priyank kharge – Peepal Media

ಸೌಗತ್-ಎ-ಮೋದಿ ಕಿಟ್: ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ ಎಂದ ಪ್ರಿಯಾಂಕ್‌ ಖರ್ಗೆ
ಬೆಂಗಳೂರು: “ವಕ್ಫ್, ಹಲಾಲ್ ಬಜೆಟ್ ಮತ್ತು ಕಾಂಟ್ರಾಕ್ಟ್ ಜಿಹಾದ್‌ಗಾಗಿ ಹೋರಾಡಿದ ಕರ್ನಾಟಕದ ಬಿಜೆಪಿ ಹುಲಿಗಳು ಹಾಗೂ ಮಸೀದಿಗಳ ಮುಂದೆ ಡಿಜೆ ಹಾಕಿ ಕುಣಿದವರು, ಹೋಳಿ ಬಣ್ಣ ಎರಚಿದವರು. ಈಗ ಮಸೀದಿಗಳ ಮುಂದೆ ಸಾಲುಗಟ್ಟಿ ನಿಂತು ‘ಸೌಗತ್-ಎ-ಮೋದಿ’ ಕಿಟ್‌ಗಳನ್ನು ವಿತರಿಸಲಿದ್ದಾರೆ. ಇದನ್ನ ನೋಡಿದರೆ ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ,” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಬಿಜೆಪಿಯನ್ನು ಟೀಕಿಸಿದ್ದಾರೆ.

ಈ ಕುರಿತು ತಮ್ಮ ಎಕ್ಸ್‌ನಲ್ಲಿ  ಬರೆದು ಕೊಂಡಿರುವ ಅವರು, ‘ಸೌಗತ್-ಎ-ಮೋದಿ’ ಕಿಟ್‌ಗಳನ್ನು ವಿತರಿಸಲಿರುವ ಸುಂದರ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಹೇಬರು ಕಾತರರಾಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ!

ವಕ್ಫ್, ಹಲಾಲ್ ಬಜೆಟ್ ಮತ್ತು ಕಾಂಟ್ರಾಕ್ಟ್ ಜಿಹಾದ್‌ಗಾಗಿ ಹೋರಾಡಿದ @BJP4Karnataka ಹುಲಿಗಳು ಹಾಗೂ ಮಸೀದಿಗಳ ಮುಂದೆ ಡಿಜೆ ಹಾಕಿ ಕುಣಿದವರು, ಹೋಳಿ ಬಣ್ಣ ಎರಚಿದವರು ಈಗ ಮಸೀದಿಗಳ ಮುಂದೆ ಸಾಲುಗಟ್ಟಿ ನಿಂತು ‘ಸೌಗತ್-ಎ-ಮೋದಿ’ ಕಿಟ್‌ಗಳನ್ನು ವಿತರಿಸಲಿದ್ದಾರೆ.

ಈ ಸುಂದರ… pic.twitter.com/pv760kFcEq
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) March 26, 2025

“ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಾಟ್ಸಾಪ್ ಯೂನಿವರ್ಸಿಟಿಯನ್ನು ಬಿಟ್ಟು, ಸಂವಿಧಾನವನ್ನು ಚೆನ್ನಾಗಿ ಓದಬೇಕು ಹಾಗೂ ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳಿವೆ ಎನ್ನುವ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. ವಾಟ್ಸಾಪ್ ಯೂನಿವರ್ಸಿಟಿಯನ್ನೇ ನಂಬಿಕೊಂಡರೆ ಇದೇ ರೀತಿ ತಮ್ಮ ಪಕ್ಷದ ಅನಿರೀಕ್ಷಿತ ಮಾಸ್ಟರ್ ಸ್ಟ್ರೋಕ್ ಗಳಿಂದ ಬೆಪ್ಪರಾಗಬೇಕಾಗುತ್ತದೆ!” ಎಂದು ಖರ್ಗೆ ಟೀಕಿಸಿದ್ದಾರೆ.

ಇನ್ನೂ ಮುಂದುವರೆದು, ಬಿಜೆಪಿಗರಿಗೆ ನನ್ನ ಸಲಹೆ, ಈ ಕಾರ್ಯಕ್ರಮಕ್ಕೆ ಬರುವಾಗ ದಯವಿಟ್ಟು ನಿಮ್ಮ ಅಲ್ಪಸಂಖ್ಯಾತ ಮೋರ್ಚಾಗೆ ಕುಫಿ(ಟೋಪಿ)ಗಳನ್ನು ತರಲು ಹೇಳಲು ಮರೆಯಬೇಡಿ ಎಂದು ಸಲಹೆ ಸೂಚಿಸಿದ್ದಾರೆ.

ಅಷ್ಟಕ್ಕೂ ಏನಿದು ‘ಸೌಗತ್-ಎ-ಮೋದಿ’ ಕಿಟ್‌?

ರಂಜಾನ್‌ ಹಿನ್ನಲೆಯಲ್ಲಿ, ಬಿಜೆಪಿ ಅಲ್ಪಾ ಸಂಖ್ಯಾತ ಮೂರ್ಚಾದಿಂದ ವತಿಯಿಂದ ‘ಸೌಗತ್-ಎ-ಮೋದಿʼ ಕಿಟ್‌ ವಿತರಿಸುವ ಅಭಿಯಾನವನ್ನು ಆರಂಭಿಸಿದ್ದು, ಭಾರತ ದೇಶದಾದ್ಯಂತ, 32 ಲಕ್ಷ ಬಡ ಮುಸ್ಲೀಮರಿಗೆ ವಿಶೇಷ ಕಿಟ್‌ಗಳನ್ನ ವಿರಿಸುವ ಗುರಿಯನ್ನ ಭಾರತೀಯ ಜನತಾ ಪಾರ್ಟಿ ಹೊಂದಿದೆ. ಈ ಅಭಿಯಾನವು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. ಇದು ಬಡ ಮುಸ್ಲಿಮರು ಯಾವುದೇ ಕಷ್ಟವಿಲ್ಲದೇ ಹಬ್ಬವನ್ನ ನಡೆಸಲು ಸಹಾಯಕವಾಗುವ ಗುರಿಯನ್ನೂ ಕೂಡ ಹೊಂದಿದೆ ಎನ್ನುವುದು ರಾಷ್ಟ್ರಾಧ್ಯಕ್ಷ ಅಭಿಪ್ರಾಯವಾಗಿದೆ

ಕಿಟ್‌ ನಲ್ಲಿ ಏನೇನಿದೆ?

