thumkur – Peepal Media

ಪಂಚರತ್ನ ರಥಯಾತ್ರೆ : ಡಿಸೆಂಬರ್‌ 1ಕ್ಕೆ ತುಮಕೂರಿಗೆ ಪ್ರವೇಶ
ತುಮಕೂರು: ಕರ್ನಾಟಕ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಪ್ರಾರಂಭಗೊಂಡು, ಯಶಸ್ವಿಯಾಗಿ ಸಾಗುತ್ತಿದ್ದು, ಡಿಸೆಂಬರ್ 01 ರಂದು ಪಂಚರತ್ನ ರಥಯಾತ್ರೆ ತುಮಕೂರು ನಗರ ವಿಧಾನಸಭಾ ಕ್ಷೇತ್ರವನ್ನು ಪ್ರವೇಶ ಮಾಡಲಿದೆ.

ಕೋಲಾರದ ಮುಳಬಾಗಿಲಿನಲ್ಲಿ ಮೊದಲನೇ ದಿನದ ಬೃಹತ್‌ ಸಮಾವೇಶವನ್ನು ನಡೆಸಿದ್ದು, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇನ್ನಿತರ ಜೆಡಿಎಸ್‌ ಮುಖಂಡರು ಸೇರಿ ರಥಯಾತ್ರೆಗೆ ಚಾಲನೆ ನೀಡಿದ್ದರು. ಈಗಾಗಲೇ ಕಳೆದ  ನಾಲ್ಕು ದಿನಗಳಿಂದ ಕೋಲಾರದಲ್ಲಿ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಯಶಸ್ವಿಯಾಗಿ ಸಾಗುತ್ತಿದೆ.

ಪಂಚರತ್ನ ರಥಯಾತ್ರೆಯನ್ನು ತುಮಕೂರು ಕ್ಷೇತ್ರದಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸೋಮವಾರದಂದು ತುಮಕೂರು ನಗರದ ಜೆಡಿಎಸ್‌ ಪಕ್ಷದ ಕಛೇರಿಯಲ್ಲಿ ಅಲ್ಲಿನ ಜೆಡಿಎಸ್‌ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದಾರೆ.

ಇಂದು ನಡೆದ ಈ ಪೂರ್ವಭಾವಿ ಸಭೆಯಲ್ಲಿ ತುಮಕೂರು ಜಿಲ್ಲಾ ಅಧ್ಯಕ್ಷರಾದ ಆಂಜಿನಪ್ಪ, ನಗರದ ಅಧ್ಯಕ್ಷರಾದ ವಿಜಯ್‌ ಗೌಡ್ರು ಸೇರಿದಂತೆ ಜೆಡಿಎಸ್‌ ಪಕ್ಷದ ಹಲವು ನಾಯಕರು ಉಪಸ್ಥಿತರಿದ್ದರು.

ಜನರ ವಿರೋಧಿ ಕೆಲಸ ಮಾಡುತ್ತಿದೆ ಬಿಜೆಪಿ : ಮೋಹನ್‌ ದಾಸರಿ
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು, ʼಸರ್ಕಾರಕ್ಕೆ ಬಡಜನರು, ಹಿಂದುಳಿತ ವರ್ಗದವರು, ದಲಿತರ ಮೇಲೆ ಯಾವುದೇ ರೀತಿಯ ಕಾಳಜಿ ಇಲ್ಲʼ ಎಂದು ಬೆಂಗಳೂರಿನ ಆಮ್‌ ಆದ್ಮಿ ಅಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಕೇವಲ ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ ಇಲ್ಲ ಎಂದು ತಾಯಿ ಮತ್ತು ನವಜಾತ ಶಿಶುಗಳನ್ನು ಕೊಲೆಮಾಡಿದ್ದಾರೆ.ಚಿಕ್ಕಬಳ್ಳಾಪುರದ ಒಂದು ಹಳ್ಳಿಯಲ್ಲಿ ಈಗಲೂ ದೇವಸ್ಥಾನಗಳಿಗೆ ಪ್ರವೇಶವಿಲ್ಲ. ಅಸ್ಪೃಶ್ಯತೆ ಹೋಗಿಲ್ಲ. ಹೇರ್‌ಕಟ್‌   ಮಾಡಿಸಬೇಕು ಅಂದರೆ, ದೇವಾಲಯಗಳಿಗೆ ಪೂಜೆ ಸಲ್ಲಿಸಬೇಕಾದರೆ ಟೌನ್‌ಗಳಿಗೆ ಹೋಗುತ್ತಿದ್ದಾರೆ ಎಂದು ಅಸ್ಪೃಶ್ಯತೆಯ ಈಗಿನ ವಾಸ್ತವ್ಯದ ಬಗ್ಗೆ ಮಾತನಾಡಿದ್ದಾರೆ.

