rahulgandhi – Peepal Media

ರೈತರ ಪರ ಧ್ವನಿ ಎತ್ತುವುದಾಗಿ ತಿಳಿಸಿದ ರಾಹುಲ್‌: ಸಂಸತ್ತಿನ ಆವರಣದಲ್ಲಿ ರೈತರೊಂದಿಗೆ ಸಭೆ
ನವದೆಹಲಿ: ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರ ನಿಯೋಗವು ಲೋಕಸಭೆಯ ಸಂಕೀರ್ಣದಲ್ಲಿಂದು ವಿರೋಧ ಪಕ್ಷದ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಕನಿಷ್ಟ ಬೆಂಬಲ ಬೆಲೆ ನೀತಿ ಪರೀಷ್ಕರಣೆಗೆ ಆಗ್ರಹಿಸಿ ಸಭೆ ನಡೆಸಿತು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರು ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಸುಖಜಿಂದರ್ ಸಿಂಗ್ ರಾಂಧವಾ ಅವರು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ವಾರಿಂಗ್‌ ಅವರು, ರಾಹುಲ್ ಗಾಂಧಿಯವರು ಸಂಸತ್ತಿನ ಒಳಗೆ ರೈತರ ಪರ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ರೈತರು ಮತ್ತೆ  ದೆಹಲಿಗೆ ಬಂದು ಮತ್ತೊಂದು ಮೆರವಣಿಗೆ ಆಯೋಜಿಸುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ರೈತರು ದೆಹಲಿಗೆ ಬಂದು ಪ್ರತಿಭಟಿಸಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಖಾಸಗಿ ಸದಸ್ಯರ ಮಸೂದೆ ಅಗತ್ಯವಿದ್ದರೆ ನಾವು ಅದನ್ನು ಸಹ ತರುತ್ತೇವೆ” ಎಂದರು.

ರೈತರಲ್ಲಿ ಒಬ್ಬರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, “ಸರ್ಕಾರ ಇದುವರೆಗೆ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ; ಸ್ವಾಮಿನಾಥನ್ ವರದಿ ಅನುಷ್ಠಾನ ಅತ್ಯಗತ್ಯ. ನಾವು ದೆಹಲಿ ಕಡೆಗೆ ಪಾದಯಾತ್ರೆಯನ್ನು ಮುಂದುವರಿಸಲಿದ್ದೇವೆ ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು, ರೈತರು ತಮ್ಮ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದರು. ದೀರ್ಘಾವಧಿಯ ಬೇಡಿಕೆಗಳನ್ನು ಈಡೇರಿಸಲು ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಲು ಕೇಳಿಕೊಂಡರು. ಎಂಎಸ್‌ಪಿಯನ್ನು ಪರಿಷ್ಕರಿಸಲು ಮತ್ತು ಕಾನೂನು ಬೆಂಬಲವನ್ನು ಖಚಿತಪಡಿಸಿಕೊಳ್ಳುವ ಈ ಬೇಡಿಕೆಗಳು 2020 ರಲ್ಲಿ ಪ್ರಾರಂಭವಾದಾಗಿನಿಂದ ಅವರ ಪ್ರತಿಭಟನೆಯ ಮುಖ್ಯ ಭಾಗವಾಗಿದೆ ಎಂದರು.

ದೇಶದಾದ್ಯಂತದ ರೈತ ಸಂಘಗಳು ಎಂಎಸ್‌ಪಿಯನ್ನು ಬಯಸುತ್ತವೆ, ಸ್ವಾಮಿನಾಥನ್ ಆಯೋಗದ ಸಿ2+50 ಸೂತ್ರವನ್ನು ಆಧರಿಸಿರಬೇಕು, ಇದು ಬಂಡವಾಳದ ವೆಚ್ಚ ಮತ್ತು ಬೆಂಬಲ ಬೆಲೆಯನ್ನು ಲೆಕ್ಕಾಚಾರ ಮಾಡುವಾಗ ಭೂಮಿ ಬಾಡಿಗೆಯೂ ಸೇರಿರುತ್ತದೆ. ಆದರೆ, ಈಗಿರುವ ಎ2+ಎಫ್‌ಎಲ್‌+50 ಶೇಕಡಾ ವಿಧಾನವನ್ನು ಕೈಬಿಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ದೂರಿದರು.

ರೈತರನ್ನು ಸಂಸತ್ತಿ ಅವರಣದೊಳಕ್ಕೆ ಬಿಡದಿರುವುದಕ್ಕೆ ಆಕ್ರೋಶ: ರೈತರನ್ನು ಸಂಸತ್ತಿನ ಆವರಣದೊಳಕ್ಕೆ ಬಿಡದಿರುವುದಕ್ಕೆ ರೈತರು ಸ್ವಲ್ಪ ಹೊತ್ತು ಪ್ರತಿಭಟನೆ ನಡೆಸಿದರು. ಸಭೆಗೂ ಮುನ್ನ ಗೊಂದಲ ಉಂಟಾಯಿತು.

“ನಾನು ರೈತರನ್ನು ಆಹ್ವಾನಿಸಿದ್ದೆ. ಆದರೆ, ರೈತರನ್ನು ಸಂಸತ್ತಿನ  ಆವರಣದೊಳಗೆ ಬರುವುದನ್ನು ಸರ್ಕಾರದ ನಿರ್ದೇಶನದಿಂದ ಸಿಬ್ಬಂದಿ ತಡೆದರು. ಬಹುಶಃ ಅವರು ರೈತರಾಗಿರುವ ಕಾರಣಕ್ಕೆ ಇರಬಹುದು. ಇದಕ್ಕೆ ಕಾರಣವನ್ನು ನೀವು ಪ್ರಧಾನಿಯವರನ್ನು ಕೇಳಬೇಕಾಗುತ್ತದೆ.” ಎಂದು ರಾಹುಲ್ ಗಾಂಧಿ ಲೇವಡಿಯಾಡಿದರು.

ಮೋದಿ ಮುಖ ತೋರಿಸುವುದೇ ಮಾಧ್ಯಮಗಳ ಕೆಲಸ: ರಾಹುಲ್ ಗಾಂಧಿ
ಜೈಪುರ: ದಿನದ ಇಪ್ಪತ್ತನಾಲ್ಕು ಗಂಟೆ ಪ್ರಧಾನಿ ನರೇಂದ್ರ ಮೋದಿಯವರ ಮುಖ ತೋರಿಸುವುದೇ ಇಂದಿನ ಕೆಲವು ಮಾಧ್ಯಮಗಳ ಕೆಲಸವಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದ ಬಿಕಾನೇರ್ ಲೋಕಸಭಾ ಕ್ಷೇತ್ರದ ಅನುಪ್‌ಗಢದಲ್ಲಿ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು ಮಾಧ್ಯಮಗಳ ನಿಜವಾದ ಕರ್ತವ್ಯವಾಗಿದೆ. ಆದರೆ ಇಂದಿನ ಸುದ್ದಿ ಮಾಧ್ಯಮಗಳು ಆ ಕೆಲಸವನ್ನೇ ಮರೆತಿವೆ. ಪತ್ರಕರ್ತರ ಧ್ವನಿಯನ್ನು ಇಂದಿನ ಸುದ್ದಿ ಮಾಧ್ಯಮಗಳ ಬಿಲೇನಿಯರ್‌ ಮಾಲೀಕರು ಹತ್ತಿಕ್ಕುತ್ತಿದ್ದಾರೆ ಎಂದು ದೂರಿದರು.

ಕೆಲವು ದಿನಗಳ ಹಿಂದೆ ದೇಶದ ನೈಜ ಸಮಸ್ಯೆಗಳನ್ನು ಬಿಟ್ಟು ಮಾಧ್ಯಮಗಳು ಅಂಬಾನಿ ಮಗನ ಮದುವೆ ಕಾರ್ಯಕ್ರಮ ಪ್ರಸಾರ ಮಾಡುವುದರಲ್ಲಿಯೇ ನಿರತವಾಗಿದ್ದವು. ಈ ದೇಶದಲ್ಲಿನ ನಿರುದ್ಯೋಗ, ಹಣದುಬ್ಬರ ಮಾಧ್ಯಮಗಳಿಗೆ ಸಮಸ್ಯೆಯಾಗಿಯೇ ಕಾಣಿಸುತ್ತಿಲ್ಲ. ದಿನದ ಇಪ್ಪತ್ತನಾಲ್ಕು ಗಂಟೆ ಪ್ರಧಾನಿ ನರೇಂದ್ರ ಮೋದಿ ಅವರ ಮುಖ ತೋರಿಸುವುದೇ ಅವುಗಳ ಕೆಲಸ  ಎಂದು ಆರೋಪಿಸಿದರು.

‘ಮಾಧ್ಯಮ ಕ್ಷೇತ್ರದಲ್ಲಿ ಶೇಕಡ 2ರಿಂದ 3ರಷ್ಟು ಜನರು ಉದ್ಯೋಗ ಪಡೆಯುತ್ತಿದ್ದಾರೆ. 15ರಿಂದ 20 ಜನರು ಇಡೀ ಮಾಧ್ಯಮಲೋಕವನ್ನು ನಿಯಂತ್ರಿಸುತ್ತಿದ್ದಾರೆ.  ಅವರಿವೆ

ದೇಶದ ರೈತರು ತಮ್ಮ ಬೆಳಗೆ ಕನಿಷ್ಠ ಬೆಂಬಲ ಬೆಲೆ ಕೇಳುತ್ತಿರುವುದು, ಯುವಕರು ಉದ್ಯೋಗ ಹುಡುಕುತ್ತಿರುವುದು, ಮಹಿಳೆಯರು ಹಣದುಬ್ಬರದಿಂದ ಬೇಸತ್ತಿರುವುದು ಕಾಣಿಸುತ್ತಲೇ ಇಲ್ಲ. ಈ ಜನ ಸಾಮಾನ್ಯರ ರ ಕೂಗನ್ನು ಯಾರು ಕೇಳಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.

ನಿರುದ್ಯೋಗ, ಹಣದುಬ್ಬರ ಈ ದೇಶದ ಅತಿದೊಡ್ಡ ಸಮಸ್ಯೆಗಳೆಂದು ದೇಶದ ಯಾರನ್ನೇ ಕೇಳಿದರೂ ಹೇಳುತ್ತಾರೆ. ನಿಮ್ಮ ಸಾಲವನ್ನು ಮನ್ನಾ ಮಾಡುವುದಿಲ್ಲ, ನೀವು ಭಯೋತ್ಪಾದಕರು, ನಿಮ್ಮ ಬೆಳೆಗಳಿಗೆ ಎಂಎಸ್‌ಪಿ ನೀಡುವುದಿಲ್ಲ ಎಂದು ಮೋದಿ ರೈತರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಂಎಸ್‌ಪಿ ಜಾರಿಗೆ ತಂದೆ ತರುತ್ತದೆ. ಶತಕೋಟಿ ಒಡೆಯರ ಸಾಲವನ್ನು ಮೋದಿ ಮನ್ನಾ ಮಾಡಿದರೆ, ರೈತರ ಸಾಲವನ್ನು ಕಾಂಗ್ರೆಸ್ ಮನ್ನಾ ಮಾಡುತ್ತದೆ. ಈ ಬಾರಿಯ ಲೋಕಸಭಾ ಚುನಾವಣೆ ದೇಶದ ಬಡವರು ಮತ್ತು ಶತಕೋಟಿ ಒಡೆಯರ ನಡುವಿನ ಚುನಾವಣೆಯಾಗಿದೆ’ ಎಂದು ಅಭಿಪ್ರಾಯಪಟ್ಟರು.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಭೇಟಿ ನೀಡಲಿರುವ ರಾಹುಲ್ ಗಾಂಧಿ
ಹೊಸದೆಹಲಿ, ಜೂನ್ 29 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೂನ್ 29 ಮತ್ತು 30 ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಹಿಂಸಾಚಾರ ಪೀಡಿತರ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಮತ್ತು ಜನಾಂಗೀಯ ಘರ್ಷಣೆಯಿಂದ ನಿರಾಶ್ರಿತರಾದ ಜನರನ್ನು ಭೇಟಿ ಮಾಡಲಿದ್ದಾರೆ ಮತ್ತು ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಚಂದಪುರದಲ್ಲಿ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ಹೇಳಿದರು.

