rape – Peepal Media

ಸೌಜನ್ಯ ಪರ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಗೆ ಪೊಲೀಸ್ ನೋಟಿಸ್
ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಡಿಯೋ ಮಾಡಿದ್ದ ಸಮೀರ್ ಎಂ.ಡಿ. ಅವರ ಮನೆಗೆ ಮಾರ್ಚ್ 6ರ, ಬುಧವಾರ ತಡರಾತ್ರಿ ಪೊಲೀಸರು ಪ್ರವೇಶಿಸಿದ್ದಾರೆ. ಬಂಧಿಸಲು ಯತ್ನಿಸಿ, ಆನಂತರ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ. ಈ ಬಗ್ಗೆ ಬುಧವಾರ ರಾತ್ರಿ 1ಗಂಟೆ ಸುಮಾರಿ ತಮ್ಮ ಫೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿರುವ ಸಮೀರ್ ತಮ್ಮ ಮೇಲಾಗುತ್ತಿರುವ ಟ್ರೋಲ್ ಗಳು, ಮತ್ತು ಅವರ ಪರಿಸ್ಥಿತಿಯ ಬಗ್ಗೆ ಮಾತನಾಡಿದ್ದಾರೆ.

ಸಮೀರ್ ತಮ್ಮ ಯೂಟ್ಯೂಬ್ ನಲ್ಲಿ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಇತ್ತೀಚೆಗೆ ಮಾಡಿದ್ದ ವೀಡಿಯೊವೊಂದು ಹೆಚ್ಚು ವೈರಲ್ ಆಗಿತ್ತು, ಆ ಮೂಲಕ ರಾಜ್ಯದಾದ್ಯಂತ ಮತ್ತೆ ಸೌಜನ್ಯ ಪ್ರಕರಣ ಮುನ್ನಲೆಗೆ ಬಂದಿದೆ. ಈ ನಡುವೆ ಸಮೀರ್ ಅವರ ಧರ್ಮವನ್ನು ಮುನ್ನಲೆಗೆ ತಂದು ಅವರನ್ನು ಅವಮಾನಿಸುತ್ತಿರುವವರಿಗೆ ಪ್ರತಿಕ್ರಿಯೆ ನೀಡಿರುವ ಸಮೀರ್, ಜನರು ಜಾತಿ ಮತ್ತು ಧರ್ಮವನ್ನು ಈ ವಿಷಯಕ್ಕೆ ಏಕೆ ಎಳೆದು ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ  ನಡುವೆ ಎಡಿಜಿಪಿ ( ಕಾನೂನು ಮತ್ತು ಸುವ್ಯವಸ್ಥೆ) ಅವರು ಹೊರಡಿಸಿದ್ದಾರೆ ಎನ್ನಲಾದ ಆದೇಶದ ಪ್ರತಿಯೊಂದು ಬುಧವಾರ ಸಂಜೆಯಿಂದ ವೈರಲ್ ಆಗಿದೆ. ಈ ಆದೇಶದಲ್ಲಿ “ಸಮೀರ್ ವೀಡಿಯೊದಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದ್ದು, ಸಾಮಾಜಿಕ ಮಾಧ್ಯಮ ಮಾನಿಟರಿಂಗ್ ಸೆಲ್ ಚುರುಕುಗೊಳಿಸಿ ಕ್ರಮ ಕೈಗೊಳ್ಳಬೇಕು” ಎಂಬ ಆದೇಶ ನೀಡಲಾಗಿದ್ದು, ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

ಎಡಿಜಿಪಿ ಹೊರಡಿಸಿದ್ದಾರೆ ಎನ್ನಲಾದ ಈ ಆದೇಶದಲ್ಲಿ, “ಇತ್ತೀಚಿಗೆ ಸಮೀರ್ ಎಂಬಾತನು ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಹರಿಬಿಟ್ಟದ್ದು, ಘಟಕಾಧಿಕಾರಿಗಳು ಈ ವಿಷಯವನ್ನು ತಮ್ಮ ಘಟಕಗಳಲ್ಲಿರುವ Social Media Monitoring Cell ಮುಖೇನ ಮೇಲಾಧಿಕಾರಿಗಳ ಗಮನಕ್ಕೆ ತರುವಲ್ಲಿ ವಿಫಲರಾಗಿರುತ್ತೀರಿ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ/ವಿರೋಧ ಅನಿಸಿಕೆಗಳು ಉದ್ಭವಿಸಿ ಸಾಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುತ್ತದೆ. ಆದ್ದರಿಂದ, Social Media Monitoring Cell ಚುರುಕುಗೊಳಿಸುವುದು ಹಾಗೂ ಈ ಕುರಿತಂತೆ ಕೈಗೊಂಡ ಕ್ರಮದ ಬಗ್ಗೆ ಮಾನ್ಯ ಎಡಿಜಿಪಿ, ಕಾನೂನು ಮತ್ತು ಸುವ್ಯವಸ್ಥೆ ರವರಿಗೆ ಮಾಹಿತಿ ನೀಡುವುದು” ಎಂದು ಹೇಳಿದೆ.

