sinema – Peepal Media

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಚಿತ್ರನಟಿ ರಮ್ಯಾ
ನಿನ್ನೆಯ ದಿನ ಹೊಸ ಸುದ್ದಿ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚಿತ್ರನಟಿ ರಮ್ಯಾ ತಮ್ಮ ಅಭಿಮಾನಿಗಳು ಮತ್ತು ಸಿನಿಮಾಸಕ್ತರಲ್ಲಿ ಕುತೂಹಲ ಮೂಡಿಸಿದ್ದರು. ಈಗಾಗಲೇ ರಮ್ಯಾ ಚಿತ್ರರಂಗಕ್ಕೆ ಮರು ಪ್ರವೇಶದ ಅವರ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಅದಕ್ಕೆ ಸರಿಯಾಗಿ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.

ಈ ಬಗ್ಗೆ ರಮ್ಯಾ ತಮ್ಮ ಅಧಿಕೃತ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಚಿತ್ರರಂಗದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅವರ ಸಂದೇಶ ಈ ಕೆಳಕಂಡಂತಿದೆ.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ನ ಮೂಲಕ ನಿರ್ಮಾಪಕಿ ಆಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮೆರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ OTT ಪ್ಲಾಟಫಾರಂಗಳಿಗಾಗಿ ಸಿನೆಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋಸ್ ಸಿದ್ಧವಾಗುತ್ತಿದೆ.

ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾ ವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.

ಇದರ ಜೊತೆಗೆ ವಿಜಯ ಕಿರಗಂದೂರು, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.

ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ
ಕೃತಜ್ಞತೆಗಳೊಂದಿಗೆ
ರಮ್ಯಾ

ಪ್ರಗತಿಪರ ಆಲೋಚನೆ, ಒಳ್ಳೆಯ ಉದ್ದೇಶಗಳನ್ನು ಹೊಂದಿರುವ ರಮ್ಯಾ ಅವರಿಂದ ಅವರ ನಿರ್ಮಾಣ ಸಂಸ್ಥೆಯ ಕಡೆಯಿಂದ ಈ ಮೂಲಕ ಸದಭಿರುಚಿಯ, ವಿಶಿಷ್ಟ ಪ್ರಯೋಗದ ಚಿತ್ರಗಳನ್ನು ನಿರೀಕ್ಷಿಸಬಹುದು. ರಮ್ಯಾ ಅವರ ಹೊಸ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ಚಿತ್ರರಂಗದಲ್ಲಿ ಹೆಚ್ಚು ಎತ್ತರಕ್ಕೆ ಬೆಳೆಯಲಿ ಎಂಬುದೂ ನಮ್ಮ ಹಾರೈಕೆ.

‘ವಿಕಿಪೀಡಿಯ’ ದ ಹೊಸ ಹಾಡು ಮೋಡಕ್ಕೆ ಮೋಡ ಎಂದು ಗುನುಗಿದ ರಘು ದೀಕ್ಷಿತ್
ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ತನ್ನ ಹೆಸರಿನಿಂದಲೇ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಹೆಣೆದಿದ್ದೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ 26ಕ್ಕೆ ತೆರೆಗೆ ಬರ್ತಿದ್ದು,  ಚಿತ್ರತಂಡ ಒಂದೊಂದೇ ಹಾಡುಗಳನ್ನು ಅನಾವರಣ ಮಾಡ್ತಿದೆ. ಇದೀಗ ಮೋಡಕ್ಕೆ‌ ಮೋಡ ಎಂಬ ಮೆಲೋಡಿ ಹಾಡನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ‌ ಮುಗ್ದರನ್ನಾಗಿ ಮಾಡುತ್ತಿದೆ.

ಪ್ರಮೋದ್ ಮರವಂತೆ ಅವರ ಸಾಹಿತ್ಯದ ಹಾಡಿಗೆ ರಾಕ್ ಅಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ. ಹಲವಾರು ಧಾರಾವಾಹಿಗಳಲ್ಲಿ ಮಿಂಚಿರುವ ಯಶವಂತ್ ಸಿನಿಮಾದಲ್ಲಿ ಮೊದಲ ಬಾರಿಗೆ ಹೀರೋ ಆಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ. ಡ್ರಾಮಾ, ಎಮೋಷನ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣ ಎಂದು ಹೇಳಿಕೊಳ್ಳುವ ವಿಕಿಪೀಡಿಯ ಚಿತ್ರಕ್ಕೆ ಚಿದಾನಂದ್ ಎಚ್‌.ಕೆ. ಅವರ ಛಾಯಾಗ್ರಹಣ,  ರಾಕೇಶ್ ಮತ್ತು ನೀಲಿಮ ಸಂಗೀತ, ರವಿಚಂದ್ರನ್ ಸಿ. ಸಂಕಲನವಿದೆ. ರಫ್ ಕಟ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗಿರುವ ಸಿನಿಮಾ 26ರಂದು ರಾಜ್ಯಾದ್ಯಂತ ತೆರೆಗೆ ಬರ್ತಿದೆ.

ಬೆಂಗಳೂರಿನಲ್ಲಿ ‘ಲೈಗರ್’ ಕ್ರೇಜ್ ಅಭಿಮಾನಿಗಳ ಪ್ರೀತಿಯಲ್ಲಿ ದೇವರ ಕಂಡ, ದೇವರಕೊಂಡ
ಟಾಲಿವುಡ್ ನಟ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ಅಭಿನಯದ ಬಹುನಿರೀಕ್ಷಿತ ಲೈಗರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 25ರಂದು ಚಿತ್ರ ತೆರೆಗೆ ಬರ್ತಿದೆ. ಈ ಹಿನ್ನೆಲೆ ಲೈಗರ್ ಟೀಂ ಅದ್ಧೂರಿಯಾಗಿ ಪ್ರಮೋಷನ್ ನಡೆಸ್ತಿದೆ. ಅದರಂತೆ ಬೆಂಗಳೂರಿನಲ್ಲೂ ಪ್ರಚಾರದ ಕಹಳೆ ಮೊಳಗಿಸಿದೆ. ಸಿನಿಮಾದ ಪ್ರಚಾರಕ್ಕೂ ಮುನ್ನ ಕೆಂಪೇಗೌಡ ಏರ್ ಪೋರ್ಟ್ ಗೆ ಬಂದಿಳಿದ ಚಿತ್ರದ ನಾಯಕ ವಿಜಯ್ ದೇವರಕೊಂಡ, ನಾಯಕಿ ಅನನ್ಯಾ ಪಾಂಡೆ ನೇರ ಏರ್ ಪೋರ್ಟ್ ನಿಂದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಭೇಟಿ ಕೊಟ್ಟು ಪುಷ್ಪ ನಮನ ಸಲ್ಲಿಸಿದರು. ಆ ಬಳಿಕ ಮಾಧ್ಯಮದೊಟ್ಟಿಗೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು.

