suicide – Peepal Media

ನಾಗಪುರ: ಒಂದೇ ಮನೆಯ ನಾಲ್ವರು ನೇಣು ಹಾಕಿಕೊಂಡು ಆತ್ಮಹತ್ಯೆ
ಮಹಾರಾಷ್ಟ್ರದ ನಾಗಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ದಂಪತಿ ಮತ್ತು ಅವರ ಇಬ್ಬರು ಪುತ್ರರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮನೆಯಲ್ಲಿ ಪತ್ತೆಯಾದ ಸೂಸೈಡ್ ನೋಟ್‌ನಲ್ಲಿ ವಂಚನೆ ಪ್ರಕರಣವೊಂದರಲ್ಲಿ ಪುತ್ರನೊಬ್ಬನ ಬಂಧನದಿಂದಾಗಿ ಕುಟುಂಬವು ಒತ್ತಡದಲ್ಲಿದೆ ಎಂದು ಬರೆಯಲಾಗಿದೆ ಎಂದು ನಾಗ್ಪುರ ಗ್ರಾಮಾಂತರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊವಾಡ್ ಗ್ರಾಮದಲ್ಲಿರುವ ಇವರ ಮನೆಯಲ್ಲಿ ಯಾವುದೇ ಶಬ್ಧಗಳು ಬಾರದೆ ಇದ್ದದ್ದನ್ನು ಗಮನಿಸಿ ಕೆಲವು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದರು.

ಪೊಲೀಸರು ಮನೆಯ ಬಾಗಿಲು ಒಡೆದು ನೋಡಿದಾಗ ಕುಟುಂಬದ ನಾಲ್ವರು ಸೀಲಿಂಗ್ ಕೊಕ್ಕೆಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರನ್ನು ನಿವೃತ್ತ ಶಿಕ್ಷಕ ವಿಜಯ್ ಮಧುಕರ್ ಪಚೋರಿ (68), ಅವರ ಪತ್ನಿ ಮಾಲಾ (55) ಮತ್ತು ಅವರ ಮಕ್ಕಳಾದ ಗಣೇಶ್ (38) ಮತ್ತು ದೀಪಕ್ (36) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮಧ್ಯಪ್ರದೇಶದ ಪಾಂಡುರ್ನಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣದಲ್ಲಿ ಈ ವರ್ಷದ ಆರಂಭದಲ್ಲಿ ಗಣೇಶ್ ಬಂಧನದಿಂದಾಗಿ ಕುಟುಂಬವು ಅಪಾರ ಒತ್ತಡದಲ್ಲಿದ್ದುದು ಸೂಸೈಡ್ ನೋಟ್‌ನಲ್ಲಿ ಕಂಡುಬಂದಿದೆ.  ಇದರಲ್ಲಿ ಕುಟುಂಬದ ನಾಲ್ಕು ಸದಸ್ಯರ ಸಹಿಯನ್ನುಇತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ನಾರ್ಖೇಡ್ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿ : ಒಂದೇ ಕುಟುಂಬದ ಮೂವರ ಸಜೀವ ದಹನ ; ಆತ್ಮಹತ್ಯೆ ಶಂಕೆ!
ತೀರ್ಥಹಳ್ಳಿ :  ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೇಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ದುರ್ಘಟನೆ ಸುತ್ತಲಿನ ಗ್ರಾಮಸ್ಥರನ್ನು ಕಂಗೆಡಿಸಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿರಬಹುದು ಎಂದು ಸ್ಥಳೀಯರು ಊಹಿಸಿದ್ದಾರೆ.

