ricchi – Peepal Media

ವಿಭಿನ್ನ ಕಥೆಯ ʼರಿಚ್ಚಿʼ ಚಿತ್ರದ ಚಿತ್ರೀಕರಣ ಪೂರ್ಣ
ಬೆಂಗಳೂರು: ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ʼರಿಚ್ಚಿʼ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ಮೈಸೂರು, ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ.

ʼರಿಚ್ಚಿʼ ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ ಆಗಿದೆ. ಹೌದು ತಮ್ಮ ಹೆಸರನ್ನೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ. ಚಿತ್ರದ ನಿರ್ಮಾಪಕರೂ ಇವ‌ರೇ ಆಗಿದ್ದು, ರಾಕೇಶ್ ರಾವ್ ʼರಿಚ್ಚಿʼ ಚಿತ್ರದ ಸಹ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ʼರಿಚ್ಚಿʼ ನಿರ್ಮಾಣವಾಗಿದೆ. ಅಗಸ್ತ್ಯ ಸಂತೋಷ್ ಅವರು ಸಂಗೀತ ನೀಡಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದ್ದು, ಸೋನು ನಿಗಮ್, ಕುನಾಲ್ ಗಾಂಜಾವಾಲ ಹಾಗೂ ಅಂಕಿತ ಕುಂಡು ಹಾಡುಗಳನ್ನು ಹಾಡಿದ್ದಾರೆ. ಗೌಸ್ ಫಿರ್, ಆನಂದ್ ಹಾಗೂ ವಿನೋದ್ ಹಾಡುಗಳನ್ನು ಬರೆದಿದ್ದಾರೆ. ಹಿಂದಿ ಭಾಷೆಯಲ್ಲಿ ಈ ಚಿತ್ರದ ಹಾಡುಗಳನ್ನು ಜಾವೇದ್ ಅಲಿ, ಪಲಾಕ್ ಮುಚ್ಚಲ್ ಹಾಗೂ ಕುನಾಲ್ ಗಾಂಜಾವಾಲ ಹಾಡಿದ್ದಾರೆ.

ವೀರೇಶ್ ಎನ್ ಟಿ ಎ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚಿನ್ನಿಪ್ರಕಾಶ್, ಧನಂಜಯ ಹಾಗೂ ಭೂಷಣ್ ನೃತ್ಯ ನಿರ್ದೇಶನ ಹಾಗೂ ವಿಕ್ರಮ್ ಮೋರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ.

ʼರಿಚ್ಚಿʼ ಅವರಿಗೆ ನಾಯಕಿಯಾಗಿ “ಕನ್ನಡತಿ” ಧಾರಾವಾಹಿ ಖ್ಯಾತಿಯ ರಮೋಲ ಅಭಿನಯಿಸಿದ್ದಾರೆ. ಮನೋಜ್, ಮಿಮಿಕ್ರಿ ಗೋಪಿ, “ಮಜಾಭಾರತ” ಚಂದ್ರಪ್ರಭ, “ಕಾಮಿಡಿ ಕಿಲಾಡಿಗಳು” ರಾಘವೇಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ.