state politics – Peepal Media

ಪ್ರಿಯಾಂಕ್‌ ಖರ್ಗೆಗೆ ಜೀವಬೆದರಿಕೆ ಆರೋಪಿ ಅರೆಸ್ಟ್‌ – ಗೃಹಸಚಿವ ಪರಮೇಶ್ವರ್
ತುಮಕೂರು : ಸಚಿವ ಪ್ರಿಯಾಂಕ್ ಖರ್ಗೆಗೆ‌ (Priyank Kharge) ಅವರಿಗೆ ಬೆದರಿಕೆ (Threat) ಹಾಕಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಅರೆಸ್ಟ್ ಮಾಡಲಾಗಿದ್ದು, ಇಲ್ಲಿಗೆ ತರಲಾಗಿದೆ. ಆರೋಪಿ ವಿರುದ್ದ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ‌ ಅವರಿಗೆ ಬೆದರಿಕೆ ಹಾಕಿದ ವಿಚಾರ ತುಂಬಾ ಗಂಭೀರವಾದುದು. ಈ ಹಿನ್ನೆಲೆ ಅವರ ಭದ್ರತೆಯನ್ನು ಹೆಚ್ಚಿಸುತ್ತೇವೆ. ಆರೋಪಿ ಹಿಂದೆ ಯಾರಾದರೂ ಇದ್ದಾರ ಇಲ್ಲವಾ ಎಂದು ಅಧಿಕಾರಿಗಳು ತನಿಖೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಜಾಗದಲ್ಲಿ ಸಂಘ ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಅನುಮತಿ ಕಡ್ಡಾಯ. ಯಾವುದೇ ಸಂಘ ಸಂಸ್ಥೆಗಳು ಖಾಸಗಿಯಾಗಿ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ಮಾಡಬೇಕಾದರೆ ಅನುಮತಿ ಪಡೆಯಬೇಕು. ಈ ಆದೇಶ 2013 ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಮಾಡಲಾಗಿದೆ. ನಾವು ಅದನ್ನು ಇಂಪ್ಲಿಮೆಂಟ್ ಮಾಡಿರಲಿಲ್ಲ. ಇತ್ತೀಚೆಗೆ ಕೆಲವು ಸಂಘಟನೆಗಳು ಸರ್ಕಾರಿ ಸ್ಥಳ ದುರುಪಯೋಗ ಮಾಡಿಕೊಳ್ಳುತ್ತ ಇರುವುದು ಕಂಡು ಬಂದಿದೆ. ಹಾಗಾಗಿ ನಿನ್ನೆ ಕ್ಯಾಬಿನೇಟ್ ನಲ್ಲಿ ತೀರ್ಮಾನ ಮಾಡಿ ಶಾಲಾ ಕಾಲೇಜು, ಧಾರ್ಮಿಕ ಸ್ಥಳಗಳನ್ನು ಖಾಸಗಿಯವರಿಗೆ ಕೊಡಬಾರದು ಎಂದು ತೀರ್ಮಾನ ಮಾಡಲಾಗಿದೆ ಎಂದರು.

ಸರ್ಕಾರಿ ಜಾಗದಲ್ಲಿ ಹೋಗಿ ಗುಂಪು ಕಟ್ಟಿಕೊಂಡು ಕುಳಿತರೆ ಯಾರೂ ಬೇಡ ಅನ್ನಲ್ಲ. ಕಾರ್ಯಕ್ರಮಗಳನ್ನು ಮಾಡಬಾರದು ಅಷ್ಟೇ. ಕೇವಲ ಆರ್‌ಎಸ್ಎಸ್ (RSS) ಮಾತ್ರ ನೋಂದಣಿ ಮಾಡಬೇಕು ಅಂತಲ್ಲ. ಎಲ್ಲಾ ಖಾಸಗಿ ಸಂಸ್ಥೆಗಳು ನೋಂದಣಿ ಆಗಬೇಕು. ಆರ್‌ಎಸ್ಎಸ್ ಒಂದು ಖಾಸಗಿ ಸಂಸ್ಥೆ. ಈ ಹಿಂದೆ ಪರಮೇಶ್ವರ್ ಒಡೆತನದ ಸಿದ್ದಾರ್ಥ ಕಾಲೇಜು ಆವರಣದಲ್ಲಿ ಆರ್‌ಎಸ್ಎಸ್ ಕಾರ್ಯಕ್ರಮ ನಡೆದಿತ್ತು. ಬಹಳ ಹಿಂದೆ ಅಂದರೆ 20 ವರ್ಷಗಳ ಹಿಂದೆ ನಮ್ಮ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಆರ್‌ಎಸ್ಎಸ್ ಕ್ಯಾಂಪ್ ನಡೆದಿತ್ತು. ಎಸ್ಎಸ್ಐಟಿ ಹಾಗೂ ಹೆಗ್ಗೆರೆ ಕಾಲೇಜಿನಲ್ಲಿ ಆರ್‌ಎಸ್ಎಸ್ ಕ್ಯಾಂಪ್ ನಡೆದಿತ್ತು. ಆಗ ನಾವು ಅನುಮತಿ ಕೊಟ್ಟಿದ್ವಿ. ನಮ್ಮ ಪ್ರಾಂಶುಪಾಲರು ಅನುಮತಿ ಕೊಟ್ಟಿದ್ದರು ಎಂದರು.

ನಾಳೆ ತುಮಕೂರಿನಲ್ಲಿ ಆರ್‌ಎಸ್ಎಸ್ ಪಥ ಸಂಚಲನ ವಿಚಾರದ ಬಗ್ಗೆ ಮಾತನಾಡಿದ ಅವರು, ಪಥ ಸಂಚಲನ ನಡೆಸೋದಾದರೆ ಪರ್ಮಿಷನ್ ತಗೋಬೇಕು. ಪೊಲೀಸರಿಂದ ಪರ್ಮಿಷನ್ ತಗೋಬೇಕು. ಕಾಂಗ್ರೆಸ್ ಸರ್ಕಾರ ಹಣ ಮಾಡಲು ಆಸ್ತಿ ಪರಿವರ್ತನೆ ಮಾಡ್ತಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಅವರು ನಿಖರವಾಗಿ ಹೇಳಲಿ. ಅವರು ಮುಖ್ಯಮಂತ್ರಿ‌ ಆಗಿದ್ದವರು. ಅವರು ಹೇಳಿದ ಮೇಲೆ ನಾವು ಸ್ವಲ್ಪ ಗಂಭೀರವಾಗಿ ಪರಿಗಣಿಸ್ತಿವಿ. ಸರಿಯಾಗಿ ಇಂತಹ ಕಡೆ ಹಣ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಹೇಳಬೇಕು ಎಂದರು.

ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ: ಐವರು ಅಲ್ ಜಜೀರಾ ಸಂಸ್ಥೆಯ ಪತ್ರಕರ್ತರ ಸಾವು
ಗಾಜಾ ಸಿಟಿ: ಗಾಜಾ ಪಟ್ಟಿಯಲ್ಲಿರುವ ಅಲ್-ಶಿಫಾ ವೈದ್ಯಕೀಯ ಸಂಕೀರ್ಣದ ಸಮೀಪದ ಮಾಧ್ಯಮಗಳ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲ್ ಜಜೀರಾ ಸುದ್ದಿವಾಹಿನಿಯ ಐವರು ಪತ್ರಕರ್ತರು ಮೃತಪಟ್ಟಿದ್ದಾರೆ. ಇವರಲ್ಲಿ ಪ್ರಮುಖ ವರದಿಗಾರ ಅನಾಸ್ ಅಲ್-ಶರೀಫ್ ಸೇರಿದ್ದಾರೆ.

ಆಗಸ್ಟ್ 10 ರಂದು ನಡೆದ ಈ ದಾಳಿಯಲ್ಲಿ ಅನಾಸ್ ಅಲ್-ಶರೀಫ್ ಅವರೊಂದಿಗೆ ವರದಿಗಾರ ಮೊಹಮ್ಮದ್ ಖ್ರೈಖ್ ಮತ್ತು ಕ್ಯಾಮರಾಮನ್ಗಳಾದ ಇಬ್ರಾಹಿಂ ಜಾಹೇರ್, ಮೊಹಮ್ಮದ್ ನೌಫಲ್ ಮತ್ತು ಮೋಮೆನ್ ಅಲಿವಾ ಮೃತಪಟ್ಟಿದ್ದಾರೆ ಎಂದು ಅಲ್ ಜಜೀರಾ ಸುದ್ದಿವಾಹಿನಿ ದೃಢಪಡಿಸಿದೆ. ಈ ದಾಳಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ “ಸ್ಪಷ್ಟ ಮತ್ತು ಪೂರ್ವಯೋಜಿತ ದಾಳಿ” ಎಂದು ಅಲ್ ಜಜೀರಾ ಖಂಡಿಸಿದೆ.

