sathish jarakiholi – Peepal Media

ಚಿತ್ರದುರ್ಗ SC,ST ಸಮಾವೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ: ಸತೀಶ್‌ ಜಾರಕಿಹೊಳಿ
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’ವನ್ನು ಜನವರಿ 8 ರಂದು ಚಿತ್ರದುರ್ಗದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಸಮಾವೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಈ ಕುರಿತು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ʼಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ʼಐಕ್ಯತಾʼ ಸಮಾವೇಶʼವನ್ನು 2023 ಜನವರಿ 8 ರಂದು ಮಾಡುವಂತಹ ನಿರ್ಧಾರವನ್ನು ಕಾಂಗ್ರೆಸ್‌ ಪಕ್ಷದ ನಾಯಕರು ಮತ್ತು ಮುಖಂಡರು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಐತಿಹಾಸಿಕ ಸಮಾವೇಶವನ್ನು ಪಕ್ಷದಿಂದ ಮಾಡಬೇಕೆಂದು ಬಹುದಿನಗಳಿಂದ ಚಿಂತನೆ ನಡೆಸಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ಎಲ್ಲಾರ ಚರ್ಚೆಯ ಮುಖಾಂತರ ಸಮಾವೇಶದ ದಿನಾಂಕವನ್ನು ನಿರ್ಧರಿಸಿದ್ದೇವೆ ಎಂದಿದ್ದಾರೆ.

ನಾವು ಎಲ್ಲ ಸಮುದಾಯಗಳು ಒಂದಾಗಬೇಕು, ಒಂದೇ ವೇದಿಕೆಯಲ್ಲಿ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕೆಂದು ನಾವು ತೀರ್ಮಾನಿಸಿದ್ದೇವೆ. ಈ ಹಿನ್ನೆಲೆಯಲ್ಲಿ ನಮಗೆ ಸಿಗಬೇಕಾದಂತಹ ಸಿದ್ದರಾಮಯ್ಯ ಸರ್ಕಾರದ ಯೋಜನೆಗಳು ಮತ್ತೆ ಜಾರಿಯಾಗಬೇಕು ಎಂದರು.

ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ: ಬೊಮ್ಮಾಯಿ
ಬೆಳಗಾವಿ: ಶಾಸಕ ಸತೀಶ್‌ ಜಾರಕಿಹೊಳಿ ನೀಡಿರುವ ಹೇಳಿಕೆ ಕುರಿತು ಕಾಂಗ್ರೆಸ್ಸಿಗೆ ಸ್ಪಷ್ಟವಾದ ನಿಲುವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಇಂದು ರಾಯಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಂದೆಡೆ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆ ಹಿಂಪಡೆಯುವುದಿಲ್ಲ ಎಂದಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್ ಇದನ್ನು ಒಪ್ಪುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇನ್ನೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ ನುಣುಚಿ ಕೊಳ್ಳುತ್ತಿದ್ದು, ಯಾಕಿಷ್ಟು ಅಸ್ಪಷ್ಟತೆ ಕಾಂಗ್ರೆಸ್ ನಲ್ಲಿ ಇದೆ ಎಂದು ತಿಳಿದಿಲ್ಲ ಎಂದು ಅವರು ತಿಳಿಸಿದರು.

ಸತೀಶ್ ಜಾರಕಿಹೊಳಿ ಒಪ್ಪಿಲ್ಲ ಎಂದರೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಒಪ್ಪಿದ್ದೇವೆ ಎನ್ನಬೇಕು. ರಾಜ್ಯದಲ್ಲಿ ಬಹುಸಂಖ್ಯಾತ ಹಿಂದೂಗಳಿದ್ದಾರೆ, ಪರಿಶಿಷ್ಟರಿದ್ದಾರೆ ಅವರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ನೂರು ವರ್ಷಗಳ ಹಳೆ ಪಕ್ಷ ನಡೆದುಕೊಳ್ಳುತ್ತಿದೆ. ಅಂದರೆ ಭಾರತವನ್ನು ಗೊಂದಲದಲ್ಲಿಟ್ಟು ಆಳಬೇಕೆನ್ನುವ ಮೂಲ ಸಿದ್ಧಾಂತ ವಿದೆ. ರಾಹುಲ್ ಗಾಂಧಿ ಸುಮ್ಮನಿದ್ದಾರೆ. ಅವರು ಒಂದೆಡೆ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ, ಇನ್ನೊಂದೆಡೆ ಈ ರೀತಿಯ ಹೇಳಿಕೆಗಳು ಬಂದಾಗ ಪರೋಕ್ಷವಾಗಿ ಬೆಂಬಲ ನೀಡುತ್ತಾರೆ. ಈ ದ್ವಂದ್ವ ನೀತಿ ಕಾಂಗ್ರೆಸ್ ಗೆ ಒಳ್ಳೆಯದಲ್ಲ ಎಂದರು.

ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು

ಹೇಳಿಕೆ ತಪ್ಪು ಎಂದು ಸಾಬೀತಾದರೆ ರಾಜೀನಾಮೆ ನೀಡುವುದಾಗಿ ಸತೀಶ್ ಜಾರಕಿಹೊಳಿ ಹೇಳಿರುವ ಬಗ್ಗೆ ಉತ್ತರಿಸಿ, ಯಾವ ಪುರಾವೆಯ ಆಧಾರದ ಮೇಲೆ ಅವರು ಹೇಳಿದ್ದಾರೆ ಎಂದು ಬಹಿರಂಗಪಡಿಸಲಿ. ಅವರ ಹೇಳಿಕೆ ಯಾವುದನ್ನು ಆಧಾರಿಸಿದ್ದು ಎನ್ನುವುದೇ ಸಾಕ್ಷಿಯಾಗುತ್ತದೆ. ಅಂತರ್ಜಾಲದಲ್ಲಿ ಹತ್ತು ಹಲವಾರು ವಿಚಾರಗಳಿರುತ್ತವೆ.  ಎಲ್ಲಾ ವಿಚಾರಗಳಲ್ಲಿ ಪರ, ವಿರೋಧ ಇದ್ದೇ ಇರುತ್ತದೆ. ಆದರೆ ನಾವು ಯಾವುದನ್ನು ತೆಗೆದುಕೊಳ್ಳಬೇಕು ಎಂದು ವಿಚಾರ ಮಾಡಬೇಕು.  ಸಾರ್ವಜನಿಕ ಜೀವನದಲ್ಲಿ ಯಾರ ಭಾವನೆಗಳಿಗೂ ಧಕ್ಕೆ ತರಬಾರದು ಎಂಬ ಅರಿವಿನಿಂದ ನಡೆದುಕೊಳ್ಳಬೇಕು ಎಂದರು.

ಮುಂದೆ ಅನುಭವಿಸುತ್ತಾರೆ

ಚರ್ಚೆ ಮಾಡಲು ವಸ್ತುವಿಲ್ಲ. ಅವರ ಹೇಳಿಕೆ ಅತ್ಯಂತ ಅಸಂಗತ್ಯವಾಗಿದೆ. ಮಾಧ್ಯಮ ಗಳಲ್ಲಿ ಅದು ತಪ್ಪು ಎಂದು ಹೇಳಿದ್ದಾರೆ. ಒಪ್ಪಲು ತಯಾರಿಲ್ಲದಿದ್ದರೆ ಮುಂದೆ ಅನುಭವಿಸುತ್ತಾರೆ ಎಂದರು.

