priyaank kharge – Peepal Media

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ : ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು
ಲೋಕಸಭಾ ಚುನಾವಣೆ ಕಾವು ಏರುತ್ತಿದ್ದಂತೆ ಈಗ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಪತ್ರ ಬಂದ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಮಗೆ ಜೀವ ಬೆದರಿಕೆ ಬಂದಿರುವ ಬಗ್ಗೆ ಸ್ವತಃ ಹೇಳಿಕೊಂಡಿರುವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ಸುದ್ದಿಗಾರರೊಂದಿಗೆ ಮಾತನಾಡಿದರು.

ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ನನಗೆ ಎರಡು ಜೀವ ಬೆದರಿಕೆ ಪತ್ರಗಳು ಬಂದಿವೆ. ಇನ್ನೊಂದರಲ್ಲಿ ನನ್ನನ್ನು ಎನ್ಕೌಂಟರ್ ಮಾಡುವುದು ಸತ್ಯ ಎಂದು ಬೆದರಿಕೆ ಹಾಕಲಾಗಿದೆ. ಈ ಪತ್ರ ಫಿನ್‌ಲ್ಯಾಂಡ್‌ನಿಂದ ಬಂದಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ. ಆದರೆ ಈ ಪತ್ರ ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಬಂದಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇನ್ನು ಪತ್ರದಲ್ಲಿ ಜಾತಿ ನಿಂದನೆ ಕೂಡಾ ನಡೆದಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪಂಚಾಮೃತದಿಂದ ಪೂಜೆ ಮಾಡಿದರೂ ನಿನ್ನ ಜಾತಿ ಬೇರೆಯಾಗುವುದಿಲ್ಲ. ಎಂತ ವೇಷ ಭೂಷಣ ಹಾಕಿದರೂ ನಿನ್ನ ಜಾತಿ ಬದಲಾಗುವುದಿಲ್ಲ. ಮಂತ್ರಿಯಾಗು, ರಾಜನಾಗು, ನಿನ್ನ ಸೊಕ್ಕು ಹೊಲೆಯ-ಮಾದಿಗ ಓಣಿಯಲ್ಲಿ ನಡೆಯುತ್ತೆ” ಎಂದು ಪತ್ರದಲ್ಲಿ ಅಶ್ಲೀಲ ಪದ ಬಳಸಿದ್ದಾರೆ.

ಕಾಲ ಮಿತಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಲು: ಸ್ಥಳ ಸಮೀಕ್ಷೆ ನಡೆಸಲು ಸಿಎಂ ಸೂಚನೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಅನುಷ್ಠಾನ ಸಭೆ

ಬೆಂಗಳೂರು, ಆಗಸ್ಟ್24: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 2023- 24 ನೇ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಇಂದು ಸಭೆ ಜರುಗಿತು.

ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶಗಳು, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶಗಳು, 2 ಲಕ್ಷ ಬರ ಪರಿಹಾರ ಕಾಮಗಾರಿ ಗಳು, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿ ಗಳು ಹಾಗೂ 4268 ಭೂ ಕುಸಿತ ತಡೆ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು.

27903 ಗ್ರಾಮಗಳಲ್ಲಿ ಸ್ಮಾಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ಗಳನ್ನು ಕೈಗೆತ್ತಿಕೊಳ್ಳಲಾಗುವುದು.
5000 ಶಾಲಾ ಆರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಿಸುವುದು, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ವಿವರಿಸಿದರು.

ನೀರು ಪೂರೈಕೆ ಕುರಿತು ವರದಿ ಸಲ್ಲಿಸಲು ಸೂಚನೆ
ವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ, ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿ
ಗ್ರಾಮ ಪಂಚಾಯಿತಿ ಗ್ರಂಥಾಲಯ ಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ, ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಈ ಯೋಜನೆಯಿಂದ ಅನುಕೂಲವಾಗುತ್ತದೆ. ಮೂರು ವರ್ಷಗಳಲ್ಲಿ ಇದನ್ನು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೂಸಿನ ಮನೆ

ಆಯವ್ಯಯದಲ್ಲಿ ಹೇಳಿರುವಂತೆ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಹಾಗೂ ಆರು ವರ್ಷದ ಒಳಗಿನ ಮಕ್ಕಳ ಆರೋಗ್ಯ , ಪೌಷ್ಟಿಕತೆ ಮತ್ತು ಸುರಕ್ಷತೆಗಾಗಿ ಕೂಸಿನ ಮನೆ ಹೆಸರಿನಲ್ಲಿ ನಾಲ್ಕು ಸಾವಿರ ಕೂಸಿನ ಮನೆಗಳನ್ನು ತೆರೆಯುವ ಕೆಲಸವನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿಗಳ ಫೆಲೋಶಿಪ್ ಗಾಗಿ ಪ್ರತಿ ತಾಲ್ಲೂಕಿನ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ಆಯ್ಕೆ ಮಾಡುವುದು 10 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ತಲಾ 25 ಲಕ್ಷ ಗಳ ವೆಚ್ಚದಲ್ಲಿ ನಿರ್ಮಾಣ ಕಾರ್ಯವನ್ನು ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಗತ ಮಾಡಲು ಮುಖ್ಯಮಂತ್ರಿಗಳು ಸೂಚಿಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 800 ಗ್ರಾಮಗಳಿಗೆ ಕಾಮಗಾರಿ ಪೂರ್ಣಗೊಂಡಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.

ಗ್ರಾಮೀಣ ಪ್ರದೇಶಗಳಲ್ಲಿ ಒಣ ತ್ಯಾಜ್ಯ ವಿಲೇವಾರಿಯಲ್ಲಿ ನಿರಂತರತೆ ಕಾಪಾಡಲು ಹಾಗೂ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು 27 ಜಿಲ್ಲೆಗಳಲ್ಲಿ ತಲಾ ಒಂದು ರಿಕವರಿ ಫೆಸಿಲಿಟಿಯನ್ನು ತಲಾ 2 ಕೋಟಿ ವೆಚ್ಚದಲ್ಲಿ ನಿರ್ಮಾಣ. 22 ಕೋಟಿ ರೂ.ಗಳನ್ನು ಪ್ರಸಕ್ತ ಸಾಲಿನಲ್ಲಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಆಯುಕ್ತ ಅಂಜುಮ್ ಪರ್ವೇಜ್, ಸಭೆಯಲ್ಲಿ, ಉಪಸ್ಥಿತರಿದ್ದರು.

