Teacher recruitment – Peepal Media

ಅತಿಥಿ ಶಿಕ್ಷಕರ ವೇತನ ಹೆಚ್ಚಳ ಖಾಯಂಮಾತಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡಿಸೆಂಬರ್ 13 ರಂದು ಬೆಳಗಾವಿ ಚಲೋ.
ಸುವರ್ಣ ವಿಧಾನಸೌಧ ಎದುರು ಧರಣಿ ಸತ್ಯಾಗ್ರಹ

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ (ರಿ) ಕರ್ನಾಟಕ ರಾಜ್ಯ ಸಮಿತಿ, ಬೆಂಗಳೂರು ನೇತ್ರತ್ವದಲ್ಲಿ ಅತಿಥಿ ಶಿಕ್ಷಕರ ವೇತನ ಹೆಚ್ಚಳಕ್ಕಾಗಿ ಮತ್ತು ಸೇವೆ ಕಾಯಂಗೊಳಿಸಲು ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಇದೇ ಡಿಸೆಂಬರ್ 13 ರಂದು ಬೆಳಗಾವಿ ಚಲೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸುವರ್ಣ ವಿಧಾನಸೌಧ ಎದುರು ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ. ಈ ಮೇಲಿನ ಬೇಡಿಕೆಗಳ ಈಡೇರಿಕೆಗಾಗಿ ನಡೆಯುವ ಈ ಹೋರಾಟದಲ್ಲಿ ನಾಡಿನ ಎಲ್ಲಾ ಅತಿಥಿ ಶಿಕ್ಷಕರು, ಶಿಕ್ಷಣ ಪ್ರೇಮಿಗಳು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿ ಯಶಸ್ವಿಗೊಳಿಸಲು ನಿರ್ಧರಿಸಿರುತ್ತಾರೆ.

ಹಕ್ಕೊತ್ತಾಯಗಳು:

1. ಪ್ರತಿ ವರ್ಷ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಯ ಬದಲಾಗಿ ಪ್ರಸ್ತುತ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು  ಶೈಕ್ಷಣಿಕ ವರ್ಷಕ್ಕೆ ಮುಂದುವರಿಸಬೇಕು. ಸೇವಾ ಅನುಭವವನ್ನು ಆದ್ಯತೆಯಾಗಿ ಪರಿಗಣಿಸಬೇಕು. ಮೆರಿಟ್ ಹೆಸರಿನಲ್ಲಿ ಅತಿಥಿ ಶಿಕ್ಷಕರನ್ನು ಬಳಸಿ ಬಿಸಾಕುವುದನ್ನು ನಿಲ್ಲಿಸಬೇಕು.

2. ಅತಿಥಿ ಶಿಕ್ಷಕರ ವೇತನವನ್ನು ಮಾಸಿಕ ಕನಿಷ್ಠ 20 ಸಾವಿರಕ್ಕೆ ಹೆಚ್ಚಿಸಬೇಕು. ಬೇಸಿಗೆ ಮತ್ತಿತರ ರಜೆಗಳು ಸೇರಿ 12 ತಿಂಗಳ ವೇತನವನ್ನು ನೀಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ನೀಡಬೇಕು. ಪ್ರತಿ ತಿಂಗಳ ಮೊದಲ ವಾರ ವೇತನವನ್ನು ನೇರವಾಗಿ ಅತಿಥಿ ಶಿಕ್ಷಕರ ಖಾತೆಗೆ ಜಮಾ ಮಾಡಬೇಕು.

3. ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದವರಿಗೆ ಶಿಕ್ಷಕರ ನೇಮಕಾತಿಯಲ್ಲಿ ಪ್ರತಿ ವರ್ಷಕ್ಕೆ 5% ರಷ್ಟು ಕೃಪಾಂಕ ಒದಗಿಸಬೇಕು.

4. ದೆಹಲಿ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಸರಕಾರಗಳ ಮಾದರಿಯಲ್ಲಿ ಅತಿಥಿ ಶಿಕ್ಷಕರ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕು.

5. ಅತಿಥಿ ಶಿಕ್ಷಕರಿಗೆ ಸೇವಾ ಪ್ರಮಾಣ ಪತ್ರವನ್ನು ನೀಡಬೇಕು.

6. ಸರಕಾರಿ ಶಿಕ್ಷಕರಿಗೆ ನೀಡಲಾಗುತ್ತಿರುವ  ಸೌಲಭ್ಯಗಳು, ತರಬೇತಿ ಮತ್ತು ಗೌರವಯುತ ವ್ಯವಸ್ಥೆ ಅತಿಥಿ ಶಿಕ್ಷಕರಿಗೆ ದೊರೆಯುವಂತೆ ಕ್ರಮವಹಿಸಬೇಕು. ಶಿಕ್ಷಕರ ಹಾಜರಾತಿ ಪುಸ್ತಕದಲ್ಲಿ ಅತಿಥಿ ಶಿಕ್ಷಕರ ಹಾಜರಾತಿಯನ್ನು ಸೇರ್ಪಡೆಗೊಳಿಸಬೇಕು.