ತೀರ್ಥಹಳ್ಳಿಯ ಕೇಕೋಡ್ ಗ್ರಾಮದ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದು, ಇದು ಸ್ಪಷ್ಟವಾಗಿ ಪೂರ್ವನಿಯೋಜಿತ ಘಟನೆ, ಹಾಗಾಗಿ ಇದನ್ನು ಆತ್ಮಹತ್ಯೆ ಇರಬಹುದು ಎಂದೇ ಶಂಕಿಸಲಾಗಿದೆ. ಕುಟುಂಬದ ಇನ್ನೋರ್ವ ಅಗ್ನಿ ದುರಂತಕ್ಕೆ ಒಳಗಾಗಿದ್ದು, ಅರೆಬರೆ ಸುಟ್ಟ ಸ್ಥಿತಿಯಲ್ಲಿ ಇರುವ ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ನೋಟಕ್ಕೆ ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಜೀವವಾಗಿ ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀರ್ಥಹಳ್ಳಿ ಹೊಸನಗರ ಮಾರ್ಗ ಮಧ್ಯೆ ಬರುವ ಕೋಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಘಟನೆ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ಘಟನೆಗೆ ನಿಖರವಾದ ಕಾರಣ ಏನು ಎಂದು ತಿಳಿದು ಬಂದಿಲ್ಲ. ಮೇಲ್ನೋಟಕ್ಕೆ ಇದು ಮನೆಯ ಆರ್ಥಿಕ ಬಿಕ್ಕಟ್ಟು ಈ ಮಟ್ಟಕ್ಕೆ ಆತ್ಮಹತ್ಯೆಗೆ ಇಳಿಯುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆಗಳು ನಡೆಯಬೇಕಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಮಹಿಳೆಯರ ಸಮಸ್ಯೆಗಳಿಗೆ ಆತ್ಮಹತ್ಯೆಯೆ ಪರಿಹಾರವಲ್ಲ: ನ್ಯಾ.ವಿನುತ ಬಿ.ಎಸ್‌
ಆನೇಕಲ್‌: ಮಹಿಳೆಯರ ಸಮಸ್ಯೆಗಳಿಗೆ ಆತ್ಮಹತ್ಯೆಯೆ ಪರಿಹಾರವಲ್ಲ. ಆಧುನಿಕತೆಯಿಂದ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ,ಹೀಗಾಗಿ ಮಹಿಳೆಯರು ಕಾನೂನು ತಿಳಿದುಕೊಳ್ಳಬೇಕು ಎಂದು 1 ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿನುತ ಬಿ.ಎಸ್ ರವರು ಹೇಳಿದರು.

ಆನೇಕಲ್ ತಾಲೂಕಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು, ನಗರದ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಹೆಣ್ಷುಮಕ್ಕಳು ಸಮಾಜದಲ್ಲಿ ತುಂಬಾ ಹಿಂದೆ ಉಳಿದ್ದಾರೆ,ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಮುಂದೆಬರಬೇಕು,ಮಹಿಳೆಯರಿಗೆ ಆಗುತ್ತಿರುವಂತಹ ದೌರ್ಜನ್ಯವನ್ನು ವಿರೋಧಿಸಿ ಧ್ವನಿ ಎತ್ತಬೇಕು ಮತ್ತು  ಕಾನೂನಿನ ಬಗ್ಗೆ ಮಾಹಿತಿಗಳನ್ನು ತಿಳಿಸಿದುಕೊಂಡಿರಬೇಕು ಎಂದು ಹೇಳಿದರು.

ಟೆಲಿ ಲಾ ಕರ್ನಾಟಕ ವಕೀಲರಾದ ಪುರುಷೋತ್ತಮ ಎ. ಮಾತನಾಡಿ, ನ್ಯಾಯಾಧೀಶರು ಜನರ ಬಳಿಬರಬೇಕು, ಸಾಮಾನ್ಯ ಜನರಿಗೂ ಕಾನೂನು ತಲುಪಬೇಕು ಮತ್ತು ಕಾನೂನು ಉಚಿತವಾಗಿ ಸಿಗಬೇಕು ಎಂಬುದೇ ನವೆಂಬರ್ ತಿಂಗಳ 9 ನೇ ತಾರೀಖಿನ ರಾಷ್ಟ್ರೀಯ ಕಾನೂನು ಸೇವೆಗಳ ದಿನ ಆಚರಣೆಯ ಉದ್ದೇಶ ಮತ್ತು 1987 ರ ಕಾನೂನು ಸೇವೆಗಳ ಕಾಯ್ದೆಯ ಉದ್ದೇಶ ಎಂದು ತಿಳಿಸಿದರು.