ಅನ್ನಭಾಗ್ಯ ಯೋಜನೆ ತಪ್ಪಿಸಲು ಕೇಂದ್ರ ಷಡ್ಯಂತ್ರ : ಪ್ರಿಯಾಂಕ್ ಖರ್ಗೆ ಆರೋಪ
ದ್ವೇಷದ ರಾಜಕಾರಣಕ್ಕೆ ಬಿದ್ದು ರಾಜ್ಯದಲ್ಲಿ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸದಂತೆ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ಕುತಂತ್ರ ಮಾಡುತ್ತಿದೆ. ಇದಕ್ಕೆ ರಾಜ್ಯದ ಬಿಜೆಪಿ ನಾಯಕರೂ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನ್ನಡಿಗರ ಆಸ್ಮಿತೆಗೆ ಧಕ್ಕೆಯಾಗುತ್ತಿರುವುದಕ್ಕೆ, ನಿರುದ್ಯೋಗ ಸಮಸ್ಯೆ ಹೆಚ್ಚಿರುವುದಕ್ಕೆ ರಾಜ್ಯದ ಜನತೆ ಬಿಜೆಪಿ ವಿರುದ್ದ ತಿರುಗಿ ಬಿದ್ದಿದ್ದರು. ಅದರ ಪರಿಣಾಮವೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಆಗದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ದ ದ್ವೇ಼ಷದ ರಾಜಕಾರಣ ಪ್ರಾರಂಭಿಸಿದೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ 5 ಕೆಜಿ ಹಾಗೂ ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿಯನ್ನು ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಜನರಿಗೆ ವಿತರಿಸುವುದಾಗಿ ಸಿಎಂ ಜೂನ್ 2 ರಂದು ಹೇಳಿದ್ದರು ಅದರಂತೆ ಭಾರತೀಯ ಆಹಾರ ನಿಗಮಕ್ಕೆ (Food Corporation of India ) ಗೆ ಪತ್ರ ಬರೆದು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಕೋರಿರುತ್ತಾರೆ. ಆಗ ಉತ್ತರಿಸಿದ ಎಫ್ ಸಿ ಐ ಜೂನ್ 12 ರಂದು ಪತ್ರ ಬರೆದು ಪ್ರತಿ ಕ್ವಿಂಟಾಲ್ ಗೆ ರೂ 3400 ರಂತೆ 2.08 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿರುತ್ತದೆ.

ಆದರೆ ಅಚ್ಚರಿಯಂತೆ, ಕೇಂದ್ರ ಆಹಾರ ಸರಬರಾಜು ಹಾಗೂ ಸಾರ್ವಜನಿಕ ವಿತರಣಾ ಇಲಾಖೆಯ ಅಣತಿಯಂತೆ ಎಫ್ ಸಿ ಐ ಜೂನ್ 13 ರಂದು ರಾಜ್ಯಕ್ಕೆ ಬರೆದ ಮತ್ತೊಂದು ಪತ್ರದಲ್ಲಿ ಅಕ್ಕಿ ಸರಬರಾಜು ಮಾಡಲು ಆಗುವುದಿಲ್ಲ ಎಂಬ ಪ್ರತಿಕ್ರಿಯೆ ನೀಡುತ್ತದೆ.. ಎಫ್ ಸಿ ಐ ನಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದು ಖಾಸಗಿಯವರಿಗೆ ಸರಬರಾಜು ಮಾಡಲು ಸಿದ್ಧರಿದ್ದರೂ ಕೂಡಾ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ನಿರಾಕರಿಸಿರುವುದು ಗಮನಿಸಿದರೆ ಕೇಂದ್ರಕ್ಕೆ ಕನ್ನಡಿಗರ ಹಿತಾಸಕ್ತಿ ಕಾಪಾಡುವುದು ಬೇಕಿಲ್ಲ ಹಾಗೂ ರಾಜ್ಯವನ್ನು ಹಸಿವು ಮುಕ್ತ ರಾಜ್ಯವನ್ನಾಗಿ ಮಾಡುವುದು ಬೇಕಿಲ್ಲ ಎಂದು ಗೊತ್ತಾಗುತ್ತದೆ ಎಂದು ಹೇಳಿದರು.

ಒಂದು ಕಡೆ ರಾಜ್ಯಕ್ಕೆ ಅಕ್ಕಿ ವಿತರಣೆ ಮಾಡಲು ಆಗುವುದಿಲ್ಲ ಎಂದು ಹೇಳುತ್ತಾ ಇನ್ನೊಂದು ಕಡೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ‌ ಎಸ್ ಜೈಶಂಕರ್ ಅಮೇರಿಕಾ ಹಾಗೂ ಯೂರೋಪ್ ದೇಶಗಳಿಗೆ ಆಹಾರ ಧಾನ್ಯ ಸರಬರಾಜು ಮಾಡುವುದಾಗಿ ಹೇಳಿದ್ದಾರೆ. ತನ್ನದೇ ದೇಶದ ಜನರನ್ನು ಹಸಿವಿಗೆ ದೂಡಿ, ಬೇರೆ ದೇಶಕ್ಕೆ ಆಹಾರ ಸರಬರಾಜು ಮಾಡೋದು ದೇಶದ್ರೋಹವಲ್ಲವೇ? ಎಂದು ಪ್ರಶ್ನಿಸಿದರು.

ಜುಲೈ 1 ರಂದು ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಿಲ್ಲವೇ? ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಛತ್ರಿಸಗಡ್ ರಾಜ್ಯವನ್ನು ಸಂಪರ್ಕಸಲಾಗಿದ್ದು ಅವರು 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಒಪ್ಪಿದ್ದಾರೆ ಹಾಗಾಗಿ ಯೋಜನೆ ಜಾರಿಗೊಳಿಸುತ್ತೇವೆ. ಆದರೆ ಜುಲೈ 1 ರಂದು ಜಾರಿಗೆ ತರಬೇಕೆಂದರೆ ಕೇಂದ್ರ ಬಿಜೆಪಿ ಸರ್ಕಾರ ಮನಸು ಮಾಡಿ ರಾಜ್ಯದ ಜನರು ಮತ ಹಾಕದಿದ್ದರೂ ಪರವಾಗಿಲ್ಲ ಎಂದು ಅಕ್ಕಿ ಸರಬರಾಜು ಮಾಡಿದರೆ ಸಾಧ್ಯವಾಗುತ್ತದೆ ಎಂದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬೇಕಾಗುವಷ್ಟು ಅನುದಾನ‌ ನೀಡಲು ಸಿದ್ದವಿರುವುದಾಗಿ ಹೇಳಿದ ಸಚಿವರು, ಮಳೆ ಕೊರತೆಯಿಂದಾಗಿ ಮೋಡ ಬಿತ್ತನೆ ಕುರಿತಂತೆ ಕಂದಾಯ ಸಚಿವರು ಈಗಾಗಲೇ ಹೇಳಿಕೆ ನೀಡಿರುತ್ತಾರೆ ಎಂದರು.

ಯಾರನ್ನು ತಮ್ಮ ಆಪ್ತ ಕಾರ್ಯದರ್ಶಿ ಮಾಡಿಕೊಳ್ಳುವುದು ತಮ್ಮ ವಿವೇಚನೆ ಎಂದ ಪ್ರಿಯಾಂಕ್ ಖರ್ಗೆ ಕೆಕೆಆರ್ ಡಿಬಿಯ ವಿರುದ್ದ ನನ್ನ ಆರೋಪವಿತ್ತು. ಪ್ರಸ್ತುತ ನಡೆಯುತ್ತಿರುವ ಕೆಕೆಆರ್ ಡಿಬಿ ಅವ್ಯವಹಾರದ ತನಿಖೆಯಲ್ಲಿ ಆಪ್ತ ಕಾರ್ಯದರ್ಶಿ ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ದವೂ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ ಪಾಟೀಲ, ಶಾಸಕರಾದ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ, ಬಿ.ಆರ್. ಪಾಟೀಲ, ಮಾಜಿ ಸಚಿವ ರೇವು ನಾಯಕ ಬೆಳಮಗಿ, ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಡೇವಿಡ್ ಸಿಮೆಯೋನ್, ಸುಭಾಷ ರಾಠೋಡ, ಶಿವಾನಂದ ಪಾಟೀಲ ಸೇರಿದಂತೆ ಮತ್ತಿತರಿದ್ದರು‌.

ಓಡಿ ಹೋಗುವ ಜಾಯಮಾನ ಬಿಜೆಪಿಯವರದೇ ಹೊರೆತು ಕಾಂಗ್ರೆಸ್‌ನವರದ್ದಲ್ಲ: ಪ್ರಿಯಾಂಕ್‌ ಖರ್ಗೆ
ಬೆಂಗಳೂರು: ಓಡಲು ದಾರಿ ಹುಡುಕುವ ಇಟೆಲಿಯ ಅಕ್ಕ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ವ್ಯಂಗ್ಯದ ಹೇಳಿಕೆಗೆ ಕೆಪಿಸಿಸಿ ಸಂಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್‌ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾರತದಿಂದ ಓಡಲು ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕುರಿತು ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡುವುದರ  ಜೊತೆಗೆ ಇದು ಭಾರತ್‌ ಐಕ್ಯತಾ ಯಾತ್ರೆ ಅಲ್ಲ ಇದು ಯಶಸ್ವಿಯಾಗುವುದಿಲ್ಲ ಎಂದು ಟೀಕಿಸಿದ್ದರು.

ಈ ಹಿನ್ನಲೆ ಟ್ವೀಟ್‌ ಮಾಡುವ ಮೂಲಕ ತಿರುಗೇಟು ನೀಡಿರುವ ಪ್ರಿಯಾಂಕ್‌ ಖರ್ಗೆ ಅವರು, ಬ್ರಿಟಿಷರಿಗೆ ಹೆದರಿ ಕ್ಷಮೆ ಕೇಳಿ ಓಡಿದ್ದು ನಿಮ್ಮವರು, ಚೀನಾ ಅತಿಕ್ರಮಣ ಮಾಡಿದಾಗ ‘ಚೀನಾ’ ಎಂಬ ಹೆಸರನ್ನೂ ಹೇಳದೆ ಓಡಿದವರು ನರೇಂದ್ರ ಮೋದಿ, 8 ವರ್ಷದಿಂದ ಮಾಧ್ಯಮಗಳ ಮೈಕ್ ಮುಂದೆ ಬಾರದೇ ಓಡಿದವರು ಮೋದಿ, ಸುಳ್ಯದಲ್ಲಿ ಅಲ್ಲಾಡುವ ಕಾರ್ ಬಿಟ್ಟು ಓಡಿದ್ದು ನೀವು ನಳಿನ್‌ ಕುಮಾರ್‌ ಕಾಟೀಲ್‌ ಅವರೇ, ಓಡಿಹೋಗುವ ಜಾಯಮಾನ ನಿಮ್ಮದೇ ಹೊರತು ಕಾಂಗ್ರೆಸ್‌ನದ್ದಲ್ಲ ಎಂದು ಟೀಕಿಸಿದರು.

ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಘಟಕವು ಟ್ವೀಟ್‌ ಮಾಡಿದ್ದು, ಸುಳ್ಯದಲ್ಲಿ ಕಾರು ಅಲ್ಲಾಡಿದಾಗ ಕಾರ್ ಬಿಟ್ಟು ತಪ್ಪಿಸಿಕೊಳ್ಳುವ ದಾರಿ ಹುಡುಕುತ್ತ ಓಡಿದ ನಳಿನ್‌ ಕುಮಾರ್‌ ಕಟೀಲ್‌ ಅವರೇ, ಮಹಿಳೆಯರನ್ನು ಗೌರವಿಸದ ನಿಮ್ಮ ಮಾತು ಮಹಾಭಾರತದ ದುಶ್ಯಾಸನನ ನೆನಪಿಸುತ್ತದೆ. ಹೀಗಾಗಿ ಭಾರತ ಐಕ್ಯತಾ ಯಾತ್ರೆ ಬಿಜೆಪಿಯ ಅಂತ್ಯಕ್ಕೆ ಕಾರಣವಾಗಲಿದೆ ಎಂದು ವ್ಯಂಗ್ಯವಾಡಿದೆ.

ಬ್ರಿಟಿಷರಿಗೆ ಹೆದರಿ ಕ್ಷಮೆ ಕೇಳಿ ಓಡಿದ್ದು ನಿಮ್ಮವರು,

ಚೀನಾ ಅತಿಕ್ರಮಣ ಮಾಡಿದಾಗ 'ಚೀನಾ' ಎಂಬ ಹೆಸರನ್ನೂ ಹೇಳದೆ ಓಡಿದವರು ಮೋದಿ,

8 ವರ್ಷದಿಂದ ಮಾಧ್ಯಮಗಳ ಮೈಕ್ ಮುಂದೆ ಬಾರದೇ ಓಡಿದವರು ಮೋದಿ,

ಸುಳ್ಯದಲ್ಲಿ ಅಲ್ಲಾಡುವ ಕಾರ್ ಬಿಟ್ಟು ಓಡಿದ್ದು ನೀವು.@nalinkateel ಅವರೇ,
ಓಡಿಹೋಗುವ ಜಾಯಮಾನ ನಿಮ್ಮದೇ ಹೊರತು ಕಾಂಗ್ರೆಸ್‌ನದ್ದಲ್ಲ. pic.twitter.com/yDY2J9Mk3d
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 7, 2022

ಕನ್ನಡ ಭಾಷೆ, ಧ್ವಜ ವಿಚಾರ: ಬಿಜೆಪಿಗೆ ಖರ್ಗೆ ತಿರುಗೇಟು
ಮೈಸೂರು: ಕನ್ನಡ ಧ್ವಜ ಮತ್ತು ಕನ್ನಡಿಗರನ್ನು ಕಂಡರೆ ಕಾಂಗ್ರೆಸ್‌ಗೆ ದ್ವೇಷ ಎಂದು ಬಿಜೆಪಿ ಕಟುವಾಗಿ ಟೀಕಿಸಿರುವ ಹಿನ್ನಲೆ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕನ್ನಡ ಬಾವುಟ ವಿಚಾರವಾಗಿ ಬಿಜೆಪಿ ಮಾಡಿರುವ ಟೀಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾವು ನಮ್ಮದೇ ಆದ ಧ್ವಜ ಹೊಂದಲು ಮುಂದಾಗಿದ್ದೆವು. ಆಗ ಬಿಜೆಪಿ ಸರ್ಕಾರ ನಿರಾಕರಿಸಿತ್ತು. ಈಗ ಡಬಲ್ ಇಂಜಿನ್ ಸರ್ಕಾರ ಇದೆಯಲ್ಲ, ಈಗ ಅಧಿಕೃತವಾಗಿ ಧ್ವಜ ನೀಡಲಿ ಎಂದು ಹೇಳಿದರು.

ಈ ಹಿಂದಿನ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ ರವಿ ಅವರು ನಾವು ಒಂದು ದೇಶವಾಗಿ ಬದುಕುತ್ತಿದ್ದು, ಪ್ರತ್ಯೇಕ ಧ್ವಜದ ಅಗತ್ಯವಿಲ್ಲ ಎಂದು ಹೇಳಿದ್ದರು. ಈಗ ಇವರು ಕನ್ನಡ ಭಾಷೆ ಬಗ್ಗೆ ಇಷ್ಟು ಮಾತನಾಡುತ್ತಾರಲ್ಲ, ಹಿಂದಿ ದಿನ ಆಚರಣೆಗೆ ಮುಂದಾಗಿದ್ದು ಯಾರು? ಕೇಂದ್ರದ ಎಲ್ಲ ಸರ್ಕಾರಿ ಕಾರ್ಯಕ್ರಮದಲ್ಲಿ ಕನ್ನಡ ಬಳಕೆ ಮಾಡುತ್ತಾರಾ? ಎಂದು ಪ್ರಶ್ನಿಸಿದರು.

