r ashok – Peepal Media

ಮಳೆ ಹಾನಿ ಸರ್ಕಾರ ಗಾಢ ನಿದ್ರೆಯಲ್ಲಿದೆ ಯಾವುದೇ ಮಂತ್ರಿಗಳು ಇಲ್ಲಿಗೆ ಭೇಟಿ ನೀಡಿಲ್ಲ ಆರ್‌ ಆಶೋಕ್‌ ಗರಂ
ಹಾಸನ:ಮಳೆ ಹಾನಿ ಹಾಗೂ ಭೂಕುಸಿತದಿಂದ ತತ್ತರಿಸಿರುವ ಸಕಲೇಶಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ವಿಪಕ್ಷ ನಾಯಕ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರದ ನಿರ್ಲಕ್ಷ್ಯ ನಡೆ ಅನುಸರಿಸುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.“ಸರ್ಕಾರ ಗಾಢ ನಿದ್ರೆಯಲ್ಲಿದೆ. ಯಾವುದೇ ಮಂತ್ರಿಗಳು ಇಲ್ಲಿಗೆ ಭೇಟಿ ನೀಡಿಲ್ಲ. ವಿರೋಧ ಪಕ್ಷಕ್ಕೂ ಮೊದಲು ಜಿಲ್ಲಾ ಉಸ್ತುವಾರಿ ಮಂತ್ರಿಯೋ, ಕಾರ್ಯದರ್ಶಿಯೋ ಬರಬೇಕಿತ್ತು. ಗಂಜಿಕೇಂದ್ರ ತೆರೆದು ಸಂತ್ರಸ್ತರಿಗೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಆದರೆ ಸರ್ಕಾರಕ್ಕೆ ಇಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಳೆಗಾಲಕ್ಕೂ ಮುನ್ನವೇ ಪರಿಹಾರ ಕ್ರಮಗಳನ್ನು ಘೋಷಿಸಬೇಕಿತ್ತು. ಆದರೆ, ಸರ್ಕಾರದ ಖಜಾನೆ ಖಾಲಿಯಾಗಿದ್ದು, ಯಾವುದೇ ಕೆಲಸ ಆಗುತ್ತಿಲ್ಲ. ಮನೆ ಕಳೆದುಕೊಂಡವರಿಗೆ ತಕ್ಷಣವೇ 5 ಲಕ್ಷ ರೂ. ಪರಿಹಾರ ಘೋಷಿಸಬೇಕು. ಕಾಳಜಿ ಕೇಂದ್ರಗಳನ್ನು ತೆರೆಯಬೇಕು,” ಎಂದು ಆರ್. ಅಶೋಕ್ ಆಗ್ರಹಿಸಿದರು.ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಬಳಿ ಧನಸಹಾಯ ಕೋರದಿರುವುದನ್ನು ಖಂಡಿಸಿದ ಅವರು, “ನೀತಿ ಆಯೋಗಕ್ಕೆ ಹೋಗಿ ಕರ್ನಾಟಕಕ್ಕೆ ಸಮಪಾಲು ಕೇಳಬೇಕಿತ್ತು. ಆದರೆ, ಸರ್ಕಾರ ಕ್ರಿಕೆಟ್ ಮ್ಯಾಚ್ ನೋಡುವುದರಲ್ಲೇ ಕಾಲ ಕಳೆಯುತ್ತಿದೆ. ಇದು ಕರ್ನಾಟಕದ ಜನತೆಗೆ, ರೈತರಿಗೆ, ಬಡವರಿಗೆ ಆಗಿರುವ ದೊಡ್ಡ ದ್ರೋಹ,” ಎಂದು ಕಿಡಿಕಾರಿದರು.

ಜನರ ಆಕ್ರೋಶ ಎದುರಿಸಬೇಕಾಗುತ್ತದೆ: ಮಂಗಳೂರು, ರಾಯಚೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಿಂದ ಉಂಟಾದ ಸಮಸ್ಯೆಗಳಿಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬೆಂಗಳೂರು ಮುಳುಗಿಹೋಗುತ್ತಿದೆ, ಆದರೆ ಸರ್ಕಾರ ಒಂದು ನಯಾಪೈಸೆ ಬಿಡುಗಡೆ ಮಾಡಿಲ್ಲ,” ಎಂದು ಆರ್. ಅಶೋಕ್ ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಜನತೆ ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ. “ಇನ್ನಾದರೂ ಸರ್ಕಾರ ಮಾನ-ಮರ್ಯಾದೆ ಇಟ್ಟುಕೊಂಡು ಕೆಲಸ ಮಾಡಲಿ,” ಎಂದು ವಾಗ್ದಾಳಿ ನಡೆಸಿದರು.

ನಾನು ಹೆದರಲ್ಲ, ರಾಜೀನಾಮೆ ನೀಡಲ್ಲ: BJP-JDS ಗೆ ಸವಾಲೆಸೆದ ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಸೆ24: ನಾನು ಹೆದರಲ್ಲ: ರಾಜೀನಾಮೆ ನೀಡಲ್ಲ. ನಾನು ಹೋರಾಟದಿಂದ ಬಂದವನು. ನಿಮ್ಮ ಷಡ್ಯಂತ್ರವನ್ನು ಸೋಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು BJP-JDS ಗೆ ನೇರ ಎಚ್ಚರಿಕೆ ನೀಡಿದರು.

ಯಲಹಂಕದ ರಾಜ್ಯದ ಪ್ರಪಥಮ ನೈಸರ್ಗಿಕ ಅನಿಲ ಆಧಾರಿತ 370 ಮೆ.ವ್ಯಾ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಾನು ರಾಜೀನಾಮೆ ಕೊಡ್ತೀನಿ ಅಂತ ಕಾಯ್ಕೊಂಡು ಕೂತಿದ್ದೀರಾ? ಯಾವ ತಪ್ಪನ್ನೂ ಮಾಡದ ನನ್ನನ್ನು ಷಡ್ಯಂತ್ರದಿಂದ ಇಳಿಸಲು ನೋಡುತ್ತಿದ್ದೀರ. ಇದು ಅಸಾಧ್ಯ. ನಾನು ಹೋರಾಟ ರಾಜಕಾರಣದಿಂದ ಬಂದವನು. ನಿಮ್ಮನ್ನು ರಾಜಕೀಯವಾಗಿ ಎದುರಿಗೆ ಗೆಲ್ತೀನಿ. ನಿಮ್ಮ ಷಡ್ಯಂತ್ರ ಸೋಲಿಸ್ತೀನಿ ಎಂದು ಬಹಿರಂಗವಾಗಿ ತೊಡೆತಟ್ಟಿದರು.

ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ಆಗಿದ್ದೇವೆ

ರಾಜ್ಯದ ಆರ್ಥಿಕ-ಸಾಮಾಜಿಕ ಪ್ರಗತಿಗೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಬೇಕು. ಕೃಷಿ, ಕೈಗಾರಿಕೆ ಬೆಳವಣಿಗೆ ಆದರೆ ಮಾತ್ರ GDP ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೃಷಿ ಮತ್ತು ಕೈಗಾರಿಕೆ ಹಾಗೂ ವಸತಿಗೆ ಅಪಾರ ಪ್ರಮಾಣದ ವಿದ್ಯುತ್ ಅಗತ್ಯ. ಕೃಷಿ, ಕೈಗಾರಿಕೆ ಅಭಿವೃದ್ಧಿಯಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯೋಗದಿಂದ ಜಿಡಿಪಿ ಪ್ರಗತಿಯಾಗುತ್ತದೆ. ಆದ್ದರಿಂದ ನಾವು ವಿದ್ಯುತ್ ಉತ್ಪಾದನೆಯಲ್ಲಿ ಸಂಪೂರ್ಣ ಸ್ವಾವಲಂಬಿಗಳಾಗುವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ. ಅದರ ಭಾಗವಾಗಿಯೇ ಈ ವಿದ್ಯುತ್ ಉತ್ಪಾದನಾ ತಯಾರಿಕಾ ಘಟಕ ಲೋಕಾರ್ಪಣೆ ಮಾಡಿದ್ದೇನೆ ಎಂದರು.

1500 ಮೌಲ್ಯದ ಕೋಟಿ ವಿದ್ಯುತ್ ಅನ್ನು ನಾವು ಹೊರಗಡೆಗೆ ಮಾರಾಟ ಮಾಡಿದ್ದೇವೆ. ಕಳೆದ ವರ್ಷ ಮಳೆ ಬರಲಿಲ್ಲ. ಬರಗಾಲ ಇತ್ತು. ಬರಗಾಲದಲ್ಲೂ ಕೂಡ ನಾವು ಅಗತ್ಯ ವಿದ್ಯುತ್ ಪೂರೈಸಿದೆವು.

2030 ಕ್ಕೆ 60000 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಇದೆ. ಇದನ್ನು ನಾನು ಬಜೆಟ್ ನಲ್ಲೇ ಘೋಷಿಸಿದ್ದೇನೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬಳಕೆ, ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವಾಗಿ ನಾವು ಉತ್ಪಾದನೆ ಹೆಚ್ಚಿಸಿ ಸ್ವಾವಲಂಬಿ ಆಗಿದ್ದೇವೆ. ನಾವು ಹೊರಗಡೆಗೆ ವಿದ್ಯುತ್ ಮಾರಾಟ ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ ಎಂದರು.

ಯಲಹಂಕದ ವಿದ್ಯುತ್ ಸ್ಥಾವರಕ್ಕೆ ನಾವೇ ನಮ್ಮ ಸರ್ಕಾರದಲ್ಲೇ ಶಂಕು ಸ್ಥಾಪನೆ ಮಾಡಿದ್ದೆವು. ಈಗ ನಮ್ಮದೇ ಸರ್ಕಾರ ಇದನ್ನು ಲೋಕಾರ್ಪಣೆ ಕೂಡ ಮಾಡಿದ್ದೇವೆ.

ಬೋನಸ್ ಘೋಷಣೆ

ಯಲಹಂಕ ವಿದ್ಯುತ್ ಸ್ಥಾವರದ ಆರಂಭಕ್ಕೆ ಶ್ರಮಿಸಿದ ಎಲ್ಲಾ ಕಾರ್ಮಿಕರಿಗೆ 5000 ರೂಪಾಯಿ ಬೋನಸ್ ಅನ್ನು ಇದೇ ಸಂದರ್ಭದಲ್ಲಿ ಸಿಎಂ ಘೋಷಿಸಿದರು.

ವಿದ್ಯುತ್ ಸ್ಥಾವರದ ಶಬ್ದ ಸಂಪೂರ್ಣ ಕಡಿಮೆ ಮಾಡಲು ಶ್ರಮಿಸುತ್ತಿದ್ದೇವೆ.

ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈಶ್ವರಪ್ಪ ಪ್ರಚಾರಕ್ಕೆ ಪ್ರಧಾನಿ ಮೋದಿ ಚಿತ್ರ ಬಳಸುವಂತಿಲ್ಲ: ಆರ್ ಅಶೋಕ್
ಬೆಂಗಳೂರು, ಏಪ್ರಿಲ್ 6: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಶನಿವಾರ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದ ಬಂಡಾಯ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳುವಂತಿಲ್ಲ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ, ಈಶ್ವರಪ್ಪ ಅವರು ಪ್ರಧಾನಿ ಮೋದಿ ಅವರ ಛಾಯಾಚಿತ್ರ ಬಳಸುವಂತಿಲ್ಲ, ಬಳಸಿದರೆ ತಪ್ಪು, ಸರ್ಕಾರಿ ಕಾರ್ಯಕ್ರಮವಾದರೆ ಅವರ ಛಾಯಾಚಿತ್ರ ಬಳಸಬಹುದು ಆದರೆ, ಚುನಾವಣೆ ಸಂದರ್ಭದಲ್ಲಿ ಬಳಸುವಂತಿಲ್ಲ ಎಂದರು.

ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದರು.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಬಳಸಿದ ವಿಚಾರದಲ್ಲಿ ಈಶ್ವರಪ್ಪ ಅವರು ಜಿಲ್ಲಾ ನ್ಯಾಯಾಲಯದಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರ ಬರ ಘೋಷಣೆ ಮಾಡಲು ಮೂರು ತಿಂಗಳು ಬೇಕಾಯಿತು, ಬರ ಪರಿಹಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ರಾಜ್ಯ ಸರ್ಕಾರ ವಿಳಂಬ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರಿಯಾಗಿ ಹೇಳಿದ್ದಾರೆ, ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ ಮತ್ತು ರಾಜೀನಾಮೆ ನೀಡಬೇಕು.

