Puneeth kerehalli – Peepal Media

Atrocity Case : ಪುನೀತ್ ಕೆರೆಹಳ್ಳಿ ಬಂಧನ
ಹಲವು ಗಂಭೀರ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ, ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ಹಾಗೂ ಕೊಲೆ ಆರೋಪದಲ್ಲೂ ಹೆಸರು ಕೇಳಿಬಂದ ಪುನೀತ್ ಕೆರೆಹಳ್ಳಿ ಬಂಧನವಾಗಿದೆ. ಮಹಿಳೆಯನ್ನು ತುಚ್ಛವಾಗಿ ಅವಮಾನಿಸಿ, ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿದ ಆರೋಪದ ಅಡಿಯಲ್ಲಿ ಶುಕ್ರವಾರ ರಾತ್ರಿ ವೇಳೆಗೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈಗಾಗಲೇ ಇದ್ರಿಸ್ ಪಾಷಾ ಕೊಲೆ ಆರೋಪದಲ್ಲಿ ಪುನೀತ್ ಕೆರೆಹಳ್ಳಿ ಮತ್ತು ಆತನ ಸಹಚರರು ಆರೋಪಿಯಾಗಿದ್ದು, ರಾಷ್ಟ್ರ ರಕ್ಷಣಾ ಪಡೆ ಎಂಬ ಪುಂಡರ ಗುಂಪು ಕಟ್ಟಿಕೊಂಡು, ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧಿ ಕಾರ್ಯಗಳ ಮೂಲಕವೇ ಈತ ಗುರುತಿಸಿಕೊಂಡಿದ್ದ. 2013ರಲ್ಲೇ ವೇಶ್ಯಾವಾಟಿಕೆ ಪ್ರಕರಣವೊಂದರಲ್ಲಿ ಸಿಲುಕಿ ಬಿದ್ದಿದ್ದ ಈತ ಇತ್ತೀಚೆಗೆ ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿಗೆ ತೊಡಗಿದ ಬಗ್ಗೆಯೂ ಸಾರ್ವಜನಿಕ ಆರೋಪಗಳಿವೆ. ಇತ್ತೀಚೆಗೆ ವಿಧಾನಸೌಧಕ್ಕೆ ಕಲ್ಲು ಹೊಡೆಯುವ ಮತ್ತು ಬಸ್ಸಿಗೆ ಬೆಂಕಿ ಹಚ್ಚುವ ಬೆದರಿಕೆಯನ್ನು ಹಾಕಿದ್ದರ ಕುರಿತು ಪ್ರಕರಣ ದಾಖಲಾಗಿತ್ತು.

ಸಧ್ಯಕ್ಕೆ ಮಹಿಳೆಯ ಘನತೆಗೆ ಧಕ್ಕೆ ಬರುವಂತೆ ಪೋಸ್ಟ್ ಹಾಕಿ, ಪರಿಶಿಷ್ಟ ಜಾತಿಗೆ ಸೇರಿದ ಕನ್ನಡಪರ ಹೋರಾಟಗಾರ, ದಲಿತ ಮುಖಂಡ ರಣಧೀರ ಪಡೆಯ ಹರೀಶ್ ಕುಮಾರ್ ಭೈರಪ್ಪ ಅವರ ಕುರಿತು ಕೀಳುಮಟ್ಟದ ಭಾಷೆಯಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕಿದ್ದ. ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಧ್ಯ ಈ ಪ್ರಕರಣದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹರೀಶ್ ಕುಮಾರ್ ಭೈರಪ್ಪನವರು, “ಕೊನೆಗೂ ನನ್ನ ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿ ಎನ್ನುವ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ. ನನ್ನ ಹಾಗೂ ನನ್ನ ಕುಟುಂಬದ ಮೇಲೆ ವೈಯಕ್ತಿಕ ದಾಳಿಗೆ ಇಳಿದು ತನ್ನ ಹೀನ ಮನಸ್ಥಿತಿಯನ್ನು ಪ್ರದರ್ಶನ ಮಾಡಿದ, ಸಂಘ ಪರಿವಾರದ ಮುಖಂಡ ಎಂದು ಹೇಳಿಕೊಳ್ಳುವ ವಿಕೃತ ಮನಸ್ಸಿನ ಹಿಂದೂ ಮುಖವಾಡದ ಕೊಲೆ ಆರೋಪಿ ಹಾಗೂ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಆರೋಪಿ ಸಮಾಜಘಾತಕ ಪುನೀತ್ ಕೆರೆಹಳ್ಳಿಯನ್ನು ನೆನ್ನೆಯಿಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದರು. ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೇಳಿದರು. ಪೊಲೀಸರ ಬೇಡಿಕೆ ಪುರಸ್ಕರಿಸಿದ ನ್ಯಾಯಾಧೀಶರು ಪುನೀತ್ ಕೆರೆಹಳ್ಳಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಬಂಧನ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆ
ಇದ್ರಿಷ್ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಗೋರಕ್ಷಣೆ ನೆಪದಲ್ಲಿ ಸಮಾಜದ ಶಾಂತಿಭಂಗ, ಗಲಭೆಗೆ ಪ್ರಚೋದನೆ ನೀಡುತ್ತಿದ್ದ ಪುನೀತ್ ಕೆರೆಹಳ್ಳಿ ಅಲಿಯಾಸ್ ಪುನೀತ್ ಕುಮಾರ್ ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವುದು ಅಕ್ರಮ ಎಂದು ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠದ ಮುಂದೆ ಈ ಒಂದು ಅರ್ಜಿ ಬಂದಿದ್ದು, ಆತನ ಮೇಲಿರುವ ಆರೋಪದ ಸತ್ಯಾಸತ್ಯತೆ ಬಗ್ಗೆ ತನಿಖೆ ಆಗಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರ ರಕ್ಷಣಾ ಪಡೆ ಎಂಬ ಪುಂಡರ ಗುಂಪು ಕಟ್ಟಿಕೊಂಡು, ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧಿ ಕಾರ್ಯಗಳ, ಹಾಗೂ ಹಿಂದಿನ ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು. ಅಷ್ಟೆ ಅಲ್ಲದೆ ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವುದು, ದೈಹಿಕ ಹಲ್ಲಿಯಂತಹ ಕೃತ್ಯಗಳಲ್ಲಿ ಈತ ತೊಡಗಿದ ಬಗ್ಗೆ ಗಂಭೀರ ಆರೋಪಗಳಿದ್ದವು.

