Rajasthan – Peepal Media

ರಾಜಸ್ಥಾನ: ಅಂಬೇಡ್ಕರ್ ಪ್ರತಿಮೆಯ ಬಳಿ ಬ್ಯಾನರ್‌ ಕಟ್ಟಲು ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ
ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ಬೋನ್ಲಿ ನಗರದಲ್ಲಿ ಸೋಮವಾರ ಮುಂಜಾನೆ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಬಳಿ ಬ್ಯಾನರ್‌ ಕಟ್ಟಲು ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೋಮವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘರ್ಷಣೆ ಪ್ರಾರಂಭವಾಗಿ ಸುಮಾರು ಎರಡು ಗಂಟೆಗಳ ಕಾಲ ನಡೆಯಿತು ಎಂದು ಪತ್ರಿಕೆ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೋನ್ಲಿಯಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಅಂಬೇಡ್ಕರ್ ಜಯಂತಿಗೂ ಮುನ್ನ ಭಾನುವಾರ, ಪ್ರತಿಮೆಯ ಮೇಲೆ ಕಾಂಗ್ರೆಸ್ ಶಾಸಕಿ ಇಂದಿರಾ ಮೀನಾ ಮತ್ತು ಇತರ ಪಕ್ಷದ ಕಾರ್ಯಕರ್ತರ ಹೆಸರನ್ನು ಹೊಂದಿರುವ ಬ್ಯಾನರ್‌ ಕಟ್ಟಲಾಯಿತು.

ಇದರ ತಿಳಿದ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಸ್ಥಳೀಯ ನಾಯಕರಿಗೆ ಮಾಹಿತಿ ನೀಡಿದರು. ನಂತರ ಬಿಜೆಪಿ ಬ್ಲಾಕ್ ಅಧ್ಯಕ್ಷ ಹನುಮಾನ್ ದೀಕ್ಷಿತ್ ಮತ್ತು ಪಂಚಾಯತ್ ಸಮಿತಿ ಪ್ರಧಾನ್ ಕ್ರಿಶನ್ ಪೋಸ್ವಾಲ್ ಸ್ಥಳಕ್ಕೆ ಆಗಮಿಸಿ ಅದನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದರು.

ಇದಾದ ನಂತರ, ಮೀನಾ ಕೂಡ ಸ್ಥಳಕ್ಕೆ ಆಗಮಿಸಿ ಬಿಜೆಪಿ ನಾಯಕರ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿದರು. ನಂತರದ ಗಲಾಟೆಯ ಸಮಯದಲ್ಲಿ, ಅವರು ದೀಕ್ಷಿತ್ ಅವರ ಕಾರಿನ ಮೇಲೆ ಹತ್ತಿ ಅವರ ಕಾಲರ್ ಹಿಡಿದಿರುವ ವೀಡಿಯೊಗಳು ಕಂಡುಬಂದಿವೆ.

कांग्रेस विधायक इंदिरा मीणा ने फाड़े भाजपा नेता के कपड़े।

बामनवास विधायक इंदिरा मीणा और BJP मंडल अध्यक्ष हनुमत दीक्षित के बीच अंबेडकर मूर्ति पर पुनः शिलापट्टिका लगाने को लेकर विवाद हुआ। विवाद इतना बढ़ा कि इंदिरा मीणा ने मंडल अध्यक्ष के कपड़े तक फाड़ दिए।

वीडियो बौंली (सवाई… pic.twitter.com/x3tKN7gHK8
— Akash Tiwari (@AkashgauravJR) April 14, 2025

ಘರ್ಷಣೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬ್ಯಾನರ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಈಗ ಬೋನ್ಲಿ ಪೊಲೀಸ್ ಠಾಣೆಯಲ್ಲಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿದ್ದ ಬಿಜೆಪಿ ಕಾರ್ಯಕರ್ತರ ಗುಂಪೊಂದು ಸ್ಥಳಕ್ಕೆ ಆಗಮಿಸಿ, ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಬಲವಂತವಾಗಿ ಬ್ಯಾನರನ್ನು ತೆಗೆದು, ನಡೆಯುತ್ತಿರುವ ಕೆಲಸಕ್ಕೆ ಅಡ್ಡಿಪಡಿಸಿದೆ ಎಂದು ಮೀನಾ ಆರೋಪಿಸಿದ್ದಾರೆ.