“ಯುಪಿಎ ಸರ್ಕಾರವು 2004 ಮತ್ತು 2014 ರ ನಡುವೆ ರಾಜ್ಯಕ್ಕೆ 81,795 ಕೋಟಿ ರೂಪಾಯಿಗಳನ್ನು ಅಧಿಕಾರ ವಿಕೇಂದ್ರೀಕರಣ ತೆರಿಗೆಯಲ್ಲಿ ನೀಡಿದೆ. 2014 ಮತ್ತು 2024ರ ನಡುವೆ, ಪಿಎಂ ಮೋದಿ ನೇತೃತ್ವದ ಸರ್ಕಾರವು 2,82,791 ಕೋಟಿ ರೂಪಾಯಿಗಳನ್ನು ನೀಡಿದೆ” ಎಂದು ಬಿಜೆಪಿ ನಾಯಕ ಹೇಳಿದರು.

ಮುಲ್ಲಾಗಳಿಗೆ ಹಣ ಕೊಡ್ತಿರ, ರೈತರಿಗೆ ಯಾಕೆ ಕೊಡಲ್ಲ: ಸಿದ್ದರಾಮಯ್ಯಗೆ ಆರ್‌. ಅಶೋಕ್‌ ಪ್ರಶ್ನೆ
ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಮುಲ್ಲಾಗಳಿಗೆ ಕೊಡಲು ದುಡ್ಡಿದೆ. ಆದರೆ, ರೈತರಿಗೆ ಕೊಡಲು ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಪಕ್ಷದ ವತಿಯಿಂದ ನಡೆದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರು ಸಂಕಷ್ಟದಲ್ಲಿದ್ದರೆ ಮಜಾ ಮಾಡಲು ಕಾಂಗ್ರೆಸ್‌ನವರು ದೆಹಲಿಗೆ ಹೋಗಿದ್ದಾರೆ. ಅವರ ದೆಹಲಿ ಪ್ರವಾಸದಿಂದ ವಿಧಾನಸೌಧ ಖಾಲಿಯಾಗಿದೆ ಎಂದು ಆರೋಪಿಸಿದರು.
ಬೆಂಗಳೂರಿಗೆ ಕಾವೇರಿ ನೀರಿನ ಪೂರೈಕೆಯಲ್ಲಿ ಶೇ 30ರಷ್ಟು ಕಡಿತ ಮಾಡಲಾಗಿದೆ. ಹೀಗಾಗಿ ನಮಗೆ ನೀರಿನ ಕೊರತೆಯಾಗಿದೆ’ ಎಂದರು.

ಈ ಸರ್ಕಾರದಲ್ಲಿ ಮುಲ್ಲಾಗಳಿಗೆ ₹10 ಸಾವಿರ ಕೋಟಿ ಕೊಡಲು ಹಣ ಇದೆ. ಆದರೆ, ರೈತರಿಗೆ ಕೊಡಲು ಹಣ ಇಲ್ಲ. ಭಾಗ್ಯಗಳ ಸರ್ಕಾರದಿಂದ ರೈತರಿಗೆ ಆತ್ಮಹತ್ಯೆ ಭಾಗ್ಯ ಸಿಕ್ಕಿದೆ. ಕಿಸಾನ್ ಸಮ್ಮಾನ್ಗೆ ರಾಜ್ಯದಿಂದ ಹಣ ಸೇರಿಸಿ ಕೊಡಲಾಗುತ್ತಿತ್ತು. ಅದನ್ನೂ ಕಿತ್ತುಕೊಂಡಿದ್ದಾರೆ. ರೈತ ವಿದ್ಯಾನಿಧಿಯನ್ನೂ ಹಾಳು ಮಾಡಿದರು’ ಎಂದು ದೂರಿದರು.

‘ಐದು ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದು, ಆಗೊಂದು ಈಗೊಂದು ಗ್ಯಾರಂಟಿ ಜಾರಿಗೆ ತಂದಿದ್ದಾರೆ. ಆ ಮೂಲಕ, ರಾಜ್ಯದ ಜನರಿಗೆ ನಾಮ ಹಾಕುತ್ತಿದ್ದಾರೆ. 80 ಜನರಿಗೆ ಸಂಪುಟ ದರ್ಜೆ ನೀಡಿ ನಿಯಮ ಉಲ್ಲಂಘಿಸಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆ ನಿರಂತರವಾಗಿದೆ. ವಿಧಾನಸೌಧ. ವಿಕಾಸಸೌಧ ಜನರೇಟರ್ನಿಂದ ನಡೆಯುತ್ತಿರಬೇಕು ಅನ್ನಿಸುತ್ತಿದೆ. ಕೈಗಾರಿಕೆಗಳಿಗೂ ವಿದ್ಯುತ್ ಇಲ್ಲ. ಚಾತಕ ಪಕ್ಷಿಯಂತೆ ಅನುದಾನಕ್ಕಾಗಿ ಶಾಸಕರು ಕಾದು ಕುಳಿತಿದ್ದಾರೆ. ಸಿದ್ದರಾಮಯ್ಯ ನಾಳೆ ಬಾ ಎನ್ನುವ ಫಲಕ ಹಾಕಿಕೊಂಡು ಕುಳಿತಿದ್ದಾರೆ’ ಎಂದು ಕಿಡಿಕಾರಿದರು.

