rain – Peepal Media

6 ದಿನ ರಾಜ್ಯದಲ್ಲಿ ವರುಣನ ಆರ್ಭಟ, ಯೆಲ್ಲೋ ಅಲರ್ಟ್‌ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ (Karnataka Rains) ಮುಂದುವರೆದಿದೆ. ಇನ್ನೂ 6 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್‌ (Yellow Alert)  ಘೋಷಣೆ ಮಾಡಿದೆ.

ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ
ಕಳೆದ ಒಂದು ತಿಂಗಳಿನಿಂದ ಕರಾವಳಿ ಭಾಗದಲ್ಲಿ ಸಹ ಮಳೆ ಆರ್ಭಟ ಹೆಚ್ಚಿದ್ದು, ನಾಳೆ ಅಂದರೆ ಜುಲೈ 10ರ ಸಹ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಹಾಗಾಗಿ ಎಚ್ಚರಿಕೆ ವಹಿಸುವಂತೆ ಇಲಾಖೆ ಹೇಳಿದೆ. ಕರ್ನಾಟಕದ ಹಲವೆಡೆ ಧಾರಾಕಾರ ಮಳೆ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಗೆ ಸಹ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ, ಬಾಗಲಕೋಟೆ, ಬೀದರ್, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗುವ ಸಾಧ್ಯತೆ ಇದೆ.

ಇನ್ನು ಜುಲೈ 11 ಹಾಗೂ 12 ಮತ್ತು 13 ರಂದು ಸಹ ಕರಾವಳಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿ ಉಳಿದ ಜಿಲ್ಲೆಗಳಲ್ಲಿ ಸಹ ನಿರೀಕ್ಷೆಗಿಂತ ಹೆಚ್ಚಿನ ಮಳೆ ಆಗುವ ಸಂಭವ ಇದೆ. ಈ ದಿನಗಳಲ್ಲಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಮೈಸೂರು, ಮಂಡ್ಯ, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ನಿರೀಕ್ಷೆ ಮಾಡಲಾಗಿದೆ.

ಜುಲೈ 14 ಮತ್ತು 15ರಂದು ಸಹ ಈ ಮಳೆಯ ಆರ್ಭಟ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಚ್ಚರಿಕೆ ಘೋಷಿಸಲಾಗಿದೆ. ಇನ್ನು ಬೆಳಗಾವಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ.

ರಾಜ್ಯದ ಹಲವೆಡೆ ಒಂದು ವಾರ ಬಾರಿ ಮಳೆ – ಹವಮಾನ ಇಲಾಖೆ
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿದಂತೆ ವಿವಿಧೆಡೆ ಚಂಡಮಾರುತ ಪರಿಚಲನೆ ಏರ್ಪಟ್ಟಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಕೋಲಾರ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಯಾದಗಿರಿ, ಧಾರವಾಡ ಹಾಗೂ ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಜಮೀನುಗಳಲ್ಲಿ ಕೆಲಸ ಮಾಡುವ ರೈತರು ಎಚ್ಚರಿಕೆಯಿಂದ ಇರಬೇಕು. ಸಿಡಿಲು ಸಹಿತ ಭಾರೀ ಮಳೆಯಾಗುವ ಪರಿಣಾಮ ಯಾವುದೇ ಕಾರಣಕ್ಕೂ ಮರದ ಕೆಳಗಡೆ ನಿಲ್ಲಬಾರದು ಎಂದು ಸೂಚನೆ ನೀಡಲಾಗಿದೆ.

ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತ
ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ.

ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು.

ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದಂತಾಗಿತ್ತು.