“ಬಾಬಾ ಸಾಹೇಬ್ ಕೇವಲ ಒಬ್ಬ ವ್ಯಕ್ತಿಯಲ್ಲ, ಬದಲಾಗಿ ಕೋಟ್ಯಂತರ ದಲಿತರು, ವಂಚಿತರು ಮತ್ತು ಶೋಷಿತ ಜನರ ಭರವಸೆ ಮತ್ತು ಧ್ವನಿ. ಇದು ಅವರ ಮೇಲಿನ ದಾಳಿಯೇ ಹೊರತು, ಪ್ರತಿಮೆಯ ಮೇಲೆ ಅಲ್ಲ, ಸಮಾನತೆ, ಸಮಾನತೆ ಮತ್ತು ನ್ಯಾಯದ ಹಕ್ಕನ್ನು ನೀಡಿದ ಸಂವಿಧಾನದ ಮೇಲೆ ನಡೆಸಿದ ದಾಳಿ” ಎಂದು ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿರುವುದರಿಂದ ಪೊಲೀಸರು ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ಮೀನಾ ಆರೋಪಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

आज बौली (सवाईमाधोपुर) में संविधान विरोधी और बाबा साहब भीमराव अंबेडकर विरोधियों का चेहरा बेनकाब हो गया ।
हमने बौंली मे 2022 में अंबेडकर सर्कल का निर्माण कराया था जिसका सौन्दर्यकरण कार्य चल रहा है लेकिन बाबा साहब की  जयंती के कुछ घंटे पहले ही बाबा साहब विरोधी कुछ भाजपा के असमाजिक… pic.twitter.com/jEQ6SAGFjy
— Indira Meena (@IndiraMeena_) April 14, 2025

ಬಿಜೆಪಿ ಕಾರ್ಯಕರ್ತರು ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪವನ್ನು ದೀಕ್ಷಿತ್ ನಿರಾಕರಿಸಿದರು.

“ನಾನು ಪರಿಸ್ಥಿತಿಯನ್ನು ಪ್ರಬುದ್ಧವಾಗಿ ನಿಭಾಯಿಸಲು ಪ್ರಯತ್ನಿಸಿದೆ, ಆದರೆ ಶಾಸಕಿ ಇಂದಿರಾ ಮೀನಾ ನನ್ನೊಂದಿಗೆ ಕೆಟ್ಟದಾಗಿ ವರ್ತಿಸಿದರು. ಪ್ರತಿಮೆಯ ಅಲಂಕಾರದ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದ್ದರೆ, ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿರುವ ಒಂದು ಕೆಲಸಕ್ಕೆ ಕಾಂಗ್ರೆಸ್ ಶಾಸಕರು ತಮ್ಮ ನಾಮಫಲಕವನ್ನು ಹಾಕಲು ಏಕೆ ಪ್ರಯತ್ನಿಸುತ್ತಿದ್ದರು?” ಎಂದು ಅವರು ಹೇಳಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ .

ರಾಜ್ಯಸ್ಥಾನದಿಂದ ರಾಜ್ಯಸಭಾ ಕಣಕ್ಕೆ ಸೋನಿಯಾಗಾಂಧಿ: ಇಂದು ನಾಮಪತ್ರ ಸಲ್ಲಿಕೆ
ಜೈಪುರ: ರಾಜ್ಯಸಭಾ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಿಂದ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ಕಣಕ್ಕೆ ನಿರ್ಧರಿಸಿದ್ದು, ನಾಮಪತ್ರ ಸಲ್ಲಿಸಲು ಸೋನಿಯಾ ಗಾಂಧಿ ಇಂದು ಮುಂಜಾನೆ ಜೈಪುರ ತಲುಪಿದ್ದಾರೆ.