ಕನ್ನಡದಲ್ಲಿಯೇ ಮಾತು ಆರಂಭಿಸಿದ ವಿಜಯ್ ಎಲ್ಲರೂ ಚೆನ್ನಾಗಿದ್ದೀರಾ ಎನ್ನುತ್ತಾ, ನಿಮ್ಮನ್ನೆಲ್ಲಾ ನೋಡಿ ಸಂತೋಷವಾಗಿದೆ. ಬೆಂಗಳೂರು ಯಾವಾಗಲೂ ನನಗೆ ಪ್ರೀತಿ ನೀಡಿದೆ. ಲೈಗರ್ ನನ್ನ ವೃತ್ತಿ ಜೀವನದ ದೊಡ್ಡ ಸಿನಿಮಾ. ಇದು ಮಾಸ್ ಎಂಟರ್ ಟೈನರ್ ಚಿತ್ರ. ನಾನು ಈ ಚಿತ್ರಕ್ಕೆ ಕನ್ನಡದಲ್ಲಿ ಡಬ್ ಮಾಡಲು ಪ್ರಯತ್ನಿಸಿದೆ. ಆದರೆ ಅದು ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ನನ್ನ ಪಾತ್ರಕ್ಕೆ ನಾನು ಡಬ್ ಮಾಡುತ್ತೇನೆ ಎಂದರು.

ಅಪ್ಪು ಜೊತೆಗಿನ ಒಡನಾಟದ ಬಗ್ಗೆ ಮೆಲುಕು ಹಾಕಿದ ವಿಜಯ್, ನಾನು ಬೆಂಗಳೂರಿಗೆ ಬಂದಾಗಲೆಲ್ಲ ಪುನೀತ್ ಅಣ್ಣನನ್ನು ಮೀಟ್ ಮಾಡಿ ಹೋಗುತ್ತಿದ್ದೆ. ಅವರು ನನ್ನ ಸಿನಿಮಾಗಳನ್ನು ನೋಡಿ ಫೋನ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರು. ಹಾಗೇ ಶಿವಣ್ಣ ಕೂಡ ನನ್ನ ಸಿನಿಮಾ ನೋಡಿ ಫೋನ್ ಮಾಡಿ ಮಾತನಾಡಿದ್ದು ಇದೆ ಅಂತಾ ರಾಜ್ ಕುಟುಂಬದೊಂದಿಗಿನ ಬಾಂಧವ್ಯವನ್ನು ನೆನಪಿಸಿಕೊಂಡರು.

ಸುದ್ದಿಗೋಷ್ಠಿ ಬಳಿಕ ಲೈಗರ್ ಟೀಂ, ನಗರದ ಮಂತ್ರಿ ಮಾಲ್ ನಲ್ಲಿ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. ವಿಜಯ್ ಆಗಮಿಸ್ತಿದ್ದಾರೆ ಅಂತಾ ಗೊತ್ತಾಗ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ವಿಜಯ್ ಕಂಡು ಫ್ಯಾನ್ಸ್ ಅಬ್ಬರ ಮುಗಿಲುಮುಟ್ಟಿತ್ತು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳನ್ನು ಕಂಡು ವಿಜಯ್ ಸಂತಸ ಪಟ್ಟರು. ಅಂದಹಾಗೆ, ಲೈಗರ್ ಸಿನಿಮಾ ವಿಶ್ವದಾದ್ಯಂತ ಪಂಚ ಭಾಷೆಯಲ್ಲಿಯೂ ರಿಲೀಸಾಗ್ತಿದೆ. ಈ ಚಿತ್ರಕ್ಕೆ ಪುರಿ ಜಗನ್ನಾಥ್ ಆಕ್ಷನ್ ಕಟ್ ಹೇಳಿದ್ದು ಧರ್ಮ ಪ್ರೊಡಕ್ಷನ್ ಹಾಗೂ ಪುರಿ ಕನೆಕ್ಟ್ಸ್ ನಡಿ, ಚಾರ್ಮಿ ಕೌರ್, ಪುರಿ ಜಗನ್ನಾಥ್, ಕರಣ್ ಜೋಹರ್ ಬಂಡವಾಳ ಹೂಡಿದ್ದಾರೆ.