ಇನ್ನು ಧಾರಾಕಾರ ಮಳೆಯಿಂದ ವಿದ್ಯುತ್‌ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಮಳೆ : ಕರಾವಳಿ, ಮಲೆನಾಡಿನ ಕಡೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ದಿನ ಬಾರಿ ಮಳೆಯಾಗುವ ಮುನ್ಸೂಚನೆ ಕಂಡುಬಂದಿದ್ದು, ಹವಾಮಾನ ಇಲಾಖೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮಳೆಯ ಪ್ರಮಾಣ ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಜುಲೈ 25 ಮತ್ತು 26 ಕ್ಕೆ ಮಳೆಯ ಪ್ರಮಾಣ ಏರಿಕೆ ಆಗುವ ಸಾಧ್ಯತೆ ಇರುವುದರಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಹಾಗೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಜುಲೈ 27 ಕ್ಕೆ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದ್ದು, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಭಾಗಗಳಲ್ಲಿ ಆರೆಂಜ್ ಅಲರ್ಟ್ ಮುಂದುವರಿಯುವ ಸಾಧ್ಯತೆ ಇದೆ.

ಸೋಮವಾರ ಒಂದೇ ದಿನ ಕರಾವಳಿ ಜಿಲ್ಲೆಗಳಲ್ಲಿ 20 ಸೆ.ಮೀ ಗೂ ಅಧಿಕ ಮಳೆ ಆಗಿದೆ. ಬುಧವಾರ ಮತ್ತು ಗುರುವಾರ ಮಳೆ ಸ್ವಲ್ಪ ಮಟ್ಟಿಗೆ ತಗ್ಗಲಿದ್ದು, ಬಿರುಗಾಳಿ ಬೀ‌ಸುವ ಮುನ್ಸೂಚನೆ ಕಾರಣಕ್ಕೆ ಆರೆಂಜ್ ಅಲರ್ಟ್ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಟ್ಟಾರೆ ಈ ವರೆಗೂ ಬಂದ ಮಳೆ ಹೋಲಿಸಿದರೆ ರಾಜ್ಯದ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಎಂದು ಮಾಹಿತಿ ಲಭ್ಯವಾಗಿದೆ. ಅದರಲ್ಲೂ ವಿಶೇಷವಾಗಿ ಕಳೆದ ಬಾರಿಗೆ ಹೋಲಿಸಿದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದ ರಾಮನಗರ, ಕೊಡಗು, ಹಾಸನ ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಬಹುತೇಕ ಕಡಿಮೆ ಆಗಿದೆ ಎಂದು ಇಲಾಖೆ ತಿಳಿಸಿದೆ.

ಮೈಸೂರಿನಲ್ಲಿ ಬಾರೀ ಮಳೆ : ಚಾಮುಂಡಿ ಬೆಟ್ಟದಲ್ಲಿ ಭೂಕುಸಿತ
ಮೈಸೂರು : ಮೈಸೂರಿನಲ್ಲಿ ಕಳೆದ ಮೂರು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿದ್ದು, ಚಾಮುಂಡಿ ಬೆಟ್ಟದಲ್ಲಿ ರಸ್ತೆಯ ಬಳಿ ಮತ್ತೆ ಭೂಕುಸಿತವಾಗಿರುವ ಘಟನೆ ನಡೆದಿದೆ.

ಮೈಸೂರಿನಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಬರುತ್ತಿದೆ. ಈ ಕಾರಣ ಜಿಲ್ಲೆಯ ಹಲವಾರು ಕಡೆಗಳಲ್ಲಿ ಮರಗಳು ನೆಲಕ್ಕುರುಳುತ್ತಿದ್ದು, ಚಾಮುಂಡಿ ಬೆಟ್ಟದ ನಂದಿ ಮಾರ್ಗದಲ್ಲಿ ಭೂ ಕುಸಿತವಾಗಿರುವ ಘಟನೆ ನಡೆದಿದೆ.

