sambhal – Peepal Media

ಸಂಭಾಲ್: ಶಾಹಿ ಜಾಮಾ ಮಸೀದಿಯಲ್ಲಿ ಪೂಜೆ ಮಾಡಲು ಯತ್ನಿಸಿದ ಮೂವರ ಬಂಧನ
ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯಲ್ಲಿ ಪೂಜೆ ಮಾಡಲು ಯತ್ನಿಸಿದ ಆರೋಪದ ಮೇಲೆ ದೆಹಲಿಯ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯ ಮಧ್ಯೆ, ಶುಕ್ರವಾರದ ಪ್ರಾರ್ಥನೆಗೂ ಮುನ್ನ ಮಸೀದಿಯಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿತ್ತು.

“ಮೂವರು ವ್ಯಕ್ತಿಗಳು ಕಾರಿನಲ್ಲಿ ವಿವಾದಿತ ಸ್ಥಳದ ಬಳಿ ಬಂದರು. ಅವರನ್ನು ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತಂದಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಭವಿಷ್ಯದಲ್ಲಿ ಸಂಭಾಲ್ ಪ್ರವೇಶಿಸದಂತೆ ಅವರಿಗೆ ಎಚ್ಚರಿಕೆ ನೀಡಲಾಗುವುದು,” ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯ್ ಹೇಳಿದರು.

ಬಂಧಿತರಲ್ಲಿ ಒಬ್ಬರಾದ ಸನಾತನ್ ಸಿಂಗ್, “ನಾವು ವಿಷ್ಣು ಹರಿಹರ ದೇವಸ್ಥಾನದಲ್ಲಿ ಹವನ ಮತ್ತು ಯಜ್ಞ ಮಾಡಲು ಬಂದಿದ್ದೇವೆ, ಆದರೆ ಪೊಲೀಸರು ನಮ್ಮನ್ನು ಬಂಧಿಸಿದರು. ಅಲ್ಲಿ ನಮಾಜ್ ಮಾಡಲು ಸಾಧ್ಯವಾದರೆ, ನಾವು ಪೂಜೆ ಏಕೆ ಮಾಡಬಾರದು?” ಎಂದು ಪಿಟಿಐಗೆ ತಿಳಿಸಿದ್ದಾರೆ.

ಶಾಹಿ ಜಾಮಾ ಮಸೀದಿ ಕಾನೂನು ವಿವಾದದ ಕೇಂದ್ರಬಿಂದುವಾಗಿದ್ದು , ಹಿಂದೂ ದಾವೆದಾರರು ಈ ಮಸೀದಿಯನ್ನು 1526 ರಲ್ಲಿ ಮೊಘಲ್ ದೊರೆ ಬಾಬರ್ “ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಾಲಯವನ್ನು ಭಗವಾನ್ ಕಲ್ಕಿಗೆ ಸಮರ್ಪಿತ” ಸ್ಥಳದಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ನವೆಂಬರ್ 26 ರಂದು, ಮಸೀದಿಯ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ಮುಸ್ಲಿಂ ಗುಂಪುಗಳು ಆಕ್ಷೇಪ ವ್ಯಕ್ತಪಡಿಸಿದ ನಂತರ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿತು. ಈ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದರು.

‘ಒಂದು ಮಿತಿ ಇರಬೇಕು’: ಪೂಜಾ ಸ್ಥಳಗಳ ಕಾಯ್ದೆಯನ್ನು ಪ್ರಶ್ನಿಸುವ ಪ್ರಕರಣದಲ್ಲಿ ಮಧ್ಯಸ್ಥಿಕೆ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್
1991 ರ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾಗುವ ಮಧ್ಯಸ್ಥಿಕೆ ಅರ್ಜಿಗಳ ಸಂಖ್ಯೆಗೆ “ಮಿತಿ ಇರಬೇಕು” ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ .

ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ. ಸಂಜಯ್ ಕುಮಾರ್ ಅವರಿದ್ದ ಪೀಠವು ಏಪ್ರಿಲ್‌ನಲ್ಲಿ ಮೂವರು ನ್ಯಾಯಾಧೀಶರ ಪೀಠದಿಂದ ವಿಚಾರಣೆ ನಡೆಸುವಂತೆ ನಿರ್ದೇಶಿಸಿತು.

“ನಾವು ಇಂದು ಪೂಜಾ ಸ್ಥಳಗಳ ಕಾಯ್ದೆಯ ವಿಷಯವನ್ನು ಕೈಗೆತ್ತಿಕೊಳ್ಳುವುದಿಲ್ಲ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ… ಮಧ್ಯಪ್ರವೇಶಗಳಿಗೆ ಒಂದು ಮಿತಿ ಇದೆ,” ಎಂದು ಖನ್ನಾ ಹೇಳಿದರು.

ಆಗಸ್ಟ್ 15, 1947 ರಂದು ಅಸ್ತಿತ್ವದಲ್ಲಿದ್ದ ಪೂಜಾ ಸ್ಥಳದ ಧಾರ್ಮಿಕ ಸ್ವರೂಪದಲ್ಲಿ ಯಾವುದೇ ಬದಲಾವಣೆಗಳನ್ನು ಈ ಕಾಯಿದೆ ಅನುಮತಿಸುವುದಿಲ್ಲ.‌

ಈ ಕಾಯ್ದೆಯ ವಿರುದ್ಧದ ಸವಾಲನ್ನು ಭಾರತೀಯ ಜನತಾ ಪಕ್ಷದ ನಾಯಕಿ ಅಶ್ವಿನಿ ಉಪಾಧ್ಯಾಯ ಅವರು ಮುನ್ನಡೆಸಿತ್ತಿದ್ದಾರೆ. ಇವರು 2020 ರಲ್ಲಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಕಾನೂನು ಹಿಂದೂಗಳು, ಜೈನರು, ಬೌದ್ಧರು ಮತ್ತು ಸಿಖ್ಖರಿಗೆ ಕಾನೂನು ಪರಿಹಾರಗಳನ್ನು ನಿರ್ಬಂಧಿಸುವ ಮೂಲಕ “ಆಕ್ರಮಣಕಾರರ ಕಾನೂನುಬಾಹಿರ ಕೃತ್ಯಗಳನ್ನು” ರಕ್ಷಿಸುತ್ತದೆ ಎಂದು ವಾದಿಸಿದ್ದರು.