ಈ ಕಿಟ್‌ಗಳಲ್ಲಿ, ಆಹಾರ ಪದಾರ್ಥಗಳು, ಬಟ್ಟೆ, ಶಾವಿಗೆ, ಡ್ರೈ ಫ್ರೂಟ್ಸ್‌ ಗಳು ಇರಲಿವೆ.

ತೇವಾಂಶದ ಕೊರತೆ ಸಂಕೀರ್ಣ ರೋಗದ ಬಾಧೆಯಿಂದ ಒಣಗುತ್ತಿರುವ ತೊಗರಿಮುಂಜಾಗರೂಕತಾ ಕ್ರಮ ಕೈಗೊಳ್ಳಿ: ಪ್ರಿಯಾಂಕ್‌ ಖರ್ಗೆ ಮನವಿ
ಕಲಬುರಗಿ ನ.26 : ಕಲಬುರಗಿ ಜಿಲ್ಲೆಯಲ್ಲಿ ನವಂಬರ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವ ಕಾರಣ ತೇವಾಂಶದ ಕೊರತೆಯಾಗಿರುವದರಿಂದ ಹಾಗೂ ಒಣಬೇರು ಕೊಳೆ ರೋಗ ಹಾಗೂ ಮಚ್ಚೆರೋಗ ಕಂಡು ಬಂದಿರುವದರಿಂದ ತೊಗರಿ ಬೆಳೆ ಒಣಗಲಾರಂಭಿಸಿದ್ದುರೈತರು ಮುಂಜಾಗರೂಕತ ಕ್ರಮಗಳನ್ನು ಅನುಸರಿಸಬೇಕೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ರೈತರಲ್ಲಿ ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ವಾಡಿಕೆ ಮಳೆ 17.4 ಮಿ.ಮಿ ಆಗಿದ್ದು 5.6 ಮಿ.ಮಿ ಕಡಿಮೆ ಮಳೆಯಾಗಿರುತ್ತದೆ. ಇದರಿಂದ ಕಡಿಮೆ ಆಳ ಮತ್ತು ಮಧ್ಯಮ ಆಳದ ಭೂಮಿಯಲ್ಲಿ ತೇವಾಂಶದ ಕೊರತೆ ಕಂಡು ಬಂದಿರುತ್ತದೆ. ಬಿತ್ತನೆಯಾದ ತೊಗರಿ ಬೆಳೆಯಲ್ಲಿ ತೇವಾಂಶದ ಬಾಧೆಗೆ ಮ್ಯಾಕ್ರೋಫೋಮಿನಾ ಫೆಜಿಯೊಲ್ಕೆ ಶೀಲಿಂದ್ರದಿಂದ ಬರುವ ಒಣ ಬೇರು ಕೊಳೆ ರೋಗ ಹೆಚ್ಚಾಗಿ ಕಾಣಿಸಿಕೊಂಡಿರುತ್ತದೆ. ಅದರೊಂದಿಗೆ ಫೈಟೊಪ್ಲೋರಾ ಮಚ್ಚೆ ರೋಗವು ಅಲ್ಲಲ್ಲಿ ಉಲ್ಬಣಿಸಿರುವುದು ಕಂಡು ಬಂದಿರುವುದರಿಂದ ತೊಗರಿ ಒಣಗಲಾರಂಬಿಸಿರುತ್ತದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ.

ಈ ಸಂಬಂಧದಲ್ಲಿ ಕೃಷಿ ಇಲಾಖೆ ನೀಡಿರುವ ಮುಂಜಾಗ್ರತಾ ಕ್ರಮಗಳು ಈ ಮುಂದಿನಂತಿದೆ: ಬೆಳೆಯಲ್ಲಿ ಹಸಿ ಆರದಂತೆ ಸತತ ಅಂತರ ಬೇಸಾಯ ಮಾಡಬೇಕಲ್ಲದೆ, ಭೂಮಿ ಎರೆಬಿಡಿ (ಬಿರುಕು) ಬಿಡದಂತೆ ನೋಡಿಕೊಳ್ಳಬೇಕು. ಕೃಷಿ ಇಲಾಖೆಯಲ್ಲಿ ಶೇ 90 ರ ಸಹಾಯಧನದಲ್ಲಿ ಲಭ್ಯವಿರುವ ತುಂತುರು ನೀರಾವರಿ ಘಟಕ ಹಾಗೂ ಶೇ 50 ರ ಸಹಾಯಧನದಲ್ಲಿ ಲಭ್ಯವಿರುವ PVC ಪೈಪು ಹಾಗೂ HDPE Roll ಪೈಪು ಗಳನ್ನು ಬಳಸಿ ಸಮೀಪದ ಬಾವಿ ಅಧವಾ ಬೋರವೆಲ್ ನಿಂದ ಸಾಲು ಬಿಟ್ಟು ಸಾಲು ನೀರು ಹಾಯಿಸುವುದು. ಶಿಲೀಂದ್ರದಿಂದ ಬರುವ ರೋಗವನ್ನು ನಿಯಂತ್ರಿಸಲು 5-10 ಗ್ರಾ ಟ್ರೈಕೊಡರ್ಮ (ಜೈವಿಕ ಶಿಲೀಂದ್ರನಾಶಕ) ಅಥವಾ ಕಾರ್ಬೇಂಡೆಜಿಮ್ ಹಾಗೂ ಮ್ಯಾಂಕೊಜೆಬ್ ಸಂಯುಕ್ತ ಶಿಲೀಂದ್ರನಾಶಕವನ್ನು ಪ್ರತಿ ಲೀಟರ ನೀರಿಗೆ 2.5 ಗ್ರಾಂ ಬೆರಸಿ ಗಿಡದ ಕಾಂಡ ಅಥವಾ ಬೇರಿಗೆ ಸಿಂಪಡಿಸಬೇಕು. ಟ್ರೈಕೊಡರ್ಮ (ಜೈವಿಕ ಶಿಲೀಂದ್ರನಾಶಕ) ಮತ್ತು ಕಾರ್ಬೇಂಡೆಜಿಮ್ ಹಾಗೂ ಮ್ಯಾಂಕೊಜೆಬ್ ಸಂಯುಕ್ತ ಶಿಲೀಂದ್ರನಾಶಕಗಳು ರೈ ತ ಸಂಪರ್ಕ ಕೇಂದ್ರಗಳಲ್ಲಿ ಶೇ 50 ರ ಸಹಾಯಧನದಲ್ಲಿ ಲಭ್ಯವಿರುತ್ತದೆ.

