Shuchi yojane – Peepal Media

ರಾಜ್ಯದ ಹೆಣ್ಣು ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶುಚಿ ಯೋಜನೆಗೆ ಮರುಚಾಲನೆ
ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಹೆಣ್ಣು ಮಕ್ಕಳ ಸುರಕ್ಷತೆ ಮತ್ತು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡುವ “ಶುಚಿ ಯೋಜನೆ’ಗೆ ಈಗ ರಾಜ್ಯ ಸರ್ಕಾರ ಮರುಜೀವ ನೀಡಿದೆ. ಮುಂದಿನ ಹದಿನೈದು ದಿನದೊಳಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ರಾಜ್ಯದ ಹೆಣ್ಣು ಮಕ್ಕಳ ಕೈ ಸೇರಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲು ಮುಂದಾಗಿದೆ.

“ಶುಚಿ ಯೋಜನೆ”ಯಿಂದ ಸ್ಯಾನಿಟರಿ ನ್ಯಾಪ್ಕಿನ್ ಗಳು ರಾಜ್ಯದ 17.45 ಲಕ್ಷ ಹೆಣ್ಮಕ್ಕಳ ಕೈ ಸೇರುವ ನಿರೀಕ್ಷೆ ಇದೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮುಟ್ಟಿನ ಸ್ರಾವದ ನಿರ್ವಹಣೆಗೆ ಹಳೆಯ ಬಟ್ಟೆ ಬಳಸುವುದು ಮತ್ತು ಅವೈಜ್ಞಾನಿಕ ವಿಧಾನಗಳನ್ನು ಅನುಸರಿಸುತ್ತಿರುವುದರಿಂದ ಅನಾರೋಗ್ಯಕ್ಕೆ ಒಳಗಾಗುವುದು ಸಾಮಾನ್ಯವಾಗಿತ್ತು. ಆದರೆ “ಶುಚಿ ಯೋಜನೆ” ಮೂಲಕ ರಾಜ್ಯ ಸರ್ಕಾರ ಇವೆಲ್ಲಕ್ಕೂ ಬ್ರೇಕ್ ಹಾಕುವ ಚಿಂತನೆ ನಡೆಸಿ, ಮತ್ತೊಮ್ಮೆ ಯೋಜನೆ ಜಾರಿಗೊಳಿಸಿದೆ. ವಿಶೇಷವಾಗಿ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪಕಿನ್‌ ವಿತರಿಸಲಾಗುತ್ತಿದೆ.

17 ಲಕ್ಷ ಫಲಾನುಭವಿಗಳು
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಕೊನೆಯ ಹಂತದ ತಪಾಸಣೆ ಪೂರ್ಣಗೊಳಿಸಲಿದೆ. ಮುಂದಿನ ಹದಿನೈದು ದಿನಗಳಲ್ಲಿ ಅಂದರೆ ಜ.26ರೊಳಗೆ ಶುಚಿ ಯೋಜನೆಗೆ ಮರುಚಾಲನೆ ಸಿಗುವ ನಿರೀಕ್ಷೆ ಇದೆ. ಮೈಸೂರು ವಿಭಾಗದಲ್ಲಿ 3.24 ಲಕ್ಷ, ಕಲಬುರಗಿ 31.52 ಲಕ್ಷ, ಬೆಂಗಳೂರು ವಿಭಾಗ 48.55 ಲಕ್ಷ, ಬೆಳಗಾವಿ ವಿಭಾಗದಲ್ಲಿ 62.3 ಲಕ್ಷ ಸಹಿತ ಒಟ್ಟು 17.45 ಲಕ್ಷ ಅರ್ಹ ಫ‌ಲಾನುಭವಿಗಳಿದ್ದಾರೆ. ಒಬ್ಬರಿಗೆ 8 ಶುಚಿ ಸ್ಯಾನಿಟರಿ ನ್ಯಾಪ್‌ಕಿನ್‌ ಪ್ಯಾಕ್‌ ನೀಡಲಾಗುತ್ತದೆ. ಒಂದರಲ್ಲಿ 10 ನ್ಯಾಪ್‌ಕಿನ್‌ಗಳಂತೆ 80 ನ್ಯಾಪ್‌ಕಿನ್‌ ಏಕಕಾಲಕ್ಕೆ ವಿತರಿಸಲಾಗುತ್ತದೆ. ಇದರ ಬಳಕೆಗೆ ಎರಡು ವರ್ಷದ ಅವಧಿ ಇದೆ. ಶಾಲೆಗೆ ಸ್ಯಾನಿಟರಿ ಪ್ಯಾಡ್‌ ವಿತರಿಸುವ ಕೆಲಸವನ್ನು ಟೆಂಡರ್‌ ವಹಿಸಿಕೊಂಡ ಸಂಸ್ಥೆಯೇ ಮಾಡಲಿದೆ.

40.50 ಕೋಟಿ ಮಂಜೂರು
ರಾಜ್ಯದ ಶಾಲೆ, ಪದವಿಪೂರ್ವ ಹಾಗೂ ವಸತಿ ನಿಲಯದಲ್ಲಿರುವ ಹದಿಹರೆಯದ ಹೆಣ್ಮಕ್ಕಳಿಗೆ ಶುಚಿ ಯೋಜನೆಯಡಿ ಪ್ಯಾಡ್‌ ವಿತರಿಸಲು 40.50 ಕೋಟಿ ರೂ. ಮಂಜೂರು ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ಯೂನಿಟ್‌ (8 ಸ್ಯಾನಿಟರಿ ನ್ಯಾಪ್‌ಕಿನ್‌)ಗೆ 27.70 ರೂ. ನಿಗದಿಪಡಿಸಿದ್ದು, ಆ ಮೂಲಕ ಒಬ್ಬ ಫ‌ಲಾನುಭವಿಗೆ ಸರಕಾರ ಸುಮಾರು 222 ರೂ. ನಿಗದಿಪಡಿಸಿದೆ.