ಸಹಾಯಕ ಸರ್ಕಾರಿ ಅಭಿಯೋಜಕರಾದ ಆರ್.ಚಂದ್ರಶೇಖರ ಮಾತನಾಡಿ, ಹೊಲಿಗೆ ಯಂತ್ರದಿಂದ ಒಂದು ಕುಟುಂಬವನ್ನು ಸಾಕಬಹುದು, ನಮ್ಮ ತಂದೆ ಕೂಡ ಹೊಲಿಗೆ ಯಂತ್ರದಿಂದ ನಾವು ಈ ಮಟ್ಟಕ್ಕೆ ಬಂದಿದ್ದೇವೆ. ಆದರೆ ಕಾನೂನು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿ ಎಲ್ಲರೂ ಕಾನೂನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷರಾದ ಆರ್.ರಮೇಶರವರು ಮಾತನಾಡಿ, ಮನುಷ್ಯ ‌ಹುಟ್ಟಿದಾಗಿನಿಂದ ಕಾನೂನು ನಿಮ್ಮನ್ನು ಹಿಂಬಾಲಿಸುತ್ತದೆ ಹಾಗೆಯೇ ಸತ್ತಮೇಲೂ ಕೂಡ ಕಾನೂನು ಬೇಕಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘ ಕಾರ್ಯದರ್ಶಿ ವೈ ಮಂಜುನಾಥ,  ಕಖಜಾಂಚಿ ಕೆ.ವಿ ರವಿ,  ವಕೀಲರಾದ ಶಿವರಾಜು, ಭಾಗ್ಯ, ನಾಗರತ್ನ, ನಿರ್ಮಲ,  ಕೌಶಲ್ಯ  ತರಬೇತಿ ಕೇಂದ್ರದ ರಾಜು, ಸೌಮ್ಯ, ಮಂಜುಳಾ, ಮುರಳಿ, ಜಯಶ್ರೀ ಮತ್ತು ಕಂಪ್ಯೂಟರ್ ತರಬೇತಿ ವಿದ್ಯಾರ್ಥಿಗಳು, ಮತ್ತು ಹೊಲಿಗೆ ತರಬೇತಿ ಶಿಬಿರದ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನ್ಯಾಯಬೆಲೆಯಲ್ಲಿ ಅಕ್ರಮ: ಮನನೊಂದು ಆತ್ಮಹತ್ಯೆ
ದಾವಣಗೆರೆ: ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ರಾಜ್ಯ ಪ್ರಶಸ್ತಿ ವಿಜೇತ ಮಿಟ್ಲಕಟ್ಟೆ ವೀರಾಚಾರಿ ಅವರು ಕಳೆದ ಮಧ್ಯರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕ ಜನರಿಗೆ ವಿತರಿಸುವ ಅಕ್ಕಿಯ ವಿಚಾರದಲ್ಲಿ ಅಕ್ರಮ ನಡೆಸುತ್ತಿದ್ದಾರೆ ಎಂದು ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಈ ಹಿನ್ನಲೆ ನ್ಯಾಯ ಸಿಗದ ಕಾರಣ ಮನನೊಂದು ವೀರಾಚಾರಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾಹಿತಿ ಪ್ರಕಾರ ಸೋಮವಾರ(ನಿನ್ನೆ) ರಾತ್ರಿ ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯಬೆಲೆ ಅಂಗಡಿ ರದ್ದು ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಚರ್ಚೆ ನಡೆದಿತ್ತು. ಈ ವೇಳೆ ಜನರಿಗೆ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅಕ್ರಮ ವಿರುದ್ಧದ ಹೋರಾಟದಲ್ಲಿ ನ್ಯಾಯ ಸಿಗದ ಕಾರಣ ತಮ್ಮ ಮಾತಿನಂತೆ ತಡರಾತ್ರಿ 2 ಗಂಟೆಯ ಸುಮಾರು ನೇಣುಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿನ್ನಲೆ  ಮಿಟ್ಲಕಟ್ಟೆ ಗ್ರಾಮದ ಜನರು  ಯಾರು ಕೂಡ ಊರಿಗೆ ಬರದಂತೆ ರಸ್ತೆಗಳನ್ನು ಬಂದ್ ಮಾಡಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕ ಸಿದ್ದರಾಮಪ್ಪ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾಧಿಕಾರಿ ಆಹಾರ ಇಲಾಖೆ ಅಧಿಕಾರಿಗಳು ಬರುವರೆಗೂ ಶವವನ್ನು ಕುಣಿಕೆಯಿಂದ ಕೆಳಗಿಸುವುದಿಲ್ಲ ಎಂದು ಪಟ್ಟುಹಿಡಿದಿದ್ದು, ಸಾವಿಗೆ ಸ್ಪಷ್ಟ ಕಾರಣ ತನಿಖೆಯಿಂದ ತಿಳಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಅಸ್ಸಾಂ : ಹಾಸ್ಟೆಲ್‌ನಲ್ಲಿದ್ದ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ.

ಕೇರಳ ಮೂಲದ ವಿದ್ಯಾರ್ಥಿ ಒಬ್ಬ ನೆನ್ನೆ ರಾತ್ರಿ ಐಐಟಿ-ಗುಹಾವಟಿಯ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆ ಬಗ್ಗೆ ತಿಳಿದ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ಆದರೆ ಯಾವ ವಿಚಾರಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದು ತಿಳಿದು ಬಂದಿಲ್ಲ ಈ ವಿಚಾರವಾಗಿ ತನಿಖೆ ಮುಂದುವರೆಯುತ್ತದೆ ಎಂದು ಅಲ್ಲಿನ ಪೋಲೀಸ್‌ ವರಿಷ್ಠಾಧಿಕಾರಿ, ಕಾಮರೂಪ್‌, ಹಿತೇಷ್‌ ಸಿ.ಎಚ್‌ ರೇ ಅವರು ಮಾಹಿತಿ ನೀಡಿದ್ದಾರೆ.