sfi – Peepal Media

ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ SFI ಶಂಘಟನೆಯಿಂದ ಮನವಿ
ವಿದ್ಯಾರ್ಥಿ ಹಕ್ಕುಗಳ ಹೋರಾಟದ ಸಂಘಟನೆಯಾದ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (SFI) ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ತನ್ನ ಹಲವು ಮನವಿಗಳನ್ನು ಈಡೇರಿಸುವಂತೆ ಕೋರಿತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೇಸರೀಕರಣ ಮಾಡಿದ ಪಾಠಗಳನ್ನು ಕೈ ಬಿಟ್ಟು ವಿದ್ಯಾರ್ಥಿಗಳಿಗೆ ಬೇಕಾಗುವ ಹಾಗೂ ನಾಡಿನ ಸೌಹಾರ್ದತೆ ಹಾಗೂ ಸಹೋದರತ್ವವನ್ನು ಬೆಳೆಸುವಂತಹ ಪಾಠಗಳನ್ನು ಸೇರ್ಪಡೆ ಮಾಡಿರುವುದನ್ನು ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಕರ್ನಾಟಕ ರಾಜ್ಯ ಸಮಿತಿ ಸ್ವಾಗತ ಮಾಡುತ್ತದೆ‌ ಎಂದು ನಿಯೋಗ ತನ್ನ ಮನವಿಯ ಪತ್ರದಲ್ಲಿ ಹೇಳಿದೆ.

ನಿಯೋಗದ ಮನವಿ ಪತ್ರ:

“ಭಾರತ ವಿದ್ಯಾರ್ಥಿ ಫೆಡೆರೇಷನ್ (ಎಸ್.ಎಫ್.ಐ) ಸಂಘಟನೆಯು ವಿದ್ಯಾರ್ಥಿಗಳ ಮದ್ಯೆ ಸಂವಿಧಾನಬದ್ಧವಾಗಿ ರಾಜ್ಯದಲ್ಲಿ ಐಕ್ಯತೆ ಮೂಡಿಸುವ, ಸಹೋದರತ್ವ ಬೆಳೆಸುವ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಹಲವಾರು ಕಾರಕ್ರಮ ಹಾಗೂ ಚಟುವಟಿಕೆಗಳನ್ನು ಮಾಡುತ್ತಾ ಜೊತೆಯಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟಗಳನ್ನು ರೂಪಿಸುತ್ತಾ ಬಂದಿದೆ.

ರಾಜ್ಯದಲ್ಲಿ ಅನೇಕ ಸರಕಾರಿ ಶಾಲಾ ಕಾಲೇಜುಗಳಲ್ಲಿ ಈಗಲೂ ಅನೇಕ ಮೂಲಭೂತ ಸೌಲಭ್ಯಗಳ ಕೊರತೆ ಇರುತ್ತದೆ. ಸರ್ಕಾರಿ ಶಾಲಾ-ಕಾಲೇಜುಗಳ ಸುಧಾರಣೆಗಾಗಿ ಕೋಠಾರಿ ಆಯೋಗ ಸೇರಿದಂತೆ ಅನೇಕ ಶಿಕ್ಷಣ ತಜ್ಞರು, ಶಿಕ್ಷಕರು, ಉಪನ್ಯಾಸಕರು, ಸಾಹಿತಿಗಳು, ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಮುತ್ಸದ್ಧಿಗಳು, ಪ್ರಗತಿಪರರು ಶ್ರಮಿಸಿದ್ದಾರೆ. ಆದರೂ ಸಹ ನಮಗೆ ಸ್ವಾತಂತ್ರ ಸಿಕ್ಕು 75 ವರ್ಷಗಳು ಕಳೆದರು ನಮ್ಮ ರಾಜ್ಯದ ಗ್ರಾಮೀಣ ಪ್ರದೇಶ, ಕೊಳಚೆ ಪ್ರದೇಶಗಳು, ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಇರುವಂತಹ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗದೇ ಇರುವುದು ಒಂದು ಕಡೆಯಾದರೆ, ಕೊರೋನ ಮತ್ತು ಕೊರೋನ ನಂತರದಲ್ಲಿ ಶೈಕ್ಷಣಿಕ ರಂಗದಲ್ಲಿ ಸಾಕಷ್ಟು ಸಮಸ್ಯೆಗಳನ್ನು ವಿದ್ಯಾರ್ಥಿಗಳು ದಿನನಿತ್ಯ ಅನುಭವಿಸುತ್ತಿದ್ದಾರೆ.” ಎಂದು ಮನವಿ ಪತ್ರದಲ್ಲಿ ಸಂಘಟನೆ ಹೇಳಿದೆ.

