲೀಸ್ ಠಾಣೆಗೆ ತಿಳಿದು ವಿಟ್ಲ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಆದರೆ ಮೇಲ್ನೋಟಕ್ಕೆ ಈ ಪ್ರಕರಣ ಹಾದಿ ತಪ್ಪುವ ಸಾಧ್ಯತೆ ಇದೆ ಎನ್ನುವುದು ಸ್ಥಳೀಯರ ಅಭಿಪ್ರಾಯ. ಯಾಕೆಂದರೆ ಪೊಲೀಸರು ಪ್ರಕರಣ ದಾಖಲಿಸಿರುವುದೂ ಸಹ ತೀರಾ ಗಂಭೀರವಾಗಿ ವಿಷಯ ದಾಖಲಿಸಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

“ನೀನು ನನ್ನ ಜೊತೆ ಗುಡ್ಡಕ್ಕೆ ಬರ್ತೀಯಾ” ಎಂದಷ್ಟೇ ಆರೋಪಿ ಸಂತ್ರಸ್ತೆಯನ್ನು ಕೇಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ಸಧ್ಯ ಈ ಬಗ್ಗೆ ಯಾವುದೇ ಸ್ಥಳೀಯ ನಾಯಕರೂ ದನಿ ಎತ್ತದಿರುವುದು ಪ್ರಕರಣ ಹಾದಿ ತಪ್ಪುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಅಮೇಥಿ: 15 ವರ್ಷದ ದಲಿತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಪಟ್ಟಣದ ಜಮೋ ಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ಅಕ್ಟೋಬರ್ 3 ರಂದು ದುರ್ಗಾ ಪೂಜೆಯ ಮಂಟಪದಲ್ಲಿ ಸಂಗೀತ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದ ಮೋನು ಎಂಬಾತ ಮೂತ್ರ ವಿಸರ್ಜನೆಗೆಂದು ಬಂದಾಗ, ಮೈದಾನದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆ ಆರೋಪಿ ಮೋನು ಎಂಬಾತನ ಮೇಲೆ ಅತ್ಯಾಚಾರ ಆರೋಪದಡಿ  ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಜಮೋ, ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಖಿಲೇಶ್ ಗುತ್ಪಾ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 8 ಜನರ ಮೇಲೆ ಪೋಕ್ಸೋ ಪ್ರಕರಣ ದಾಖಲು
ರಾಜಸ್ಥಾನ : 8 ನೇ ತರಗತಿಯಲ್ಲಿ ಓದುತ್ತಿರುವ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಕಿಶನ್‌ಗಢ್ ಬಾಸ್ ಪ್ರದೇಶದಲ್ಲಿ ನೆಡೆದಿದೆ.

ಬಾಲಕಿಯ ಮೇಲೆ ಹತ್ಯಾಚಾರ ಎಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡಿರುವುದಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾರೆ. ಈ ಹಿನ್ನಲೆ ಸಂತ್ರಸ್ತೆಯ ಕುಟುಂಬಸ್ಥರು ಹತ್ಯಾಚಾರ ಎಸಗಿರುವವರ ಮೇಲೆ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಎಲ್ಲಾ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಸಾಮೂಹಿಕ ಅತ್ಯಾಚಾರ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್‌ಗಢ್ ಬಾಸ್‌ನ ಡಿಎಸ್‌ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದ್ದು, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪ್ರಸ್ತುತ ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ಎಲ್ಲರನ್ನೂ ಬಂಧಿಸುವುದಾಗಿ ಡಿಎಸ್‌ಪಿ ಅಗ್ರೆ ಹೇಳಿದ್ದಾರೆ.