ʼಗುಡಿಬಂಡೆಯಲ್ಲಿಸರ್ಕಾರ ನಡೆಸುತ್ತಿರುವ ಕಲ್ಯಾಣ ಮಂಟಪದಲ್ಲಿ ಪರಿಶಿಷ್ಟ ಜಾತಿಯ ಜನರಿಗೆ ಯಾವುದೇ ಸ್ಥಾನ ಕೊಡದಿದ್ದರೆ ಹೇಗೆ. ಮೊನ್ನೆ ಬಂದ ಟೆಂಡರ್‌ನಲ್ಲಿ ಪರಿಶಿಷ್ಟ ಜಾತಿಯವರು ಎಂದು ಜಾತಿಯ ಹೆಸರನ್ನೂ ಬರೆದು ಚಪ್ಪಲಿಗಳನ್ನು ಕಾಯುವ ಕೆಲಸ ಎಂದು ಪ್ರಕಟಿಸಿರುವು, ಅವರಿಗೆ ಸಾಮಾಜಿಕ ಗೌರವವೇ ಇಲ್ಲದಂತೆ ಮಾಡಿದೆ. ಬಡಜನರ, ದಲಿತರ, ಸಾಮಾಜಿಕವಾಗಿ ಹಿಂದುಳಿದವರಿಗೆ ಯಾವುದೇ ರೀತಿಯ ಭದ್ರತೆ ಇಲ್ಲದಂತೆ ಆಗಿದೆ. ಪರಿಶಿಷ್ಟ ಜಾತಿಯವರು ದೇವರ ಮಕ್ಕಳು ಅಂತಿರಾ. ಇದೆನಾ ನೀವು ದೇವರ ಮಕ್ಕಳನ್ನು ನೋಡಿಕೊಳ್ಳುವ ರೀತಿ ?ʼ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ʼಬೊಮ್ಮಾಯಿಯವರಿಗೆ ಬಡಜನರ ಮೇಲೆ, ಶೋಷಿತ ವರ್ಗದವರ ಮೇಲೆ ಯಾವುದೇ ರೀತಿಯ ಕಾಳಜಿ ಇಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ʼಆರೋಗ್ಯ ಮಂತ್ರಿ ಡಾ. ಕೆ ಸುಧಾಕರ್‌ ಅವರು ತುಮಕೂರಿನ ಘಟನೆಯ ನಂತರ ಸಿಬ್ಬಂದಿಗ ಸಸ್ಪೆಂಡ್‌ ಮಾಡುತ್ತೇನೆ ಅಂದಿದ್ರಿ. ಹಾಗೆ ನೋಡಿದರೆ ನೀವೇ ನೈತಿಕವಾಗಿ ಹೊಣೆ ಹೊತ್ತು ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಯಾಕಂದರೆ ನೀವು ತುಮಕೂರು ಜಿಲ್ಲಾ ಆಸ್ಪತ್ರಗೂ ಹೋಗಿ ಭೇಟಿ ಮಾಡಿಲ್ಲ. ಸರ್ಕಾರದ ಜಿಲ್ಲಾ ಆಸ್ಪತ್ರೆಗಳು ಯಾವ ರೀತಿ ಕಾರ್ಯನಿರ್ವಹಿಸುತ್ತೆ ಅಂತ ನೀವು ಯಾವತ್ತು ನೋಡಿಲ್ಲ. ಇವತ್ತು ನಿಮ್ಮದೇ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರ ವಿರುದ್ಧ ಸರ್ಕಾರ ನಡೆಸುತ್ತಿರೋ ಕಲ್ಯಾಣ ಮಂಟಪ ಸಿಗುತ್ತಿಲ್ಲ. ತುಮಕೂರಿನ ಘಟನೆಯಿಂದ ಆರೋಗ್ಯ ಸಚಿವರಾಗಿ, ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಂತ್ರಿಗಳಾಗಿ ವಿಫಲರಾಗಿದ್ದೀರಾ ಎಂದು ಬೆಂಗಳೂರಿನ ಆಮ್‌ ಆದ್ಮಿ ಅಧ್ಯಕ್ಷ ಮೋಹನ್‌ ದಾಸರಿ ಡಾ. ಕೆ ಸುಧಾಕರ್‌ ಅವರ ವಿರುದ್ಧ ಕಿಡಿಕಾರಿದ್ದಾರೆ.

ಜನರ ವಿರೋಧಿ ಕೆಲಸ ಮಾಡ್ತಿರೋ ಬಿಜೆಪಿ ವಿರುದ್ಧ ಬೊಮ್ಮಯಿ ಸರ್ಕಾರದ ವಿರುದ್ಧ ಜನ ಯೋಚಿಸಬೇಕು ಎಂದು ಮೋಹನ್‌ ದಾಸರಿ ಇಂದು ತಮ್ಮ ಫೇಸ್‌ಬುಕ್‌ ಲೈವ್‌ ಬಂದು ಮಾತನಾಡಿದ್ಧಾರೆ.

