sarvodhaya samavesha – Peepal Media

ʼಖರ್ಗೆʼಯವರಿಗೆ ದ್ವೇಷದ,ಶ್ರೀಮಂತರ ಪರವಾದ ರಾಜಕಾರಣ ಮಾಡುವುದು ಗೊತ್ತಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಎಐಸಿಸಿ ಆಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆಯವರಿಗೆ, ಬಡವರ ಪರವಾದ, ಬುದ್ಧ, ಬಸವ, ಅಂಬೇಡ್ಕರ್ ಅವರ ಸಿದ್ದಾಂತಗಳಿಗೆ ಬದ್ಧರಾಗಿ, ಯಾವ ರಾಜಿಯಿಲ್ಲದೆ ರಾಜಕಾರಣ ಮಾಡಿಕೊಂಡು ಬಂದಿರುವುದು ಅಭ್ಯಾಸವೇ ಹೊರತು, ದ್ವೇಶದ, ಶ್ರೀಮಂತರ ಪರವಾದ ರಾಜಕಾರಣ ಮಾಡುವುದು ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಭಾನುವಾರ ನಡೆದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಬ್ಬದ ವಾತಾವರಣದಲ್ಲಿ ಸ್ವಾಗತಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಈ ಸ್ಥಾನವನ್ನು ಅಲಂಕರಿಸಿರುವುದು ಕರ್ನಾಟಕದ ಏಳು ಕೋಟಿ ಕನ್ನಡಿಗರಲ್ಲಿ ಹೆಮ್ಮೆ ಮೂಡಿಸಿದೆ ಎಂದು ಹೇಳಿದರು.

ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿದಾಗಲೇ ತಮಗೆ ಸಂತೋಷವಾಗುವುದು ಎಂದು ಖರ್ಗೆ ಹೇಳಿದ್ದಾರೆ. ನನ್ನ ಪ್ರಕಾರ ಬಿಜೆಪಿಯ ಭ್ರಷ್ಟ, ದುರಾಡಳಿತದ ಸರ್ಕಾರವನ್ನು ಕಿತ್ತುಹಾಕಬೇಕು ಎಂದು ರಾಜ್ಯದ ಜನ ಸಂಕಲ್ಪ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ, ರಾಜ್ಯದ ಜನ ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಹಿರಿಯ ನಾಯಕರಾದ ಖರ್ಗೆ ಅವರು ರಾಜ್ಯದಲ್ಲಿ ಸುದೀರ್ಘ ಕಾಲ ರಾಜಕಾರಣ ಮಾಡಿದವರು, ಶಾಸಕರಾಗಿ, ಸಚಿವರಾಗಿ, ವಿರೋಧಪಕ್ಷದ ನಾಯಕರಾಗಿ ಕೆಲಸ‌ ಮಾಡಿದ್ದಾರೆ. ಆಡಳಿತದ ಅನುಭವ ಉಳ್ಳವರು. ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ ಸಾಧನೆಯ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ಹೀಗಾಗಿ ಅವರಿಗೆ ದ್ವೇಷದ, ಶ್ರೀಮಂತರ ಪರವಾದ ರಾಜಕಾರಣ ಮಾಡುವುದು ಗೊತ್ತಿಲ್ಲ ಎಂದರು.

ಖರ್ಗೆ ಅವರು ಒಬ್ಬ ಸ್ವಾಭಿಮಾನಿ ರಾಜಕಾರಣಿಯಾಗಿ ಹೆಸರು ಮಾಡಿದವರು. ನಾನು ಕಂಡಂತೆ ಮಲ್ಲಿಕಾರ್ಜುನ ಖರ್ಗೆಯವರು ಸಮಚಿತ್ತವಿರುವ, ಮೌಢ್ಯವಿರೋಧಿ, ಪ್ರಗತಿಪರ ರಾಜಕಾರಣಿ. ಲೋಕಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ, ಆ ಸದನಗಳಲ್ಲಿ ವಿರೋಧಪಕ್ಷದ ನಾಯಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಅವರಿಗೆ ಅರ್ಹತೆ ಮತ್ತು ಸಾಧನೆಯ ಬಲದಿಂದಲೇ ಎಐಸಿಸಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ ಎಂದು ತಿಳಿಸಿದರು.

ಖರ್ಗೆ ಅವರು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿರುವುದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ತಂದುಕೊಟ್ಟಿದೆ. 2023ರಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸ್ಪೂರ್ತಿ ನೀಡಿದೆ. ನಮ್ಮ ಪಕ್ಷದಲ್ಲಿ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ ಬಗ್ಗೆ ಖರ್ಗೆಯವರು ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ. ನಮ್ಮ ಪಕ್ಷದ ನಾಯಕರಿಂದ ಕಾರ್ಯಕರ್ತರ ವರೆಗೆ ಎಲ್ಲರೂ ಇದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ವಂಶಪಾರಂಪರ್ಯ ಇದೆ, ನೆಹರೂ ಕುಟುಂಬ ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂದು ಬಿಜೆಪಿ ಟೀಕಿಸುತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ಅಧ್ಯಕ್ಷರಾಗಿ ಆ ಟೀಕೆಗಳಿಗೆ ಸರಿಯಾದ ಉತ್ತರ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬುದು ಸಾಬೀತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿಯವರಂತೆ ಮಿಸ್ ಕಾಲ್ ಕೊಟ್ಟು ಸದಸ್ಯರನ್ನು ನೇಮಕ ಮಾಡಿಲ್ಲ: ಬಿ.ಕೆ ಹರಿಪ್ರಸಾದ್
ಬೆಂಗಳೂರು : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಭಾಗವಹಿಸಿದ್ದು, ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್‌, ʼಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರುವ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇಡೀ ರಾಷ್ಟ್ರದಲ್ಲಿನ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಕಾಂಗ್ರೆಸ್ ಪಕ್ಷದ ಒಬ್ಬ ನಿಷ್ಠಾವಂತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ನಮ್ಮ ಪುಣ್ಯ. ಇದೊಂದು ಪವಿತ್ರವಾದ ಪಕ್ಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿರುವ ಪಕ್ಷವಾಗಿದೆʼ ಎಂದು ಹೇಳಿದರು.

ʼಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗುವ ಮುನ್ನ ಬಿಜೆಪಿ ಅವರು ಕಾಂಗ್ರೆಸ್ ನಲ್ಲಿ ಪ್ರಜಾಪ್ರಭುತ್ವ ಇಲ್ಲ ಎಂದು ಆರೋಪ ಮಾಡುತ್ತಿತ್ತು. ಪ್ರಪಂಚದಲ್ಲಿ ಅತ್ಯಂತ ಹಳೆಯ ಹಾಗೂ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ನಾವು ಬಿಜೆಪಿಯವರಂತೆ ಮಿಸ್ ಕಾಲ್ ಕೊಟ್ಟು ಸದಸ್ಯರನ್ನು ನೇಮಕ ಮಾಡಿಲ್ಲʼ ಎಂದು ಬಿಜೆಪಿಯನ್ನು ಟೀಕಿಸಿದರು.

ʼಇದುವರೆಗೂ ಪಾರ್ಸಿ, ಮುಸಲ್ಮಾನರು, ಕ್ರೈಸ್ತರು, ಮಹಿಳೆಯರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಬಿಜೆಪಿ ಅವರು ಚುನಾವಣೆ ಮಾಡಿದ್ದೀರಾ? ನಮ್ಮಲ್ಲಿ ಎಲ್ಲಾ ಜಾತಿ ಧರ್ಮದವರನ್ನು ಅಧ್ಯಕ್ಷರನ್ನಾಗಿ ಮಾಡಿದೆ. ಆದರೆ ಆರ್ ಎಸ್ ಎಸ್ ಕೇವಲ ಒಂದು ಜಾತಿಗೆ ಸೇರಿದ ಸಂಘಟನೆ ಆಗಿದೆ. ಹೀಗಾಗಿ ಬಿಜೆಪಿ, ಕಾಕಿ ಚಡ್ಡಿ ಹಾಗೂ ಕರಿ ಟೋಪಿ ಅವರಿಂದ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ನಾವು ಕಲಿಯುವ ಅಗತ್ಯವಿಲ್ಲʼ ಎಂದು ಮಾತನಾಡಿದರು.

ʼಈ ಸಂದರ್ಭದಲ್ಲಿ ಖರ್ಗೆ ಅವರ ಮುಂದೆ ಈ ತ್ರಿವರ್ಣ ಧ್ವಜ ಮರ್ಯಾದೆ ಕಾಪಾಡುವ ಜವಾಬ್ದಾರಿ ಇದೆ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸುವ ಸವಾಲು ಇದೆ. ಈ ಹೋರಾಟದಲ್ಲಿ ನಾವೆಲ್ಲರೂ ನಿಮ್ಮ ಜತೆಯಾಗಿ ಹೆಜ್ಜೆ ಹಾಕುತ್ತೇವೆʼ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಖರ್ಗೆಯವರಿಗೆ ಭರವಸೆ ನೀಡಿದರು.