ಮೇ 3ರಂದು ಮಣಿಪುರದಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಮೆಯಿಟಿ ಸಮುದಾಯವನ್ನು ಸೇರಿಸುವ ಬೇಡಿಕೆಯನ್ನು ಪ್ರತಿಭಟಿಸಲು ಆಲ್‌ ಟ್ರೈಬಲ್ಸ್‌ ಸ್ಟೂಡೆಂಟ್ಸ್‌ ಯೂನಿಯನ್ (ಎಟಿಎಸ್‌ಯು) ಆಯೋಜಿಸಿದ್ದ ಮೆರವಣಿಗೆಯಲ್ಲಿ ಉಂಟಾದ ಘರ್ಷಣೆಗಳು ಹಿಂಸಾಚಾರಕ್ಕೆ ಕಾರಣವಾಗಿದ್ದವು.

“ರಾಹುಲ್ ಗಾಂಧಿಯವರು ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮ್ಮ ಭೇಟಿಯ ಸಮಯದಲ್ಲಿ ಇಂಫಾಲ್ ಮತ್ತು ಚುರಾಚಂದ್‌ಪುರದಲ್ಲಿ ಪರಿಹಾರ ಶಿಬಿರಗಳಿಗೆ ಭೇಟಿ ನೀಡುತ್ತಾರೆ ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಣಿಪುರವು ಸುಮಾರು ಎರಡು ತಿಂಗಳುಗಳಿಂದ ಉರಿಯುತ್ತಿದೆ ಮತ್ತು ಅದಕ್ಕೆ ಶಾಂತಿ ಸ್ಥಾಪನೆಗೆ ಪ್ರಯತ್ನಿಸುವ ಕೈಗಳ ಅಗತ್ಯವಿದೆ. ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಬಹುದು, ಇದೊಂದು ಮಾನವೀಯ ದುರಂತವಾಗಿದ್ದು, ದ್ವೇಷವನ್ನು ಹರಡದೆ, ಪ್ರೇಮದ ಸೇನೆಯಾಗಬೇಕಿರುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಈ ನಡುವೆ, ಮಣಿಪುರದ ಮಾಜಿ ಸಿಎಂ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಮಣಿಪುರದ ಜನರಿಗೆ ಶಾಂತಿ ಕಾಪಾಡುವಂತೆ ಮತ್ತು ರಾಹುಲ್ ಗಾಂಧಿಯವರ ಎರಡು ದಿನಗಳ ಮಣಿಪುರ ಭೇಟಿಯ ಸಂದರ್ಭದಲ್ಲಿ ಸಹಕಾರ ನೀಡುವಂತೆ ಮನವಿ ಮಾಡಿದರು.

“ನಾವು ಮಣಿಪುರದ ಜನರಿಗೆ ಮನವಿ ಮಾಡುತ್ತೇವೆ, ದಯವಿಟ್ಟು ರಾಹುಲ್ ಗಾಂಧಿಯವರ ಎರಡು ದಿನಗಳ ಭೇಟಿಯಲ್ಲಿ ಶಾಂತಿ, ಸಮಾಧಾನದಿಂದಿರಿ ಮತ್ತು ಸಹಕಾರವನ್ನು ನೀಡಿ…” ಎಂದು ಅವರು ಮನವಿ ಮಾಡಿದ್ದಾರೆ.

ಹಿಂಸಾಚಾರವನ್ನು ನಿಭಾಯಿಸಿದ ಬಗ್ಗೆ ಕಾಂಗ್ರೆಸ್ ಕೇಂದ್ರ ಮತ್ತು ಮಣಿಪುರ ರಾಜ್ಯದಲ್ಲಿನ ಬಿಜೆಪಿ ಸರ್ಕಾರಗಳ ವಿರುದ್ಧ ಕಟುವಾದ ದಾಳಿಗಳನ್ನು ಮಾಡುತ್ತಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಪಕ್ಷವು ಈಗಾಗಲೇ ಒತ್ತಾಯಿಸಿದೆ.

ಗಮನಾರ್ಹವಾಗಿ, ಅಸ್ಸಾಂ ರೈಫಲ್ಸ್ ಇಲ್ಲಿಯವರೆಗೆ ಹಿಂಸಾಚಾರ-ಪೀಡಿತ ಮಣಿಪುರದಲ್ಲಿ ಎಲ್ಲಾ ಸಮುದಾಯಗಳಿಂದ 50,000ಕ್ಕೂ ಹೆಚ್ಚು ಸ್ಥಳಾಂತರಗೊಂಡ ವ್ಯಕ್ತಿಗಳನ್ನು ರಕ್ಷಿಸಿ ಅವರಿಗೆ ಸುರಕ್ಷಿತ ಮಾರ್ಗ, ಆಶ್ರಯ, ಆಹಾರ ಮತ್ತು ಔಷಧಿಗಳನ್ನು ಒದಗಿಸಿದೆ.
ಇದಕ್ಕೂ ಮುನ್ನ ಜೂನ್ 24 ರಂದು, ಗೃಹ ಸಚಿವ ಶಾ ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸುವುದಾಗಿ ಭರವಸೆ ನೀಡಿದ್ದರು, ಆದರೆ ವಿರೋಧ ಪಕ್ಷಗಳು ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ‘ಮೌನ’ವನ್ನು ಪ್ರಶ್ನಿಸುತ್ತಿವೆ.

ಪ್ರಧಾನಿ ಲೂಟಿ ತಂತ್ರ vs ಕಾಂಗ್ರೆಸ್ ಲೋಕತಂತ್ರ’: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಮಧ್ಯ ಪ್ರದೇಶ: ಪೆಟ್ರೋಲ್‌, ಡಿಸೇಲ್‌, ಮತ್ತು ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳು ಇನ್ನು ಏಕೆ ಕಡಿಮೆಯಾಗಿಲ್ಲ ಎಂದು ಪ್ರಶ್ನಿಸಿ?, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು, ಕೇಂದ್ರ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಧ್ಯ‌ ಪ್ರದೇಶದಲ್ಲಿ ನಡೆದ ಭಾರತ ಐಕ್ಯಾತಾ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯ ‘ಲೂಟಿ-ವ್ಯವಸ್ಥೆ’ಯ ವಿರುದ್ಧ ಈಗಾಗಲೇ ಧ್ವನಿ ಎತ್ತಿದ್ದೇವೆ ಅದುವೇ ಭಾರತ ಐಕ್ಯತಾ ಯಾತ್ರೆ ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ಭಾರತ ಐಕ್ಯತಾ ಯಾತ್ರೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು ಬಿಜೆಪಿಯ ಲೂಟಿ-ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತರಿವ ಯಾತ್ರೆ ಎಂದು ಬಣ್ಣಿಸಿದರು.

ಇನ್ನು ಮುಂದುವರೆದು ʼನನಗೆ ಉತ್ತರ ಕೋಡಿ!ʼ ಎಂದು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿಯವರು, ಜಾಗತಿಕವಾಗಿ ಎಲ್‌ಪಿಜಿ ಮತ್ತು ಕಚ್ಚಾ ತೈಲ ಬೆಲೆಗಳನ್ನು ಕ್ರಮವಾಗಿ 40% ಮತ್ತು 25% ರಷ್ಡು ಕಡಿತಗೊಳಿಸಲಾಗಿದೆ, ಆದರೆ ಭಾರತದಲ್ಲಿ ಏಕೆ ಬೆಲೆಗಳು ಒಂದೇ ಆಗಿವೆ, 6 ತಿಂಗಳಲ್ಲಿ ಆಂತರಾಷ್ಟ್ರೀಯ ದತ್ತಾಂಶಗಳ ಬೆಲೆ ಅಗ್ಗವಾಗಿದೆ, ಅಂದರೆ ಕಚ್ಚಾತೈಲ 25%, ಎಲ್‌ಪಿಜಿ 40%, ಬೆಲೆ ಕಡಿಮೆಯಾಗಿದೆ. ಆದರೂ ಕೂಡ ಪೆಟ್ರೋಲ್‌, ಡೀಸೆಲ್‌ ಮತ್ತು ಸಿಲಿಂಡರ್‌ಗಳ ಬೆಲೆಗಳು ಏಕೆ ಕಡಿಮೆಯಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.

कच्चा तेल – 25% सस्ता
एलपीजी – 40% सस्ती

ये 6 महीनों के अंतरराष्ट्रीय कीमतों के आंकड़े हैं। फिर भी पेट्रोल, डीज़ल और गैस सिलेंडर के दाम कम क्यों नहीं हुए?

प्रधानमंत्री जी, आपके 'लूट-तंत्र' के खिलाफ लोकतंत्र की आवाज़ है – भारत जोड़ो यात्रा। जवाब दीजिए!
— Rahul Gandhi (@RahulGandhi) December 3, 2022

ಪೆಟ್ರೋಲ್, ತೈಲ ಬೆಲೆಗಳು

ಮೇ 21, 2022 ರಿಂದ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಒಂದೇ ಆಗಿವೆ. ಶನಿವಾರ, 1 ಲೀಟರ್ ಪೆಟ್ರೋಲ್ ಬೆಲೆ 96.72 ರೂ.ನಲ್ಲಿ ಮುಂದುವರಿದರೆ, 1 ಲೀಟರ್ ಡೀಸೆಲ್ ಬೆಲೆ 89.62 ರೂ. ನೋಯ್ಡಾದಲ್ಲಿ ಪೆಟ್ರೋಲ್ ಬೆಲೆ 96.79 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 89.96 ರೂ. ಕೋಲ್ಕತಾದಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 106.03 ರೂ., ಡೀಸೆಲ್ ಪ್ರತಿ ಲೀಟರ್‌ಗೆ 94.27 ರೂ.ಗೆ ಮಾರಾಟವಾಗುತ್ತಿದೆ. ಮತ್ತೊಂದೆಡೆ, ಪೆಟ್ರೋಲ್ ಪ್ರತಿ ಲೀಟರ್ಗೆ 106.31 ರೂ., ಡೀಸೆಲ್ ಪ್ರತಿ ಲೀಟರ್‌ಗೆ 94.27 ರೂ.ಗೆ ಮಾರಾಟವಾಗುತ್ತಿದೆ. ಹರಿಯಾಣದ ಗುರುಗ್ರಾಮದ ಡೀಸೆಲ್ ಬೆಲೆ 90.05 ರೂ ಮತ್ತು ಪೆಟ್ರೋಲ್ ಬೆಲೆ 97.18 ರೂ. ದೇಶದ ಅಗ್ಗದ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಅಂಡಮಾನ್ ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್ನಲ್ಲಿ ಮಾರಾಟ ಮಾಡಲಾಗುತ್ತದೆ, ಪೆಟ್ರೋಲ್ ಬೆಲೆ 84.10 ರೂ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 79.94 ರೂ. ಇದೆ ಎನ್ನಲಾಗಿದೆ.

ರಾಹುಲ್ ಗಾಂಧಿ ಗುಜರಾತಿ ವಿರೋಧಿ: ಜೆಪಿ ನಡ್ಡಾ ಟೀಕೆ
ಸೂರತ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತಿ ವಿರೋಧಿ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಬುಧವಾರ ಟೀಕಿಸಿದ್ದಾರೆ.