ಕಾಂಗ್ರೆಸ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸಿಸ್ಟ್-ಲೆನಿನಿಸ್ಟ್) ಲಿಬರೇಶನ್, ಜಮಿಯತ್ ಉಲಮಾ-ಐ-ಹಿಂದ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಸಾದುದ್ದೀನ್ ಓವೈಸಿ ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳು ಮತ್ತು ನಾಯಕರು ಈ ಕಾಯ್ದೆಯ ಸಿಂಧುತ್ವವನ್ನು ಸಮರ್ಥಿಸಿಕೊಂಡು ಮಧ್ಯಸ್ಥಿಕೆ ಅರ್ಜಿಗಳನ್ನು ಸಲ್ಲಿಸಿದ್ದಾರೆ.

“ಕಳೆದ ಬಾರಿ ನಾವು ಹಲವು ಹಸ್ತಕ್ಷೇಪಗಳಿಗೆ ಅವಕಾಶ ನೀಡಿದ್ದೇವೆ. ಇನ್ನೂ ಎತ್ತದ ಕೆಲವು ಅಂಶಗಳನ್ನು ಎತ್ತಿ ತೋರಿಸಿರುವುದರಿಂದ ಹೊಸ ಹಸ್ತಕ್ಷೇಪಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು,” ಎಂದು ಸೋಮವಾರ ಪೀಠ ಹೇಳಿದೆ.

ಡಿಸೆಂಬರ್‌ನಲ್ಲಿ, 1991 ರ ಕಾಯಿದೆಗೆ ಸಾಂವಿಧಾನಿಕ ಸವಾಲುಗಳನ್ನು ಪರಿಹರಿಸುವ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತು. ಕೇಂದ್ರಕ್ಕೆ ಹಲವಾರು ವಿಸ್ತರಣೆಗಳನ್ನು ನೀಡಲಾಗಿದ್ದರೂ ಸಹ ಇದು ಇನ್ನೂ ಪೂರ್ಣಗೊಂಡಿಲ್ಲ ಎಂದು ಸೋಮವಾರ ನ್ಯಾಯಾಲಯಕ್ಕೆ ತಿಳಿಸಲಾಯಿತು.

ಕೇಂದ್ರ ಸರ್ಕಾರಕ್ಕೆ ಸಾರ್ವಜನಿಕವಾಗಿ ಲಭ್ಯವಾಗುವ ವೆಬ್‌ಸೈಟ್‌ನಲ್ಲಿ ಅಫಿಡವಿಟ್ ಅನ್ನು ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ. ಮಸೀದಿಗಳು ಮತ್ತು ದರ್ಗಾಗಳ ಮೇಲೆ ತಮ್ಮ ಮಾಲೀಕತ್ವವನ್ನು ಪ್ರತಿಪಾದಿಸುವ ಹಿಂದೂ ಪಕ್ಷಗಳ ಮೊಕದ್ದಮೆಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ನಿರ್ದೇಶನ ಬಂದಿದೆ.

ನವೆಂಬರ್‌ನಲ್ಲಿ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ 16 ನೇ ಶತಮಾನದ ಜಾಮಾ ಮಸೀದಿಯ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯ ಆದೇಶಿಸಿದ ನಂತರ ಹಿಂದೂ ಮತ್ತು ಮುಸ್ಲಿಂ ಗುಂಪುಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು . ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದರು.

ಡಿಸೆಂಬರ್ 12 ರಂದು, ಪೂಜಾ ಸ್ಥಳಗಳ ಧಾರ್ಮಿಕ ಸ್ವರೂಪಕ್ಕೆ ಸಂಬಂಧಿಸಿದ ಬಾಕಿ ಇರುವ ಮೊಕದ್ದಮೆಗಳಲ್ಲಿ, ಸಮೀಕ್ಷೆಯ ನಿರ್ದೇಶನಗಳು ಸೇರಿದಂತೆ ಮಧ್ಯಂತರ ಅಥವಾ ಅಂತಿಮ ಆದೇಶಗಳನ್ನು ಹೊರಡಿಸುವುದನ್ನು ಸುಪ್ರೀಂ ಕೋರ್ಟ್ ವಿಚಾರಣಾ ನ್ಯಾಯಾಲಯಗಳಿಗೆ ನಿರ್ಬಂಧಿಸಿತು.

ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಮುಂದಿನ ಆದೇಶಗಳನ್ನು ನೀಡುವವರೆಗೆ ಯಾವುದೇ ನ್ಯಾಯಾಲಯದಲ್ಲಿ ಹೊಸ ಮೊಕದ್ದಮೆಗಳನ್ನು ದಾಖಲಿಸುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಂಭಾಲ್ ಹಿಂಸಾಚಾರ: ಮತ್ತೆ ಇಬ್ಬರ ಬಂಧನ
ನವೆಂಬರ್‌ನಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು

“ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಸ್ಥಾನವು ಕಲ್ಕಿಗೆ ಸಮರ್ಪಿತವಾಗಿದೆ” ಎಂಬ ಸ್ಥಳದಲ್ಲಿ ಮೊಘಲ್ ದೊರೆ ಬಾಬರ್ 1526 ರಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಹೇಳಲಾದ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು.

ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದರು.

ಭಾನುವಾರ ಬಂಧಿಸಲ್ಪಟ್ಟ ಇಬ್ಬರು ವ್ಯಕ್ತಿಗಳಾದ ಮೊಹಮ್ಮದ್ ಹಸನ್ ಮತ್ತು ಸಮದ್, ಸಮೀಕ್ಷೆಯನ್ನು ವಿರೋಧಿಸಿದ ಮತ್ತು “ಜನಸಮೂಹವನ್ನು ಪ್ರಚೋದಿಸಿದ” ಗುಂಪಿನ ಭಾಗವಾಗಿದ್ದರು ಎಂದು ಆರೋಪಿಸಲಾಗಿದೆ. “ಕೊಲ್ಲುವ ಉದ್ದೇಶದಿಂದ” ಗುಂಪು ಅಧಿಕಾರಿಗಳ ಮೇಲೆ ಗುಂಡು ಹಾರಿಸಿತು, ಕಲ್ಲುಗಳನ್ನು ಎಸೆದಿತು ಮತ್ತು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿತು ಎಂದು ಪೊಲೀಸರು ಆರೋಪಿಸಿದ್ದಾರೆ.

ಘಟನೆಯ ಫೋಟೋಗಳು ಮತ್ತು ವೀಡಿಯೊಗಳ ಮೂಲಕ ಇಬ್ಬರು ವ್ಯಕ್ತಿಗಳನ್ನು ಗುರುತಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಗಜೇಂದ್ರ ಸಿಂಗ್ ಅವರನ್ನು ಉಲ್ಲೇಖಿಸಿ ದೈನಿಕ್ ಭಾಸ್ಕರ್ ವರದಿ ಮಾಡಿದೆ .

ಈ ಬಂಧನಗಳಿಂದ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 79 ಕ್ಕೆ ಏರಿದ್ದು , ಅವರಲ್ಲಿ 46 ಮಂದಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಜಾಮೀನು ಮಂಜೂರು ಆಗಿಲ್ಲ.

ಶುಕ್ರವಾರ ಪೊಲೀಸರು ಶಾಹಿ ಜಾಮಾ ಮಸೀದಿ ಬಳಿ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ 74 ಜನರ ಫೋಟೋಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ನಂತರ ಇದು ಸಂಭವಿಸಿದೆ.

ಹಿಂಸಾಚಾರದ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವು ಈ ವಾರ ನ್ಯಾಯಾಲಯದಲ್ಲಿ ಪ್ರಕರಣದ ಆರೋಪಪಟ್ಟಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಸಂಭಾಲ್ ಪೊಲೀಸ್ ವರಿಷ್ಠಾಧಿಕಾರಿ ಎಸ್‌ಪಿ ಕೃಷ್ಣನ್ ಕುಮಾರ್ ಭಾನುವಾರ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಪೊಲೀಸ್‌ ಕಸ್ಟಡಿಯಲ್ಲಿ ಸಾವು: ಸಂಭಾಲ್‌ನಲ್ಲಿ ಪ್ರತಿಭಟನೆ
ಜನವರಿ 21, 2025 ಸೋಮವಾರ ಉತ್ತರ ಪ್ರದೇಶದ ಸಂಭಾಲ್ ಪಟ್ಟಣದ ಪೊಲೀಸ್ ಔಟ್‌ಪೋಸ್ಟ್‌ಗೆ ಕೊಂಡೊಯ್ದ ಸ್ವಲ್ಪ ಸಮಯದ ನಂತರ 40 ವರ್ಷದ ವ್ಯಕ್ತಿಯೊಬ್ಬರು ಸೋಮವಾರ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನು ಪ್ರಶ್ನಿಸಿ ಮೃತರ ಕುಟುಂಬ ಮತ್ತು ಸ್ಥಳೀಯ ನಿವಾಸಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ವ್ಯಕ್ತಿಯನ್ನು ಚಿತ್ರಹಿಂಸೆ ನೀಡಿ ಸಾಯಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಹೊರಠಾಣೆ ಎದುರು ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸ್ ಸಿಬ್ಬಂದಿ ಗುಂಪು ದಾಳಿಗೆ ಹೆದರಿ ಓಡಿಹೋದರು.

ಇರ್ಫಾನ್ ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ ಮತ್ತು ಕಸ್ಟಡಿಯಲ್ಲಿ ಅವರಿಗೆ ಚಿತ್ರಹಿಂಸೆ ನೀಡಿರುವುದನ್ನು ನಿರಾಕರಿಸಿದರು.

ಈ ಪ್ರದೇಶದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ನಖಾಸಾ ಮತ್ತು ಕೊತ್ವಾಲಿ ಪೊಲೀಸ್ ಠಾಣೆಗಳ ಸಿಬ್ಬಂದಿಯನ್ನು ನಿಯೋಜಿಸಲಾಯಿತು.

उत्तर प्रदेश के संभल जिले में पुलिस चौकी के अंदर इरफान की संदिग्ध मौत ने कानून-व्यवस्था पर गंभीर सवाल खड़े कर दिए हैं।

परिजनों द्वारा लगाए गए पुलिस टॉर्चर के आरोपों ने न केवल प्रशासन को कटघरे में खड़ा किया है, बल्कि योगी सरकार की कार्यशैली पर भी करारा प्रहार किया है।

प्रदेश… pic.twitter.com/r1wlKXPy5c
— Chandra Shekhar Aazad (@BhimArmyChief) January 20, 2025

ಸಾಲವನ್ನು ವಾಪಾಸು ನೀಡಿಲ್ಲ ಎಂಬ ಆರೋಪದಲ್ಲಿ ಸಂಬಂಧಿಯೊಬ್ಬರು ನೀಡಿದ ದೂರಿನ ನಂತರ ಪೊಲೀಸರು ಇರ್ಫಾನ್ ಅವರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ರಾಯಸಟ್ಟಿ ಹೊರಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳು ತಮ್ಮ ಅಸ್ವಸ್ಥ ಪತಿಯನ್ನು ವಿಚಾರಣೆಗಾಗಿ ಕರೆದೊಯ್ದು, ನಂತರ ಅವರಿಗೆ ಥಳಿಸಿದ್ದಾರೆ ಎಂದು ಇರ್ಫಾನ್ ಪತ್ನಿ ರೇಷ್ಮಾ ಹೇಳಿದ್ದಾರೆ.

“ಅವರು ಅಸ್ವಸ್ಥರಾಗಿದ್ದರು ಮತ್ತು ಕನಿಷ್ಠ ಅವರ ಔಷಧಿಯನ್ನು ತೆಗೆದುಕೊಳ್ಳಲು ಸಮಯ ನೀಡಬೇಕು ಎಂದು ನಾವು ಪೊಲೀಸ್ ತಂಡಕ್ಕೆ ಮನವಿ ಮಾಡಿದ್ದೆವು, ಆದರೆ ಅವರು ನಮ್ಮ ಮನವಿಯನ್ನು ಕೇಳಲಿಲ್ಲ. ಪೊಲೀಸರು ಅವರನ್ನು ಜೀಪಿನಲ್ಲಿ ಹಾಕಿದರು. ಔಷಧಿ ತೆಗೆದುಕೊಂಡಿದ್ದರೆ ಬದುಕಿರಬಹುದಿತ್ತು. ಆವರನ್ನು ಪೋಲೀಸರು ಕೊಂದರು,” ಎಂದು ರೇಷ್ಮಾ ಮಾಧ್ಯಮಗಳಿಗೆ ತಿಳಿಸಿದರು.

ಸಂಭಾಲ್ ಪೊಲೀಸರು, ಕಸ್ಟಡಿ ಚಿತ್ರಹಿಂಸೆಯ ಆರೋಪಗಳನ್ನು ನಿರಾಕರಿಸುತ್ತಾ, ಇರ್ಫಾನ್ ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಿದ್ದಾರೆ. ಆ ವ್ಯಕ್ತಿಯನ್ನು ಪೊಲೀಸ್ ಔಟ್‌ಪೋಸ್ಟ್‌ಗೆ ಕರೆದೊಯ್ಯುವಾಗ, ಅವರ ಮಗ ಕೂಡ ಅವರೊಂದಿಗೆ ಇದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯ್ ಹೇಳಿದ್ದಾರೆ.

“ತಮ್ಮ ತಂದೆಗೆ ಆರೋಗ್ಯ ಸರಿಯಿಲ್ಲ ಮತ್ತು ಔಷಧಿಯನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಪೊಲೀಸರಿಗೆ ತಿಳಿಸಿದರು. ಅವರು ಮಾತ್ರೆ ತೆಗೆದುಕೊಂಡರು, ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದರು. ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಮಾರ್ಗಮಧ್ಯೆ ಅವರು ಸಾವನ್ನಪ್ಪಿದರು,” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇರ್ಫಾನ್ ಮತ್ತು ಅವರ ಮಗ ಕೇವಲ 10 ರಿಂದ 20 ನಿಮಿಷಗಳ ಕಾಲ ಪೊಲೀಸ್ ಔಟ್‌ಪೋಸ್ಟ್‌ನಲ್ಲಿದ್ದರು ಎಂದು ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಕ್ಯಾಮೆರಾ ದೃಶ್ಯಾವಳಿಗಳು ತೋರಿಸಿವೆ ಎಂದು ಬಿಷ್ಣೋಯ್ ಹೇಳಿದ್ದಾರೆ.

ಆದರೆ, ನಗೀನಾ ಸಂಸದ ಚಂದ್ರಶೇಖರ್ ಆಜಾದ್ ಇದು ಸಾವು ಅನುಮಾನಾಸ್ಪದವಾಗಿದ್ದು, ನ್ಯಾಯಯುತ ತನಿಖೆಗೆ ಒತ್ತಾಯಿಸಿದ್ದಾರೆ.

“ಕುಟುಂಬದ ಸದಸ್ಯರು ಹೊರಿಸಿರುವ ಪೊಲೀಸ್ ಚಿತ್ರಹಿಂಸೆಯ ಆರೋಪಗಳು ಆಡಳಿತವನ್ನು ಖೈದಿಯ ಸ್ಥಾನದಲ್ಲಿ ಇರಿಸಿದೆ, ಮಾತ್ರವಲ್ಲದೆ ಯೋಗಿ ಸರ್ಕಾರದ ಕಾರ್ಯಶೈಲಿಗೆ ತೀವ್ರ ಹೊಡೆತವನ್ನು ನೀಡಿದೆ” ಎಂದು ಅವರು ಹೇಳಿದರು.

ಸಂಭಾಲ್‌ ಸುತ್ತ ಕಟ್ಟಿದ ಸುಳ್ಳುಗಳು!
ಸಂಭಾಲ್‌ ಮಸೀದಿಯ ಮುಂದೆ ನಾಲ್ವರು ಸಾವನ್ನಪ್ಪಿದ್ದಾರೆ. ನಾಲ್ವರೂ ಭಾರತೀಯರು, ಆದರೆ ನಾಲ್ಕು ಮುಸ್ಲಿಮರು. ಬಹುಶಃ ಪೊಲೀಸರು ಅವರನ್ನೂ ಹಿಂದೂಗಳನ್ನು ನಡೆಸಿಕೊಂಡಂತೆ ನಡೆಸಿಕೊಂಡಿದ್ದರೆ ಬದುಕಿರುತ್ತಿದ್ದರೋ ಏನೋ!

ಹಿಂದೂಗಳು ಕೋಮುದ್ರಿಕ್ತರಾಗಿ ನಡೆದುಕೊಂಡರೆ ಪೊಲೀಸರ ಗುಂಡು ಕೆಲಸ ಮಾಡುವುದಿಲ್ಲ, ಮಾಡಿದರೂ ಪಟಾಕಿ ಬೆಂಕಿಕೊಟ್ಟು ಎಸೆದಂತೆ ಗಾಳಿಯಲ್ಲಿ ಹಾರುತ್ತವೆ. ಹಿಂದೂವಿನ ಎದೆಯನ್ನು ಅದು ಸೀಳುವುದಿಲ್ಲ. ಹಿಂದೂಗಳು ಇತರರ ಮನೆಗಳು , ವಾಹನಗಳು ಮತ್ತು ಧಾರ್ಮಿಕ ಸ್ಥಳಗಳಿಗೆ ಬೆಂಕಿ ಹಚ್ಚುವ ಮತ್ತು ದಾಳಿ ಮಾಡುವ ಸುದ್ದಿಯನ್ನು ನೀವು ಓದಿರುತ್ತೀರಿ. ಅನೇಕ ಕಡೆ ಹಿಂದುತ್ವದವರು ದಲಿತ-ಮುಸಲ್ಮಾನರ ಮೇಲೆ ಗುಂಪುದಾಳಿ ನಡೆಸಿದ್ದಾರೆ. ಆದರೆ ಅವರ್ಯಾರ ಮೇಲೂ ಪೊಲೀಸರು ಸಂಭಾಲ್‌ನಲ್ಲಿ ಮಾಡಿದಂತೆ ಪೊಲೀಸರು ನಡೆದುಕೊಂಡ ಸುದ್ದಿ ಇಲ್ಲ.

ಹಿಂದೂ ಕನ್ವಾರಿಯಾಗಳು ಜನರನ್ನು ಮಾತ್ರವಲ್ಲದೆ ಪೊಲೀಸರ ಮೇಲೂ ಹಲ್ಲೆ ನಡೆಸಿರುವ ವೀಡಿಯೊಗಳನ್ನು ನೀವು ನೋಡಿರುತ್ತೀರಿ , ಆದರೂ ಪೊಲೀಸರು ಮೂಕರಾಗಿ ನೋಡುತ್ತಿದ್ದರು. ಪ್ರಶ್ನೆ ಎಂದರೆ, ಪ್ರಕ್ಷುಬ್ಧ ಹಿಂದುತ್ವವಾದಿ ಗುಂಪು ಕಲ್ಲು ತೂರಾಟದ ಮಾಡಿದರೆ ಅವರ ಜೊತೆಗೂ ಪೊಲೀಸರು ಹೀಗೆ ನಡೆದುಕೊಳ್ಳುತ್ತಾರಾ?

ಪೊಲೀಸರು ಹೇಳುತ್ತಾರೆ, ತಾವು ಯಾವುದೇ ಮುಸ್ಲಿಮರನ್ನು ಕೊಂದಿಲ್ಲ ಎಂದು. ಅವರ ಪ್ರಕಾರ, ಮುಸ್ಲಿಮರೇ ಗುಂಡು ಹಾರಿಸಿಕೊಂಡು ನಾಲ್ವರನ್ನು ಕೊಂದರು. ಇದೊಂದು ಹೊಸ ಬದಲಾವಣೆ: ಮುಸ್ಲೀಮರ ಸಾವಿಗೆ ಅವರನ್ನೇ ದೂಷಿಸುವುದು. ಡಿಸೆಂಬರ್ 2019 ರಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ 21 ಮುಸ್ಲಿಮರು ಕೊಲ್ಲಲ್ಪಟ್ಟಾಗ ಪೊಲೀಸರು ಇದೇ ಮಾತನ್ನು ಹೇಳಿದ್ದರು. ಮುಸ್ಲಿಮರನ್ನು ಕೊಂದ ಆ ಗುಂಡುಗಳು ಅವರ ಅಧಿಕೃತ ಬಂದೂಕುಗಳಿಗೆ ಸೇರಿದ್ದಲ್ಲ ಎಂದು ಪೊಲೀಸರು ಹೇಳಿದ್ದರು. ದೆಹಲಿ ಹಿಂಸಾಚಾರವನ್ನು ಮುಸ್ಲಿಂ ಕಾರ್ಯಕರ್ತರ ಮೇಲೆ ಆರೋಪಿಸಲಾಗಿದೆ ಮತ್ತು ಎಲ್ಗರ್ ಪರಿಷತ್ ಹಿಂಸಾಚಾರದಲ್ಲೂ ಮುಸಲ್ಮಾನರ ಮೇಲೆ ಗೂಬೆ ಕೂರಿಸಲಾಗಿದೆ.

ಮುಸ್ಲಿಮರನ್ನು ಪ್ರಚೋದಿಸಿ, ಹಿಂಸಾಚಾರಕ್ಕೆ ಕಾರಣನಾಗಿದ್ದಾನೆ ಎಂದು ಸಂಭಾಲ್ ಸಂಸದ ಮತ್ತು ಸ್ಥಳೀಯ ಶಾಸಕರ ಪುತ್ರನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಸ್ಲಿಮರ ಹಿಂಸಾಚಾರ ಮತ್ತು ಹತ್ಯೆಯ ನಂತರ ಪೊಲೀಸರು ಧ್ವಜ ಮೆರವಣಿಗೆಗಳನ್ನು ನಡೆಸುತ್ತಿರುವುದರಲ್ಲಿ ಆಶ್ಚರ್ಯವೇನಿಲ್ಲ!

ಮುಸ್ಲಿಮರ ಸಾವಿಗೆ ಪೊಲೀಸ್ ಅಧಿಕಾರಿಗಳು ವಿಷಾದ ಕೂಡ ವ್ಯಕ್ತಪಡಿಸಲಿಲ್ಲ. ಬದಲಾಗಿ, ಮೃತರಾದವರ ಕುಟುಂಬದವರಿಗೆ, “ಆಪಾದನೆಗಳನ್ನು ಮಾಡುವ ಮೊದಲು, ಅವರು [ಮೃತರ ಕುಟುಂಬ] ತಮ್ಮ ಮಕ್ಕಳು ಕಲ್ಲೆಸೆಯಲು ಏಕೆ ಅಲ್ಲಿಗೆ ಬಂದರು ಎಂದು ಕೇಳಬೇಕು. ಅವರು ಯಾವುದೇ ಧಾರ್ಮಿಕ ಕೆಲಸ, ಪವಿತ್ರ ಕಾರ್ಯ ಅಥವಾ ಉದ್ಯೀಗ ಮಾಡಲು ಹೋಗಿದ್ದಲ್ಲ,” ಎಂದು ಹೇಳುತ್ತಾರೆ. ಜನಸಮೂಹ ನಡೆಸಿದ ಈ ಕಲ್ಲು ತೂರಾಟ ಮತ್ತು ಗುಂಪುಗೂಡುವಿಕೆಯು ‘ಪ್ರಚೋದಿತ’ ಕೃತ್ಯವಾಗಿ ಕಂಡುಬಂದಿದೆ ಎಂದು ಪೊಲೀಸರು ಹೇಳುತ್ತಾರೆ.

ಸ್ಥಳೀಯ ಸಂಸದ ಮತ್ತು ಶಾಸಕನ ಪುತ್ರನ ವಿರುದ್ಧದ ಎಫ್‌ಐಆರ್‌ ದಾಖಲಾಗಿದೆ. ಮುಸಲ್ಮಾನರ ಮೇಲೆ ಪೊಲೀಸರು ಹೇಳುತ್ತಿರುವ ಮಾತುಗಳನ್ನು ಸಾಬೀತು ಮಾಡಲು- ಸಮೀಕ್ಷಾ ತಂಡವು ಮಸೀದಿಯನ್ನು ತಲುಪಿದ ನಂತರ ನೆರೆದಿದ್ದ ಮುಸ್ಲಿಮರು ಹಿಂಸಾಚಾರಕ್ಕೆ ಸಂಚುಕೋರರಿಂದ ಸನ್ನದ್ಧರಾಗಿದ್ದರು ಮತ್ತು ಪ್ರಚೋದಿತರಾಗಿದ್ದರು ಎಂದು ಹೇಳುತ್ತಿದ್ದಾರೆ.  ಮಸೀದಿ ಬಳಿ ಹಿಂಸಾಚಾರ ನಡೆಸಲು ಸ್ವಯಂಪ್ರೇರಿತವಾಗಿ ಜನರು ಬರುತ್ತಾರೆ ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಇವರು ಜೈಶ್ರೀರಾಮ್‌ ಘೋಷಣೆಯ ಕೂಗುವುದನ್ನು ಕೇಳಿ ಆಕ್ರೋಶಿತರಾಗಿದ್ದರು ಎಂದು ಪೊಲೀಸರು ಹೇಳುತ್ತಾರೆ.

ಅಂದರೆ, ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಗಲಭೆ ಎಬ್ಬಿಸಲು ಪ್ರಚೋದನೆ ಮಾಡಿದ್ದು ಮುಸಲ್ಮಾನರೇ?

ನ್ಯಾಯಾಲಯದಿಂದ ನೇಮಿಸಲ್ಪಟ್ಟ ವ್ಯಕ್ತಿಯೊಂದಿಗೆ ಜನಸಂದಣಿಯನ್ನು ಮಸೀದಿಗೆ ಬರದಂತೆ ತಡೆಯುವುದು ಮತ್ತು ಪ್ರಚೋದನಕಾರಿ ಘೋಷಣೆಗಳನ್ನು ನಿಲ್ಲಿಸುವುದು ಆಡಳಿತ ಮತ್ತು ಪೊಲೀಸರ ಕರ್ತವ್ಯವಲ್ಲವೇ? ಸರ್ವೆ ಮುಗಿಸಿ ಅಧಿಕಾರಿಗಳು ತೆರಳುವಾಗ ಜೈ ಶ್ರೀರಾಮ್ ಘೋಷಣೆಗಳು ಕೇಳಿ ಬಂದವು. ಸಮೀಕ್ಷೆ ಆಗಬೇಕಿದ್ದರೆ ಅಲ್ಲಿ ಜನಜಂಗುಳಿ ಏಕೆ ಬೇಕು? ‘ಜೈ ಶ್ರೀರಾಮ್’ ಘೋಷಣೆಗಳು ಹೇಗೆ ಬಂದವು? ಈ ರೀತಿ ಪ್ರಚೋದನೆ ನೀಡಲು ಅಧಿಕಾರಿಗಳು ಹೇಗೆ ಬಿಟ್ಟರು?

