siddaramayya – Peepal Media

ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಹೊಸ ದೆಹಲಿ: ಕಾಂಗ್ರೆಸ್ ಹೈಕಮಾಂಡ್​ ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.

ಕೇವಲ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಪೂರ್ತಿ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ನಿರ್ಮಲಾ ಸೀತಾರಾಮನ್‌ ಅವರ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿ, ಹೊಸ ಹೆದ್ದಾರಿಗಳ ಬಗ್ಗೆ ನಿತಿನ್‌ ಗಡ್ಕರಿ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ನೇತ್ರ ಜ್ಯೋತಿ ಕಾಲೇಜು ಪ್ರಕರಣ; SIT ಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
ಮಂಗಳೂರು, ಆಗಸ್ಟ್ 01: ಉಡುಪಿ ಕಾಲೇಜೊಂದರಲ್ಲಿ ಮೊಬೈಲ್ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಯೂ ಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಈಗಾಗಲೇ FIR ಆಗಿದೆ. ತನಿಖೆಯನ್ನು DYSP ಮಟ್ಟದ ಅಧಿಕಾರಿ ಮಾಡುತ್ತಿದ್ದು, ಪ್ರಕರಣವನ್ನು ಎಸ್.ಐ.ಟಿಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮಕ್ಕಳಾಟಿಕೆಯಾಗಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ ಎಂದರು. ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್. ಐ.ಆರ್. ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದರು. ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ ಎಂದ ಮೇಲೆ ಪ್ರಕರಣವನ್ನು SITಗೆ ವಹಿಸುವ ಪ್ರಶ್ನೆ ಉದ್ಬವವಾಗುವುದಿಲ್ಲ ಎಂದು ಅವರು ಹೇಳಿದರು.

ಪ್ರಗತಿ ಪರಿಶೀಲನೆ
ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್ ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ನೈತಿಕ ಪೊಲೀಸ್ ಗಿರಿ: ನಿರ್ದಾಕ್ಷಿಣ್ಯ ಕ್ರಮ
ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳುವಂತಿಲ್ಲ ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಸೌಜನ್ಯ ಪ್ರಕರಣ: ಮೇಲ್ಮನವಿ ಸಲ್ಲಿಸುವ ಕುರಿತು ಪರಿಶೀಲನೆ
ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಿಬಿಐ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ಅವರ ಪೋಷಕರು ಹಾಗೂ ಹೋರಾಟಗಾರರು ಈ ಪ್ರಕರಣದ ಮರುತನಿಖೆಗೆ ಒತ್ತಾಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಕ್ರಮ ಕೈಗೊಳ್ಳಬಹುದೆಂದು ವಿಚಾರ ಮಾಡಲಾಗುದು. ಕಾನೂನಿನ ಪ್ರಕಾರ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದರು. ಅಧಿಕಾರಿಗಳಿಂದ ಲೋಪವಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖವಿರುವ ಬಗ್ಗೆ ಉತ್ತರಿಸಿ, ತೀರ್ಪು ಓದಿದ ನಂತರ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದರೆ ಸಲ್ಲಿಸಲಾಗುವುದು ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಅಥವಾ ವ್ಯಕ್ತಿ ಯ ವಿರುದ್ಧವಾಗಿ ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟೀಕೆ ಮಾಡಿದರೂ ಕ್ರಮ ಕೈಗೊಳ್ಳುತ್ತಿದ್ದೀರಿ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಟೀಕೆ ಮಾಡಿದರೆ ಕ್ರಮ ತೆಗೆದುಕೊಳ್ಳುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ತೆಗೆದುಕೊಳ್ಳಲಾಗುವುದು ಎಂದರು. ಕುಟುಂಬದವರ ಮೇಲೆ ಸುಳ್ಳು ಸುದ್ದಿ ಹಬ್ಬಿಸುವುದು, ವೈಯಕ್ತಿಕವಾಗಿ ತೇಜೋವಧೆ ಮಾಡುವುದು ಬೇರೆ ಎಂದರು.

ಪರಿಸರ ಸಂರಕ್ಷಣೆಯಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ
ಕಸ್ತೂರಿ ರಂಗನ್ ವರದಿ ಬಗ್ಗೆ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಯ ವಿಚಾರದಲ್ಲಿ ಸರ್ಕಾರ ಹಿಂದೆಬೀಳುವುದಿಲ್ಲ ಎಂದರು.

ಬಿಟ್ ಕಾಯಿನ್
ಬಿಟ್ ಕಾಯಿನ್ ವಿಚಾರದಲ್ಲಿ SIT ವತಿಯಿಂದ ಇನ್ನೂ ಯಾರಿಗೂ ನೋಟೀಸು ಹೋಗದಿರುವ ಬಗ್ಗೆ ಮಾತನಾಡಿ SIT ಕ್ರಮವನ್ನು ವಹಿಸುತ್ತದೆ ಎಂದರು.

ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ವಿಶೇಷ ಸಚಿವ ಸಂಪುಟ ಸಭೆ
ಬೆಂಗಳೂರು ಜು 19:  ಚುನಾವಣೆ ಪೂರ್ವ ಕೊಟ್ಟಿದ್ದ ಮಾತಿನಂತೆ ಮೊದಲ ಅಧಿವೇಶನದಲ್ಲೇ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಮೀನು ಪರಭಾರೆ ನಿಷೇಧ (ತಿದ್ದುಪಡಿ) ಮಸೂದೆಗೆ, ತಿದ್ದುಪಡಿ ಮಸೂದೆ ಮಂಡಿಸಲು ವಿಶೇಷ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಒಪ್ಪಿಗೆ ಪಡೆದಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಎರಡು ದಿನಗಳ ಮೊದಲು ದಲಿತ ಸಮುದಾಯಗಳ ಮುಖಂಡರು, ವಕೀಲರುಗಳ ಸಭೆ ನಡೆಸಿದ್ದರು. ಈ ಸಭೆಯಲ್ಲಿ ವ್ಯಕ್ತವಾದ ಒಕ್ಕೊರಲ ತೀರ್ಮಾನದಂತೆ ದೂರು ದಾಖಲಿಸಲು ಇರುವ ಕಾಲಮಿತಿ ತೆಗೆಯಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಆ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಚಾರಿತ್ರಿಕ ಹೆಜ್ಜೆ ಇಟ್ಟಿದೆ.

ತಿದ್ದುಪಡಿಯಲ್ಲಿ ಏನಿದೆ?

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಹಂಚಿಕೆಯಾದ ಜಮೀನನ್ನು ಸರ್ಕಾರದ ಅನುಮತಿಯಿಲ್ಲದೆ ಪರಭಾರೆ ಮಾಡಿದ ಸಂದರ್ಭದಲ್ಲಿ ಜಮೀನು ಮಾಲೀಕರು ಕಾಯ್ದೆಯ ಸೆಕ್ಷನ್‌ 5(1) ರನ್ವಯ ದೂರು ದಾಖಲಿಸಲು ಕಾಲಮಿತಿ ತೆಗೆದು ಹಾಕುವ ಕುರಿತು ಕಾಯ್ದೆ ತಿದ್ದುಪಡಿ ಮಾಡಲು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

2023-24ನೇ ಆಯವ್ಯಯದಲ್ಲಿ ಪಿಟಿಸಿಎಲ್‌ ಕಾಯ್ದೆಗೆ ತಿದ್ದುಪಡಿ ತಂದು ಇನ್ನಷ್ಟು ಬಲಪಡಿಸುವ ಕುರಿತು ಪ್ರಸ್ತಾಪಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಸ್ತುತ ಅಧಿವೇಶನದಲ್ಲಿಯೇ ತಿದ್ದುಪಡಿ ಮಂಡಿಸುವ ಗುರಿಯೊಂದಿಗೆ ಮುಂದಡಿಯಿಟ್ಟಿದ್ದಾರೆ. ಜುಲೈ 17ರಂದು ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಅಭಿಪ್ರಾಯ ಪಡೆದಿದ್ದರು. ಇದೀಗ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿಗೆ ಅನುಮೋದನೆ ಪಡೆದುಕೊಂಡು ವಿಧಾನಮಂಡಲದಲ್ಲಿ ವಿಧೇಯಕ ಮಂಡನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ರಾಹುಲ್‌ ಗಾಂದಿಯವರನ್ನು ಬೆಂಬಲಿಸಿ ಕೆಪಿಸಿಸಿ ಮೌನ ಪ್ರತಿಭಟನೆ; ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿ
ಬೆಂಗಳೂರು,ಜುಲೈ 12: ಮೋದಿ ಉಪನಾಮ ಕೇಸಿನ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡಿರುವ ಕ್ರಮವನ್ನು ಖಂಡಿಸಿ ಇಡೀ ದಿನ ಕಾಂಗ್ರೆಸ್ ದೇಶಾದ್ಯಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನವಾಗಿ ಪ್ರತಿಭಟನೆ ನಡೆಸಿದ್ದಾರೆ.

ʼಸತ್ಯದ ಘರ್ಜನೆ ಮೊಳಗಲಿ ಎನ್ನುವ ಘೋಷಣೆʼ ಇರುವ ಫಲಕವನ್ನು ಹಿಡಿದು ಧರಣಿಯಲ್ಲಿ ಕುಳಿತ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮುಂತಾದವರು ಭಾಗವಹಿಸಿದ್ದರು.