ತುಮಕೂರಿನ ಘಟನೆಯ ಕುರಿತು ಟ್ವೀಟ್‌ ಮಾಡಿರುವ ಮೋಹನ್‌ ದಾಸರಿಯವರು, ʼಪ್ರಾಣ ಉಳಿಸಬೇಕಾದ ವೈದ್ಯರೇ ಇಲ್ಲವೆಂದು ದೂಡಿ ತಾಯಿ ಮಕ್ಕಳು ಮನೆಯಲ್ಲಿ ಸಾಯಬೇಕಾದ ಅಮಾನವೀಯ ಘಟನೆ ನಮ್ಮ ನಾಡಲ್ಲಿ ನಡೆದಿರುವುದು ದುರಾದೃಷ್ಟಕರ!́ʼ ಎಂದು ಹೇಳಿದ್ದಾರೆ.

ಸಿದ್ಧರಾಮಯ್ಯ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಾನೂ ನೀಡುವೆ : ಡಾ. ಕೆ ಸುಧಾಕರ್
ಬೆಂಗಳೂರು: ಆಸ್ಪತ್ರೆಗಳಲ್ಲಿ ವೈದ್ಯರು, ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ತಾಯಿ ಹಾಗೂ ನವಜಾತ ಶಿಶುಗಳ ಮರಣದ ದುರ್ಘಟನೆ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸುದ್ದಿಗಾರರೊಂದಿಗೆ ಮಾತನಾಡಿ, ʼನತದೃಷ್ಟ ಹೆಣ್ಣುಮಗಳನ್ನು ಬಾಲಕಿಯರ ಮಂದಿರಕ್ಕೆ ದಾಖಲಿಸಲಾಗಿದೆ. ಆಕೆಗೆ ಸರ್ಕಾರದಿಂದಲೇ 5 ಲಕ್ಷ ರೂ. ಎಫ್‌ಡಿ ಇರಿಸಲು ಕ್ರಮ ವಹಿಸಲಾಗಿದೆ. ಹಾಗೆಯೇ ಆಕೆಯ ಶೈಕ್ಷಣಿಕ ಭವಿಷ್ಯವನ್ನೂ ರೂಪಿಸಲಾಗುವುದು. ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್‌ ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆʼ ಎಂದು ತಿಳಿಸಿದರು.

ʼಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆʼ ಎಂದರು.

ʼಎಲ್ಲಾ ಸೌಲಭ್ಯಗಳು ಇದ್ದರೂ, ಆರೋಗ್ಯ ಸಿಬ್ಬಂದಿ ಮಾಡಿದ ಕೆಲಸದಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಇದು ಇಡೀ ಮಾನವ ಸಂಕುಲಕ್ಕೆ ಕರಾಳ ದಿನವಾಗಿದೆ. ಇದಕ್ಕಾಗಿ ನಾನು ಬಹಳ ವಿಷಾದ, ಸಹಾನುಭೂತಿ ವ್ಯಕ್ತಪಡಿಸುತ್ತೇನೆ. ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆʼ ಎಂದು ಬೇಸರ ವ್ಯಕ್ತಪಡಿಸಿದರು.

ʼಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ಜಿಲ್ಲೆಯಲ್ಲಿ ಎಷ್ಟು ಶಿಶುಗಳು ಸತ್ತಿವೆ ಎಂದು ದಾಖಲೆ ನೀಡುತ್ತೇನೆ. ಆಗ ಸಿದ್ದರಾಮಯ್ಯನವರು ಅಥವಾ ಆಗಿನ ಆರೋಗ್ಯ ಸಚಿವರು ರಾಜೀನಾಮೆ ನೀಡಲಿಲ್ಲ. ಇಂತಹ ವಿಚಾರದಲ್ಲೂ ರಾಜಕೀಯ ಮಾಡುತ್ತಾರೆಂದರೆ ಇವರು ರಾಜಕೀಯ ನಾಯಕರು ಮಾತ್ರವಲ್ಲ. ಒಬ್ಬ ಉತ್ತಮ ಮಾನವನಾಗಲೂ ಸಾಧ್ಯವಿಲ್ಲ. ಇಷ್ಟು ಕೆಳ ಹಂತಕ್ಕೆ ಹೋಗಿ ಅವರು ತೀರ್ಮಾನ ಮಾಡಬಾರದು. ಇದರಲ್ಲೂ ರಾಜಕೀಯ ಮಾಡಬಾರದುʼ ಎಂದರು.

ʼಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ, ಎಷ್ಟು ಆಸ್ಪತ್ರೆಗಳಲ್ಲಿ ಎಷ್ಟು ಸಾವುಗಳಾಗಿವೆ ಎಂಬ ದಾಖಲೆಗಳನ್ನು ನೀಡುತ್ತೇನೆ. ಅವರು ಕೂಡ ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡುವುದಾದರೆ, ನಾನು ಕೂಡ ಆರೋಗ್ಯ ಸಚಿವನ ಸ್ಥಾನಕ್ಕೆ ನೀಡುತ್ತೇನೆ. ಇದು ಬಹಿರಂಗ ಸವಾಲು ಎಂದು ಮಾತನಾಡಿದರು.

