shivamurthi murugha – Peepal Media

ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿ ವಿಚಾರಣೆ ನವೆಂಬರ್ 15 ಕ್ಕೆ ಮುಂದೂಡಿಕೆ
ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನವೆಂಬರ್ 15ಕ್ಕೆ ಮುಂದೂಡಿದೆ. ಈಗಾಗಲೇ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ಅದನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 15 ಕ್ಕೆ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೂರ್ತಿಗಳಿಗೆ ಜಾಮೀನು‌ ನೀಡುವ ಸಂಬಂಧ ಈಗಾಗಲೇ ಹೈಕೋರ್ಟ್ ನೀಡಿರುವ ಪ್ರತಿಯನ್ನು ಆರೋಪಿಯ ಪರ ವಕೀಲರಾದ ಸಂದೀಪ್ ಪಾಟೀಲ್ ಶುಕ್ರವಾರ ಮಧ್ಯಾಹ್ನ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದರು.

ಶ್ಯೂರಿಟಿ ಪ್ರತಿಗಳನ್ನು ಪರಿಶೀಲಿಸುವ ಸಂಬಂಧ ನ್ಯಾಯಾಲಯ ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದೆ. ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಅವರ ಸಹೋಧರ ಕೆ.ಸಿ.ನಾಗರಾಜ್ ಹಾಗೂ ಮಧುಸೂದನ್ ಎಂಬುವರಿಂದ ಶ್ಯೂರಿಟಿ ಹಾಕಿದ್ದು, ಇದರೊಟ್ಟಿಗೆ ಎರಡು ಲಕ್ಷ ರೂ. ಬಾಂಡ್ ಸಲ್ಲಿಸಿದ್ದಾರೆ.

ಮುರುಘಾಮಠದ ಶಿವಮೂರ್ತಿಗಳಿಗೆ ಜಾಮೀನು, ಆದರೆ ಜೈಲಿನಿಂದ ಬಿಡುಗಡೆ ಇಲ್ಲ
ಬೆಂಗಳೂರು : ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪೊಕ್ಸೋ ಕಾಯ್ದೆ ಸೇರಿದಂತೆ ವಿವಿಧ ಪ್ರಕರಣಗಳ ಅಡಿಯಲ್ಲಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿಗಳಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಆಲಿಸಿದ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆದರೆ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಆಗುವುದು ಅನುಮಾನ ಎನ್ನಲಾಗಿದೆ. ಶಿವಮೂರ್ತಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್‌, ಹರೀಶ್‌ ಕುಮಾರ್ ಅವರುಗಳಿದ್ದ ಪೀಠ ಈ ಆದೇಶ ನೀಡಿದೆ.

ಷರತ್ತುಬದ್ಧ ಜಾಮೀನಿನ ಹಿನ್ನೆಲೆಯಲ್ಲಿ ಹೈಕೋರ್ಟ್ ಒಟ್ಟು ಏಳು ಷರತ್ತುಗಳನ್ನು ವಿಧಿಸಿದೆ. ಅದರಲ್ಲಿ ಮುರುಘಾ ಮಠದ ಶಿವಮೂರ್ತಿಗಳು ಚಿತ್ರದುರ್ಗಕ್ಕೆ ಹೋಗದಂತೆ, ಪಾಸ್ಪೋರ್ಟ್ ಗಳನ್ನು ನ್ಯಾಯಾಲಯದ ವಶಕ್ಕೆ ಕೊಡುವಂತಹ ಪ್ರಮುಖ ಷರತ್ತುಗಳನ್ನು ವಿಧಿಸಿದೆ.