ಕೊಲೆಯಾದವನಿಗೆ ರು. 25 ಲಕ್ಷ, ಪದಕ ಗೆದ್ದವನಿಗೆ ರು. 8 ಲಕ್ಷ!
“ಹಿಂದಿನ ಬಾರಿ ಪದಕ ಗೆದ್ದಾಗ ಕುಮಾರಸ್ವಾಮಿಯವರು ಬಹುದೊಡ್ಡ ಮೊತ್ತದ ಪ್ರೋತ್ಸಾಹ  ಧನವನ್ನೇನೋ ಘೋಷಿಸಿದರು. ಆದರೆ ಕೊಡಲಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದವರಿಗೆ ನಮ್ಮ ರಾಜ್ಯದಲ್ಲಿ ಬೆಲೆ ಇಲ್ಲ. ಅಂಥವರನ್ನು ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ಬೇರೆ ರಾಜ್ಯಗಳು ಕಂಚಿನ ಪದಕ ಗೆದ್ದವರಿಗೆ 30-40 ಲಕ್ಷ ಪ್ರೋತ್ಸಾಹ ಧನ ಘೋಷಿಸಿವೆ. ಆದರೆ ಈಗ ಕರ್ನಾಟಕ ಸರಕಾರ ಜುಜುಬಿ 8 ಲಕ್ಷ ಘೋಷಣೆ ಮಾಡಿದೆ. ಘೋಷಿಸಿದ ಪ್ರೋತ್ಸಾಹ ಧನವನ್ನೂ ಸಕಾಲದಲ್ಲಿ ಕೊಡುವುದಿಲ್ಲ. ಒಂದು ವರ್ಷಕ್ಕೆ ಬರುವ ಪ್ರೋತ್ಸಾಹ ಧನ ಎರಡು ಮೂರು ವರ್ಷ ವಿಳಂಬವಾಗಿ ಬರುತ್ತದೆ. ಕೂಡಲೇ ಕೊಟ್ಟರೆ ಮುಂದಿನ ಕ್ರೀಡಾ ಸಾಧನೆಗೆ ದಾರಿಯಾಗುತ್ತದೆ” ಎಂದು ಒಲಿಂಪಿಕ್ಸ್ ಪದಕ ವಿಜೇತ ಗುರುರಾಜ್ ಪೂಜಾರಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಭಾರತ 140 ಕೋಟಿ ಜನಸಂಖ್ಯೆಯ ದೇಶ. ಆದರೆ ಒಲಿಂಪಿಕ್ಸ್, ಏಶ್ಯನ್ ಗೇಮ್ಸ್, ಕಾಮನ್ ವೆಲ್ತ್ ನಂತಹ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ನಮ್ಮ ಸಾಧನೆ, ಸ್ವಾತಂತ್ರ್ಯದ 75 ವರ್ಷಗಳ ಬಳಿಕ ಕೂಡಾ ಬಹಳ ಹೆಮ್ಮೆ ಪಡುವಂಥದ್ದೇನಲ್ಲ. ಒಲಿಂಪಿಕ್ಸ್ ನಲ್ಲಿ ಒಂದು ಕಂಚಿನ ಪದಕ ಬಂದರೂ ನಾವು ರೋಮಾಂಚನಗೊಳ್ಳುವ ಪರಿಸ್ಥಿತಿ. ಕಳೆದ ವರ್ಷ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ 205 ದೇಶಗಳು ಭಾಗವಹಿಸಿದ್ದವು. ಅದರಲ್ಲಿ 140 ಕೋಟಿ ಜನಸಂಖ್ಯೆಯ ಭಾರತ ಗಳಿಸಿದ ಪದಕಗಳು ಕೇವಲ 07. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು. ಇತ್ತೀಚೆಗೆ ಕೊನೆಗೊಂಡ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ 72 ದೇಶಗಳು ಭಾಗವಹಿಸಿದ್ದು, ಅದರಲ್ಲಿ ಭಾರತ ಗಳಿಸಿದ ಪದಕ ಕೇವಲ 61. 22 ಚಿನ್ನ, 16 ಬೆಳ್ಳಿ, 23 ಕಂಚು. ಇಷ್ಟೊಂದು ಜನಸಂಖ್ಯೆ ಇರುವ ದೇಶಕ್ಕೆ ಇಷ್ಟು ಪದಕ ಸಾಕೇ? ಯಾಕೆ ಹೀಗೆ? ಇದಕ್ಕೆ ಕಾರಣ ಯಾರು?

ಇದಕ್ಕೆ ಕಾರಣ ಯಾರು?

ಇದಕ್ಕೆ ಕಾರಣ ಯಾರು ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತ ಹೋದರೆ ನಮ್ಮ ಮುಂದೆ ಬಂದು ನಿಲ್ಲುವುದು ನಮ್ಮ ಸರಕಾರಗಳ ಧೋರಣೆ. ಈವತ್ತು ದೇಶದಲ್ಲಿ ಪ್ರತಿಭಾವಂತ ಕ್ರೀಡಾಳುಗಳಿಗೆ ಕೊರತೆಯಿಲ್ಲ. ದೈಹಿಕ ಕ್ಷಮತೆಯಿದೆ, ಆಸಕ್ತಿ, ಛಲ, ಪರಿಶ್ರಮ ಇದೆ. ಆದರೆ ಅದಕ್ಕೆ ಬೆಂಬಲವಾಗಿ ವಿಪರೀತ ಮೂಲಸೌಕರ್ಯದ ಮತ್ತು ಆರ್ಥಿಕ ಸಮಸ್ಯೆಗಳಿವೆ. ಇಂದಿಗೂ ನಮ್ಮಲ್ಲಿ ಕ್ರೀಡಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದವರು ವೈಯಕ್ತಿಕ ಪರಿಶ್ರಮದ ಮೂಲಕ ಸಾಧನೆ ಮಾಡಿರುವುದೇ ಹೊರತು, ಸರಕಾರದ ಬೆಂಬಲದಿಂದಾಗಲೀ ಸಹಾಯದಿಂದಾಗಲೀ ಅಲ್ಲ. ಪದಕ ಗಳಿಸಿ ಬಂದವರನ್ನು ಹೊಗಳಿ ಹಾಡಿ ಅಟ್ಟಕ್ಕೇರಿಸಲಾಗುತ್ತದೆ, ಬಹುಮಾನ ಘೋಷಿಸಲಾಗುತ್ತದೆ. ಆದರೆ ಆ ಹೊಗಳಿಕೆಗಳು ಬಹುಪಾಲು ಕ್ಷಣಿಕ ಮತ್ತು ಸೋಗಲಾಡಿತನದ್ದು, ಹಾಗೆಯೇ ಬಹುಮಾನದ ಮೊತ್ತ ತೀರಾ ಅತ್ಯಲ್ಪ ಮತ್ತು ಅವು ಕೇವಲ ಕಾಗದದಲ್ಲಿ ಉಳಿಯುವುದೇ ಹೆಚ್ಚು. ಇದಕ್ಕೆ ಬಹಳ ಮುಖ್ಯ ಉದಾಹರಣೆ ಇತ್ತೀಚೆಗೆ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದ ನಮ್ಮ ಗುರುರಾಜ ಪೂಜಾರಿ.

ಯಾರೀ ಗುರುರಾಜ ಪೂಜಾರಿ?

ಗುರುರಾಜ ಪೂಜಾರಿ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರು. ಭಾರತೀಯ ವಾಯುಪಡೆಯ ಉದ್ಯೋಗಿ. ಗುರುರಾಜ ಪೂಜಾರಿ ಎಂಬ ಒಬ್ಬ ಕ್ರೀಡಾಳು ನಮ್ಮ ನಡುವೆ ಇದ್ದಾರೆ ಎಂಬುದೇ ನಮ್ಮಲ್ಲಿ ಅನೇಕರಿಗೆ ಗೊತ್ತಿರಲಿಲ್ಲ. ಗೊತ್ತಾದುದು ಹಿಂದಿನ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಅವರು ಪದಕ ಗೆದ್ದಾಗ. ಮೊನ್ನೆ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಾಗ  ಅವರನ್ನು ಹಾಡಿ ಹೊಗಳಿದ್ದೇನು, ಅವರು ಊರಿಗೆ ಮರಳಿದಾಗ ಸ್ವಾಗತಿಸಿದ್ದೇನು! ಮೊನ್ನೆ  ರಾಜ್ಯ ಸಭಾ ಸದಸ್ಯ ವೀರೇಂದ್ರ ಹೆಗ್ಗಡೆಯವರು, ಸಂಸದ ನಳಿನ್ ಕುಮಾರ್ ಕಟೀಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಉಡುಪಿಗೆ ಬಂದಾಗ ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲಾಡಳಿತದ ಪರವಾಗಿ ಅಭಿನಂದನೆ ಸಲ್ಲಿಸಿದರು. ಆದರೆ ಇದು ಸಾಕೇ? ಕ್ರೀಡಾಳುಗಳಿಗೆ ಬೇಕಾಗುವುದು ಪ್ರಚಾರ, ಶುಷ್ಕ ಹೊಗಳಿಕೆಗಳಲ್ಲ. ಬೇಕಾಗಿರುವುದು ಅವರು ಮುಂದೆ ಸಾಧನೆ ಮಾಡಲು ಅಗತ್ಯ ಸಹಾಯ. ಮುಖ್ಯವಾಗಿ ಆರ್ಥಿಕ ಬೆಂಬಲ. ಪೂಜಾರಿಯಂತಹ ವೇಟ್ ಲಿಫ್ಟರ್ ಗೆ ತಿಂಗಳಿಗೆ ಮುವತ್ತರಿಂದ ನಲವತ್ತು ಸಾವಿರ ಖರ್ಚು ಬರುತ್ತದೆ. ಅದನ್ನು ಆತ ಎಲ್ಲಿಂದ ಹೊಂದಿಸಬೇಕು? ಕೆಲ ಭಾಗ್ಯಶಾಲಿಗಳಿಗೆ ಕೆಲವು ಸಂಸ್ಥೆಗಳು ಸಹಾಯ ಮಾಡುವುದಿದೆ. ಆದರೆ ನಿಜವಾಗಿ ಸಹಾಯ ಮಾಡಬೇಕಿರುವುದು ಸರಕಾರಗಳು. ಆದರೆ ಅವು ಮಾಡುತ್ತಿವೆಯೇ?

ಸರಕಾರಗಳು ಕ್ರೀಡಾ ಪಟುಗಳಿಗೆ ಸಹಾಯ ಮಾಡುತ್ತಿವೆಯೇ?

ಇದರ ಬಗ್ಗೆ ಸ್ವತಃ ಗುರುರಾಜ ಪೂಜಾರಿಯವರೇ  ಬೇಸರದಿಂದ ಮಾತಾಡಿದ್ದಾರೆ. ಈ ಹಿಂದಿನ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಗುರುರಾಜ್ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಬೆಳ್ಳಿಯ ಪದಕ ಗೆದ್ದಿದರು. ಈ ಬಾರಿ  61 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದಿದ್ದಾರೆ. “ಹಿಂದಿನ ಬಾರಿ ಪದಕ ಗೆದ್ದಾಗ ಕುಮಾರಸ್ವಾಮಿಯವರು ಬಹುದೊಡ್ಡ ಮೊತ್ತದ ಪ್ರೋತ್ಸಾಹ ಧನವನ್ನೇನೋ ಘೋಷಿಸಿದರು. ಆದರೆ ಕೊಡಲಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದವರಿಗೆ ನಮ್ಮ ರಾಜ್ಯದಲ್ಲಿ ಬೆಲೆ ಇಲ್ಲ, ಅಂಥವರನ್ನು ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ. ಬೇರೆ ರಾಜ್ಯಗಳು ಕಂಚಿನ ಪದಕ ಗೆದ್ದವರಿಗೆ 30-40 ಲಕ್ಷ ಪ್ರೋತ್ಸಾಹ ಧನ ಘೋಷಿಸಿವೆ. ಆದರೆ ಈಗ ಕರ್ನಾಟಕ ಸರಕಾರ ಜುಜುಬಿ 8 ಲಕ್ಷ ಘೋಷಣೆ ಮಾಡಿದೆ. ಘೋಷಿಸಿದ ಪ್ರೋತ್ಸಾಹ ಧನವನ್ನೂ ಸಕಾಲದಲ್ಲಿ ಕೊಡುವುದಿಲ್ಲ, ಒಂದು ವರ್ಷಕ್ಕೆ ಬರುವ ಪ್ರೋತ್ಸಾಹ ಧನ ಎರಡು ಮೂರು ವರ್ಷ ವಿಳಂಬವಾಗಿ ಬರುತ್ತದೆ. ಕೂಡಲೇ ಕೊಟ್ಟರೆ ಮುಂದಿನ ಕ್ರೀಡಾ ಸಾಧನೆಗೆ ದಾರಿಯಾಗುತ್ತದೆ” ಎಂದು ಅವರು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಕೊಲೆಯಾದ ವ್ಯಕ್ತಿಯ ಧರ್ಮ ಆಧರಿಸಿ ತಲಾ 25 ಲಕ್ಷ ಪರಿಹಾರ!