ತಾಯಿ, ಶಿಶುಗಳ ಸಾವು : ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಪಿಯುಸಿಎಲ್ ಆಗ್ರಹ
ತುಮಕೂರು : ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲವೆಂದು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಕೊಳ್ಳದೆ ನಿರ್ಲಕ್ಷ್ಯ ವಹಿಸಿ ತಾಯಿ ಮತ್ತು ಅವಳಿ ಶಿಶುಗಳ ಸಾವಿಗೆ ಕಾರಣರಾಗಿರುವ ಜಿಲ್ಲಾಸ್ಪತ್ರೆಯ ಡಾ.ಉಷಾ ಮತ್ತು ಕರ್ತವ್ಯದಲ್ಲಿದ್ದ ನರ್ಸ್ ಗಳಾದ ಯಶೋಧ, ಸವಿತ, ವಿದ್ಯಾಭಾರತಿಯವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಪಿಯುಸಿಎಲ್‌ ಆಗ್ರಹಿಸಿದೆ.

ಈ ಆರೋಪಿಗಳನ್ನು ಅಮಾನತು ಮಾಡಿರುವುದು ತಕ್ಷಣದ ಕ್ರಮವಾದರೂ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು,   ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಉನ್ನತ ಮಟ್ಟದ ತನಿಖೆಯನ್ನು ತುರ್ತಾಗಿ ಮಾಡಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಿಯುಸಿಎಲ್ ತುಮಕೂರು, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಆಗ್ರಹಿಸಲಾಯಿತು.  ಘಟನೆ ನಡೆದ ಭಾರತಿನಗರ ಪ್ರದೇಶಕ್ಕೆ ಇಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು.

ಬುಧವಾರ ಕಸ್ತೂರಿ(30)ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅಕ್ಕಪಕ್ಕದ ಮನೆಯ ಮಹಿಳೆಯರ ಪರವಾಗಿ ತುಮಕೂರು ಕೊಳಗೇರಿ ಸಮಿತಿಯ ಮಹಿಳಾ ಕಾರ್ಯಕರ್ತರು ಜಿಲ್ಲಾಸ್ಪತ್ರೆಗೆ ದಾಖಲಿಸಲು ಮುಂದಾದಾಗ ಕರ್ತವ್ಯನಿರತ ವೈದ್ಯರು ಮತ್ತು ಸಿಬ್ಬಂದಿಗಳು ತಾಯಿ ಕಾರ್ಡ್ ಆಧಾರ್ ಕಾರ್ಡ್ ಇಲ್ಲವೆಂದು ಚಿಕಿತ್ಸೆ ನಿರಾಕರಿಸಿದ್ದರು. ಅಷ್ಟೇ ಅಲ್ಲದೆ, ಬೆಂಗಳೂರಿಗೆ ಹೋಗುವಂತೆ ಹೇಳಿ ಗದರಿಸಿ ಆಚೆ ಕಳಿಸಿದ್ದರು. ಈ ಕುರಿತು ಸ್ಲಂ ಸಮಿತಿಯ ಕಾರ್ಯಕರ್ತರಾದ ಸರೋಜಮ್ಮ, ಶಾರದಮ್ಮ, ಗಂಗಮ್ಮ ಭೇಟಿ ನೀಡಿದ ಪಿಯುಸಿಎಲ್ ತಂಡದ ಗಮನಕ್ಕೆ ತಂದಿದ್ದರು.

ಸ್ಥಳೀಯ ಸ್ಲಂ ಸಮಿತಿ ಕಾರ್ಯಕರ್ತರಾದ ಸರೋಜಮ್ಮ ಮಾತನಾಡಿ, ʼನಾನು ಜಿಲ್ಲಾಸ್ಪತ್ರೆಗೆ ಕಸ್ತೂರಿಯವರಿಗೆ ನೋವು ಕಾಣಿಸಿಕೊಂಡಾಗ ಅಕ್ಕಪಕ್ಕದವರ ಸಹಕಾರ ಪಡೆದು ಕಸ್ತೂರಿರವರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ಪರಿಪರಿಯಾಗಿ ವಿನಂತಿಸಿದೆ. ಆಗ ಅವರಿಗೆ ನಡೆಯಲೂ ಆಗುತ್ತಿರಲಿಲ್ಲ. ಆಸ್ಪತ್ರೆ ಸಿಬ್ಬಂದಿ ತಾಯಿ ಕಾರ್ಡ್‌ ಇಲ್ಲದೇ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಗದರಿಸಿ ಈಚೆಗೆ ಕಳಿಸಿದರು. ಆಗಲೇ ಚಿಕಿತ್ಸೆಗೆ ದಾಖಲಿಸಿಕೊಂಡಿದ್ದರೆ ಮೂರು ಜೀವಗಳು ಉಳಿಯುತ್ತಿದ್ದವುʼ ಎಂದು ಕಣ್ಣೀರಿಟ್ಟರು.