ಈ ದಾಳಿಯ ನಂತರ, ಇಸ್ರೇಲ್ ರಕ್ಷಣಾ ಪಡೆ (IDF) ಅನಾಸ್ ಅಲ್-ಶರೀಫ್ ಅವರನ್ನು ಹಮಾಸ್ ಉಗ್ರಗಾಮಿ ಎಂದು ಕರೆದಿದೆ ಮತ್ತು ಅವರು ಪತ್ರಕರ್ತನ ವೇಷದಲ್ಲಿ ಹಮಾಸ್ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂದು ಆರೋಪಿಸಿದೆ. ಅವರು ಹಮಾಸ್ ತಂಡವೊಂದನ್ನು ಮುನ್ನಡೆಸುತ್ತಿದ್ದರು ಮತ್ತು ಇಸ್ರೇಲ್ ಮೇಲೆ ರಾಕೆಟ್ ದಾಳಿಗಳನ್ನು ಸಂಘಟಿಸುವಲ್ಲಿ ತೊಡಗಿದ್ದರು ಎಂದು ಐಡಿಎಫ್ ಹೇಳಿದೆ. ಈ ಆರೋಪಗಳನ್ನು ಅಲ್ ಜಜೀರಾ ಮತ್ತು ಪತ್ರಕರ್ತರ ಹಕ್ಕುಗಳ ಸಂಸ್ಥೆಗಳು ತಳ್ಳಿಹಾಕಿವೆ. ಇಸ್ರೇಲ್‌ನ ಈ ಹೇಳಿಕೆಗಳು ತಮ್ಮ ಪತ್ರಕರ್ತರ ಮೇಲೆ ದಾಳಿಯನ್ನು ಸಮರ್ಥಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಮಾಡುತ್ತಿರುವುದು ಎಂದು ಅಲ್ ಜಜೀರಾ ಹೇಳಿದೆ.

ಪತ್ರಕರ್ತರ ರಕ್ಷಣೆಗಾಗಿರುವ ಸಮಿತಿ (CPJ) ಈ ಘಟನೆಯನ್ನು ಖಂಡಿಸಿದೆ. ಯಾವುದೇ ಸಾಕ್ಷ್ಯ ನೀಡದೆ ಪತ್ರಕರ್ತರನ್ನು ಉಗ್ರಗಾಮಿಗಳು ಎಂದು ಬಣ್ಣಿಸುವುದು ಪತ್ರಿಕಾ ಸ್ವಾತಂತ್ರ್ಯಕ್ಕೆ ವಿರುದ್ಧವಾದ ಕ್ರಮ ಎಂದು ಸಿಪಿಜೆ ಹೇಳಿದೆ. ಯುದ್ಧ ಪ್ರಾರಂಭವಾದಾಗಿನಿಂದ ಇದುವರೆಗೆ 200ಕ್ಕೂ ಹೆಚ್ಚು ಪತ್ರಕರ್ತರು ಗಾಜಾದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳ ಹಕ್ಕುಗಳ ಪರ ಕೆಲಸ ಮಾಡುವ ಸಂಸ್ಥೆಗಳು ವರದಿ ಮಾಡಿವೆ. ಈ ದಾಳಿಯ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಹಾಗೂ ಸಂಘರ್ಷ ವಲಯಗಳಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ರಕ್ಷಣೆ ನೀಡುವಂತೆ ಈ ಸಂಸ್ಥೆಗಳು ಕರೆ ನೀಡಿವೆ.

ಅದಾನಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ಮೋದಿ ಟ್ರಂಪ್‌ ವಿರುದ್ಧ ತುಟಿ ಬಿಚ್ಚುತ್ತಿಲ್ಲ- ರಾಹುಲ್ ಆರೋಪ
ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪದೇ ಪದೇ ಸುಂಕ ಹೆಚ್ಚಳದ ಎಚ್ಚರಿಕೆಗಳನ್ನು ನೀಡುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಉತ್ತರ ನೀಡಲು ವಿಫಲರಾಗುತ್ತಿರುವುದಕ್ಕೆ ಅದಾನಿ ಮೇಲಿರುವ ಭ್ರಷ್ಟಾಚಾರ ಆರೋಪಗಳೇ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ಅದಾನಿ ವಿರುದ್ಧ ಪ್ರಸ್ತುತ ಅಮೆರಿಕದಲ್ಲಿ ನಡೆಯುತ್ತಿರುವ ತನಿಖೆಯೇ ಟ್ರಂಪ್ ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರೂ, ಪ್ರಧಾನಿ ಮೋದಿ ಬಲವಾಗಿ ಪ್ರತಿಕ್ರಿಯಿಸಲು ಸಾಧ್ಯವಾಗದಿರಲು ಕಾರಣವಾಗಿದೆ. ಇದನ್ನು ಭಾರತದ ಜನರು ಅರ್ಥಮಾಡಿಕೊಳ್ಳಬೇಕು ಎಂದು ರಾಹುಲ್ ಎಕ್ಸ್ ವೇದಿಕೆಯಲ್ಲಿ ಆರೋಪಿಸಿದ್ದಾರೆ.

ಮೋದಿ ಮತ್ತು ‘ಎಎ’ (ಆಂಗ್ಲ ಅಕ್ಷರಗಳು) ನಡುವಿನ ಆರ್ಥಿಕ ಸಂಬಂಧಗಳು, ಹಾಗೂ ರಷ್ಯಾ ತೈಲ ವಹಿವಾಟುಗಳನ್ನು ಬಯಲು ಮಾಡುವ ಎಚ್ಚರಿಕೆ ಅದರಲ್ಲಿ ಒಂದು ಎಂದು ರಾಹುಲ್ ಆರೋಪಿಸಿದ್ದಾರೆ. “ಮೋದಿ ಅವರ ಕೈಗಳು ಕಟ್ಟಿಹಾಕಲ್ಪಟ್ಟಿವೆ” ಎಂದೂ ಅವರು ಹೇಳಿದ್ದಾರೆ. ‘ಎಎ’ ಎಂದರೆ ಏನು ಎಂದು ರಾಹುಲ್ ಸ್ಪಷ್ಟಪಡಿಸದಿದ್ದರೂ, ವಿಶ್ವದ ಕುಬೇರರಾದ ಅದಾನಿ ಮತ್ತು ಅಂಬಾನಿಗಳೊಂದಿಗೆ ಮೋದಿ ಅವರ ಸಂಬಂಧಗಳ ಬಗ್ಗೆ ಅವರು ಈ ಹಿಂದೆ ಹಲವು ಬಾರಿ ಆರೋಪಗಳನ್ನು ಮಾಡಿರುವ ದೃಷ್ಟಿಯಿಂದ, ಆ ‘ಎಎ’ ಯಾರು ಎಂದು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಅದಾನಿ ಪೋರ್ಟ್ಸ್ ಮತ್ತು ಸ್ಪೆಷಲ್ ಎಕನಾಮಿಕ್ ಝೋನ್‌ನ ಕಾರ್ಯಕಾರಿ ಅಧ್ಯಕ್ಷರಾಗಿದ್ದ ಗೌತಮ್ ಅದಾನಿ ತಮ್ಮ ಹುದ್ದೆಯಿಂದ ಕೆಳಗಿಳಿದಿರುವುದು ರಾಹುಲ್ ಗಾಂಧಿ ಮಾಡುತ್ತಿರುವ ಈ ವ್ಯಾಖ್ಯಾನಗಳಿಗೆ ಮತ್ತಷ್ಟು ಬಲ ನೀಡಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಅದಾನಿ, ಅವರ ಸಹೋದರನ ಪುತ್ರ ಮತ್ತು ಅದಾನಿ ಗ್ರೀನ್ ಎನರ್ಜಿ ನಿರ್ದೇಶಕ ಸಾಗರ್ ಅದಾನಿ ಸೇರಿದಂತೆ ಏಳು ಜನರ ವಿರುದ್ಧ ಅಮೆರಿಕದ ನ್ಯಾಯಾಲಯಗಳಲ್ಲಿ ಆರೋಪಗಳು ದಾಖಲಾಗಿದ್ದವು.

