ramesh aravind – Peepal Media

ʼಸಿರಿ ಲಂಬೋದರ ವಿವಾಹʼಕ್ಕೆ ಶುಭಕೋರಿದ ರಮೇಶ್ ಅರವಿಂದ್
ಬೆಂಗಳೂರು : ಸೌರಭ್ ಕುಲಕರ್ಣಿ ನಿರ್ದೇಶನದ ʼಸಿರಿ ಲಂಬೋದರ ವಿವಾಹʼ (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು, A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಚಿತ್ರದ ಕುರಿತು ಮಾತನಾಡಿದ ಸೌರಭ್‌ ಕುಲಕರ್ಣಿ, ʼಈಗ ಚಿತ್ರೀಕರಣ ಪೂರ್ಣವಾಗಿ, ಮೊದಲಪ್ರತಿ ಸಿದ್ದವಾಗಿದೆ. ʼಸಿರಿ ಲಂಬೋದರ ವಿವಾಹʼ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ವಿತ್ ಎ ಸಸ್ಪೆನ್ಸ್ ಥ್ರಿಲ್ಲರ್ ಎನ್ನಬಹುದು. ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕ, ನಾಯಕಿ ಅಲ್ಲ. ಮತ್ತೆ ʼಸಿರಿ ಹಾಗೂ ಲಂಬೋದರʼ ಯಾರು ಎಂದು ತಿಳಿಯಲು ಚಿತ್ರ ನೋಡಬೇಕು. ರಂಗಭೂಮಿ ಕಲಾವಿದರೇ ಹೆಚ್ಚಾಗಿ ಈತನ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ.  ಮತ್ತೊಂದು ಖುಷಿಯ ವಿಚಾರವೆಂದರೆ, ಡಿಸೆಂಬರ್ ನಲ್ಲಿ  ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ.  ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೀವಿ. ಟೀಸರ್ ಬಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಧನ್ಯವಾದ ಎಂದು ಹೇಳಿದ್ದಾರೆ.

ʼಸಿರಿ ಲಂಬೋದರ ವಿವಾಹʼ ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಚಿತ್ರವೆಂದು ನಟ ಸುಂದರ್ ವೀಣಾ ಮಾತನಾಡಿದ್ದಾರೆ. ʼನಾವು ಇಡೀ ತಂಡ ಮೂಲತಃ ರಂಗಭೂಮಿ ಅವರು.‌ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಒಳ್ಳೆಯ ಚಿತ್ರ ಮಾಡಿರುವ ಖುಷಿಯಿದೆ.  ನಾನು ಈ ಚಿತ್ರದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಅಂಜನ್ ಎ ಭಾರದ್ವಾಜ್ ಸಂತಸ ವ್ಯಕ್ತಪಡಿಸಿದ್ದಾರೆ.

ನಾನು ಈ ಹಿಂದೆ ಬಿ.ಸುರೇಶ್ ಅವರ “ದೇವರ ನಾಡಲ್ಲಿ” ಚಿತ್ರದಲ್ಲಿ ಅಭಿನಿಯಿಸಿದ್ದೆ. ಆನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸೌರಭ್ ಹಾಗೂ ತಂಡದವರು ಮಾಡಿರುವ ಕಥೆ ಚೆನ್ನಾಗಿದೆ. ನನ್ನ ಪಾತ್ರಕೂಡ ಅಷ್ಟೆ ಚೆನ್ನಾಗಿದೆ ಎನ್ನುತ್ತಾರೆ ನಾಯಕಿ ದಿಶಾ ರಮೇಶ್.

ಚಿತ್ರದಲ್ಲಿನ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ , ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್ ಹಾಗೂ ಕಾರ್ಯಕಾರಿ ನಿರ್ಮಾಪಕಿ ನಮ್ರತಾ ಚಿತ್ರದ  ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಿರಿಯ ನಟ ಮಂಡ್ಯ ರಮೇಶ್ ಚಿತ್ರತಂಡಕ್ಕೆ ಶುಭ ಕೋರಿದರು.

Versato ventures, pavamana creations, Fouress network selutions & Dhupada drushya ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಅಂಜನ್ ಎ ಭಾರದ್ವಾಜ್, ದಿಶಾ ರಮೇಶ್, ರಾಜೇಶ್ ನಟರಂಗ, ಸುಂದರ್ ವೀಣಾ, ಪಿ.ಡಿ.ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರೀತಿಯಿಂದ ಡಾಕ್ಟರ್ ರಮೇಶ್
ಬಹುಭಾಷಾ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬುಧವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಿದೆ.

ವಿಶ್ವವಿದ್ಯಾನಿಲಯದ 10 ನೇ ಘಟಿಕೋತ್ಸವ ಸಮಾರಂಭದಲ್ಲಿ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರಿಗೆ ‘ಡಾಕ್ಟರ್ ಆಫ್ ಲೆಟರ್ಸ್’ ಗೌರವ ಡಾಕ್ಟರೇಟ್ ಅನ್ನು ನೀಡಲಾಯಿತು.  ಈ ಗೌರವಕ್ಕೆ ಪಾತ್ರರಾದ ಮೂವರು ಗಣ್ಯ ವ್ಯಕ್ತಿಗಳಲ್ಲಿ ರಮೇಶ್ ಅವರು ಒಬ್ಬರು.

140 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿರುವ 58 ವರ್ಷದ ರಮೇಶ್ ಅರವಿಂದ್ ಕನ್ನಡ, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಮಲ್ ಹಾಸನ್ ಅವರೊಂದಿಗೆ ‘ರಾಮ ಭಾಮಾ ಶಾಮ’ ಸೇರಿದಂತೆ ಕೆಲವು ಚಲನಚಿತ್ರಗಳನ್ನು ನಿರ್ದೇಶನ ಕೂಡಾ ಮಾಡಿದ್ದಾರೆ ರಮೇಶ್.

ಫ್ಯಾಮಿಲಿ ಸ್ಟಾರ್ ಆಗಿರುವ  ರಮೇಶ್ ಅರವಿಂದ್ ಕಿರುತೆರೆಯಲ್ಲೂ  ಸಾಕಷ್ಟು ಜನಪ್ರಿಯ. ವಿಶೇಷವಾಗಿ ‘ವೀಕೆಂಡ್ ವಿತ್ ರಮೇಶ್’ ನ ನಿರೂಪಕರಾಗಿ ಹಲವಾರು ಸೀಸನ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ ರಮೇಶ್. ಅನೇಕ ಸೆಲೆಬ್ರಿಟಿಗಳನ್ನು ಅವರ ನಿಜ ಜೀವನದ ಕಥೆಗಳೊಂದಿಗೆ ವೀಕ್ಷಕರಿಗೆ ಹತ್ತಿರವಾಗಿಸಿದ್ದರು ರಮೇಶ್.

ಈಗ ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಅವರ ಸೇವೆ ಪರಿಗಣಿಸಿ ವಿವಿ ಗೌರವ ಡಾಕ್ಟರೇಟ್‌ ನೀಡಿದೆ. ಈ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ಅವರಿಗೂ ಗೌರವ ಡಾಕ್ಟರೇಟ್ ನೀಡಲಾಯಿತು.
ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ 48 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪ್ರಧಾ‌ನ ಮಾಡಲಾಯಿತು. ಸ್ನಾತಕೋತ್ತರ-ಪದವಿಯ 163 ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮಾಡಲಾಯಿತು.  ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರರು ಘಟಿಕೋತ್ಸವ ಭಾಷಣ ಮಾಡಿದರು.
ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಚಿತ್ರನಟ ರಮೇಶ್ ಅರವಿಂದ್‌, ನನ್ನ ಈ ಸಂಭ್ರಮದ ಕ್ಷಣದಲ್ಲಿ ತಂದೆ ಇರಬೇಕಿತ್ತು.‌ ನನಗೆ ಗೌರವ ಡಾಕ್ಟರೇಟ್ ಸಿಗ್ತಿದ್ದಂತೆ ಸಂಬಂಧಿಕರಿಗೆ ವಾಟ್ಸಪ್ ಮೆಸೇಜ್ ಮಾಡಿದೆ. ಆಗ ಅನೇಕರಿಂದ ಅಭಿನಂದನೆಗಳು, ತಂದೆ ಇರಬೇಕಿತ್ತು ಎಂಬ ಪ್ರತಿಕ್ರಿಯೆ ಬಂತು ಎಂದಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ತಮ್ಮ ತಂದೆಯನ್ನು ನೆನೆದು ರಮೇಶ್ ಅರವಿಂದ್ ಭಾವುಕರಾದರು.

ಸೆ, 14 ರಂದು ನಟ ರಮೇಶ್‌ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್‌ ಪ್ರಧಾನ
ಬೆಳಗಾವಿ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವದಲ್ಲಿ ನಟ ರಮೇಶ್‌ ಅರವಿಂದ್‌, ಬೀದರ್‌ನ ಅಕ್ಕ ಅನ್ನಪೂರ್ಣ, ಸೇರಿದಂತೆ ಸಮಾಜ ಸೇವಕ ವಿ ರವಿಚಂದರ್‌  ಅವರಿಗೆ ಗೌರವ ಡಾಕ್ಟರೇಟ್‌  ಪ್ರಧಾನ ಮಾಡಲಾಗುವುದು ಎಂದು ಕುಲಪತಿ ಪ್ರೋ ಎಂ ರಾಮಚಂದ್ರ ಗೌಡ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೋ. ಎಂ. ರಾಮಚಂದ್ರ ಗೌಡ ಅವರು, ವಿ‍ಶ್ವವಿದ್ಯಾಲಯವು ಡಾಕ್ಟರೇಟ್‌ ಪ್ರಧಾನ ಮಾಡಲು ಅರ್ಜಿ ಕರೆದು ಅರ್ಹರನ್ನು ಹುಡುಕಿಸುವ ಕೆಲಸ ಮಾಡಿದೆ. ಈ ಹಿನ್ನಲೆ ಗೌರವ ಡಾಕ್ಟರೇಟ್‌ಗಾಗಿ ಜನಪ್ರತಿನಿಧಿಗಳು ಸೇರಿ ಹಲವು ಗಣ್ಯರು ಶಿಫರಸ್ಸು ಮಾಡಿದ್ದ ಅರ್ಜಿಗಳನ್ನು ಸಂಗ್ರಹಿಸಿ ಹಾಗೂ ಶಿಫರಸ್ಸು ಪರಿಶೀಲಿಸಿ ಸಮಿತಿಯ ಮುಂದೆ ಇಡಲಾಗಿದೆ. ಈ ಕಾರಣ ಸಿನಿಮಾ ರಂಗದಲ್ಲಿ ನಟ ರಮೇಶ್‌ ಅರವಿಂದ್‌, ಸಮಾಜ ಸೇವಾ ಕ್ಷೇತ್ರದಲ್ಲಿ ವಿ ರವಿಚಂದರ್‌, ಧಾರ್ಮಿಕ ಕ್ಷೇತ್ರದಲ್ಲಿ ಅಕ್ಕ ಅನ್ನಪೂರ್ಣ ಅವರಿಗೆ, ಸೆಪ್ಡಂಬರ್‌ 14 ರ ಮಧ್ಯಾಹ್ನ ದಂದು ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪ್ರಧಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.