ಮಾಜಿ ಪೊಲೀಸ್ ಅಧಿಕಾರಿ, ಸೌಜನ್ಯ ಪರ ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದ ಗಿರೀಶ್ ಮಟ್ಟಣ್ಣನವರ್ ಅವರ ಜೊತೆಗೆ ಸಮೀರ್ ಅವರು ಬುಧವಾರ ತಡರಾತ್ರಿ ಫೇಸ್‌ಬುಕ್ ಲೈವ್‌ನಲ್ಲಿ ತನಗೆ ವ್ಯಾಪಕ ಜೀವ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ.

ಲೈವ್‌ನಲ್ಲಿ ಮಾತನಾಡಿದ ಸಮೀರ್, “ಪ್ರಸ್ತುತ ನನ್ನ ಪರಿಸ್ಥತಿ ತುಂಬಾ ಕೆಟ್ಟದಾಗಿದ್ದು, ಈಗಾಗಲೆ ಪೊಲೀಸ್ ನೋಟಿಸ್ ಬಂದಿದೆ. ಸುಮಾರು ರಾತ್ರಿ 10;45ರ ಹೊತ್ತಿಗೆ ಪೊಲೀಸರು ಬಂದು ನೋಟಿಸ್ ಕೊಟ್ಟು ಹೋಗಿದ್ದಾರೆ. ಅದಾಗ್ಯೂ ನನಗೆ ಯಾವುದೇ ಭಯವಿಲ್ಲ. ನಾನು ವಿಡಿಯೊದಲ್ಲಿ ಹೇಳಿರುವ ಎಲ್ಲಾ ವಿಚಾರಗಳಿಗೂ ಸಾಕ್ಷಿಯಿದೆ. ನನಗೆ ಕಾನೂನಿನ ಮೇಲೆ ನಂಬಿಕೆಯಿದ್ದು, ಕೋರ್ಟ್‌ನ ಮುಂದೆ ಮತ್ತಷ್ಟು ವಿಸೃತವಾಗಿ ಮಂಡಿಸುತ್ತೇನೆ. ಈ ಬಗ್ಗೆ ಯಾವುದೇ ತೊಂದರೆಯಿಲ್ಲ” ಎಂದು ಹೇಳಿದ್ದಾರೆ.

ಪ್ರಸ್ತುತ ತನಗೆ ತೊಂದರೆ ಆಗುತ್ತಿರುವುದು, ಮುಸ್ಲಿಮನೊಬ್ಬ ಧರ್ಮಸ್ಥಳ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ್ದೆ ತಪ್ಪು ಹಾಗೂ ಹಿಂದೂ ವಿರೋಧಿ ಎಂದು ಬಿಂಬಿಸಲಾಗುತ್ತಿದೆ ಆದರೆ, ನಾನು ಅನ್ಯಾಯದ ವಿರುದ್ಧ ಧ್ವನಿಯೆತ್ತಿದ್ದೇನೆ, ಅದು ನನ್ನ ಧರ್ಮ, ಅದನ್ನು ನಾನು ಪಾಲಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

“ಒಂದು ವೇಳೆ ನಾನು ಹಿಂದೂ ವಿರೋಧಿ ಆಗಿದ್ದರೆ, ಒಬ್ಬ ಹಿಂದೂ ಹುಡುಗಿಗೆ ಆಗಿರುವ ಅನ್ಯಾಯದ ಬಗ್ಗೆ ನಾನು ಯಾಕೆ ಧ್ವನಿ ಎತ್ತಬೇಕು? ನ್ಯಾಯದ ಬಗ್ಗೆ ಮಾತನಾಡೋಣ. ಅದುವೇ ಧರ್ಮ” ಎಂದು ಸಮೀರ್ ಅವರು ಫೇಸ್‌ಬುಕ್ ಲೈವ್‌ನಲ್ಲಿ ಹೇಳಿದ್ದಾರೆ.