ಅಣೆಕಟ್ಟೆನಿಂದಾಗಿ ಸ್ಥಳೀಯರನ್ನು ಸ್ಥಳಾಂತರಿಸುವುದನ್ನು ತಡೆಯಲು ನರ್ಮದಾ ಬಚಾವೋ ಆಂದೋಲನದ ನೇತೃತ್ವ ವಹಿಸಿದ್ದ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರು ಶನಿವಾರ ಮಹಾರಾಷ್ಟ್ರದಲ್ಲಿ ನಡೆದ ತಮ್ಮ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೇರಿಕೊಂಡ ಹಿನ್ನೆಲೆಯಲ್ಲಿ ನಡ್ಡಾ ಅವರ ಹೇಳಿಕೆ ಬಂದಿದೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ನಡ್ಡಾರವರು, ʼಈ ಬಾರಿ ಗುಜರಾತ್ ದಾಖಲೆಗಳನ್ನು ಮುರಿಯುತ್ತದೆ ಎಂದು ನಾನು ನಂಬುತ್ತೇನೆ. ಗುಜರಾತ್ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿ ಹೊರಹೊಮ್ಮಿದೆ. ಇದಕ್ಕಾಗಿಯೇ ಜನರು ಮತ್ತೆ ನಮಗೆ ಮತ ಹಾಕುತ್ತಾರೆ. ಮೇಧಾ ಪಾಟ್ಕರ್ ಯಾವಾಗಲೂ ಅಭಿವೃದ್ಧಿ ವಿರೋಧಿ ನಿಲುವನ್ನು ತೆಗೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ನಿಂತಿರುವುದು ಎಂದರೆ ಅವರು ಗುಜರಾತಿ ವಿರೋಧಿಯೂ ಹೌದು ಎಂದರ್ಥ ಎಂದು ವ್ಯಂಗಿಸಿದ್ದಾರೆ.

ಜೈಲಿನಲ್ಲಿರುವ ದೆಹಲಿ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದರ್ ಜೈನ್ ಅವರ ವಿವಾದದ ಬಗ್ಗೆ ಕೇಳಿದಾಗ ಉತ್ತರಿಸದ ಅವರು, ʼಅನಾರೋಗ್ಯದ ಹೆಸರಿನಲ್ಲಿ ಸತ್ಯೇಂದ್ರ ಜೈನ್ ಅವರು ಅತ್ಯಾಚಾರಿಯಿಂದ ಮಸಾಜ್ ಪಡೆಯುತ್ತಿದ್ದಾರೆ. ಇದರ ಬಗ್ಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನಾಚಿಕೆಯಾಗಬೇಕು. ಇಲ್ಲಿಯವರೆಗೆ ಅವರಿಗೆ ಏಕೆ ಜಾಮೀನು ಸಿಗಲಿಲ್ಲ? ಸಾಕಷ್ಟು ವಕೀಲರು ಇಲ್ಲವೇ? ಗಂಭೀರ ಪ್ರಕರಣದಲ್ಲಿ ಅವರು ಜೈಲಿನಲ್ಲಿದ್ದಾರೆ, ಅದಕ್ಕಾಗಿಯೇ ಅವರಿಗೆ ಜಾಮೀನು ಪಡೆಯುವುದು ಕಷ್ಟವಾಗುತ್ತಿದೆʼ ಎಂದು  ಹೇಳಿದರು.

ರಾಹುಲ್ ಗಾಂಧಿ ಈಗ ಸದ್ದಾಂ ಹುಸೇನ್‌ ತರ ಕಾಣುತ್ತಾರೆ : ಅಸ್ಸಾಂ ಸಿಎಂ ವ್ಯಂಗ್ಯ
ಅಹ್ಮದಾಬಾದ್: ಮುಂದಿನ ತಿಂಗಳು ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಬುಧವಾರ ಅಹ್ಮದಾಬಾದ್ ನಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಸದ್ದಾಂ ಹುಸೇನ್ ಅವರಂತೆ ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಗುಜರಾತ್ ಗೆ ಭೇಟಿ ನೀಡಿದ್ದನ್ನು ಪ್ರಶ್ನಿಸಿದ ಶರ್ಮಾ ಅವರು, ʼರಾಹುಲ್‌ ಗಾಂಧಿ ಗುಜರಾತ್ ನಲ್ಲಿ ಅದೃಶ್ಯರಾಗಿದ್ದಾರೆ. ಆಗಾಗ ಸಂದರ್ಶಕ ಬೋಧಕರಂತೆ ರಾಜ್ಯಕ್ಕೆ ಬರುತ್ತಾರೆ. ಅವರು ಹಿಮಾಚಲ ಪ್ರದೇಶದಲ್ಲೂ ಪ್ರಚಾರ ಮಾಡಲಿಲ್ಲ. ಏಕೆಂದರೆ ಅವರಿಗೆ ಸೋಲಿನ ಭಯ ಇರಬಹುದು, ಹಾಗಾಗಿಯೇ ಅವರು ಚುನಾವಣೆಗಳಿಲ್ಲದ ಸ್ಥಳಗಳಿಗೆ ಮಾತ್ರ ಭೇಟಿ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ಬಾಲಿವುಡ್ ತಾರೆಯರಿಗೆ ಹಣ ಪಾವತಿಸಿರಬೇಕು ಎಂದು ಹಿಮಂತ ಬಿಸ್ವಾ ಶರ್ಮಾ ಆರೋಪಿಸಿದ್ದಾರೆ, ಇದು ಯಾತ್ರೆಗೆ ಕೈಜೋಡಿಸಿದ ನಟರಾದ ಪೂಜಾ ಭಟ್ ಮತ್ತು ಅಮೋಲ್ ಪಾಲೇಕರ್ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೂ ಮುನ್ನ ಧನ್ಸುರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, ಶ್ರದ್ಧಾ ವಾಕರ್ ಮತ್ತು ಅಫ್ತಾಬ್ ಅಮೀನ್ ಅವರನ್ನು ಉಲ್ಲೇಖಿಸಿ, ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ತನ್ನ ಲಿವಿಂಗ್‌ ಟುಗೆದರ್‌ ಪಾರ್ಟ್ನರ್ ಶ್ರದ್ಧಾ ವಾಕರ್ ಅವರನ್ನು ಕೊಂದ ಆರೋಪ ಎದುರಿಸುತ್ತಿರುವ ಅಫ್ತಾಬ್ ಅಮೀನ್ ಪೂನಾವಾಲಾ ಅವರು ವಿಚಾರಣೆಯ ಸಮಯದಲ್ಲಿ, ತಾವು ಕೇವಲ ಹಿಂದೂ ಹುಡುಗಿಯರೊಂದಿಗೆ ಮಾತ್ರ ಡೇಟಿಂಗ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಲವ್ ಜಿಹಾದ್ ಅನ್ನು ನಿಗ್ರಹಿಸಲು ಕಠಿಣ ಕಾನೂನು ಜಾರಿಗೆ ತರುವಂತೆ ಕರೆ ನೀಡಿದ್ದರು.

ಗುಜರಾತ್ ಚುನಾವಣೆ: ನವೆಂಬರ್ 22ರಂದು ಚುನಾವಣೆ ಪ್ರಚಾರಕ್ಕೆ ರಾಹುಲ್‌ ಗಾಂಧಿ
ಅಹ್ಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯ ವಿರಾಮದ ಸಮಯದಲ್ಲಿ ಗುಜರಾತ್ ಗೆ ಭೇಟಿ ನೀಡಲಿದ್ದು, ನವೆಂಬರ್ 22 ರಂದು ಗುಜರಾತ್‌ನಲ್ಲಿ ಚುನಾವಣೆಗೆ ಪ್ರಚಾರ ನಡೆಸಲಿದ್ದಾರೆ.

ಡಿಸೆಂಬರ್ 1 ಮತ್ತು 5 ರಂದು ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಈಗಾಗಲೇ ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದರು, ಕಾಂಗ್ರೆಸ್‌ ಪಕ್ಷವು ಚುನಾವಣೆ ಕುರಿತು ಪ್ರಚಾರ ಮಾಡದ ಕಾರಣ, ಕಾಂಗ್ರೆಸ್‌ ಪಕ್ಷದ ಮಾಜಿ ಅಧ್ಯಕ್ಷರಾದ ರಾಹುಲ್‌ ಗಾಂಧಿಯವರು ಬಿಜೆಪಿ ಪಕ್ಷದವರಿಂದ ಟೀಕೆಗೆ ಒಳಗಾಗಿದ್ದರು.

ಹಿಮಾಚಲದಲ್ಲಿ ಈಗ ಚುನಾವಣೆಗಳು ಮುಗಿದಿರುವುದರಿಂದ ಕಾಂಗ್ರೆಸ್ ಗುಜರಾತ್ ಮೇಲೆ ಕೇಂದ್ರೀಕರಿಸಿದೆ. ಚುನಾವಣೆ ಪ್ರಯುಕ್ತ ಮುಂದಿನ ಕೆಲವು ವಾರಗಳಲ್ಲಿ ಪಕ್ಷದ ಪ್ರಮುಖ ನಾಯಕರ ಹಲವಾರು ಪ್ರಚಾರ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಗುಜರಾತ್ ಚುನಾವಣೆಗೆ ಕಾಂಗ್ರೆಸ್ ತನ್ನ ಆರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇತ್ತೀಚಿನ ಪಟ್ಟಿಯನ್ನು ಬಿಡುಗಡೆ ಮಾಡುವುದರೊಂದಿಗೆ, ಪಕ್ಷವು ಈಗ ರಾಜ್ಯದ 142 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ನವೆಂಬರ್ 4 ರಂದು ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು, ಅದರಲ್ಲಿ 43 ಅಭ್ಯರ್ಥಿಗಳನ್ನು ಹೆಸರಿಸಲಾಗಿತ್ತು. ನವೆಂಬರ್ 10 ರಂದು 46 ಅಭ್ಯರ್ಥಿಗಳನ್ನು ಒಳಗೊಂಡ ಎರಡನೇ ಪಟ್ಟಿಯನ್ನು ಪ್ರಕಟಿಸಿತು. ಶುಕ್ರವಾರ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಒಬ್ಬ ಅಭ್ಯರ್ಥಿಯು ಬದಲಾಗಿರುವುದು ಕಂಡುಬಂದಿದೆ.

ಈ ಮೂಲಕ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್‌ನಲ್ಲಿ ಬಿಜೆಪಿಯ 27 ವರ್ಷಗಳ ಆಡಳಿತವನ್ನು ಕೊನೆಗೊಳಿಸುವ ಪ್ರಯತ್ನದಲ್ಲಿವೆ.

40% ಕಮಿಷನ್ ಸರ್ಕಾರ ಕಿತ್ತೊಗೆಯಲು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಶ್ರಮಿಸಿ: ಮಲ್ಲಿಕಾರ್ಜುನ್‌ ಖರ್ಗೆ
ಬೆಂಗಳೂರು: 40% ಕಮಿಷನ್ ಸರ್ಕಾರ ಕಿತ್ತೊಗೆಯಲು, ಕಾಂಗ್ರಸ್‌ ಸರ್ಕಾರ ಅಧಿಕಾರಕ್ಕೆ ಬರಬೇಕು. ಅದಕ್ಕಾಗಿ ಕಾಂಗ್ರೆಸ್‌ ಪಕ್ಷದ ನಾಯಕರು, ಸದಸ್ಯರು ಹಾಗೂ ಕಾರ್ಯಕರ್ತರು ಒಟ್ಟಾಗಿ ಶ್ರಮಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಈ ಕುರಿತು ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಒಬ್ಬ ಕಾರ್ಮಿಕ ಕುಟುಂಬದಲ್ಲಿ ಹುಟ್ಟಿ ಬೆಳೆದು, ವಿದ್ಯಾರ್ಥಿ ಸಂಘಟನೆ ಕಟ್ಟಿ ಅದರ ಅಧ್ಯಕ್ಷನಾಗಿ ಜವಳಿ ಕಾರ್ಮಿಕರ ಸಂಘಗಳ ಜತೆ ಕೆಲಸ ಮಾಡಿ ಅಲ್ಲಿ ಆರಿಸಿ ಬಂದಿದ್ದೆ. ನಾವು ನಮ್ಮ ಸ್ವಂತ ಶಕ್ತಿ ಮೇಲೆ ಮುಂದೆ ಬಂದಾಗ ಬೇರೆಯವರು ಅದನ್ನು ಗುರುತಿಸುತ್ತಾರೆ. ಆಗ ನಿಮ್ಮಲ್ಲಿರುವ ಶಕ್ತಿಗೆ ಬೆಂಬಲ ಸಿಗುತ್ತದೆ ಎಂದು ಹೇಳಿದರು.