ಈ ಇಡೀ ಕೇಸ್‌ ನ್ಯಾಯಾಲಯಕ್ಕೆ ಸಂಬಂಧಿಸಿದ್ದು. ಒಂದು ನಿರ್ದಿಷ್ಟ ದೇವಾಲಯವು ಮೊದಲು ಮಸೀದಿಯಾಗಿತ್ತು ಎಂದು ಮುಸ್ಲಿಂ ಫಿರ್ಯಾದಿ ಕೋರ್ಟ್‌ಗೆ ಹೋಗುವ ಸನ್ನಿವೇಶವನ್ನು ಊಹಿಸಿ ಅಥವಾ ಬೌದ್ಧರು ನಿರ್ದಿಷ್ಟ ದೇವಾಲಯವು ಮೊದಲು ಬೌದ್ಧ ದೇವಾಲಯವಾಗಿತ್ತು ಎಂದು ಪ್ರತಿಪಾದಿಸಿ ಕೋರ್ಟ್‌ನ ಸಹಾಯ ಕೇಳುವ ಸನ್ನಿವೇಶವನ್ನು ಯೋಚಿಸಿ. ಈ ಅರ್ಜಿಗಳಿಗೆ ಆದ್ಯತೆ ನೀಡಿ ನ್ಯಾಯಾಲಯ ಪರಿಗಣಿಸುತ್ತದೆಯೇ? ದೇವಾಲಯ ಬರುವ ಮೊದಲು ಅಲ್ಲಿ ಬೌದ್ಧ ಚೈತ್ಯ ಅಥವಾ ಸ್ತೂಫ ಇತ್ತೇ ಎಂಬುದನ್ನು ಪತ್ತೆ ಮಾಡಲು ಸಮೀಕ್ಷೆಗೆ ಕೋರ್ಟ್‌ ಅನುಮತಿ ನೀಡುತ್ತದೆಯೇ? ಎಲ್ಲರಿಗೂ ಉತ್ತರ ಗೊತ್ತೇ ಇದೆ. ಒಂದೋ ಆ ಅರ್ಜಿಗಳು ವಜಾ ಆಗುತ್ತವೆ, ಇಲ್ಲವೇ ಅರ್ಜಿ ಹಾಕಿದವನಿಗೆ ದಂಡ ವಿಧಿಸುತ್ತಾರೆ.

ಸಂಭಾಲ್‌ನಲ್ಲಿ ಮಾಡಿದ ರೀತಿಯಲ್ಲಿಯೇ ನ್ಯಾಯಾಲಯಗಳು ಇಂತಹ ಪ್ರಕರಣಗಳಲ್ಲಿ ಸಮೀಕ್ಷೆಗಳನ್ನು ನಡೆಸಲು ಬಿಡುತ್ತವೆಯೇ ಎಂದು ನಾವು ಕೇಳಬೇಕಾಗಿದೆ. ಅರ್ಜಿ ಸಲ್ಲಿಕೆಯಾದ ತಕ್ಷಣ ಕ್ರಮಕ್ಕೆ ಆದೇಶ ನೀಡುವಷ್ಟು ನಮ್ಮ ನ್ಯಾಯಾಲಯಗಳು ಯಾವಾಗಿನಿಂದ ದಕ್ಷವಾಗಿ ಕೆಲಸ ಮಾಡಲು ಆರಂಭ ಮಾಡಿದವು? ಈ ಆದೇಶವನ್ನು ತಕ್ಷಣವೇ ಕಾರ್ಯಗತಗೊಳಿಸಲು ತನ್ನ ಎಲ್ಲಾ ಸಂಪನ್ಮೂಲಗಳನ್ನು ನೀಡುವ ಆಡಳಿತ ವ್ಯವಸ್ಥೆ ಇಷ್ಟು ಚುರುಕಾಗಿದ್ದು ಯಾವಾಗ?

ಸಂಭಾಲ್‌ನಲ್ಲಿ ನಡೆದಿರುವುದು ಇದೇ.

ಮಸೀದಿಯ ಮೊದಲು ದೇವಸ್ಥಾನವಿತ್ತು ಎಂಬುದಾಗಿ ಅದರ ಸ್ವರೂಪವನ್ನು ಖಚಿತಪಡಿಸಿಕೊಳ್ಳಲು ಅರ್ಜಿಯನ್ನು ಸಲ್ಲಿಸಲಾಯಿತು. ನ್ಯಾಯಾಧೀಶರು ತಕ್ಷಣವೇ ಆಡಳಿತ ಮತ್ತು ಮಸೀದಿ ಸಮಿತಿಗೆ ನೋಟಿಸ್ ಜಾರಿ ಮಾಡದೆ, ಸಮೀಕ್ಷೆಗೆ ಆದೇಶಿಸಿದರು ಮತ್ತು ಇದಕ್ಕಾಗಿ ಒಬ್ಬ ವ್ಯಕ್ತಿಯನ್ನು ನೇಮಿಸಿದರು. ಆದೇಶ ಬಂದ ಕೆಲವೇ ಗಂಟೆಗಳಲ್ಲಿ ಸ್ಥಳೀಯ ಆಡಳಿತವು ಸರ್ವೆಗೆ ಬೇಕಾದ ವ್ಯವಸ್ಥೆ ನೀಡಿತು. ಇದು ಸ್ಥಳೀಯ ಮುಸ್ಲಿಂ ಜನರಲ್ಲಿ ಅಸಮಾಧಾನ ಮೂಡಿಸಿತು.