ಮೈಸೂರು ವಿಭಾಗ 8,137, ಕಲಬುರಗಿ ವಿಭಾಗ 5,036, ಬೆಂಗಳೂರು ವಿಭಾಗ 10,193, ಬೆಳಗಾವಿ ವಿಭಾಗ 9,602 ಸೇರಿ ಒಟ್ಟು 32,968 ಶಾಲೆ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು, ವಸತಿ ನಿಲಯದ ಸಂಸ್ಥೆಗಳಿಗೆ ಸ್ಯಾನಿಟರಿ ಪ್ಯಾಡ್‌ ಸರಬರಾಜಾಗಲಿದೆ.

ರಾಜ್ಯದ ಶಾಲಾ ವಿದ್ಯಾರ್ಥಿನಿಯರಿಗೆ ಶುಭ ಸುದ್ದಿ : ‘ಶುಚಿ ಯೋಜನೆ’ ಮತ್ತೆ ಪುನರಾರಂಭದ ಮುನ್ಸೂಚನೆ
ರಾಜ್ಯದ ಎಲ್ಲಾ ಸರ್ಕಾರಿ ಅನುಧಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್ ನೀಡುವ ‘ಶುಚಿ ಯೋಜನೆ’ ಪುನರಾರಂಭದ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ಎಂಡಿ ಚಿದಾನಂದ ಎಸ್ ವಟಾರೆ ಅವರು ಈ ಬಗ್ಗೆ ಸುಳಿವನ್ನು ನೀಡಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆದರೆ ಕರ್ನಾಟಕದ ಎಲ್ಲಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿನ ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್ಕಿನ್ ಒದಗಿಸುವ ಶುಚಿ ಯೋಜನೆಯು ಸೆಪ್ಟೆಂಬರ್ 10 ರಿಂದ ಮತ್ತೆ ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿದುಬಂದಿದೆ.

ಪದವಿಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರಿಗೆ ಮುಟ್ಟಿನ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುವ ಶುಚಿ ಯೋಜನೆಯನ್ನು ಅಂದಿನ ಕಾಂಗ್ರೆಸ್ ಸರ್ಕಾರ 2013-14 ರಲ್ಲಿ ಜಾರಿಗೊಳಿಸಿತ್ತು. ಆದರೆ ಕೋವಿಡ್ ಸಂದರ್ಭದಲ್ಲಿ ವಿತರಣೆ ಮತ್ತು ಹಣಕಾಸಿನ ಕೊರತೆಯ ನೆಪವೊಡ್ಡಿ ಬಿಜೆಪಿ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು.

ಇದರಿಂದ ಹಣ ನೀಡಿ ಸ್ಯಾನಿಟರಿ ಪ್ಯಾಡ್ ಖರೀದಿ ಮಾಡಲು ಸಾಧ್ಯವಾಗದೆ ಬಡಮಕ್ಕಳು ಸಂಕಷ್ಟಕ್ಕೆ ಸಿಲುಕುವಂತಾಗಿತ್ತು. ಇದೀಗ ಸರ್ಕಾರ ಯೋಜನೆ ಪುನರಾರಂಭ ಮಾಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳ ಮುಖದಲ್ಲಿ ಸಂತಸ ಮೂಡುವಂತೆ ಮಾಡಿದೆ.

ಪ್ರಸ್ತುತ ಈ ಯೋಜನೆಯಡಿಯಲ್ಲಿ 34,369 ಹಾಸ್ಟೆಲ್ ಹಾಗೂ ಶಾಲೆಗಳನ್ನು ಗುರುತಿಸಲಾಗಿದೆ. 17.99 ಲಕ್ಷದಷ್ಟು ವಿದ್ಯಾರ್ಥಿನಿಯರು ಈ ಯೋಜನೆಯ ಫಲಾನುಭವಿಗಳಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಜಂಟಿಯಾಗಿ ಈ ಯೋಜನೆಯನ್ನು ರೂಪಿಸಿದೆ. ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಈ ಯೋಜನೆ ಹೆಚ್ಚು ಸಹಕಾರಿಯಾಗಲಿದೆ.

KSMSCL (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ) ವ್ಯವಸ್ಥಾಪಕ ನಿರ್ದೇಶಕರಾದ ಚಿದಾನಂದ ಎಸ್ ವಟಾರೆ ಅವರು ಮಾತನಾಡಿ, ಯೋಜನೆಗೆ ಈಗಾಗಲೇ ಟೆಂಡರ್ ಕರೆದಿದ್ದು, ಆಗಸ್ಟ್ ಅಂತ್ಯದೊಳಗೆ ಅಂತಿಮಗೊಳಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಈ ಯೋಜನೆ ಅಡಿಯಲ್ಲಿ 2023-24 ನೇ ಸಾಲಿನ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ಘಟಕದಲ್ಲಿ ಪ್ರತಿ ಹೆಣ್ಣುಮಕ್ಕಳಿಗೆ ಹತ್ತು ನ್ಯಾಪ್ಕಿನ್ಗಳನ್ನು ಹೊಂದಿರುವ ಎಂಟು ಪ್ಯಾಕೆಟ್ಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.