rayachuru – Peepal Media

ದುರಸ್ತಿಗೆ ಬಂದ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿದು ಮಕ್ಕಳಿಗೆ ಗಾಯ
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮೇಲ್ಚಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡ ಬಗ್ಗೆ ವರದಿಯಾಗಿದೆ. ರಾಯಚೂರು ತಾಲ್ಲೂಕಿನ ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳ ದುರವಸ್ಥೆ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿದ್ದರೂ ಈ ಬಗ್ಗೆ ಯಾವುದೇ ಸರ್ಕಾರಗಳು ಬಂದರೂ ಅವುಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಾಗಲೇ ಇರುವ ಬಹುತೇಕ ಎಲ್ಲಾ ಸರ್ಕಾರಿ ಶಾಲೆಗಳ ಕಟ್ಟಡಗಳು ಹಳೆಯದಾಗಿದ್ದು, ಈ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ಸಾರ್ವಜನಿಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನು ಅರಸಿಗೇರ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತಗೊಂಡು ನಾಲ್ವರು ಮಕ್ಕಳು ಗಾಯಗೊಂಡು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ ಘಟನೆಯಲ್ಲಿ ವಿದ್ಯಾರ್ಥಿನಿ ಚಂದ್ರಿಕಾ ಸೇರಿದಂತೆ ನಾಲ್ವರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಭಾರತ ಐಕ್ಯತಾ ಯಾತ್ರೆ ಕಾಂಗ್ರೆಸ್ ಅಧಿಕಾರಕ್ಕೆ ಹೊರೆತು ಸಾಮಾನ್ಯ ಜನರಿಗಲ್ಲ : ಬೊಮ್ಮಾಯಿ
ರಾಯಚೂರು: ಕಾಂಗ್ರೆಸ್ ಪಕ್ಷದ ಭಾರತ ಐಕ್ಯತಾ ಯಾತ್ರೆಯು ‌ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಅಧಿಕಾರದ ʼಪುನರಾರಂಭʼಕ್ಕೆ ಹೊರತು ದಲಿತರರಿಗೆ, ಸಾಮಾನ್ಯ ಜನರಿಗೆ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಯಚೂರು ತಾಲೂಕಿನ ಗಿಳೇಸೂಗೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಬೊಮ್ಮಾಯಿ ಅವರು, ಭಾರತದಲ್ಲಿ ಕಾಂಗ್ರೆಸ್‌ ಪಕ್ಷದ ಅಸ್ತಿತ್ವಕ್ಕಾಗಿ ರಾಹುಲ್ ಗಾಂಧಿ ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಳ್ಳುತ್ತಿದ್ದಾರೆ ಹೊರೆತು ಸಾಮಾನ್ಯ ಜನರಿಗಾಗಿ ನಡೆಸುತ್ತಿರುವ ಯಾತ್ರೆಯಲ್ಲ ಎಂದು ದೂರಿದರು.

ಈ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಭಾರತ ಐಕ್ಯತಾ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರ ಜೊತೆ ಕೈಜೋಡಿಸಿರುವ ಕುರಿತು ಮಾತನಾಡಿದ ಬೊಮ್ಮಾಯಿಯವರು, ಸಿದ್ದರಾಮಯ್ಯ ಅವರು ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರಿದ ದಿನವೇ ಸಮಾಜದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ  ಅವರು ಚಿಕ್ಕ ಹುಡುಗನ ಕೈಕೆಳಗೆ ಕೆಲಸ ಮಾಡುತ್ತಿರುವುದು ನೋವಿನ ಸಂಗತಿ, ಇದು ಸ್ವಾಭಿಮಾನದ ಸಂಕೇತವಲ್ಲ  ಎಂದು ಬೊಮ್ಮಾಯಿ ಟೀಕಿಸಿದರು.

ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷದತ್ತ ಜನರು ಗಮನ ಸೆಳೆಯಲು ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದಾರೆ. ಹಾಗಾಗಿ ಇದು ರಾಹುಲ್ ಗಾಂಧಿಯವರ ‘ಪುನಾರಂಭ’ ಹೊರತು ಬೇರೇನೂ ಅಲ್ಲ ಹಾಗೆಯೇ ಈ ಯಾತ್ರೆ ಸಾಮಾನ್ಯ ಜನರು, ದಲಿತರಿಗೆ ಅಲ್ಲ ಎಂದರು.

