telugu cinema – Peepal Media

ತೆಲುಗು ಸೂಪರ್‌ ಸ್ಟಾರ್ ಮಹೇಶ್ ಬಾಬುವಿಗೆ ಮಾತೃ ವಿಯೋಗ
ತೆಲುಗು ಸೂಪರ್‌ ಸ್ಟಾರ್‌ಗಳಲ್ಲಿ ಒಬ್ಬರಾದ ಮಹೇಶ್‌ ಬಾಬು ಅವರ ತಾಯಿಯವರು ನಿಧನ ಹೊಂದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಘಟ್ಟಮನೇನಿ ಇಂದಿರಾದೇವಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದೊಂದು ವಾರದಿಂದ ನಗರದ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದಿರಾದೇವಿ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಮಗ ಮಹೇಶ ಬಾಬು ಮತ್ತು ಮೂವರು ಹೆಣ್ಣು ಮಕ್ಕಳ ಕುಟುಂಬವನ್ನು ಅಗಲಿದ್ದಾರೆ.

ಘಟ್ಟಮನೇನಿ ಇಂದಿರಾ ದೇವಿಯವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 9 ಗಂಟೆಗೆ ಅಭಿಮಾನಿಗಳ ದರ್ಶನಕ್ಕಾಗಿ ಪದ್ಮಾಲಯ ಸ್ಟುಡಿಯೋದಲ್ಲಿ ಇರಿಸಲಾಗುವುದು ಮತ್ತು ನಂತರ ಮಹಾ ಪ್ರಸ್ಥಾನದಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇವರು ಖ್ಯಾಯ ಹಿರಿಯ ತೆಲುಗು ನಟ ಕೃಷ್ಣ ಅವರ ಪತ್ನಿಯಾಗಿದ್ದರು. ಮತ್ತು ಮಹೇಶ್‌ ಬಾಬು ಅವರಿಗೆ ಮುದ್ದಿನ ಅಮ್ಮನಾಗಿದ್ದರು. ಇತ್ತೀಚೆಗಷ್ಟೇ ಅವರು ತನ್ನ ತಾಯಿ, ಪತ್ನಿ ನಮೃತಾ ಶಿರೋಡ್ಕರ್‌ ಮತ್ತು ಮಕ್ಕಳ ಜೊತೆಗಿನ ಫೋಟೊ ಒಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಚಿರಂಜೀವಿ, ಕಾಜಲ್‌ ಅಗರವಾಲ್‌ ಸೇರಿದಂತೆ ಖ್ಯಾತ ನಟ, ನಟಿಯರ ಶೃದ್ಧಾಂಜಲಿಗಳ ಮಹಾಪೂರವೇ ಹರಿದುಬರುತ್ತಿದ್ದು. ಈ ಸಂದರ್ಭದಲ್ಲಿ ಪೀಪಲ್‌ ಮೀಡಿಯಾ ಮಹೇಶ್‌ ಬಾಬು ಮತ್ತು ಕುಟುಂಬದವರಿಗೆ ಸಾಂತ್ವನ ಹೇಳುತ್ತಾ, ಅಗಲಿದ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತದೆ.

ಧನಂಜಯ್ ಗೆ ತೆಲುಗು ಚಿತ್ರರಂಗದ ಗಾಳಿ
ನಟರಾಕ್ಷಸ ಡಾಲಿ ಧನಂಜಯ್ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಡಾಲಿ ನಟನೆಯ ಮಾನ್ಸೂನ್ ರಾಗ ರಿಲೀಸ್ ಆಗಿದ್ದು, ಸದ್ಯ ತೋತಾಪುರಿ, ಹೆಡ್ ಬುಷ್, ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾಗಳ ರಿಲೀಸ್ ಗೆ ಎದುರು ನೋಡ್ತಿದ್ದಾರೆ. ಇದರ ಜೊತೆಗೆ ಹೊಯ್ಸಳ, ಪ್ಯಾನ್ ಇಂಡಿಯಾ ಸಿನಿಮಾ ಪುಷ್ಪ-2 ಚಿತ್ರದಲ್ಲಿಯೂ ಅಭಿನಯಿಸುತ್ತಿರುವ ಧನಂಜಯ್ ಅಕೌಂಟ್ ಗೆ ಹೊಸ ಸಿನಿಮಾ ಸೇರ್ಪಡೆಯಾಗಿದೆ.

ಪುಷ್ಪ ಸಿನಿಮಾ ಮೂಲಕ ತೆಲುಗು ಸಿನಿಲೋಕಕ್ಕೂ ಪರಿಚಿತರಾದ ಡಾಲಿ ಈಗ ಬಹುಭಾಷಾ ನಟ. ಹೀಗಾಗಿ ಧನಂಜಯ್ ಗೆ ಬೇಡಿಕೆ ಹೆಚ್ಚಿದ್ದು, ಇದೀಗ ಕನ್ನಡ ಹಾಗೂ ತೆಲುಗು ಎರಡು ಭಾಷೆ ಚಿತ್ರಕ್ಕೆ ನಟರಾಕ್ಷಸ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದು ಡಾಲಿ ಧನಂಜಯ್ ನಟಿಸಲಿರುವ 26ನೇ ಸಿನಿಮಾ. ಈ ಚಿತ್ರದಲ್ಲಿ ಧನಂಜಯ್ ಜೊತೆಗೆ ತೆಲುಗಿನ ಪ್ರತಿಭಾನ್ವಿತ ನಟ ಸತ್ಯದೇವ್ ಕೂಡ ಮುಖ್ಯಭೂಮಿಕೆಯಲ್ಲಿ ಬಣ್ಣ ಹಚ್ಚಿದ್ದಾರೆ. ವಿಶೇಷ ಅಂದರೆ ಇದು ಸತ್ಯದೇವ್ ನಟಿಸುತ್ತಿರುವ 26ನೇ ಕೂಡ ಹೌದು.

ಈ ಹಿಂದೆ ತೆಲುಗಿನಲ್ಲಿ ಪೆಂಗ್ವಿನ್ ಸಿನಿಮಾ ಮಾಡಿದ್ದ ಈಶ್ವರ್ ಕಾರ್ತಿಕ್ ಡಾಲಿ-ಸತ್ಯದೇವ್ ಬಣ್ಣ ಹಚ್ಚಿರುವ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದಾರೆ. ಕ್ರೈಮ್  ಕಥೆಯನ್ನೊಳಗೊಂಡ ಈ ಚಿತ್ರವನ್ನು ಓಲ್ಡ್‌ ಟೌನ್ ಪಿಕ್ಚರ್ಸ್ ಸಂಸ್ಥೆಯಡಿ  ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.

ಟಗರು ಸಿನಿಮಾ ಖ್ಯಾತಿಯ ಚರಣ್ ರಾಜ್ ಸಂಗೀತ, ಮಣಿಕಂಠನ್ ಕೃಷ್ಣಮಾಚಾರಿ ಛಾಯಾಗ್ರಹಣ, ಅನಿಲ್ ಕ್ರಿಶ್ ಸಂಕಲನ ಸಿನಿಮಾಕ್ಕಿದ್ದು, ಶೀಘ್ರದಲ್ಲೇ ಟೈಟಲ್ ರಿವೀಲ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.