ನನ್ನ ಸಂಘಟನೆ ನೋಡಿ ಕಾಂಗ್ರೆಸ್ 1969ರಲ್ಲೀ ಇಬ್ಬಾಗ ಆದಾಗ ನಮ್ಮ ಜಿಲ್ಲೆಯ ಕನ್ವೀನರ್ ಧರ್ಮರಾವ್ ಅವರು ಗುಲ್ಬರ್ಗಾ ಬ್ಲಾಕ್ ಅಧ್ಯಕ್ಷರಾಗಿ ಪಕ್ಷ ಕಟ್ಟಲು ನೇರವಾಗಿ. ನಿಮಗೆ ಇತ್ತ ಭವಿಷ್ಯ ಇದೆ ಎಂದು ಪ್ರೋತ್ಸಾಹ ನೀಡಿದರು.

ದೇಶದಲ್ಲಿ ಕಾಂಗ್ರೆಸ್ ಬಲವಾಗಿ ಅಧಿಕಾರಕ್ಕೆ ಬರಲಿದೆ. ಇಂದಿರಾ ಗಾಂಧಿ ಅವರು ಬೆಳೆಯುತ್ತಾರೆ. ನೀವು ಪ್ರಮುಖರಾಗಿ ಇರಬೇಕು ಎಂದರು. ದೇವರಾಜ ಅರಸು ಅವರು ಕನ್ವೀನರ್ ಆಗಿದ್ದಾಗ ನಾನು, ಧರ್ಮ ಸಿಂಗ್ ಸೇರಿದಂತೆ 10-15 ಯುವಕರನ್ನು ಕರೆದು ಪಕ್ಷದ ಕೆಲಸ ಮಾಡಿ ನಿಮಗೆ ಪಕ್ಷದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದರು.

1969ರಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾದೆ ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ, ಕೆಪಿಸಿಸಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಉಪಾಧ್ಯಕ್ಷನಾಗಿ, ಕೆಪಿಸಿಸಿ ಅಧ್ಯಕ್ಷನಾಗಿ, ಸಿಡಬ್ಲ್ಯೂಸಿ ಸದಸ್ಯನಾಗಿ ಹಾಗೂ ಈಗ ಎಐಸಿಸಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ.

ನಾನು ಒಂದೇ ಬಾರಿಗೆ ಈ ಸ್ಥಾನಕ್ಕೆ ಜಿಗಿದಿಲ್ಲ. ಹಂತ ಹಂತವಾಗಿ ಬೆಳೆದಿದ್ದೇನೆ. ಎಲ್ಲವೂ ಒಂದೇ ಬಾರಿಗೆ ಆಗುವುದಿಲ್ಲ. ಇಂತಹ ಚಿಂತನೆ ಇರಬಾರದು. ಸೇವೆ ಮಾಡಬೇಕು, ಗುರಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ನಾವು ಅಧಿಕಾರಕ್ಕೆ ಪಕ್ಷ ಸೇರುವುದಿಲ್ಲ. ಪಕ್ಷದ ತತ್ವ ಸಿದ್ಧಾಂತ ಅರಿತು ಪಕ್ಷ ಅಧಿಕಾರಕ್ಕೆ ಬಂದಾಗ ಅದನ್ನು ಜಾರಿಗೊಳಿಸಲು ಕೆಲಸ ಮಾಡಬೇಕು. ಪಕ್ಷದ ತತ್ವ ಸಿದ್ಧಾಂತ ಬೆಳೆಸಲು ಶ್ರಮಿಸಬೇಕು. ನೆಹರೂ, ಅಂಬೇಡ್ಕರ್, ಗಾಂಧಿ ಅವರ ವಿಚಾರ ಅರಿಯದಿದ್ದರೆ ಮನಬಂದಂತೆ ನಡೆದುಕೊಳ್ಳುತ್ತಾರೆ. ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ ಎಂದರು.

ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು. ನಾವು ಇಂದು ನಂಬಿರುವ ತತ್ವ ಉಳಿಸಿ ಬೆಳೆಸಿಕೊಂಡು ಹೋಗಬೇಕು. ಆಮೂಲಕ ಪಕ್ಷಕ್ಕೆ ಶಕ್ತಿ ತುಂಬಬೇಕು. ನಮ್ಮ ವಿಚಾರಧಾರೆಗೆ ಧಕ್ಕೆ ಆದಾಗ ನನ್ನ ನೋವುಗಳನ್ನು ಬದಿಗಿಟ್ಟು ಪಕ್ಷದ ಜತೆಗೆ ಇರುತ್ತೇನೆ. ಇದನ್ನು ನಾವು ತಿಳಿಯಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಬಹಳ ಮಂದಿ ನೀವು 70 ವರ್ಷದಲ್ಲಿ ಏನು ಮಾಡಿದ್ದೀರಿ ಎಂದು ಕೇಳುತ್ತಾರೆ. ನಾವು 70 ವರ್ಷದಲ್ಲಿ ಏನೂ ಮಾಡದಿದ್ದರೆ ದೇಶ ಇಷ್ಟು ಗಟ್ಟಿಯಾಗಿ ಒಂದಾಗಿರಲು ಸಾಧ್ಯವಾಗುತ್ತಿರಲಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಆಳವಾಗಿ ಬೇರೂರಿರುವುದು, ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಉಳಿಯಬೇಕು. ಆಗ ಮೋದಿ, ಶಾ ಉಳಿಯುತ್ತಾರೆ. ನಿಮಗೆ ಹಕ್ಕು, ಮೂಲಭೂತ ಅಧಿಕಾರ ಸಿಗುತ್ತದೆ. ನಾವು ಹೆದರಿ ಮನೆಯಲ್ಲಿ ಕೂತರೆ ಏನೂ ಆಗುವುದಿಲ್ಲ. ಈ ದೇಶ ಪ್ರಜಾಪ್ರಭುತ್ವ, ಸಂವಿಧಾನ ಉಳಿಸಬೇಕಾದರೆ ನೀವು ಜನರನ್ನು ಸಂಘಟಿಸಬೇಕು. ಆಗ ದೇಶದಲ್ಲಿರುವ ಕೆಟ್ಟ ಸರ್ಕಾರ ಕಿತ್ತೊಗೆಯಲು ಸಾಧ್ಯ ಎಂದರು.

ಮೋದಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮನಬಂದಂತೆ ಮಾತನಾಡುತ್ತಾರೆ. ಇವರು ಮೋದಿ ಅವರ ಶಾಲೆಯಲ್ಲಿ ಕಲಿತವರೆ? ಇವರು ನಾವು ಮಾಡಿರುವ ಶಾಲೆ, ಕಾಲೇಜಿನಲ್ಲಿ ಓದಿ, ನಮ್ಮ ಸಾರ್ವಜನಿಕ ಉದ್ದಿಮೆಯಲ್ಲಿ ದುಡಿದು ಬೆಳೆದಿದ್ದಾರೆ. ಆದರೂ ಇವರು ನೀವು ಏನು ಮಾಡಿದ್ದೀರಿ ಎಂದು ಕೇಳುತ್ತಾರೆ ಎಂದು ಕಿಡಿಕಾರಿದರು.

ನಾವು ದೇಶ ರಕ್ಷಣೆ ಮಾಡಿ ದೇಶವನ್ನು ಒಗ್ಗಟ್ಟಾಗಿ ಇಟ್ಟಿದ್ದೇವೆ. ಬಾಂಗ್ಲಾ ಪ್ರತ್ಯೇಕ ದೇಶ ಮಾಡಿದ್ದು ಇಂದಿರಾ ಗಾಂಧಿ. ದೇಶದ ವಿದೇಶಾಂಗ ನೀತಿ ಮಾಡಿದ್ದು ನೆಹರೂ ಅವರು. ಪದೇ ಪದೇ ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಏನು ಮಾಡಿದ್ದಾರೆ ಎಂದು ಟೀಕೆ ಮಾಡುವುದಲ್ಲ. ಸೋನಿಯಾ ಗಾಂಧಿ ಅವರು ಮಾಡಿರುವ ತ್ಯಾಗ ನೀವು ಮಾಡಿಲ್ಲ. ಯುಪಿಎ ಮೊದಲ ಸರ್ಕಾರ ಸಮಯದಲ್ಲಿ ಸೋನಿಯಾ ಗಾಂಧಿ ಅವರಿಗೆ ಪ್ರಧಾನಿ ಆಗುವಂತೆ ಕೇಳಿದಾಗ ನಾನು ಪ್ರಧಾನಿ ಆಗುವುದಿಲ್ಲ ಎಂದು, ದೇಶದ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಸ್ಥಾನ ತ್ಯಾಗ ಮಾಡಿದರು ಎಂದು ಹೇಳಿದರು.

ನಾವು ಒಂದು ಚೇರ್ಮನ್, ಮಂತ್ರಿ ಸ್ಥಾನ, ಪಕ್ಷದ ಹುದ್ದೆ ಸಿಗಲಿಲ್ಲ ಎಂದರೆ ಮುನಿಸಿಕೊಳ್ಳುತ್ತೇವೆ. ಆ ಕುಟುಂಬದ ತ್ಯಾಗ ಬಲಿದಾನ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರು ಪ್ರಾಣತ್ಯಾಗ, ರಾಜಕೀಯದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ತ್ಯಾಗ ಮಾಡಿದ್ದಾರೆ. ಅವರು ಪ್ರಧಾನಿ ಆಗಬಹುದಿತ್ತು ಆದರೆ ಆಗಲಿಲ್ಲ. ಗಾಂಧಿ ಕುಟುಂಬ ಸದಸ್ಯರೇ ಅಧ್ಯಕ್ಷರಾಗಿ ಇರಬೇಕು ಎಂದು ಕೇಳಿದೆವು. ಆಗ ನಾವು ಆಗುವುದಿಲ್ಲ. ನೀವು ಚುನಾವಣೆ ನಡೆಸಿ ಅಲ್ಲಿ ಗೆಲ್ಲುವವರು ಪಕ್ಷದ ಅಧ್ಯಕ್ಷರಾಗುತ್ತಾರೆ ಎಂದು ಹೇಳಿದವರು ತ್ಯಾಗಮೂರ್ತಿ ಸೋನಿಯಾ ಗಾಂಧಿ  ಎಂದು ಮಲ್ಲಿಕಾರ್ಜುನ್‌ ಖರ್ಗೆ ತಿಳಿಸಿದರು.

ಅವರು ಪಕ್ಷದಲ್ಲಿ ಒಗ್ಗಟ್ಟು ಇರಬೇಕು, ಬೆಳೆಯಬೇಕು ಎಂದು ಈ ತ್ಯಾಗ ಮಾಡಿದ್ದಾರೆ. ಇಂದು ಆರ್ ಎಸ್ ಎಸ್, ಮೋದಿ, ಶಾ ಅವರು ಕಿರುಕುಳ ನೀಡುತ್ತಿದ್ದಾರೆ. ಪದೇ ಪದೆ ನಮ್ಮ ಪಕ್ಷದ ವಿರುದ್ಧ ಮಾತನಾಡುತ್ತಾರೆ. ಗಾಂಧಿ ಕುಟುಂಬ ಈ ಚುನಾವಣೆ ನಿಲ್ಲಲಿಲ್ಲ, ಆದರೂ ಬಿಜೆಪಿ ಅವರು ಮಾತನಾಡುವುದು ನಿಲ್ಲಿಸಲ್ಲ. ನಮ್ಮ ಪಕ್ಷದ ಬಗ್ಗೆ ನಿಮಗೆ ಯಾಕೆ ಚಿಂತೆ? ದೇಶ ಮುನ್ನಡೆಸುವ ಬಗ್ಗೆ ಗಮನಹರಿಸಿ ಎಂದು ಹೇಳಿದರು.

ಈ ದೇಶದಲ್ಲಿ  ಸ್ವತಂತ್ರ್ಯ ಸಿಗುವ ಮುನ್ನ 400 ಕಾಲೇಜು ಇದ್ದವು. ಇಂದು 11 ಲಕ್ಷ ಶಾಲೆ ಕಾಲೇಜು ಇವೆ. 1947ದಲ್ಲಿ 2 ಲಕ್ಷ ಪ್ರಾಥಮಿಕ ಶಾಲೆ ಇದ್ದವು. 2014ರಲ್ಲ 7 ಲಕ್ಷ ಪ್ರಾಥಮಿಕ ಶಾಲೆ ಇದ್ದವು. 877 ಹೈಸ್ಕೂಲ್ ಇದ್ದವು ಇಂದು 1 ಲಕ್ಷ ಹೈಸ್ಕೂಲ್ ಇದ್ದಾವೆ. 27 ವಿವಿ ಇದ್ದವು ಇಂದು 723 ವಿವಿ ಗಳಿವೆ ಎಂದು ಮಾಹಿತಿ ನೀಡಿದರು.