ಇಂತಹ ಯಾತ್ರೆಗೆ ಹಿಂದುಳಿದ ವರ್ಗಗಳು, ಸಿದ್ದರಾಮಯ್ಯನವರು ಜೊತೆಯಾಗಿದ್ದು, ನಿಮ್ಮ ಸ್ಥಿತಿ ಏನಾಗಿತ್ತು ಮತ್ತು ಈಗ ನೀವು ಎಲ್ಲಿದ್ದೀರಿ? ನೀವೇ ನೋಡಿ ಎಂದು ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಅಧಿಕಾರ ಹೊಂದಿದ್ದ ಎಷ್ಟೋ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಪಕ್ಷದ ಶಾಸಕರು ಮತ್ತು ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷದಿಂದ ಬೇರೆ ಪಕ್ಷಗಳಿಗೆ ಬರುತ್ತಿದ್ದಾರೆ ಎಂಬ ಸೂಚನೆಗಳು ಕಂಡುಬರುತ್ತಿದ್ದು, ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಬೊಮ್ಮಾಯಿ ಟೀಕಿಸಿದರು.

ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ಕಾಂಗ್ರೆಸ್ ಎಂದಿಗೂ ಯೋಚಿಸಲಿಲ್ಲ ಎಂದು ಆರೋಪಿಸಿದ ಬೊಮ್ಮಾಯಿಯವರು, ಪಕ್ಷಕ್ಕೆ ʼಹಿಂದುಳಿದ ಸಮುದಾಯಗಳನ್ನು ಮೇಲಕ್ಕೆತ್ತುವ ಸಾಮಾನ್ಯ ಜ್ಞಾನ ಇಲ್ಲʼ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಅನೇಕ ಭಾಗ್ಯಗಳನ್ನು ಜಾರಿತರುವ ಭರವಸೆ ನೀಡಿತ್ತು, ಆದರೆ ಅವರು ನೀಡಿದ್ದು ‘ದುರ್ಭಾಗ್ಯʼ ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ 15 ರಿಂದ ಶೇ 17 ಕ್ಕೆ ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ 3 ರಿಂದ ಶೇ 7 ಕ್ಕೆ ಮೀಸಲಾತಿ ಹೆಚ್ಚಿಸಲು ಕರ್ನಾಟಕ ಸಚಿವ ಸಂಪುಟ ಶನಿವಾರ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ಈ ಕುರಿತು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿ ಪರಿಗಣಿಸಲಿದೆ. ಈ ಹಿನ್ನಲೆಯಲ್ಲಿ ಶಿಕ್ಷಣ ಮತ್ತು ಉದ್ಯೋಗದ ಅರಿವಿನಿಂದ ಜನರ ಆಕಾಂಕ್ಷೆ ಹೆಚ್ಚಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

“ಎಸ್‌ಸಿ/ಎಸ್‌ಟಿ ಕೋಟಾದ ಪಾದಯಾತ್ರೆಯ ಬಗ್ಗೆ ಯಾರೂ ನಕಾರಾತ್ಮಕವಾಗಿ ಮಾತನಾಡಬಾರದು, ಏಕೆಂದರೆ ಈ ಸಮುದಾಯಗಳು ಕಳೆದ 50-60 ವರ್ಷಗಳಲ್ಲಿ ನ್ಯಾಯ ನಿರಾಕರಣೆಯಿಂದ ಸಾಕಷ್ಟು ನಷ್ಟ ಅನುಭವಿಸಿವೆ ಹಾಗಾಗಿ ಇದರ ವಿರುದ್ಧ ಮಾತನಾಡುವವರು ಎಸ್‌ಸಿ/ಎಸ್‌ಟಿ ವಿರೋಧಿಗಳು ಎಂದು ಹೇಳಿದರು.