ರಾಷ್ಟ್ರಪತಿಗಳು ದಸರಾ ಕಾರ್ಯಕ್ರಮಕ್ಕೆ ಬಂದಾಗ ಕನ್ನಡ ಬಳಸಿರಲಿಲ್ಲ. ಐಪಿಬಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಸುತ್ತಿಲ್ಲ ಯಾಕೆ? ಭಾರತದ ಇತಿಹಾಸದಲ್ಲಿ ಅವರದು ಅತ್ಯಂತ ಶಕ್ತಿಶಾಲಿ ಸರ್ಕಾರವಾಗಿದ್ದು, ರಾಜ್ಯ ಸರ್ಕಾರ ನಾಳೆ ರಾಜ್ಯ ಧ್ವಜದ ಪ್ರಸ್ತಾಪ ಕಳುಹಿಸಿ ಅದಕ್ಕೆ ಕೇಂದ್ರದ ಒಪ್ಪಿಗೆ ಪಡೆಯಲಿ. ನಾನು ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಭಾರತ ಧರ್ಮದ ಆಧಾರದ ಮೇಲೆ ವಿಭಜನೆ ಆಗಬೇಕಿದೆ ಎಂದು ಹೇಳಿದ್ದು ಸಾವರ್ಕರ್: ಪ್ರಿಯಾಂಕ್‌ ಖರ್ಗೆ
ಮೈಸೂರು: ಭಾರತ ದೇಶ ಧರ್ಮದ ಆಧಾರದ ಮೇಲೆ ವಿಭಜನೆ ಆಗಬೇಕಿದೆ ಎಂದು ಹೇಳಿದ್ದು ಸಾವರ್ಕರ್ ಹೊರತು ಜವಹಾರ ಲಾಲ್‌ ನೆಹರು ಅವರಲ್ಲ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಹೇಳಿದರು.

ದೇಶ ವಿಭಜನೆ ಕುರಿತು ಬಿಜೆಪಿಯ ಜಾಹೀರಾತು ನೀಡಿರುವ ಬಗ್ಗೆ ಮಾಧ್ಯಮದವರು  ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮೊದಲಿನಿಂದಲೂ ಬಿಜೆಪಿಗೆ ಸಾವಲು ಹಾಕುತ್ತಿದ್ದೇನೆ. ಈ ದೇಶವನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಲು ಮೊದಲು ಧ್ವನಿ ಎತ್ತಿದ್ದು ಯಾರು ಎಂದು ಚರ್ಚೆಗೆ ಬರಲಿ ಉತ್ತರ ನಾನು ನೀಡುತ್ತೆನೆ ಎಂದು ಸವಾಲ್‌ ಹಾಕಿದರು.

1937ರಲ್ಲಿ ಅಹಮದಾಬಾದ್ ನಲ್ಲಿ ನಡೆದ ಹಿಂದೂಮಹಾಸಭಾ ಅಧಿವೇಶನದಲ್ಲಿ ಈ ದೇಶ ಧರ್ಮದ ಆಧಾರದ ಮೇಲೆ ವಿಭಜನೆ ಆಗಬೇಕಿದೆ ಎಂದು ಹೇಳಿದ್ದು, ಸಾವರ್ಕರ್‌ ಹೊರತು ನೆಹರೂ ಅವರಲ್ಲ. ಇದಕ್ಕೆ ಅಂಬೇಡ್ಕರ್ ಅವರು ಸಾವರ್ಕರ್‌ ಅವರ ಮಾತು ಆಘಾತ ತಂದಿದೆ. ಅವರು ಜಿನ್ನಾ ಅವರ ನಿಲುವಿನ ವಿರುದ್ಧವಾಗಿ ಇರಬೇಕಿತ್ತು, ಆದರೆ ಒಳಒಪ್ಪಂದವಾಗಿದೆಯೇ ಎಂದು ಹೇಳಿಕೆ ನೀಡುತ್ತಾರೆ. ಈ ಬಗ್ಗೆ ಬಿಜೆಪಿಯವರಿಗೆ ಗೊತ್ತಿಲ್ಲವಾದರೆ ಅವರಿಗೆ ಸೂಕ್ತ ದಾಖಲೆ, ಪುಸ್ತಕ ನೀಡುತ್ತೇನೆ ಎಂದು ಹೇಳಿದರು.

ಬಿಜೆಪಿ ಮೊದಲು ಆರ್‌ಎಸ್‌ಎಸ್‌ ಕೇಳಿರುವ ಪ್ರಶ್ನೆಗೆ ಉತ್ತರಿಸಲಿ: ಪ್ರಿಯಾಂಕ್‌ ಖರ್ಗೆ
ಮೈಸೂರು: ದೇಶದ ಬಡತನ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಅಸಮಾನತೆಯನ್ನು ಸಮಸ್ಯೆಗಳ ಬಗ್ಗೆ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಕೇಳಿರುವ ಪ್ರಶ್ನೆಗೆ ಸರ್ಕಾರ ಮೊದಲು ಉತ್ತರ ನೀಡಲಿ ನಂತರ ಕಾಂಗ್ರೆಸ್‌ ಪಕ್ಷದವರು ಕೇಳುವ ಪ್ರಶ್ನೆಗೆ ಉತ್ತರಿಸಲಿ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್‌ ಖರ್ಗೆ ಅವರು ಹೇಳಿದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿವಾಸಿಗಳು ರಾಹುಲ್ ಗಾಂಧಿ ಅವರ ಜತೆ ಸಂವಾದ ಮಾಡುವಾಗ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಐಸಿಡಿಎಸ್ ಯೋಜನೆ ಮೂಲಕ ನಮ್ಮ ಮಕ್ಕಳಿಗೆ ವರ್ಷದಲ್ಲಿ ಆರು ತಿಂಗಳ ಕಾಲ ಪೌಷ್ಠಿಕ ಆಹಾರ ಸಿಗುತ್ತಿತ್ತು. ಆದರೆ ಈಗ ಅದು ಸಿಗುತ್ತಿಲ್ಲ. ಈ ಯೋಜನೆಯನ್ನು ಒಂದು ವರ್ಷಕ್ಕೆ ವಿಸ್ತರಣೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿ. ಸಂಸತ್ತಿನಲ್ಲಿ ಬುಡಕಟ್ಟು ಜನರ ಧ್ವನಿಯಾಗಿ ಎಂದು ಆದಿವಾಸಿ ಜನರು ರಾಹುಲ್ ಅವರ ಬಳಿ ಮನವಿ ಮಾಡಿಕೊಂಡರು ಎಂದು ತಿಳಿಸಿದರು.

ಬಿಜೆಪಿಯ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಇದೇನಾ? ಬಿಜೆಪಿಯ ಮಾರ್ಗದರ್ಶಕರಾದ ಹೊಸಬಾಳೆ ಅವರು ತಮ್ಮ ಹೇಳಿಕೆಯಲ್ಲಿ ‘ಬಡತನಕ್ಕೆ ಆಯಾ ರಾಜ್ಯಗಳು ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣʼಎಂದು ಹೇಳಿದ್ದಾರೆ. ಕೇಂದ್ರದಲ್ಲಿ 8 ವರ್ಷಗಳಿಂದ ಹಾಗೂ ರಾಜ್ಯಗಳಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬಂದಿವೆ. ಇನ್ನಾದರೂ ಬಿಜೆಪಿಯವರು ತಮ್ಮದೇ ಗುರುಗಳ ಮಾತನ್ನು ಕೇಳಲಿ. ಈ ಬಡತನಕ್ಕೆ ನೇರ ಹೊಣೆ ಸರ್ಕಾರ ಎಂದು ಹೊಸಬಾಳೆ ಅವರು ದೂರಿದ್ದಾರೆ ಎಂದು ಹೇಳಿದರು.

ಮಾನ್ಯ ಮುಖ್ಯಮಂತ್ರಿಗಳು ದೊಡ್ಡ ದೊಡ್ಡ ಭಾಷಣ ಮಾಡುತ್ತಾರೆ. ಬಜೆಟ್ ಭಾಷಣದಲ್ಲಿ ನಾನು ಮೂರು E ಗಳ ಮೇಲೆ ಗಮನಹರಿಸುತ್ತೇನೆ. ಅವುಗಳೆಂದರೆ, Education(ಶಿಕ್ಷಣ), Employment(ಉದ್ಯೋಗ), Empowerment( ಸಬಲೀಕರಣ). ಆದರೆ ರಾಜ್ಯದಲ್ಲಿ ಶಿಕ್ಷಣ ಹಳ್ಳಹಿಡಿಯುತ್ತಿದೆ. ರಾಜ್ಯದಲ್ಲಿ ಅತಿ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿಯುತ್ತಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆ ಏನಾದರೂ ಇದೆಯಾ? ಕೊರೋನಾದಿಂದ ಆರ್ಥಿಕ ನಷ್ಟವಾಗಿ ಮಕ್ಕಳು ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಶಾಲೆಗಳು ಮುಚ್ಚುತ್ತಿದ್ದು, ಈ ಬಗ್ಗೆ ಸರ್ಕಾರದ ಬಳಿ ಅಂಕಿ ಅಂಶಗಳು ಇವೆಯಾ? ಎಂದು ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗಗಳು ಎಲ್ಲಿವೆ? ಕೆಪಿಎಸ್ ಸಿ ಹಾಗೂ ಕೆಇಎ ಮೂಲಕ ವಿವಿಧ ಇಲಾಖೆಗಳ ಹುದ್ದೆಗೆ ರಾಜ್ಯದ 20 ಲಕ್ಷ ಯುವಕರು ಪರೀಕ್ಷೆ ಬರೆದಿದ್ದು, ಈ ಎಲ್ಲ ಹುದ್ದೆ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿವೆ. ನಿಮ್ಮ ಉದ್ಯೋಗ ಎಲ್ಲಿದೆ? ಆದರೂ ಉದ್ಯೋಗ ನೀಡುತ್ತೇವೆ ಎಂದು ಹೇಳಿಕೊಳ್ಳಲು ನಾಚಿಕೆಯಾಗುವುದಿಲ್ಲವೇ? ಇಲ್ಲಿ ಯಾವುದೇ ಉದ್ಯೋಗ ಸೃಷ್ಟಿಯಾಗಿಲ್ಲ, ಸಬಲೀಕರಣ ಆಗಿಲ್ಲ ಎಂದು ನಿಮ್ಮ ಹೊಸಬಾಳೆ ಅವರು ಹೇಳಿದ್ದಾರಲ್ಲ ಎಂದರು.

ಈ ಸರ್ಕಾರ ಬಂದ ನಂತರ ಯಾವ ಸಮುದಾಯಗಳ ಸಬಲೀಕರಣ ಮಾಡಿದ್ದಾರೆ? ಬೋವಿ ಅಭಿವೃದ್ಧಿ ನಿಗಮದಲ್ಲಿ 150 ಕೋಟಿ ಅಕ್ರಮ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 141 ಕೋಟಿ ಅಕ್ರಮ, ವೀರಶೈವ ನಿಗಮ, ಗೊಲ್ಲರ ನಿಗಮ, ಮರಾಠರ ನಿಗಮ ಇನ್ನು ಟೇಕಾಫ್ ಆಗಿಲ್ಲ. ಯಾವುದಾದರೂ ಒಂದು ಸಮುದಾಯದ ಅಭಿವೃದ್ಧಿ ಬಗ್ಗೆ ಸರ್ಕಾರ ಮಾಹಿತಿ ನೀಡಲಿ. ಬಿಜೆಪಿ ಬಳಿ ಈ ಪ್ರಶ್ನೆಗಳಿಗೆ ಉತ್ತರವಿಲ್ಲ. ಮಾಧ್ಯಮಗಳಲ್ಲಿ ಅವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ಹೀಗಾಗಿ ಅವರು ತಮ್ಮ ವಾಟ್ಸಪ್ ಯೂನಿವರ್ಸಿಟಿಯನ್ನೇ ಪ್ರಪಂಚ ಎಂದುಕೊಂಡು ಅಲ್ಲಿ ನಕಲಿ ಗಾಂಧಿ, ಹಿಂದೂ ವಿರೋಧಿ ಎಂದು ಮಾತನಾಡುತ್ತಾರೆ ಎಂದು ಹೇಳಿದರು.

ನಿನ್ನೆ ರವಿಕುಮಾರ್ ಅವರು ರಾಹುಲ್ ಗಾಂಧಿ ಅವರಿಗೆ 10 ಪ್ರಶ್ನೆ ಕೇಳಿದ್ದಾರೆ. ಅವರು ಪ್ರಶ್ನೆ ಕೇಳುವ ಮುನ್ನ ಅವರ ಗುರುಗಳು ಮಾರ್ಗದರ್ಶಕರಾದ ಹೊಸಬಾಳೆ ಅವರ ನಾಲ್ಕು ಪ್ರಶ್ನೆಗಳಿಗೆ ಉತ್ತರ ನೀಡಲಿ. ಈ ಪ್ರಶ್ನೆಗಳು ನಿಮಗೆ ಅರಿವಾದರೆ ನೀವೇ ನಿಮ್ಮ ಸರ್ಕಾರದ ವಿರುದ್ಧ ಬಂಡಾಯ ಎದ್ದು, ರಾಹುಲ್ ಗಾಂಧಿ ಅವರ ಜತೆ ಕೈಜೋಡಿಸುತ್ತೀರಿ ಎಂದು ಹೇಳಿದರು.

ಇನ್ನಾದರೂ ಬಿಜೆಪಿ ನಿದ್ರಾವಸ್ಥೆಯಿಂದ ಏಳಬೇಕು.  ರಾಜ್ಯದಲ್ಲಿ ನಿರುದ್ಯೋಗ, ಭ್ರಷ್ಟಾಚಾರ ಇದೆ ಎಂದು ಅಂಕಿ ಅಂಶಗಳು ಹೇಳುತ್ತಿದ್ದು, ಇವುಗಳನ್ನು ಬಿಟ್ಟು ಬಿಜೆಪಿ ಪಕ್ಷದವರು, ರಾಹುಲ್ ಗಾಂಧಿ ಏನು ಧರಿಸುತ್ತಾರೆ, ಡಿ.ಕೆ. ಶಿವಕುಮಾರ್ ನಡೆಯುವ ಶೈಲಿ ಹೇಗೆ, ಸಿದ್ದರಾಮಯ್ಯ ಬಿಟ್ಟು ಊಟ ಮಾಡಿದರು ಅಂತಾ ಮಾತನಾಡುತ್ತಾರೆ ಎಂದು ಟೀಕಿಸಿದರು.