40% ಕಮಿಷನ್ ಆರೋಪ: ಅಂಬಿಕಾಪತಿ ಮರಣದಿಂದಾಗಿ ಲೋಕಾಯುಕ್ತದಲ್ಲಿ ಆರೋಪ ಸಾಬೀತಾಗಿಲ್ಲ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಲೋಕಾಯುಕ್ತ ವರದಿಯಲ್ಲಿ ಅಂಬಿಕಾಪತಿಯವರು ಮರಣ ಹೊಂದಿರುವ ಕಾರಣ, ಸದರಿಯವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ, ಹಾಗಾಗಿ ಅಂಬಿಕಾಪತಿಯವರು ಮಾಡಿರುವ ಆಪಾಧನೆಯು ಮೇಲ್ನೋಟಕ್ಕೆ ಸಾಬೀತಾಗಿರುವುದಿಲ್ಲವೆಂದು ವಿಚಾರಣಾಧಿಕಾರಿಗಳು ವಿಚಾರಣಾ ವರದಿಯನ್ನು ಸಲ್ಲಿಸಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೇಸ್‌ ಮಾಡಿದ್ದ 40% ಕಮಿಷನ್ ಆರೋಪದ ಬಗ್ಗೆ  ತನಿಖೆ ನಡೆಸಿದ ಲೋಕಾಯುಕ್ತರು “ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದ್ದಾರೆ,” ಬಿಜೆಪಿ ಕಾಂಗ್ರೇಸ್‌ ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಹಿನ್ನಲೆಯಲ್ಲಿ ಬಿಜೆಪಿಯ ವಾದಕ್ಕೆ ಉತ್ತರವನ್ನು ನೀಡುತ್ತಾ ಖರ್ಗೆಯವರು, ” 2022 ರ ಅಗಸ್ಟ್‌ 30 ND TV ಗೆ ನೀಡಿದ ಹೇಳಿಕೆಯಲ್ಲಿ ದಿವಂಗತ ಆರ್. ಅಂಬಿಕಾಪತಿ ಹಾಗೂ ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಪಿಡಬ್ಲೂಡಿ, ಆರೋಗ್ಯ, ವಸತಿ, ಉನ್ನತ ಶಿಕ್ಷಣ, ಸಣ್ಣ ನೀರಾವರಿ ಹೀಗೆ ಹಲವು ಇಲಾಖೆಗಳಲ್ಲಿನ ಕಮಿಷನ್ ಹಾಗೂ ಕೋಲಾರ ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವರಾದ ಮುನಿರತ್ನರವರ ವಿರುದ್ಧ ಲಂಚದ ಆರೋಪ ಹಾಗೂ ಕರ್ನಾಟಕ ಖಾಸಗಿ ಶಾಲಾ ಮಾಲೀಕರ ಎರಡು ಸಂಘಟನೆಗಳ ಲಂಚದ ಆರೋಪ, ಅಲ್ಲದೆ ಪಾವಗಡ ಆಸ್ಪತ್ರೆ ನಿರ್ಮಾಣ ಕಾಮಗಾರಿಯಲ್ಲಿ ಲಂಚದ ಅಕ್ರಮದ ಬಗ್ಗೆ ಆರೋಪಿಸಿದ್ದರು. ಆದರೆ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ವಹಿಸಿದ್ದು ಕೇವಲ ಬಿಬಿಎಂಪಿ ಪೂರ್ವ ವಲಯಕ್ಕೆ ಸಂಬಂಧಿಸಿದ ಆಟದ ಮೈದಾನ ಕಾಮಗಾರಿಯ ಒಂದು ಆರೋಪವನ್ನು ಮಾತ್ರ,” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಲೋಕಾಯುಕ್ತ  ತನಿಖೆಗೆ ವಹಿಸಿದ್ದು 2023 ರ ಮಾರ್ಚ್ 27 ರಂದು, ಆಗ ಬಿಜೆಪಿ ಸರ್ಕಾರವಿತ್ತು. ಈ ಸಂದರ್ಭದಲ್ಲಿ NDTV ಯಲ್ಲಿ ನೀಡಿದ ಹೇಳಿಕೆಯೊಂದನ್ನು ಆಧರಿಸಿ ತನಿಖೆಗೆ ವಹಿಸಿದ ಬಿಜೆಪಿ ಸರ್ಕಾರ ಇನ್ನುಳಿದ ಆರೋಪಗಳನ್ನು ತನಿಖೆಗೆ ವಹಿಸಲಿಲ್ಲ ಏಕೆ? ಇದಲ್ಲದೆ 40% ಕಮಿಷನ್ ಗೆ ಸಂಬಂಧಿಸಿದಂತೆ ಇನ್ನೂ ಹಲವು ವಿಷಯಗಳ ಬಗ್ಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದರೂ ಏಕೆ ತನಿಖೆಗೆ ವಹಿಸಲು ಗಂಭೀರವಾಗಿ ಪರಿಗಣಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ತನಿಖಾಧಿಕಾರಿಯು ತನಿಖೆಯ ವಿಚಾರವಾಗಿ ಅಂಬಿಕಾಪತಿ ಅವರ ಮನೆಗೆ ತೆರಳಿದಾಗ ಅಂಬಿಕಾಪತಿ ಮರಣ ಹೊಂದಿರುತ್ತಾರೆ, ಅವರ ಪುತ್ರನಿಗೆ ತಂದೆ ಮಾಡಿದ್ದ ಆರೋಪದ ಕುರಿತು ಯಾವುದೇ ಮಾಹಿತಿ ಇರುವುದಿಲ್ಲ,, ತನಿಖಾಧಿಕಾರಿ ಅಂಬಿಕಾಪತಿಯವರ ಮರಣ ಪ್ರಮಾಣಪತ್ರವನ್ನು ಪಡೆದು ಹಿಂತಿರುಗುತ್ತಾರೆ. ಕೇವಲ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಕೇವಲ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ಮಾಡಿರುವ ತನಿಖೆ, ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ ಕ್ಲೀನ್ ಚಿಟ್ ಅಲ್ಲ, ಅಥವಾ ಅಕ್ರಮದ ನಿರಾಕರಣೆಯೂ ಅಲ್ಲ, ಆರೋಪ ಮಾಡಿದವರು ಅಕಾಲಿಕ ಮರಣದಿಂದಾಗಿ ಸಾಕ್ಷ್ಯಾಧಾರಗಳ ಕೊರತೆ ಉಂಟಾದ್ದರಿಂದ ಆರೋಪವನ್ನು ತನಿಖೆಯಲ್ಲಿ ಸಾಬೀತು ಮಾಡಲು ಸಾಧ್ಯವಾಗಿರುವುದಿಲ್ಲ. ಗುತ್ತಿಗೆದಾರರು ಮಾಡಿದ್ದ ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಮುಂದಾಗಲೇ ಇಲ್ಲ ಬಿಜೆಪಿ ಸರ್ಕಾರ. ಇದು ಬಿಜೆಪಿಯವರ ಜಾಣ ಕುರುಡುತನವಲ್ಲವೇ?” ಬಿಜೆಪಿ ನಾಯಕರನ್ನು ಖರ್ಗೆ ಪ್ರಶ್ನಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿನ  40% ಕಮಿಷನ್ ಆರೋಪದ ಕುರಿತ ಸಮಗ್ರ ತನಿಖೆಗಾಗಿ ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗಿದ್ದು ಪ್ರಸ್ತುತ ತನಿಖೆ ನಡೆಯುತ್ತಿದೆ, ಈ ಆಯೋಗವು ನೀಡುವ ವರದಿಯ ಆಧಾರದ ಮೇಲೆ ” ಬಿಜೆಪಿ ಸರ್ಕಾರದ 40% ಕಮಿಷನ್” ಆರೋಪದ ಕುರಿತ ಸತ್ಯಾಸತ್ಯತೆ ಹೊರಬರಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ PSI ಹಗರಣ, ಗಂಗಾಕಲ್ಯಾಣ ಹಗರಣ, KKRDB ಹಗರಣ, ಕೋವಿಡ್ ಹಗರಣ ಹಾಗೂ ಇನ್ನಿತರ ಹಗರಣಗಳು ನಡೆದಿದ್ದರೂ ಅವುಗಳನ್ನು ಬಿಜೆಪಿ ನಿರಾಕರಿಸುತ್ತಲೇ ಬಂದಿತ್ತು. ಆದರೆ ಈಗ ಅವೆಲ್ಲಾ ಹಗರಣಗಳು ನಡೆದಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗುತ್ತಿವೆ,” ಎಂದು ಹೇಳಿದ್ದಾರೆ.