ಕಾಂಗ್ರೆಸ್‌ನಂತೆ ಬಿಜೆಪಿ ಪಕ್ಷವು ಎಂದಿಗೂ ಓಲೈಕೆ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್‌
ದೇವನಹಳ್ಳಿ: ಬಿಜೆಪಿ ಎಂದಿಗೂ ಜಾತಿ, ಲಿಂಗ, ಧರ್ಮ ಆಧಾರಿತವಾದ ರಾಜಕಾರಣ ಮಾಡಿಲ್ಲ ಅಥವಾ ಅದರ ಆಧಾರಿತವಾಗಿ ಯೋಜನೆ ರೂಪಿಸಿಲ್ಲ. ಆದರೆ ಕಾಂಗ್ರೆಸ್‌ ನಾಯಕರು 60 ವರ್ಷಗಳಿಂದ ಓಲೈಕೆ ರಾಜಕಾರಣವನ್ನೇ ಮಾಡಿಕೊಂಡು ಬಂದಿದ್ದು, ಈಗ ಬಿಜೆಪಿಯ ಅಭಿವೃದ್ಧಿ ಕಾರ್ಯಗಳಿಂದ ನಿರಾಶರಾಗಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ದೇವನಹಳ್ಳಿಯ ಸಮೀಪದ ನಾಡಪ್ರಭು ಕೆಂಪೇಗೌಡರ ಕಂಚಿನ ʼಪ್ರಗತಿಯ ಪ್ರತಿಮೆʼ ಹಾಗೂ ಉದ್ಘಾಟನಾ ಕಾರ್ಯಕ್ರಮದ ಸಿದ್ಧತೆಯನ್ನು ಸಚಿವರು ಪರಿಶೀಲನೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟನೆ, ವಿಮಾನ ನಿಲ್ದಾಣದ ಟರ್ಮಿನಲ್‌-2, ವಂದೇ ಭಾರತ್‌ ರೈಲು ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಮುನ್ನ ಸ್ಥಳ ಪರಿಶೀಲನೆ ಮಾಡಿ, ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸರ್ವ ವ್ಯಾಪಿ, ಸರ್ವ ಸ್ಪರ್ಶಿ, ಸರ್ವರ ಕಲ್ಯಾಣ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಮಂತ್ರ. ಬಿಜೆಪಿ ಎಂದಿಗೂ ಯಾವುದೇ ಸಮುದಾಯ, ಜಾತಿ, ಧರ್ಮ, ಲಿಂಗದ ಆಧಾರಿತವಾಗಿ ಯೋಜನೆಗಳನ್ನು ರೂಪಿಸಲು ಮುಂದಾಗುವುದಿಲ್ಲ. ಕಾಂಗ್ರೆಸ್‌ ಪಕ್ಷ ಹಿಂದಿನಿಂದಲೂ ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿದೆ. ಈಗಲೂ ಅದನ್ನೇ ಮುಂದುವರಿಸುತ್ತಿದೆ. ಹೀಗಾಗಿ ಶ್ರೇಷ್ಠವಾದ ರಾಜಕಾರಣವನ್ನು ಅವರು ಎಂದೂ ಮಾಡಿಲ್ಲ ಎಂದರು.

ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಬಿಜೆಪಿ ಸರ್ಕಾರ ನೀಡಿರುವ ಮೀಸಲಾತಿಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಇಂತಹ ಕ್ರಮವನ್ನು ತರಲು ಬಿಜೆಪಿಗೆ ಮಾತ್ರ ಸಾಧ್ಯವಾಗುತ್ತದೆ. ಇಂತಹ ಆಲೋಚನೆಗಳು ಕಾಂಗ್ರೆಸ್‌ ಅಥವಾ ಜೆಡಿಎಸ್‌ ಬರಲು ಸಾಧ್ಯವಿಲ್ಲ ಎಂದರು.

ನಾಡಪ್ರಭು ಕೆಂಪೇಗೌಡರು ಒಕ್ಕಲಿಗ ಸಮುದಾಯಕ್ಕೆ ಸೇರಿದ್ದರೂ, ಅವರು ಎಲ್ಲರ ನಾಯಕರು. ಆದರೆ ಒಕ್ಕಲಿಗ ಸಮುದಾಯಕ್ಕೆ ಕಾಂಗ್ರೆಸ್‌ನವರು ಏನೂ ಮಾಡಿಲ್ಲ. ಜನಪ್ರಿಯ ನಾಯಕರಾದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಸೇರಿದಂತೆ ಹಿರಿಯ ಒಕ್ಕಲಿಗ ನಾಯಕರನ್ನು ಕಾಂಗ್ರೆಸ್‌ ಅಪಮಾನ ಮಾಡಿದೆ. ಅವರನ್ನು ಅಧಿಕಾರದಿಂದ ಒಂದೇ ಬಾರಿಗೆ ತೆಗೆದುಹಾಕಲು ಇದುವರೆಗೂ ಕಾರಣ ನೀಡಿಲ್ಲ ಎಂದರು.