ಮಾತೆತ್ತಿದರೆ ಡಬಲ್ ಇಂಜಿನ್ ಸರ್ಕಾರ ಎನ್ನುತ್ತೀರಿ. ಎಲ್ಲಿದೆ ನಿಮ್ಮ ಡಬಲ್ ಇಂಜಿನ್ ಸರ್ಕಾರ? ನಿಮ್ಮ ಇಂಜಿನ್ ಕೆಟ್ಟು ನಿಂತು ಸಾಕಷ್ಟು ದಿನಗಳಾಗಿವೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪ್ರಶ್ನೆಗೆ ನಿಮ್ಮಿಂದ ಉತ್ತರ ನೀಡಲು ಸಾಧ್ಯವಿಲ್ಲ ಎಂದು ನಮಗೆ ಗೊತ್ತಿದೆ. ಭಾರತ ಐಕ್ಯತಾ ಯಾತ್ರೆ ನಡೆಯುತ್ತಿರುವುದೇಕೆ ಎಂದು ನಿಮ್ಮ ತಲೆಗೆ ಬಂದಿಲ್ಲ, ಆದರೆ ಆರ್ ಎಸ್ಎಸ್ ಅವರ ತಲೆಗೆ ಬಂದಿದೆ. ಹೀಗಾಗಿ ಆರ್ ಎಸ್ಎಸ್ ಕೇಳುತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ, ನಂತರ ಜನರಿಗೆ ಉತ್ತರಿಸಿ, ಅದಾದ ಮೇಲೆ ಕಾಂಗ್ರೆಸ್ ಪ್ರಶ್ನೆಗಳಿಗೆ ಉತ್ತರಿಸಿ. ಅದನ್ನು ಬಿಟ್ಟು ಅನಗತ್ಯ ವಿಚಾರ ಮಾತನಾಡಬೇಡಿ. ಬಿಜೆಪಿಯವರು ನಿಮ್ಮ ಪಕ್ಕದಲ್ಲಿನ ಸಮಸ್ಯೆ ನಿಮ್ಮ ಸಂಘಟನೆ ಬಗ್ಗೆ ಮೊದಲು ನೋಡಿಕೊಳ್ಳಿ. ಅದನ್ನು ಬಿಟ್ಟು ನಮ್ಮ ಸಂಘಟನೆ ಬಗ್ಗೆ ಯಾಕೆ ತಲೆಕೆಡಿಸಿಕೊಳ್ಲುತ್ತೀರಿ. ಪಾದಯಾತ್ರೆ ಮಾಡುವುದು ನಮ್ಮ ಹಕ್ಕು. ನೀವು ಕೂಡ ಪಾದಯಾತ್ರೆ ಮಾಡಿ ಎಂದು ಸವಾಲು ಹಾಕಿದರು.

ಬಿಜೆಪಿಯವರು ಮೊದಲು ಜನೋತ್ಸವ ಮಾಡಲು ಮುಂದಾಗಿದ್ದರು, ಆಮೇಲೆ ಜನಾಕ್ರೋಶದಿಂದ ಮೂರ್ನಾಲ್ಕು ಬಾರಿ ರದ್ದಾಗಿ ನಂತರ ಜನಸ್ಪಂದನ ಮಾಡಿದರು. ಅಲ್ಲಿ ಖಾಲಿ ಖುರ್ಚಿಗಳ ಉತ್ಸವ ಮಾಡಿದರು. ಅಲ್ಲಿ ಜನ ಕುರ್ಚಿಗೂ ಸಂಪದಿಸಲಿಲ್ಲ. ಇವರು ಹೇಳುವ ಮೂರು ವರ್ಷದ ಸಾಧನೆ ಹೇಳಲು ಬಿದರ್ ನಿಂದ ಚಾಮರಾಜನಗರದವರೆಗೂ ಪಾದಯಾತ್ರೆ ಮಾಡಲಿ. ಇದನ್ನು ಮಾಡುವ ಧೈರ್ಯ ಇದೆಯಾ? ಫಲಾನುಭವಿ ಸೇರಿಸಿ ಮಾಡಿ ನೋಡೋಣ. ಇದು ಆಗುವುದಿಲ್ಲ. ಕಾರಣ ಒಂದೇ ಒಂದು ಫಲಾನುಭವಿಗಳು ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದರು.

ರಾಜ್ಯ ಸರ್ಕಾರ ಈ ಭಾರತ ಐಕ್ಯತಾ ಯಾತ್ರೆಯ ಭದ್ರತೆ ಕುರಿತು ತೀವ್ರ ನಿರ್ಲಕ್ಷ್ಯ ವಹಿಸಿದೆ. ನಾನು ಪೊಲೀಸರ ಕಡೆ ಬೆಟ್ಟು ಮಾಡಿ ತೋರಿಸುತ್ತಿಲ್ಲ. ನಿನ್ನೆ ಧಾರಾಕಾರ ಮಳೆಯಿಂದ ರಾಹುಲ್ ಗಾಂಧಿ ಅವರು ಅರ್ಧಗಂಟೆಗಳ ಕಾಲ ಸಂಚಾರಿ ದಟ್ಟಣೆಯಲ್ಲಿ ಸಿಲುಕಿದ್ದರು. ರಾಹುಲ್ ಗಾಂಧಿ ಅಥವಾ ಯಾವುದೇ ವಿಐಪಿ ಆಗಿದ್ದರೂ ಅವರಿಗೆ ಭದ್ರತೆ ಇಲ್ಲದಿದ್ದಾಗ ರಾಜ್ಯ ಸರ್ಕಾರ ಸೂಕ್ತ ಭದ್ರತೆ ನೀಡುವುದು ಸರ್ಕಾರದ ಜವಾಬ್ದಾರಿ. ಅದರ ಬದಲು ರಾಹುಲ ಗಾಂಧಿ ಅವರನ್ನು ಟ್ರಾಫಿಕ್ ನಲ್ಲಿ ನಿಲ್ಲಿಸಿದರೆ ಅದಕ್ಕೆ ಯಾರು ಹೊಣೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಮೈಸೂರಿನಿಂದ ಮಂಡ್ಯಕ್ಕೆ ಪಾದಯಾತ್ರೆ ಸಾಗಲಿದೆ. ಪೊಲೀಸ್ ಅಧಿಕಾರಿಗಳು ಅವರ ಕೆಲಸ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಪಾದಯಾತ್ರೆ ಸಮಯದಲ್ಲಿ ಅವರ ಸುತ್ತ ಭದ್ರತೆಗೆ ಹಗ್ಗವನ್ನು ಬಳಸುತ್ತಾರೆ. ಮಂಡ್ಯ ಪೊಲೀಸರು ಈ ಹಗ್ಗ ತಂದಿಲ್ಲ, ಆದರೆ ಮೈಸೂರು ಪೊಲೀಸರು ಈ ಹಗ್ಗವನ್ನು ಮಂಡ್ಯ ಪೊಲೀಸರಿಗೆ ನೀಡಿಲ್ಲ. ಈ ಸರ್ಕಾರಕ್ಕೆ ಒಂದು ಹಗ್ಗ ನೀಡುವ ಯೋಗ್ಯತೆಯೂ ಇಲ್ಲವಾಗಿದೆಯೇ? ಇದರಲ್ಲೂ ಕಮಿಷನ್ ಪಡೆಯುತ್ತಾರಾ? ಎಂದು ವ್ಯಂಗ್ಯವಾಡಿದರು.