ವಿಚಿತ್ರ ಎಂದರೆ ಬೊಮ್ಮಾಯಿ ಸರಕಾರದ ಕಾಲದಲ್ಲಿ ಕೋಮು ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾದ ವ್ಯಕ್ತಿಯ ಧರ್ಮ ಆಧರಿಸಿ ಅವರಿಗೆ ತಲಾ 25 ಲಕ್ಷ ಪರಿಹಾರ ಮೊತ್ತ ನೀಡಲಾಗುತ್ತದೆ. ಆದರೆ ಪದಕದ ಮೂಲಕ ರಾಜ್ಯಕ್ಕೆ ಮಾತ್ರವಲ್ಲ, ದೇಶಕ್ಕೇ ಕೀರ್ತಿ ತಂದ ಕ್ರೀಡಾಳುವಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುವ ಹಾಗೆ ಒಂದು ದೊಡ್ಡ ಮೊತ್ತವನ್ನು ಕೊಡುವುದು ಸಾಧ್ಯವಿಲ್ಲವೇ? ಅದೂ ಜನರ ದುಡ್ಡು? ಈ ಕ್ರೀಡಾಳುಗಳಿಗೆ ದೊಡ್ಡ ಸಮಸ್ಯೆ ಇರುವುದು ಹೊಟ್ಟೆ ಹೊರೆಯುವ ಸಮಸ್ಯೆ. ಅದಕ್ಕೆ ಅನುಕೂಲವಾಗುವ ಹಾಗೆ ಒಂದು ಸರಕಾರಿ ನೌಕರಿ ಕೊಡುವುದೂ ಅಷ್ಟು ಕಷ್ಟವೇ?

ಸರಕಾರದ ಧೋರಣೆ ಬದಲಾಗಬೇಕು

ಇವನ್ನೆಲ್ಲ ನೋಡುವಾಗ ನಮ್ಮ ಸರಕಾರದ ತಪ್ಪು ಆದ್ಯತೆಗಳು ಮತ್ತು ಪಕ್ಷಪಾತಿ ಧೋರಣೆಗಳು, ಕ್ರೀಡಾಲೋಕದ ಬಗ್ಗೆ ಇರುವ ತಾತ್ಸಾರ ಎದ್ದು ಕಾಣುತ್ತದೆ. ಗುರುರಾಜ ಪೂಜಾರಿ ಇನ್ನಷ್ಟು ಸಾಧನೆ ಮಾಡಿ ಒಲಿಂಪಿಕ್ಸ್ ಪದಕವನ್ನೂ ಗೆಲ್ಲುವಂತಾಗಬೇಕಾದರೆ, ಇನ್ನಷ್ಟು ಗುರುರಾಜ ಪೂಜಾರಿಗಳು ಸೃಷ್ಟಿಯಾಗಬೇಕಾದರೆ ಸರಕಾರ ತಮ್ಮ ಧೋರಣೆಗಳನ್ನು ಬದಲಿಸಿಕೊಳ್ಳಬೇಕು. ಸರಕಾರದ ಬಳಿ ಹಣದ ಕೊರತೆಯಿಲ್ಲ. ಇರುವುದು ಇಚ್ಛಾಶಕ್ತಿಯ ಕೊರತೆ. ಅದನ್ನು ನೀಗಿಸಿಕೊಳ್ಳಬೇಕು. ಆಗ ಕ್ರೀಡಾ ಲೋಕದಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಬಹುದು. ಲೇಖನದ ಆರಂಭದಲ್ಲಿ ಹೇಳಿದ ಹಾಗೆ ನಮ್ಮ ದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ. ಇರುವುದು ಆ ಪ್ರತಿಭೆಗಳಿಗೆ ಬೆಂಬಲದ ಕೊರತೆ. ಕನಿಷ್ಠ ಆರ್ಥಿಕ ಸಹಾಯವನ್ನು ಸರಕಾರಗಳು ಉದಾರವಾಗಿ ಮಾಡಿದರೂ ನಮ್ಮ ಕ್ರೀಡಾಳುಗಳು ಅಸಾಧಾರಣ ಸಾಧನೆ ಮಾಡಬಲ್ಲರು.

ಗುಲಾಬಿ ಬಿಳಿಮಲೆ
ಸಾಮಾಜಿಕ ಕಾರ್ಯಕರ್ತೆ ಹಾಗು ಹವ್ಯಾಸಿ ಬರಹಗಾರ್ತಿ
ಮಂಗಳೂರು

ವಾಮನನ ಬಿಗ್ ಟೀಸರ್ ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಅದ್ದೂರಿಯಾಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ದೂರಿ ಸೆಟ್, ಭರ್ಜರಿ ಆಕ್ಷನ್, ಹೊಸ ಗೆಟಪ್, ಬ್ಯಾಗ್ರೌಂಡ್ ಮ್ಯೂಸಿಕ್, ವಿಷ್ಯೂವಲ್ಸ್ ಎಫೆಕ್ಟ್ ಎಲ್ಲವೂ ಸೇರಿ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ. ಪಂಚಿಂಗ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಡುವ ಧನ್ವೀರ್ ಗುಣ ಎಂಬ ಪಾತ್ರದಲ್ಲಿ ನಟಿಸಿದ್ದಾರೆ.

1.50 ನಿಮಿಷ ಇರುವ ವಾಮನ ಸಿನಿಮಾದ ಟೀಸರ್ ತುಣುಕು ಯೂಟ್ಯೂಬ್ ನಲ್ಲಿ ಸದ್ದು ಮಾಡುತ್ತಿದ್ದು, ಶಂಕರ್ ರಾಮನ್ ಸಾರಥ್ಯದಲ್ಲಿ ಚಿತ್ರ ಮೂಡಿ ಬರ್ತಿದೆ. ಧನ್ವೀರ್ ಗೆ ಜೋಡಿಯಾಗಿ ಏಕ್ ಲವ್ ಯಾ ಬೆಡಗಿ ರೇಷ್ಮಾ ನಾಣಯ್ಯ ನಟಿಸ್ತಿದ್ದಾರೆ. ಈಗಾಗಲೇ 70 ದಿನ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಬಾಕಿ ಉಳಿದ ಭಾಗದ ಚಿತ್ರೀಕರಣದಲ್ಲಿ ನಿರತವಾಗಿದೆ.

ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಖ್ಯಾತಿ ಗಳಿಸಿರುವ ಚೇತನ್ ಕುಮಾರ್ ತಮ್ಮದೇ ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ ಟೈನ್ಮೆಂಟ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಲವ್ ಸ್ಟೋರಿ ಜೊತೆಗೆ ಔಟ್ ಅಂಡ್ ಔಟ್ ಆಕ್ಷನ್ ಕಮರ್ಷಿಯಲ್ ಸಿನಿಮಾವಾಗಿರುವ ವಾಮನದಲ್ಲಿ ಖಳನಾಯಕನಾಗಿ ಸಂಪತ್ ನಟಿಸುತ್ತಿದ್ದು, ಉಳಿದಂತೆ ಅಚ್ಯುತ್ ಕುಮಾರ್, ತಾರಾ, ಶಿವರಾಜ್ ಕೆ ಆರ್ ಪೇಟೆ ಮತ್ತು ಕಾಕ್ರೋಚ್ ಸುದಿ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ. ಬಿ.ಅಜನೀಶ್ ಲೋಕನಾಥ್ ಸಂಗೀತ, ಮಹೇನ್ ಸಿಂಹ ಕ್ಯಾಮೆರಾ ಕೈಚಳಕ, ಸುರೇಶ್ ಆರ್ಮುಖ ಸಂಕಲನ, ಅರ್ಜುನ್ ರಾಜ್ ಆಕ್ಷನ್ ಸಿನಿಮಾಕ್ಕಿದೆ.

ಟೆಲಿವಿಷನ್ ಪ್ರೀಮಿಯರ್ ಲೀಗ್ ಇಂದಿನಿಂದ ಮೂರು ದಿನ ಕಿರುತೆರೆ ಕಲಾವಿದರ ಕ್ರಿಕೆಟ್
ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, 18, 19 ಹಾಗೂ 20 ಈ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯುತ್ತಿದೆ. ಈ ಹಿನ್ನೆಲೆ ನಿನ್ನೆ ಖಾಸಗಿ ಹೋಟೆಲ್ ವೊಂದರಲ್ಲಿ ಜೆರ್ಸಿ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಯಿತು. ಕಿರುತೆರೆ ಕಲಾವಿದರು ಹಾಗೂ ತಂತ್ರಜ್ಞರು ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ.

ಆಯೋಜಕರಾದ ಬಿ.ಆರ್.ಸುನಿಲ್ ಕುಮಾರ್ ಮಾತನಾಡಿ, ಮೊದಲ ಬಾರಿಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು, ಐಪಿಎಲ್ ರೇಂಜ್ ಗೆ ಮಾಡಬೇಕೆಂಬ ಕನಸು ಇತ್ತು. ಇದು ಮೊದಲ ಹೆಜ್ಜೆಯಷ್ಟೇ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡದಾಗಿ ಮಾಡುವ ಕನಸಿದೆ ಎಂದರು.

ಬೆಂಗಳೂರಿನ ಪೆಸೆಟ್ ಕಾಲೇಜು ಗ್ರೌಂಡ್ ನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ, ದಿ ಬುಲ್ ಸ್ಕ್ವಾಡ್, ಭಜರಂಗಿ ಲಯನ್ಸ್, ಎಂಜೆಲ್ XI, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ. ಟಿಪಿಎಲ್ ಪಂದ್ಯಾವಳಿ ಆರಂಭವಾಗಲಿದೆ.

ದಿ ಬುಲ್ ಸ್ಕ್ವಾಡ್ ಟೀಂಗೆ ಶರತ್ ಪದ್ಮನಾಭ್ ನಾಯಕನಾಗಿದ್ದು, ಈ ತಂಡದ ಒಡೆತನವನ್ನು ಮೋನಿಶ್ ಹೊತ್ತುಕೊಂಡಿದ್ರೆ, ಭಜರಂಗಿ ಲಯನ್ಸ್ ಗೆ ರಂಜಿತ್ ಕುಮಾರ್ ನಾಯಕ- ಮಹೇಶ್ ಗೌಡ ಓನರ್, ಎಂಜಲ್ XI ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ-ಜಗದೀಶ್ ಬಾಬು ಆರ್ ಓನರ್, ವಿನ್ ಟೈಮ್ ರಾಕರ್ಸ್ ತಂಡಕ್ಕೆ ಅರ್ಜುನ್ ಯೋಗಿ ನಾಯಕ-ಅನಿಲ್ ಬಿಆರ್ ಮತ್ತು ದೇವನಾಥ್ ಓನರ್, ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಮಂಜು ಪಾವಗಡ ನಾಯಕ-ರಂಜಿತ್ ಕುಮಾರ್ ಓನರ್, ಸ್ಯಾಂಡಲ್ ವುಡ್ ಕಿಂಗ್ಸ್ ತಂಡಕ್ಕೆ ವಿವಾನ್ ನಾಯಕ-ದೀಪಶ್ರೀ ಮಿಸ್ಟ್ರೀ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

‘19.20.21’ ಹೊಸ ಪೋಸ್ಟರ್ ಮಂಸೋರೆ ಸಿನಿಮಾ ಬಿಡುಗಡೆಗೆ ದಿನಗಣನೆ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿಭಿನ್ನ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಮಡಿಲಿಗೆ ಹಾಕುತ್ತಾ ಬರ್ತಿದ್ದಾರೆ. ‘ಹರಿವು’, ‘ನಾತಿಚರಾಮಿ’, ‘ಆ್ಯಕ್ಟ್​-1978’ ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ ‘19.20.21’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಚಿತ್ರತಂಡ ವಿಶೇಷವಾದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಒಂದು ಪೋಸ್ಟರ್ ಅನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.

ಜೈ ಭೀಮ್, ಜನಗಣಮನ ಸಿನಿಮಾಗಳ ಮಾದರಿಯಲ್ಲಿ ‘19.20.21’ ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಳೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ‘ಆ್ಯಕ್ಟ್​-1978’ ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು, ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿಕೆ ಕುಮಾರ್ ಕ್ಯಾಮೆರಾ, ಸುರೇಶ್ ಆರುಮುಗಂ ಸಂಕಲನವಿದ್ದು‌. ಚಿತ್ರಕಥೆಯಲ್ಲಿ ಮಂಸೋರೆ ಜೊತೆಗೆ ವೀರೇಂದ್ರ ಮಲ್ಲಣ್ಣ ಕೆಲಸ ಮಾಡಿದ್ದರೆ, ಸಂಭಾಷಣೆಗಳ ಬರವಣಿಗೆಯಲ್ಲಿ ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿದೆ.

ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಜಾರಿ ಬಿದ್ದರೂ ಯಾಕೀ ನಗು
ಒಂದಷ್ಟು ಸಿನಿಮೋತ್ಸಾಹಿಗಳ ಯುವ ತಂಡ ಸೇರಿ ತಯಾರಿಸಿರುವ ಕಂಬ್ಳಿಹುಳ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ. ಜಾರಿ ಬಿದ್ದರೂ ಯಾಕೀ ನಗು ಎಂಬ ಸಾಹಿತ್ಯದ ಹಾಡು ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುತ್ತಿದೆ. ಎರಡು ಮುದ್ದಾದ ಜೋಡಿಯ ನವೀರಾದ ಪ್ರೇಮಕಥೆಯನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಮಹದೇವ್ ಸ್ವಾಮಿ, ರವಿ ಧನ್ಯನ್ ಸಾಹಿತ್ಯದ ಹಾಡಿಗೆ ವಿಜಯ್ ಪ್ರಕಾಶ್-ಸಂಗೀತ ರವೀಂದ್ರನಾಥ್ ಧ್ವನಿಯಾಗಿದ್ದು, ಶಿವ ಪ್ರಸಾದ್ ಸಂಗೀತ ಹಾಡಿನಲ್ಲಿ ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಜೋಡಿ ಸಹಜ ನಟನೆ ಮೂಲಕ ಗಮನಸೆಳೆಯುತ್ತಾರೆ. ರೇಣುಕಾಂಬ ಸ್ಟುಡಿಯೋದಲ್ಲಿ ಈ ಹಾಡು ಬಿಡುಗಡೆ ಕಾರ್ಯಕ್ರಮ ಜರುಗಿತು. ಈ ವೇಳೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿದೆ.

ನಿರ್ದೇಶಕ ನವನ್ ಶ್ರೀನಿವಾಸ್ ಮಾತನಾಡಿ, ಕಿರುಚಿತ್ರದಿಂದ ಆರಂಭವಾದ ನನ್ನ ಜರ್ನಿ ಈಗ ಕಂಬ್ಳಿಹುಳ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದೇನೆ. ಮಲೆನಾಡಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಚಿತ್ರವಿದು. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ಶೂಟಿಂಗ್ ಮಾಡಿದ್ದೇವೆ. ಇದೊಂದು ಎಮೋಷನಲ್ ಜರ್ನಿ. ಎರಡು ಕಾಲು ಘಂಟೆ ನಗು, ಅಳು, ಕಾಮಿಡಿ ಎಲ್ಲವೂ ಇದೆ ಎಂದರು.

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ತಯಾರಾಗಿರುವ ಈ ಚಿತ್ರಕ್ಕೆ ನವನ್ ಶ್ರೀನಿವಾಸ್ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಹಿಂದೆ ಕಿರುಚಿತ್ರಗಳ ಮೂಲಕ ನಿರ್ದೇಶನದ ಚಾಕಚಕತ್ಯೆ ಅರಿತಿರುವ ನವನ್ ಕಂಬ್ಳಿಹುಳ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ನೈಜ ಘಟನೆಯಾಧಾರಿತ ಸಿನಿಮಾವಾಗಿರುವ ಕಂಬ್ಳಿಹುಳ ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜಿ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿದಂತೆ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ವಿಜಯ್, ಸವೀನ್, ಪುನೀತ್ ಹಾಗೂ ಗುರು ಬಂಡವಾಳ ಹೂಡಿದ್ದು, ಸತೀಶ್ ರಾಜೇಂದ್ರ ಛಾಯಾಗ್ರಾಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನ ಸಿನಿಮಾಕ್ಕಿದೆ.

‘ಸಲಾರ್’ ಪೋಸ್ಟರ್ ಸೆಪ್ಟೆಂಬರ್ 28ಕ್ಕೆ ಬಿಡುಗಡೆ
ಇಡೀ ದೇಶವೇ ಮೆಚ್ಚಿ ಹೆಮ್ಮೆಪಟ್ಟಂತಹ ‘ಕೆಜಿಎಫ್’ 1 ಮತ್ತು ‘ಕೆಜಿಎಫ್2’ ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೊದಲ ಭಾರತೀಯ ಚಿತ್ರವಾದ ಪ್ರಭಾಸ್ ಅಭಿನಯದ ‘ಸಲಾರ್’ನ ಪೋಸ್ಟರ್, ಸೋಮವಾರ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ.

ಹೊಂಬಾಳೆ ಫಿಲಂಸ್ ಅಡಿ ವಿಜಯಕುಮಾರ್ ಕಿರಗಂದೂರು ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶಿಸುತ್ತಿರುವ ‘ಸಲಾರ್’ ಚಿತ್ರವು 2023ರ ಸೆಪ್ಟೆಂಬರ್ 28ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. 400 ಕೋಟಿ ರೂ.ಗಳಿಗೂ ಮೀರಿದ ಅತೀ ದುಬಾರಿ ವೆಚ್ಚದ ಮತ್ತು ಅತೀ ನಿರೀಕ್ಷೆಯ ಈ ಚಿತ್ರವು ಈಗಾಗಲೇ ತನ್ನ ಹೈವೋಲ್ಟೇಜ್ ಆಕ್ಷನ್ ದೃಶ್ಯಗಳಿಂದ ಸಾಕಷ್ಟು ಸುದ್ದಿ ಮಾಡುತ್ತಿದೆ. ಈ ಹಿಂದೆ ಬಿಡುಗಡೆಯಾದ ಚಿತ್ರದ ಕೆಲವು ಪೋಸ್ಟರ್ಗಳು ಈಗಾಗಲೇ ಜನರ ಮನ ಗೆದ್ದಿದೆ. ಇದೀಗ ಚಿತ್ರತಂಡವು ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ.