ಹಲವಾರು ಸಮುದಾಯಗಳು, ತಮ್ಮ ಸಮುದಾಯವನ್ನು ಎಸ್‌ಸಿ ಸಮುದಾಯಗಳಿಗೆ, ಇನ್ನು ಕೆಲವರು 3ಬಿ, 2ಎ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿಸಲು ಕೋರಿದ್ದು, ಅವರ ಎಲ್ಲಾ ಬೇಡಿಕೆಗಳನ್ನು ಕಾನೂನು ಆಯೋಗಗಳ ಶಿಫಾರಸ್ಸಿನಂತೆ ಅಧ್ಯಯನ ಮಾಡಲಾಗುವುದು ಮತ್ತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಜನರ ತೆರಿಗೆ ಹಣವನ್ನು ಹಗಲು ದರೋಡೆ ಮಾಡಿದೆ: ಯಡಿಯೂರಪ್ಪ
ರಾಯಚೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ಪಕ್ಷದ ನಾಯಕರು ಜನರ ತೆರಿಗೆ ಹಣವನ್ನು ಲೂಟಿ ಮಾಡಿ ಹಗಲು ದರೋಡೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಹಗಲು ದರೋಡೆಯಲ್ಲಿ ನಿರತರಾಗಿತ್ತು ಎಂದು ಇಂದಿನ ವಿಧಾನ ಸಭೆಯ ಅಧ್ಯಕ್ಷರಾಗಿರುವಂತಹ ರಮೇಶ್‌ ಕುಮಾರ್‌ ಹೇಳಿದ್ದಾರೆ. ಈ ಮಾತಿಗೆ ಭಾರತ ಐಕ್ಯತಾ ಯಾತ್ರೆ ನಡೆಸುತ್ತಿರುವ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಕೂಡ ವಿರೋಧ ಮಾಡಿಲ್ಲ. ಇದರ ಅರ್ಥ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಮೇಲೆ ಜನರು ಕೊಟ್ಟಂತಹ ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗಿಸಿಕೊಳ್ಳದೇನೆ ರಾತ್ರಿ, ಹಗಲು ದರೋಡೆಯಲ್ಲಿ ನಿರತರಾಗಿದ್ದರು ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷೀ ಬೇಕಿಲ್ಲ ಎಂದರು.

ಮುಂದುವರೆದು ಮಾತನಾಡಿದ ಅವರು, ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದಲ್ಲಿ ಕೂಡ ಕಲ್ಲಿದ್ದಲು ಹಗರಣ, ಕಾಮಲ್‌ವೆಲ್ತ್‌, 2ಜಿ ಹಗರಣ ಸೇರಿದಂತೆ 12 ಲಕ್ಷ ಕೋಟಿ.ರೂ ಅವ್ಯವಹಾರ ನಡೆದಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣ: ಸಚಿವ ಮುರುಗೇಶ್‌ ನಿರಾಣಿ
ಹುಬ್ಬಳ್ಳಿ: ರಾಜ್ಯದ ದಾವಣಗೆರೆ, ಬಾದಾಮಿ, ರಾಯಚೂರು, ಕೊಪ್ಪಳ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 94ನೇ ಸಂಸ್ಥಾಪನಾ ದಿನ ಹಾಗೂ ‘ವಾಣಿಜ್ಯ ರತ್ನʼಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಕಷ್ಟು ಉದ್ಯಮಿಗಳು ಒಲವು ತೋರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ಎಲ್ಲ ಕಡೆಯೂ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಅದಕ್ಕೆ ಅನುಕೂಲವಾಗುವಂತೆ ರಾಜ್ಯದ ಈ ಐದು ಜಿಲ್ಲೆಗಳಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ಮುರುಗೇಶ್‌ ನಿರಾಣಿ ಹೇಳಿದರು.

ಈ ಹಿನ್ನಲೆ ರಾಜ್ಯವು ಅಭಿವೃದ್ಧಿಯತ್ತ ಸಾಗುತ್ತಿದ್ದು, 18 ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ, ಹಾಗೆಯೇ ತುಮಕೂರು ಮತ್ತು ಶಿರಾ ನಡುವೆ ಹಾಗೂ ಬೆಳಗಾವಿಯ ಕಿತ್ತೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೀನಾಮೆ
ರಾಯಚೂರು: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ (ಎಸ್‌.ಸಿ. ಮೋರ್ಚಾ) ಹುದ್ದೆಗೆ ಹಾಗೂ ಸಾಮಾನ್ಯ ಸದಸ್ಯತ್ವಕ್ಕೆ, ತಿಮ್ಮಪ್ಪ ಅಲ್ಕೂರು ಅವರು ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಪಕ್ಷದ ವರಿಷ್ಠರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮೀನಾಮೇಷ ಮಾಡುತ್ತಿರುವುದರಿಂದ ಹಾಗೂ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ 4 ವರ್ಷಗಳು ಕಳೆದರೂ ಶಿಫಾರಸ್ಸು ಮಾಡುವಲ್ಲಿ ವಿಫಲವಾಗಿರುವುದರಿಂದ ಮನನೊಂದು ಮತ್ತು ನಮ್ಮ ಜನಾಂಗದ ಬಹುದೊಡ್ಡ ಬೇಡಿಕೆಗೆ ಅನ್ಯಾಯವಾಗುತ್ತಿರುವುದರಿಂದ, ಪಕ್ಷದಲ್ಲಿ ಸೇವೆ ಸಲ್ಲಿಸಲು ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ’ ಎಂದು ತಿಳಿಸಿದ್ದಾರೆ.