7. ಅತಿಥಿ ಶಿಕ್ಷಕ ಎಂಬ ಪದವನ್ನು ತೆಗೆದುಹಾಕಿ ಗೌರವ ಅಥವಾ ಅರೆಕಾಲಿಕ ಶಿಕ್ಷಕ ಎ೦ದು ನಮೂದಿಸಿಬೇಕು.

8. ಅತಿಥಿ ಶಿಕ್ಷಕ/ಕಿಯರಿಗೆ ಗುಂಪು ಜೀವ ವಿಮೆ ಸೌಲಭ್ಯ ಒದಗಿಸಬೇಕು.

9. ಮನವಿ ಕೊಡುವ ಹಂತದವರೆಗೆ ಕಂಡು ಬರುವ ಬೇಡಿಕೆಗಳನ್ನು ಒಳಗೊಂಡಂತೆ

ಹನುಮಂತ ಹೆಚ್ ಎಸ್ ರಾಜ್ಯಾಧ್ಯಕ್ಷರು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ಕರ್ನಾಟಕ. ಮತ್ತು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಉಪಾದ್ಯಕರು ಲೋಲಕ್ಷಿ

ಶಿಕ್ಷಕರ ನೇಮಕಾತಿ: ಸಿದ್ದರಾಮಯ್ಯ ದಾಖಲೆ ಬಿಡುಗಡೆ
ಬೆಂಗಳೂರು: ಶಿಕ್ಷಕರ ನೇಮಕಾತಿ ಹಗರಣ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ಯಾವ-ಯಾವ ಸಮಯದಲ್ಲಿ ಶಿಕ್ಷಕರ ನೇಮಕಾತಿಯಾಗಿದೆ ಮತ್ತು  ಯಾವ ಯಾವ ಆರೋಪಿಗಳು ಯಾವ ಸಮಯದಲ್ಲಿ ನೇಮಕಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ದಾಖಲೆ ಸಮೇತ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮಗಳು ಅಕ್ರಮವಾಗಿ ನೇಮಕಗೊಂಡ ಶಿಕ್ಷಕರ ಬಗ್ಗೆ ಬರೆಯುವಾಗ ‘ಕಾಂಗ್ರೆಸ್ ಸರ್ಕಾರದ ಅವಧಿಯ ಶಿಕ್ಷಕರ ನೇಮಕ ಹಗರಣʼ ಎಂದು ಬರೆಯುತ್ತಿದ್ದಾರೆ. ನಾನು ದಿನಾಂಕ 23-9-2022 ರಂದು ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಯಾವ ಯಾವ ಆರೋಪಿತರು ಯಾವ-ಯಾವ ಕಾಲದಲ್ಲಿ ನೇಮಕಗೊಂಡಿದ್ದಾರೆ ಎಂಬ ಹೆಸರು, ಅಕ್ರಮವಾಗಿ ಆದೇಶ ಪಡೆದ ದಿನಾಂಕ ಇತ್ಯಾದಿ ವಿವರಗಳನ್ನು ದಾಖಲೆ ಸಮೇತ ವಿವರಿಸಿದರೂ ಸಹ ಕೆಲವು ಮಾಧ್ಯಮಗಳು ಮತ್ತೆ ಮತ್ತೆ ಕಾಂಗ್ರೆಸ್ ಸರ್ಕಾರದ ಕಾಲದ, ಸಿದ್ದರಾಮಯ್ಯ ಅವಧಿಯ ನೇಮಕಾತಿ ಹಗರಣ ಎಂದೆಲ್ಲ ಬರೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ನನಗೆ ಲಭಿಸಿರುವ ದಾಖಲೆಗಳಂತೆ ಈ ಶಿಕ್ಷಕರುಗಳು ಯಾವ-ಯಾವ ಅವಧಿಯಲ್ಲಿ ನೇಮಕಗೊಂಡಿದ್ದಾರೆ ಎಂಬ ಮಾಹಿತಿಯನ್ನು ಮಾಧ್ಯಮಗಳಿಗೆ ಮತ್ತೊಮ್ಮೆ ತಿಳಿಸಬಯಸುತ್ತೇನೆ. ದಸ್ತಗಿರಿಯಾಗಿರುವ 12 ಜನ ಶಿಕ್ಷಕರಲ್ಲಿ 7 ಜನರು 2019 ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಸುರೇಶ್ ಕುಮಾರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿದ್ದಾಗ ನೇಮಕಗೊಂಡಿದ್ದಾರೆ. ಉಳಿದ 5 ಜನರಲ್ಲಿ ಇಬ್ಬರು ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದಾರೆ. ಉಳಿದವರಲ್ಲಿ ಒಬ್ಬ 2018 ರಲ್ಲಿ, ಒಬ್ಬ 2015 ರಲ್ಲಿ, ಮತ್ತೊಬ್ಬ 2017 ರಲ್ಲಿ, ಇನ್ನೊಬ್ಬ 2018 ರಲ್ಲಿ ನೇಮಕಾತಿ ಆದೇಶ ಪಡೆದಿದ್ದಾರೆಂದು ದಾಖಲೆಗಳು ಹೇಳುತ್ತವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, 2012-13 ರಲ್ಲಿ ಕರೆದಿದ್ದ ಶಿಕ್ಷಕರ ಹುದ್ದೆಗಳ ಬ್ಯಾಚಿನಲ್ಲೂ ಒಬ್ಬಾತ ಸೇರಿಕೊಂಡಿದ್ದಾನೆಂಬ ಮಾಹಿತಿ ಇದೆ. ಅದರ ನಂತರ 2015 ರಲ್ಲಿ ಮತ್ತೊಮ್ಮೆ ಹುದ್ದೆಗಳನ್ನು ತುಂಬಿಕೊಳ್ಳಲು ಪ್ರಕ್ರಿಯೆ ನಡೆದಿತ್ತು. ಈ ಅವಧಿಗಳಲ್ಲಿ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಮತ್ತು ಕಿಮ್ಮನೆ ರತ್ನಾಕರ ಅವರು ಶಿಕ್ಷಣ ಸಚಿವರುಗಳಾಗಿ ಕೆಲಸ ಮಾಡಿದ್ದರು.  ಈಗಾಗಲೆ ಶಿಕ್ಷಣ ಸಚಿವರು ಮಾಧ್ಯಮಗಳಿಗೆ ನೇಮಕಾತಿ ಪ್ರಕ್ರಿಯೆ ಹೇಗೆ ನಡೆಯುತ್ತದೆಂದು ವಿವರಿಸಿದ್ದಾರೆ. ಒಮ್ಮೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಿದ ನಂತರ ನೇಮಕಾತಿ ಪ್ರಕ್ರಿಯೆಯು ನೇಮಕಾತಿ ಪ್ರಾಧಿಕಾರದಿಂದ ನಡೆಯುತ್ತದೆ ಎಂದು ಹೇಳಿದರು.