ಈವರೆಗೆ ಈತನ ಮೇಲಿದ್ದ ಆರೋಪ, ದಾಖಲಾದ ಪ್ರಕರಣಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈಚ ಗಲಭೆಗೆ ಕರೆ ನೀಡುತ್ತಿದ್ದ ಪ್ರಕರಣದ ಜೊತೆಗೆ ಬಿಜೆಪಿ ಹೊರತಾದ ರಾಜಕೀಯ ಪಕ್ಷಗಳ ನಾಯಕರಿಗೆ ಏಕವಚನದಲ್ಲಿ ನಿಂಧನೆ ಮಾಡುತ್ತಿದ್ದ ಪ್ರತ್ಯಕ್ಷ ಸಾಕ್ಷ್ಯಗಳು ಈತನ ಮೇಲಿದ್ದವು.

ಇವೆಲ್ಲವುಗಳನ್ನು ಆಧರಿಸಿ ಈತನ ಮೇಲೆ ಗೂಂಡಾ ಕಾಯ್ದೆ ದಾಖಲಿಸಿ, ಆಗಸ್ಟ್ 11 ರ ಶುಕ್ರವಾರ ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಧ್ಯ ಈ ಬಂಧನ ಅಕ್ರಮ ಎಂದು ಈಗ ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲಾಗಿದೆ.

ಪುನೀತ್ ಕೆರೆಹಳ್ಳಿ ಬಂಧನ : ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು
ಇದ್ರಿಷ್ ಪಾಷಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವ, ದೇಶ ವಿರೋಧಿ ಚಟುವಟಿಕೆ, ಅಪರಾಧ ಪ್ರಕರಣ, ಕೊಲೆ ಪ್ರಕರಣ, ಕೋಮು ಸಾಮರಸ್ಯ ಕೆಡಿಸಿರುವುದನ್ನು ಆದರಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ ಬಗ್ಗೆ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಮೂಲತಃ ಹಾಸನ ಜಿಲ್ಲೆಯವನಾದ ಪುನೀತ್ ಕೆರೆಹಳ್ಳಿ ರಾಷ್ಟ್ರ ರಕ್ಷಣಾ ಪಡೆ ಎಂಬ ಪುಂಡರ ಸಂಘ ಕಟ್ಟಿಕೊಂಡು ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದನು ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

ಈತನ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್‌ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಈತನ ಮೇಲೆ ರೌಡಿಶೀಟರ್ ತೆರೆಯಲು ಸಿದ್ಧತೆ ನಡೆದಿದೆ ಎಂದು ಈ ಹಿಂದೆ ಚಾಮರಾಜಪೇಟೆ ಪೊಲೀಸರು ಮಾಹಿತಿ ನೀಡಿದ್ದರು.