ಆದರೆ ಅದಾದ ಎರಡು ದಿನಗಳ ನಂತರ ಯಾವುದೇ ಪೂರ್ವ ಮಾಹಿತಿ ಇಲ್ಲದೆ ತಂಡ ಮತ್ತೆ ದೇವಸ್ಥಾನಕ್ಕೆ ಬಂತು. ಆಡಳಿತವು ಜನರ ಗುಂಪಿನ ಜೊತೆಗೂಡಿ ಮಸೀದಿಯನ್ನು ಪ್ರವೇಶಿಸಲು ಅವಕಾಶ ಮಾಡಿಕೊಟ್ಟಿತು. ಸಮೀಕ್ಷೆ ನಡೆಸಲು ಬಂದಿದ್ದ ತಂಡದ ಜೊತೆಗಿದ್ದ ಕೆಲವರು ಹೊರಹೋಗುವಾಗ ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದರು. ಇದು ಸ್ಥಳೀಯ ಮುಸ್ಲಿಮರನ್ನು ಕೆರಳಿಸಿತು. ಅವರು ಕಲ್ಲುಗಳನ್ನು ಎಸೆದರು. ಧರಣಿ ನಿರತ ಜನರ ಮೇಲೆ ನೇರವಾಗಿ ಗುಂಡು ಹಾರಿಸುತ್ತಿರುವುದನ್ನು ಪೊಲೀಸರು ವಿಡಿಯೋದಲ್ಲಿ ಸೆರೆ ಹಿಡಿದಿದ್ದಾರೆ. ನಾಲ್ವರು ಕೊಲ್ಲಲ್ಪಟ್ಟರು.

ಈಗ ಪೊಲೀಸರು ಈ ಹತ್ಯೆಯ ಹೊಣೆಯನ್ನು ಹೊತ್ತುಕೊಳ್ಳಲು ನಿರಾಕರಿಸುತ್ತಿದ್ದಾರೆ. ಈ ಹತ್ಯೆಗಳಿಗೆ ಮುಸ್ಲಿಮರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಇಡೀ ಪ್ರತಿಭಟನೆಯನ್ನು ಪಿತೂರಿ ಎಂದು ಕರೆದರು. ಮುಸ್ಲಿಂ ಮುಖಂಡರ ಮೇಲೆ ಕೇಸು ಹಾಕಿದರು.

ಮುಸ್ಲಿಮರು ಸದ್ಯ ಸರ್ಕಾರ ತಮ್ಮ ವಿರುದ್ಧವಾಗಿದೆ ಎಂದು ನಂಬಿದ್ದಾರೆ. ನ್ಯಾಯಾಂಗವೂ ಅವರನ್ನು ಮೂಲೆಗೆ ತಳ್ಳುವ ಪ್ರಕ್ರಿಯೆಗಳನ್ನು ತಣ್ಣಗಾಗಿಸುತ್ತಿದೆ. ಎಲ್ಲವನ್ನೂ ಕಾನೂನುಬದ್ಧವಾಗಿ ಮಾಡಲಾಗುತ್ತಿದೆ. ಮುಸ್ಲಿಮರು ಪ್ರತಿಭಟಿಸಲು ಸಾಧ್ಯವಿಲ್ಲ, ಮಾಡಿದರೆ ಅವರು ದೇಶದ ಕಾನೂನನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸುತ್ತಾರೆ.

ಈ ನೆಲದ ಕಾನೂನಿಗೆ ಏನಾಯಿತು?- 1991 ರ ಪೂಜಾ ಸ್ಥಳಗಳ ಕಾಯಿದೆಗೆ ಏನಾಯಿತು? ಈ ಪ್ರಶ್ನೆಯನ್ನು ಬದಿಗಿಟ್ಟು ಒಂದು ರಚನೆಯ ಬಗ್ಗೆ ತಮ್ಮ ಕುತೂಹಲವನ್ನು ತಣಸಿಕೊಳ್ಳಲು ಹಿಂದೂಗಳಿಗೆ ಎಲ್ಲ ಹಕ್ಕಿದೆ ಎಂದು ಹೇಳಿದ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮಾತುಗಳನ್ನು ನೆನಪು ಮಾಡಿಕೊಳ್ಳಬೇಕು. ಇದರ ಅರ್ಥ, ಒಬ್ಬ ಹಿಂದು ತಾನು ಕಂಡ ಮಸೀದಿಯ ಅಡಿಯಲ್ಲಿ ದೇವಾಲಯ ಇದ್ಯಾ ಎನ್ನುವುದನ್ನು ತಿಳಿದುಕೊಳ್ಳುವ ಹಕ್ಕನ್ನು ಹೊಂದಿದ್ದಾನೆ, ಕಂಡ ಕಂಡ ಅನ್ಯರ ಧಾರ್ಮಿಕ ಕೇಂದ್ರಗಳಿಗೆ ಕನ್ನ ಹಾಕಬಹುದು ಎಂದೆ? ಇದಾದ ನಂತರ, ಹಿಂದುತ್ವದವರು ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಭಾರತದಾದ್ಯಂತ ಮಸೀದಿಗಳು, ದರ್ಗಾಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಬಗ್ಗೆ ಕುತೂಹಲವನ್ನು ಬೆಳೆಸಲು ಪ್ರಾರಂಭಿಸಿದರು. ಚಂದ್ರಚೂಡ್ ತೋರಿದ ಉದಾಸೀನವನ್ನು, ನಿರಾಳತೆಯನ್ನು ಈಗ ಎಲ್ಲ ಪ್ರಾಥಮಿಕ ನ್ಯಾಯಾಲಯಗಳು ತೋರಿಸುತ್ತಿವೆ. ಮುಸ್ಲಿಮರು ಪ್ರತಿಭಟಿಸಲು ಮತ್ತು ವಿರೋಧಿಸಲು ಹೋದರೆ ಬಲಿಕೊಡಬೇಕಾಗಿ ಬರುವುದು ಅರ ಜೀವವನ್ನು ಮಾತ್ರ.

ಲೇಖನ: ಚರಣ್‌ ಐವರ್ನಾಡು