ಲಂಕೇಶ್ ಅವರ ಅಧ್ಯಯನಶೀಲತೆ ಮಾದರಿಯಾಗಲಿ: ಪತ್ರಕರ್ತರ ಮಕ್ಕಳಿಗೆ ಕೆ.ವಿ.ಪ್ರಭಾಕರ್ ಕರೆ
ಬೆಳಗ್ಗೆ ಎದ್ದು ಸೆಗಣಿ ಬಾಚಿ, ಹಾಲು ಕರೆದು ಶಾಲೆಗೆ ಬರುವ ಮಕ್ಕಳ ಕೊಡುಗೆ ದೊಡ್ಡದು: ಕೆ.ವಿ.ಪ್ರಭಾಕರ್
ಹಾವೇರಿ ಜು 21:ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಪ್ರತಿಯೊಬ್ಬರ ಒಳಗೂ ಪ್ರತಿಭೆ ಇರುತ್ತದೆ. ಅದು ಹೊರಗೆ ಬರಲು ಅವಕಾಶ ಬೇಕು. ಸಮಾಜ ಈ ಅವಕಾಶವನ್ನು ಒದಗಿಸಿಕೊಡುತ್ತದೆ. ಸಮಾಜವೇ ಪ್ರತಿಭೆ ಹೊರಗೆ ಬರಲು ಹದವಾದ ಭೂಮಿಯ ಹಾಗೆ ಕೆಲಸ ಮಾಡುತ್ತದೆ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿರುತ್ತದೆ. ನಾವು ಸಮಾಜಮುಖಿಗಳಾಗುವ ಮೂಲಕ ಸಮಾಜದ ಈ ಋಣವನ್ನು ತೀರಿಸಬೇಕಿದೆ ಎಂದರು.

ನಿಮ್ಮ ಹಾಗೆಯೇ ಪ್ರತಿಭೆ ಇರುವ ಹಾಗೂ ಅವಕಾಶ ಇಲ್ಲದ ಮಕ್ಕಳು ಸಮಾಜದಲ್ಲಿ ಲಕ್ಷಾಂತರ ಇದ್ದಾರೆ. ಶಾಲೆಗೆ ಹೋಗಲು ಸಾಧ್ಯವಿಲ್ಲದೆ ಬೆಳಗ್ಗೆ ಹಾಲು ಮಾರುತ್ತಾ, ಹೂ-ತರಕಾರಿ-ಹಣ್ಣು ಮಾರುತ್ತಾ, ಗ್ಯಾರೇಜ್ ಗಳಲ್ಲಿ, ಕಾರ್ಖಾನೆಗಳಲ್ಲಿ ದಿನಗೂಲಿಗಳಾಗಿ ದುಡಿಯುತ್ತಿರುವ ಮಕ್ಕಳು ಇದ್ದಾರೆ.

ಈ ಮಕ್ಕಳು ದುಡಿಮೆಯಲ್ಲಿ ತೊಡಗಿದ್ದಾರೆ ಎಂದರೆ, ದೇಶದ-ರಾಜ್ಯದ ಆರ್ಥಿಕ ಉತ್ಪತ್ತಿಯಲ್ಲಿ ತೊಡಗಿದ್ದಾರೆ ಅಂತಲೇ ಅರ್ಥ.

ದಿನಾ ಬೆಳಗ್ಗೆ ಎದ್ದು ಕೊಟ್ಟಿಗೆಯಲ್ಲಿ ಸೆಗಣಿ ಬಾಚಿ, ಹಾಲು ಕರೆದು, ಮನೆಗಳಿಗೆ ಹಾಲು ಹಾಕಿ ಶಾಲೆಗೆ ಬರುವ ಮಕ್ಕಳು ಏಕ ಕಾಲಕ್ಕೆ ಮನೆಯ ಮತ್ತು ದೇಶದ ಆರ್ಥಿಕ ಅಗತ್ಯಗಳನ್ನು ಈಡೇರಿಸಿ ಬರುತ್ತಾರೆ. ಬೆಳಗ್ಗೆ ಎದ್ದು ನೇರವಾಗಿ ತಿಂಡಿ ತಿಂದು, ಬಸ್ಸು-ಕಾರುಗಳಲ್ಲಿ ಶಾಲೆಗೆ ಬರುವ ಮಕ್ಕಳಿಗಿಂತ ಸೆಗಣಿ ಬಾಚಿ ಶಾಲೆಗೆ ಬರುವ ಮಕ್ಕಳು ಶೇ50 ರಷ್ಟು ಅಂಕ ಗಳಿಸಿದರೂ ಕೂಡ ಇವರ ಸಾಮಾಜಿಕ ಕೊಡುಗೆ ದೊಡ್ಡದಾಗಿರುತ್ತದೆ. ಆದ್ದರಿಂದ ಪ್ರತಿಭೆ ಅಂದ ಕೂಡಲೇ ಮಾರ್ಕ್ಸ್ ಕಾರ್ಡ್ ಮಾತ್ರ ಅಲ್ಲ ಎನ್ನುವುದನ್ನು ನಾವು ಮರೆಯಬಾರದು.

ಹಾಗೆಯೇ, ಇಂದು ಪುರಸ್ಕಾರಗೊಳ್ಳುತ್ತಿರುವ ಮಕ್ಕಳು ಒಂದು ಮಾತು ನೆನಪಿಡಬೇಕು. ಕಲಿಕೆಯ ಕುತೂಹಲ ಮತ್ತು ಅಧ್ಯಯನಶೀಲತೆ ಇಲ್ಲದಿದ್ದರೆ ನಿಮ್ಮೊಳಗಿನ ಪ್ರತಿಭೆ ಬಾಡುತ್ತದೆ. ಮೊಬೈಲ್, ಟ್ಯಾಬ್ ಗಳ ಗೀಳು ನಿಮ್ಮೊಳಗಿನ ಸೃಜನಶೀಲತೆಯನ್ನು ಕೊಂದು ಪ್ರತಿಭಾಶೂನ್ಯರನ್ನಾಗಿಸುತ್ತದೆ.

ಇಲ್ಲಿರುವವರೆಲ್ಲಾ ಪತ್ರಕರ್ತರ ಮಕ್ಕಳೇ‌ ಆಗಿರುವುದರಿಂದ ಪತ್ರಕರ್ತ ಲಂಕೇಶ್ ಅವರ ಉದಾಹರಣೆಯನ್ನೇ ಕೊಡುತ್ತೇನೆ.

ಲಂಕೇಶ್ ಅವರು ನಿಧನರಾಗಿ ಅವರ ಮೃತದೇಹವನ್ನು ಹಾಸಿಗೆಯಿಂದ ಮೇಲೆತ್ತಿದಾಗ ಕೆಳಗೆ “ಕನ್ನಡದ ಭಾಷಾ ವಿಜ್ಞಾನಿ ಡಿ.ಎನ್.ಶಂಕರಭಗಟ್ಟರ ” ಕನ್ನಡ ಶಬ್ದ ರಚನೆ” ಪುಸ್ತಕವಿತ್ತು.

ಅಷ್ಟೊತ್ತಿಗಾಗಲೇಲಂಕೇಶ್ ಅವರ ಒಂದು ಕಣ್ಣು ಪೂರ್ತಿ ಹೋಗಿತ್ತು. ಮತ್ತೊಂದು ತೊಂದರೆ ಕೊಡುತ್ತಿತ್ತು. ಆದರೂ ಸಾವಿನ ಕೊನೆ ಕ್ಷಣದವರೆಗೂ ನೆಪ ಹೇಳದೆ ಓದುತ್ತಿದ್ದರು. ನಿಧನರಾಗುವ ಕೊನೆ ಕ್ಷಣದವರೆಗೂ ಎರಡು ಲೇಖನಗಳನ್ನು ಬರೆದು ಕಣ್ಣು ಮುಚ್ಚಿದರು.

20 ವರ್ಷಗಳ ನಿರಂತರ ಬರವಣಿಗೆ ಲಂಕೇಶ್ ಅವರನ್ನು ಕನ್ನಡ ಜಗತ್ತಿನ ಅತಿ ಎತ್ತರದ ಸ್ಥಾನದಲ್ಲಿ ಇರಿಸಿತ್ತು. ಹಣ, ಖ್ಯಾತಿ, ಗೌರವ, ಪ್ರಚಾರ, ಪ್ರಸಿದ್ಧಿ, ಘನತೆ ಎಲ್ಲವೂ ದೊರಕಿತ್ತು. ಬೇಕಾಗಿದ್ದದ್ದು ಇನ್ನೇನೂ ಬಾಕಿ ಇರಲಿಲ್ಲ. ಆದರೂ ಒಂದೇ ಕಣ್ಣಲ್ಲಿ ಕೊನೆ ಉಸಿರಿನವರೆಗೂ ಓದಿದರು.