ಉದಾಹರಣೆಗೆ, 545 PSI ಹಗರಣ ನಡೆದೇ ಇಲ್ಲವೆಂದು ವಾದಿಸುತ್ತಿದ್ದ ಬಿಜೆಪಿಗೆ ಈಗ ಉತ್ತರ ಸಿಕ್ಕಿದೆ. ನಮ್ಮ ಸರ್ಕಾರವು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ನ್ಯಾಯಮೂರ್ತಿ  ಮೈಕೆಲ್ ಕುನ್ಹಾ ಆಯೋಗದ ಮಧ್ಯಂತರ ವರದಿಯಲ್ಲಿ ಕೋವಿಡ್ ಅವಧಿಯಲ್ಲಿ ನಡೆದಿದ್ದ ಅಕ್ರಮ ಸಾಬೀತಾಗಿದ್ದು, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀ ರಾಮುಲುರವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಸೆಕ್ಷನ್ 7 ಹಾಗೂ ಸೆಕ್ಷನ್ 11ರ ಅಡಿ ವಿಚಾರಣೆ ನಡೆಸಬಹುದೆಂದು ವರದಿ ಸಲ್ಲಿಸಿರುತ್ತಾರೆ. KKRDB ಯಲ್ಲಿಯೂ ಸಹ ಹಗರಣ ನಡೆದೇ ಇಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದರು, ಆದರೆ ಈಗ ನಿವೃತ್ತ IAS ಅಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿನ ಅಕ್ರಮವನ್ನು ನಿರಾಕರಿಸಲಾಗಿತ್ತು, ಆದರೆ ಇಲಾಖಾ ತನಿಖೆಯಲ್ಲಿ ಆರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಬಿಜೆಪಿಗೆ ಪ್ರತ್ಯುತ್ತರ ನೀಡಿದ್ದಾರೆ.