ಈ ಹಿಂದೆಯೂ ಮಳೆಯಿಂದಾಗಿ ರಸ್ತೆ ಕುಸಿದಿತ್ತು. ಇದೀಗ ವೀಕ್ಷಣಾ ಗೋಪುರ ಪಕ್ಕದ ರಸ್ತೆ ಕುಸಿದಿದೆ. ಒಂದೆಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದರೆ ಮತ್ತೊಂದೆಡೆ ರಸ್ತೆ ಕುಸಿಯುತ್ತಿದ್ದು, ರಸ್ತೆಗಳು ಬಿರುಕು ಬಿಟ್ಟಿರುವ ಕಾರಣ ಮಳೆಯಿಂದ ಮತ್ತಷ್ಟು ರಸ್ತೆಗಳು ಕುಸಿಯುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಪಾಕಿಸ್ತಾನದಲ್ಲಿ ಪ್ರವಾಹ ಭೀತಿ : ಏರಿಕೆಯಾಗುತ್ತಿರುವ ಸಾವಿನ ಸಂಖ್ಯೆ
ಇಸ್ಲಮಾಬಾದ್‌ :  ಬಿಟ್ಟು-ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಪಾಕಿಸ್ತಾನದ ಹಲವು ಭಾಗಗಳಲ್ಲಿ ಪ್ರವಾಹ ಭೀತಿ ಶುರುವಾಗಿದೆ.

ಈ ಪ್ರವಾಹ ಪರಿಸ್ಥಿತಿಯಿಂದಾಗಿ ಹಲವು ಮನೆಗಳು ಕೊಚ್ಚಿಹೋಗಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಈಗಾಗಿ ಕಳೆದ 24 ಗಂಟೆಗಳಲ್ಲಿ 119ಜನರು ಸಾವನ್ನಪ್ಪಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ದೇಶದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, ಒಟ್ಟು ಸಾವಿನ ಸಂಖ್ಯೆ 1,033 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಭಾರಿ ಮಳೆಯಿಂದಾಗಿ ಕೆರೆಗಳಂತಾದ ರಸ್ತೆಗಳು: ವಾಹನಗಳ ಸಂಚಾರಕ್ಕೆ ಅಡಚಣೆ
ಬೆಂಗಳೂರು: ನಿನ್ನೆ ಸುರಿದ ಭಾರಿಮಳೆಯಿಂದಾಗಿ, ರಸ್ತೆಯಲ್ಲಿ ನೀರು ನಿಂತಿದ್ದು ಬೆಂಗಳೂರಿನಿಂದ ರಾಮನಗರಕ್ಕೆ  ತಲುಪುವ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಶುಕ್ರವಾರ ರಾತ್ರಿ ಬೆಂಗಳೂರು ಸೇರಿದಂತೆ ರಾಮನಗರ ಜಿಲ್ಲೆಯ ಹಲವು ಕಡೆ ಭಾರಿ ಮಳೆಯಾಗಿದ್ದು, ಕೆಂಗೇರಿ ಮತ್ತು  ಬಿಡದಿ ಬಳಿ ಇರುವ ಹಳ್ಳಗಳು ತುಂಬಿಹರಿದಿವೆ. ಈ ಕಾರಣ ರಸ್ತೆ ತುಂಬೆಲ್ಲಾ ನೀರು ನಿಂತಿದ್ದು, ಬೆಂಗಳೂರಿನಿಂದ ರಾಮನಗರಕ್ಕೆ ತಲುಪುವ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ. ಸುಮಾರು ಎರಡ ರಿಂದ ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿದ್ದು, ಈ ಮಾರ್ಗವಾಗಿ ಚಲಿಸುವ ಪ್ರಯಾಣಿಕರು ಟ್ರಾಫಿಕ್‌ ನಲ್ಲಿ ಸಿಲುಕಿ ಪರದಾಡುವಂತಾಗಿದೆ.

ಸ್ವಲ್ಪ ಸಮಯದ ನಂತರ ರಸ್ತೆಯಲ್ಲಿನ ನೀರಿನ ಮಟ್ಟ ಕಡಿಮೆಯಾದಂತೆ ಬಸ್, ಲಾರಿ, ಕಾರುಗಳು  ಸಂಚಾರ ಮುಂದುವರೆಸಿವೆ. ಆದರೆ ಬೈಕ್‌ ಸವಾರರಿಗೆ ಪ್ರಯಾಣಕ್ಕೆ ತೊಂದರೆಯಾದ್ದರಿಂದ, ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆಯಲ್ಲಿ ನಿಧಾನವಾಗಿ ಚಲಿಸುವಂತೆ ಬೆಂಗಳೂರು ಸಂಚಾರ ಪೊಲೀಸ್‌ ಇಲಾಖೆ ಅನುವು ಮಾಡಿಕೊಟ್ಟಿದೆ.

ಬೆಂಗಳೂರು ರಾಮನಗರ ಮಧ್ಯದ ಮಾರ್ಗ

ವರದಿ: ನಾಗಾರ್ಜುನ ಎಂ.ವಿ

ಭಾರಿ ಮಳೆಯಿಂದಾಗಿ ಮನೆ ಕುಸಿತ
ಶಿವಮೊಗ್ಗ: ಜಿಲ್ಲೆಯಲ್ಲಿ ಬಿಟ್ಟು-ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪಾರ್ವತಮ್ಮ ಎಂಬುವರ ಮನೆ ಕುಸಿದಿದೆ.

ಶಿವಮೊಗ್ಗ ತಾಲೂಕಿನ ಮಲಗೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕೊಟ್ಟಿಗೆಯಲ್ಲಿ ಕುಟುಂಬಸ್ಥರು ವಾಸವಾಗಿದ್ದಾರೆ.

ಮನೆ ಕುಸಿದು ನಾವೆಲ್ಲ ಕಂಗಾಲಾಗಿದ್ದೇವೆ, ಸಧ್ಯಕ್ಕೆ ಕೊಟ್ಟಿಗೆಯಲ್ಲಿ ನಾವೇಲ್ಲ ವಾಸಿಸುತ್ತಿದ್ದೇವೆ, ಮನೆ ಕುಸಿದಿರುವ ಮಾಹಿತಿ ಅಧಿಕಾರಿಗಳಿಗೆ ತಿಳಿದಿದೆ ಆದರೆ ಯಾರೊಬ್ಬ ಅಧಿಕಾರಿಯು ಬಂದು ಘಟನೆ ಬಗ್ಗೆ ವಿಚಾರಿಸಿಲ್ಲ ಎಂದು ಕುಟುಂಬಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನೂ ಮೂರು ದಿನ ಮಳೆ ಹೆಚ್ಚಾಗುವ ಮುನ್ಸೂಚನೆ!
ರಾಜ್ಯಾದ್ಯಂತ ರಣ ಭೀಕರ ಮಳೆ ಸಾಕೆನ್ನಿಸುವಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಇನ್ನೂ ಎರಡು ದಿನ ಮಳೆ ಇನ್ನೂ ಹೆಚ್ಚಾಗಿ ಇರಲಿದೆ ಎಂಬ ಬಗ್ಗೆ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗೂ ಹೆಚ್ಚು ಕಾಲ ದಟ್ಟ ಮೋಡ ಹೊಂದಿದ್ದು ಮಳೆಯ ಪ್ರಮಾಣದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ.

ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಹಾಸನ, ಬೆಳಗಾವಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗೆ ಹಳದಿ ಅಲರ್ಟ್ ಎಂದು ಹೇಳಲಾಗಿದೆ. ಈ ಜಿಲ್ಲೆಗಳ ಭಾಗದ ಜನರು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಇಲಾಖೆ ಮನವಿ ಮಾಡಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಹ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣವಿರಲಿದ್ದು, ಮಳೆಯ ಪ್ರಮಾಣ ಜಾಸ್ತಿ ಎಂದೇ ಹೇಳಲಾಗಿದೆ. ಈಗಾಗಲೇ ಮಳೆಯಿಂದ ತತ್ತರಿಸಿದ ಬೆಂಗಳೂರು ಇನ್ನು ಕನಿಷ್ಟ ಮೂರು ದಿನಗಳಿಗೂ ಮಳೆಯನ್ನು ಸಹಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಿದೆ.

ಇನ್ನುಳಿದಂತೆ ಯಾದಗಿರಿ, ವಿಜಯಪುರ, ಬಾಗಲಕೋಟೆ, ಹಾವೇರಿ ಜಿಲ್ಲೆಗಳಲ್ಲೂ ಮಳೆಯ ಪ್ರಮಾಣ ಜಾಸ್ತಿ ಆಗಲಿದೆ. ಇನ್ನು ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಮುಂದಿನ ಎರಡು ದಿನಗಳ ಮಳೆಗೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಇನ್ನೂ ಮೂರು ದಿನ ಮುಂದುವರೆಯಲಿರುವ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯಾದ್ಯಂತ ಮಳೆಯ ಆರ್ಭಟ ತೀವ್ರವಾಗಿದ್ದು, ಇನ್ನಷ್ಟು ಅವಾಂತರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮಾಹಿತಿಯಂತೆ ಇನ್ನೂ ಮೂರು ದಿನಗಳು ಮಳೆಯ ಪ್ರಮಾಣ ಹೀಗೇ ಅಥವಾ ಇನ್ನೂ ತೀವ್ರವಾಗಿ ಇರಲಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ತನ್ನ ಆರ್ಭಟ ಮುಂದುವರೆಸಿದ್ದು, ನಗರ ಪ್ರದೇಶಗಳಲ್ಲಿ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರಿನ ಹರಿವು ಮುಂದುವರೆದಿದ್ದು ಮನೆಯೊಳಗಿನ ನೀರು ಹೊರ ಹಾಕುವ ಪ್ರಕ್ರಿಯೆ ನಡೆಯುತ್ತಲೇ ಇದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ಜನರು ಮನೆ ಬಿಟ್ಟು ಬೇರೆಡೆಗೆ ಸ್ಥಳಾಂತರ ಆದ ಬಗ್ಗೆಯೂ ವರದಿಯಾಗಿದೆ.

ನದಿ ಪಾತ್ರದ ಪ್ರದೇಶಗಳಲ್ಲಿನ ಜನರಿಗೆ ಸ್ಥಳೀಯ ಆಡಳಿತ ಎಚ್ಚರಿಕೆ ಕೊಟ್ಟಿದ್ದು, ಜನರು ಜಾಗ್ರತೆ ವಹಿಸಿಕೊಳ್ಳಬೇಕು ಅಥವಾ ತಾತ್ಕಾಲಿಕವಾಗಿ ಬೇರೆಡೆಗೆ ಸ್ಥಳಾಂತರ ಆಗಬೇಕು ಎಂದು ಮನವಿ ಮಾಡಿದೆ. ಬಹುತೇಕ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದ್ದು ಜಲಾಶಯಗಳ ಗೇಟ್ ಗಳನ್ನು ತೆರೆಯಲಾಗಿದೆ. ಅದರಂತೆ ಹಲವು ಭಾಗಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದು ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.

ಹಲವಷ್ಟು ಘಟ್ಟ ಪ್ರದೇಶದ ಜಾಗಗಳಲ್ಲಿ ಗುಡ್ಡ ಕುಸಿದ ಬಗ್ಗೆಯೂ ವರದಿಯಾಗಿದೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ರಸ್ತೆ ಮೇಲೆಯೇ ನದಿಯಂತೆ ನೀರು ಹರಿಯುತ್ತಲಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಡಕುಂಟಾಗಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದ್ದು ಸ್ಥಳೀಯ ಆಡಳಿತ ಇನ್ನಷ್ಟು ಜಾಗರೂಕರಾಗುವ ಅವಶ್ಯಕತೆಯಿದೆ.