ತಿಮ್ಮಪ್ಪ ಅವರು, ಭಾರತೀಯ ಜನತಾ ಪಾರ್ಟಿಯಲ್ಲಿ ರಾಯಚೂರು ಗ್ರಾಮೀಣ ಭಾಗದಲ್ಲಿ ಪಕ್ಷದ ಸೇವೆ ಸಲ್ಲಿಸಿದರೂ ಸಹ ಯಾವುದೇ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಸಿಗದಿರುವ ಕಾರಣ ಬೇಸತ್ತು, ರಾಜೀನಾಮೆ ನೀಡುತ್ತಿದ್ದಾರೆಂದು ರಾಜೀನಾಮೆ ಪತ್ರದಲ್ಲಿ ಬರೆಯಲಾಗಿದೆ.

ತಿಮ್ಮಪ್ಪ ಅಲ್ಕೂರು ಅವರ ರಾಜೀನಾಮೆ ಪತ್ರ

ಲಾರಿ ಮತ್ತು ಕಾರು ಡಿಕ್ಕಿ: 6 ಮಂದಿ ಸಾವು
ಯಾದಗಿರಿ: ಗುರುಮಠಕಲ್ ತಾಲ್ಲೂಕಿನ ಅರಕೇರಾ  ಬಳಿ ಗುರುವಾರ ರಾತ್ರಿ ನಡೆದ ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ  ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದಾರೆ.

ತೆಲಂಗಾಣದ ಕೊಡಂಗಲ್ ಸಮೀಪದ ಚಿತ್ಲಾಪಲ್ಲಿಯ ಹಜರತ್ ಅಬ್ದುಲ್ ಷಾ ದರ್ಗಾದಲ್ಲಿ, ಜವಳ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ಮುಗಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ, ಅರಕೇರಾ ಸಿದ್ಧಾರೂಢ ಮಠದ ಬಳಿ  ಈ ಘಟನೆ ನಡೆದಿದೆ. ಪೈಪ್‌ ಸಾಗಿಸುತ್ತಿದ್ದ ಟಾಟಾ ಗೂಡ್ಸ್ ಲಾರಿಗೆ, ಕುಟುಂಬಸ್ಥರಿದ್ದ ಹುಂಡೈ ಸ್ಯಾಂಟ್ರೊ ಕಾರು ಡಿಕ್ಕಿ ಹೊಡೆದ ಕಾರಣ ಈ ದುರ್ಘಟನೆ ಸಂಭವಿಸಿದ್ದು 6 ಜನ ಸಾವನ್ನಪ್ಪಿದ್ದಾರೆ.

ಈ ಘಟನೆ ನಡೆದ ತಕ್ಷಣ ಲಾರಿ ಡ್ರೈವರ್‌ ಪರಾರಿಯಾಗಿದ್ದಾನೆ. ಅಪಘಾತದ ಮಾಹಿತಿ ತಿಳಿದಾಕ್ಷಣ ಇಆರ್‌ಎಸ್‌ಎಸ್‌ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸ್ಥಳದಲ್ಲಿ 4 ಜನ ಸಾವನ್ನಪ್ಪಿದ್ದು, ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ, ದುರಾದೃಷ್ಟವಶಾತ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದ ಕಾರಣ ಅವರು ಕೂಡ ಕೊನೆಯುಸಿರೆಳೆದಿದ್ದಾರೆ.

ಮಹ್ಮದ್ ವಾಜೀದ್ ಹುಸೇನ್(40), ಮಹ್ಮದ್ ನಜರ್ ಹುಸೇನ್ (76), ನೂರ್ ಜಹಾನ್ ಬೇಗಂ (70), ಹೀನಾ ಬೇಗಂ (30), ಇಮ್ರಾನ್ (22), ಉಮೇಜಾ (5 ತಿಂಗಳು) ಎಂಬುವವರು ಮೃತಪಟ್ಟವರಾಗಿದ್ದು, ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಗ್ರಾಮದ ಎಂಜಿ ರಸ್ತೆ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌, ಪಿಐ ದೌವಲತ್ ಕುರಿ ಭೇಟಿ ನೀಡಿದ್ದು, ಘಟನೆಯಬಗ್ಗೆ ಪರಿಶೀಲಿಸಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.