ರಾಜ್ಯಾದ್ಯಂತ ಈ ಕುರಿತು ಪ್ರತಿಭಟನೆಗಳು ನಡೆಯುತ್ತಿದ್ದು ಪ್ರತಿಭಟನೆಯಲ್ಲಿ ಸ್ಥಳೀಯ ನಾಯಕರು ಪಾಲ್ಗೊಳ್ಳುತ್ತಿದ್ದಾರೆ

ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ಚಿತ್ರ

ಬೆಂಗಳೂರಿನಲ್ಲಿ ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಹಿಸಿದ್ದು, ರಾಹುಲ್ ಗಾಂಧಿಯವರ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಇಂದು ಬೆಳಗಿನಿಂದ ಸಂಜೆಯವರೆಗೂ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಪ್ರತಿಭಟನೆ ಬಳಿಕ ಮಾಧ್ಯಮಗಳೊಡನೆ ಮಾತನಾಡಿದ ಡಿಸಿಎಂ, ಡಿ.ಕೆ. ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ 7 ಲಕ್ಷ ಮತಗಳ ಅಂತರದಲ್ಲಿ ಗೆದ್ದಿರುವ ರಾಹುಲ್ ಗಾಂಧಿ ಅವರ ಅನರ್ಹತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರಾಳ ಅಧ್ಯಾಯ. ನಮ್ಮ ರಾಜ್ಯದಲ್ಲಿ ಮಾಡಿದ ಭಾಷಣ ಇಟ್ಟುಕೊಂಡು ಬಿಜೆಪಿ ಕುತಂತ್ರ ಮಾಡಿದೆ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ನಿರೀಕ್ಷೆಯಿತ್ತು. ತೀರ್ಪಿನ ವಿಚಾರವಾಗಿ ನಾವು ಮಾತನಾಡುವುದಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಧಾನಿ ಆಗಬಹುದಿತ್ತು. ಆದರೆ, ದೇಶಕ್ಕೆ ಆರ್ಥಿಕ ತಜ್ಞ ಅಗತ್ಯವಿದೆ ಎಂದು ಅಧಿಕಾರ ತ್ಯಾಗ ಮಾಡಿದರು. ರಾಹುಲ್‌ ಗಾಂಧಿ ಭಾರತ ಜೋಡೋ ಯಾತ್ರೆ ಮೂಲಕ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಭಾರತ ಒಂದುಗೂಡಿಸಲು ಪ್ರಯತ್ನಿಸಿದರು. ಅದರಿಂದ ಅವರಿಗೆ ಸಿಕ್ಕ ಜನಬೆಂಬಲ ಸಹಿಸದೆ ಬಿಜೆಪಿ ಅವರ ಸದಸ್ಯತ್ವ ಅನರ್ಹಗೊಳಿಸಲಾಗಿದೆಯೆಂದು ಅವರು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಂತ್ರಿಗಳಾದ ಕೆ.ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜ್, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿ ರಾಹು‌ಲ್‌ ಗಾಂದಿಯವರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.

2024ರ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಆಡಳಿತದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ
2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿಯ ಹಿಂದಿನ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳು ಮತ್ತು ಅಕ್ರಮಗಳ ಬಗ್ಗೆ ತಮ್ಮ ಸರ್ಕಾರ ತನಿಖೆ ನಡೆಸಲಿದೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.

ಮೂಲಗಳ ಪ್ರಕಾರ, ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವ ಕುರಿತು ಸರ್ಕಾರ ಯೋಜಿಸುತ್ತಿದೆ.

ಚುನಾವಣಾ ಪೂರ್ವದಲ್ಲಿ ತಮ್ಮ ಪಕ್ಷ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಲಿದೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಐದು ಭರವಸೆಗಳ ಅನುಷ್ಠಾನದಿಂದ ಬೊಕ್ಕಸಕ್ಕೆ ವರ್ಷಕ್ಕೆ 59 ಸಾವಿರ ರೂ. ವೆಚ್ಚವಾಗಲಿದ್ದು, ಈ ವರ್ಷ ಆಡಳಿತದ ಮೇಲೆ ಸ್ವಲ್ಪ ಹೆಚ್ಚಿನ ಹೊರೆಯಾಗುತ್ತದೆ ಎಂದರು.

“ನಾವು ಹಗರಣಗಳ ತನಿಖೆಯನ್ನು ನಡೆಸುತ್ತೇವೆ. ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಮತ್ತು ಅದರಲ್ಲಿ ಅಕ್ರಮಗಳು ನಡೆದಿರುವ ಆರೋಪಗಳಿವೆ. ನಾವು ಅದನ್ನು ತನಿಖೆ ಮಾಡುತ್ತೇವೆ. ಅಲ್ಲದೆ, 40 ಪರ್ಸೆಂಟ್ ಕಮಿಷನ್ ಆರೋಪದ ಕುರಿತಾಗಿಯೂ ತನಿಖೆ ನಡೆಸಲಿದ್ದೇವೆ. ಕೋವಿಡ್ ಸಮಯದಲ್ಲಿ ಆರೋಗ್ಯ ಸಂಬಂಧಿತ ಖರೀದಿಗಳಲ್ಲಿ ಅಕ್ರಮಗಳು ನಡೆದಿವೆ. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಕ್ರಮಗಳು ಮತ್ತು ಬಿಟ್‌ಕಾಯಿನ್ ಹಗರಣಗಳೆಲ್ಲವನ್ನೂ ತನಿಖೆ ಮಾಡಲಾಗುವುದು” ಎಂದು ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿಯಿಂದ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ; ಅದನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು ಎಂದರು.

ಕೊರೋನಾ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದ ಅವರು, ”ಇಬ್ಬರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ಅಂದಿನ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದರು, ಆದರೆ ಆಮ್ಲಜನಕ ಕೊರತೆಯಿಂದಾಗಿ ಹೆಚ್ಚಿನ ಸಾವುನೋವುಗಳು ಸಂಭವಿಸಿದ್ದವು. ಈ ಕುರಿತು ಅವರು ಸುಳ್ಳು ಹೇಳಿದ್ದು ಈ ಬಗ್ಗೆ ನಾವು ತನಿಖೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರೇ ನಮಗೆ ಮಾದರಿ – ಜಮೀರ್ ಅಹಮದ್
ಬೆಂಗಳೂರು : ವಿಧಾನಮಂಡಲ ಕಲಾಪದಲ್ಲಿ ಭಾಗವಹಿಸುವಿಕೆ ಹಾಗೂ ಸದನದಲ್ಲಿ ಹಾಜರಾತಿ ವಿಚಾರದಲ್ಲಿ ನಮಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾದರಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಬೆಂಗಳೂರಿನ ಹೊರವಲಯದ ಕ್ಷೇಮವನದಲ್ಲಿ ಮೊದಲ ಬಾರಿಗೆ ಆಯ್ಕೆಯಾದ ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಮಾತನಾಡಿದ ಅವರು, ತುರ್ತು ಸಂದರ್ಭ ಹೊರತುಪಡಿಸಿ ಸದನದ ಕಲಾಪಕ್ಕೆ ಸಿದ್ದರಾಮಯ್ಯ ಸಾಹೇಬರು ಗೈರು ಆಗಿದ್ದು ಕಡಿಮೆ. ಹೀಗಾಗಿ ಅವರೇ ನಮಗೆಲ್ಲ ಮಾದರಿ ಎಂದು ಹೇಳಿದರು.

ಅಧಿವೇಶನ ಸಂದರ್ಭದಲ್ಲಿ ನಾವು ಒಂದು ದಿನ ಸದನಕ್ಕೆ ಬಾರದಿದ್ದರೆ ಏಕೆ ಬರಲಿಲ್ಲ ಎಂದು ಕೇಳುತ್ತಾರೆ. ಇದು ಸದನ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವರ ಕ್ರಿಯಾಶೀಲತೆ ಮತ್ತು ಉತ್ಸಾಹಕ್ಕೆ ಸಾಕ್ಷಿ ಎಂದು ತಿಳಿಸಿದರು.

ಕಲಿಕೆ ಎಂಬುದು ನಿರಂತರ. ಅದರಲ್ಲೂ ಶಾಸನ ರೂಪಿಸುವ ಮಹತ್ತರ ಜವಾಬ್ದಾರಿ ಹೊಂದಿರುವ ಶಾಸಕರು ಅಧ್ಯಯನ ಶೀಲರಾಗಬೇಕು. ಈ ಮೂರು ದಿನಗಳ ತರಬೇತಿ ಅತಿ ಉಪಯುಕ್ತ. ಇಂತಹ ತರಬೇತಿ ಶಿಬಿರದ ಅಗತ್ಯತೆ ಇದೆ. ಶಿಬಿರ ಆಯೋಜಿಸಿರುವ ಸ್ಪೀಕರ್ ಖಾದರ್ ಅವರಿಗೆ ನಾನು ಶಾಸಕರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.

ಶಾಸಕರು ಏನೇ ಕೆಲಸ ಇದ್ದರೂ ಮೂರು ದಿನ ಶ್ರದ್ದೆಯಿಂದ ತರಬೇತಿಯಲ್ಲಿ ಪಾಲ್ಗೊಂಡು ಎಲ್ಲ ಹಿರಿಯರ ಮಾತು ಆಲಿಸಿ. ಇದು ನಿಮಗೆ ಮುಂದಿನ ಐದು ವರ್ಷ ಕ್ಷೇತ್ರದ ಜನರ ಸಮಸ್ಯೆ ಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು

ಮೊದಲನೇ ಬಾರಿ ಶಾಸಕರಾಗುವುದು ಸುಲಭ. ಅನುಕಂಪ, ವಿರೋಧಿ ಅಲೆ, ಹೊಸಮುಖಕ್ಕೆ ಅವಕಾಶ ಹೀಗೆ ಹಲವು ಅಂಶಗಳು ಕಾರಣವಾಗುತ್ತದೆ. ಆದರೆ ಎರಡನೇ ಬಾರಿಗೆ ಆಯ್ಕೆ ಆಗಬೇಕಾದರೆ ಜನರ ಸೇವೆ ಮಾಡಿದ್ದರಷ್ಟೇ ಗೆಲ್ಲಲು ಸಾಧ್ಯ. ಅಧಿವೇಶನ ಸಂದರ್ಭದಲ್ಲಿ ಕ್ಷೇತ್ರದ ಸಮಸ್ಯೆ ಗಳ ಬಗ್ಗೆ ಸರ್ಕಾರ ಹಾಗೂ ಸಚಿವರ ಗಮನಕ್ಕೆ ತರುವುದು ಹೇಗೆ, ಕ್ಷೇತ್ರದ ಜನರ ಧ್ವನಿಯಾಗಿ ಕೆಲಸ ಮಾಡುವುದು ಹೇಗೆ ಎಂಬ ಬಗ್ಗೆಯೂ ತರಬೇತಿ ಶಿಬಿರದಲ್ಲಿ ನಿಮಗೆ ಉಪಯುಕ್ತ ಮಾಹಿತಿ ಸಿಗಲಿದೆ. ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಸ್ಪೀಕರ್ ಯು. ಟಿ. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್. ಕೆ. ಪಾಟೀಲ್, ವಿಧಾನ ಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಕ್ಷೇಮ ವನದ ಸುರೇಂದ್ರ ಹೆಗ್ಡೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸ್ಪೀಕರ್ ಅವರು ಜಮೀರ್ ಅಹಮದ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ವಿಧಾನಸೌಧ: ವೈಚಾರಿಕತೆಯ ಬಾಗಿಲು ತೆರೆದ ಸಿದ್ಧರಾಮಯ್ಯ
ರಾಜಕಾರಣಿಗಳೆಂದರೆ ಸದಾ ಕಂದಾಚಾರ, ವಿಚಿತ್ರ ನಂಬಿಕೆಗಳು, ದೇವ ಮಾನವರ ಮೊರೆ ಹೋಗುವವರು ಎನ್ನುವ ನಂಬಿಕೆ ಜನಸಾಮಾನ್ಯರಲ್ಲಿದೆ. ಆದರೆ ಕರ್ನಾಟಕದ ಮಟ್ಟಿಗೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸತೀಶ್‌ ಜಾರಕಿಹೊಳಿಯವರಂತಹ ರಾಜಕಾರಣಿಗಳು ಭಿನ್ನ ನೆಲೆಯಲ್ಲಿ ನಿಲ್ಲುತ್ತಾರೆ.

ಈಗ ವಿಧಾನಸೌಧದ ತನ್ನ ಕಚೇರಿಯಲ್ಲಿ ಹೊಸದೊಂದು ಹೆಜ್ಜೆಯಿಡುವ ಮೂಲಕ ಸಿದ್ಧರಾಮಯ್ಯನವರು ಸುದ್ದಿಯಾಗಿದ್ದಾರೆ. ಈ ಬಾರಿ ಅವರು ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಪಶ್ಚಿಮ ದ್ವಾರ ತೆರೆಸಿದ್ದಾರೆ.

ಪಶ್ಚಿಮ ದ್ವಾರದ ಮೂಲಕ ಕಚೇರಿ ಪ್ರವೇಶಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ

ಇಂದು ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪಶ್ಚಿಮ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ದಕ್ಷಿಣ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ಪಶ್ಚಿಮದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡುತ್ತಾ ಅವರು “ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು” ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.

ಸಭೆ ಮುಗಿದ ಬಳಿಕ ಮತ್ತೆ ಅದೇ ದ್ವಾರದಿಂದ ಮುಖ್ಯಮಂತ್ರಿಗಳು ಹೊರಬಂದರು.

ಹಿಂದೆ ದೇವೇಗೌಡರು 3 ರೂಪಾಯಿಗೆ ಅಕ್ಕಿ ಕೊಟ್ಟಿದ್ದರು: ಕುಮಾರಸ್ವಾಮಿ
ಬೆಂಗಳೂರು: ಬಡವರಿಗೆ, ಅದರಲ್ಲಿಯೂ ನಗರ ಪ್ರದೇಶಗಳಲ್ಲಿ ವಾಸವಿರುವ ಆರ್ಥಿಕ ದುರ್ಬಲರಿಗೆ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗಲೇ ಅಗ್ಗದ ದರದಲ್ಲಿ ಅಕ್ಕಿ ನೀಡಿದ್ದರು. ಅವರ ಸಂಪುಟದಲ್ಲಿ ಸಚಿವರಾಗಿದ್ದ ಇಂದಿನ ಮುಖ್ಯಮಂತ್ರಿಗಳಿಗೆ ಈ ವಿಷಯ ಮರೆತು ಹೋಗಿದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.

ಅಕ್ಕಿ ಗ್ಯಾರಂಟಿ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವರು ಇವತ್ತು ಅಕ್ಕಿ ಗ್ಯಾರಂಟಿ, ಅಕ್ಕಿ ಭಾಗ್ಯ ಎಂದು ಹೇಳುತ್ತಿದ್ದಾರೆ. ಆದರೆ, ದೇವೇಗೌಡರು ಹಿಂದೆಯೇ ಕಡಿಮೆ ದರದಲ್ಲಿ ಅಕ್ಕಿ ನೀಡುವ ಮೂಲಕ ಬಡಜನರ ನೆರವಿಗೆ ಧಾವಿಸಿದ್ದರು ಎಂದರು.