ಬಸವರಾಜ ಬೊಮ್ಮಾಯಿ ಮಾತನಾಡಿ, ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ತಮ್ಮ ತತ್ವ ಆದರ್ಶಗಳನ್ನು ಗಾಳಿಗೆ ತೂರಿದ್ದಾರೆ. ಸ್ವಾರ್ಥ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ. ಕಾವೇರಿ, ಮಹದಾಯಿ ವಿಚಾರದಲ್ಲಿ ಎಡವಟ್ಟು ಮಾಡಲಾಗಿದೆ. ಯಾವ ನೈತಿಕತೆ, ಯಾವ ಮುಖ ಇಟ್ಟುಕೊಂಡು ದೆಹಲಿಯಲ್ಲಿ ಧರಣಿ ಮಾಡುತ್ತಿದ್ದೀರಿ’ ಎಂದು ಆರೋಪಿಸಿದರು.
‘ಮನಮೋಹನ್ ಸಿಂಗ್ ಸರ್ಕಾರ ಮತ್ತು ಮೋದಿ ಸರ್ಕಾರದ ಅವಧಿಯ ಅನುದಾನ ಬಿಡುಗಡೆ ವಿಚಾರವನ್ನು ದೈರ್ಯವಿದ್ದರೆ ಬಹಿರಂಗಪಡಿಸಿ. ಆಗ ಎಲ್ಲವೂ ಗೊತ್ತಾಗಲಿದೆ. 2014-2024ರವರೆಗೆ ₹ 2 ಲಕ್ಷ ಕೋಟಿ ಹೆಚ್ಚು ಅನುದಾನ ಮೋದಿ ಸರ್ಕಾರದಲ್ಲಿ ಬಂದಿದೆ. ಶೇ 30 ಇದ್ದ ತೆರಿಗೆ ವಾಪಸಾತಿಯನ್ನು ಮೋದಿ ಸರ್ಕಾರ ಶೇ 40ಕ್ಕೆ ಹೆಚ್ಚಿಸಿದ್ದಾರೆ. ಅನುದಾನ ಕೇಂದ್ರ ನಿರ್ಧಾರ ಮಾಡುವುದಿಲ್ಲ. ಅದನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ. ಅನುದಾನ ಕಡಿತಕ್ಕೆ ಸಿದ್ದರಾಮಯ್ಯ ಕಾರಣವೇ ಹೊರತು ಮೋದಿ ಸರ್ಕಾರ ಅಲ್ಲ’ ಎಂದು ದೂರಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಕಾರರರು ಘೋಷಣೆ ಕೂಗಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.

ಕಾಂಗ್ರೆಸ್ ಬಿಗ್ ಆಪರೇಷನ್ : ಆರ್ ಅಶೋಕ್ ಕೈತಪ್ಪಲಿರುವ ಪದ್ಮನಾಭನಗರ ; ‘ಲೋಕ’ ಸಮರಕ್ಕೆ ಬಿಜೆಪಿಗೆ ದೊಡ್ಡ ಖೆಡ್ಡಾ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದ ಬಿಜೆಪಿ ಪಕ್ಷಕ್ಕೆ ಅತಂತ್ರ ಸ್ಥಿತಿ ಎದುರಾಗಿದೆ. ಪಕ್ಷಕ್ಕೆ ಬರುವವವರಿಗಿಂತ ಪಕ್ಷದಿಂದ ದಂಡು ದಂಡಾಗಿಯೇ ಕಾಲ್ಕೀಳುವವರ ಸಂಖ್ಯೆಯೇ ಜಾಸ್ತಿಯಾಗಿದೆ. ಸಧ್ಯ ಈಗ ಬಿಜೆಪಿ ಪಕ್ಷದ ಭದ್ರಕೋಟೆಯಂತಿದ್ದ, ಆರ್.ಅಶೋಕ್ ‘ಸಾಮ್ರಾಟ’ನಂತೆ ಮೆರೆಯುತ್ತಿದ್ದ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಘಟಕದ ಆಧಾರ ಸ್ಥಂಭಗಳೇ ಈಗ ಕಾಂಗ್ರೆಸ್ ಸೇರ್ಪಡೆಯಾಗಲು ಹೊರಟಿದ್ದಾರೆ.

ಪದ್ಮನಾಭನಗರ ಬಿಜೆಪಿ ಅಸಲಿ ಕಥೆ ಇದು
ಬಿಜೆಪಿ ಪಕ್ಷದಲ್ಲಿ ಆರ್.ಅಶೋಕ್ ‘ಸಾಮ್ರಾಟ’ ಎಂಬ ಬಿರುದು ಪಡೆದುಕೊಂಡರೂ ಪದ್ಮನಾಭನಗರ ಮಾತ್ರ ನೇರವಾಗಿ ಆರ್.ಅಶೋಕ್ ಹಿಡಿತದಲ್ಲಿ ಇಲ್ಲ ಎಂಬುದು ಸ್ಪಷ್ಟ. ಯಾಕೆಂದರೆ ಇಲ್ಲಿ ವಾರ್ಡ್ ಮತ್ತು ವಿಧಾನಸಭಾ ಕ್ಷೇತ್ರದ ಮಟ್ಟದಲ್ಲಿ ಪ್ರತಿಯೊಬ್ಬ ಮುಖಂಡರೂ ತನ್ನದೇ ಆದ ವಯಕ್ತಿಕ ಹಿಡಿತ ಇಟ್ಟುಕೊಂಡವರೇ ಆಗಿದ್ದಾರೆ.