ಅಕ್ಷರಸ್ಥ ಪ್ರಮಾಣ ಶೇ16 ರಷ್ಟಿತ್ತು 2014ರಲ್ಲಿ ಇದು ಶೇ.74 ರಷ್ಟು ಆಯಿತು. ಪರಿಶಿಷ್ಟ ಜಾತಿ ಪಂಗಡದವರು 08%ರಷ್ಟು ಅಕ್ಷರಸ್ಥರು ಇದ್ದರು. ಇಂದು 67% ಇದ್ದಾರೆ ಎಂದರು.

ಸ್ವಾತಂತ್ರ ಪೂರ್ವದಲ್ಲಿ 4 ಲಕ್ಷ ಕಿಮೀ ಇದ್ದ ರಸ್ತೆ ಇಂದು 54 ಲಕ್ಷ ಕಿಮೀ ರಸ್ತೆ ಮಾಡಿದ್ದೇವೆ. ಸರ್ಕಾರಿ ನೌಕರಿ ವಿಚಾರ. ವಾಡಿ ಗದಗ 2200 ಕೋಟಿ ಯೋಜನೆಗೆ ನಾವು ನಿರ್ಧರಿಸಿದೆವು. ಅದಕ್ಕೆ ಅಂದಿನ ಸಿಎಂ ಸಿದ್ದರಾಮಯ್ಯ ಅಡಿಗಲ್ಲು ಹಾಕಬೇಕಿತ್ತು. ಆಗ ನಾನು ಈ ಯೋಜನೆಗೆ ಗೈರಾದೆ. ಕಾರಣ ಕೋಲಾರದಲ್ಲಿ ರೈಲ್ವೆ ಬೋಗಿ ಯೋಜನೆ ಮಂಜೂರು ಮಾಡಲು ಗೈರಾದೆ. ಆದರೆ ಮೋದಿ ಒಂದು ರೈಲು ಚಾಲನೆಗೂ ಹೋಗಿ ಪ್ರಚಾರ ಪಡೆಯುತ್ತಾರೆ. ನನ್ನ ಕಾಲದಲ್ಲಿ ಅಂತಹ 27 ರೈಲು ಆರಂಭಿಸಿದ್ದೇನೆ. ಇಂತಹ ದೊಡ್ಡ ಯೋಜನೆ ಕೊಟ್ಟರೂ ಪ್ರಚಾರ ಪಡೆಯಲಿಲ್ಲ ಎಂದು ಹೇಳಿದರು.

ಗುಜರಾತ್ ಚುನಾವಣೆಯಲ್ಲಿ ಕಳೆದ 9 ದಿನದಿಂದ ಪ್ರಚಾರ ಮಾಡುತ್ತಿದ್ದಾರೆ. ಯಾವ ಮಟ್ಟಕ್ಕೆ ಎಂದರೆ ಮೋರ್ಬಿ ಸೇತುವೆ ರಿಪೇರಿಗೆ 2 ಕೋಟಿ ನೀಡಲಾಗಿತ್ತು. ಇವರು 2 ಕೋಟಿ ಯೋಜನೆ ಉದ್ಘಟನೆ ಮಾಡಿದರು. ಇವರ ಕೈಗುಣವೋ ಏನೋ ಉದ್ಘಾಟನೆ ಮಾಡಿದ 5 ದಿನದಲ್ಲೇ ಸೇತುವೆ ಬಿದ್ದು ಹೋಯಿತು. 138 ಜನ ಸತ್ತರು. ಇದಕ್ಕೆ ಯಾರು ಜವಾಬ್ದಾರಿ ಹೊತ್ತರು? ಯಾರಾದರೂ ರಾಜೀನಾಮೆ ಕೊಟ್ಟರು? ಅದೇ ಪಶ್ಚಿಮ ಬಂಗಾಲದಲ್ಲಿ ಸೇತುವೆ ಬಿದ್ದಾಗ ದೇವರು ಇವರ ಆಡಳಿತ ನೋಡಿ ಬೇಸತ್ತು ಸೇತುವೆ ಕೆಡವಿದ್ದಾನೆ ಎಂದು ಹೇಳಿದ್ದರು ಎಂದರು.

ನಾವು ಮಾಡಿದ ಪ್ರತಿ ಕೆಲಸಕ್ಕೆ ಅಡ್ಡಗಾಲು ಹಾಕಿದ್ದಾರೆ. ಹೆಸರು ಬದಲಿಸುತ್ತಾರೆ. ನೀವು ಸತ್ಯನಾಶ ಮಾಡುತ್ತಿದ್ದೀರಿ. ನಾವು ಸತ್ಯದ ಪರವಾಗಿದ್ದೇವೆ. ನೀವು ಸುಳ್ಳು ಹೇಳಿ ಬದುಕುತ್ತಿದ್ದೀರಿ. ಮತ ಪಡೆಯಲು ಜಾತಿ ಧರ್ಮ ನಡುವೆ ದ್ವೇಷ ಬಿತ್ತುತ್ತಿದ್ದಾರೆ. ಮಹಿಳೆ ಮೇಲಿನ ದೌರ್ಜನ್ಯ ವಿರುದ್ಧ ಒಂದು ದಿನ ಧ್ವನಿ ಎತ್ತಿಲ್ಲ. ಮಾತೆತ್ತಿದರೆ ಗುಹೆ, ಮಂದಿರದಲ್ಲಿ ಪ್ರಾರ್ಥನೆ ಮಾಡುವುದಾಗಿದೆ. ದೇವರ ಪೂಜೆ ನಿಮ್ಮ ಮನೆಯಲ್ಲಿ ಮಾಡಿ. ಉಪವಾಸದಲ್ಲಿ ಜನ ಸಾಯಿತ್ತಿದ್ದು, ನಿರುದ್ಯೋಗ ಹೆಚ್ಚುತ್ತಿದೆ. ಬೆಲೆ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಕುಸಿಯುತ್ತಿದೆ. ಈ ಬಗ್ಗೆ ಮಾತನಾಡುವ ಬದಲು ಕಾಂಗ್ರೆಸ್ ವಿರುದ್ಧ ಮಾತನಾಡುತ್ತಾರೆ ಎಂದು ಟೀಕಿಸಿದರು.

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು 3500 ಕಿಮೀ ಪಾದಯಾತ್ರೆ ಆರಂಭಿಸಿದ ನಂತರ ಬಿಜೆಪಿಗೆ ನಡುಕ ಹುಟ್ಟಿದೆ. ಈಗ ರಾಹುಲ್ ಗಾಂಧಿ ಅವರ ಬಗ್ಗೆ ಜನರ ಪ್ರೀತಿ ಕಂಡು ದಿಗಿಲು ಹುಟ್ಟಿದೆ.

ನೀವು ಕಾಂಗ್ರೆಸ್ ಪಕ್ಷದ ಬಗ್ಗೆ ಯೋಚಿಸಬೇಡಿ. ನಾವು ಒಟ್ಟಾಗಿದ್ದೇವೆ. ನಮ್ಮನ್ನು ಬೇರೆ ಮಾಡಲು ಸಾಧ್ಯವಿಲ್ಲ. ಮುಂದಿನ ಚುನಾವಣೆಯಲ್ಲಿ ಎಲ್ಲಾ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಸರ್ಕಾರಿ ಹುದ್ದೆ ತುಂಬುತ್ತೆವೆ. ನಾವು ಅಧಿಕಾರದಲ್ಲಿದ್ದಾಗ ಶಿಕ್ಷಣ ಇಲಾಖೆಯಲ್ಲಿ 18 ಸಾವಿರ ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡಿದ್ದೆವು. ದೇಶದಲ್ಲಿ 14 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇವೆ. ಅವುಗಳನ್ನು ಯಾಕೆ ತುಂಬುತ್ತಿಲ್ಲ. ಕಾರಣ ಬಡವರು ದಲಿತರಿಗೆ ಉದ್ಯೋಗ ಸಿಗುತ್ತದೆ. ಹೀಗಾಗಿ ಅವರು ತುಂಬಲ್ಲ ಎಂದು ಹೇಳಿದರು.

ಯುವಕರಿಗೆ ಕೆಲಸ ಕೊಡಿ. ಬಡವರಿಗೆ ಹಣ ಬಂದರೆ ಅವರು ಹೊಟ್ಟೆ ತುಂಬಾ ಊಟ ಮಾಡುತ್ತಾರೆ. ರೈಲ್ವೆಯಲ್ಲಿ 1.34 ಲಕ್ಷ ಹುದ್ದೆ ತುಂಬುವುದಾಗಿ ಹೇಳಿದ್ದಾರೆ. ಈ ಹುದ್ದೆ ಹಲವು ವರ್ಷಗಳಿಂದ ಖಾಲಿ ಇದ್ದರೂ ತುಂಬಲಿಲ್ಲ. ಆದರೆ ಸಂಸತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಈಗ ತುಂಮಬುವುದಾಗಿ ಹೇಳುತ್ತಿದ್ದಾರೆ ಎಂದರು.

ಹಿಮಾಚಲ, ಗುಜರಾತ್, ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿ ಹೇಳುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. 8 ವರ್ಷದಲ್ಲಿ 16 ಕೋಟಿ ಉದ್ಯೋಗ ಎಲ್ಲಿ? ಹೊಸ ಉದ್ಯೋಗ ಸೃಷ್ಟಿಸುವುದಿರಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳೇ ತುಂಬುತ್ತಿಲ್ಲ ಎಂದು ವ್ಯಂಗಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಬೇಕಾದ ಅನುದಾನ, ಸಿದ್ದರಾಮಯ್ಯ ಅವರ ಕಾಲದಲ್ಲಿ ತರಲಾದ ಎಸ್ ಸಿಪಿ ಟಿಎಸ್ ಪಿ ಯೋಜನೆ ಅನುದಾನ ನೀಡದೆ, ಅವುಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು

ನನಗೆ ಇಂದು ನೀವು ಗೌರವಿಸಿ ಅಭಿನಂದಿಸಲು ಈ ಕಾರ್ಯಕ್ರಮ ಮಾಡುತ್ತಿದ್ದೀರಿ. ನೀವು ನನಗೆ ಯಾವಾಗ ಗೌರವ ನೀಡುತ್ತೀರಿ ಎಂದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಾಗ ಗೌರವ ಸಲ್ಲಿಸಿದಂತೆ ಆಗುತ್ತದೆ. ಈ ಹಾರ ತುರಾಯಿ ಸಾಮಾನ್ಯ. ನನಗೆ ನಿಜವಾಗಿ ಗೌರವ ಸಲ್ಲುವುದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗ ಮಾತ್ರ. ಹೀಗಾಗಿ ವೇದಿಕೆ ಮೇಲೆ ಇರುವ ನಾಯಕರು ತಮ್ಮ ಸಣ್ಣ ಪುಟ್ಟ ವ್ಯತ್ಯಾಸ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

40% ಕಮಿಷನ್ ಸರ್ಕಾರ ಕಿತ್ತೊಗೆಯಲು ನಮ್ಮ ಸರ್ಕಾರ ಬರಬೇಕು. ಅದಕ್ಕಾಗಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು. ಅನೇಕ ಕಾರ್ಯಕ್ರಮಗಳು ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನೀಡಿದ್ದೀರಿ. ಈಗ ಮತ್ತೆ ಅದೇ ಕೆಲಸ ಮಾಡಬೇಕು ಎಂದರು.