1995ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಜೆಟ್ ಮಂಡಿಸುತ್ತಾರೆ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಕೆಜಿಗೆ 4.54 ರೂ. ಇದ್ದ ಅಕ್ಕಿ ದರವನ್ನ ಕೇಂದ್ರ ಸರ್ಕಾರ ಏಕಾಏಕಿ 7.49 ರೂ.ಗಳಿಗೆ ಹೆಚ್ಚಳ ಮಾಡಿತು. ಆಗ ಮುಖ್ಯಮಂತ್ರಿ ಆಗಿದ್ದ ದೇವೇಗೌಡರು ಧೈರ್ಯ ಮಾಡಿ 30 ರೂಪಾಯಿಗೆ ಕೆಜಿ ಅಕ್ಕಿ ಕೊಡುವಂತೆ ಆದೇಶ ಹೊರಡಿಸಿದರು. ಬಹುಶಃ ಅವರಿಂದಲೇ ರಾಜಕೀಯವಾಗಿ ಬೆಳೆದವರಿಗೆ ಇದು ನೆನಪಿರಲಿಕ್ಕಿಲ್ಲ. ಈಗ ಆಪರೇಶನ್ ಹಸ್ತ ಮಾಡುತ್ತೇವೆ ಎಂದು ಮೀಸೆ ತಿರುವುತ್ತಿದ್ದಾರೆ. ಜನತಾದಳ ಪಕ್ಷವನ್ನು ಮುಗಿಸೋದು ಅಷ್ಟು ಸುಲಭ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು ಕುಮಾರಸ್ವಾಮಿ ಅವರು.

ಮತಕ್ಕಾಗಿ, ಅಧಿಕಾರಕ್ಕಾಗಿ ಅಕ್ಕಿ ಫ್ರೀ ಎಂದವರು ಈಗ ಅಕ್ಕಿ ಕೊಡುವ ಮತುಕೊಟ್ಟಿದ್ದ ಇವರು ದೇವೇಗೌಡರ ಬದ್ಧತೆಯನ್ನು ಒಮ್ಮೆ ನೆನಪು ಮಾಡಿಕೊಳ್ಳಬೇಕು. ಕೈಲಾಗದವನು ಮೈ ಪರಚಿಕೊಂಡ ಎನ್ನುವಂತೆ ಇವರು ಕೊಟ್ಟ ಭರವಸೆ ಈಡೇರಿಸಲಾಗದೆ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಟೀಕಿಸಿದರು.

ಇದು ಪರ್ಸೆಂಟೇಜ್ ಸರ್ಕಾರ:

ಇದು ಕೂಡ ಪರ್ಸೆಂಟೆಜ್ ಸರ್ಕಾರ. ನಿಮಾಗೆ ಅನುಮಾನ ಇದೆಯಾ? ಎಂದು ಮಾಧ್ಯಮಗಳನ್ನು ಪ್ರಶ್ನೆ ಮಾಡಿದ ಕುಮಾರಸ್ವಾಮಿ ಅವರು, ಇದಕ್ಕಾಗಿಯೇ ಎಲ್ಲ ಇಲಾಖೆಗಳಲ್ಲಿ ಸಲಹೆಗಾರರು ಬಂದು ತುಂಬಿಕೊಂಡಿದ್ದಾರೆ. ಇದೆಲ್ಲಾ ಪರ್ಸೆಂಟೆಜ್ ವ್ಯವಸ್ಥೆಗೆ ಮಾಡಿಕೊಂಡಿರುವ ವ್ಯವಸ್ಥೆ ಎಂದು ಕುಟುಕಿದರು.

ನಮ್ಮದು ಸಂಪತ್ಪಭರಿದ ರಾಜ್ಯ. ಹಣಕ್ಕೆ ಕೊರತೆ ಇಲ್ಲ. ನಿರೀಕ್ಷೆಗೂ ಮೀರಿದ ತೆರಿಗೆ ಸಂಗ್ರಹ ಆಗುತ್ತಿದೆ. ಘೋಷಣೆ ಮಾಡಿಕೊಂಡು ಒದ್ದಾಡ್ತಾ ಇದ್ದಾರೆ ಇವರು. ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಇವರು ಈಗ ಪರ್ಸೆಂಟೇಜ್ ಬಗ್ಗೆ ತಲೆಕೆಡಿಸಿಕೊಂಡು ಕೂತಿದ್ದಾರೆ. ಇದು ಕೂಡ ಪರ್ಸೆಂಟೇಜ್ ಸರಕಾರವೇ ಆಗಿದೆ ಎಂದು ಅವರು ದೂರಿದರು.

ಅಕ್ಕಿ ತರಲು ರೇಟ್ ಜಾಸ್ತಿ ಮಾಡೋದು ಇವರೇ. ಕಮೀಷನ್ ಗಾಗಿ ರೇಟ್ ಜಾಸ್ತಿ ಮಾಡ್ತಾರೆ. ಕಮಿಷನ್ ಕಡಿಮೆ ಮಾಡಿದರೆ ಅಕ್ಕಿ ದರ ಕಡಿಮೆ ಆಗತ್ತದೆ. ಇವರ ಯೋಜನೆಗೆ ಕೇಂದ್ರದ ಮುಂದೆ ಕೈಚಾಚೋದು ಏಕೆ? ನಾನು ಸಾಲಮನ್ನಾ ಘೋಷಣೆ ಮಾಡಿದಾಗ ಕೇಂದ್ರದ ಬಳಿ ಹಣ ಕೇಳಲಿಲ್ಲ ಎಂದು ಅವರು ಹೇಳಿದರು.