‘ಪೋಕ್ಸೊ’ ಅಡಿಯಲ್ಲಿ ಮುರುಘಾ ಶರಣರ ವಿರುದ್ಧ ಮತ್ತೆ ಎರಡು ಪ್ರಕರಣ ದಾಖಲು
ಪೋಕ್ಸೊ ಪ್ರಕರಣದ ಅಡಿಯಲ್ಲಿ ಮುರುಘಾ ಮಠದ ಶಿವಮೂರ್ತಿಗಳ ಮೇಲೆ ಮತ್ತೆ ಎರಡು ಹೊಸ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಹೆಣ್ಣು ಮಕ್ಕಳ ಹೇಳಿಕೆ ಮತ್ತು ಪೂರಕ ಸಾಕ್ಷಾಧಾರಗಳ ಕಲೆ ಹಾಕಿದ ನಂತರ ಎಫ್ಐಆರ್ ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುರುಘಾ ಮಠದ ವ್ಯಾಪ್ತಿಯಲ್ಲಿ ಬರುವ ಅಕ್ಕಮಹಾದೇವಿ ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವರ್ಷದ ಹೆಣ್ಣು ಮಕ್ಕಳಿಬ್ಬರೂ ತಮ್ಮ ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹೋಗಿ ದೂರು ದಾಖಲಿಸಿದ್ದಾರೆ. ಮುರುಘಾ ಶರಣರ ಹಿಂದಿನ ಪ್ರಕರಣಗಳ ಬಗ್ಗೆ ಸಂಪೂರ್ಣ ಜವಾಬ್ದಾರಿ ತಗೆದುಕೊಂಡಿದ್ದ ಒಡನಾಡಿ ಸಂಸ್ಥೆಯ ಸ್ಟಾನ್ಲಿ ಅವರನ್ನು ಸಂಪರ್ಕಿಸಿದ ನಂತರ ಅವರ ಸಲಹೆಯ ಮೇರೆಗೆ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಲಾಗಿದೆ.

ಸಧ್ಯ ಶಿವಮೂರ್ತಿಗಳು ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆಗೆ ಕೋರಿ 3 ಬಾರಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಈಗ ಮತ್ತೂ ಎರಡು ಪ್ರಕರಣ ಪೋಕ್ಸೊ ಕಾಯ್ದೆ ಅಡಿಯಲ್ಲಿ ದಾಖಲಾಗುತ್ತಿದ್ದು, ಶಿವಮೂರ್ತಿಗಳಿಗೆ ಸಧ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ ಎಂದೇ ಅಂದಾಜಿಸಲಾಗಿದೆ‌. ಈ ಬಗ್ಗೆ ‘ದಿ ಫೈಲ್’ ವರದಿ ಮಾಡಿದೆ. ಮುಂದಿನ ಬೆಳವಣಿಗೆ ಬಗ್ಗೆ ನಿರೀಕ್ಷಿಸಲಾಗುತ್ತಿದೆ.

ಅತ್ಯಾಚಾರ ಆರೋಪ ಮಾಡಿರುವ ಬಾಲಕಿಯರಿಗೆ ʼನ್ಯಾಯ ದೊರೆಯಬೇಕಿದೆʼ: ಲೆಹರ್‌ ಸಿಂಗ್‌
ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಪೀಠಾಧೀಶ ಶಿವಮೂರ್ತಿ ಮುರುಘಾ ವಿರುದ್ಧ ಅತ್ಯಾಚಾರ ಆರೋಪ ಮಾಡಿರುವ ಬಾಲಕಿಯರಿಗೆ ‘ನ್ಯಾಯ’ ದೊರಕಬೇಕು ಎಂದು ಬಿಜೆಪಿಯ ಹಿರಿಯ ನಾಯಕ, ರಾಜ್ಯಸಭಾ ಸಂಸದ ಲೆಹರ್‌ ಸಿಂಗ್ ಸಿರೋಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರು ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆರೋಪ ‘ಸುಳ್ಳು’ ಎಂದು ಪ್ರತಿಪಾದಿಸಿ, ಆರೋಪಿಗೆ ಬೆಂಬಲ ನೀಡಿದ್ದರು. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡ, ಶರಣರ ವಿರುದ್ಧ ಮಠದ ಒಳಗಿನಿಂದಲೇ ಪಿತೂರಿ ನಡೆದಂತಿದೆ ಎಂದು ಸಮರ್ಥನೆಯ ದಾಟಿಯ ಹೇಳಿಕೆ ನೀಡಿದ್ದರು. ಇದಾದ ಒಂದು ದಿನದ ನಂತರ ಲೆಹರ್‌ ಸಿಂಗ್ ಬಾಲಕಿಯರ ಪರವಾಗಿ ಹೇಳಿಕೆ ನೀಡಿದ್ದಾರೆ.