ಒಕ್ಕಲಿಗರ ಪ್ರಾಬಲ್ಯವೇ ಹೆಚ್ಚಿರುವ ಪದ್ಮನಾಭನಗರದ ಪ್ರಮುಖ ಬಿಜೆಪಿ ಮುಖಂಡ, ಆರ್.ಅಶೋಕ್ ಬಂಟನಂತಿದ್ದ ಎಲ್.ಶ್ರೀನಿವಾಸ್ ವಯಕ್ತಿಕವಾಗಿ ಪ್ರಭಾವಿ ನಾಯಕ‌. ಅವರ ರಾಜಕೀಯ ಬೆಳವಣಿಗೆ ಹಿಂದೆ ಯಾವ ಬಿಜೆಪಿ ನಾಯಕರ ಕೊಡುಗೆಯೂ ಇಲ್ಲ ಎಂಬುದು ಸ್ಪಷ್ಟ. ಅಷ್ಟೆ ಅಲ್ಲದೆ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರು ಹಾಗೂ ಬಿಬಿಎಂಪಿ ಉಪ ಮೇಯರ್ ಕೂಡಾ ಆಗಿದ್ದಂತಹ ಎಲ್.ಶ್ರೀನಿವಾಸ್ ಅವರದ್ದು ಪದ್ಮನಾಭನಗರದಲ್ಲಿ ವಿಶೇಷವಾದ ಪ್ರಭಾವವಿದೆ. ಇಂತಹ ಪ್ರಭಾವಿ ನಾಯಕ ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಎಲ್.ಶ್ರೀನಿವಾಸ್ ಜೊತೆ ಜೊತೆಗೇ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಇನ್ನೊಬ್ಬ ಪ್ರಭಾವಿ ಜೆಡಿಎಸ್ ಮುಖಂಡರೆಂದರೆ ಕಬಡ್ಡಿ ಬಾಬು ಎಂದೇ ಜನಪ್ರಿಯರಾದ ಪ್ರಸಾದ್ ಬಾಬು. ಇವರೂ ಸಹ ಸ್ಥಳೀಯ ಮಟ್ಟದಲ್ಲಿ ಜೆಡಿಎಸ್ ಪಕ್ಷದ ವಲಯದಲ್ಲಿ ಪ್ರಭಾವಿ ನಾಯಕರೆನಿಸಿಕೊಂಡವರು. ವಯಕ್ತಿಕವವಾಗಿ ಆರ್.ಅಶೋಕ್ ಗೆ ಕಬಡ್ಡಿ ಬಾಬು ಕಾಂಗ್ರೆಸ್ ಸೇರ್ಪಡೆ ಅಷ್ಟು ಹೊಡೆತ ಅಲ್ಲದಿದ್ದರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚಲು ದೊಡ್ಡ ಕೊಡುಗೆ ಸಿಗಲಿದೆ. ಇದೂ ಸಹ ಬಿಜೆಪಿಗೆ ಪರೋಕ್ಷವಾಗಿ ದುಷ್ಪರಿಣಾಮ ಬೀರುವ ಸೇರ್ಪಡೆಯಾಗಿದೆ.

ಇವರ ಜೊತೆ ಜೊತೆಗೆ ಬಿಜೆಪಿ ಮುಖಂಡರಾದ ಅಂಜನಪ್ಪ, ಶೋಭಾ ಅಂಜನಪ್ಪ, ಕುಮಾರಸ್ವಾಮಿ ಲೇಔಟ್ ನ ಹೆಚ್.ಸುರೇಶ್, ಗಣೇಶ ಮಂದಿರ ವಾರ್ಡ್ ನ ಗೋವಿಂದರಾಜ್, ಪದ್ಮನಾಭನಗರದ ಯುವ ಮುಖಂಡ ಭರತ್, ರಂಗರಾಮೇಗೌಡ, ಚಿಕ್ಕಲಸಂದ್ರ ವಾರ್ಡ್ ನ ಸುಪ್ರಿಯಾ ಶೇಖರ್, ವೆಂಕಟಸ್ವಾಮಿ ನಾಯ್ಡು, ಹೊಸಕೆರೆಹಳ್ಳಿ ಭಾಗದ ಹೆಚ್.ನಾರಾಯಣ್ ಸೇರಿದಂತೆ ಅವರ ಎಲ್ಲಾ ಅನುಯಾಯಿಗಳು, ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇದು ಪದ್ಮನಾಭನಗರದಲ್ಲಿ ಬಿಜೆಪಿ ಪಕ್ಷದ ಅಸ್ತಿತ್ವ ಕುಸಿಯಲು ದೊಡ್ಡ ಹೊಡೆತ ಎಂದರೆ ತಪ್ಪಾಗಲಾರದು.

ಇಷ್ಟು ಮಂದಿಯ ಆಪರೇಷನ್ ಹಿಂದೆ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಕೈ ಇದೆ ಎಂಬುದು ಸ್ಪಷ್ಟ. ಚುನಾವಣೆಗೂ ಮುಂಚೆ ಪದ್ಮನಾಭನಗರದಲ್ಲಿ ಡಿ.ಕೆ.ಸುರೇಶ್ ಕಾಂಗ್ರೆಸ್ ಅಭ್ಯರ್ಥಿ ಎಂಬ ಮಾತು ಕೇಳಿ ಬಂದಿತ್ತು. ಅಕಸ್ಮಾತ್ ಡಿ.ಕೆ.ಸುರೇಶ್ ಅಭ್ಯರ್ಥಿ ಆಗಿದ್ದರೆ ಆ ಸಂದರ್ಭದಲ್ಲೇ ಆರ್.ಅಶೋಕ್ ಸೋಲು ಕಟ್ಟಿಟ್ಟ ಬುತ್ತಿ ಆಗುತ್ತಿತ್ತು ಎಂಬುದು ಸಹ ಅಷ್ಟೆ ಸ್ಪಷ್ಟ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ರಾಜ್ಯದ ಬೇರೆ ಬೇರೆ ಕ್ಷೇತ್ರಗಳಲ್ಲಿ ಇರುವ ಹಿಂದುತ್ವದ ಐಡಿಯಾಲಜಿಯಾಗಲಿ, ಬಿಜೆಪಿ ಅಥವಾ ಮೋದಿ ಪ್ರಭಾವಾಗಲಿ ಯಾವುದೂ ಈ ಕ್ಷೇತ್ರದಲ್ಲಿ ಇಲ್ಲ. ಎಲ್ಲವೂ ಸ್ಥಳೀಯ ಮುಖಂಡರ ಪ್ರಭಾವವೇ ಇಲ್ಲಿಯವವರೆಗೂ ಆರ್.ಅಶೋಕ್ ಗೆಲುವಿಗೆ ಕಾರಣವಾಗಿತ್ತು. ಹಾಗೆಯೇ ಜಾತಿ ಪ್ರಾಬಲ್ಯ ಕೂಡಾ ಇಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಒಕ್ಕಲಿಗ, ನಾಯ್ಡು ಹಾಗೂ ‌ಸ್ವಲ್ಪ ಮಟ್ಟಿಗಿನ ಲಿಂಗಾಯತರ ಪ್ರಭಾವ ಇಲ್ಲಿ ಹೆಚ್ಚೇ ಇದೆ ಎಂದರೆ ತಪ್ಪಿಲ್ಲ.