ಸಿಎಂ ಹಿಂದೆ ಸುತ್ತುವ ಮಂತ್ರಿಗಳು:

ಸರಕಾರ ಬಂದು ಒಂದು ತಿಂಗಳ ಮೇಲಾಯಿತು. ಜನರು ಕಷ್ಟದಲ್ಲಿದ್ದಾರೆ. ಜನ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ವಿವಿಧ ಇಲಾಖೆಗಳ ಮಂತ್ರಿಗಳು ಇನ್ನೂ ತಮ್ಮ ಇಲಾಖೆಗಳ ಸಭೆಗಳನ್ನೇ ನಡೆಸುತ್ತಿಲ್ಲ. ಮುಖ್ಯಮಂತ್ರಿ ಹಿಂದೆ ಮುಂದೆ ಓಡಾಡಿಕೊಂಡಿದ್ದಾರೆ. ದಿನದ 24 ಗಂಟೆಯೂ ಮುಖ್ಯಮಂತ್ರಿ ಜತೆ ಇವರಿಗೇನು ಕೆಲಸ. ಸಿಎಂ ಮನೆಯಲ್ಲೂ ಇವರೇ, ಸಿಎಂ ಕಚೇರಿಯಲ್ಲೂ ಇವರೇ, ಸಿಎಂ ದಿಲ್ಲಿಗೆ ಹೋದರೆ ಅಲ್ಲೂ ಇವರೇ. ಎನ್ ನಡೀತಿದೆ ಇಲ್ಲಿ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಮುಳಬಾಗಿಲು ಕ್ಷೇತದ ಶಾಸಕ ಸಮೃದ್ಧಿ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಉಸ್ಥಿತರಿದ್ದರು.

ಅನ್ನಭಾಗ್ಯ ಯೋಜನೆಗೆ ಸಹಾಯ ಮಾಡಲು ಎಎಪಿ ಸಿದ್ಧ ; ಭಗವಂತ್ ಮಾನ್ ಅವರೊಂದಿಗೆ ಸಿ ಎಂ ಸಿದ್ದರಾಮಯ್ಯ ಮಾತುಕತೆ
ಬೆಂಗಳೂರು: ಅಕ್ಕಿ ಕೊರತೆ ನೀಗಿಸಲು ರಾಜ್ಯಕ್ಕೆ  ಸಹಾಯ ಮಾಡಲು ಪಂಜಾಬ್ ಸರ್ಕಾರ ಸಿದ್ಧವಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷದ (ಎಎಪಿ) ಘಟಕ ಹೇಳಿದ ನಂತರ ಸಿಎಂ ಸಿದ್ದರಾಮಯ್ಯ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಮಾತುಕತೆ ನಡೆಸಿದರು.
ನಾವು ಈ ಹಿಂದೆ ಪಂಜಾಬ್ ಅನ್ನು ಸಂಪರ್ಕಿಸಿದ್ದೇವೆ, ಆದರೆ ಅವರು ನಮಗೆ ಅಕ್ಕಿ ಲಭ್ಯವಿಲ್ಲ ಎಂದು ಹೇಳಿದರು” ಎಂದು ಸಿದ್ದರಾಮಯ್ಯ ತಿಳಿಸಿದರು.

“ನಾವು ನ್ಯಾಷನಲ್ ಕೋಆಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್ (ಎನ್‌ಸಿಸಿಎಫ್), ಕೇಂದ್ರೀಯ ಭಂಡಾರದಿಂದಲೂ  ಬೆಲೆ, ಸಾಗಾಣಿಕೆ  ಮಾಹಿತಿಗಳನ್ನು ಕೇಳಿದ್ದೇವೆ ಮತ್ತು ಅವರು ಎಷ್ಟು ಒದಗಿಸಬಹುದು ಎಂಬುದನ್ನು ನೋಡುತ್ತೇವೆ” ಎಂದು ಸಿದ್ದರಾಮಯ್ಯ ಹೇಳಿದರು.

ಭಗವಂತ್ ಮಾನ್ ಅವರೊಂದಿಗಿನ ಮಾತುಕತೆಯ ನಂತರ, ಸಿದ್ದರಾಮಯ್ಯನವರು ಪಂಜಾಬ್‌ಗೆ ಭೇಟಿ ನೀಡಲು ಮತ್ತು ಬೆಲೆ ಮತ್ತು  ಸಾಗಾಣಿಕೆ ಸೇರಿದಂತೆ ಎಲ್ಲಾ ವಿವರಗಳನ್ನು ಸಂಗ್ರಹಿಸಲು ಸಿಎಂ ರಜನೀಶ್ ಗೋಯೆಲ್ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದ ಅಧಿಕೃತ ತಂಡವನ್ನು ನಿಯೋಜಿಸಿದ್ದಾರೆ.