‘ಸಲಾರ್’ ಒಂದು ಪಕ್ಕಾ ಆಕ್ಷನ್ ಮತ್ತು ಸಾಹಸಮಯ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಲಿದೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ. ಚಿತ್ರತಂಡವು ಸದ್ಯದಲ್ಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದು, ಈ ಚಿತ್ರದ ಗ್ರಾಫಿಕ್ಸ್ ಕೆಲಸದ ಜವಾಬ್ದಾರಿಯನ್ನು ವಿದೇಶದ ಪ್ರತಿಷ್ಠಿತ ಸ್ಟುಡಿಯೋಗೆ ನೀಡಲಾಗಿದ್ದು. ಭಾರತದಲ್ಲಿ ಇದುವರೆಗೂ ಯಾವ ಚಿತ್ರದಲ್ಲೂ ನೋಡದಂತಹ ಅತ್ಯುನ್ನತ ವಿಎಫ್ಎಕ್ಸ್ ಕೆಲಸವನ್ನು ಈ ಚಿತ್ರದಲ್ಲಿ ನೋಡಬಹುದು ಎಂದು ಹೇಳಲಾಗಿದೆ.

‘ಕೆಜಿಎಫ್ 2’ ಚಿತ್ರದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಪ್ರಶಾಂತ್ ನೀಲ್, ಈಗ ಭಾರತದಲ್ಲೇ ಅತ್ಯಂತ ಬೇಡಿಕೆಯ ನಿರ್ದೇಶಕ ಎಂದರೆ ತಪ್ಪಾಗಲಾರದು. ಇಂಥ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರುತ್ತಿರುವ ಭಾರತೀಯ ಚಿತ್ರವಾಗಿದೆ. ಪ್ರಭಾಸ್ಗೆ ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಪ್ರತಿಭಾವಂತ ಕಲಾವಿದರ ದಂಡಿದೆ.

ರಾಜಮೌಳಿ ಶಿಷ್ಯನ ‘1770’ ಇದು ಬಂಕಿಮಚಂದ್ರರ ಆನಂದಮಠ
‘ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ ‘1770’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 75ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕಾದಂಬರಿಯನ್ನು ಆಧರಿಸಿದ ಈ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್ಟೈನ್ಮೆಂಟ್ ಮತ್ತು ಪಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮ ನಿರ್ಮಿಸುತ್ತಿದ್ದಾರೆ. ಇನ್ನು, ಖ್ಯಾತ ಲೇಖಕ ಮತ್ತು ಚಿತ್ರನಿರ್ದೇಶಕ ರಾಮ್ ಕಮಲ್ ಮುಖರ್ಜಿ ಈ ಚಿತ್ರದ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ. ವಂದೇ ಮಾತರಂಗೆ 150 ವರ್ಷವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ‘ಆಕಾಶವಾಣಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಅಶ್ವಿನ್ ಗಂಗರಾಜು ಅವರಿಗೆ ಇದು ನಿರ್ದೇಶಕರಾಗಿ ಎರಡನೆಯ ಚಿತ್ರ. ಈ ಕುರಿತು ಮಾತನಾಡುವ ಅವರು, ‘ಇಂಥದ್ದೊಂದು ಅದ್ಭುತ ದೃಶ್ಯಕಾವ್ಯವನ್ನು ತೆರೆಗೆ ತರುವುದು ದೊಡ್ಡ ಸವಾಲು. ಆದರೆ, ರಾಜಮೌಳಿ  ಅವರ ತಂದೆ ವಿ. ವಿಜಯೇಂದ್ರ ಪ್ರಸಾದ್ ಅವರು ಕಥೆ, ಚಿತ್ರಕಥೆ ರಚಿಸುತ್ತಿರುವುದರಿಂದ, ಚಿತ್ರ ಅದ್ಭುತವಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ. ಒಬ್ಬ ನಿರ್ದೇಶಕನಾಗಿ ಬೇರೆ ಕಾಲಘಟ್ಟದ, ಎಮೋಷನ್ಗಳು ಹೆಚ್ಚಿರುವಂತಹ ಮತ್ತು ಆಕ್ಷನ್ ದೃಶ್ಯಗಳಿಗೆ ಹೆಚ್ಚು ಮಹತ್ವ ಇರುವಂತಹ ಚಿತ್ರಗಳನ್ನು ನಿರ್ದೇಶಿಸಬೇಕು ಎನ್ನುವುದು ನನ್ನ ವೈಯಕ್ತಿಕ ಆಸೆ. ಅದಕ್ಕೆ ಅನುಗುಣವಾಗಿ, ಈ ಕಥೆಯಲ್ಲಿ ಎಲ್ಲವೂ ಇದೆ ಎನ್ನುತ್ತಾರೆ.

ಬಂಕಿಮ್ ಚಂದ್ರ ಅವರ ‘ಆನಂದಮಠ’ ಕಾದಂಬರಿಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಕವನವು ಪ್ರಕಟವಾಗಿತ್ತು. ಈ ಕವನವು ಬ್ರಿಟಿಷ್ ಸಾಮ್ರಾಜ್ಯವನ್ನು ಅಕ್ಷರಶಃ ಅಲ್ಲಾಡಿಸಿತ್ತು. ವಂದೇ ಮಾತರಂ ಎನ್ನುವುದು ಮಹರ್ಷಿ ಬಂಕಿಮ ಚಂದ್ರರು ದೇಶವನ್ನು ಒಗ್ಗೂಡಿಸಲು ಉಚ್ಛರಿಸಿದ ಒಂದು ಮಂತ್ರ ಎನ್ನುತ್ತಾರೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿರುವ ವಿಜಯೇಂದ್ರ ಪ್ರಸಾದ್.

ದೊಡ್ಡ ಬಜೆಟ್ನ ಮತ್ತು ಗಾತ್ರದ ಚಿತ್ರಗಳನ್ನು ಮಾಡುವುದಕ್ಕೆ ಇದು ಒಳ್ಳೆಯ ಸಮಯ ಎನ್ನುವುದು ಎಸ್ಎಸ್1 ಎಂಟರ್ಟೈನ್ಮೆಂಟ್ನ ಶೈಲೇಂದ್ರ ಕುಮಾರ್ ಅವರ ಅಭಿಪ್ರಾಯ.

‘1770’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ದಸರಾ ಹೊತ್ತಿಗೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಱರು ಆಯ್ಕೆಯಾಗಲಿದ್ದು, ದೀಪಾವಳಿ ವೇಳೆಗೆ ಅಧಿಕೃತ ಘೋಷಣೆಯಾಗಲಿದೆ.