ಕಸ್ತೂರಿ ಕಳೆದ ಒಂದೂವರೆ ತಿಂಗಳ ಹಿಂದೆ 7 ವರ್ಷದ ಹೆಣ್ಣು ಮಗುವಿನೊಂದಿಗೆ ಭಾರತಿ ನಗರಕ್ಕೆ ಬಂದ್ದರು. ʼನನ್ನ ಗಂಡ ಆರು ತಿಂಗಳ ಹಿಂದೆ ಸಾವನಪ್ಪಿದ್ದು ಮನೆಯವರ ಹಿಂಸೆಯಿಂದ ಬೆಂಗಳೂರು ಬಿಟ್ಟು ಬಂದಿದ್ದೇನೆ ನನಗೆ ಆಶ್ರಯ ನೀಡಿʼ ಎಂದು ಮಹಿಳಾ ಸಮಿತಿಯನ್ನು ಕೋರಿದ್ದರು. ಅವರ ಮನವಿಯ ಮೇರೆ ಮಹಿಳಾ ಸಮಿತಿಯ ಕಾರ್ಯಕರ್ತರು ತುಂಬು ಗರ್ಭಿಣಿಯನ್ನು ಕಳೆದ ಒಂದೂವರೆ ತಿಂಗಳಿಂದ ಪೋಷಣೆ ಮಾಡಿದ್ದರು.

ತಮಿಳು ಮೂಲದವರಾಗಿರುವ ಕಸ್ತೂರಿಯವರ ವೈಯಕ್ತಿಕ ಮಾಹಿತಿಯನ್ನು ಹೆಚ್ಚಾಗಿ ಸ್ಥಳೀಯರಿಗೆ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತರ ಗಮನಕ್ಕೆ ತಂದಾಗ ಆಧಾರ್ ಕಾರ್ಡ್ ನೀಡುವಂತೆ ಕೇಳಿದರು ಆಧಾರ್ ಕಾರ್ಡ್ ಇರಲಿಲ್ಲ ಹಾಗಾಗಿ ಅಕ್ಕಪಕ್ಕದ ಮನೆಯವರೆ ಊಟ ನೀಡಿದ್ದು, ಸ್ಲಂ ಸಮಿತಿಯ ಕವಿತರವರ ಮನೆಯಲ್ಲಿ ತಾತ್ಕಾಲಿಕ ಆಶ್ರಯ ನೀಡಿರುತ್ತಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಏಕೆಂದರೆ ಯಾವುದೇ ದಾಖಲೆಗಳು ಇಲ್ಲದಿದ್ದರು ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಬೇಕಾಗಿರುವುದು ಜಿಲ್ಲಾಸ್ಪತ್ರೆಯ ಕರ್ತವ್ಯ. ಆದ್ದರಿಂದ ಸರ್ಕಾರ ಮೂರು ಜೀವಗಳ ಹಾನಿಗೆ ಜವಾಬ್ದಾರಿ ಹೊರಬೇಕು ಎಂದು ಪ್ರೊ.ಕೆ ದೊರೈರಾಜ್ ಹೇಳಿದರು.

ʼಈ ಪ್ರಕರಣವನ್ನು ಬೆಳಕಿಗೆ ತಂದ ತುಮಕೂರು ಸ್ಲಂ ಸಮಿತಿಯ ಮಹಿಳಾ ಕಾರ್ಯಕರ್ತರನ್ನು ಅಭಿನಂಧಿಸುತ್ತೇನೆ. ಎಷ್ಟೋ ಘಟನೆಗಳು ನಡೆದರು ಬೆಳಕಿಗೆ ಬರಲಿಲ್ಲ. ಸರ್ಕಾರ ಕೂಡಲೇ ಮೃತ ಮಹಿಳೆಯ ಸಂಬಂಧಿಗಳ  ಮಾಹಿತಿ ಸಂಗ್ರಹಿಸಿ ಮೃತ ದೇಹವನ್ನು ಹಸ್ತಾಂತರಿಸಬೇಕು. 7 ವರ್ಷದ ಹೆಣ್ಣು ಮಗುವಿನ ಶಿಕ್ಷಣ ಮತ್ತು ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದ ಅವರು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಸ್ಪಂದನೆ ನೀಡುತ್ತಿವೆ. ಆದರೆ ಸ್ಥಳೀಯರನ್ನು ಬೆದರಿಸುವ ವಾತಾವರಣ ನಿರ್ಮಾಣ ಮಾಡುತ್ತಿರುವುದು ಸರಿಯಲ್ಲ ಚಿಕಿತ್ಸೆಗೆ ನಿರ್ಲಕ್ಷ್ಯವಹಿಸುವವರ ವಿರುದ್ಧ ಕ್ರಮಕ್ಕೆ ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ಮುಂದಾಗಬೇಕೆಂದುʼ ಒತ್ತಾಯಿಸಿದರು.

ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ, ʼಘಟನೆ ಇಡೀ ಆರೋಗ್ಯ ವ್ಯವಸ್ಥೆ ಬಡವರಿಗೆ ಅದರಲ್ಲೂ ದಾಖಲೆಯಿಲ್ಲದವರಿಗೆ ನಿರಾಕರಿಸಲ್ಪಟ್ಟಿದೆ ಎನ್ನುವುದಕ್ಕೆ ಸಾಕ್ಷಿಕರಿಸಿದೆ. ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯವಲ್ಲ ಎಂದು ತೀರ್ಪು ನೀಡಿದೆ. ಕಳೆದ 50 ವರ್ಷಗಳಿಂದ ರಾಷ್ಟ್ರೀಯ ಜನಸಂಖ್ಯಾ ನಿಯಂತ್ರಣ ಯೋಜನೆಯ ಭಾಗವಾಗಿ ಯಾವುದೇ ದಾಖಲೆಗಳಿಲ್ಲದಿದ್ದರೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗುವಿನ ಚಿಕಿತ್ಸೆ ಉಚಿತವಾಗಿ ನೀಡಬೇಕಿದೆ ಎಂದು ಈಗಿನ ಎನ್.ಯು.ಹೆಚ್.ಆರ್.ಎಂ ಮಾನದಂಡಗಳು ಇದನ್ನು ಹೇಳದೆ. ಆದರೆ ಆರೋಗ್ಯ ಇಲಾಖೆ  ಇದನ್ನು ಪಾಲಿಸುತ್ತಿಲ್ಲ. ಹಾಗಾಗಿ ಸದರಿ ಮಹಿಳೆ ಪರಿಶಿಷ್ಟ ಜಾತಿಗೆ ಸೇರಿದಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ಕಾಯಿದೆಯಡಿಯು ಸಹಾ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಸತ್ಯ ಮರೆಮಾಚಲು ಕೆಲವೊಂದು ಕಾಣದ ಕೈಗಳು ಪ್ರಯತ್ನಿಸುತ್ತಿದ್ದು, ಪೋಲಿಸ್ ಇಲಾಖೆ ಇದಕ್ಕೆ ಆಸ್ಪದ ನೀಡದೇ ನೈಜ ವರದಿಯನ್ನು ಉನ್ನತ ಮಟ್ಟದ ತನಿಖಾ ಸಮಿತಿಯ ಮುಂದೆ ಮಂಡಿಸಬೇಕು, ನೆರವಿಗೆ ಬಂದವರ ಮೇಲೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದಲ್ಲಿ ಗಂಭೀರವಾದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಉನ್ನತ ಮಟ್ಟದ ಸಮಿತಿ ಸರಿಯಾದ ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿಗಳು ಆದೇಶಿಸುವಂತೆ ಒತ್ತಾಯಿಸಬೇಕಾಗುತ್ತದೆ. ಪ್ರಸ್ತುತ ಮಾಹಿತಿ ಪ್ರಕಾರ ನೀತಿ ಆಯೋಗದ ಸೂಚನೆ ಮೇಲೆ ತುಮಕೂರು ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ತಕ್ಷಣ ಕೈಬಿಡಬೇಕು ಇಲ್ಲವಾದಲ್ಲಿ ತುಮಕೂರು ನಾಗರಿಕರು ಪ್ರತಿಭಟಿಸಬೇಕಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘದ ನಟರಾಜಪ್ಪ, PUCL ನ ಕಾರ್ಯದರ್ಶಿ ತಿರುಮಲಯ್ಯ, ಕೊಳಗೇರಿ ಸಮಿತಿಯ ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಶಂಕರಯ್ಯ, ಗಣೇಶ್ ಹಾಗೂ ಭಾರತಿನಗರ ಶಾಖಾ ಸಮಿತಿ ಪದಾಧಿಕಾರಿಗಳಾದ ಶಾರದಮ್ಮ, ಗಂಗಾ, ಕೆಂಪಣ್ಣ, ಗಂಗಮ್ಮ ಉಪಸ್ಥಿತರಿದ್ದರು.

ತುಮಕೂರಿನಲ್ಲಿ ಗರ್ಭಿಣಿ ಸಾವು : ಮೂವರು ಸಿಬ್ಬಂದಿಗಳ ಅಮಾನತು
ತುಮಕೂರು : ಹೆರಿಗೆ ನೋವಿನಿಂದ ನರಳುತ್ತಿದ್ದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆ ವೈದ್ಯೆಯ ನಿರ್ಲಕ್ಷ್ಯದ ಕಾರಣದಿಂದ ಸಾವನ್ನಪ್ಪಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ ಮೂರು ಶುಶ್ರೂಷಾಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ.