ಸಂಘಟನೆಯು ಕೆಲವು ಬೇಡಿಕೆಗಳನ್ನು ಮಂತ್ರಿಗಳ ಮುಂದಿಟ್ಟಿದ್ದ ಅವು ಇಂತಿವೆ:

ಕಳೆದ 4 ವರ್ಷಗಳಿಂದ 8 ನೇಯ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸದೇ ಹಿಂದಿನ ಭಾ.ಜ.ಪ ಸರ್ಕಾರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ್ದು ಈ ವರ್ಷದಿಂದ ಸೈಕಲ್‌ ವಿತರಿಸಲು ಸರ್ಕಾರ ಕ್ರಮವಹಿಸಬೇಕು.

ಡೊನೇಶನ್ ಹಾವಳಿ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳ ಅದ್ಯಕ್ಷತೆಯಲ್ಲಿರುವ ಡೇರಾ ಸಮಿತಿಯನ್ನು ಸಕ್ರಿಯಗೊಳಿಸಿ ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಲು ಸೂಚನೆ ನೀಡಿ ಡೊನೇಶನ್ ಹಾವಳಿಯನ್ನು ನಿಲ್ಲಿಸಬೇಕು.

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಶೌಚಾಲಯಗಳು, ವಿದ್ಯಾರ್ಥಿಗಳ ಡೆಸ್ಕ್ ಗಳು ಒದಗಿಸಬೇಕು.

ಸ್ವಂತ ಕಟ್ಟಡಗಳು, ಈಗಾಗಲೇ ಇರುವ ಕಟ್ಟಡಗಳ ಇರುವ ಕಟ್ಟಡಗಳ ದುರಸ್ತಿ, ಗ್ರಂಥಾಲಯ ಕೊಠಡಿ, ಭೋಜನಾಲಯ ಕೊಠಡಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ಕಂಪೌಂಡ್ ವ್ಯವಸ್ಥೆಯನ್ನು ಖಾತ್ರಿ ಪಡಿಸಬೇಕು.

ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಹಂತದ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಹುದ್ದೆಗಳು
ಖಾಲಿ ಇವೆ ಅವುಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಬೇಕು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ‘ಡಿ’ ಗ್ರೂಪ್ ಹುದ್ದೆಗಳು ಹಾಗೂ ರಂಗ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಬೇಕು.

ಕೊರೋನ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಮರಳಿ ಶಾಲೆಗೆ ಕರೆದುಕೊಂಡು ಬರುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಜಾರಿ ಮಾಡಬೇಕು.

ಸರ್ಕಾರಿ ಶಾಲೆಗಳನ್ನು ಕಿರಿಯ ಪ್ರಾಥಮಿಕದಿಂದ ಹಿರಿಯ ಪ್ರಾಥಮಿಕಕ್ಕೆ ಮೇಲ್ದರ್ಜೆಗೆ ಏರಿಸಲು ಇರುವ ಸಮಸ್ಯೆಗಳನ್ನು ಪರಿಹರಿಸಬೇಕು.

ಆರ್.ಟಿ.ಇ ನಿಯಮಗಳನ್ನು ಎಲ್ಲಾ ಶಾಲೆಗಳಲ್ಲಿ ಸಮರ್ಪಕವಾಗಿ ಜಾರಿಗೊಳಿಸಲು ಆದೇಶ ಮಾಡಬೇಕು.

ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಿ ಬಹುತೇಕ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ನೋಟ್ ಬುಕ್ ಬಟ್ಟೆ ಮಾರಾಟ ಮಾಡುವಂತಹ ಶಾಲೆಗಳ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು.

ರಾಜ್ಯದಲ್ಲಿ ಅನಧೀಕೃತವಾಗಿವಾಗಿರುವ ಐಸಿಎಸ್‌ಇ ಹಾಗೂ ಸಿಬಿಎಸ್‌ಇ ಶಾಲೆಗಳ ಮೇಲೆ
ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಮನವಿಗೆ ಸ್ಪಂದಿಸಿದ ಸಚಿವರು ಸಮಸ್ಯೆಗಳ ಕುರಿತು ಚರ್ಚಿಸಲು ಅಧಿಕಾರಿಗಳನ್ನು ಕರೆದು ನಿಮ್ಮೊಂದಿಗೆ ಸಭೆ ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ, ರಾಜ್ಯ ಪಧಾದಿಕಾರಿಗಳಾದ ಗಣೇಶ ರಾಠೋಡ್, ಬಸವರಾಜ ಬೋವಿ, ವಿಜಯ ಕುಮಾರ ಹಾಗೂ ವಿಶ್ವನಾಥ ಹಾಜರಿದ್ದರು.

ನಮ್ಮಲ್ಲಿ ಏಕಭಾಷಾ ಯಜಮಾನಿಕೆ ನಡೆಯೋದಿಲ್ಲ: ಡಾ.ನಿರಂಜನಾರಾಧ್ಯ
ಬೆಂಗಳೂರು: ಸರಕಾರ ಶಿಕ್ಷಣ ಪದ್ಧತಿಯಲ್ಲಿ ಗೊಂದಲಗಳನ್ನು ಸೃಷ್ಟಿಸಿದೆ. ಹಿಂದಿ ಹೇರಿಕೆಯ ಮೂಲಕ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಿದೆ. ನಮ್ಮದು ಬಹುಭಾಷಾ ರಾಷ್ಟ್ರ ನಮ್ಮಲ್ಲಿ ಏಕ ಭಾಷಾ ಯಜಮಾನಿಕೆ ನಡೆಯೋದಿಲ್ಲ ಎಂದು ಶಿಕ್ಷಣ ತಜ್ಞ ವಿ.ಪಿ. ಡಾ.ನಿರಂಜನಾರಾಧ್ಯ ಟೀಕಿಸಿದರು.

ರಾಜ್ಯಗಳ ಶಿಕ್ಷಣದ ಸ್ವಾಯತ್ತತೆಯ ಮೇಲೆ ಹೊಸ ರಾಷ್ಟ್ರೀಯ ಶಿಕ್ಷಣ ದಾಳಿ ವಿರೋಧಿಸಿ, ಹಿಂದೆ ಹೇರಿಕೆ ಖಂಡಿಸಿ ಹಾಗೂ ಸಂವಿಧಾನ ಬದ್ಧ ಎಲ್ಲಾ ಭಾಷೆಗಳಲ್ಲಿ ಶಿಕ್ಷಣ ಹಕ್ಕು ರಕ್ಷಣೆಗಾಗಿ ಆಗ್ರಹಿಸಿ, ರಾಜ್ಯ ಸರ್ಕಾರದ ಕೋಮುವಾದ ಖಾಸಗೀಕರಣದ ದಾಳಿಗಳಿಂದ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಉಳಿವಿಗಾಗಿ ಆಗ್ರಹಿಸಿ ನಗರದ ಅಲುಮ್ನಿ ಅಸೋಸಿಯೇಷನ್ ಹಾಲ್ ನಲ್ಲಿ ಆಯೋಜಿಸಿದ್ದ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ರಾಜ್ಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಆತುರವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ತರಾತುರಿ ನಿರ್ಧಾರ. ಪಠ್ಯಕ್ರಮ ಚೌಕಟ್ಟಿಲ್ಲದೆ ಪಠ್ಯ ಪರಿಷ್ಕರಣೆ, ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣವನ್ನು ಕಸಿಯುವ ಹಿಜಾಬ್ ನಿಷೇಧ, ವೈಜ್ಞಾನಿಕ ಶಿಕ್ಷಣವನ್ನು ಅಣಿಕಿಸುವ ರೀತಿಯಲ್ಲಿ ಧ್ಯಾನ, ವೇದಗಣಿತ, ಸನಾತನ ಶಿಕ್ಷಣ ಪದ್ಧತಿ, ಶಾಲಾ ಗೋಡೆಗಳಿಗೆ ಕೇಸರಿ ಬಣ್ಣ ಇತ್ಯಾದಿ ಗೊಂದಲಗಳನ್ನು ಸರ್ಕಾರವೇ ಸೃಷ್ಟಿಸಿದೆ. ಕೋವಿಡ್ ಸೋಂಕಿನ ನಂತರ ಶಾಲೆಗಳು ಪ್ರಾರಂಭವಾದಾಗ ಮಕ್ಕಳ ಕಲಿಕೆಗೆ ತೀವ್ರ ಹಿನ್ನಡೆಯುಂಟಾಗಿದೆ. ಅದನ್ನು ತುಂಬಿಕೊಡುವ ಮೂಲಕ ಮಕ್ಕಳ ಕಲಿಕೆಯನ್ನು ಮುಖ್ಯ ವಾಹಿನಿಗೆ ತರಬೇಕೆಂದು ಹಲವು ಸಾಮಾಜಿಕ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸರಕಾರ ನಿರ್ಲಕ್ಷ್ಯ ಮಾಡಿದೆ ಎಂದು ದೂರಿದರು.

ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಸಿಗಬೇಕಾದ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿಚಾರದಲ್ಲಿ ಗೊಂದಲಗಳನ್ನು ಸೃಷ್ಟಿಸಿದೆ. 8ನೇ ತರಗತಿಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಈ ವರ್ಷ ಸೈಕಲ್ ವಿತರಣೆ ಮಾಡಿಯೇ ಇಲ್ಲ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮೊಟ್ಟೆ ವಿಚಾರದಲ್ಲೂ ಗೊಂದಲ ಸೃಷ್ಠಿ ಮಾಡಲಾಗಿದೆ. ಕಳೆದ ಒಂದೂವರೆ ವರ್ಷದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಶಾಲಾ ಶಿಕ್ಷಣ ಕ್ಷೇತ್ರದಲ್ಲಿ ಸರಕಾರ ಪೂರ್ಣವಾಗಿ ಸೋತಿರುವುದು ಎದ್ದು ಕಾಣುತ್ತಿದೆ ಎಂದರು.

ಎಸ್ಎಫ್ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣ್ ಮಾತನಾಡಿ, ಸರ್ಕಾರ ಆನ್ಲೈನ್ ಶಿಕ್ಷಣದ ಹೆಸರಲ್ಲಿ ಡಿಜಿಟಲ್ ಡಿವೈಡ್ ಮಾಡುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕೇಂದ್ರ ಸದಸ್ಯರಾದ ಶಿವಕುಮಾರ್ ಮ್ಯಾಗಳಮನಿ, ಗಾಯತ್ರಿ, ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ,  ರಾಜ್ಯಾಧ್ಯಕ್ಷ ಅಮರೇಶ್ ಕಡಗಡ್‌, ರಾಜ್ಯ ಪದಾಧಕಾರಿ ರಮೇಶ ವೀರಾಪೂರು, ರಾಜ್ಯ ಉಪಾಧ್ಯಕ್ಷ ಭೀಮನಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