ಒಂದು ತಿಂಗಳ ಹಿಂದೆಯೇ ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಈತನಿಗೆ ತಿಳಿವಳಿಕೆ ನೋಟಿಸ್‌ ಜಾರಿ ಮಾಡಿದ್ದರು. ಇದಕ್ಕೂ ಮುನ್ನ ಈತನ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಾಗೂ ಈತನ ಕಾರ್ಯ ಚಟುವಟಿಕೆಗಳನ್ನು ಕಲೆ ಹಾಕಿ ಈತನ ವಿರುದ್ಧ ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ.

ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು’ ಎಂದು ಚಿಕ್ಕ‍ಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತರು, ಪುನೀತ್‌ಗೆ ಜಾರಿಗೊಳಿಸಿರುವ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದರು.

ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧನವಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವು ಇರುವುದಿಲ್ಲ. ಪೊಲೀಸ್‌ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ದಾಖಲಾದ ಪ್ರಕರಣದ ತನಿಖೆ ಅಡಿಯಲ್ಲಿ ಗೂಂಡಾ ಕಾಯ್ದೆ ಸೂಕ್ತ ಎನಿಸಿದರೆ 1 ವರ್ಷಗಳ ಕಾಲ ಜಾಮೀನು ಕೂಡಾ ಸಿಗುವುದಿಲ್ಲ ಎಂಬ ಮಾಹಿತಿ ಕೂಡಾ ಪೊಲೀಸರು ತಿಳಿಸಿದ್ದಾರೆ.

ಕೊಲೆ ಆರೋಪಿ ಪರವಾಗಿ ಕಲಾಪ ಹಾಳುಗೆಡವಲು ಬಿಜೆಪಿ ಸದಸ್ಯರ ಪ್ರಯತ್ನ, ಸಚಿವ ಕೃಷ್ಣಬೈರೇಗೌಡ ಆಕ್ರೋಶ
ಗೋರಕ್ಷಣೆ ಹೆಸರಿನಲ್ಲಿ ಕೊಲೆ, ಹಲ್ಲೆ, ಶಾಂತಿಗೆ ಧಕ್ಕೆ, ಜೀವ ಬೆದರಿಕೆ, ದೊಂಬಿ ಪ್ರಕರಣಗಳಲ್ಲಿ ಭಾಗಿಯಾಗಿರುವ ಪುಡಿರೌಡಿ ಹಾಗೂ ಇದ್ರಿಷ್ ಪಾಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಪರವಾಗಿ ಬಿಜೆಪಿ ನಾಯಕರು ಸದನದ ಕಲಾಪ ಹಾಳುಗೆಡವಲು ಪ್ರಯತ್ನಿಸಿದ ಪ್ರಸಂಗಕ್ಕೆ ಈ ದಿನದ ವಿಧಾನ ಪರಿಷತ್ ಕಲಾಪ ಸಾಕ್ಷಿಯಾಯಿತು.

ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಗೆ ಉಪ್ಪಾರಪೇಟೆ ಪೊಲೀಸ್ ಠಾಣಾ ಅಧಿಕಾರಿಗಳು ಇತ್ತೀಚೆಗೆ ನೋಟೀಸ್ ಜಾರಿ ಮಾಡಿ, ‘ಮೆಜೆಸ್ಟಿಕ್ ಬಳಿ ಇರುವ ನಾಗರ ಕಟ್ಟೆಗೆ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯುವಂತೆ’ ಸೂಚಿಸಲಾಗಿತ್ತು.

ಆತನಿಗೆ ನೋಟಿಸ್ ಜಾರಿ ಮಾಡಿದ್ದರ ಬಗ್ಗೆ ಹಾಗೂ ಆತನಿಗೆ ಪೂಜಾ ಕಾರ್ಯಕ್ರಮದಲ್ಲಿ ಭಾಗಿ ಆಗಲು ಅನುಮತಿ ನೀಡಬೇಕು ಎಂದು ಬಿಜೆಪಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದ್ದಾರೆ.

ಬುಧವಾರ ವಿಧಾನ ಪರಿಷತ್ ಶೂನ್ಯ ವೇಳೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕರು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಪ್ರಕರಣ ಬಗ್ಗೆ ಪ್ರಸ್ತಾಪಿಸಿದ್ದರು. ಅಲ್ಲದೆ, “ಪುನೀತ್ ಕೆರೆಹಳ್ಳಿ ಹಿಂದೂ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಪಡೆಯಬೇಕೆ?” ಎಂದು ಆಕ್ರೋಶ ಹೊರಹಾಕಿದರು. ಹಾಗೆಯೇ ಸರ್ಕಾರ ಇದಕ್ಕೆ ಉತ್ತರಿಸಬೇಕು ಎಂದು ಪಟ್ಟು ಹಿಡಿದರು.