ಹೆರಿಗೆ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆಯನ್ನು ನಿನ್ನೆ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳಿಸಿದ್ದಾರೆ. ಬೇರೆ ದಾರಿ ಇಲ್ಲದೆ, ಹಣವೂ ಇಲ್ಲದೆ ಹೊಟ್ಟೆ ನೋವಿನಲ್ಲೇ ಮನೆಗೆ ವಾಪಸ್ ಬಂದಿದ್ದ ಆ ಮಹಿಳೆ, ಇಡೀ ರಾತ್ರಿ ನರಳಿನರಳಿ ಬೆಳಗಿನಜಾವ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಎರಡು ಮಕ್ಕಳ ಜತೆಗೆ ತಾನೂ ಸಾವನ್ನಪ್ಪಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವೈದ್ಯರು ಮತ್ತು ಶುಶ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷತೆಯು ಗಂಭೀರ ಸ್ವರೂಪದ್ದಾಗಿರುವುದರಿಂದ ಆಯುಕ್ತರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ ಮೂರು ಶುಶ್ರೂಷಾಧಿಕಾರಿಗಳನ್ನು ತನಿಖೆ ಹಾಗೂ ಶಿಸ್ತುಕ್ರಮ ಬಾಕಿ ಇರಿಸಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ತುಮಕೂರಿನ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆಸ್ಪತ್ರೆಗೆ 24 ಗಂಟೆಯೊಳಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಬೇಕು ಎಂದು ನೋಟಿಸ್‌ ಜಾರಿ ಮಾಡಿದೆ.

ಘಟನೆಯ ನಂತರ  ಸಾರ್ವಜನಿಕರಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವಾ ಆಯುಕ್ತರು ಕೆಲವೊಂದು ಅಂಶಗಳನ್ನು ತಿಳಿಸಿದ್ದು ಅವುಗಳು ಈ ಕೆಳಗಿನಂತಿವೆ.

ಕರ್ನಾಟಕ ರಾಜ್ಯವು ಸಾರ್ವಜನಿಕ ಆರೋಗ್ಯ ಪದ್ಧತಿಯಲ್ಲಿ ಇದುವರೆಗೂ ರೋಗಿಗಳಿಗೆ ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌, ಪಡಿತರ ಚೀಟಿ ಇಲ್ಲದೆಯೂ ಆರೋಗ್ಯ ಸೇವೆಗಳನ್ನು ನೀಡುತ್ತಾ ಬಂದಿದೆ. ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳಲು ಅಗತ್ಯವಿರುವುದಿಲ್ಲ.

ರೋಗಿಯು ಯಾವುದೇ ದಾಖಲೆಯು ಅಂದರೆ ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಸಹ ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆಸ್ಫತ್ರಗಳ/ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.

ಅಷ್ಟಲ್ಲದೇ, ದಿ.02/11/2022ರಂದು ತುಮಕೂರಿನಲ್ಲಿ ನಡೆದ ಘಟನೆಯ ಆಧಾರದ ಮೇಲೆ ಈ ಕೆಳಕಂಡ ಅಂಶಗಳನ್ನುಆರೋಗ್ಯ ಇಲಾಖೆ ಮತ್ತೊಮ್ಮೆ ಪುನರುಚ್ಛರಿಸಿದೆ.

ಆರೋಗ್ಯ ಸೇವೆಯನ್ನುನೀಡುವಾಗ ರೋಗಿಯ ರಾಷ್ಟ್ರೀಯತೆ/ಜಾತಿ/ವರ್ಗ ಆರ್ಥಿಕ ಸ್ಥಿತಿಯನ್ನು ಅವಲಂಭಿಸಬಾರದು.

ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈದ್ಯರ ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿರುತ್ತದೆ.

ಆದುದರಿಂದ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒದಗಿಸಲು ಒತ್ತಾಯಿಸಬಾರದು.

ಎಂದು ತಿಳಿಸುವುದರ ಜೊತೆಗೆ ತುಮಕೂರಿನಲ್ಲಿ ನಡೆದಂತಹ ಘಟನೆಗಳು ಮರುಕಳಿಸಿದಲ್ಲಿ ಸಂಬಂಧಪಟ್ಟ ನೌಕರರನ್ನು ಇಲಾಖೆಯು ಸೇವೆಯಿಂದ ವಜಾಗೊಳಿಸಿ ಅವರುಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆಯನ್ನು ಹಾಕಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದಾರೆ.

ಈ ಘಟನೆಗೆ ಸಂಬಂಧಪಟ್ಟಂತೆ ನೆನ್ನೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರು, ʼ ʼಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು ʼ ಎಂದು ಕಿಡಿಕಾರಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಇಲಾಖೆ ಸಚಿವರಾದ ಡಾ.ಕೆ.ಸುಧಾಕರ್, ʼಮೇಲ್ನೋಟಕ್ಕೆ ಹೆರಿಗೆ ವಾರ್ಡ್ ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಅದೇಶವನ್ನು ಪ್ರಕಟಿಸಲಾಗಿದೆʼ ಎಂದು ತಿಳಿದಿದ್ದಾರೆ.

ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಬೇಕು: ಹೆಚ್‌ಡಿಕೆ
ತುಮಕೂರು: ಹೆರಿಗೆ ನೋವಿನಿಂದ ನರಳುತ್ತಿದ್ದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆ ವೈದ್ಯೆಯ ನಿರ್ಲಕ್ಷ್ಯದ ಕಾರಣದಿಂದ ಸಾವನ್ನಪ್ಪಿದ್ದಾಳೆ. ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ʼಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕುʼ ಎಂದು ಕಿಡಿಕಾರಿದ್ದಾರೆ.

ಪ್ರಸವ ವೇದನೆಯಿಂದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆಯನ್ನು ನಿನ್ನೆ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳಿಸಿದ್ದಾರೆ. ಬೇರೆ ದಾರಿ ಇಲ್ಲದೆ, ಹಣವೂ ಇಲ್ಲದೆ ಹೊಟ್ಟೆ ನೋವಿನಲ್ಲೇ ಮನೆಗೆ ವಾಪಸ್ ಬಂದಿದ್ದ ಆ ಮಹಿಳೆ, ಇಡೀ ರಾತ್ರಿ ನರಳಿನರಳಿ ಬೆಳಗಿನಜಾವ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಎರಡು ಮಕ್ಕಳ ಜತೆಗೆ ತಾನೂ ಸಾವನ್ನಪ್ಪಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ  ಹೆಚ್.ಡಿ ಕುಮಾರಸ್ವಾಮಿ, ʼ ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆʼ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ʼಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು. ಕೂಡಲೇ ಆ ವೈದ್ಯೆಯನ್ನು ಸೇವೆಯಿಂದ ವಜಾ ಮಾಡಬೇಕು. ಕರ್ತವ್ಯಲೋಪ ಎಸಗಿದ ಇತರೆ ಸಿಬ್ಬಂದಿಗೂ ತಕ್ಕಶಾಸ್ತಿ ಮಾಡಬೇಕು. ಜಿಲ್ಲಾಸ್ಪತ್ರೆಯ ಅಧಿಕ್ಷರನ್ನೂ ಇದಕ್ಕೆ ಹೊಣೆ ಮಾಡಿ ಮನೆಗೆ ಕಳಿಸಬೇಕುʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕುʼ ಎಂದು ಹೆಚ್‌ಡಿಕೆ ಕಿಡಿಕಾರಿದ್ದಾರೆ.

ತುಮಕೂರು ದಾವಣಗೆರೆ ರೈಲ್ವೆ ಸಂಪರ್ಕ ಯೋಜನೆ ಪ್ರಾರಂಭಿಸಲು ಕ್ರಮ: ಸಿಎಂ ಬೊಮ್ಮಾಯಿ
ಚಿತ್ರದುರ್ಗ: ಇಂದು ಸಿಎಂ ಬೊಮ್ಮಾಯಿ  ಹೊಸದುರ್ಗ ಕಾರ್ಯಕ್ರಮಕ್ಕೆ ತೆರಳುವ ಮುನ್ನ ತುಮಕೂರು ದಾವಣಗೆರೆ ರೈಲ್ವೆ ಲೈನ್ ಬಗ್ಗೆ ಮಾಧ್ಯಮದವರ ಮುಂದೆ ಮಾತನಾಡಿದರು.

ತುಮಕೂರು ದಾವಣಗೆರೆ ರೈಲ್ವೆ ಲೈನ್ ಬಗ್ಗೆ ಪರಾಮರ್ಶೆ ಮಾಡಲಾಗಿದೆ. ಈ ಯೋಜನೆಗೆ ಭೂ ಸ್ವಾದೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಚಿತ್ರದುರ್ಗ ಮೂಲಕ ತುಮಕೂರು ದಾವಣಗೆರೆ ರೈಲ್ವೆ ಸಂಪರ್ಕ ಯೋಜನೆ ಪ್ರಾರಂಭಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದಕ್ಕೆ ಬೇಕಾದ ಹಣವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ನ್ಯಾಯಾಂಗದ ಪ್ರಮುಖ ಕಾರ್ಯಕ್ರಮ ಮತ್ತು ಈ ಭಾಗದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೊಸದುರ್ಗಕ್ಕೆ ಬಂದಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ 1.7 ಕಿ.ಮೀ.ಭೂಸ್ವಾಧೀನ ಕಾರ್ಯ  ಎರಡು ವರ್ಷದಿಂದ ನೆನೆಗುದಿಗೆ ಬಿದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೆಲವು ರೈತರ ಸಮಸ್ಯೆಯಿದ್ದು, ಅದನ್ನು ನಿವಾರಿಸಲಾಗುವುದು ಎಂದರು.