ಸೋನಿಯಾಗಾಂಧಿ ಅವರೊಂದಿಗೆ ಪುತ್ರ ರಾಹುಲ್‌ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕ ಗಾಂಧಿ ವಾದ್ರ ಕೂಡ ಇದ್ದರು. ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಮತ್ತಿತರ ನಾಯಕರು ಸೋನಿಯಾರನ್ನು ಸ್ವಾಗತಿಸಿದರು.
ಐದು ಅವಧಿಗೆ ಲೋಕಸಭಾ ಸಂಸದೆಯಾಗಿದ್ದ 77 ವರ್ಷದ ಸೋನಿಯಾ ಗಾಂಧಿ ಇದೇ ಮೊದಲ ಬಾರಿಗೆ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ರಾಯ್‌ ಬರೇಲಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಸೋನಿಯಾ ಅವರು 1999ರಲ್ಲಿ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದರು.

ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. 2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಇನ್ನೋರ್ವ ಹಿರಿಯ ಕಾಂಗ್ರೆಸ್‌ ನಾಯಕ ಅಭಿಷೇಕ್‌ ಮನು ಸಿಂಘ್ವಿ ಅವರು ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯನ್ನು ಎದುರಿಸಲಿದ್ದಾರೆ.

ಮದುವೆ ಮನೆಯಲ್ಲಿ ಸಿಲಿಂಡರ್‌ ಸ್ಪೋಟ: 4 ಸಾವು, 60 ಮಂದಿಗೆ ಗಾಯ
ರಾಜಸ್ಥಾನ: ರಾಜಸ್ತಾನದ ಜೋಧ್‌ಪುರದ ಭುಂಗ್ರಾ ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಹಿಳೆ, ಮಗು ಸೇರಿ ನಾಲ್ವರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಭುಂಗ್ರದಾ ಮದುವೆ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್‌ ಒಂದು ಸ್ಪೋಟಗೊಂಡಿರುವ ಭೀಕರ ಘಟನೆ ಗುರುವಾರ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿಯನ್ನು ನಂದಿಸಿದ್ದಾರೆ. ಈ ದುರಂತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ 42 ಜನರನ್ನು ಹತ್ತಿರದ ಎಂಜಿಹೆಚ್‌ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾರವರು, ಈ ಘಟನೆಯು ಭುಂಗ್ರಾದಿಂದ ವರನ ಕಡೆಯವರ ಮೆರವಣಿಗೆ ಪ್ರಾರಂಭವಾಗುವ ಮೊದಲು ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.

ರಾಜಸ್ಥಾನ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು
ಕೋಟಾ: ಕಳೆದ ವರ್ಷ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 21 ವರ್ಷದ ಯುವಕನಿಗೆ ಪೋಕ್ಸೊ ನ್ಯಾಯಾಲಯ ಮಂಗಳವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಗೆಂಡೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಅಪರಾಧಿ, ಅಪೂರ್ವ್ ಅಲಿಯಾಸ್ ರಾಮನ್ ಗೋಸ್ವಾಮಿ (21) ಕಳೆದ ವರ್ಷ ಆಗಸ್ಟ್ 14 ರಂದು ಮಗುವಿಗೆ ಚಾಕೊಲೇಟ್ ಕೊಟ್ಟು, ನಂತರ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ವಿಷಯ ತಿಳಿದ ಕುಟುಂಬದ ಸದಸ್ಯರು, ಮರುದಿನ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧ ಹಾಗೂ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಯಿತು.

