times tower – Peepal Media

ಮುಂಬಯಿ: ಟೈಮ್ಸ್ ಟವರ್‌ ಕಟ್ಟಡದಲ್ಲಿ ಬೆಂಕಿ ಆಕಸ್ಮಿಕ
ಮುಂಬೈ: ಮುಂಬಯಿ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಶುಕ್ರವಾರ ಬೆಳಗ್ಗೆ 6.30ಕ್ಕೆ ಲೋವರ್ ಪರೇಲ್ ಪ್ರದೇಶದ ಟೈಮ್ಸ್ ಟವರ್ಸ್ ಕಟ್ಟಡದಲ್ಲಿ ಈ ಅವಘಡ ನಡೆದಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯು ಕ್ರಮೇಣ ಮೇಲಿನ ಮಹಡಿಗಳಿಗೆ ಹರಡಿ ದೊಡ್ಡ ಜ್ವಾಲೆಗಳಾಗಿ ಪರಿವರ್ತನೆಗೊಂಡಿತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದೆ. 9 ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿವೆ. ಇದುವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ.

ಕಮಲಾ ಮಿಲ್ ಕಾಂಪೌಂಡ್‌ನಲ್ಲಿರುವ ಈ ಬಹು ಅಂತಸ್ತಿನ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 6.30ಕ್ಕೆ ಮಾಹಿತಿ ಸಿಕ್ಕಿತು ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದರು. ಬೆಂಕಿ ನಿಯಂತ್ರಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಬೃಹನ್ ಮುಂಬೈ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ. ಟೈಮ್ಸ್ ಟವರ್ ಮುಂಬಯಿಯ ಅತ್ಯಂತ ಜನನಿಬಿಡ ಪ್ರದೇಶದಲ್ಲಿದೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.