ನೇಮಕಾತಿ ಪಟ್ಟಿಯು ಡಿಡಿಪಿಐ ಮತ್ತು ಜಂಟಿ ನಿರ್ದೇಶಕರುಗಳಿಂದ ಅನುಮೋದನೆಗೊಳ್ಳುತ್ತದೆ. ನೇರ ನೇಮಕಾತಿಗಳಾದ್ದರಿಂದ ಬೇರಿನ್ನಾರದೆ ಹಸ್ತಕ್ಷೇಪಗಳು ಇರುವುದಿಲ್ಲವೆಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ. ಏನೆ ಆದರೂ, ಯಾರದೆ ಅವಧಿಯಲ್ಲಿ ನಡೆದಿದ್ದರೂ ಸಹ ಈ ರೀತಿಯ ದ್ರೋಹ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಜರುಗಿಸಲೇಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಉಲ್ಭಣಗೊಳ್ಳುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ನಿವಾರಿಸುವ ಕಡೆಗೆ ಸರ್ಕಾರ ಗಂಭೀರ ಪ್ರಯತ್ನಗಳನ್ನು ಮಾಡಬೇಕು. ಜೊತೆಗೆ ಮಾಧ್ಯಮಗಳಿಗೆ ಸರ್ಕಾರವೆ ಸಚಿವರುಗಳ ಕಛೇರಿಗಳೆ ತಪ್ಪು ಮಾಹಿತಿ ಕೊಡುವುದನ್ನು ನಿಲ್ಲಿಸಬೇಕು. ಅಥವಾ ತನಿಖೆ ನಡೆಸುತ್ತಿರುವ ಸಂಸ್ಥೆಯಾದರೂ ಈ ಕುರಿತು ಕಾಲ ಕಾಲಕ್ಕೆ ಮಾಧ್ಯಮಗಳಿಗೆ ವಿವರಿಸಬೇಕು. ಒಟ್ಟಾರೆಯಾಗಿ ಪಾರದರ್ಶಕವಾಗಿ ನಡೆದುಕೊಳ್ಳಬೇಕು ಹಾಗೂ ನ್ಯಾಯನಿಷ್ಠರಾಗಿರಬೇಕೆಂದು ಆಗ್ರಹಿಸುತ್ತೇನೆ ಎಂದರು.

ಇದೆಲ್ಲದರ ಜೊತೆಯಲ್ಲಿ ನಿರುದ್ಯೋಗವು ರಾಜ್ಯದಲ್ಲಿ ಅಸಹನೀಯ ಮಟ್ಟಕ್ಕೆ ಮುಟ್ಟಿದೆ. ರಾಜ್ಯದಲ್ಲಿ ಪದವೀಧರ ಹೆಣ್ಣುಮಕ್ಕಳ ನಿರುದ್ಯೋಗದ ಪ್ರಮಾಣ ಶೇ.39-40 ರಷ್ಟಿದೆ. ಪದವೀಧರ ಯುವಕರ ನಿರುದ್ಯೋಗವು ಶೇ.35 ರವರೆಗೆ ಇದೆ. ಇರುವ ಒಂದೊಂದು ಹುದ್ದೆಗೆ 2-3 ಸಾವಿರ ಜನರು ಅರ್ಜಿ ಸಲ್ಲಿಸುತ್ತಿದ್ದಾರೆ. ಈ ಕುರಿತು ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆಯೂ ಇದೆ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.