ಜೊತೆಗೆ ಕ್ಷೇತ್ರದಲ್ಲಿ ಆರ್.ಅಶೋಕ್ ಸರ್ವಾಧಿಕಾರಿ ಧೋರಣೆ, ಮೇಲೆತ್ತಿದವನ್ನೇ ಕಡೆಗಣಿಸುವುದು ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಬಿಎಂಪಿ ಚುನಾವಣೆಯನ್ನು ತಡೆಹಿಡಿಯಲು ಮುಂದಾಗಿದ್ದು ಸಹ ಸ್ಥಳೀಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಆರ್.ಅಶೋಕ್ ಈ ಹಿಂದಿನಿಂದಲೂ ಬಿಬಿಎಂಪಿ ಟಿಕೆಟ್ ವಿಚಾರದಲ್ಲಿ ಸುಳ್ಳು ಭರವಸೆ ನೀಡುತ್ತಾ ಬಂದಿರುವ ಆರೋಪ ಎದುರಿಸುತ್ತಿದ್ದಾರೆ. ಇವೆಲ್ಲವೂ ಒಟ್ಟಾಗಿ ಅಶೋಕ್ ಸ್ಥಳೀಯ ಮಟ್ಟದಲ್ಲಿ ನಾಯಕರನ್ನು ಕಳೆದುಕೊಳ್ಳಲು ಕಾರಣ ಎಂದೇ ಮಾತುಗಳು ಕೇಳಿ ಬಂದಿವೆ.

ಲೋಕಸಭೆ ಚುನಾವಣೆಗೆ ಬಿಜೆಪಿಗೆ ದೊಡ್ಡ ಖೆಡ್ಡಾ
ಎಲ್ಲಕ್ಕಿಂತ ಗಮನಾರ್ಹ ವಿಚಾರ ಏನೆಂದರೆ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಗೆ ಅತಿ ಹೆಚ್ಚು ಅಂತರದ ಮತ ಗಳಿಕೆಗೆ ಕಾರಣವಾಗಿದ್ದ ಕ್ಷೇತ್ರ ಪದ್ಮನಾಭನಗರ. ಸ್ಥಳೀಯ ಸಂಸದ ತೇಜಸ್ವಿ ಸೂರ್ಯ ಈ ಕ್ಷೇತ್ರದಲ್ಲಿ ಆರ್.ಅಶೋಕ್ ಅವರನ್ನೇ ಹೆಚ್ಚು ನಂಬಿಕೊಂಡಿದ್ದ ಕಾರಣ ಈ ಭಾಗದಿಂದಲೇ ಹೆಚ್ಚು ಲೀಡ್ ಬಂದು ಸಂಸದರಾಗುವಂತೆ ಕಾರಣವಾಗಿತ್ತು. ಆದರೆ ಈಗ ಆರ್.ಅಶೋಕ್ ಗೂ ಸಿಗದಂತೆ ಈ ಕ್ಷೇತ್ರ ಕೈ ತಪ್ಪುವ ಹಂತದಲ್ಲಿದೆ.

ಸ್ಥಳೀಯವಾಗಿ ಘಟಾನುಘಟಿ ನಾಯಕರೇ ಬಿಜೆಪಿ ಬಿಟ್ಟಿರುವ ಹಂತದಲ್ಲಿ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ತಿಪ್ಪರಲಾಗ ಹಾಕಿದರೂ ತೇಜಸ್ವಿ ಸೂರ್ಯ ಅಥವಾ ಇನ್ನಾವುದೇ ಬಿಜೆಪಿ ಅಭ್ಯರ್ಥಿ ಗೆಲ್ಲಲು ಸಾಧ್ಯವಿಲ್ಲ ಎಂದೇ ಸ್ಥಳೀಯ ಜನರ ಅಭಿಪ್ರಾಯವಾಗಿದೆ.

ಸ್ಥಳೀಯವಾಗಿ ಆರ್.ಅಶೋಕ್ ಹಿಂದೆ ಮುಖ್ಯವಾಗಿ ನಿಂತಿದ್ದಂತಹ ಇಡೀ ಬಿಜೆಪಿ ಟೀಮ್ ಈಗ ಕಾಂಗ್ರೆಸ್ ಗೆ ಹೈಜಂಪ್ ಆಗಿರುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಯಾವುದೇ ಅಭ್ಯರ್ಥಿಯ ಗೆಲುವು ತೀರಾ ಕಷ್ಟ ಎಂಬುದು ಸ್ಪಷ್ಟ. ಮೇಲಾಗಿ ಇಲ್ಲಿ ಯಾವುದೇ ಹಿಂದುತ್ವದ ಗಾಳಿಯಾಗಲಿ, ಮೋದಿ ಅಲೆಯಾಗಲಿ ಇಲ್ಲವೇ ಇಲ್ಲ. ಅಶೋಕ್ ಕೂಡಾ ಈ ನಾಯಕರ ಮೇಲೆಯೇ ಹೆಚ್ಚು ಅವಲಂಬಿತರಾಗಿದ್ದ ಹಿನ್ನೆಲೆಯಲ್ಲಿ ಈ ಕ್ಷಣದಲ್ಲಿ ಯಾವುದೇ ಚುನಾವಣೆ ನಡೆದರೂ ಬಿಜೆಪಿ ಸೋಲು ಶತಃಸಿದ್ದ ಎಂಬುದು ಸ್ಪಷ್ಟವಾಗಿದೆ. ಆ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೈ ತಪ್ಪುವ ಕ್ಷೇತ್ರಗಳಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಮೊದಲನೆಯದಾಗಿ ನಿಲ್ಲಲಿದೆ.

ಗುಜರಾತ್ ಚುನಾವಣೆ ಫಲಿತಾಂಶ: ಅನೇಕ ಕಾಂಗ್ರೆಸ್ ನಾಯಕರು ಬಿಜೆಪಿಗೆ ಪಲಾಯನ- ಸಚಿವ ಆರ್.ಅಶೋಕ್
ಬೆಂಗಳೂರು: 2023ರ ಮೊದಲಾರ್ಧದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದ್ದು, ಗುಜರಾತ್‌ ಚುನಾವಣೆಯಲ್ಲಿನ ಬಿಜೆಪಿಯ ಭರ್ಜರಿ ಗೆಲುವನ್ನು ನೋಡಿ, ಕಾಂಗ್ರೆಸ್ ನಾಯಕರು ಮತ್ತು ಶಾಸಕರು ಬಿಜೆಪಿಗೆ ಪಲಾಯನ ಮಾಡಲು ಬಯಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಹಲವಾರು ಕಾಂಗ್ರೆಸ್ ನಾಯಕರಲ್ಲಿ ಸುಮಾರು 12 ಜನರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ, ಏಕೆಂದರೆ ಅವರು ತಮ್ಮ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಲು ಬಯಸುತ್ತಿದ್ದಾರೆʼ ಎಂದು ತಿಳಿಸಿದ್ದಾರೆ.

ʼಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿಲ್ಲ.ಆದರ ಬದಲು ಎಎಪಿ ಕಾಂಗ್ರೆಸ್ ಮತಗಳನ್ನು ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಎಎಪಿ ಸುಮಾರು 5 ಪ್ರತಿಶತದಷ್ಟು ಮತಗಳನ್ನು ಪಡೆದರೂ, ಕರ್ನಾಟಕದಲ್ಲೂ ಕಾಂಗ್ರೆಸ್ ನಿರ್ನಾಮವಾಗುತ್ತದೆʼ ಎಂದು ಟೀಕಿಸಿದ್ದಾರೆ.

ಗುರುವಾರ ಗುಜರಾತ್‌ ಚುನಾವಣೆಯ ಫಲಿತಾಂಶದ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರು,ʼ ಬಿಜೆಪಿ ಪಕ್ಷವು ರಾಜ್ಯದಲ್ಲೂ ತನ್ನ ಗುಜರಾತ್ ಸಾಧನೆಯನ್ನು ಪುನರಾವರ್ತಿಸಲಿದೆ, ಹಾಗೆಯೇ ಮುಂಬರುವ 224 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ.

ಕಾಂಗೆಸ್ ‌ʼಭಗವದ್ಗೀತೆಯನ್ನು ಜಿಹಾದ್‌ಗೆ ಹೋಲಿಸಿʼ ತನ್ನ ಅಂತರಂಗದ ಹಿಂದೂ‌ ವಿರೋಧಿ ನೀತಿಯನ್ನು ತೋರಿದೆ: ಆರ್‌ ಅಶೋಕ್
ಬೆಂಗಳೂರು: ಈ ಹಿಂದೆ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರು ದೆಹಲಿಯಲ್ಲಿ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಿಹಾದ್ ಕುರಿತು ಹೇಳಿಕೆ ನೀಡಿದ್ದರು.

ಅವರು ಜಿಹಾದ್ ಪರಿಕಲ್ಪನೆಯನ್ನು ಗೀತೆಯಲ್ಲಿ ಉಲ್ಲೇಖಿಸಲಾಗಿದೆ, ಮಹಾಭಾರತ ಯುದ್ಧದ ಸಮಯದಲ್ಲಿ ಶ್ರೀಕೃಷ್ಣನು ಅರ್ಜುನನಿಗೆ ಜಿಹಾದ್ ಬಗ್ಗೆ ಪಾಠಗಳನ್ನು ನೀಡಿದ್ದಾನೆ ಎಂದು ಹೇಳಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಸಚಿವ ಆರ್.‌ ಅಶೋಕ್‌ ಅವರು, ಹಿಂದು, ಹಿಂದುತ್ವ, ಹಿಂದುಸ್ತಾನ್ ಎನ್ನುವ ಶಬ್ದಗಳು ಕಾಂಗ್ರೆಸ್ ಗೆ ಅಪಥ್ಯ. ಹಿಂದೆ ಕಾಂಗ್ರೆಸ್‌, ರಾಮಸೇತು ಮತ್ತು ರಾಮಮಂದಿರವನ್ನು ವಿರೋಧಿಸುವ ಮೂಲಕ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನೆ ಮಾಡಿತ್ತು.

ಆದರೆ ಈಗ ವಿಶ್ವವೇ ಒಪ್ಪಿ, ಆರಾಧಿಸಿದ ಭಗವದ್ಗೀತೆಯನ್ನು ಜಿಹಾದ್ ಗೆ ಹೋಲಿಸುವ ಮೂಲಕ ತನ್ನ ಅಂತರಂಗದಲ್ಲಿರುವ ಹಿಂದೂ‌ ವಿರೋಧಿ ನೀತಿಯನ್ನು ಹೊರ ಹಾಕಿದೆ, ಭಗವಾನ್ ಶ್ರೀಕೃಷ್ಣ ಇವರಿಗೆ ಸದ್ಬುದ್ಧಿ ನೀಡಲಿ ಎಂದು ಟ್ವೀಟ್‌ ಮಾಡಿದ್ದಾರೆ.

ಲೋಹಿತಾಶ್ವರವರ ಯೋಗಕ್ಷೇಮ ವಿಚಾರಿಸಿದ ಆರ್‌ ಅಶೋಕ್‌ : ಸರ್ಕಾರದ ವತಿಯಿಂದ ಚಿಕಿತ್ಸೆಗೆ ನೆರವು
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಲೋಹಿತಾಶ್ವ ಅನಾರೋಗ್ಯದಿಂದ ಬಳಲುತಿದ್ದು,ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಯೋಗಕ್ಷೇಮ ವಿಚಾರಿಸಲು ಕಂದಾಯ ಸಚಿವರಾದ ಆರ್‌ ಅಶೋಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದು, ಸರ್ಕಾರದ ವತಿಯಿಂದ  ಚಿಕಿತ್ಸೆಗೆ ನೆರವನ್ನು ಘೋಷಿಸಿದ್ದಾರೆ

ಖ್ಯಾತ ಕಲಾವಿದರಾದ ಲೋಹಿತಾಶ್ವ ಕನ್ನಡ ಚಿತ್ರರಂಗದಲ್ಲಿ ಬಹಳ ಹೆಸರು ಮಾಡಿದ್ದು, ಕನ್ನಡಿಗರ ಮನಗೆದ್ದಿದ್ದಾರೆ. ಆದರೆ ಪ್ರಸ್ತುತ ಅನಾರೋಗ್ಯದ ಸಮಸ್ಯೆಯಿಂದ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಸಾಗರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಹಿತಾಶ್ವ ಅವರ ಯೋಗ ಕ್ಷೇಮವನ್ನು ವಿಚಾರಿಸಲು ಇಂದು ಕಂದಾಯ ಸಚಿವ ಆರ್‌ ಅಶೋಕ್‌ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ವಿಚಾರವಾಗಿ ವೈದ್ಯರೊಂದಿಗೆ ಮಾತನಾಡಿದ ಅಶೋಕ್‌ ಲೋಹಿತಾಶ್ವ ಅವರ ಕಡೆ ಹೆಚ್ಚು ಗಮನಹರಿಸಿ ಕಾಳಜಿ ಮಾಡಿ, ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ. ನಂತರ ಕುಟುಂಬದವರಿಗೆ ಧೈರ್ಯ ತುಂಬಿದ್ದು, ಸರ್ಕಾರದ ವತಿಯಿಂದ  ಚಿಕಿತ್ಸೆಗೆ ನೆರವನ್ನು ಘೋಷಿಸಿದ್ದಾರೆ.