ಈ ವೇಳೆ ಸರ್ಕಾರದ ಪರವಾಗಿ ಉತ್ತರ ನೀಡಲು ಮುಂದಾದ ಸಚಿವ ಕೃಷ್ಣಭೈರೇಗೌಡ ಅವರು, “ಈ ಪ್ರಕರಣದ ಬಗ್ಗೆ ಮಾಹಿತಿ ಇಲ್ಲ.‌ ಸಂಬಂಧಿಸಿ ಅಧಿಕಾರಿಯಿಂದ ಮಾಹಿತಿ ಪಡೆದು ಎರಡು ದಿನಗಳಲ್ಲಿ ಸದನಕ್ಕೆ ಉತ್ತರ ನೀಡಲಾಗುವುದು” ಎಂದು ಸ್ಪಷ್ಟೀಕರಣ ನೀಡಿದರು.

ಆದರೆ ಇಷ್ಟಕ್ಕೆ ಸುಮ್ಮನಾಗದ ವಿರೋಧ ಪಕ್ಷದ ನಾಯಕರು ಈಗಲೇ ನಮಗೆ ಉತ್ತರ ಬೇಕು‌ ಎಂದು ಪಟ್ಟುಹಿಡಿದರು. ಈ ವೇಳೆ ಸದನದ ನೀತಿ ನಿಯಮಗಳನ್ನು ಉಲ್ಲೇಖಿಸಿದ ಕೃಷ್ಣಭೈರೇಗೌಡ ” ಸದನದ ನಿಯಮ 51ಡಿ ಪ್ರಕಾರ ವಿರೋಧ ಪಕ್ಷದ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಎರಡು ದಿನಗಳ ಅವಕಾಶ ಇದೆ. ವಿರೋಧ ಪಕ್ಷದ ನಾಯಕರು ದಯವಿಟ್ಟು ನಿಯಮಗಳ ಅನುಸಾರ ಕಲಾಪ ನಡೆಸಲು ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸಭಾಪತಿಗಳಾದ ಬಸವರಾಜ ಹೊರಟ್ಟಿ ಸಹ ಸಚಿವ ಕೃಷ್ಣಭೈರೇಗೌಡ ಅವರ ಮಾತಿಗೆ ದನಿಗೂಡಿಸಿದರು. ಬಿಜೆಪಿಗರು ಗದ್ದಲ ಎಬ್ಬಿಸಿ ಸದನದ ಕಲಾಪಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಿದರು.

ಸಭಾಪತಿಗಳ ಮಾತಿಗೂ ಕಿವಿಗೊಡದ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಸಚಿವರು ಈಗಲೇ ಉತ್ತರ ನೀಡಬೇಕು ಎಂದು ಪಟ್ಟುಹಿಡಿದರು. ಸದನದಲ್ಲಿ ಗದ್ದಲ ಉಂಟಾಗಿತ್ತು.

ಈ ವೇಳೆ ವಿರೋಧ ಪಕ್ಷದ ಸದಸ್ಯರ ವರ್ತನೆಯ ವಿರುದ್ಧ ಕಿಡಿಕಾರಿದ ಸಚಿವ ಕೃಷ್ಣಭೈರೇಗೌಡ, ” ನಿಮಯದ ಅನುಸಾರ ಎರಡು ದಿನಗಳಲ್ಲಿ ಉತ್ತರ ನೀಡುವುದಾಗಿ ಹೇಳಿದರೂ ವಿರೋಧ ಪಕ್ಷದ ನಾಯಕರು ಉದ್ದೇಶಪೂರ್ವಕವಾಗಿ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಮತ್ತು ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ ಸಮಯ ವ್ಯರ್ಥ ಮಾಡುವುದೊಂದೆ ಬಿಜೆಪಿ ನಾಯಕರ ಕೆಲಸ ಎಂದು ಸಚಿವ ಕೃಷ್ಣಭೈರೇಗೌಡ ಕಿಡಿಕಾರಿದರು.

ಮುಂದುವರಿದು “ಇವರಿಗೆ ಸದನ ನಡೆಯುವುದು ಅಗತ್ಯವಿಲ್ಲ. ರಾಜ್ಯವನ್ನು ಲೂಟಿ ಮಾಡುವುದು, ಜನರಿಗೆ ಅನ್ಯಾಯ ಮಾಡುವುದೊಂದೇ ಇವರ ಗುರಿ. ಇವರು ಏನೇ ಗದ್ದಲ ಎಬ್ಬಿಸಿದರು ಸತ್ಯವೇನು? ಎಂಬುದು ಜನರಿಗೆ ಗೊತ್ತು” ಎಂದು ವಾಗ್ದಾಳಿ ನಡೆಸಿದರು.