SC, ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡದೆ ಆತಂಕ ಸೃಷ್ಟಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆ ಮತ್ತು ಮೈಸೂರು ವಿ.ವಿ
ಮೈಸೂರು ವಿವಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸಮಸ್ಯೆ ಎದುರಾಗಿ ಈಗಾಲೆ ಮೂರು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸರಿಯಾಗಿ ನೀಡದೆ ಇರುವುದರಿಂದ ಕಾಲೇಜುಗಳಲ್ಲಿ ಪರೀಕ್ಷೆಗೆ ನಿರಾಕರಿಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ. ಹಾಸನದ ಮಹಿಳಾ ಪ್ರಥಮ ದರ್ಜೆಯಲ್ಲಿ ಕಳೆದ ವರ್ಷಗಳ ಶುಲ್ಕ ಪಾವತಿ ಮಾಡಬೇಕು ಇಲ್ಲವಾದಲ್ಲಿ ಪರೀಕ್ಷೆಗೆ ಕೂರಿಸುವುದಿಲ್ಲಾ ಎಂದು ಪ್ರಾಂಶುಪಾಲರು ಹೇಳುತ್ತಿದ್ದಾರೆ. ಈ ಕಾರಣದಿಂದ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ ಜೊತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆದ ಕೆಲ ತಾಂತ್ರಿಕ ದೋಷಗಳಿಂದಲು ಕೂಡ ವಿದ್ಯಾರ್ಥಿಗಳು ಇಂದು ಸಮಸ್ಯೆ ಎದುರಿಸಿತ್ತಿದ್ದಾರೆ . ಜಿಲ್ಲಾ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ಲಕ್ಷ್ಯ ದೋರಣೆಯೂ ಕೂಡ ಇಂದು ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳಿಗೆ ತಲುಪದೆ ಇರುಲು ಕಾರಣ ವಾಗಿದೆ ಈ ಎಲ್ಲಾ ಬೆಳವಣಿಗೆಯನ್ನು ವಿರೋಧಿಸಿ ಎಸ್.ಎಫ್.ಐ ಜಿಲ್ಲಾ ಸಮಿತಿ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಕಛೇರಿಯ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾ‌ಸಮಾಜ ಕಲ್ಯಾಣ ಅಧಿಕಾರಿಗಳ ಜೊತೆ ಸಭೆ ಮಾಡಿ ವಿದ್ಯಾರ್ಥಿಗಳಿಗೆ ಕೂಡಲೆ‌ ಪರೀಕ್ಷೆ ಬರೆಯಯಲು ಪತ್ರ ಕಳಿಸುವಂತೆ ಒತ್ತಾಯಿಸಿ ಸಭೆ ನಡೆಸಲಾಯಿತು ಇನ್ನೂ ಎರಡು‌ ದಿನಗಳಲ್ಲಿ ಎಲ್ಲಾ‌ ಕಾಲೇಜುಗಳಿಗೂ ಸುತ್ತೋಲೆ‌ ಕಳಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುತ್ತೇವೆ ಎಂದು ಬರವಸೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್, Dyfi ಸಂಘಟನೆಯ ಪೃಥ್ವಿ ಎಂ.ಜಿ, ಪ್ರಸನ್ನ, ಸಹ ಕಾರ್ಯದರ್ಶಿ ವಿವೇಕ್, ಹೇಮಂತ್ ಸ್ವರೂಪ್, ಪ್ರಮಿತ್ , ಹೇಮಂತ್, ಚಿತ್ರ, ವಿಧ್ಯಾ, ಪೂಜ, ಪುಟ್ಟ ಲಕ್ಷ್ಮೀ ಉಪಸ್ಥಿತರಿದ್ದರು.

ಪದವಿ ವಿದ್ಯಾರ್ಥಿಗಳ ಬೇಡಿಕೆಗಳು

1. ಕೂಡಲೆ 3 ವರ್ಷದ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಬೇಕು.

2. ಮುಂದಿನ ಸೆಮಿಸ್ಟರ್ ಪರೀಕ್ಷಗೆ ಅನುಮತಿ ಕೊಡಬೇಕು.

3. ಮೈಸೂರು ವಿಶ್ವ ವಿಧ್ಯಾಲಯದ ಪದವಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು.

4. ಸಮಾಜ ಕಲ್ಯಾಣ ಇಲಾಖೆ ಕಾಲೇಜುಗಳಲ್ಲಿ ಸಭೆ ನಡೆಸಬೇಕು.

4. ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಬೇಕು.