students – Peepal Media

ಪೋಷಕರು ಹೇರುವ ಒತ್ತಡವೇ ವಿದ್ಯಾರ್ಥಿಗಳ ಸಾವಿಗೆ ಕಾರಣ: ಸುಪ್ರೀಂ ಕೋರ್ಟ್
ಬೆಂಗಳೂರು: ಪೋಷಕರು ಹೇರು ಒತ್ತಡ ಮತ್ತು ಮಿತಿಮೀರಿದ ನಿರೀಕ್ಷೆಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡುತ್ತಿವೆ ಸುಪ್ರೀಂ ಕೋರ್ಟ್ ನವೆಂಬರ್ 20 ಸೋಮವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಮುಂಬೈ ಮೂಲದ ವೈದ್ಯ ಅನಿರುದ್ಧ ನಾರಾಯಣ್ ಮಲ್ಪಾನಿ ಅವರು ರಾಜಸ್ಥಾನದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆಯ ಸಂಬಂಧ ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿ ಈ ಅಭಿಪ್ರಾಯವನ್ನು ತಿಳಿಸಿದೆ.

ಆದರೆ ನ್ಯಾಯಾಲಯವು ಅರ್ಜಿದಾರರಿಗೆ, ”ಇವು ಸುಲಭದಲ್ಲಿ ಬಗೆಹರಿಯುವ ಸಂಗತಿಯಲ್ಲ. ಈ ಎಲ್ಲಾ ಘಟನೆಗಳ ಹಿಂದೆ ಪೋಷಕರ ಒತ್ತಡವಿದೆ. ಹೆಚ್ಚಾಗಿ ಪೋಷಕರೇ ಅವರ ಮೇಲೆ ಹೆಚ್ಚು ಒತ್ತಡ ಹೇರುತ್ತಿದ್ದಾರೆ. ಅಂತಹ ಸನ್ನಿವೇಶದಲ್ಲಿ ನ್ಯಾಯಾಲಯವು ಹೇಗೆ ನಿರ್ದೇಶನಗಳನ್ನು ನೀಡಲು ಸಾಧ್ಯ? ಎಂದು ಹೇಳಿದೆ.

2023 ರಲ್ಲಿ, ಕೋಟಾದಲ್ಲಿ ಕನಿಷ್ಠ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಳೆದ ಎಂಟು ವರ್ಷಗಳಲ್ಲಿ ಅತ್ಯಧಿಕ ಸಂಖ್ಯೆಯಾಗಿದೆ.

ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಅರ್ಜಿದಾರರಿಗೆ, ”ಕೋಚಿಂಗ್ ಸೆಂಟರ್‌ಗಳಿಂದಾಗಿ ಆತ್ಮಹತ್ಯೆಗಳು ನಡೆಯುತ್ತಿಲ್ಲ. ಮಕ್ಕಳು ತಮ್ಮ ಹೆತ್ತವರ ನಿರೀಕ್ಷೆಗಳನ್ನು ಪೂರೈಸಲಾಗದೆ ಆತ್ಮಹತ್ಯೆ ಸಂಭವಿಸುತ್ತವೆ. ಸಾವಿನ ಸಂಖ್ಯೆ ಹೆಚ್ಚು ಇರಬಹುದು… ” ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಖನ್ನಾ “ಆದರೂ, ನಮ್ಮಲ್ಲಿ ಹೆಚ್ಚಿನವರಿಗೆ ಯಾವುದೇ ಕೋಚಿಂಗ್ ಸೆಂಟರ್‌ಗಳು ಇರುವುದು ಬೇಕಾಗಿಲ್ಲ, ಆದರೆ ಶಾಲೆಗಳ ಪರಿಸ್ಥಿತಿಗಳನ್ನು ನೋಡಿ. ತೀವ್ರ ಪೈಪೋಟಿ ಇದೆ ಮತ್ತು ವಿದ್ಯಾರ್ಥಿಗಳು ಈ ಕೋಚಿಂಗ್ ಸೆಂಟರ್‌ಗಳಿಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿಲ್ಲ,” ಎಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲದ ಕಾರಣ ಅರ್ಜಿದಾರರು ರಾಜಸ್ಥಾನ ಸರ್ಕಾರ ಅಥವಾ ರಾಜಸ್ಥಾನ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಪೀಠ ಶಿಫಾರಸು ಮಾಡಿದೆ.