ನಾವು ಒಗ್ಗಟ್ಟಾಗಿ ಮುಂದೆ ಸಾಗಿದರೆ ಇದನ್ನು ಸಾಧಿಸಬಹುದು. ಮುನಿಸಿಕೊಂಡಿರುವವರು, ನಮ್ಮಿಂದ ದೂರ ಆಗಿರುವವರು, ಹೊಸ ಯುವಕರನ್ನು ಪಕ್ಷಕ್ಕೆ ಕರೆ ತನ್ನಿ. ಪಕ್ಷದ ಅಧ್ಯಕ್ಷನಾದ ನಂತರ ನಾನು ಮಾಡಬೇಕಾದ ಕೆಲಸಗಳು ಇವೆ. ಉದಯಪುರ ಸಭೆ ನಿರ್ಣಯಗಳನ್ನು ಕಾರ್ಯಕ್ರಮಗಳನ್ನು ಜಾರಿ ತರಲು ಆರಂಭಿಸಿದ್ದು, ಎಲ್ಲವನ್ನೂ ಒಂದೊಂದಾಗಿ ಅನುಷ್ಟಾನಕ್ಕೆ ತರಲು ಮುಂದಾಗಿದ್ದೇನೆ ಎಂದು ತಿಳಿಸಿದರು.

ಯುವಕರಿಗೆ 50%, ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಎಲ್ಲಾ ಘಟಕಗಳಿಗೆ ಜವಾಬ್ದಾರಿ ನೀಡಿ. ಸಂಘಟನೆಗೆ ಅವಕಾಶ ನೀಡಿ ಎಂದರು.

ಮಾಧ್ಯಮಗಳಲ್ಲಿ ನಮ್ಮ ವಿಚಾರ ಹೆಚ್ಚು ಪ್ರಚಾರ ಆಗುವುದಿಲ್ಲ. ಹೀಗಾಗಿ ಮನೆ ಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಿ. ನಾವು ಪಟ್ಟಣ ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಜನರಿಗೆ ಮನವರಿಕೆ ಮಾಡಿದಾಗ ಮಾತ್ರ ಬಿಜೆಪಿ ಎದುರಿಸಲು ಸಾಧ್ಯ. ಪಕ್ಷಕ್ಕೆ ಶಕ್ತಿ ತುಂಬಲು ಸಾಧ್ಯ. ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆಯಿಂದ ಸಿಗುತ್ತಿರುವ ಲಾಭವನ್ನು ಸರಿಯಾಗಿ ಬಳಸಿಕೊಳ್ಳಬೇಕು. ರಾಜ್ಯದ ಯಾತ್ರೆ ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ಹೇಳಿದ ಅವರು, ಅದ್ದೂರಿ ಸ್ವಾಗತ ಮಾಡಿದ ಎಲ್ಲಾ ನಾಯಕರಿಗೆ ಧನ್ಯವಾದ ಅರ್ಪಿಸಿದರು.

ಬಿಜೆಪಿ ಮತ್ತು ಟಿಆರ್‌ಎಸ್‌ ಪಕ್ಷ ಒಂದೇ ನಾಣ್ಯದ ಎರಡು ಮುಖಗಳು: ರಾಹುಲ್‌ ಗಾಂಧಿ
ಹೈದರಾಬಾದ್: ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್ ಮತ್ತು ಬಿಜೆಪಿ ಎರಡೂ ಒಂದೇ ನಾಣ್ಯದ ಎರಡು ಮುಖಗಳು ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎರಡೂ ಪಕ್ಷಗಳು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿವೆ ಮತ್ತು ಹಣದ ರಾಜಕೀಯದಲ್ಲಿ ತೊಡಗಿವೆ ಎಂದು ಹೇಳಿದ್ದಾರೆ.

ದೀಪಾವಳಿಗೆ ನಾಲ್ಕು ದಿನಗಳ ವಿರಾಮದ ನಂತರ ಭಾರತ್ ಜೋಡೋ ಯಾತ್ರೆಯನ್ನು ಪುನರಾರಂಭಿಸಿದ ರಾಹುಲ್‌ ಗಾಂಧಿಯವರು, ಸಂಸತ್ತಿನಲ್ಲಿ ಅಂಗೀಕಾರಕ್ಕಾಗಿ ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಮಂಡಿಸಿದ ಮಸೂದೆಗಳನ್ನು ಟಿಆರ್‌ಎಸ್ ಬೆಂಬಲಿಸುತ್ತದೆ ಎಂದು ಹೇಳಿದರು.

ಗುರುವಾರ ಸಂಜೆ, ನಾರಾಯಣಪೇಟೆ ಜಿಲ್ಲೆಯ ಗುನ್‌ಮುಕ್ಲಾ, ಮರಿಕಲ್‌ನಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರದ ಮೂರು ರೈತ ವಿರೋಧಿ ಕಾನೂನುಗಳಿಗೆ ಟಿಆರ್‌ಎಸ್ ಸಂಪೂರ್ಣ ಬೆಂಬಲವನ್ನು ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಕಾನೂನು ವಿರುದ್ಧ ನಿರ್ಣಯವನ್ನು ತಂದಿತು ಆದರೆ, ಟಿಆರ್‌ಎಸ್ ಅದನ್ನು ಬೆಂಬಲಿಸಲಿಲ್ಲ ಎಂದು ಹೇಳಿದರು.

ʼನಮಗೆ ಬಿಜೆಪಿ ಮತ್ತು ಟಿಆರ್‌ಎಸ್ ಒಂದೇ ಎಂದು ನಾನು ಇಲ್ಲಿ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ, ಅವು ಒಂದೇ ನಾಣ್ಯದ ಎರಡು ಭಾಗಗಳು. ಅವರು ಒಟ್ಟಿಗೆ ಕೆಲಸ ಮಾಡುತ್ತಾರೆ. ನೀವು ಇದನ್ನು ಅರ್ಥಮಾಡಿಕೊಳ್ಳಬೇಕು. ಅವರು ಪರಸ್ಪರ ಬೆಂಬಲಿಸುತ್ತಾರೆ. ಟಿಆರ್‌ಎಸ್ ಬಿಜೆಪಿಯವರನ್ನು ದೆಹಲಿಯಲ್ಲಿ ಬೆಂಬಲಿಸುತ್ತದೆ. ಮತ್ತು ತೆಲಂಗಾಣದಲ್ಲಿ ಬಿಜೆಪಿ ಟಿಆರ್‌ಎಸ್ ಬೆಂಬಲಿಸುತ್ತದೆ ಎಂದು ಹೇಳಿದರು.

ಟಿಆರ್‌ಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಹಣದ ರಾಜಕೀಯದಲ್ಲಿ ತೊಡಗಿವೆ, ಅಧಿಕಾರ ಹಿಡಿಯಲು ಮತ್ತು ಸರ್ಕಾರಗಳನ್ನು ಉರುಳಿಸಲು ಕುದುರೆ ವ್ಯಾಪಾರ ಮಾಡುತ್ತಿವೆ ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಟಿಆರ್‌ಎಸ್ ಸರ್ಕಾರ ಬಹುಶಃ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಬಣ್ಣಿಸಿದ ರಾಹುಲ್ ಗಾಂಧಿ, ₹ 15,000 ಕೋಟಿ ಆಪಾದಿತ ‘ಮಿಯಾಪುರ್ ಭೂ ಹಗರಣʼ ಮತ್ತು ತೆಲಂಗಾಣದ ಕಾಳೇಶ್ವರಂ ನೀರಾವರಿ ಯೋಜನೆಯನ್ನು ಉಲ್ಲೇಖಿಸಿದರು.

ಟಿಆರ್‌ಎಸ್ ಮತ್ತು ಬಿಜೆಪಿ ರಾಜಕೀಯ ಪಕ್ಷಗಳಲ್ಲ, ಆದರೆ ಜನರಿಗಾಗಿ ಕೆಲಸ ಮಾಡದೆ ಸಾರ್ವಜನಿಕ ಹಣವನ್ನು ಲೂಟಿ ಮಾಡುವ ಉದ್ದೇಶ ಹೊಂದಿರುವ ವ್ಯಾಪಾರ ಸಂಸ್ಥೆಗಳು ಎಂದು ರಾಹುಲ್‌ ಗಾಂಧಿ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ನೋಟು ಅಮಾನ್ಯೀಕರಣವು ದೇಶದ ಆರ್ಥಿಕತೆಯ ಬೆನ್ನೆಲುಬನ್ನು ಮುರಿದಿದೆ. ಭಾರತದಲ್ಲಿ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಂದ ಉದ್ಯೋಗ ಸೃಷ್ಟಿಯಾಗಿದೆ. ಆದರೆ 2016 ರ ನೋಟು ನಿಷೇಧ ಮತ್ತು ಜಿಎಸ್‌ಟಿ ಆಡಳಿತವು ಲಕ್ಷಾಂತರ ವ್ಯವಹಾರಗಳನ್ನು ಮುಚ್ಚಿದೆ ಎಂದು ಹೇಳಿದರು.

ದೇಶ ಅಥವಾ ತೆಲಂಗಾಣದಲ್ಲಿ  ಉದ್ಯೊಗ ನೀಡಲು ಬಯಸಿದರೂ ಅದು ಸಾಧ್ಯವಾಗದಂತಹ ಪರಿಸ್ಥಿತಿ ಇಂದು ನಿರ್ಮಾಣವಾಗಿದೆ ಎಂದರು.

ಅಡುಗೆ ಅನಿಲದ ಬೆಲೆ ಏರಿಕೆ ಬಗ್ಗೆ ಕೇಂದ್ರದ ಮೇಲೆ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷರು, ಯುಪಿಎ ಆಡಳಿತದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ ₹ 400 ಇದ್ದಾಗ ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಅವರು ದೂರು ನೀಡುತ್ತಿದ್ದರು, ಆದರೆ ಅವರು ಈಗ ಅದರ ಬಗ್ಗೆ ಮಾತನಾಡುವುದಿಲ್ಲ ಎಂದು ಹೇಳಿದರು.

ದೇಶದಲ್ಲಿ ನಿರುದ್ಯೋಗ ಮತ್ತು ಬೆಲೆ ಏರಿಕೆಯ ಸಮಸ್ಯೆಗಳನ್ನು ಎತ್ತುವ ಉದ್ದೇಶದಿಂದ ಯಾತ್ರೆಯನ್ನು ಪ್ರಾರಂಭಿಸಲಾಗಿದೆ ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಯಾತ್ರೆಯ ಭಾಗವಾಗಿ 3,500 ಕಿ.ಮೀ ನಡೆಯುವುದು ಸುಲಭವಲ್ಲದಿದ್ದರೂ, ಜನರು ತೋರುವ ಪ್ರೀತಿ ಮತ್ತು ವಾತ್ಸಲ್ಯವು ಅದನ್ನು ಸಾಧ್ಯವಾಗಿಸಿತು ಎಂದು ಹೇಳಿದರು.

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಹಾಗಾಗಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ.

ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿ ನಂತರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ರಾಜ್ಯದ ಜನತೆಯ ಸಹಕಾರದಿಂದ ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ನಿಮ್ಮ ಕ್ಯಾಮೆರಾ ಕಣ್ಣುಗಳೇ ಸಾಕ್ಷಿ ಎಂದರು.

ರಾಷ್ಟ್ರ ರಾಜಕಾರಣವನ್ನು ಬೇರೆ ದಿಕ್ಕಿನೆಡೆ ತೆಗೆದುಕೊಂಡು ಹೋಗುವ ಆಂದೋಲನವಾಗಿ ಈ ಯಾತ್ರೆ ಸಾಗಿದೆ. ಇದು ಕೇವಲ ಯಾತ್ರೆಯಾಗಿ ಉಳಿದಿಲ್ಲ. ಇದರಲ್ಲಿ ನೀವು ನಾವು ಕಂಡಿದ್ದು, ಯುವಕರು, ಮಹಿಳೆಯರು, ಪುಟಾಣಿ ಮಕ್ಕಳ ಪ್ರೀತಿ ವಿಶ್ವಾಸ. ಇಂದಿರಾ ಗಾಂಧಿ ಅವರನ್ನು ನೋಡಲು ಜನ ಹೇಗೆ ನೂಕುನುಗ್ಗಲು ಮಾಡಿಕೊಂಡು ಬರುತ್ತಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರನ್ನು ನೋಡಲು ನೂರಾರು ಕಿ.ಮೀ ದೂರದಿಂದ ಮಕ್ಕಳು ತಮ್ಮ ತಂದೆ ತಾಯಂದಿರ ಜತೆ ಆಗಮಿಸುತ್ತಿದ್ದರು.