ನಾಡಪ್ರಭು ಕೆಂಪೇಗೌಡರ ʼಪ್ರಗತಿಯ ಪ್ರತಿಮೆʼ ನಿರ್ಮಾಣದ ಚಿಂತನೆಯನ್ನು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಚರ್ಚೆಗೆ ತಂದಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಇಂತಹ ಸುಂದರ ಐತಿಹಾಸಿಕ ಪ್ರತಿಮೆ ನಿರ್ಮಾಣವಾಗಿದೆ ಎಂದರು.

ಕಾಂಗ್ರೆಸ್‌ನವರ ರಾಜಕೀಯ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬಾರದು. ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಕಾಂಗ್ರೆಸ್‌ನವರಿಗೂ ಸ್ವಾಗತ ನೀಡುತ್ತೇವೆ ಎಂದು ನಾವು ಕೂಡ ಹೇಳುತ್ತೇವೆ. ಕಾಂಗ್ರೆಸ್‌ನವರು ಲೋಕಾರೂಢಿಯಾಗಿ ಹೇಳಿದ್ದಾರೆ. ಅನ್ಯಪಕ್ಷಗಳಿಂದ ಬಂದವರ ಜೊತೆಗೆ ಬಿಜೆಪಿಗೆ ಇನ್ನಷ್ಟು ನಾಯಕರು ಸೇರ್ಪಡೆಯಾಗುತ್ತಾರೆಯೇ ಹೊರತು, ಮೈನಸ್‌ ಆಗುವುದಿಲ್ಲ. ಹಿರಿಯ ಐಎಎಸ್‌ ಅಧಿಕಾರಿ,  ಇಬ್ಬರು ಮಾಜಿ ಸಂಸದರು, ಕೋಲಾರ ಜಿಲ್ಲೆಯ ಇಬ್ಬರು ಮಾಜಿ ಶಾಸಕರು, ಚಿಕ್ಕಬಳ್ಳಾಪುರದಲ್ಲಿ ಒಬ್ಬ ಮಾಜಿ ಶಾಸಕರು ಬಿಜೆಪಿಗೆ ಬಂದಿದ್ದಾರೆ ಎಂದರು.

ಸತೀಶ್‌ ಜಾರಕಿಹೊಳಿ ಅರಿವು ಮೂಡಿಸಿಕೊಳ್ಳಲಿ

ಸತೀಶ್‌ ಜಾರಕಿಹೊಳಿ ಅವರು ಇತಿಹಾಸದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಪ್ರದರ್ಶನ ಮಾಡಿದ್ದಾರೆ. ಹಿಂದೂ ಪದದ ಬಗ್ಗೆ, ಹಿಂದುತ್ವದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಅವರು ಪರಿಚಯ ಮಾಡಿಕೊಂಡು, ಅರಿವು ಮೂಡಿಸಿಕೊಳ್ಳುವ ಕೆಲಸ ಮಾಡಬೇಕಾಗುತ್ತದೆ. ಇಡೀ ವಿಶ್ವದಲ್ಲಿ ಹಿಂದೂ ಧರ್ಮದ ಬಗ್ಗೆ ವಿಶೇಷ ಗೌರವ ಇದೆ. ಸನಾತನ ಹಿಂದೂ ಧರ್ಮ ಒಂದು ಜೀವನಶೈಲಿ. ಇದು ಅತಿ ಉನ್ನತ ಆದರ್ಶವಾಗಿದೆ ಎಂದು ಸುಧಾಕರ್‌ ಹೇಳಿದರು.