ಸಹೋದ್ಯೋಗಿಯ ಮೇಲೆ ಅತ್ಯಾಚಾರ: ಶಾಲಾ ಬಸ್‌ ಚಾಲಕನ ಬಂಧನ
ಬೆಂಗಳೂರು: ತನ್ನ ಸಹೋದ್ಯೋಗಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಶಾಲಾ ಬಸ್‌ ಚಾಲಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಶಾಲೆಯಲ್ಲಿ ಜವಾನರಾಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳು ಮಂಗಳವಾರ ಸುಮಾರು 5.30 ವೇಳೆ ನಾಯಂಡನಹಳ್ಳಿ ಜಂಕ್ಷನ್‌ ಬಳಿ ಬಸ್‌ಗಾಗಿ ಕಾಯುತ್ತಿದ್ದಾಗ ಬಂದ ಅದೇ ಶಾಲೆಯ ಬಸ್‌  ಚಾಲಕ ಡ್ರಾಪ್‌ ಕೊಡುವುದಾಗಿ ಕೇಳಿದ್ದು, ಅದಕ್ಕೆ ಒಪ್ಪಿ ಬಸ್‌ ಹತ್ತಿದ ವೇಳೆ ಈ ಕೃತ್ಯ ನಡದಿದೆ ಎಂದು ಪೊಲೀಸರು ಹೇಳಿದ್ದಾರೆ.

ʼಮಹಿಳೆ ಬಸ್‌ ಹತ್ತಿದ ನಂತರ ಬಸ್‌ನಲ್ಲಿ ಯಾರೂ ಇಲ್ಲದನ್ನು ನೋಡಿದ ಶಾಲಾ ಬಸ್‌ ಚಾಲಕ  32 ವರ್ಷದ ಶಿವಕುಮಾರ್‌  ಬಸ್‌ನಲ್ಲಿ ಮಲೈ ಮಹದೇಶ್ವರ ದೇವಸ್ಥಾನದ ಬಳಿಯ ನಾಗರಬಾವಿ ಸರ್ವಿಸ್ ರಸ್ತೆಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆ ಸಮಯದಲ್ಲಿ ಸಂತ್ರಸ್ಥೆ ಚಾಲಕನ ಫೋಟೋ ತೆಗೆದುಕೊಂಡಿದ್ದು, ಆಕೆಯ ಮಗ ಬಸ್‌ ಮತ್ತು ಚಾಲಕ ಇರುವ ಸ್ಥಳವನ್ನು ಕಂಡುಕೊಂಡಿದ್ದಾನೆʼ ಎಂದು ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತ ಲಕ್ಷ್ಮಣ್ ಬಿ ನಿಂಬರಗಿಯವರು ತಿಳಿಸಿದ್ದಾರೆ.

ಈ ವಿಚಾರದ ಕುರಿತು ಸಂತ್ರಸ್ಥೆಯ ಮಗ ಬಸ್‌ ಚಾಲಕನ ಬಳಿ ಜಗಳವಾಡಿದಾಗ ಅಲ್ಲಿನ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಿವಕುಮಾರನ್ನು ಪೊಲೀಸ್‌ ಠಾಣೆಗೆ ಕರೆತಂದಾಗ ಘಟನೆ ಬೆಳಕಿಗೆ ಬಂದಿದ್ದು, ಆತನ ಮೇಲೆ ತಕ್ಷಣವೇ FIR ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ಗುರುವಾರದಂದು  ತಿಳಿಸಿದ್ದಾರೆ.

ಶಾಲಾ ಬಸ್‌ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ(ಐಪಿಸಿ) ಸೆಕ್ಷನ್‌ನ ಅಡಿ ಅತ್ಯಾಚಾರ, ಕೊಲೆ ಯತ್ನ ಮತ್ತು  ಕ್ರಿಮಿನಲ್‌ ಬೆದರಿಕೆ ಆರೋಪದಡಿ ಪ್ರಕರಣ  ದಾಖಲಿಸಲಾಗಿದೆ.

ಅತ್ಯಾಚಾರಿಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಬಿಲ್ಕಿಸ್‌ ಬಾನೋ
ನವದೆಹಲಿ: 2002 ರ ಗುಜರಾತ್ ದಂಗೆಯಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಇಡೀ ಕುಟುಂಬವನ್ನು ಕೊಂದಿದ್ದ 11 ಆರೋಪಿಗಳನ್ನು ಬಿಡುಗಡೆ ಮಾಡಿರುವುದರ ವಿರುದ್ಧ ಬಿಲ್ಕಿಸ್ ಬಾನೋ ಪ್ರಶ್ನಿಸಿ   ಬುಧವಾರದಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಆಗಸ್ಟ್‌ 15ರ ಸ್ವಾತಂತ್ರ್ಯ ದಿನಾಚರಣೆಯಂದು 1992ರ ಕ್ಷಮಾದಾನ ನೀತಿಯಡಿ ಗುಜರಾತ್‌ ಸರ್ಕಾರ ಈ ನೀಚ ಕೃತ್ಯ ಎಸಗಿದ್ದ ಹನ್ನೊಂದು ಜನರನ್ನು ಬಿಡುಗಡೆ ಮಾಡಿದ್ದು, ಈ ವಿರುದ್ಧ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿದ್ದರೂ, ಹಿಂದೂ ಸಂಘಟನೆಯೊಂದು ಅತ್ಯಾಚಾರಿಗಳನ್ನು ವೀರರಂತೆ ಪರಿಗಣಿಸಿ ಸ್ವಾಗತಿಸಿದ್ದರು.

ಅತ್ಯಾಚಾರಿಗಳನ್ನು ಬಿಡುಗಡೆ ಮಾಡುವ ನಿರ್ಧಾರದಲ್ಲಿ ಭಾಗಿಯಾಗಿದ್ದ ಮತ್ತು ಅವರನ್ನು “ಸಂಸ್ಕಾರಿ ಬ್ರಾಹ್ಮಣರು” ಎಂದು ಬಣ್ಣಿಸಿದ್ದ, ಈ ವರೆಗೂ ಆರು ಬಾರಿ ಶಾಸಕರಾಗಿರುವ ಬಿಜೆಪಿ ನಾಯಕ ʼಚಂದ್ರಸಿನ್ಹ ರೌಲ್ಜಿʼ ಅವರು ಈ ಬಾರಿ ಗೋಧ್ರಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೋ ಅವರ ಪ್ರಶ್ನೆಯನ್ನು ಸುಪ್ರೀಂ ಕೋರ್ಟ್‌ ಮುಂದೆ ಧ್ವನಿ ಎತ್ತಿದ್ದಾರೆ.

ಬಿಲ್ಕಿಸ್‌ ಬಾನೋ 21ನೇ ವರ್ಷದವರಿದ್ದಾಗ, ಗೋಧ್ರಾ ರೈಲು ದಹನದ ನಂತರ ಗುಜರಾತ್‌ನಲ್ಲಿ 59 ಯಾತ್ರಾರ್ಥಿಗಳು ಸಾವನ್ನಪ್ಪಿದ ನಂತರ ನಡೆದ ಗಲಭೆಯಲ್ಲಿ ತನ್ನ ಮೂರು ವರ್ಷದ ಮಗಳು ಸೇರಿದಂತೆ ಕುಟುಂಬದವರನ್ನು ಸಾಮೂಹಿಕ ಅತ್ಯಾಚಾರವನ್ನೆಸಗಿ ಒಂಬತ್ತು ಜನರನ್ನು ಕೊಂದಿದ್ದ 11 ಜನರನ್ನು ಗುಜರಾತ್‌ ಸರ್ಕಾರ ಆಗಸ್ಟ್‌ 15 ರಂದು ಬಿಡುಗಡೆ ಮಾಡಲಾಗಿತ್ತು.

ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳ ಶೀಘ್ರ ಬಿಡುಗಡೆಯನ್ನು ನಿರ್ಬಂಧಿಸುವ 2014 ರ ವಿಮೋಚನಾ ನೀತಿಯನ್ನು ಅನುಸರಿಸಿದ್ದರೆ ಗುಜರಾತ್ ಸರ್ಕಾರ ಈ ರೀತಿಯ ಬಿಡುಗಡೆ ಮಾಡುವ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ ಎಂದು ಬಿಲ್ಕಿಸ್‌ ಬಾನೋ ಹೇಳಿದ್ದಾರೆ.

ಕೇರಳ ಮಹಿಳೆ ಮೇಲೆ ರ್ಯಾಪಿಡೋ ಚಾಲಕ ಅತ್ಯಾಚಾರ: ಮೂವರ ಬಂಧನ
ಬೆಂಗಳೂರು : ಬೆಂಗಳೂರಿನಲ್ಲಿ ನವೆಂಬರ್‌ 25 ರಂದು ಕೇರಳ ಯುವತಿ ಮೇಲೆ ಟ್ಯಾಕ್ಸಿ ಚಾಲಕ ಸೇರಿದಂತೆ ಇಬ್ಬರು ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಮಂಗಳವಾರದಂದು ಬಂಧಿಸಿಲಾಗಿದೆ.

ಫ್ರೀಲಾನ್ಸ್‌ ಡಿಸೈನರ್‌ ಆಗಿ ಕೆಲಸ ಮಾಡುತ್ತಿದ್ದ 23 ವರ್ಷದ ಕೇರಳ ಮೂಲದ ಮಹಿಳೆಯೊಬ್ಬಳು ತನ್ನ ಸ್ನೇಹಿತನ ಮನೆಯಿಂದ ರ್ಯಾಪಿಡೋ ಬೈಕ್‌ ಬುಕ್‌ ಮಾಡಿಕೊಂಡು ಹೊರಟಿದ್ದಳು. ಆಕೆ ಕುಡಿದ ಮತ್ತಿನಲ್ಲಿದ್ದಳು ಎಂಬುದನ್ನು ಕಂಡುಕೊಂಡ ಬೈಕ್‌ ಚಾಲಕ ಆಕೆಯನ್ನು ನೇರವಾಗಿ ಅವನ ಮನೆಗೆ ಕರೆದುಕೊಂಡು ಹೋಗಿದ್ದು, ಆತ ಮತ್ತು ಆತನ ಸ್ನೇಹಿತ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಸಿ.ಎಚ್‌ ಪ್ರತಾಪ್‌ ರೆಡ್ಡಿ ತಿಳಿಸಿದ್ದಾರೆ.

ನಂತರ, ಆ ಮಹಿಳೆಯು ತನ್ನ ಅತಿಯಾದ  ದೇಹದ ನೋವು ಹೆಚ್ಚಾದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಆಕೆಯ ಮೇಲೆ ಆಗಿರುವ ಲೈಂಗಿಕ ಕೃತ್ಯದ ಬಗ್ಗೆ ಅಲ್ಲಿನ ವೈದ್ಯರು ದೃಢಪಡಿಸಿದ್ದರು. ಈ ವಿಚಾರವಾಗಿ ಮಹಿಳೆ ಪೊಲೀಸರಿಗೆ ವಿಚಾರಣೆ ತಿಳಿಸಬೇಕೋ ಬೇಡವೋ ಎಂಬ ಭಯದಿಂದ ಹಿಂಜರಿಯುತ್ತಿದ್ದರು. ಆದರೆ ವಿಚಾರ ತಿಳಿದ ವೈದ್ಯರು ಇದು ಮೆಡಿಕೋ ಕಾನೂನು ಪ್ರಕರಣವಾಗಿರುವುದರಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಕುರಿತು ವಿಚಾರಣೆ ನಡೆಸಿದ ವೇಳೆ ಆರೋಪಿಗಳು ಪೊಲೀಸರ ದಿಕ್ಕುತಪ್ಪಿಸಲು ಪ್ರಯತ್ನಿದ್ದರೂ ಕೊನೆಗೆ  ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನು ಸಂತ್ರಸ್ಥ ಮಹಿಳೆಯ ಸ್ನೇಹಿತನಿಗೆ ಕರೆ ಮಾಡಿ, ಅವಳು ಪ್ರಜ್ಞೆ ತಪ್ಪಿ ಬಿದ್ದಿದ್ದು ಆಕೆಗೆ ಆಶ್ರಯ ನೀಡಲಾಗಿದು ಎಂದು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದಾನೆ. ತದನಂತರ ಆಕೆಯ ಸ್ನೇಹಿತ ಅವಳನ್ನು ಕರೆದುಕೊಂಡು ಹೋಗಿದ್ದನು.

ಈ ಕುರಿತು ಬಂಧಿಸಿದ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದ ವೇಳೆ, ಆರೋಪಿಗಳ ಕಟ್ಟು ಕಥೆಗೆ ಬೆಂಬಲಿಸುತ್ತಿದ್ದ ಮಹಿಳೆಗೆ ಹೆಚ್ಚು ಪ್ರಶ್ನೆಗಳು ಎದುರಾದಾಗ ತಾನು ಸುಳ್ಳು ಹೇಳುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾಳೆ.

ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ : ಟ್ವೀಟಿಗರ ಆಕ್ರೋಶ
ಬಿಹಾರ : ಯುವಕನೊಬ್ಬನ್ನು ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧವನ್ನೆಸಗಿದ್ದು, ಆರೋಪಿಗೆ ಶಿಕ್ಷೆಯಾಗಿ ಕೇವಲ ಐದು ಬಸ್ಕಿಯನ್ನೊಡಿಸಿ  ನಡೆದಿರುವ ಕೃತ್ಯವನ್ನು ಬಗೆಹರಿಸಿಕೊಂಡಿರುವ ಬಿಹಾರದ ನವಾದಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಮಗುವಿಗೆ ಚಾಕಲೇಟ್‌ ಆಸೆ ತೋರಿಸಿದ ಯುವಕನು, ಕೋಳಿ ಪಾರ್ಮ್‌ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಅಪರಾಧ ಎಸಗಿದ್ದು, ಈ ಅಪರಾಧಕ್ಕೆ ಗ್ರಾಮಸ್ಥರೇ ಪಂಚಾಯಿತಿ ನಡೆಸಿ ಆರೋಪಿಗೆ ಐದು ಬಸ್ಕಿಯನ್ನು ಶಿಕ್ಷೆಯಾಗಿ ನೀಡಿದ್ದಾರೆ. ಅದಲ್ಲದೇ ಬಸ್ಕಿ ಹೊಡೆಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದುಬಿಟ್ಟಿದ್ದರು. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಬಾಲಕಿಗೆ ಆಗಿರುವ ಅನ್ಯಾಯವನ್ನು ಪರಿಗಣನೆಗೆ ತೆಗೆದುಕೊಳ್ಳದೆ, ಯುವಕ ಬಾಲಕಿಯನ್ನು ಏಕಾಂತ ಪ್ರದೇಶಕ್ಕೆ ಕರೆದೊಯ್ದನು ಎಂದು ಶಿಕ್ಷೆ ಕೊಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

“ಮಹಿಳೆಯರಿಗೆ ಭಾರತ ಅತ್ಯಂತ ಅಪಾಯಕಾರಿ ಸ್ಥಳವಾಗಿದೆ” ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಅಪರಾಧ ಎಸಗಿದ ಆರೋಪಿಗೆ ಕೇವಲ ಬಸ್ಕಿ ಶಿಕ್ಷೆ ನೀಡಿರುವುದಲ್ಲದೆ, ಆಗಿರುವ ಅಪರಾಧವನ್ನು ಹಗುರವಾಗಿ ಪಡಿಗಣಿಸಿರುವುದು ಟ್ವೀಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಸ್ಥಾನ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು
ಕೋಟಾ: ಕಳೆದ ವರ್ಷ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 21 ವರ್ಷದ ಯುವಕನಿಗೆ ಪೋಕ್ಸೊ ನ್ಯಾಯಾಲಯ ಮಂಗಳವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಗೆಂಡೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಅಪರಾಧಿ, ಅಪೂರ್ವ್ ಅಲಿಯಾಸ್ ರಾಮನ್ ಗೋಸ್ವಾಮಿ (21) ಕಳೆದ ವರ್ಷ ಆಗಸ್ಟ್ 14 ರಂದು ಮಗುವಿಗೆ ಚಾಕೊಲೇಟ್ ಕೊಟ್ಟು, ನಂತರ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ.

ವಿಷಯ ತಿಳಿದ ಕುಟುಂಬದ ಸದಸ್ಯರು, ಮರುದಿನ ಪೊಲೀಸರಿಗೆ ದೂರು ನೀಡಿದ್ದು, ಅದರ ಆಧಾರದ ಮೇಲೆ ಗೋಸ್ವಾಮಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧ ಹಾಗೂ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಯಿತು.

ತ್ವರಿತ ವಿಚಾರಣೆಗಾಗಿ, ಪೊಲೀಸರು ಪ್ರಕರಣವನ್ನು ವಿಶೇಷ ಕೇಸ್ ಆಫೀಸರ್ ಸ್ಕೀಮ್ ಅಡಿಯಲ್ಲಿ ವರ್ಗೀಕರಿಸಿದ್ದರು, ನಂತರ 20-22 ದಿನಗಳಲ್ಲಿ ಚಾರ್ಜ್ ಶೀಟ್‌ ಸಲ್ಲಿಸಿದ್ದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ರಾಕೇಶ್ ಠಾಕೂರ್ ತಿಳಿಸಿದ್ದಾರೆ.

ಪ್ರಕರಣದ ಹಿನ್ನಲೆಯಲ್ಲಿ, ಪೋಕ್ಸೊ ನ್ಯಾಯಾಲಯದ  ನ್ಯಾಯಾಧೀಶ ಸಲೀಂ ಬಾದರ್ ಅವರು ಅಪರಾಧಿಗೆ ₹ 50,000 ದಂಡವನ್ನು ವಿಧಿಸಿದ್ದಾರೆ ಎಂದು ಠಾಕೂರ್ ಹೇಳಿದರು.

ಬಾಲಕಿ ಅತ್ಯಾಚಾರ ಮಾಡಿ ಕೊಂದವರು ಅಪ್ರಾಪ್ತ ಬಾಲಕರು: ಆಘಾತಕಾರಿ ಮಾಹಿತಿ ಬಯಲು
ಆಳಂದ (ಕಲಬುರಗಿ): ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತ ಬಾಲಕರು ಎಂಬ ಆಘಾತಕಾರಿ ವಿದ್ಯಮಾನ ಬಯಲಿಗೆ ಬಂದಿದೆ.
ಮೂರು ಜನ ಅಪ್ರಾಪ್ತ ಬಾಲಕರು ತಾಲ್ಲೂಕಿನ ಕೊರಳ್ಳಿ ಗ್ರಾಮದ ಕಬ್ಬಿನಗದ್ದೆಯಲ್ಲಿ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಅತ್ಯಾಚಾರದ ಬಳಿಕ ಬಳಿಕ ಬಾಲಕಿಯ ಕುತ್ತಿಗೆಯನ್ನು ವೇಲ್‌ನಿಂದ ಸುತ್ತಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಆಳಂದ ಪೊಲೀಸರು ಅತ್ಯಾಚಾರ ಎಸಗಿದ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅತ್ಯಾಚಾರವೆಸಗಿರುವುದಾಗಿ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾರೆ.

ಕೊರಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಬಾಲಕಿ ಶವ ಪತ್ತೆಯಾಗಿತ್ತು. ಬಾಲಕಿ ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕೋಗನೂರು ಗ್ರಾಮದವಳಾಗಿದ್ದು, ಆಳಂದ ತಾಲ್ಲೂಕಿನ ಕೊರಳ್ಳಿಯ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು.
ದೀಪಾವಳಿ ಹಬ್ಬಕ್ಕೆ ತಂದೆ ತಾಯಿಯ ಬಳಿ ತೆರಳಿದ್ದ ಬಾಲಕಿ ಹಬ್ಬ ಮುಗಿಸಿ ವಾಪಸ್ ನಿನ್ನೆ ಕೊರಳ್ಳಿಗೆ ಬಂದಿದ್ದಳು ಸಂಬಂಧಿಕರ ಮನೆಯಲ್ಲಿದ್ದ ಬಾಲಕಿ ನಿನ್ನೆ ಮಧ್ಯಾಹ್ನ ಬಹಿರ್ದೆಸಗೆ ಹೋಗಿದ್ದವಳು ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ಸಂಬಂಧಿಕರು ಬಹಿರ್ದೆಸೆಗೆ ತೆರಳಿದ್ದ ಸ್ಥಳಕ್ಕೆ ಹೋಗಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ.
ಕಬ್ಬಿನ ಹೊಲದಲ್ಲಿ ಬಾಲಕಿ ಶವವಾಗಿ ಪತ್ತೆಯಾದ ನಂತರ, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರಿಂದ ಹುಡುಕಾಟ ನಡೆಸಿದ ಪೊಲೀಸರಿಗೆ ಅಪ್ತಾಪ್ತ ಬಾಲಕರು ಸಿಕ್ಕಿಬಿದ್ದಿದ್ದಾರೆ.

ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬರ್ಬರ ಹತ್ಯೆ
ಅಳಂದ (ಕಲಬುರಗಿ): ಶಾಲಾ ಬಾಲಕಿಯ ಮೇಲೆ ಬರ್ಬರವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಕೊರಳ್ಳಿ ಗ್ರಾಮದಲ್ಲಿ ನಡೆದಿದೆ.

ಮಳವಳ್ಳಿಯಲ್ಲಿ ಹತ್ತು ವರ್ಷದ ಬಾಲಕಿ ಮೇಲೆ ಶಾಲೆಯ ಶಿಕ್ಷಕರೇ ಕ್ರೂರವಾಗಿ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪ್ರಕರಣದ ನೆನಪು ಮಾಸುವ ಮುನ್ನವೇ ಈ ಭೀಕರ ಘಟನೆ ನಡೆದಿದೆ.

9 ನೇ ತರಗತಿ ವಿದ್ಯಾಭ್ಯಾಸ ಮಾಡ್ತಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದ್ದು, ಕೊರಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಬಾಲಕಿ ಶವ ಪತ್ತೆಯಾಗಿದೆ. ಅತ್ಯಾಚಾರ ನಡೆಸಿದ ನಂತರ ಹಂತಕರು ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ.

ಬಾಲಕಿ ಮೂಲತಃ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಕೋಗನೂರು ಗ್ರಾಮದವಳಾಗಿದ್ದು, ಆಳಂದ ತಾಲ್ಲೂಕಿನ ಕೊರಳ್ಳಿಯ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು.

ದೀಪಾವಳಿ ಹಬ್ಬಕ್ಕೆ ತಂದೆ ತಾಯಿಯ ಬಳಿ ತೆರಳಿದ್ದ ಬಾಲಕಿ ಹಬ್ಬ ಮುಗಿಸಿ ವಾಪಸ್ ನಿನ್ನೆ ಕೊರಳ್ಳಿಗೆ ಬಂದಿದ್ದಳು ಸಂಬಂಧಿಕರ ಮನೆಯಲ್ಲಿದ್ದ ಬಾಲಕಿ ನಿನ್ನೆ ಮಧ್ಯಾಹ್ನ ಬಹಿರ್ದೆಸಗೆ ಹೋಗಿದ್ದ ಬಾಲಕಿ ಸಂಜೆಯಾದ್ರು ಮನೆಗೆ ವಾಪಸ್ ಬಂದಿರಲಿಲ್ಲ. ಬಳಿಕ ಸಂಬಂಧಿಕರು ಬಹಿರ್ದೆಸೆಗೆ ತೆರಳಿದ್ದ ಸ್ಥಳಕ್ಕೆ ಹೋಗಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ.

ಕಬ್ಬಿನ ಹೊಲದಲ್ಲಿ ಬಾಲಕಿ ಶವವಾಗಿ ಪತ್ತೆಯಾದ ನಂತರ, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗಾಗಿ ಪೊಲೀಸರಿಂದ ಹುಡುಕಾಟ ನಡೆಸಿದ್ದಾರೆ. ಎಸ್ಪಿ ಇಶಾ ಪಂತ್ ಸ್ಥಳಕ್ಕೆ ಭೇಟಿದ್ದು, ಆರೋಪಿಗಳ ಹುಡುಕಲು ತಂಡ ರಚನೆ ಮಾಡಲಾಗಿದೆ.