ಲೆಹರ್‌ ಸಿಂಗ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಚಿತ್ರದುರ್ಗದ ಅತ್ಯಂತ ಪ್ರಭಾವಿ ಮುರುಘಾ ಮಠದ ಮಠಾಧೀಶರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಅಪ್ರಾಪ್ತ ಬಾಲಕಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಇದು ಅತ್ಯಂತ ಆಘಾತಕಾರಿ ಮತ್ತು ದುಃಖದ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಪ್ರತಿ ಬಾರಿ ಈ ರೀತಿಯಲ್ಲಿ ಏನಾದರೂ ಸಂಭವಿಸಿದಾಗ, ಅದು ನಮ್ಮ ಸ್ವಂತ ಮತ್ತು ಸುತ್ತಮತ್ತಲಿನ ಜನರಲ್ಲಿ ನಮ್ಮ ವಿಶ್ವಾಸವನ್ನು ಅಲುಗಾಡಿಸುತ್ತದೆ. ಈ ಆರೋಪಗಳನ್ನು ಸಂಪೂರ್ಣವಾಗಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ನಾವು ಬದ್ಧರಾಗಿರಬೇಕು. ಹೀಗಿರುವಾಗ ಕರ್ನಾಟಕ ಸರ್ಕಾರ ಮತ್ತು ಎಲ್ಲಾ ರಾಜಕೀಯ ಪಕ್ಷಗಳು ಈ ಪ್ರಕರಣದಲ್ಲಿ ಯಾವುದೇ ಒತ್ತಡಗಳು ಮತ್ತು ರಾಜಕೀಯ ಹಸ್ತಕ್ಷೇಪಗಳು ಆಗದಂತೆ ನೋಡಿಕೊಳ್ಳಬೇಕು ಎಂದು ಸಿಂಗ್ ತಿಳಿಸಿದ್ದಾರೆ.

‌ʼಹೆಣ್ಣುಮಕ್ಕಳಿಗೆ ನ್ಯಾಯದ ಹೊರತಾಗಿ ಬೇರೇನೂ ಅರ್ಹವಾಗಿಲ್ಲʼ. ಈ ಪ್ರಕರಣವನ್ನು ಕರ್ನಾಟಕದ ಹೊರಗೆ ವರ್ಗಾಯಿಸಿದರೆ ನ್ಯಾಯದ ಹಿತಾಸಕ್ತಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ ಎಂಬ ಅನುಮಾನವಿದ್ದರೆ, ಅದನ್ನು ಸಹ ಪರಿಗಣಿಸಬೇಕು. ಈ ಸಂದರ್ಭದಲ್ಲಿ, ಗ್ರಹಿಕೆಗಳು ಮಾತ್ರ ಮುಖ್ಯವಲ್ಲ ಆದರೆ ನಮ್ಮ ಸಮಾಜದ ಆರೋಗ್ಯದಲ್ಲಿ ವಿಶ್ವಾಸವನ್ನು ಪುನಃಸ್ಥಾಪಿಸುವುದು ಬಹಳ ಮುಖ್ಯ. ಆ ನಿಟ್ಟಿನಲ್ಲಿ ನಮ್ಮೆಲ್ಲರಿಗೂ ನಿರ್ಣಾಯಕ ಪಾತ್ರವಿದೆ ಎಂದಿದ್ದಾರೆ.

ಇಷ್ಟೇ ಅಲ್ಲದೆ, ನ್ಯಾಯದಾನದ ವಿಷಯದಲ್ಲಿ ಪ್ರಭಾವಗಳಿಗೆ ತನಿಖಾ ಸಂಸ್ಥೆಗಳು ಪ್ರಭಾವಕ್ಕೆ ಒಳಗಾಗುವ ಸಾಧ್ಯತೆಗಳು ಇದ್ದಲ್ಲಿ, ಪ್ರಕರಣವನ್ನು ಕರ್ನಾಟಕದಿಂದ ಹೊರಗಿನ ರಾಜ್ಯಕ್ಕೆ ವರ್ಗಾವಣೆ ಮಾಡುವುದು ಸೂಕ್ತ ಎಂದು ಲೆಹರ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

Rajya sabha MP from Karnataka & senior @BJP4India leader Lahar Singh Siroya demands justice for minor girls in the Murugha Matha POCSO case. "The girls deserve nothing but justice," he says.
Comes a day after @BSYBJP backed the seer accused of sexual abuse & said case was "false" pic.twitter.com/K9ffj5QdIq
— Anusha Ravi Sood (@anusharavi10) August 29, 2022