statue – Peepal Media

ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ: ಬೊಮ್ಮಾಯಿ ಘೋಷಣೆ
ಮಂಗಳೂರು: ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನೊಳಗೊಂಡ ಸ್ಮಾರಕವನ್ನು ನಿರ್ಮಿಸುವುದಾಗಿ ಶನಿವಾರದಂದು ಮಂಗಳೂರಿನ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

ನವೆಂಬರ್‌ 19, ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಮೆ ಅನಾವರಣಗೊಳಿಸಲು ಮಂಗಳೂರಿಗೆ ತೆರಳಿದ್ದು, ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನೊಳಗೊಂಡ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು, ʼದೇಶವಿದೇಶಗಳಲ್ಲಿ ಇಂತಹ ಸ್ಮಾರಕಗಳಿಗೆ ಬಹಳ ಮಹತ್ವವಿದೆ. ಸ್ಮಾರಕಗಳು ನಮ್ಮ ಇತಿಹಾಸ, ಸಂಸ್ಕೃತಿ-ಪರಂಪರೆಗಳನ್ನು ಬಿಂಬಿಸುವ ಜೊತೆಗೆ ನಮ್ಮ ಅಸ್ಮಿತೆಯನ್ನೂ ಬಿಂಬಿಸುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತೀಯತೆ, ಇದಕ್ಕೆ ಪೂರಕವಾದ ಸರ್ಕಾರದ ನೀತಿಗಳು ಭಾರತದ ಅಸ್ಮಿತೆಯನ್ನು ಗಟ್ಟಿಗೊಳಿಸುತ್ತದೆ. ಭಾರತದ ಸ್ವಾತಂತ್ರ್ಯಕ್ಕಾಗಿ ಜೀವತೆತ್ತ ಅನೇಕ ಅನಾಮಧೇಯ ಹೋರಾಟಗಾರರ ಬಗ್ಗೆ ನಮ್ಮ ಯುವಜನತೆಗೆ , ದೇಶವಿದೇಶಗಳಿಗೆ ಅರಿವು ಮೂಡಿಸಬೇಕು. ಜಪಾನ್ ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ, ಅಮೆರಿಕಾದಲ್ಲಿ ಮಹಾತ್ಮಗಾಂದಿ ಸ್ಮಾರಕ ನಮಗೆ ಸ್ಪೂರ್ತಿ ನೀಡುತ್ತಿದೆ ಎಂದರು.

ʼಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿಯೂ ನಿರ್ಮಿಸಲಾಗುವುದು. ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿಯೂ ಅಳವಡಿಸಲಾಗುವುದು. ಮಂಗಳೂರು ಭಾಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಸೂಕ್ತ ನಿರ್ಣಯಗಳನ್ನು ಶೀಘ್ರದಲ್ಲಿ ತೆಗೆದುಕೊಳ್ಳಲಾಗುವುದು. ಲೋಕಮಾನ್ಯ ತಿಲಕರು, ಕಾಲಪಾನಿ ಶಿಕ್ಷೆ ಅನುಭವಿಸಿದ ಸಾರ್ವರ್ಕರ್ ರವರು, ಸುಭಾಷ್ ಚಂದ್ರಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್ರವರ ತ್ಯಾಗಬಲಿದಾನಗಳನ್ನು ಮರೆಯಬಾರದು. ಇದನ್ನು ಮರೆಯುವವರು ನಿಜ ದೇಶಭಕ್ತರಾಗಲು ಸಾಧ್ಯವಿಲ್ಲʼ ಎಂದು ಬೊಮ್ಮಾಯಿ ಮಾತನಾಡಿದರು.

ʼಇತ್ತೀಚೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಯಿತು. ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃಗಳಾಗಿದ್ದು, ಕೋಟೆಗಳು, ಕೆರೆಗಳು, ಮಾರುಕಟ್ಟೆ, ಆಧುನಿಕ ನಗರ ನಿರ್ಮಿಸಿದರು. ಆರ್ಥಿಕ ಬೆಳವಣಿಗೆಗೆ ಪೂರಕವಾದ ನಗರದ ಮಾದರಿಯನ್ನು ಅಭಿವೃದ್ಧಿಪಡಿಸಿದವರು. ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗವನ್ನು ಬೆಂಗಳೂರಿನಲ್ಲಿ ಸೃಷ್ಟಿಸಿದರು. ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಪ್ರೇರಣೆಯಾಗಿದ್ದಾರೆʼ ಎಂದು ಮಾತನಾಡಿದರು.

ಈ ಪ್ರತಿಮೆ ಅನಾವರಣ ಸಮಾರಂಭದಲ್ಲಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ,  ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.