ರಾಹುಲ್ ಗಾಂಧಿ, ರಣದೀಪ್ ಸುರ್ಜೆವಾಲ, ವೇಣುಗೋಪಾಲ್ ಸೇರಿದಂತೆ ಸಂಸತ್ ಸದಸ್ಯರು ಎಲ್ಲ ನಡೆಯುತ್ತಿದ್ದು, ಭದ್ರತೆಗೆ ಹಗ್ಗ ನೀಡಲು ಆಗಿಲ್ಲವೆ. ಇಷ್ಟು ದೊಡ್ಡ ನಿರ್ಲಕ್ಷ್ಯವೆ. ನಾನು ಕರ್ನಾಟಕ ಪೊಲೀಸ್ ಮೇಲೆ ಆರೋಪ ಮಾಡುವುದಿಲ್ಲ, ರಾಜ್ಯ ಸರ್ಕಾರ ಈ ಯಾತ್ರೆ ಹತ್ತಿಕ್ಕಲು ಹೀಗೆಲ್ಲ ಮಾಡುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

ಭಾರತ ಐಕ್ಯತಾ ಯಾತ್ರೆ ಇಡೀ ವ್ಯವಸ್ಥೆಯನ್ನು ಬದಲಿಸುವ ಯಾತ್ರೆ: ಪ್ರಿಯಾಂಕ್ ಖರ್ಗೆ
ಚಾಮರಾಜನಗರ: ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ಸಾಗುತ್ತಿರುವ ಭಾರತ ಐಕ್ಯತಾ ಯಾತ್ರೆಯು ಇಡೀ ವ್ಯವಸ್ಥೆಯನ್ನು ಬದಲಿಸುವ ಯಾತ್ರೆಯಾಗಲಿದೆ ಎಂದು  ಕೆಪಿಸಿಸಿ ಸಂವಹನ ವಿಭಾಗ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಹುಲ್ ಗಾಂಧಿ ಅವರು ಇಂದು ಎರಡು ಸಂವಾಧ ಕಾರ್ಯಕ್ರಮ ಮಾಡಿದ್ದು, ಒಂದು ಜಿಲ್ಲಾ ಬುಡಕಟ್ಟು ಅಭಿವೃದ್ಧಿ ಸಂಘದ ಜತೆ ನಡೆಯಿತು. ಇಲ್ಲಿ ಸದಸ್ಯರು ರಾಹುಲ್ ಗಾಂಧಿ ಅವರ ಮುಂದೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಪ್ರಮುಖ ಬೇಡಿಕೆಗಳೆಂದರೆ, ಸೋಲಿಗ ಸಮಾಜದವರು ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಶೋಷಿತ ಆದಿವಾಸಿಗಳ ಪಟ್ಟಿಯಲ್ಲಿ ಇರಬೇಕು ಎಂದು ಹಲವು ವರ್ಷಗಳ ಬೇಡಿಕೆ ಹೊಂದಿದ್ದಾರೆ. ಮೋದಿ ಸರ್ಕಾರ ಆಸ್ವಾಸನೆ ನೀಡಿದ್ದರೂ ಇದುವರೆಗೂ ಮಾಡಿಲ್ಲ, ಇದನ್ನು ಸಂಸತ್ ಅಧಿವೇಶನದಲ್ಲಿ ತರಬೇಕು. ಅರಣ್ಯ ಸಂರಕ್ಷಣಾ ಕಾಯ್ದೆ ಅಢಿಯಲ್ಲಿ ಬಿ.ಆರ್ ಹಿಲ್ಸ್, ಸೇರಿದಂತೆ ಇತರೆ ಹುಲಿಸಂರಕ್ಷಿತ ಪ್ರದೇಶಗಳಲ್ಲಿ ಸಣ್ಣ ಅರಣ್ಯ ಉತ್ಪನ್ನ ಮಾಡಲು ಅವಕಾಶ ನೀಡಲಾಗಿತ್ತು. ಬಂಡಿಪುರ ಹೊರತಾಗಿ ಬೇರೆ ಕಡೆಗಳಲ್ಲಿ ಅನುಮತಿ ನೀಡಿದ್ದು, ಅಲ್ಲಿಯೂ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಒತ್ತಡ ಮಾಡುವುದಾಗಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಮಲೆಮಹದೇಶ್ವರ ಬೆಟ್ಟವನ್ನು ಹುಲಿ ಸಂರಕ್ಷಣಾ ವಲಯ ಮಾಡುವ ಪ್ರಸ್ತಾವ ನೀಡಿದ್ದು, ಇದನ್ನು ಕೈಬಿಡಬೇಕು. ಈ ಪ್ರದೇಶದಲ್ಲಿ 15-20 ಸಾವಿರ ಸೋಲಿಗ ಸಮುದಾಯದವರು ವ್ಯವಸಾಯ ಮಾಡುತ್ತಿದ್ದಾರೆ. ಅರಣ್ಯವನ್ನೆ ಅವರು ಅವಲಂಬಿಸಿದ್ದಾರೆ.ಈ ಸಮಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂದು ಕೇಳಿದಾಗ ಅದರ ಆಶ್ವಾಸನೆ ನೀಡಲಾಗಿದೆ. ಯುಪಿಎ ಸರ್ಕಾರದಲ್ಲಿ ಐಸಿಡಿಎಸ್ ಯೋಜನೆ ಮೂಲಕ ಈ ಭಾಗದ ಮಕ್ಕಳಿಗೆ ನೀಡಲಾದಗುತ್ತಿರುವ 6 ತಿಂಗಳ ಪೌಷ್ಠಿಕ ಆಹಾರವನ್ನು ಒಂದು ವರ್ಷಕ್ಕೆ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದು, ಈಗ ಆ ಯೋಜನೆ ಸರಿಯಾಗಿ ಜಾರಿಯಾಗುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈ ವಿಚಾರವಾಗಿ ಹೋರಾಟ ಮಾಡುವುದಾಗಿ ತಿಳಿಸಿದೆ ಎಂದು ಹೇಳಿದರು.

