Shakthi – Peepal Media

“ಶಕ್ತಿ”ಗೆ ಚಾಲನೆ ; ಕಂಡೀಶನ್ ಗಳೇನು? ಮುಖ್ಯಮಂತ್ರಿ ಏನಂದ್ರು?
ಬೆಂಗಳೂರು, ಜೂನ್ 9: ಕೇಂದ್ರ ಸರ್ಕಾರದ ಬೆಲೆಯೇರಿಕೆಯ ಬಿಸಿ ತಪ್ಪಿಸಲು ಕರ್ನಾಟಕ ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ಘೋಷಿಸಿದ 5 ಗ್ಯಾರಂಟಿಗಳು ಇನ್ನೇನು ಅನುಷ್ಠಾನದ ಹಂತಕ್ಕೆ ಬಂದು ನಿಂತಿದೆ. ಅದರ ಮೊದಲ ಹೆಜ್ಜೆಯಾಗಿ ರಾಜ್ಯ ಸರ್ಕಾರ “ಶಕ್ತಿ” ಯೋಜನೆಯನ್ನು ಜೂನ್ 11 ರ ಭಾನುವಾರ ರಾಜ್ಯದ ಮಹಿಳಾ ಸಮೂಹಕ್ಕೆ ಅರ್ಪಣೆ ಆಗಲಿದೆ.

ರಾಜ್ಯದಲ್ಲಿ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು ಈ ಕುರಿತು ಸಚಿವರು ಮತ್ತು ಶಾಸಕರಿಗೆ ನಿಮ್ಮ ನಿಮ್ಮ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಚಾಲನೆ ನೀಡುವಂತೆ ಕರೆ ನೀಡಿದ್ದಾರೆ.
“ಶಕ್ತಿ”ಯಲ್ಲಿ ಏನಿದೆ?
* ರಾಜ್ಯ ಸರ್ಕಾರದ ಸಾರಿಗೆಯಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ
* ಜೂನ್ 11 ರಿಂದ ರಾಜ್ಯಾದ್ಯಂತ ಯೋಜನೆ ಜಾರಿ
* ರಾಜ್ಯದ ಒಳಗೆ ಸಂಚರಿಸುವ ಬಿಎಂಟಿಸಿ, ಕೆಎಸ್ಆರ್ಟಿಸಿ (ಲಕ್ಷುರಿ, ಎಸಿ, ಸ್ಲೀಪರ್ ಹೊರತುಪಡಿಸಿ) ಬಸ್ ಗಳಿಗೆ ಅನ್ವಯ
* ಕರ್ನಾಟಕ ರಾಜ್ಯದ ಮಹಿಳೆಯರು, ವಿದ್ಯಾರ್ಥಿನಿಯರು, ಮಂಗಳಮುಖಿಯರಿಗೆ ಈ ಯೋಜನೆ ಅನ್ವಯ
* ಬಿಎಂಟಿಸಿ ಹೊರತುಪಡಿಸಿ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಶೇ 50 ರಷ್ಟು ಆಸನ ಪುರುಷರಿಗೆ ಮೀಸಲು
* ಸೇವಾಸಿಂಧು ಪೋರ್ಟಲ್ ಮೂಲಕ 3 ತಿಂಗಳ ಒಳಗೆ ಸ್ಮಾರ್ಟ್ ಕಾರ್ಡ್ ಲಭ್ಯ
* ಸ್ಮಾರ್ಟ್ ಕಾರ್ಡ್ ಸಿಗುವ ವರೆಗೂ ಆಧಾರ್ ಕಾರ್ಡ್ ಅಥವಾ ಓಟರ್ ಐಡಿ ತೋರಿಸಿ ಪ್ರಯಾಣಿಸಬಹುದು

ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ  ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಮತ್ತು ಶಾಸಕರುಗಳಿಗೆ ಸೂಚನೆ ನೀಡಿದ್ದಾರೆ.
ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು. ನೇಮಕವಾದ ತಕ್ಷಣ ಎಲ್ಲಾ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು ಎಂದು ತಿಳಿಸಿದ್ದಾರೆ.
ಜೂನ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡುತ್ತಾರೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು ಎಂದು ತಮ್ಮ ಸಂಪುಟ ಸಚಿವರು ಮತ್ತು ಶಾಸಕರಿಗೆ ಕರೆ ನೀಡಿದ್ದಾರೆ.