ತ್ವರಿತ ವಿಚಾರಣೆಗಾಗಿ, ಪೊಲೀಸರು ಪ್ರಕರಣವನ್ನು ವಿಶೇಷ ಕೇಸ್ ಆಫೀಸರ್ ಸ್ಕೀಮ್ ಅಡಿಯಲ್ಲಿ ವರ್ಗೀಕರಿಸಿದ್ದರು, ನಂತರ 20-22 ದಿನಗಳಲ್ಲಿ ಚಾರ್ಜ್ ಶೀಟ್‌ ಸಲ್ಲಿಸಿದ್ದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ರಾಕೇಶ್ ಠಾಕೂರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನಲೆಯಲ್ಲಿ, ಪೋಕ್ಸೊ ನ್ಯಾಯಾಲಯದ  ನ್ಯಾಯಾಧೀಶ ಸಲೀಂ ಬಾದರ್ ಅವರು ಅಪರಾಧಿಗೆ ₹ 50,000 ದಂಡವನ್ನು ವಿಧಿಸಿದ್ದಾರೆ ಎಂದು ಠಾಕೂರ್ ಹೇಳಿದರು.

ರಾಜಾಸ್ಥಾನ: 46,500 ಶಿಕ್ಷಕರ ನೇಮಕಾತಿಗೆ ಅನುಮೋದನೆ
ರಾಜಸ್ಥಾನ: ಶಿಕ್ಷಣ ಇಲಾಖೆಯು ಮುಂಬರುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಒಟ್ಟು 46,500 ಹುದ್ದೆಗಳಿದ್ದು, ಹಂತ 1 ರಲ್ಲಿ 21,000 ಮತ್ತು ಹಂತ 2 ರಲ್ಲಿ 25,500 ಹುದ್ದೆಗಳಿವೆ. ಈ ಹುದ್ದೆಗಳು ವಿಶೇಷ ಶಿಕ್ಷಣ ಶಿಕ್ಷಕರ 4,500 ಹುದ್ದೆಗಳನ್ನೂ ಒಳಗೊಂಡಿರುತ್ತವೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರ ಬಲದಿಂದಲೇ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಸಚಿನ್ ಪೈಲಟ್
ಕೋಟಾ: ಐದು ವರ್ಷಗಳ ಕಾಲ ಹೋರಾಟ ನಡೆಸಿದ ಪಕ್ಷದ ಕಾರ್ಯಕರ್ತರ ಬಲದಿಂದಾಗಿ 2018 ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಪಕ್ಷದ ಹಿರಿಯ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

ಸಚಿನ್‌ ಪೈಲಟ್  ಅವರು ಸೋಮವಾರ ಮಧ್ಯಾಹ್ನ ರೈಲಿನಲ್ಲಿ ಕೋಟಾ ತಲುಪಿ ನಂತರ ಜಲಾವರ್‌ಗೆ ತೆರಳಿದ್ದು, ಅಲ್ಲಿ ಅವರು ಅಹೀರ್ ಯಾದವ್ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಅತ್ಯುತ್ತಮ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ವೇಳೆ ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾಗ 2018ರಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರ್ಯಕರ್ತರುಗಳೆಲ್ಲಾ ಸೇರಿ ಐದು ವರ್ಷಗಳ ಕಾಲ ಹೋರಾಟ ನಡೆಸಿದ್ದೇವೆ. ಹೀಗಾಗಿ ಪಕ್ಷದ ಕಾರ್ಯಕರ್ತರ ಬಲದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು ಎಂದರು.

ದುರ್ಗಾಪೂಜೆ ವೇಳೆ ಅಗ್ನಿ ಅವಘಡ: ಮೂವರ ಸಾವು 64ಕ್ಕೂ ಹೆಚ್ಚು ಮಂದಿಗೆ ಗಾಯ
ಭದೋಹಿ: ದುರ್ಗಾ ದೇವಿ ಪೂಜೆ ವೇಳೆ ಪೆಂಡಾಲ್‌ಗೆ ಬೆಂಕಿ ಹತ್ತಿ ಮೂವರು ಸಾವನ್ನಪ್ಪಿದ್ದು, 64 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಭದೋಹಿ ಜಿಲ್ಲೆಯ ಔರಾಯ್‌ನಲ್ಲಿ ನಡೆದಿದೆ.

ಔರಾಯ್‌ ನಲ್ಲಿ ದುರ್ಗಾಪೂಜೆ ನಿಮಿತ್ತ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಈ ವೇಳೆ ಹಾಲೊಜೆನ್‌ ಲೈಟ್‌ ಹೆಚ್ಚು ಬಿಸಿಯಾದ ಕಾರಣ ಪೆಂಡಾಲ್‌ಗೆ ಬೆಂಕಿ ಹತ್ತಿಕೊಂಡಿದೆ. ಹೀಗಾಗಿ 67 ಮಂದಿ ಗಾಯಗೊಂಡಿದ್ದಾರೆ, ಅದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದ್ದು, ಮೂರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ರಾತ್ರಿ 9 ಗಂಟೆ ಸುಮಾರಿಗೆ  ಆರತಿ ಮಾಡುತ್ತಿದ್ದಾಗ ಪೆಂಡಾಲ್‌ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಪೆಂಡಾಲ್‌ಗೆ ವ್ಯಾಪಿಸಿದೆ. ಈ ಸಂದರ್ಭದಲ್ಲಿ ಜನರು ಅವಘಡದಿಂದ ತಪ್ಪಿಸಿಕೊಳ್ಳಲು ಓಡಲು ಶುರುಮಾಡಿದ್ದು, ಪೆಂಡಾಲ್‌ ಒಳಗೆ ಕಡಿಮೆ ಸ್ಥಳ ಇರುವುದರಿಂದ ಕಾಲ್ತುಳಿತಕ್ಕೆ ಸಿಲುಕಿ ಪೆಂಡಾಲ್‌ನಿಂದ ಹೊರಬರಲಾಗದೆ ಬೆಂಕಿಗೆ ಸಿಕ್ಕಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಗಾಯಗೊಂಡವರಲ್ಲಿ ಹೆಚ್ಚಿನ ಮಂದಿ ಮಹಿಳೆಯರು ಮತ್ತು ಮಕ್ಕಳೇ ಆಗಿದ್ದು. ಅದರಲ್ಲಿ 45 ವರ್ಷದ ಮಹಿಳೆ, 12 ಮತ್ತು 10 ವರ್ಷದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: 8 ಜನರ ಮೇಲೆ ಪೋಕ್ಸೋ ಪ್ರಕರಣ ದಾಖಲು
ರಾಜಸ್ಥಾನ : 8 ನೇ ತರಗತಿಯಲ್ಲಿ ಓದುತ್ತಿರುವ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿರುವ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಕಿಶನ್‌ಗಢ್ ಬಾಸ್ ಪ್ರದೇಶದಲ್ಲಿ ನೆಡೆದಿದೆ.

ಬಾಲಕಿಯ ಮೇಲೆ ಹತ್ಯಾಚಾರ ಎಸಗಿರುವ ದೃಶ್ಯವನ್ನು ವೀಡಿಯೋ ಮಾಡಿ ಬ್ಲಾಕ್‌ಮೇಲ್‌ ಮಾಡಿರುವುದಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾರೆ. ಈ ಹಿನ್ನಲೆ ಸಂತ್ರಸ್ತೆಯ ಕುಟುಂಬಸ್ಥರು ಹತ್ಯಾಚಾರ ಎಸಗಿರುವವರ ಮೇಲೆ ದೂರು ದಾಖಲಿಸಿದ್ದಾರೆ.

ದೂರಿನ ಮೇರೆಗೆ ಎಲ್ಲಾ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ, ಸಾಮೂಹಿಕ ಅತ್ಯಾಚಾರ ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ತನಿಖೆಯನ್ನು ಕಿಶನ್‌ಗಢ್ ಬಾಸ್‌ನ ಡಿಎಸ್‌ಪಿ ಅತುಲ್ ಅಗ್ರೆ ಅವರಿಗೆ ಹಸ್ತಾಂತರಿಸಲಾಗಿದ್ದು, ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಗ್ರೆ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪ್ರಸ್ತುತ ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರವೇ ಎಲ್ಲರನ್ನೂ ಬಂಧಿಸುವುದಾಗಿ ಡಿಎಸ್‌ಪಿ ಅಗ್ರೆ ಹೇಳಿದ್ದಾರೆ.

ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ 2% ಮೀಸಲಾತಿ ಪ್ರಕಟ: ರಾಜಸ್ಥಾನ ಸರ್ಕಾರ
ರಾಜಸ್ಥಾನ: ರಾಜಾಸ್ಥಾನ ಸರ್ಕಾರವು ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ 2% ಮೀಸಲಾತಿಯನ್ನು ಪ್ರಕಟಿಸಿದೆ.

ಪ್ರತಿಭಾವಂತ ಆಥ್ಲೀಟ್‌ಗಳಿಗೆ ಔಟ್-‌ ಆಫ್-ಟರ್ನ್‌ ಉದ್ಯೋಗಗಳು, ಕ್ರೀಡಾ ತರಬೇತುದಾರರಿಗೆ ಮತ್ತು ಕ್ರೀಡಾಪಟುಗಳಿಗೆ ಪಿಂಚಣಿ ನೀಡುವುದಾಗಿ ಘೋಷಿಸಿದೆ.

ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನದ ಮೊತ್ತವನ್ನು ರೂ 3 ಕೋಟಿಗೆ ಏರಿಕೆ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ʼನೆಹರೂ ಇಲ್ಲದೆ ಅಮೃತ ಮಹೋತ್ಸವ ಯಶಸ್ವಿಯಾಗುವುದಿಲ್ಲʼ: ಅಶೋಕ್‌ ಗೆಹ್ಲೋಟ್‌
ರಾಜಸ್ಥಾನ: ಪಂಡಿತ್‌ ಜವಾಹರಲಾಲ್‌ ನೆಹರೂ ಇಲ್ಲದೆ ಯಾವುದೇ ಅಮೃತ ಮಹೋತ್ಸವ ಯಶಸ್ವಿಯಾಗುವುದಿಲ್ಲ ಎಂದು ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ.

ಬಿಜೆಪಿಯ ಆಡಳಿತದಲ್ಲಿ ಇಂದಿರಾ ಗಾಂಧಿಯವರ ಬಗ್ಗೆ ಪ್ರಸ್ತಾಪವೇ ಇಲ್ಲ. ಅನೇಕ ಮಹಾನ್‌ ಸ್ವಾತಂತ್ರ್ಯ ಹೋರಾಟಗಾರರು ಇದ್ದರು ಅವರ ಬಗ್ಗೆ ಮಾತನಾಡುವುದಿಲ್ಲ ಮತ್ತು  ಮೋದಿ ಸರ್ಕಾರಕ್ಕೆ ಇತಿಹಾಸದ ಬಗ್ಗೆ ಸತ್ಯ ಹೇಳಲು ಇಷ್ಟವಿಲ್ಲ ಎಂದು ಕಿಡಿಕಾರಿದರು.

No 'Amrit Mahotsav' can be successful without Pandit Jawaharlal Nehru. There is no mention of Indira Gandhi in their (BJP) regime. There were many great freedom fighters but they don't talk about them…Modi govt doesn't want to tell truth about history: Rajasthan CM Ashok Gehlot pic.twitter.com/7TIc7FnYrH
— ANI MP/CG/Rajasthan (@ANI_MP_CG_RJ) August 22, 2022