ಮಹಿಳೆ ಮೇಲೆ ಐವರ ಸಾಮೂಹಿಕ ಅತ್ಯಾಚಾರ, ಕ್ರೂರವಾಗಿ ಹಲ್ಲೆ : ನಾಲ್ವರ ಬಂಧನ
ದೆಹಲಿ: ದೆಹಲಿ ಮಹಿಳೆಯನ್ನು ಅಪಹರಿಸಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ಖಾಸಗಿ ಭಾಗಗಳಲ್ಲಿ ಕಬ್ಬಿಣದ ರಾಡ್‌ ತುರುಕಿ ರಸ್ತೆಗೆಸೆದಿರುವ ಕ್ರೂರ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ ನಲ್ಲಿ ನಡಿದಿದೆ. ಈ ಹಿನ್ನಲೆಯಲ್ಲಿ ಘಟನೆಗೆ ಸಂಬಂಧಿಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಐವರು ಪುರುಷರು ಸೇರಿ ದೆಹಲಿಯ 38 ವರ್ಷದ ಮಹಿಳೆಯನ್ನು ಅಪಹರಿಸಿಕೊಂಡು ಹೋಗಿದ್ದು, 2 ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಆಕೆಯ ಖಾಸಗಿ ಭಾಗಗಳಲಿ ಕಬ್ಬಿಣದ ರಾಡ್‌ ಅಳವಡಿಸಲಾಗಿದೆ. ಆನಂತರ ಆಕೆಯನ್ನು ಚೀಲದಲ್ಲಿ ತುಂಬಿ  ಮಂಗಳವಾರದಂದು ಮುಂಜಾನೆ ನಂದಗ್ರಾಮದ ಆಶ್ತಮದ ರಸ್ತೆಯಲ್ಲಿ ಎಸೆದಿದ್ದಾರೆ.

ರಸ್ತೆಯಲ್ಲಿ ಮಹಿಳೆಯೊಬ್ಬಳು ಬಿದ್ದಿದ್ದಾರೆ ಎಂಬ ಮಾಹಿತಿ ತಿಳಿದ ಪೊಲೀಸರು ಕೂಡಲೆ ಸ್ಥಳಕ್ಕೆ ಬಂದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು.

ಸಂತ್ರಸ್ಥೆ ಬಳಿ ಘಟನೆಯ ಕುರಿತು ಕೇಳಿದ ಪೊಲೀಸರು , ಸಂಬಂಧಪಟ್ಟ ಐವರಲ್ಲಿ ನಾಲ್ವರನ್ನು ಗಾಜಿಯಾಬಾದ್‌ ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು  ವಿಚಾರಿಸಿದಾಗ ಆಕೆಯ ಕುಟುಂಬದವರಿಗೆ ಮತ್ತು ಬಂಧಿತರ ನಡುವೆ ಆಸ್ತಿಯ ವಿವಾದವಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದ್ದು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಏತನ್ಮಧ್ಯೆ, ಅಕ್ಟೋಬರ್‌ 21 ರೊಳಗೆ ತೆಗೆದುಕೊಂಡ ಕ್ರಮದ ವರದಿಯನ್ನು, ಬಂಧಿತ ಆರೋಪಿಗಳ ವಿವರಗಳೊಂದಿಗೆ ಎಫ್‌ಐಆರ್‌ ಪ್ರತಿಯನ್ನು  ಒದಗಿಸುವಂತೆ ಡಿಸಿಡಬ್ಲ್ಯು ಗಾಜಿಯಾಬಾದ್‌ ಪೊಲೀಸರಿಗೆ ನೋಟಿಸ್‌ ನೀಡಿದೆ.

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ
ಅಮೇಥಿ: 15 ವರ್ಷದ ದಲಿತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಅಮೇಥಿ ಪಟ್ಟಣದ ಜಮೋ ಹಳ್ಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಹಿನ್ನಲೆ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಪೊಲೀಸರು, ಅಕ್ಟೋಬರ್ 3 ರಂದು ದುರ್ಗಾ ಪೂಜೆಯ ಮಂಟಪದಲ್ಲಿ ಸಂಗೀತ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದ ಮೋನು ಎಂಬಾತ ಮೂತ್ರ ವಿಸರ್ಜನೆಗೆಂದು ಬಂದಾಗ, ಮೈದಾನದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆ ಆರೋಪಿ ಮೋನು ಎಂಬಾತನ ಮೇಲೆ ಅತ್ಯಾಚಾರ ಆರೋಪದಡಿ  ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಜಮೋ, ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಖಿಲೇಶ್ ಗುತ್ಪಾ ಹೇಳಿದ್ದಾರೆ.