ಸೆಪ್ಟೆಂಬರ್‌ 2023ರಲ್ಲಿ ರಾಜಸ್ಥಾನ ಸರ್ಕಾರ ವಿದ್ಯಾರ್ಥಿಗಳ ಆತ್ಮಹತ್ಯೆಯನ್ನು ತಡೆಯಲು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಿಗೆ ಮಾರ್ಗಸೂಚಿಗಳನ್ನು ರವಾನಿಸಿತ್ತು. ವಾರದ ರಜೆಗಳನ್ನು ನೀಡುವಂತೆ ಕೋಚಿಂಗ್ ಸೆಂಟರ್‌ಗಳಿಗೆ ನಿರ್ದೇಶನ ನೀಡುವುದು, ವಾಡಿಕೆಯ ಪರೀಕ್ಷೆಗಳ ಅಂಕಗಳನ್ನು ಗೌಪ್ಯವಾಗಿಡುವುದು…ಮೊದಲಾದ ನಿರ್ದೇಶನಗಳನ್ನು ನೀಡಿತ್ತು.

ಜೊತೆಗೆ, ಕೇಂದ್ರದ ಶಿಕ್ಷಣ ಸಚಿವಾಲಯವು ಅಕ್ಟೋಬರ್ 3 ರಂದು UMMEED ಎಂಬ ಕರಡು ಮಾರ್ಗಸೂಚಿಗಳನ್ನು ಹೊರಡಿಸಿತ್ತು.

ಅರ್ಜಿಯಲ್ಲಿ ಏನಿತ್ತು?

ಕೋಚಿಂಗ್ ಸೆಂಟರ್‌ಗಳನ್ನು ನಿಯಂತ್ರಿಸಲು ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ, “ಈ ಲಾಭಕ್ಕಾಗಿ ಹಸಿದಿರುವ ಈ ಕೋಚಿಂಗ್ ಸಂಸ್ಥೆಗಳು ವಿದ್ಯಾರ್ಥಿಗಳ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುವುದಿಲ್ಲ ಮತ್ತು ಭಾರತದ ಯುವಜನತೆ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಒತ್ತಡ ಹೇರಿ ಹಣವನ್ನು ಟಂಕಿಸುವುದರ ಕಡೆಗೆ ಮೇಲೆ ಮಾತ್ರ ಗಮನಹರಿಸುತ್ತವೆ,” ಎಂದು ಹೇಳಲಾಗಿದೆ.

“ವಿದ್ಯಾರ್ಥಿಗಳ ಆತ್ಮಹತ್ಯೆಯು ಮಾನವ ಹಕ್ಕುಗಳ ಗಂಭೀರ ಸಮಸ್ಯೆಯಾಗಿದೆ. ಹೆಚ್ಚುತ್ತಿರುವ ಆತ್ಮಹತ್ಯೆಗಳ ನಡುವೆಯೂ ಕಾನೂನನ್ನು ಜಾರಿಗೊಳಿಸುವಲ್ಲಿ ಕೇಂದ್ರದ ಕಳಪೆ ಧೋರಣೆಯು ನಮ್ಮ ದೇಶದ ಭವಿಷ್ಯವಾದ ಈ ಯುವ ಮನಸ್ಸುಗಳನ್ನು ರಕ್ಷಿಸುವಲ್ಲಿ ಸರ್ಕಾರವು ತೋರುತ್ತಿರುವ ನಿರಾಸಕ್ತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ದೇಶದಲ್ಲಿ ಘನತೆಯಿಂದ ಬದುಕಲು ಅವರಿಗೆ ಭಾರತದ ಸಂವಿಧಾನದ ಆರ್ಟಿಕಲ್ 21‌ ಅಡಿಯಲ್ಲಿ ಸಾಂವಿಧಾನಿಕ ಹಕ್ಕನ್ನು ನೀಡಲಾಗಿದೆ,” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಮಕ್ಕಳನ್ನು ಕರೆತಂದು ರಾಜಕೀಯ ಮಾಡುವುದು ನಾಚಿಕೆಗೇಡಿನ ವಿಚಾರ : ಡಿಕೆಶಿ
ಬೆಂಗಳೂರು: ನವೆಂಬರ್‌ 11 ರಂದು ಮೋದಿ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌. ʼಮಕ್ಕಳನ್ನು ಕರೆತಂದು ಕಾರ್ಯಕ್ರಮ ಮಾಡಲು ಇದೇನು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮವೇ?ʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರಧಾನಿಗಳು ರಾಜ್ಯಕ್ಕೆ ಆಗಮಿಸುತ್ತಿರುವುದರ ಬಗ್ಗೆ ನಮ್ಮದು ಯಾವುದೇ ಆಕ್ಷೇಪ ಇಲ್ಲ. ಆದರೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ಮಕ್ಕಳನ್ನು ಕರೆತರಬೇಕು ಎಂದು ಸುತ್ತೊಲೆ ಹೊರಡಿಸಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯವರಿಗೆ ಇಂತಹ ದುರ್ಗತಿ ಬಂದಿದೆಯೇ? ನಿಮ್ಮ ನಾಯಕರು, ನಿಮ್ಮ ಡಬಲ್ ಇಂಜಿನ್ ಸರ್ಕಾರ  ಮೂರು ವರ್ಷದಲ್ಲಿ ಮಾಡಿರುವ ಸಾಧನೆ ತೋರಿಸಿ. ಜನರನ್ನು ಕರೆತಂದು ಕಾರ್ಯಕ್ರಮ ಮಾಡಿ. ಯಾರೂ ಬೇಡ  ಎನ್ನುವುದಿಲ್ಲ. ಆದರೆ ಮಕ್ಕಳನ್ನು ಕರೆತಂದು ಕಾರ್ಯಕ್ರಮ ಮಾಡಲು ಇದೇನು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ 17-18 ವರ್ಷದ ಮಕ್ಕಳನ್ನು ಕರೆತಂದು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪ್ರಧಾನಮಂತ್ರಿ ಸ್ಥಾನಕ್ಕೆ ದೊಡ್ಡ ಅಪಮಾನ. ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯಬೇಕು ಎಂದರು.

ಜನಸಂಕಲ್ಪ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡುವಾಗ ಕುರ್ಚಿಗಳು ಖಾಲಿ, ಖಾಲಿ ಇದ್ದವು. ಹೀಗಾಗಿ ಕುರ್ಚಿ ತುಂಬಿಸಲು ಈ ರೀತಿ ಮಾಡುತ್ತಿದ್ದಾರೆ. ಅವರ ಪಕ್ಷ ದಿವಾಳಿಯಾಗಿರುವುದಕ್ಕೆ ಇದೇ ಸಾಕ್ಷಿ. ಈ ಸುತ್ತೊಲೆ ಹೊರಡಿಸಿರುವ ಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇದು ಅಪಮಾನ. ಇದಕ್ಕೆ ಪ್ರಧಾನಮಂತ್ರಿಗಳು ಉತ್ತರ ನೀಡಬೇಕು ಎಂದು ಮಾತನಾಡಿದ್ದಾರೆ.

ʼಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಅಂಶ ಪುಸ್ತಕದಲ್ಲಿ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದು, ಆ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಧರ್ಮ, ಸಂಸ್ಕೃತಿ ಸೇರಿದಂತೆ ಯಾವುದಕ್ಕೂ ಧಕ್ಕೆ ಆಗಬಾರದು ಎಂದು ನಾನು, ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಸ್ಪಷ್ಟಪಡಿಸಿದ್ದೇವೆ. ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಆ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿಯವರು ಇದರಿಂದ ರಾಜಕೀಯ ಲಾಭ ಮಾಡಿಕೊಳ್ಳಲು ಏನು ಬೇಕಾದರೂ ಮಾಡಲಿ. ಪಕ್ಷದ ಅಧ್ಯಕ್ಷನಾಗಿ ಆ ಹೇಳಿಕೆ ತಪ್ಪು ಎಂದು ಹೇಳುತ್ತೇನೆʼ ಎಂದರು.

ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನನ್ನ ಖಾಸಗಿ ಬದುಕು, ವ್ಯವಹಾರ ಬೇರೆ ಇದೆ. ನಾನು ಎಲ್ಲಿಯೂ ಓಡಾಡಬಾರದೇ? ಬಾಗಲಕೋಟೆ ಜಿಲ್ಲೆಗೆ ಹೋಗಿದ್ದು ನಿಜ. ಯಾವ ಕ್ಷೇತ್ರಕ್ಕೆ ಹೋಗಿದ್ದೆ ಎಂಬುದು ಬೇಡ. ನಾನು ನನ್ನ ಖಾಸಗಿ ಕೆಲಸದ ಮೇಲೆ ಹೋಗಿದ್ದೆʼ ಎಂದು ಹೇಳಿದರು.

ಯುವಕರಿಗೆ ಹೆಚ್ಚಿನ ಆದ್ಯತೆ ಎಂದು ಉದಯಪುರ ಶಿಬಿರದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಹಾಕುತ್ತಿದ್ದಾರೆಯೇ ಎಂದು ಕೇಳಿದಾಗ, ‘ನೀವು ಕೂಡ ಅರ್ಜಿ ಹಾಕಿ. ನಿಮಗೂ ಪ್ರೋತ್ಸಾಹಿಸೋಣʼ ಎಂದು ಮಾತನಾಡಿದರು.