ವಾಲ್ಮೀಕಿ ಜಯಂತಿ ಆಚರಿಸುವುದಕ್ಕೆ ಸರ್ಕಾರಕ್ಕೆ ನೈತಿಕ ಹಕ್ಕಿಲ್ಲ : ಸತೀಶ್‌ ಜಾರಕಿಹೊಳಿ
ಬೆಳಗಾವಿ : ವಾಲ್ಮೀಕಿ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚು ಮಾಡದ ಸರ್ಕಾರ ವಾಲ್ಮೀಕಿ ಜಯಂತಿಯನ್ನು ಆಚರಿಸುವಂತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದಿಂದ ಅಕ್ಟೋಬರ್‌ 9ರಂದು ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಇದಕ್ಕೆ ವಾಲ್ಮೀಕಿ ಸಂಘ ಸಮುದಾಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ಕುರಿತು ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ  ಸತೀಶ್‌ ಜಾರಕಿಹೊಳಿ  “ಮೀಸಲಾತಿ ಪ್ರಮಾಣ ಹೆಚ್ಚು ಮಾಡದೆ ಇರುವ ಸರ್ಕಾರಕ್ಕೆ ವಾಲ್ಮೀಕಿ ಜಯಂತಿಯನ್ನು ಆಚರಿಸುವುದಕ್ಕೆ ಯಾವುದೇ ರೀತಿಯ ನೈತಿಕ ಹಕ್ಕಿಲ್ಲ“  ಎಂದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಾರಿ ಸರ್ಕಾರದ ನಡೆಸುವ ಕಾರ್ಯಕ್ರಮಗಳನ್ನು ಬಹಿಷ್ಕರಿಸಿ ಕೇವಲ ಸಂಘ ಸಮುದಾಯಗಳ ವತಿಯಿಂದ ವಾಲ್ಮೀಕಿ ಜಯಂತಿಯನ್ನು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳುತ್ತೇವೆ. ಸರ್ಕಾರ ಬಿಟ್ಟು ಯಾರೂ ಬೇಕಾದರೂ ಯಾವ ಸಂಘಟನೆಯವರು ಬೇಕಾದರೂ ಆಚರಿಸಬಹುದು ಎಂದು ಹೇಳಿದರು.

ನಮ್ಮ ಸಮುದಾಯಗಳಿಗಿರುವ ಶೇ 03ರಷ್ಟು ಮೀಸಲಾತಿಯನ್ನು ಶೇ 7.5ಕ್ಕೆ ಏರಿಸಬೇಕು. ಇದು ಸಮುದಾಯದ ಜನಸಂಖ್ಯಾ ಅನುಗುಣವಾಗಿ ನಮ್ಮ ನ್ಯಾಯ ಸಮ್ಮತ ಬೇಡಿಕೆಯಾಗಿದೆ . ಇದಕ್ಕಾಗಿ  ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸುಮಾರು 02 ವರ್ಷಗಳಿಂದ ಹೋರಾಟ ನಡೆಸುತ್ತಲೇ ಇದ್ದಾರೆ. ಮತ್ತು ಸಮುದಾಯದವರೂ ನಿರಂತರ ಹೋರಾಟಗಳನ್ನು ಮಾಡುತ್ತಲೇ ಇದ್ದಾರೆ. ಇದಕ್ಕೆ ಸಮಾಧಾನವಾಗಿ ಶ್ರೀರಾಮುಲು ಅವರು ತಾನು ಅಧಿಕಾರಕ್ಕೆ ಬಂದ 24 ಗಂಟೆಯ ಒಳಗೆ ಮೀಸಲಾತಿ ಬೇಡಿಕೆ ನೀಡಿದ್ದರು. ಆದರೆ ಈವರೆಗೂ ಯಾವುದೇ ರೀತಿಯ ಬದಲಾವಣೆಗಳು ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ಹಾಗೆಯೇ ಅಕ್ಟೋಬರ್‌ 09 ರಂದು  ಬೆಂಗಳೂರಿನ ಫ್ರೀಡಂ ಪಾರ್ಕ್‌ನ ಬಳಿ ಪುರುಷೋತ್ತಮಾನಂದ ಪುರಿ ಶ್ರೀಗಳು ಧರಣಿ ನಡೆಸಲಿದ್ದು ಅಲ್ಲಿಯೇ ವಾಲ್ಮೀಕಿ ಮಹರ್ಷಿಯ ಭಾವಚಿತ್ರವನ್ನಿಟ್ಟು ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಗುವುದು ಎಂದು ಸತೀಶ್‌ ಜಾರಕಿಹೊಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.