PRUTHVI AMBAR – Peepal Media

‘ದೂರದರ್ಶನʼದಲ್ಲಿ ಕೇಳಿ ಬಂತು ವಾಸುಕಿ ವೈಭವ್ ಚಿತ್ರಗೀತೆ: ‘ಕಣ್ಣು ಕಣ್ಣು ಕಾದಾಡುತ ಇರಲಿ’ ಸಾಂಗ್ ರಿಲೀಸ್
ಬೆಂಗಳೂರು: ಟೈಟಲ್ ಮೂಲಕ ಸಖತ್ ಸುದ್ದಿ ಮಾಡಿರುವ ದಿಯಾ ಖ್ಯಾತಿಯ ಪೃಥ್ವಿ ಅಂಬರ್ ನಾಯಕ ನಟನಾಗಿ ಅಭಿನಯಿಸಿರುವ ಚಿತ್ರ ‘ದೂರದರ್ಶನʼ ಚಿತ್ರದ ಬಹು ನಿರೀಕ್ಷಿತ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಈ ಸಿನಿಮಾ ಚಿತ್ರೀಕರಣ ಮುಗಿಸಿ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ವಿಭಿನ್ನ ಪೋಸ್ಟರ್ ಹಾಗೂ ಟೀಸರ್ ಮೂಲಕ ಎಲ್ಲರ ಗಮನ ಸೆಳೆದ ಈ ಚಿತ್ರತಂಡ ಬಿಡುಗಡೆಗೆ ಎದುರು ನೋಡುತ್ತಿದ್ದು ಪ್ರಚಾರ ಕಾರ್ಯವನ್ನು ಆರಂಭಿಸಿದೆ.

ಪ್ರಮೋದ್ ಮರವಂತೆ ಸಾಹಿತ್ಯ ಕೃಷಿಯಲ್ಲಿ ಅರಳಿರುವ ಚಿತ್ರದ ಮೊದಲ ಹಾಡು ‘ಕಣ್ಣು ಕಣ್ಣು ಕಾದಾಡುತ ಇರಲಿ’ ವೀಡಿಯೋ ಸಾಂಗ್ ಬಿಡುಗಡೆಯಾಗಿದೆ. ಸಂಗೀತ ನಿರ್ದೇಶಕ ವಾಸುಕಿ ವೈಭವ್ ಸಂಗೀತ ಸಂಯೋಜನೆ ಜೊತೆಗೆ ಈ ಹಾಡಿಗೆ ದನಿಯಾಗಿದ್ದಾರೆ. 80,90 ದಶಕದ ಪ್ರೀತಿ, ಪ್ರೇಮವನ್ನು ನೆನಪಿಸುವ ಹಾಡು ಇದಾಗಿದ್ದು, ಅದರ ಮರುಸೃಷ್ಟಿ ಮಾಡುವ ಕೆಲಸವನ್ನು ಈ ಹಾಡಿನಲ್ಲಿ ಮಾಡಲಾಗಿದೆ. ಅದಕ್ಕೆ ತಕ್ಕಂತೆ ಛಾಯಾಗ್ರಾಹಕ ಅರುಣ್ ಸುರೇಶ್ ಈ ಹಾಡನ್ನು ಸೆರೆ ಹಿಡಿದಿದ್ದು, ಬಿಡುಗಡೆಯಾದ ಕೆಲವೇ ಗಂಟೆಯಲ್ಲಿ  ಮೆಚ್ಚುಗೆ ಜೊತೆಗೆ ಒಂದು ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ‘ದೂರದರ್ಶನʼಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಇದು ಇವರ ಮೊದಲ ಸಿನಿಮಾ. ದೂರದರ್ಶನ 80, 90 ದಶಕದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ಹಳ್ಳಿಯೊಂದಕ್ಕೆ ಟಿವಿ ಎಂಟ್ರಿ ಕೊಟ್ಟಾಗ ಏನೆಲ್ಲ ಆಗುತ್ತೆ ಅನ್ನೋದು ಈ ಚಿತ್ರದ ಒನ್ ಲೈನ್ ಕಹಾನಿ. ಡ್ರಾಮಾ ಹಾಗೂ ಹ್ಯೂಮರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ ನಾಯಕಿಯಾಗಿ ನಟಿಸಿದ್ದಾರೆ.

ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಸಿನಿಮಾದಲ್ಲಿದೆ. ಚಿತ್ರೀಕರಣ ಮುಗಿಸಿ, ಡಬ್ಬಿಂಗ್ ಪೂರ್ಣಗೊಳಿಸಿರುವ ಸಿನಿಮಾ ತಂಡ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದ್ದು ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.

ಈ ಚಿತ್ರವನ್ನು ವಿ.ಎಸ್ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ.

ಫೆಬ್ರವರಿ 10 ಕ್ಕೆ ಪೃಥ್ವಿ ಅಂಬರ್ – ಮಿಲನ ನಾಗರಾಜ್ ಅಭಿನಯದ “F0R REGN” ಚಿತ್ರ ಬಿಡುಗಡೆ
ಬೆಂಗಳೂರು: ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರ 2023 ರ ಫೆಬ್ರವರಿ 10ರಂದು ಬಿಡುಗಡೆಯಾಗಲಿದೆ.

ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ಚಿತ್ರದ ಬಿಡುಗಡೆ ದಿನಾಂಕ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ. ನಿರ್ಮಾಪಕ ನವೀನ್ ರಾವ್ ಹಾಗೂ ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಪೋಷಕರು ಫಸ್ಟ್ ಲುಕ್ ಹಾಗೂ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಿದರು‌.

ಈ ವೇಳೆ ನಿರ್ದೇಶಕ ನವೀನ್ ದ್ವಾರಕನಾಥ್‌ ಮಾತನಾಡಿ, ನಾನು ಹಾಗೂ ನಿರ್ಮಾಪಕ ನವೀನ್ ರಾವ್ ಸಹಪಾಠಿಗಳು. ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದಾಗ, ನನಗೆ ಒಂದು ದಿನ ನನ್ನ ಸ್ನೇಹಿತ ನವೀನ್ ರಾವ್ ಈ ಚಿತ್ರವನ್ನು ನಿರ್ದೇಶಿಸಲು ಪ್ರೇರೇಪಿಸಿದರು. ನಂತರ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು. ಆಗ ಅವರಿಬ್ಬರ ” ದಿಯಾ” ಹಾಗೂ “ಲವ್ ಮಾಕ್ಟೇಲ್” ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗೆ ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ. ಫೆಬ್ರವರಿ ಹತ್ತರಂದು ಚಿತ್ರ ಬಿಡುಗಡೆಯಾಗುತ್ತಿದೆ. ಹೀಗಾಗಿ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾರೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ.  ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವೀನ್ ರಾವ್.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ನಾನು ತುಳು ಸಿ‌ನಿಮಾ ಒಂದನ್ನು ಆಗಷ್ಟೇ ಮುಗಿಸಿದೆ. ಮಂಗಳೂರಿನಲ್ಲಿ ನಿರ್ದೇಶಕರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ಎಲ್ಲದ್ದಕ್ಕೂ ರಿಜಿಸ್ಟ್ರೇಷನ್ ಕಡ್ಡಾಯ. ನಾವು ಪ್ರೀತಿಗೂ ರಿಜಿಸ್ಟ್ರೇಷನ್ ಕಡ್ಡಾಯವಾದರೆ ಹೇಗೆ ಎಂಬುದನ್ನು ತೋರಿಸಿದ್ದೇವೆ ಎಂದು ಹೇಳಿದರು.

ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಫೆಬ್ರವರಿ ತಿಂಗಳು ನನಗೆ ಲಕ್ಕಿ. ಈ ಚಿತ್ರ ಕೂಡ ಅದೇ ತಿಂಗಳಲ್ಲಿ ತೆರೆಗೆ ಬರುತ್ತಿರುವುದು ಮತ್ತಷ್ಟು ಖುಷಿಯಾಗಿದೆ ಎಂದರು ನಾಯಕಿ ಮಿಲನ ನಾಗರಾಜ್.

ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಂಗೀತ ನಿರ್ದೇಶಕ ಹರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ನಿರಂಜನ್ ಉಪಸ್ಥಿತರಿದ್ದರು.