ಇನ್ನು ಜೇನು ಕುರುಬ ಸಮುದಾಯದವರು ಕಾಡಿನಿಂದ ಜೇನು ತಂದು ಉಡುಗೊರೆಯಾಗಿ ನೀಡಿದ್ದಾರೆ. ಇನ್ನು ಎರಡನೇ ಸಂವಾದದಲ್ಲಿ ಈ ಸರ್ಕಾರದ ನಿರ್ಲಕ್ಷ್ಯ ಹಾಗೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟ 36 ಕುಟುಂಬ ಸದಸ್ಯರ ಜತೆ ಮಾತನಾಡಿ ಅವರ ನೋವು ಹಂಚಿಕೊಂಡರು. ಅವರು ಮೂರು ಬೇಡಿಕೆ ಇಟ್ಟಿದ್ದು, ಈ ಸರ್ಕಾರ ಇವರ ನಿರ್ಲಕ್ಷ್ಯದಿಂದ ಯಾರು ಸತ್ತಿಲ್ಲ ಎಂದು ಸತ್ಯವನ್ನು ಮರೆಮಾಚುತ್ತಿದ್ದಾರೆ. ಈ ಸಾವುಗಳು ಕೋವಿಡ್ ಸಾವುಗಳು ಎಂದು ಸರ್ಕಾರ ಪರಿಗಣಿಸಬೇಕು. ಸರ್ಕಾರದ ನಿರ್ಲಕ್ಷ್ಯದಿಂದ ಆಗಿದೆ ಎಂದು ಒಪ್ಪಿಕೊಳ್ಳಬೇಕು. ಇವರಿಗೆ ಸರ್ಕಾರದಿಂದ ಪರಿಹಾರ ಸಿಗಬೇಕು ಎಂದು ಕೇಳಿದ್ದು, ಇವರ ಪರವಾಗಿ ಹೋರಾಟ ಮಾಡುವುದಾಗಿ ಭರವಸೆ ನೀಡಿದ್ದಾರೆ. ಸರ್ಕಾರ ಇವರ ನೆರವಿಗೆ ಬಾರದಿದ್ದಾಗ ನಮ್ಮ ಅಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರು ಹೋಗಿ ಅವರ ಕುಟುಂಬಕ್ಕೆ ತಲಾ 1 ಲಕ್ಷ ಆರ್ಥಿಕ ನೆರವು ನೀಡಲಾಗಿದೆ. ಸರ್ಕಾರದ ನಿರ್ಲಕ್ಷ್ಯದಿಂದ ತಮ್ಮ ಕುಟುಂಬದ ಆಧಾರಸ್ತಂಭ ಕಳೆದುಕೊಂಡಿದ್ದು, ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂಬ ಬೇಡಿಕೆ ಇಟ್ಟರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಕೆಲಸ ಮಾಡಲಾಗುವುದು ಎಂದು ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಈ ಸಂವಾದ ನಂತರ ಮುಂದೆ ಬುಡಕಟ್ಟು ಜನರಿಗೆ ಯಾವ ರೀತಿಯ ನೆರವು ನೀಡಬೇಕು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಮೂಲಸೌಕರ್ಯ ಕಲ್ಪಿಸಬೇಕು ಎಂಬ ವಿಚಾರ ಗಮನಕ್ಕೆ ಬಂದಿದೆ. ನಮ್ಮ ನಾಯಕರ ಪರವಾಗಿ ಈ ತಂಡಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ‘ನಾನು ಯಾವುದೇ ವ್ಯಕ್ತಿಗಳ ಕುರಿತು ಮಾತನಾಡುವುದಿಲ್ಲ. ವೈಯಕ್ತಿಕ ವಿಚಾರಗಳು ಅಸಂಬದ್ಧ. ಇಲ್ಲಿ ಕೇವಲ ಭಾರತ ಐಕ್ಯತಾ ಯಾತ್ರೆಯಷ್ಟೇ ಮುಖ್ಯ. ಇದು ಇಡೀ ವ್ಯವಸ್ಥೆಯನ್ನು ಬದಲಿಸುವ ಯಾತ್ರೆಯಾಗಿದ್ದು, ಪಕ್ಷಕ್ಕೆ ಒಂದು ರೂಪಾಂತರ ನೀಡುತ್ತಿದೆ. ಕಾಂಗ್ರೆಸ್ ಪಕ್ಷ ಮಾತ್ರ ತನ್ನ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆಸುತ್ತದೆ. ಕಾಂಗ್ರೆಸ್ ಪಕ್ಷ ಮಾತ್ರ ಚುನಾಯಿತ ಅಧ್ಯಕ್ಷರನ್ನು ಹೊಂದಿದೆ. ಭಾರತ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಮಹತ್ವದ ಕೊಡುಗೆ ಎಂದರೆ ಅಭಿಪ್ರಾಯ ಸಂಗ್ರಹಿಸುವುದು. ನಾವು ಅಭಿಪ್ರಾಯ ಸಂಗ್ರಹಿಸುತ್ತೇವೆ. ಇದನ್ನೇ ಕಾಮರಾಜ್ ಅವರು 66ರಲ್ಲಿ ಬಳಸಿದ್ದರು. ಒಮ್ಮತ ಅಭಿಪ್ರಾಯ ಇರದಿದ್ದರೆ ಚುನಾವಣೆ ಮಾಡುತ್ತೇವೆ. ಈ ಚುನಾವಣೆಯಲ್ಲಿ ಪ್ರತಿ ಮತದಾರ ಕ್ಯೂರ್ ಕೋಡ್ ಇರುವ ಮತದಾರ ಗುರುತಿನ ಚೀಟಿ ಹೊಂದಿರುತ್ತಾನೆ. ಸುಮಾರು 9 ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಈ ಗುರುತಿನ ಚೀಟಿ ಮೂಲಕ ಮತ ಹಾಕುತ್ತಾರೆ. ಚುನಾವಣೆ ಪ್ರಜಾಪ್ರಭುತ್ಯ ವ್ಯವಸ್ಥೆ ಮಾದರಿಯಲ್ಲಿ ನಡೆಯಲಿದೆ. ಇಂದು ರಾಜ್ಯದ ನಾಯಕರು ದೆಹಲಿಯಲ್ಲಿ ಏನಾಗುತ್ತಿದೆ ಎಂಬುದಕ್ಕಿಂತ ಭಾರತ ಐಕ್ಯತಾ ಯಾತ್ರೆ ಬಗ್ಗೆ ಹೆಚ್ಚು ಗಮನಹರಿಸಿದ್ದಾರೆ ಎಂದರು.

ʼತಮ್ಮ ಮನೆಯ ಹೆಂಚು ತೂತುʼ: ಬಿಜೆಪಿ ತಿರುಗೇಟು
ಬೆಂಗಳೂರು: ಬಿಜೆಪಿ ಲಂಚ ಮತ್ತು ಮಂಚದ ಸರ್ಕಾರ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್‌ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಕುರಿತು ಟ್ವೀಟ್‌ ಮಾಡುವ ಮೂಲಕ ರಾಜ್ಯ ಬಿಜೆಪಿ  ತಿರುಗೇಟು ನೀಡಿದೆ.

ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ ʼತಮ್ಮ ಮನೆಯ ಹೆಂಚು ತೂತುʼ ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ವಾಗ್ದಾಳಿ ನಡೆಸಿದೆ.

ಇದು ಲಂಚ ಮತ್ತು ಮಂಚದ ಸರ್ಕಾರ : ಖರ್ಗೆ ವಿವಾದಾತ್ಮಕ ಹೇಳಿಕೆ
ಕಲಬುರಗಿ: ರಾಜ್ಯದಲ್ಲಿರುವುದು ಲಂಚ ಹಾಗೂ ಮಂಚದ ಸರ್ಕಾರ ಎಂದು ಬಿಜೆಪಿ ಟೀಕಿಸುವ ಭರದಲ್ಲಿ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಸರ್ಕಾರದಲ್ಲಿ ಹಣ ಕೊಡದೆ ಯಾವುದೇ ಕೆಲಸ ಆಗಲ್ಲ. ಯುವಕರು ಸರ್ಕಾರಿ ನೌಕರಿ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು. ಯುವತಿಯರು ನೌಕರಿ ಪಡೆಯಬೇಕು ಅಂದ್ರೆ ಮಂಚ ಹತ್ತಬೇಕಾಗಿದೆ, ಪರೋಕ್ಷ ಉದಾಹರಣೆಯೊಂದಿಗೆ ಹೇಳಬೇಕಾದರೆ 40% ಪರ್ಸೆಂಟ್ ಗಾಗಿ ಓರ್ವ ಸಚಿವ ರಾಜೀನಾಮೆ ನೀಡಿದ್ರೆ, ನೌಕರಿ ಕೇಳಿದ ಯುವತಿಗೆ ಮಂಚಕ್ಕೆ ಕರೆದು ಓರ್ವ ಸಚಿವ ರಾಜೀನಾಮೆ ನೀಡಿದ್ದಾನೆ ಎಂದು ಹೇಳಿಕೆಯಲ್ಲಿ ಈಶ್ವರಪ್ಪ ಹಾಗೂ ರಮೇಶ್ ಜಾರಕಿ‌ ಹೊಳಿಯವರನ್ನು ಸೂಚಿಸಿದ್ದಾರೆ.

ರಾಜ್ಯದಲ್ಲಿ 40% ಸರ್ಕಾರ ಚಾಲ್ತಿಯಲ್ಲಿದೆ. KPTCL ನೇಮಕಾತಿ ಪರೀಕ್ಷೆಯಲ್ಲಿ ಸುಮಾರು 300 ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆದಿದೆ, PSI ನೇಮಕಾತಿಯಲ್ಲೂ ಅಕ್ರಮ ನಡೆದಿದೆ, ಹಾಗಾಗಿ ಸರ್ಕಾರ ಯಾವುದೇ ಪರೀಕ್ಷೆ ನಡೆಸಿದರು ಅಕ್ರಮಗಳು ಹೊರಬರುತ್ತಿವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.