ಅಷ್ಟು ಮಾತ್ರವಲ್ಲ, “2000 ಜನವರಿ 25 ರಂದು ನಿಧನರಾದ ಲಂಕೇಶ್, ಜನವರಿ 24 ರ ಕೊನೆಯ ಸಂಚಿಕೆಯನ್ನು ರಾತ್ರಿ ಪೂರ್ತಿಯಾಗಿ ಮುಗಿಸಿ ಹೋದರು.

ಲಂಕೇಶ್ ಅವರನ್ನು ರೂಪಿಸಿದ್ದು ಅವರ ಬಹುರೂಪಿ ಓದು. ತನ್ನ ಕಾಲಮಾನದ ಎಲ್ಲಾ ವಯೋಮಾನದವರ ಬರವಣಿಗೆಯನ್ನು ಓದುತ್ತಿದ್ದರು.‌

ಕತೆ, ನಾಟಕ, ಲೇಖನ, ಅಂಕಣ,‌ಕಾವ್ಯ, ವಿಮರ್ಷೆ, ಭಾಷಾಂತರ ಸೇರಿ ವೈವಿದ್ಯಮಯ ಬರವಣಿಗೆ ಲಂಕೇಶ್ ಅವರಿಂದ ಸಾಧ್ಯವಾಗಿದ್ದು ಅವರ ವೈವಿದ್ಯಮಯ ಓದು, ಚಳವಳಿ ಮತ್ತು ಚಿಂತನೆಯಿಂದ.

ನಾವೆಲ್ಲಾ ಶಾಲೆಯಲ್ಲಿ ಓದುವಾಗ ಬೆಲೆ ಏರಿಕೆ ವಿರುದ್ಧ, ಬಸ್ ದರ ಏರಿಕೆ ವಿರುದ್ಧ ಪ್ರತಿಭಟನೆಗಳು ನಡೆದಾಗ ಆ ಬಗ್ಗೆ ತಿಳಿದುಕೊಳ್ಳುತ್ತಿದ್ದೆವು. ನಮ್ಮ ಅಪ್ಪ ಅಮ್ಮ ದುಡಿದ ಹಣ ಎಲ್ಲಿ, ಹೇಗೆ ವ್ಯಯವಾಗುತ್ತದೆ ಎನ್ನುವುದನ್ನು ತಿಳಿದುಕೊಳ್ಳುತ್ತಿದ್ದೆವು. ಆ ಮೂಲಕ ನಮ್ಮ ಸಾಮಾಜಿಕ ಪ್ರಜ್ಞೆ ಬೆಳೆಯುತ್ತಿತ್ತು. ಈಗ ಯಾವುದಾದರೂ ಸ್ಟ್ರೈಕ್ ಆಗಿ ಶಾಲೆ-ಕಾಲೇಜಿಗೆ ರಜೆ ಕೊಟ್ಟರೆ ಸೀದಾ ಮೊಬೈಲ್ ಹಿಡ್ಕೊಂಡು ಕೂರುವ, ಮಾಲ್ ಗಳಿಗೆ ಓಡುವವರೇ ಹೆಚ್ಚು. ಈ ಮಕ್ಕಳ ಸಾಮಾಜಿಕ ತಿಳುವಳಿಕೆ ಬೆಳೆಯುವುದೇ ಇಲ್ಲ. ಇವರಿಗೆ ರಾಜ್ಯದ ಮುಖ್ಯಮಂತ್ರಿ ಯಾರು, ದೇಶದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಯಾರು ಎನ್ನುವುದೇ ಗೊತ್ತಿರುವುದಿಲ್ಲ.

ಇಂಥಾ ಮೊಬೈಲ್ ಮಕ್ಕಳು ಸಮಾಜಮುಖಿಗಳಾಗುವುದಿಲ್ಲ. ಬದಲಿಗೆ ಸಮಾಜಕ್ಕೆ ಮತ್ತು ಕುಟುಂಬಕ್ಕೂ ಹೊರೆ ಆಗುತ್ತಾರೆ. ಇವತ್ತು ಇಲ್ಲಿ ಪುರಸ್ಕೃತರಾದ ಮಕ್ಕಳು ಸಮಾಜಮುಖಿಗಳಾಗುತ್ತೀರಿ ಎನ್ನುವ ಭರವಸೆಯಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರು ಕೊಟ್ಟ ಮಾತಿಗೆ ತಪ್ಪಿದ್ದಾರೆ, Jds , Bjb ಪಕ್ಷಗಳ ವಿರುದ್ದ ಕೃಷ್ಣಬೈರೇಗೌಡರ ವಾಗ್ದಾಳಿ
ಹಾಸನ : “ಮಾಜಿ ಪ್ರಧಾನಿ ದೇವೇಗೌಡರು ಕಳೆದ ಲೋಕಸಭೆ ಚುನಾವಣೆಯಲ್ಲಿ ‘ನಮ್ಮನ್ನು ಗೆಲ್ಲಿಸಿದರೆ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ’ ಎಂದಿದ್ದರು. ಜನರು ಬಿಜೆಪಿ-ಜೆಡಿಎಸ್‌ಗೆ ಹೆಚ್ಚಿನ ಸೀಟ್‌ಗಳನ್ನು ಕೊಟ್ಟರು. ಆದರೆ, ಒಂದು ವರ್ಷ ಮೂರು ತಿಂಗಳು ಕಳೆದರೂ ಮೇಕೆದಾಟು ಬಗ್ಗೆ ಒಂದು ಮಾತೂ ಆಡಿಲ್ಲ. ಇದು ರಾಜ್ಯಕ್ಕೆ ದ್ರೋಹವಲ್ಲವೇ?” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.

ಚನ್ನರಾಯಪಟ್ಟಣದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿತ “ಯುವ ಪರ್ವ” ಸಮಾವೇಶದಲ್ಲಿ ಅವರು ಮಾತನಾಡಿದರು.

“ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಯಿತು, ಒಬ್ಬರೇ ಶಾಸಕರು ಗೆದ್ದಿದ್ದಾರೆ. ಆದರೆ, ಸಂಸದರು ಹೆಚ್ಚಿನ ಮತಗಳಿಂದ ಗೆದ್ದಿದ್ದಾರೆ. ಜನರಿಗೆ ಕಾಂಗ್ರೆಸ್ ಮೇಲೆ ಒಲವಿದೆ, ನಮ್ಮ ತಪ್ಪಿನಿಂದ ಹಿನ್ನಡೆಯಾಯಿತು, ಜನರ ತಪ್ಪಿಲ್ಲ,” ಎಂದರು. “ಕಂದಾಯ ಇಲಾಖೆಯಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದೇವೆ. ನಮ್ಮ ಸರ್ಕಾರ ಜನಪರ ಕೆಲಸ ಮಾಡುತ್ತಿದೆ. ಯುವ ಕಾಂಗ್ರೆಸ್ ಮತ್ತೊಮ್ಮೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು,” ಎಂದು ಕರೆ ನೀಡಿದರು.

ಬಿಜೆಪಿ-ಜೆಡಿಎಸ್‌ನಿಂದ ಕರ್ನಾಟಕಕ್ಕೆ ದ್ರೋಹ:“ಮಾಜಿ ಪ್ರಧಾನಿ ಕಳೆದ ಲೋಕಸಭೆ ಚುನಾವಣೆಯಲ್ಲಿ ‘ನಮ್ಮನ್ನು ಗೆಲ್ಲಿಸಿದರೆ ಒಂದು ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ’ ಎಂದಿದ್ದರು. ಜನರು ಬಿಜೆಪಿ-ಜೆಡಿಎಸ್‌ಗೆ ಹೆಚ್ಚಿನ ಸೀಟ್‌ಗಳನ್ನು ಕೊಟ್ಟರು. ಆದರೆ, ಒಂದು ವರ್ಷ ಮೂರು ತಿಂಗಳು ಕಳೆದರೂ ಮೇಕೆದಾಟು ಬಗ್ಗೆ ಒಂದು ಮಾತೂ ಆಡಿಲ್ಲ. ಇದು ರಾಜ್ಯಕ್ಕೆ ದ್ರೋಹವಲ್ಲವೇ?” ಎಂದು ಪ್ರಶ್ನಿಸಿದರು. “ಪೆನ್ನು, ಅಧಿಕಾರ, ಸರ್ಕಾರ ಎಲ್ಲವೂ ಇದೆ, ಆದರೆ ಏಕೆ ಸಹಿ ಮಾಡಿಸಿಲ್ಲ? ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡಬೇಕು, ಆದರೆ 53 ಪೈಸೆಯೂ ಕೊಟ್ಟಿಲ್ಲ. ಇವರೆಲ್ಲ ನಾಲಾಯಕ್‌ಗಳು, ಕರ್ನಾಟಕದ ದ್ರೋಹಿಗಳು,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಭಾಷೆಗೆ ಅವಮಾನ:“ಬಿಜೆಪಿಯವರು ಕನ್ನಡ ಭಾಷೆಯನ್ನು ನಿರ್ಣಾಮ ಮಾಡಲು, ಕನ್ನಡವನ್ನು ಪಕ್ಕಕ್ಕೆ ಸರಿಸಿ ಹಿಂದಿ ಹೇರಲು ಹೊರಟಿದ್ದಾರೆ. ನಮ್ಮ ಕನ್ನಡ ಭಾಷೆಗೆ 2000 ವರ್ಷಗಳ ಇತಿಹಾಸವಿದೆ. ಕನ್ನಡಿಗರನ್ನೇ ಸದೆಬಡಿಯಲು ಬಲವಂತವಾಗಿ ಹಿಂದಿ ಹೇರಲು ಮುಂದಾಗಿದ್ದಾರೆ. ಜೆಡಿಎಸ್ ಬಿಜೆಪಿಯ ಏಜೆಂಟ್ ಆಗಿ ಗುಲಾಮಗಿರಿ ಮಾಡುತ್ತಿದೆ,” ಎಂದು ಟೀಕಿಸಿದರು.

ಕಾಂಗ್ರೆಸ್‌ನ ಹೋರಾಟ: “ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ರಾಜ್ಯದ ಪರವಾಗಿ ಕಲ್ಲು-ಬಂಡೆಯಂತೆ ಗಟ್ಟಿಯಾಗಿ ಮಾತನಾಡುತ್ತಾರೆ. ಆದರೆ, ನಮ್ಮ ನೀರು, ನಮ್ಮ ಪಾಲು ಕೇಳಿದ್ದಕ್ಕೆ ಸಿಬಿಐ, ಇಡಿಯಂತಹ ಸಂಸ್ಥೆಗಳನ್ನು ಛೂ ಬಿಟ್ಟು ಕೇಸ್‌ ಹಾಕಿಸುತ್ತಿದ್ದಾರೆ. ಆದರೂ, ನಾವು ಕರ್ನಾಟಕದ ಹಕ್ಕು, ನಮ್ಮ ಪಾಲಿಗಾಗಿ ಹೋರಾಟ ಮಾಡುತ್ತೇವೆ,” ಎಂದರು. “ಬಿಜೆಪಿ-ಜೆಡಿಎಸ್ ಕರ್ನಾಟಕವನ್ನು ಮಾರಾಟ ಮಾಡಲು ಹೊರಟಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಹಳ್ಳಿ-ಹಳ್ಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಬೇಕು,” ಎಂದು ಕರೆ ನೀಡಿದರು.

ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಸಂಸದ ಶ್ರೇಯಸ್‌ಪಟೇಲ್, ಶಾಸಕ ರಿಜ್ವಾನ್ ಹರ್ಷದ್, ಮತ್ತು ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಉಪಸ್ಥಿತರಿದ್ದರು.

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಫಿಶ್‌ ವೆಂಕಟ್‌ ನಿಧನ
ಹೈದರಾಬಾದ್: ತೆಲುಗು ಚಿತ್ರರಂಗದ ಪ್ರಸಿದ್ಧ ಹಾಸ್ಯ ನಟ ಫಿಶ್ ವೆಂಕಟ್ ಅವರು ಮೂತ್ರಪಿಂಡ ಸಂಬಂಧಿ ತೊಂದರೆಯಿಂದ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಪವನ್ ಕಲ್ಯಾಣ್ ಆರ್ಥಿಕ ನೆರವು ಒದಗಿಸಿದ್ದರೂ, ಹಣದ ಕೊರತೆಯಿಂದ ಸೂಕ್ತ ಚಿಕಿತ್ಸೆಯನ್ನು ಪಡೆಯಲಾಗದೆ ಅವರು ನಿಧನರಾಗಿದ್ದಾರೆ.

ತೆಲುಗು ಚಲನಚಿತ್ರಗಳಲ್ಲಿ ವಿಲನ್ ಪಾತ್ರದಿಂದ ಗಮನ ಸೆಳೆದಿದ್ದ ಫಿಶ್ ವೆಂಕಟ್‌ಗೆ 54 ವರ್ಷ ವಯಸ್ಸಾಗಿತ್ತು. ಕೆಲವು ವರ್ಷಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾಗ ಕೊನೆಯುಸಿರೆಳೆದರು, ಇದರಲ್ಲಿ ಎರಡೂ ಮೂತ್ರಪಿಂಡಗಳು ಹಾನಿಗೊಳಗಾಗಿದ್ದವು. ಕುಟುಂಬ ಸದಸ್ಯರು ಅವರನ್ನು ಇತ್ತೀಚೆಗಷ್ಟೇ ಡಯಾಲಿಸಿಸ್‌ಗಾಗಿ ಬೋಡುಪ್ಪಲ್ ಆಸ್ಪತ್ರೆಗೆ ದಾಖಲಿಸಿದ್ದರು.

ವೈದ್ಯರು ಎರಡೂ ಮೂತ್ರಪಿಂಡಗಳನ್ನು ತೆಗೆಯುವ ಸಲಹೆ ನೀಡಿದ್ದರು, ಆದರೆ ಆರ್ಥಿಕ ಸ್ಥಿತಿ ದುರ್ಬಲವಾಗಿದ್ದ ಕಾರಣ ಚಿಕಿತ್ಸೆಯ ಅವಕಾಶ ಸಿಗಲಿಲ್ಲ. ದಾನಿಗಳಿಂದ ಸಹಾಯ ಕೋರಿದ ಕೆಲವೇ ದಿನಗಳಲ್ಲಿ ಫಿಶ್ ವೆಂಕಟ್‌ರ ನಿಧನವಾಗಿದ್ದು, ಇದರಿಂದ ಕುಟುಂಬಸ್ಥರು ದುಃಖಕ್ಕೀಡಾಗಿದ್ದಾರೆ.

ಪವನ್ ಕಲ್ಯಾಣ್ ಈ ಮೊದಲು ಈ ನಟನಿಗೆ ಸಹಾಯ ಹಸ್ತ ಚಾಚಿದ್ದರು. ಫಿಶ್ ವೆಂಕಟ್‌ರ ನಿಜವಾದ ಹೆಸರು ಮಂಗಳಂಪಲ್ಲಿ ವೆಂಕಟೇಶ್ ಆಗಿದ್ದು, ಮುಶೀರಾಬಾದ್ ಮಾರುಕಟ್ಟೆಯಲ್ಲಿ ಮೀನು ವ್ಯಾಪಾರ ಮಾಡುವ ಮೂಲಕ ಈ ಹೆಸರಿಗೆ ಗುರುತಿಸಿಕೊಂಡಿದ್ದರು. ಅವರು ಮುಶೀರಾಬಾದ್‌ನಲ್ಲಿ ನೆಲೆಸಿದ್ದು, ನಟ ಶ್ರೀಹರಿ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು, ನಿರ್ದೇಶಕ ವಿ.ವಿ. ವಿನಾಯಕ್ ಅವರಿಂದ ನಟನಾಗಿ ಪರಿಚಯ ದೊರೆಯಿತು.

ಫಿಶ್ ವೆಂಕಟ್ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯನಟ ಮತ್ತು ಪಾತ್ರ ಕಲಾವಿದನಾಗಿ ಪ್ರೇಕ್ಷಕರನ್ನು ಮನರಂಜಿಸಿದ್ದಾರೆ. ಅವರು ಆದಿ, ದಿಲ್, ಬನ್ನಿ, ಅತ್ತಾರಿಂತಿಕಿ ದಾರೇದಿ, ಡಿಜೆ ಟಿಲ್ಲು ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿ ಮೆಚ್ಚುಗೆ ಪಡೆದಿದ್ದಾರೆ. ಇವರು ಎರಡು ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ, ಆದರೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ.