ಅವರು ಸಿಎಂಗೆ ವರದಿಯನ್ನು ಸಲ್ಲಿಸುತ್ತಾರೆ, ನಂತರ ಅವರು ಸಮಂಜಸವಾಗಿದ್ದರೆ ಅವರು ಕರೆ ಮಾಡುತ್ತಾರೆ. ಅಕ್ಕಿ ರೈಲಿನ ಮೂಲಕ ಬರಬೇಕಾಗಿರುವುದರಿಂದ ನಾವು ಸಾಗಣೆಯ ಬಗ್ಗೆ ಚಿಂತಿಸುತ್ತಿದ್ದೇವೆ. ನಾವು ಈ ಬಗ್ಗೆ ಕೇಂದ್ರವನ್ನು ಸಂಪರ್ಕಿಸಬೇಕಾಗಬಹುದು ಮತ್ತು ನಮಗೆ ಗೊತ್ತಿಲ್ಲ. ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ, ”ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಹೇಳಿದರು.

ಯೋಜನೆ ಅನುಷ್ಠಾನಕ್ಕೆ ತಿಂಗಳಿಗೆ 840 ಕೋಟಿ ಹಾಗೂ ಒಂದು ವರ್ಷಕ್ಕೆ 10,092 ಕೋಟಿ ಅಗತ್ಯವಿದೆ ಎಂದು ಸಿಎಂ ಹೇಳಿದರು. ನಾವು ಸಂಪೂರ್ಣ ವೆಚ್ಚವನ್ನು ಭರಿಸಲು ಸಿದ್ದರಿದ್ದೇವೆ  ಜೋಳ ಮತ್ತು ರಾಗಿಯನ್ನು ತಲಾ ಎರಡು ಕೆಜಿ ವಿತರಿಸಿದರೂ ಆರು ತಿಂಗಳಿಗಾಗುವಷ್ಟು ಮಾತ್ರ ದಾಸ್ತಾನು ಇದೆ ಎಂದು ಹೇಳಿದರು

ಅಕ್ಕಿ ಕೊರತೆ ನೀಗಿಸಲು ಸಂಪೂರ್ಣ ಬೆಂಬಲ ನೀಡುತ್ತೇನೆ

ರಾಜ್ಯ ಎಎಪಿ ರಾಜ್ಯಾಧ್ಯಕ್ಷರಾದ ಪೃಥ್ವಿಯವರು  “ನಾನು ನಿನ್ನೆ ಪಂಜಾಬ್ ಸಿಎಂ ಭಗವಂತ್ ಮಾನ್ ಅವರೊಂದಿಗೆ ಮಾತನಾಡಿದ್ದೇನೆ  ಮತ್ತು ಅವರು ತಾತ್ವಿಕವಾಗಿ ಸಂಪೂರ್ಣ ಸಹಾಯ ಹಸ್ತವನ್ನು ನೀಡಲು ಸಿದ್ಧರಿದ್ದಾರೆ ಎಂದು  ಹೇಳಿದರು.. ಅಕ್ಕಿ ಕೊರತೆಯ ಸಮಸ್ಯೆಯನ್ನು ನೀಗಿಸಲು ನಾವು ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ.

ಭಾರತೀಯ ಆಹಾರ ನಿಗಮದ ಗೋದಾಮುಗಳಿಂದ ರಾಜ್ಯ ಸರ್ಕಾರಗಳಿಗೆ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಕೇಂದ್ರವು ಸ್ಥಗಿತಗೊಳಿಸಿದೆ . ಬಡವರ ಪರಯೋಜನೆ ವಿಚಾರದಲ್ಲಿ ದ್ವೇಷದ  ರಾಜಕೀಯ ಮಾಡುತ್ತಿದೆ  ಅವರು ಅನ್ನ ಭಾಗ್ಯ ಯೋಜನೆಯನ್ನು  ತಡೆಯಲು  ಪ್ರಯತ್ನಿಸುತ್ತಿದ್ದಾರೆ ಎಂದು ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದರು.  ಎಲ್ಲ ಅಡೆತಡೆಗಳ ನಡುವೆಯೂ ಜುಲೈ 1ರೊಳಗೆ ಯೋಜನೆ ಜಾರಿಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇವೆ ಎಂದರು.

ಸಿದ್ದರಾಮಯ್ಯ ಪರಿಶಿಷ್ಟ ಸಮುದಾಯಗಳತ್ತ ತಿರುಗಿಯೂ ನೋಡಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು: ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಣ್ಣೊರೆಸುವುದಿರಲಿ ಐದು ವರ್ಷಗಳ ಕಾಲ ಅವರ ಕಡೆ ತಿರುಗಿಯೂ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರದಂದು ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ʼ ಒಳಮೀಸಲಾತಿಗೆ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರು  ಈ ಕುರಿತ ವರದಿಯನ್ನು ತೆಗೆದು ನೋಡುವ ಧೈರ್ಯ ಇರಲಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ  ನಾವು ಪಾಠ ಕಲಿಯಬೇಕಿಲ್ಲ. ನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ತಿಳಿದಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ.  ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ಹಿಂತಿರುಗಿ ನೋಡಿದರೆ ಉತ್ತಮ ಎಂದು ಬೊಮ್ಮಾಯಿ ಹೇಳಿದ್ದಾರೆ.