ದಲಿತರು ರಾಜಕೀಯ ಮಾಡಬಾರದು ಎಂದು ಮನುವಾದಿಗಳಿಂದ ಬೆದರಿಕೆ ಪತ್ರ ಬಂದಿದೆ: ಪ್ರಿಯಾಂಕ್ ಖರ್ಗೆ
ದೇಶದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ, ಸಚಿವ ಮತ್ತು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಕಲಬುರಗಿ ಸಂಸದ ಉಮೇಶ್ ಜಿ ಜಾಧವ್ ವಿರುದ್ಧ ವಾಗ್ದಾಳಿ ನಡೆಸಿದ್ದು, ದಲಿತರು ರಾಜಕೀಯ ಮಾಡಬಾರದು ಎಂದು ನನಗೆ ಬೆದರಿಕೆ ಪತ್ರ ಬಂದಿದೆ ಎಂದು ಹೇಳಿದ್ದಾರೆ.

ಕಲಬುರಗಿ ಸಂಸದರು ಕಲಬುರಗಿಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂದು ಹೇಳುತ್ತಿದ್ದಾರೆ, ಕಲಬುರಗಿಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುವುದು ಎಂದರೆ ಏನು ಎಂದು ನನಗೆ ತಿಳಿದಿಲ್ಲ ಎಂದರು.
ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಇಡೀ ಸಿಬಿಐ, ಇಡಿ, ಐಟಿ ಮತ್ತು ಇಸಿ ಅವರೊಂದಿಗೆ ಇರುವಾಗ, ಅವರ ಆತಂಕ ಏನು ಎಂದು ನನಗೆ ತಿಳಿದಿಲ್ಲ” ಎಂದು ಹೇಳಿದರು.

“ಅದಕ್ಕಿಂತ ಮುಖ್ಯವಾಗಿ, ಇತ್ತೀಚೆಗೆ ಮತ್ತೊಮ್ಮೆ ನನಗೆ ‘ಮನುವಾದಿ’ಗಳಿಂದ ಬೆದರಿಕೆ ಪತ್ರ ಬಂದಿದೆ, ದಲಿತರು ಈ ರೀತಿ ಗಟ್ಟಿಯಾಗಿ ಮಾತನಾಡಬಾರದು, ದಲಿತರು ರಾಜಕೀಯಕ್ಕೆ ಬರಬಾರದು ಮತ್ತು ದಲಿತರು ಸಮಾಜದ ಮೆಟ್ಟಿಲು ಹತ್ತಬಾರದು ಮತ್ತು ನೀವು ಮಾತನಾಡುವುದನ್ನು ಮುಂದುವರಿಸಿದರೆ ನಾವು ನಿಮ್ಮನ್ನು ನೋಡಿಕೊಳ್ಳುತ್ತೇವೆ ಎಂದು ಅದರಲ್ಲಿ ಬರೆಯಲಾಗಿದೆ”ಎಂದು ಅವರು ಹೇಳಿದರು.

ಈ ನಿಟ್ಟಿನಲ್ಲಿ ಪೊಲೀಸರ ಸಹಾಯವನ್ನು ತೆಗೆದುಕೊಳ್ಳುವ ಬಗ್ಗೆ ಯೋಚಿಸಿರುವ ಅವರು ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ 2024 ಏಪ್ರಿಲ್ 19ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮತಗಳ ಎಣಿಕೆ ಜೂನ್ 4ರಂದು ನಡೆಯಲಿದೆ.

ಮಂಡ್ಯದಲ್ಲಿ ಕೋಮುವಾದದ ಪ್ರಯೋಗ ಶಾಲೆ ಆರಂಭಿಸಿರುವ ಬಿಜೆಪಿ: ಪ್ರಿಯಾಂಕ್‌ ಖರ್ಗೆ
ಬೆಂಗಳೂರು: ಇಷ್ಟು ದಿನ ಕರಾವಳಿ ಪ್ರದೇಶದಲ್ಲಿ ಬಿಜೆಪಿ ತನ್ನ ಕೋಮುವಾದದದ ಪ್ರಯೋಗಗಳನ್ನು ನಡೆಸುತ್ತಿತ್ತು. ಈಗ ಕರಾವಳಿಯ ಜೊತೆಗೆ ಮಂಡ್ಯ ಜಿಲ್ಲೆಯನ್ನೂ ಆಯ್ಕೆ ಮಾಡಿಕೊಂಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕ್ ಖರ್ಗೆ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ವಿವಾದ ಸೃಷ್ಠಿಸಿ ಕೋಮು ಸೌಹಾರ್ದ ಕೆಡಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ. ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ದೂರಿದ್ದಾರೆ.

ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ. ಆ ಸ್ಥಾನದ ಗೌರವವನ್ನು ಆರ್‌.ಅಶೋಕ್ ಮಣ್ಣುಪಾಲು ಮಾಡುತ್ತಿದ್ದಾರೆ. ಬಿವೈ ವಿಜಯೇಂದ್ರ ಅವರು ಅಶೋಕ್‌ ಅವರಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಪ್ರಿಯಾಂಕ್‌ ಅವರು, ಅವರಿಬ್ಬರಿಗೂ ಈ ಪೋಸ್ಟ್ ಮೂಲಕ ಕೆಲವು ವಿಚಾರಗಳನ್ನು ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ 29ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದರು. ಇದೇ ಜನವರಿ 17ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಸಹ ಬರೆದುಕೊಟ್ಟಿದ್ದರು. ಆದರೆ, ಮೊನ್ನೆ ಧ್ವಜಾರೋಹನ ಮಾಡುವ ವೇಳೆ ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಗವಾಧ್ವಜ ಹಾರಿಸುವ ಷಡ್ಯಂತ್ರ ನಡೆಸಲಾಗಿದೆ. ಈ ಷಡ್ಯಂತ್ರ ರೂಪಿಸಿದ್ದು ಯಾರು? ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಎಂದು ಪ್ರಿಯಾಂಕ್‌ ಪ್ರಶ್ನಿಸಿದ್ದಾರೆ.

ಈ ಷಡ್ಯಂತ್ರದ ಮೂಲಕ ಗ್ರಾಮದಲ್ಲಿ ಬಿಜೆಪಿ ಶಾಂತಿ ಕೆಡಿಸುವ ಸಂಚು ರೂಪಿಸಿದೆ. ರಾಷ್ಟ್ರದ ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್‌ಎಸ್‌ಎಸ್‌ ಹೇಳಿಕೊಟ್ಟ ಪಾಠದಂತೆ ಬಿಜೆಪಿ ನಡೆದುಕೊಳ್ಳುತ್ತಿದೆ. ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸಾಕ್ಷಿಕರಿಸಿಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ಅವೈಜ್ಞಾನಿಕ ನೀರಾವರಿ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಮಾಡಿದ ರೈತ ನಿಯೋಗ
ಬೆಂಗಳೂರು: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮಪಂಚಾಯ್ತಿಗಳ ಮಟ್ಟದಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ರೈತರ ನಿಯೋಗ ಶನಿವಾರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿತು.

ಸುಮಾರು 50ಕ್ಕೂ ಹೆಚ್ಚು ರೈತರು ಹಾಗೂ ಗ್ರಾಮಸ್ಥರನ್ನು ಒಳಗೊಂಡಿದ್ದ ನಿಯೋಗವು ಸಚಿವರಿಗೆ ತಳಮಟ್ಟದಲ್ಲಿ ನಡೆಯುತ್ತಿರುವ ವಿಚಾರಗಳನ್ನು ಗಮನಕ್ಕೆ ತಂದಿತು. ಸುಮಾರು 350 ಕೋಟಿ ವೆಚ್ಚದಲ್ಲಿ ಕೇಂದ್ರದ ‘ಜಲ ಜೀವನ ಮಿಷನ್’ ಅಡಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಹಿಂದಿನ ಸರಕಾರದ ಕೊನೆಗಳಿಗೆಯಲ್ಲಿ ಅನುಮೋದನೆ ನೀಡಿಲಾಗಿತ್ತು. ಈ ಕುರಿತು ಸ್ಥಳೀಯರಿಗೆ ಹಾಗೂ ಯೋಜನೆಯ ಫಲಾನುಭವಿಗಳಿಗೆ ಯಾವುದೇ ಮಾಹಿತಿಯೂ ನೀಡಿರಲಿಲ್ಲ. ಸ್ಥಳೀಯ ಮಟ್ಟದಲ್ಲಿ ಯೋಜನೆಯಾಗಿ ಭೂಮಿ ಮಂಜೂರಾತಿಯಾಗುತ್ತಿದ್ದಂತೆ ಎಚ್ಚೆತ್ತ ಜನ ಸಾವಿರಾರು ಸಂಖ್ಯೆಯಲ್ಲಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು. ಇದೀಗ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಭೇಟಿ ಮಾಡಿದ ನಿಯೋಗವು ಯೋಜನೆಯು ಅನುಷ್ಠಾನದ ನೆಪದಲ್ಲಿ ನಡೆಯುತ್ತಿರುವ ಬಾನಗಡಿಗಳನ್ನು ಗಮನಕ್ಕೆ ತಂದಿತು.

“ತಾವು ವಿಕೇಂದ್ರಿಕರಣದಲ್ಲಿ ನಂಬಿಕೆ ಮತ್ತು ಶ್ರದ್ಧೆಯನ್ನು ಹೊಂದಿದವರು. ಜಲ ಜೀವನ್ ಮಿಷನ್ ಮತ್ತು ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ನೆಪದಲ್ಲಿ ವಿಕೇಂದ್ರೀಕರಣದ ಕಲ್ಪನೆಯನ್ನೆ ತಿರಸ್ಕರಿಸಲಾಗಿದೆ. ಗ್ರಾಮೀಣ ಕುಡಿಯುವ ನೀರಿನ ವಿಕೇಂದ್ರಿಕರಣ ಯೋಜನೆಯು ಸದರಿ ಗ್ರಾಮಗಳ ಪ್ರಗತಿಗೆ ತೀವ್ರ ಧಕ್ಕೆ ತರಲಿದ್ದು, ಮಳೆನಾಡು ಎಂದು ಕರೆಸಿಕೊಳ್ಳುವ ಮಲೆನಾಡಿನಲ್ಲಿ ಮುಂದಿನ ದಿನಗಳಲ್ಲಿ ನೀರು ಸರಬರಾಜಿನ ವಿಚಾರದಲ್ಲಿ ತೀವ್ರ ಗೊಂದಲ ಮತ್ತು ಹಾಹಾಕಾರಗಳು ಉದ್ಭವಿಸುವುದು ಖಚಿತ,” ಎಂದು ನಿಯೋಗದ ಮುಖಂಡತ್ವ ವಹಿಸಿದ್ದ ರೈತ ನಾಯಕ ಕೋಡ್ಲು ವೆಂಕಟೇಶ್ ಸಚಿವರಿಗೆ ಮನದಟ್ಟು ಮಾಡಿಸಿದರು.

“ತೀರ್ಥಹಳ್ಳಿ ತಾಲೂಕಿನಲ್ಲಿ ತಮ್ಮ ಇಲಾಖೆ ಅಡಿಯಲ್ಲಿ ಕೈಗೆತ್ತಿಕೊಂಡಿರುವ ಮೇಲ್ಕಂಡ ಕುಡಿಯುವ ನೀರಿನ ಯೋಜನೆ ಕೇಂದ್ರೀಕರಣಕ್ಕೆ ಮಾತ್ರ ಒತ್ತುನೀಡಿದ್ದು, ಗ್ರಾಮ ಪಂಚಾಯ್ತಿಗಳ ಸ್ವಾಯತ್ಥತೆಗೆ ಧಕ್ಕೆ ತರುವ ಸ್ವರೂಪದ ಯೋಜನೆ ಆಗಿದೆ. ಇದರಿಂದಾಗಿ ಬೇಸಿಗೆ ಸಮಯದಲ್ಲಿ ಮಲೆನಾಡಿನ ಜೀವನಾಡಿಯಾದ ತುಂಗಾ ನದಿಯ ಹರಿವು ನಿಂತು ಹೋಗುವ ಸಾಧ್ಯತೆಯೂ ಇದೆ,’’ ಎಂದು ಕೋಡ್ಲು ವೆಂಕಟೇಶ್ ಆತಂಕವನ್ನು ಹಂಚಿಕೊಂಡರು.

“ಸ್ಥಳೀಯ ಆಡಳಿತ ರೈತರ ಮತ್ತು ಗ್ರಾಮಸ್ಥರ ಕಣ್ಣಿಗೆ ಮಣ್ಣೆರಚುವ ರೀತಿಯಲ್ಲಿ ನೀರಿನ ಶುದ್ಧೀಕರಣ ಘಟಕ- ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್‌(ಡಬ್ಲ್ಯೂಟಿಪಿ)ನ್ನು ಮೂಲ ಯೋಜನೆಯಲ್ಲಿ ಗುರುತಿಸಿದಂತೆ ತುಂಗಾ ನದಿ ದಡದಲ್ಲಿಯೇ ಮುಂದುವರಿಸುವ ಹಠಮಾರಿತಕ್ಕೆ ಬಿದ್ದಿದೆ. ಈ ಮೇಲಿನ ಕಾರಣಗಳಿಂದಾಗಿ, ತುಂಗಾ ನದಿಯ ಇಕ್ಕೆಲ ದಡಗಳ ನಿವಾಸಿಗಳು ಮತ್ತು ರೈತರು ಭವಿಷ್ಯದ ಆತಂಕದಲ್ಲೇ ಕಾಲಕಳೆಯುತ್ತಿದ್ದಾರೆ. ಹಾಗೆಯೇ, ಗ್ರಾಮ ಪಂಚಾಯ್ತಿಗಳು ವಿವಿಧ ಗ್ರಾಮಗಳಲ್ಲಿನ ನೀರಿನ ಮೂಲಗಳನ್ನು ಅಭಿವೃದ್ಧಿಪಡಿಸಲು ಮತ್ತು ಬಳಸಲು ವಿಫಲರಾಗುತ್ತಿದ್ದಾರೆ ಮತ್ತು ವಿಕೇಂದ್ರಿಕರಣದ ಆಶಯಗಳಿಂದ ವಿಮುಖರನ್ನಾಗಿ ಮಾಡಲಾಗುತ್ತಿದೆ,’’ ಎಂದು ಅವರು ತಿಳಿಸಿದರು.

ಮಾಧ್ಯಮಗಳ ಜತೆ ಮಾತನಾಡಿದ ರೈತ ಮುಖಂಡರು, “ತೀರ್ಥಹಳ್ಳಿಯಂಥ ಮಲೆನಾಡ ಪ್ರತಿ ಗ್ರಾಮಗಳಲ್ಲಿ ನೀರಿನ ಮೂಲಗಳು ಇದ್ಧೆ ಇವೆ. ಅವುಗಳನ್ನೇ ಅಭಿವೃದ್ಧಿಪಡಿಸಿ ಗ್ರಾಮಗಳ ಕುಡಿಯುವ ನೀರಿನ ಸ್ವಾವಲಂಬನೆಯನ್ನ ಕಾಪಾಡಬೇಕಿದೆ. ಈ ಹಿನ್ನೆಲೆಯಲ್ಲಿ ವಿಕೇಂದ್ರಿಕರಣ ವಿರೋಧಿ, ಅವೃಜ್ಞಾನಿಕ, ಭ್ರಷ್ಟತೆಯ ಗುಣಲಕ್ಷಣಗಳನ್ನು ಒಳಗೊಂಡಿರುವ ಯೋಜನೆಯನ್ನು ರದ್ದುಗೊಳಿಸಬೇಕು ಎಂದು ಸಚಿವರಲ್ಲಿ ಅವಹಾಲು ಸಲ್ಲಿಸಿದೆವು,’’ ಎಂದು ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “ರೈತರ ಅವಹಾಲವನ್ನು ಆಲಿಸಿದ್ದೇನೆ. ಅವರು ನೀರಾವರಿ ಯೋಜನೆಗೇ ವಿರೋಧ ವ್ಯಕ್ತಪಡಿಸುತ್ತಿಲ್ಲ. ಬದಲಿಗೆ ಅವೈಜ್ಞಾನಿಕ ರೀತಿಯಲ್ಲಿ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂಬುದು ಅವರ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲಿಯೇ ಅಧಿಕಾರಿಗಳು ಹಾಗೂ ರೈತರ ಸಭೆಯನ್ನು ಕರೆಯಲು ಎಸಿಎಸ್‌ಗೆ ಸೂಚಿಸಿದ್ದೇನೆ,’’ ಎಂದು ಮಾಧ್ಯಮಗಳಿಗೆ ತಿಳಿಸಿದರು.

ಇಲಾಖೆ ಮೂಲಗಳ ಪ್ರಕಾರ, ಫೆಬ್ರವರಿ 1ರಂದು ಬೆಂಗಳೂರಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತೀರ್ಥಹಳ್ಳಿ ರೈತರ ಸಭೆಯನ್ನು ಕರೆಯಲಾಗಿದ್ದು, ಜಲ ಜೀವನ ಮಿಷನ್ ಅಡಿಯಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಯೋಜನೆಯ ಹಣೆಬರಹ ತೀರ್ಮಾನವಾಗಲಿದೆ.

ಸಿಎಎ ಜಾರಿಯನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ: ಅಮಿತ್‌ ಶಾ
ನವದೆಹಲಿ: ಪೌರತ್ವ (ತಿದ್ದುಪಡಿ) ಕಾಯ್ದೆ, 2019, ದೇಶದ ಕಾನೂನು ಮತ್ತು ಅದು ಜಾರಿಯಾಗುವುದನ್ನು ಯಾರಿಗೂ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಹೇಳಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ವಿಚಾರದಲ್ಲಿ ನಾಗರಿಕರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

“ಇದು ನಮ್ಮ ಪಕ್ಷದ ಬದ್ಧತೆ” ಎಂದು ಪಶ್ಚಿಮ ಬಂಗಾಳದ ಭಾರತೀಯ ಜನತಾ ಪಕ್ಷದ ಸಾಮಾಜಿಕ ಮಾಧ್ಯಮ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಸದಸ್ಯರ ಸಭೆಯಲ್ಲಿ “ಜೈ ಸಿಯಾ ರಾಮ್” ಎಂಬ ಘೋಷಣೆಗಳ ನಡುವೆ ಶಾ ಹೇಳಿದ್ದಾರೆ. “ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಮತ್ತು ಧಾರ್ಮಿಕ ಮತಾಂತರದ ಬೆದರಿಕೆಗೆ ಒಳಗಾದ ಸಹೋದರರನ್ನು ರಕ್ಷಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ,” ಎಂದು ಹೇಳಿದ್ದಾರೆ.

ಪೌರತ್ವ ತಿದ್ದುಪಡಿ ಕಾಯಿದೆ ಡಿಸೆಂಬರ್ 11, 2019 ರಂದು ಸಂಸತ್ತಿನಲ್ಲಿ ಅಂಗೀಕಾರವಾಗಿದ್ದು, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಮುಸ್ಲಿಮರನ್ನು ಹೊರತುಪಡಿಸಿ ಆರು ಅಲ್ಪಸಂಖ್ಯಾತ ಧಾರ್ಮಿಕ ಸಮುದಾಯಗಳ ನಿರಾಶ್ರಿತರಿಗೆ ಅವರು ಆರು ವರ್ಷಗಳ ಕಾಲ ಭಾರತದಲ್ಲಿ ವಾಸಿಸುವ ಮತ್ತು ಡಿಸೆಂಬರ್‌ 31, 2014 ಒಳಗೆ ದೇಶಕ್ಕೆ ಬಂದಿರುವವರಿಗೆ ಷರತ್ತಿನ ಮೇಲೆ ಪೌರತ್ವವನ್ನು ನೀಡುತ್ತದೆ..

ಮುಸ್ಲಿಮರನ್ನು ಹೊರಗಿಡುವ ಹಿನ್ನಲೆಯಿಂದ ಈ ಕಾಯ್ದೆಯ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿ, ದೇಶಾದ್ಯಂತ ಬೃಹತ್ ಪ್ರತಿಭಟನೆಗಳು ನಡೆದವು. ರಾಷ್ಟ್ರೀಯ ನಾಗರಿಕರ ನೋಂದಣಿಯೊಂದಿಗೆ ಈ ಕಾನೂನನ್ನು ಬಳಸಿಕೊಂಡು ಕಿರುಕುಳ ನೀಡುವುದು, ಇಲ್ಲವೇ ತಮ್ಮ ಹಕ್ಕುಗಳನ್ನು ಹತ್ತಿಕ್ಕಬಹುದು ಎಂದು ಭಾರತದ ಮುಸಲ್ಮಾನ ಸಮುದಾಯ ಕಾಯಿದೆಯನ್ನು ವಿರೋಧಿಸಿತ್ತು. ರಾಷ್ಟ್ರೀಯ ನಾಗರಿಕರ ನೋಂದಣಿ ದಾಖಲೆರಹಿತ ವಲಸಿಗರನ್ನು ಪತ್ತೆ ಹಚ್ಚುವ ಉದ್ದೇಶವನ್ನು ಹೊಂದಿದೆ.

ಸಂಸತ್ತಿನ ಮಾರ್ಗಸೂಚಿಗಳು ಕಾಯ್ದೆ ಜಾರಿಗೆ ಬಂದ ಆರು ತಿಂಗಳೊಳಗೆ ಪ್ರಕಟಿಸಬೇಕು ಎಂದು ಹೇಳಿದ್ದರೂ ಪೌರತ್ವ ಕಾನೂನಿನ ನಿಯಮಗಳನ್ನು ಇನ್ನೂ ಪ್ರಕಟಿಸಲಾಗಿಲ್ಲ.

ಕಾನೂನನ್ನು ಜಾರಿಗೊಳಿಸಿದಾಗಿನಿಂದ ನಿಯಮಗಳನ್ನು ರೂಪಿಸಲು ಕೇಂದ್ರ ಗೃಹ ಸಚಿವಾಲಯ ಕನಿಷ್ಠ ಎಂಟು ಬಾರಿ ವಿಸ್ತರಣೆಗಳನ್ನು ಕೋರಿದೆ. ಆರಂಭದಲ್ಲಿ ಈ ವಿಳಂಬಕ್ಕೆ ಕೋವಿಡ್‌ ಕಾರಣವನ್ನು ನೀಡಲಾಗಿತ್ತು.

ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಶಾ ಅವರನ್ನು “ಸ್ವತಂತ್ರ ಭಾರತದ ಅತ್ಯಂತ ಅಸಮರ್ಥ ಗೃಹ ಮಂತ್ರಿ” ಎಂದು ಕರೆದಿದ್ದಾರೆ..

“ಅವರಿಗೆ ಸಿಎಎ ಬಗ್ಗೆ ಪ್ರತಿಕ್ರಿಯಿಸಲು ಮತ್ತು ಅವರ ಮಗ [ಜಯ್ ಶಾ] ಜೊತೆಗೆ ಅಹಮದಾಬಾದ್‌ನಲ್ಲಿ ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಲು ಸಮಯವಿದೆ, ಆದರೆ ಮಣಿಪುರದ ಬಗ್ಗೆ ಪ್ರತಿಕ್ರಿಯಿಸಲು ಅಥವಾ ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಸಮಯವಿಲ್ಲ?” ಎಂದು ಖರ್ಗೆ ಟೀಕಿಸಿದ್ದಾರೆ..