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ ಎಂ ಸಿದ್ದರಾಮಯ್ಯ
ಮೈಸೂರು ಜು 28: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಬ್ರಾತೃತ್ವ ನೆಲೆಸಿಲ್ಲ. ಏಕೆ ಎನಗನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದರು.

1949 ನವೆಂಬರ್ 25 ರಂದು ಸಂವಿಧಾನ ಜಾರಿಯ ಮೊದಲ ದಿನ‌ ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದ್ದರು. ಅದರಲ್ಲಿ ಅವರು, ಅಸಮಾನತೆ, ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಅಸಮಾನತೆ ಅಳಿಸದಿದ್ದರೆ , ಅಸಮಾನತೆಗೆ ಒಳಗಾದ ಜನ ಪ್ರಜಾಪ್ರಭುತ್ವದ ಸೌಧವನ್ನು ದ್ವಂಸ ಮಾಡುತ್ತಾರೆ” ಎಂದು ಅಂಬೇಡ್ಕರ್ ಎಚ್ಚರಿಸಿದ್ದರು.

ಇದು ಪ್ರತಿಯೊಬ್ಬ ಅಧಿಕಾರಿಗೆ ನೀಡಿರುವ ಎಚ್ಚರಿಕೆ. ಪ್ರಜಾಪ್ರಭುತ್ವದ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಜವಾಬ್ದಾರಿ ನಿರ್ವಹಿಸದಿದ್ದರೆ ಏನಾಗುತ್ತದೆ ಎನ್ನುವುದನ್ನು ಅಂಬೇಡ್ಕರ್ ಎಚ್ಚರಿಸಿದ್ದಾರೆ ಎಂದರು.

ನಮ್ಮ ದೇಶದಲ್ಲಿ ಅನೇಕ ಜಾತಿ, ಧರ್ಮಗಳಿವೆ. ಬುದ್ದನಿಂದ, ಬಸವಣ್ಣ, ಅಂಬೇಡ್ಕರ್ ಎಲ್ಲರೂ ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ್ದಾರೆ. ಆದರೂ ಜಾತಿ ಹೋಗಿಲ್ಲ . ಅದಕ್ಕೇ ಲೋಹಿಯಾ ಅವರು, ನಮ್ಮ ಸಮಾಜ ಚಲನೆ ರಹಿತವಾದ ವ್ಯವಸ್ಥೆ ಎಂದರು. ಎಲ್ಲರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಸಮಾಜದಲ್ಲಿ ಚಲನಶೀಲತೆ ಬರುತ್ತದೆ ಎಂದರು.

KAS ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ನಿಮಗೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಕೊಳ್ಳುವ ಶಕ್ತಿ ಹೆಚ್ಚಿರುವ ಸಮಾಜ ಆರ್ಥಿಕವಾಗಿ ಪ್ರಗತಿ ಕಾಣುತ್ತದೆ. ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿರುವುದು ಹೇಗೆ ಎನ್ನುವುದನ್ನು ಮುಖ್ಯಮಂತ್ರಿಗಳು ವಿವರಿಸಿದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದರು.

ಕೋಮುಗಲಭೆ, ಸುಳ್ಳು ಸುದ್ದಿ, ಜಾತಿ ಶೋಷಣೆ, ಧಾರ್ಮಿಕ ಶೋಷಣೆಗಳು ಇರುವವರೆಗೆ ಅಸಮಾನತೆ ಇರುತ್ತದೆ ಎಂದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಿಮ್ಮ ಮತ್ತು ನಮ್ಮ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ನಾವು ಈ ಸಮಾಜದ ಖುಣಿಗಳಾಗೋಣ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉಸ್ತುವಾರಿ ಕಾರ್ಯದರ್ಶಿ ರಣದೀಪ್, ಕೆ.ಎ.ಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಶಿವಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ ʼಸಮಾಜವಾದʼ ಮತ್ತು ʼಜಾತ್ಯತೀತʼ ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ: ಸಿ ಎಂ ಸಿದ್ದರಾಮಯ್ಯ
ಮೈಸೂರು ಜು 18: ಯುವ ಕಾಂಗ್ರೆಸ್ ಸೇನಾನಿಗಳು ನಮ್ಮ ಸಂವಿಧಾನದ “ಸಮಾಜವಾದ” ಮತ್ತು “ಜಾತ್ಯತೀತ” ಮೌಲ್ಯದ ರಕ್ಷಣೆಗೆ ನಿಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು.

ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ ಮಾಡುತ್ತಿದೆ. ಈ ಷಡ್ಯಂತ್ರವನ್ನು ರಾಜ್ಯದ ಮತ್ತು ದೇಶದ ಯುವ ಜನತೆ ಸೋಲಿಸಲು ಕಟ್ಟಿಬದ್ದವಾಗಿ ನಿಂತು ಹೋರಾಟ ಮುನ್ನಡೆಸುತ್ತದೆ ಎನ್ನುವ ಭರವಸೆ ತಮಗಿದೆ ಎಂದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಸೈದ್ಧಾಂತಿಕವಾಗಿ ಯಾವತ್ತೂ ರಾಜಿ ಮಾಡಿಕೊಳ್ಳಬಾರದು. ರಾಜಿ ಮಾಡಿಕೊಂಡವರು ರಾಜಕೀಯವಾಗಿ ಉಳಿಯುವುದಿಲ್ಲ, ಬೆಳೆಯುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿ ಪಕ್ಷಕ್ಕೆ ಭಾರತೀಯ ಸಮಾಜಕ್ಕೆ ಪೂರಕವಾದ ಸಿದ್ಧಾಂತವೇ ಇಲ್ಲ. ಸಮಾಜವನ್ನು ವಿಭಜಿಸುವ ಸಿದ್ಧಾಂತ ಬಿಜೆಪಿಯದ್ದು. ಜೆಡಿಎಸ್ ರಾಜ್ಯದ ಕೆಲವೇ ಸ್ಥಳಗಳಲ್ಲಿ ಅಸ್ತಿತ್ವದಲ್ಲಿದೆ. ಈ ಪಕ್ಷಕ್ಕೂ ಸರಿಯಾದ ಸಿದ್ಧಾಂತ ಇಲ್ಲ ಎಂದರು.

ಮಂಡಲ್ ಕಮಿಷನ್ ವರದಿಯನ್ನು ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್, ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯನ್ನು ಕೊಟ್ಟಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು ಇದೇ ಕಮಂಡಲವಾದಿಗಳು ಮತ್ತು ಮನುವಾದಿಗಳು. ಇವರ ಈ ಜನವಿರೋಧಿ ಇತಿಹಾಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ನೆನಪಿಡಬೇಕು ಎಂದರು.

ಮಹಿಳಾ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ರಾಜೀವ್ ಗಾಂಧಿ ಯವರು ಸಂವಿಧಾನಕ್ಕೆ ತಿದ್ದುಪಡಿ ತಂದು 35% ಮಹಿಳಾ ಮೀಸಲಾತಿ ತಂದರು. ಈ ಮೀಸಲಾತಿಯನ್ನು 50% ಗೆ ಹೆಚ್ಚಿಸಲು ಹೋರಾಟ ಮಾಡಿದ್ದು ಸೋನಿಯಾಗಾಂಧಿ. ಇದನ್ನು ನೆನಪಿಡಬೇಕು ಎಂದರು.

ಪಹಲ್ಗಾಮ್ ಭಯೋತ್ಪಾದಕ ದಾಳಿ: ರೆಸಿಸ್ಟೆನ್ಸ್ ಫ್ರಂಟ್ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆಯಾಗಿ ಘೋಷಿಸಿದ ಅಮೆರಿಕ
ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಕಗ್ಗೊಲೆ ಮಾಡಿದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಸಂಘಟನೆಯನ್ನು ಅಮೆರಿಕ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ.

ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಮುಂಚೂಣಿ ಸಂಘಟನೆ ಇದು ಎಂದು ಹೇಳಲಾಗಿದೆ. ಇದನ್ನು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಬಹಿರಂಗಪಡಿಸಿದ್ದಾರೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ವಿವೇಚನಾರಹಿತವಾಗಿ ಗುಂಡು ಹಾರಿಸಿದ್ದರು.

ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಲ್ಲಿ 26 ಅಮಾಯಕರು ಪ್ರಾಣ ಕಳೆದುಕೊಂಡರು. ಟಿಆರ್‌ಎಫ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ಸಂದರ್ಭದಲ್ಲಿ, ಟಿಆರ್‌ಎಫ್ ಅನ್ನು ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಅಮೆರಿಕ ಘೋಷಿಸಿದೆ.

ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಅಮೆರಿಕ ವಿದೇಶಿ ಭಯೋತ್ಪಾದಕ ಸಂಘಟನೆ (ಎಫ್‌ಟಿಒ) ಮತ್ತು ವಿಶೇಷವಾಗಿ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕ (ಎಸ್‌ಡಿಜಿಟಿ) ಸಂಘಟನೆ ಎಂದು ಹೆಸರಿಸುತ್ತಿದೆ ಎಂದು ಮಾರ್ಕೊ ರುಬಿಯೊ ಘೋಷಿಸಿದರು. ಪಹಲ್ಗಾಮ್ ಘಟನೆಯು 2008 ರ ಮುಂಬೈ ಭಯೋತ್ಪಾದಕ ದಾಳಿಯ ನಂತರ ಭಾರತದಲ್ಲಿ ನಡೆದ ಅತಿದೊಡ್ಡ ದಾಳಿಯಾಗಿದೆ ಎಂದು ಅವರು ಹೇಳಿದರು.

ಹಿಂದೆ ಭಾರತೀಯ ಭದ್ರತಾ ಪಡೆಗಳ ಮೇಲೆ ಹಲವಾರು ದಾಳಿಗಳಿಗೆ ಟಿಆರ್‌ಎಫ್ ಕಾರಣವಾಗಿದೆ ಎಂದು ಅವರು ಹೇಳಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತವು ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿ ಭಯೋತ್ಪಾದಕ ಗುಂಪುಗಳ ಶಿಬಿರಗಳನ್ನು ನಾಶಪಡಿಸಿದೆ ಎಂದು ತಿಳಿದಿದೆ.

ಲಷ್ಕರ್-ಎ-ತೈಬಾದ ಅಂಗಸಂಸ್ಥೆಯಾಗಿ ಟಿಆರ್‌ಎಫ್ ಅನ್ನು 2019 ರಲ್ಲಿ ರಚಿಸಲಾಯಿತು. ಇದು ಲಷ್ಕರ್-ಎ-ತೈಬಾದ ಮತ್ತೊಂದು ಹೆಸರಿಗಿಂತ ಹೆಚ್ಚೇನೂ ಅಲ್ಲ. . ಪುಲ್ವಾಮಾ ದಾಳಿ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ, ಪಾಕಿಸ್ತಾನ ಸೇನೆ ಮತ್ತು ಐಎಸ್‌ಐ ತಂತ್ರಜ್ಞರು ಹಣಕಾಸು ಕ್ರಿಯಾ ಕಾರ್ಯಪಡೆ (ಟಿಎಟಿಎಫ್) ಪರಿಶೀಲನೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಕೋರ್ ಗುಂಪನ್ನು ಮುನ್ನೆಲೆಗೆ ತಂದರು.

ಕಳೆದ ಮೂರರಿಂದ ನಾಲ್ಕು ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರು, ಕಾಶ್ಮೀರಿ ಪಂಡಿತರು ಮತ್ತು ಸಾಮಾನ್ಯ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸುತ್ತಿದೆ. ಜೂನ್ 2021 ರಲ್ಲಿ, ಅದು ಜಮ್ಮುವಿನಲ್ಲಿರುವ ಭಾರತೀಯ ವಾಯುಪಡೆ (ಐಎಎಫ್) ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆಸಿತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಜನವರಿ 2023 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಎಲ್‌ಇಟಿಯನ್ನು ನಿಷೇಧಿಸಿತು. 2022 ರಲ್ಲಿ, ಅದರ ಕಮಾಂಡರ್ ಸಜ್ಜದ್ ಗುಲ್‌ನನ್ನು ಭಯೋತ್ಪಾದಕ ಎಂದು ಘೋಷಿಸಲಾಯಿತು.

ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಲು ಆಗ್ರಹಿಸಿ ಕಾರ್ಮಿಕರ ಸಾರ್ವತ್ರಿಕ ಮುಷ್ಕರ
ಪ್ರತಿಭಟನಗಾರರ ಅನೇಕರನ್ನ ಬಂಧಿಸಿದ ಪೊಲೀಸರು, ನಂತರ ಬಿಡುಗಡೆ

ಹಾಸನ : ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳ ಜಾರಿ ನಿಲ್ಲಿಸಿ, ದುಡಿಯುವ ಜನರ ಸ್ವಾಯತ್ತತೆ ಕೆಣಕದಿರಿ ಎಂದು ಬೇಡಿಕೆಗಳನ್ನಿಟ್ಟುಕೊಂಡು ಅಖಿಲ ಭಾರತ ಕಾರ್ಮಿಕರ ಸಾರ್ವತ್ರಿಕ ಮುಷ್ಕರದಲ್ಲಿ ಎನ್.ಆರ್. ವೃತ್ತದಲ್ಲಿ ರಸ್ತೆ ತಡೆದು ಹೋರಾಟ ಮಾಡುವಾಗ ಪ್ರತಿಭಟನಾಗಾರರನ್ನು ಸಾಮೂಹಿಕವಾಗಿ ಬಂಧಿಸಿದ ನಂತರ ಬಿಡುಗಡೆಗೊಳಿಸಿದ ಘಟನೆ ಬುಧವಾರದಂದು ನಡೆಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತಕ್ಕೆ ಬಂದಾಗ ಮಾನವ ಸರಪಳಿ ನಿರ್ಮಿಸಿದರು. ತುಂಬ ಸಮಯ ರಸ್ತೆ ಮಧ್ಯೆ ಕುಳಿತಿದ್ದರಿಂದ ಪೊಲೀಸರು ಸಂಘಟನೆಯ ಕೆಲವರನ್ನ ಮಾತ್ರ ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ಇದೆ ವೇಳೆ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಮಾತನಾಡಿ, ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು ವೇತನ ಸಂಹಿತೆಯಲ್ಲಿ ೪ ಕಾನೂನು, ಕೈಗಾರಿಕಾ ಬಾಂದವ್ಯ ಸಂಹಿತೆಯಲ್ಲಿ ೩ ಕಾನೂನು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆಯಲ್ಲಿ ೧೩ ಕಾನೂನು ಮತ್ತು ಸಾಮಾಜಿಕ ಭದ್ರತಾ ಸಂಹಿತೆಯಲ್ಲಿ ೯ ಕಾನೂನು ಸೇರಿದಂತೆ ಒಟ್ಟು ೨೯ ಕಾನೂನುಗಳನ್ನು ೪ ಸಂಹಿತೆಗಳಲ್ಲಿ ರೂಪೀಕರಿಸಲಾಗಿದೆ. ದೇಶದಲ್ಲಿ ಅತಿಹೆಚ್ಚು ಅಸಂಘಟಿತ, ಸ್ವೀಂ ಮತ್ತು ಅನೌಪಚಾರಿಕ ಕಾರ್ಮಿಕರನ್ನು ಕಾನೂನುಗಳಡಿಯಲ್ಲಿ ತರಬೇಕು ಮತ್ತು ೬೦೦ ರೂ ಒಂದು ದಿನದ ವೇತನ ನಿಗದಿ ಮಾಡಬೇಕೆಂಬ ಕೇಂದ್ರ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ವೇತನ ಸಂಹಿತೆಯಲ್ಲಿ ೧೫ನೇ Iಐಅ ಯ ಕನಿಷ್ಠ ವೇತನ, ನ್ಯಾಯ ಸಮ್ಮತ ಮತ್ತು ಜೀವಿತ ವೇತನಗಳನ್ನು ನಿಗದಿ ಮಾಡುವ ಅಂಶಗಳನ್ನು ಒಳಗೊಳ್ಳುವ ಬದಲಿಗೆ ೧೮೭ ರೂ. ನೆಲಮಟ್ಟದ ಕೂಲಿಯನ್ನು ನಿರ್ದಿಷ್ಟಗೊಳಿಸಿದ್ದರಿಂದ ಇನ್ನು ಮುಂದೆ ಕನಿಷ್ಟ ವೇತನ ಹೆಚ್ಚಳಗಳಿಗೆ ಪೆಟ್ಟು ಬೀಳುತ್ತದೆ. ಇನ್ನು ಮುಂದೆ ೧೮ ಸಾವಿರಕ್ಕಿಂತ ಹೆಚ್ಚು ವೇತನ ಪಡೆಯುವವರು ಸೂಪರ್‌ವೈಸರ್‌ಗಳು, ಅಪ್ರೆಂಟೀಸ್‌ಗಳು, ೪೦ ಕಾರ್ಮಿಕರಿದ್ದು ವಿದ್ಯುತ್‌ರಹಿತ ಉದ್ಯಮಗಳಲ್ಲಿರುವ ಕಾರ್ಮಿಕರು ೫೦ಕ್ಕಿಂತ ಕಡಿಮೆ ಗುತ್ತಿಗೆ ಕಾರ್ಮಿಕರನ್ನು ಹೊಂದಿರುವ ಗುತ್ತಿಗೆದಾರರು ಲೈಸೆನ್ಸ್ ತೆಗೆದುಕೊಳ್ಳಬೇಕಿಲ್ಲ. ಇದರಿಂದಾಗಿ ಭಾರತದ ೭೦% ಕಾರ್ಮಿಕರಿಗೆ ಕಾರ್ಮಿಕ ಕಾನೂನುಗಳು ಅನ್ವಯವಾಗುವುದಿಲ್ಲ ಎಂದರು. ೧೦೦ಕ್ಕಿಂತ ಹೆಚ್ಚು ಕಾರ್ಮಿಕರಿದ್ದರೆ ಕಾರ್ಖಾನೆಗಳ ಲೇಆಫ್, ರಿಟ್ರಿಂಚ್ಮೆಂಟ್ ಮತ್ತು ಕಾರ್ಖಾನೆ ಮುಚ್ಚುವಿಕೆಗೆ ಸರ್ಕಾರದ ಪೂರ್ವನುಮತಿ ಪಡೆಯಬೇಕಿತ್ತು. ಈಗ ೩೦೦ ಕಾರ್ಮಿಕರಿಗೆ ಹೆಚ್ಚಿಸಲಾಗಿದೆ. ಇದರಿಂದ ಯಾವಾಗ ಬೇಕಾದರೂ ಕಾರ್ಖಾನೆ ತೆರೆಯಬಹುದು. ಬೇಡದಿದ್ದರೆ ಮುಚ್ಚಬಹುದಾದ ಸ್ವಾತಂತ್ರ್ಯವನ್ನು ಮಾಲೀಕರಿಗೆ ಕೊಡಲಾಗಿದೆ. ಬೇಡಿಕೆಗಳ ಪಟ್ಟಿ, ಮುಷ್ಕರ ನೋಟಿಸ್ ನೀಡಿದ ಕೂಡಲೇ ಸಂಧಾನ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ರಾಜೀ ಸಂಧಾನ ನಡೆಯುವಾಗ ಬೇಡಿಕೆಗಳು ಈಡೇರದಿದ್ದರೂ ಮುಷ್ಕರ ಮಾಡುವ ಹಾಗಿಲ್ಲ, ಮಾಡಿದರೆ ಅದನ್ನು ಕಾನೂನು ಬಾಹಿರ ಮುಷ್ಕರ ಎಂದು ಪರಿಗಣಿಸಿ ಮುಷ್ಕರ ಮಾಡಿದವರನ್ನು, ಮುಷ್ಕರಕ್ಕೆ ಬೆಂಬಲಿಸಿದವರಿಗೂ ಜೈಲು, ಜಾಮೀನುರಹಿತ ಕೇಸುಗಳು, ದಂಡ, ಕೆಲಸದ ನಿರಾಕರಣೆ ಮಾಡುವ ಹಕ್ಕನ್ನು ಮತ್ತು ಕಾರ್ಮಿಕ ಸಂಘದ ನೊಂದಾವಣಿಯನ್ನು ರದ್ದುಗೊಳಿಸುವ ಅಂಶಗಳನ್ನು ಈ ಸಂಹಿತೆಗಳಲ್ಲಿ ತರಲಾಗಿದೆ ಎಂದು ಹೇಳಿದರು.

ಒಡಂಬಡಿಕೆಗಳಿಗೂ ತಿಲಾಂಜಲಿ ನೀಡಿ ಎಲ್.ಐ.ಸಿ. ಯನ್ನು ಕಡೆಗಣಿಸುವ ಮುಖಾಂತರ ಮೋದಿ ಸರ್ಕಾರ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸುತ್ತಿದೆ. ಕಾರ್ಮಿಕರು ಮಾಡುವ ಮುಷ್ಕರವನ್ನು ಸಂಘಟಿತ ಅಪರಾಧ ಎನ್ನುವ ಸರ್ಕಾರ ಫ಼್ಯಾಕ್ಟರಿ ಮತ್ತು ಬಾಯ್ಲರ್ ಕಾಯ್ದೆ, ಅರಣ್ಯ ಕಾಯ್ದೆ, ಚಹಾ ಕಾಯ್ದೆ, ರಬ್ಬರ್ ಕಾಯ್ದೆ ಹಲವಾರು ಔಷಧವಲಯಗಳಿಗೆ ಸಂಬಂಧಿಸಿದ ೪೧ ಕಾನೂನುಗಳಡಿಯಲ್ಲಿ ೧೮೦ ಅಪರಾಧಗಳಿಂದ ಜನಾವಶ್ಯಕ ಕಾಯ್ದೆಯ ನಿಬಂಧನೆಗಳ ಪ್ರಕಾರ ಮಾಲಿಕರನ್ನು ಮುಕ್ತಗೊಳಿಸಿದೆ.      ಸರ್ಕಾರದ ಒಡೆತನದಲ್ಲಿದ್ದ ರಸ್ತೆಯ ಖಾಸಗೀಕರಣ, ವಿದ್ಯುಚ್ಛಕ್ತಿ, ಪೆಟ್ರೋಲ್, ಡೀಸಲ್, ಗ್ಯಾಸ್‌ನ್ನು ಉತ್ಪಾದಿಸುವ ಘಟಕಗಳು, ಮಿಲಿಟರಿಗೆ ಅಗತ್ಯ ಪರಿಕರಣಗಳನ್ನು ಉತ್ಪಾದಿಸುವ ಕಾರ್ಖಾನೆಗಳು, ವಿಮಾನ, ರೈಲ್ವೆ, ಬಸ್‌ಗಳ ಉಪಕರಣಗಳನ್ನು ಉತ್ಪಾದಿಸುವ ಎಲ್ಲಾ ಸಾರ್ವಜನಿಕ ಕೈಗಾರಿಕೆಗಳು, ಸ್ಟೀಲ್, ಉಕ್ಕು, ಕಲ್ಲಿದ್ದಲನ್ನು ಉತ್ಪಾದಿಸುವ ಕಾರ್ಖಾನೆಗಳು, ಬ್ಯಾಂಕ್, ಐIಅ ಯಂತಹ ಆರ್ಥಿಕ ಸೇವೆಗಳನ್ನು ಖಾಸಗೀಕರಿಸಲು, ವಿದೇಶಿ ಬಂಡವಾಳಕ್ಕೆ ಅವಕಾಶ ನೀಡಿದ್ದರ ಪರಿಣಾಮ ಒಟ್ಟು ದೇಶದ ಆರ್ಥಿಕ ಸಾರ್ವಭೌಮತೆಗೆ ಧಕ್ಕೆ ತರಲಾಗುತ್ತಿದೆ. ಈ ವಲಯಗಳಲ್ಲಿರುವ ಕಾರ್ಪೊರೇಟ್ ಬಂಡವಾಳಗಾರರ ಮಿಗುತಾಯ ಮೌಲ್ಯವನ್ನು ಹೆಚ್ಚಿಸಲು ಕಾರ್ಮಿಕರ ಬೆನ್ನಮೂಳೆಯನ್ನು ೪ ಸಂಹಿತೆಗಳ ಮುಖಾಂತರ ಮುರಿಯಲಾಗುತ್ತಿದೆ. ಮತ್ತೊಂದೆಡೆ ತೆರಿಗೆಗಳ ಭಾರ ಮತ್ತು ಬೆಲೆಯೇರಿಕೆಯಿಂದ ಭಾರತದ ಜನತೆ ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದೆ ಎಂದು ಆತಂಕವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಎಂ.ಸಿ. ಡೋಂಗ್ರೆ. ಮಧು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಎಸ್.ಎನ್. ಲಕ್ಷ್ಮಿ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಎಐಟಿಯುಸಿ ಮುಖಂಡರಾದ ನಾಗರತ್ನ, ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ ಇತರರು ಉಪಸ್ಥಿತರಿದ್ದರು.