60 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ : ಆರ್ ಅಶೋಕ್
ಬೆಂಗಳೂರು : ರಾಜ್ಯದಲ್ಲಿ ಇದುವರೆಗೂ ಗುರುತೇ ಇಲ್ಲದ ತಾಂಡಾ, ಹಟ್ಟಿ, ಹಾಡಿ, ದೊಡ್ಡಿಯಂತಹ ಸುಮಾರು 3500 ಕ್ಕೂ ಹೆಚ್ಚು ಗ್ರಾಮಗಳಿಗೆ ಹೆಸರು, ವಿಳಾಸಗಳನ್ನು ಕೊಟ್ಟು ಕಂದಾಯ ಗ್ರಾಮಗಳಾಗಿ ಮಾಡುವ ಕಾಲಾವಕಾಶ ಕೂಡಿ ಬಂದಿದೆ. ಈ ವಿಚಾರವಾಗಿ ನವೆಂಬರ್‌ ಕೊನೆಯ ವಾರದೊಳಗೆ 60 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ನೀಡುವುದಾಗಿ ಕಂದಾಯ ಸಚಿವ ಆರ್ ಅಶೋಕ್‌ ತಿಳಿಸಿದರು.

ಸುಮಾರು 3500 ಕ್ಕೂ ಪರಿಚಯವೇ ಇಲ್ಲದ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತನೆಯಾಗಿರದ ಕಾರಣ ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದರು. ಸರ್ಕಾರ ಈ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ನಿರ್ಧಾರ ಮಾಡಿದೆ. 60 ಸಾವಿರ ಕುಟುಂಬಗಳಿಗೆ ಅವರು ವಾಸಿಸುತ್ತಿದ್ದ ಜಾಗವನ್ನು ನೋಂದಣಿ ಮಾಡಿಸಿಕೊಡಲಾಗುವುದು ಎಂದು ಹೇಳಿದರು.

ಕಲಬುರಗಿ ಮತ್ತು ದಾವಣಗೆರೆಯಲ್ಲಿ ಪ್ರತ್ಯೇಕ ಸಮಾವೇಶಗಳನ್ನು ಏರ್ಪಡಿಸಿ ಹಕ್ಕು ಪತ್ರಗಳನ್ನು ನೀಡಲಾಗುತ್ತದೆ. ಈ ಯೋಜನೆಗೆ ಯಾದಗಿರಿ, ರಾಯಚೂರು, ವಿಜಯಪುರ, ಬೀದರ್‌, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಮೊದಲ ಆದ್ಯತೆಯಾಗಿದೆ. ಶೇ.90 ರಷ್ಟು ಭೂಮಿ ಸರ್ಕಾರದ ಜಾಗವೇ ಆಗಿರುವುದರಿಂದ ಈ ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಅಂದುಕೊಂಡಿದ್ದೇವೆ. ಒಂದು ವೇಳೆ ಭೂಮಿ ಖಾಸಗಿ ವ್ಯಕ್ತಿಗಳಾಗಿದ್ದರೆ ಭೂಮಾಲಿಕರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಈ ಹಕ್ಕು ಪತ್ರ ನೀಡುವ ವಿಚಾರವಾಗಿ ಖಾಸಗಿ ವ್ಯಕ್ತಿಗಳಿಗೆ ಆಕ್ಷೇಪಣೆ ಇದ್ದರೆ ಅದನ್ನು ತಿಳಿಸಲು ಸರ್ಕಾರ ಏಳು ದಿನಗಳ ಕಾಲಾವಕಾಶ ನೀಡಿದೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಂದಾಯ ಸಚಿವ ಆರ್‌. ಅಶೋಕ್‌ ಮಾಹಿತಿ ನೀಡಿದರು.

ಕಂದಾಯ ಸಚಿವರಿಗೆ ʼಕೈʼ ತಿರುಗೇಟು
ಬೆಂಗಳೂರು: ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ, ಭ್ರಷ್ಟಾಚಾರದ ಬಗ್ಗೆ ಒಂದು ದಾಖಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ ಮಾತಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್‌ ಮೂಲಕ ʼಆರ್‌. ಅಶೋಕ್‌ʼರವರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್‌, ಮಾನ್ಯ ಕಂದಾಯ ಸಚಿವರೇ ಗುತ್ತಿಗೆದಾರರಿಂದ 40% ಕಮಿಷನ್ ಹಗರಣ PSI ಅಕ್ರಮ, ಬಿಟ್ ಕಾಯಿನ್ ಹಗರಣ, 431 ಕೋಟಿಯ ಬೋರ್ ವೆಲ್ ಹಗರಣ, ನೇಮಕಾತಿ ಅಕ್ರಮಗಳು ನಡೆದಿದ್ದು ನಿಮ್ಮ ಸರ್ಕಾರದಲ್ಲೇ ಅಲ್ಲವೇ? ಈ ರೀತಿ ಸುಳ್ಳು ಹೇಳೋದನ್ನ ನೀವು ನಾಗ್ಪುರ್ ವಿಶ್ವವಿದ್ಯಾಲಯದಲ್ಲಿ ಕಲಿತದ್ದೇ? ಅಥವಾ ಎಲ್ಲಾ ಹಗರಣಗಳನ್ನೂ ಮುಚ್ಚಿಹಾಕುವ ಆತ್ಮವಿಶ್ವಾಸವೇ? ಎಂದು ಪ್ರಶ್ನಿಸಿದೆ.