ಈ ವೇಳೆ ರಾಹುಲ್ ಗಾಂಧಿ ಅವರು ಸಾವಿರಾರು ಜನರ ಜತೆ ಮಾತನಾಡಿ, ನೀವು ಏನು ಮಾಡುತ್ತಿದ್ದೀರಿ, ಏನು ಓದುತ್ತಿದ್ದೀರಿ, ಮುಂದೆ ಏನು ಮಾಡುತ್ತೀರಿ ಎಂದು ಕೇಳಿ ಅವರ ಅಭಿಪ್ರಾಯ ಪಡೆದರು ಎಂದು ತಿಳಿಸಿದರ.

ಬೆಳಗ್ಗೆ 5.30ಕ್ಕೆ ಎದ್ದು, 6.25ರ ವೇಳೆಗೆ ಪಾದಯಾತ್ರೆ ಆರಂಭಿಸುತ್ತಿದ್ದರು. ನಿಗದಿತ ನಡಿಗೆ ವೇಳಾಪಟ್ಟಿಯಲ್ಲಿ ಸ್ವಲ್ಪವೂ ಬದಲಾವಣೆ ಮಾಡಲಿಲ್ಲ. ನಾನು ತಡವಾಗಿ ಯಾತ್ರೆ ಆರಂಭಿಸೋಣ ಎಂದು ಮನವಿ ಮಾಡಿದಾಗ ಅದಕ್ಕೆ ಒಪ್ಪಲಿಲ್ಲ. ಇದು ನಮ್ಮಿಬ್ಬರ ನಡಿಗೆ ಮಾತ್ರವಲ್ಲ. 3500 ಕಿ.ಮೀ ದೂರ ಸಾಗಬೇಕು. ಹೀಗಾಗಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದರು. ಸಂಜೆ 4 ರಿಂದ ಮತ್ತೆ ಹೆಜ್ಜೆ ಹಾಕಿ ಎಲ್ಲಾ ಜನರ ಜತೆ ಮಾತನಾಡುತ್ತಿದ್ದರು ಎಂದು ರಾಹುಲ್‌ ಗಾಂಧಿ ಅವರ ಸಮಯ, ಶಿಸ್ತನ್ನು ಕುರಿತು ಹೊಗಳಿದರು.

ಚಾಮರಾಜನಗರದಲ್ಲಿ ಆದಿವಾಸಿಗಳು, ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬದವರು, ರಾಯಚೂರಿನಲ್ಲಿ ದೇವದಾಸಿಗಳು ಸೇರಿದಂತೆ ನರೇಗಾ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಐಟಿ ಉದ್ಯೋಗಿಗಳು, ನಿರುದ್ಯೋಗಿ ಯುವಕರು, ರೈತರು, ನಿವೃತ್ತ ಸೈನಿಕರು, ವ್ಯಾಪಾರಸ್ಥರು, ಎಲ್ಲ ವರ್ಗದವರ ಜತೆ ಸಂವಾದ ನಡೆಸಿದರು. ವಿಕಲಚೇತನ ಅತಿಥಿ ಶಿಕ್ಷಕಿ, ಮೆಕಾನಿಕ್ ಅವರ ಜತೆಗೆ ಚರ್ಚೆ ಸಂದರ್ಭದಲ್ಲಿ ಅವರು ಬಹಳ ಸ್ಪೂರ್ತಿದಾಯಕ ಅನುಭವ ಪಡೆದರು.  ರಾಹುಲ್ ಗಾಂಧಿ ಅವರ ದೈಹಿಕ ಕ್ಷಮತೆ ಒಂದೆಡೆಯಾದರೆ ಅವರ ಮಾನಸಿಕ ಕ್ಷಮತೆ ಬಹಳ ಬಲಿಷ್ಟವಾಗಿದೆ. ಅವರು ದೇಶ ಹಾಗೂ ಪಕ್ಷಕ್ಕಾಗಿ ಪ್ರಧಾನಮಂತ್ರಿ ಹುದ್ದೆ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದವರು ಎಂದು ಹೇಳಿದರು.

ಯಾತ್ರೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಬ್ಬರು ರಾಹುಲ್ ಗಾಂಧಿ ಅವರಿಗೆ ಅಧಿಕಾರ ವ್ಯಾಮೋಹ ಇಲ್ಲದ ನೀವು ಈ ಯಾತ್ರೆ ಮಾಡುತ್ತಿರುವುದೇಕೆ ಎಂದು ಕೇಳಿದಾಗ, ನೆಹರೂ ಅವರಿಂದ ಹಿಡಿದು ನಮ್ಮ ಕುಟುಂಬದ ಎಲ್ಲರಿಗೂ ಈ ದೇಶದ ಜನ ತೋರಿರುವ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಋಣ ತೀರಿಸಲು ಸಾಧ್ಯವಿಲ್ಲ. ನಮಗೆ ಅಧಿಕಾರ ಬರುತ್ತದೆ, ಹೋಗುತ್ತದೆ. ನಾನು ಈ ಹಿಂದೆಯೇ ಅಧಿಕಾರ ಅನುಭವಿಸಬಹುದಾಗಿತ್ತು. ಆದರೆ ಅವರ ಪ್ರೀತಿಯ ಋಣ ತೀರಿಸಲು ಅಸಾಧ್ಯ. ಹೀಗಾಗಿ ಅವರ ನೋವು, ಕಷ್ಟ ಆಲಿಸುತ್ತಿದ್ದೇನೆ. ನಮ್ಮ ಕೈಲಾದ ನೆರವು ನೀಡುತ್ತೇವೆ ಎಂದು ಉತ್ತರಿಸಿದರು.

ನಾವು ಮೊದಲ ದಿನ ಗುಂಡ್ಲುಪೇಟೆಯಿಂದ ಈ ಯಾತ್ರೆ ಆರಂಭಿಸಿದೆವು. ನಂತರ ಬದನವಾಳು ಗ್ರಾಮದಲ್ಲಿ ಸವರ್ಣೀಯರು ಹಾಗೂ ದಲಿತರ ಮಧ್ಯೆ ದಶಕಗಳಿಂದ ಇದ್ದ ವೈಮನಸ್ಸಿಗೆ ಅಂತ್ಯವಾಡಿ, ಅವರ ಮಧ್ಯೆ ನಾಶವಾಗಿದ್ದ ಸಾಮರಸ್ಯವನ್ನು ಮತ್ತೆ ಬೆಸೆದು, ಅಲ್ಲಿ ರಸ್ತೆ ನಿರ್ಮಾಣ ಮಾಡಿದ್ದೇವೆ. ಅದು ಸಣ್ಣ ರಸ್ತೆ. ಅದಕ್ಕೆ ಭಾರತ ಜೋಡೋ ರಸ್ತೆ ಎಂದು ಹೆಸರಿಟ್ಟು, ಎರಡೂ ಸಮಾಜದವರ ಜತೆ ಒಟ್ಟಿಗೆ ಕೂತು ಊಟ ಮಾಡಿ ಅವರಲ್ಲಿ ಮತ್ತೆ ಬಾಂಧವ್ಯ ಬೆಸೆಯಲಾಗಿದೆ. ಈ ಯಾತ್ರೆ ಯಶಸ್ಸಿಗೆ ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದರು.

ನಾನು ಬೇರೆ ಪಕ್ಷದ ಟೀಕೆ ಬಗ್ಗೆ ಚರ್ಚೆ ಮಾಡುವುದಿಲ್ಲ. ಈ ಐಕ್ಯತಾ ಯಾತ್ರೆ ಎಲ್ಲರ ಬದುಕಿನ ಭಾಗವಾಗಿದೆ. ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅವರ ಗಮನ ಸೆಳೆದದ್ದು ಎಂದರೆ, ಬಳ್ಳಾರಿಯಲ್ಲಿ ಜೀನ್ಸ್ ತಯಾರಿಕಾ ಉದ್ದಿಮೆಗಳ ಜತೆಗಿನ ಸಂವಾದ. ಕಡಿಮೆ ಬೆಲೆಗೆ ಅತ್ಯುತ್ತಮ ಜೀನ್ಸ್ ಪ್ಯಾಂಟ್ ತಯಾರು ಮಾಡುತ್ತಿದ್ದಾರೆ. ಅದಕ್ಕೆ ಭಾರತದ ಜೀನ್ಸ್ ರಾಜಧಾನಿ ಬಳ್ಳಾರಿ ಎಂದರು. ಇಂತಹ ಸಂಪನ್ಮೂಲದ ಉದ್ದಿಮೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಕೇವಲ ರಾಷ್ಟ್ರೀಯ ಸಮಸ್ಯೆ ಮಾತ್ರವಲ್ಲ, ರೈತರ ವಿಚಾರ ಕೂಡ ತಿಳಿದುಕೊಂಡರು. ನಿರುದ್ಯೋಗಿ ಯುವಕರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿರು. ಹೀಗಾಗಿ ರಾಜ್ಯದಲ್ಲಿನ ಸಮಸ್ಯೆ ಬಗ್ಗೆಯೂ ಹೆಚ್ಚು ಗಮನ ಹರಿಸಿದರು. ರಾಜ್ಯದಲ್ಲಿ ದಕ್ಷ ಆಡಳಿತ ನೀಡಬೇಕು, ಭ್ರಷ್ಟ ಸರ್ಕಾ ಕಿತ್ತೊಗೆಯಬೇಕು, ಯುವಕರಿಗೆ ಆಗುತ್ತಿರುವ ಮೋಸ ತಡೆಯಬೇಕು ಎಂದು ರಾಹುಲ್‌ರವರು ಚಿಂತನೆ ನಡೆಸಿದ್ದಾರೆ. ಸ್ಥಳೀಯ ಭಾಷೆ, ಕೇಂದ್ರದ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಆದ್ಯತೆ, ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂಬ ಸ್ಪಷ್ಟ ಸಂದೇಶ ನೀಡಿದರು ಎಂದರು.

ಅವರು ಈ ಯಾತ್ರೆಯಲ್ಲಿ ಎಲ್ಲಾ ಜಾತಿ, ಧರ್ಮಗಳ ಮಂದಿರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಸರಾ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿ, ನಮ್ಮ ಸಂಸ್ಕಾರ ಹಾಗೂ ಸಂಪ್ರದಾಯದಂತೆ ಹಬ್ಬ ಆಚರಣೆ ಮಾಡಿ, ಅರ್ಧ ದಿನ ಯಾತ್ರೆಯಲ್ಲಿ ಕೂಡ ಹೆಜ್ಜೆ ಹಾಕಿದರು.

ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಶೂ ಲೇಸ್ ಹಾಕಿದ್ದಕ್ಕೆ ಬಿಜೆಪಿ ತನ್ನ ಸಾಮಾಜಿಕ ಜಾಲತಾಣವೆಂಬ ಸುಳ್ಳಿನ ಕಾರ್ಖಾನೆ ಮೂಲಕ ಟೀಕೆ ಮಾಡಿದ್ದರು. ಆದರೆ, ತಾಯಿ ಮಗನ ಬಾಂಧವ್ಯ, ಜನರ ಪ್ರೀತಿ, ಅವರ ಅಕ್ಕರೆ ನಿಮ್ಮ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಇದೆಲ್ಲವನ್ನೂ ಜನ ಕಣ್ಣಾರೆ ನೋಡಿದ್ದಾರೆ.  ನಮ್ಮ ರಾಜ್ಯದಲ್ಲಿ ಈ ಯಾತ್ರೆಯನ್ನು ಇಲ್ಲಿಗೆ ನಿಲ್ಲಿಸದೆ, ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆಯ ಛಾಯಾಚಿತ್ರ ಪ್ರದರ್ಶನ ಮಾಡಲಾಗುವುದು. ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಬಿ.ಎಲ್ ಶಂಕರ್, ವಿ.ಆರ್ ಸುದರ್ಶನ್, ಪ್ರೊ.ರಾಧಾಕೃಷ್ಣ, ಸಿ.ಎಸ್ ದ್ವಾರಕನಾಥ್, ಐಶ್ವರ್ಯ ಮಹಾದೇವ್, ಗುರುಪಾದಸ್ವಾಮಿ, ಸೆಂಥಿಲ್, ಮನ್ಸೂರ್ ಅಲಿ ಖಾನ್ ಹಾಗೂ ದಿನೇಶ್ ಗೂಳಿಗೌಡ ಅವರನ್ನೊಳಗೊಂಡ ಸಮಿತಿ ಮಾಡಿ, ಈ ಯಾತ್ರೆ ಬಗ್ಗೆ ಅಧ್ಯಯನ ಮಾಡಿ, ರಾಜ್ಯದಲ್ಲಿ ಈ ಯಾತ್ರೆ ಮುಂದುವರಿಸಲು ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತೇನೆ ಎಂದು ಡಿ.ಕೆ.ಶಿ ಹೇಳಿದರು.

ರಾಹುಲ್ ಗಾಂಧಿ ಅವರು ರಾಯಚೂರಿನಲ್ಲಿ ಸಭೆ ಮಾಡಿ ಯಾತ್ರೆ ಕುರಿತು ನಮ್ಮ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಹಿನ್ನಲೆಯಲ್ಲಿ, ಈ ಯಾತ್ರೆಯನ್ನು ಮುಂದಿನ ದಿನಗಳಲ್ಲಿ ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಕಾರ್ಯಯೋಜನೆ ರೂಪಿಸುತ್ತೇವೆ. ಈ ಯಾತ್ರೆಯಲ್ಲಿ ಜನ ಹೇಳಿಕೊಂಡಿರುವ ಸಮಸ್ಯೆ ಬಗ್ಗೆ ನಾವು ಚರ್ಚಿಸಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುತ್ತೆವೆ ಎಂದು ಹೇಳಿದರು.

ಈ ಯಾತ್ರೆ ಯಶಸ್ಸು ಕೇವಲ ಡಿ.ಕೆ. ಶಿವಕುಮಾರ್ ಅವರದಲ್ಲ. ನನ್ನ ಅಧಿಕಾರ ಸ್ವೀಕಾರ ಕಾರ್ಯಕ್ರಮ, ಕೋವಿಡ್ ಸಮಯದಲ್ಲಿ ಪಕ್ಷದ ನೆರವಿನ ಕಾರ್ಯಕ್ರಮಗಳು , ಮೇಕೆದಾಟು ಪಾದಯಾತ್ರೆ ಸೇರಿ ಒಂದೊಂದು ಹೋರಾಟವೂ ಒಂದೊಂದು ಮೈಲಿಗಲ್ಲು ಸಾಧಿಸಿದೆ. ಮೇಕೆದಾಟು ಪಾದಯಾತ್ರೆ ಒಂದು ಟ್ರೆಂಡ್ ಸೆಟ್ಟರ್ ಆಗಿದೆ. ಸ್ವಾತಂತ್ರ್ಯ ನಡಿಗೆ ಕೂಡ ಯಶಸ್ವಿಯಾಗಿತ್ತು. ಈ ಎಲ್ಲಾ ಅನುಭವಗಳಿಂದ ಈ ಯಾತ್ರೆ ಮಾಡಲು ಅನುಕೂಲವಾಯಿತು. ನಮ್ಮ ರಾಜ್ಯದಲ್ಲಿನ ಯಾತ್ರೆ ಬೇರೆ ರಾಜ್ಯಗಳಿಗೆ ಮಾದರಿ ಆಗಿದೆ. ಬೇರೆ ರಾಜ್ಯದವರು ಈ ಯಾತ್ರೆ ಆಯೋಜನೆ ಬಗ್ಗೆ ಪ್ರಶಂಸೆ ಮಾಡಿದ್ದಾರೆ ಎಂದು ತಿಳಿಸಿದರು.

ನಾನು ಈ ಸಂದರ್ಭದಲ್ಲಿ ಯಾತ್ರೆಗೆ ಬಂದ ಎಲ್ಲಾ ಕಾರ್ಯಕರ್ತರು, ನಾಯಕರು, ಪಕ್ಷಾತೀತವಾಗಿ ಬಂದ ನಾಗರೀಕ ಸಮಾಜದವರು, ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಎಲ್ಲಾ ವರ್ಗದವರಿಗೆ ನಮನ ಸಲ್ಲಿಸಿದರು.

ಈ ಯಾತ್ರೆ ಒಂದು ಆಂದೋಲನವಾಗಿತ್ತು. ಇದು ಜನ ಸಂಪರ್ಕ ಯಾತ್ರೆ ಮಾತ್ರವಲ್ಲ, ದೇಶಕ್ಕೆ ಒಂದು ಹೋರಾಟ ಆಗಿತ್ತು. ಈ ಯಾತ್ರೆ ಇಡೀ ದೇಶ ಕೋಮು ಸಾಮರಸ್ಯ ಬೆಸೆಯುವತ್ತ ಗಮನಹರಿಸುವಂತೆ ಮಾಡಿದೆ ಎಂದರು.

ಬೆಲೆ ಏರಿಕೆ, ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಕೋಮು ದ್ವೇಷದ ವಿರುದ್ದದ ಈ ನಡಿಗೆ ಹಳ್ಳಿ, ಹಳ್ಳಿಯಲ್ಲೂ ಜನರ ಮನ ಮುಟ್ಟಿದೆ. ಈ ಬಗ್ಗೆ ರಾಹುಲ್ ಗಾಂಧಿ ಅವರು ಯಾತ್ರೆಯಲ್ಲಿ ಪ್ರಸ್ತಾಪ ಮಾಡಿದರೆ ಜನ ಜೋರಾಗಿ ಧ್ವನಿ ಎತ್ತುತ್ತಿದ್ದರು ಎಂದರು.

ವಿಶೇಷವಾಗಿ ಮಕ್ಕಳು ಯಾತ್ರೆಗೆ ಬಂದು ಭಾಗವಹಿಸಿದ್ದು ಅವಿಸ್ಮರಣೀಯ ಕ್ಷಣವಾಗಿತ್ತು.

ಈ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರು ತಲೆಮಾರುಗಳ ನಡುವಣ ಅಂತರವನ್ನು ಭರ್ತಿ ಮಾಡಿದ್ದಾರೆ. ಮಕ್ಕಳಿಂದ ವೃದ್ಧರವರೆಗೆ, ರೈತರಿಂದ ಕಾರ್ಮಿಕರವರೆಗೆ, ವಿದ್ಯಾರ್ಥಿಗಳಿಂದ ಯುವಕರವರೆಗೆ ಎಲ್ಲರನ್ನೂ ಮುಟ್ಟಿದ್ದು ರಾಹುಲ್ ಗಾಂಧಿ. ಅವರ ಹೊರತಾಗಿ ಬೇರೆಯವರಿಂದ ಇದು ಅಸಾಧ್ಯ. ಇದೊಂದು ಕ್ರಾಂತಿಕಾರಿ ಯಾತ್ರೆ. ಈ ಯಾತ್ರೆಯಲ್ಲಿ ಜನರಿಂದ ಸಿಕ್ಕ ಪ್ರೀತಿ ಅನುಭವ ವರ್ಣಿಸಲು ಅಸಾಧ್ಯ ಎಂದು ಹೇಳಿದರು.

ಈ ಯಾತ್ರೆಯಲ್ಲಿ ನೋವು ತಂದ ವಿಚಾರ ಎಂದರೆ ನಮ್ಮ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು, ಪೊಲೀಸ್ ಹೆಣ್ಣು ಮಗಳು ನಿಧನರಾಗಿದ್ದು. ನಾನು ಇದೇ 28ರಂದು ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಕಾರ್ಯಕರ್ತನ ಕುಟುಂಬಕ್ಕೆ ಘೋಷಣೆ ಮಾಡಿರುವಂತೆ 10 ಲಕ್ಷ ರು.ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಯಾತ್ರೆ ಅಂತಿಮ ದಿನ ರಾಯಚೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ನನ್ನ ಕಾಲದಲ್ಲಿ ಇಂತಹ ಐತಿಹಾಸಿಕ ಘಟ್ಟ ದಾಖಲಿಸುವ ಅವಕಾಶ ಸಿಕ್ಕಿತಲ್ಲ ಎಂಬ ತೃಪ್ತಿ, ಸಂತೋಷ ನನಗಿದೆ. ದೇಶದುದ್ದಗಲ ಜನಸಾಮಾನ್ಯರ ನೋವನ್ನು ತಾನೇ ಖುದ್ದಾಗಿ ಬಂದು ಆಲಿಸಿದ ಏಕೈಕ ನಾಯಕ ಎಂದರೆ ರಾಹುಲ್ ಗಾಂಧಿ ಮಾತ್ರ ಎಂದರು.

ಇದು ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಡೆಯ ಯಾತ್ರೆ ಆಗಿತ್ತು. ಅದೇ ರೀತಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ನಮ್ಮ ರಾಜ್ಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆ ಆದರು. ಇದು ದೇಶಕ್ಕೆ ಮಾತ್ರವಲ್ಲ ರಾಜ್ಯಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದರು.

ಭಾರತ್ ಜೋಡೋ ಯಾತ್ರೆಗೆ ನಿಮ್ಮ ನಾಯಕರು ಸರಿಯಾದ ಸಹಕಾರ ನೀಡಿಲ್ಲ ಎಂಬ ವರದಿಗಳು ಇವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸದ ಡಿ.ಕೆ.ಶಿಯವರು ‘ಎಲ್ಲರೂ ಸಹಕಾರ ಕೊಟ್ಟ ಕಾರಣದಿಂದ ಈ ಯಾತ್ರೆ ಆಗಿದೆ. ಎಲ್ಲರೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಿದ್ದಾರೆ. ಒಬ್ಬರು 10 ಗಾಡಿ ಜನ ತಂದರೆ, ಮತ್ತೊಬ್ಬರು 300 ಗಾಡಿ ಜನ ಕರೆತಂದಿದ್ದರು. ಕೆಲವರು 10 ಕಿ.ಮೀ ನಡೆದರೆ ಮತ್ತೊಬ್ಬರು 500 ಕಿ.ಮೀ ನಡೆದಿದ್ದಾರೆ. ಎಲ್ಲರ ಕೆಲಸದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಯಾರು ಯಾವ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಪ್ರತಿ ಶಾಸಕ, ಮಾಜಿ ಶಾಸಕ ಹಾಗೂ ಪರಿಷತ್ ಸದಸ್ಯರು ಜನರನ್ನು ಕರೆತರುವಂತೆ ಮಾಡಿದ್ದೇವೆ. ನಾನು ಅಧ್ಯಕ್ಷನಾಗಿದ್ದ ಕಾರಣ ನನ್ನ ಮೇಲೆ ಹೆಚ್ಚು ಜವಾಬ್ದಾರಿ ಇತ್ತು’ ಎಂದರು.

ಯಾತ್ರೆ ಕುರಿತು ಛಾಯಾಚಿತ್ರ ಪ್ರದರ್ಶನ ಯಾವಾಗ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ ಇದಕ್ಕಾಗಿ ಒಂದು ಸಮಿತಿ ರಚಿಸಿ, ಯಾವ ಯಾವ ಘಟನೆಗಳು ಮುಖ್ಯ ಎಂದು ಆಯ್ಕೆ ಮಾಡಿ, ನಂತರ ಎಲ್ಲಾ ಜಿಲ್ಲೆಗಳಲ್ಲಿ ಛಾಯಾಚಿತ್ರ ಪ್ರದರ್ಶನ ಮಾಡಲಾಗುವುದು’ ಎಂದು ತಿಳಿಸಿದರು.

ಖರ್ಗೆ ಅವರು ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಐಸಿಸಿ ಮಹಾಧಿವೇಶನ ಮಾಡುತ್ತೀರಾ ಎಂದು ಕೇಳಿದಾಗ, ‘ ಖರ್ಗೆ ಅವರು ನಾಳೆ ಅಧಿಕಾರ ಸ್ವೀಕಾರ ಮಾಡಲಿ. ನಂತರ ನಾವು ಚರ್ಚೆ ಮಾಡಿ ನಿಮಗೆ ಮಾಹಿತಿ ನೀಡುತ್ತೇವೆ ‘ ಎಂದರು.