udayanidhi stalin – Peepal Media

ಹಿಂದೂ ಧರ್ಮ ಕುರಿತು ಹೇಳಿಕೆ: ಉದಯನಿಧಿ ಸ್ಟಾಲಿನ್‌ಗೆ ಜಾಮೀನು
ಬೆಂಗಳೂರು: ಸನಾತನ ಧರ್ಮ ಕುರಿತು ತಮಿಳುನಾಡಿನ ಸಚಿವ‌ ಉದಯನಿಧಿ ಸ್ಟಾಲಿನ್‌  ನೀಡಿದ ಹೇಳಿಕೆಯನ್ನು ಆಕ್ಷೇಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾಲಿನ್ ಅವರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ‌.

“ಸನಾತನ ಧರ್ಮ ಸಾಂಕ್ರಾಮಿಕ ರೋಗ ಇದ್ದಂತೆ. ಅದನ್ನು ಬುಡ ಸಮೇತ ಕಿತ್ತು ಹಾಕಿದಾಗ ಮಾತ್ರ ದೇಶದಲ್ಲಿ ವೈಚಾರಿಕತೆ ಬೆಳೆದು ಶಾಂತಿ ನೆಲೆಸುತ್ತದೆ” ಎಂದು ಉದಯನಿಧಿ ಸ್ಟಾಲಿನ್‌ ‘ಚೆನ್ನೈನ ತೆಯನಂಪೇಟೆಯಲ್ಲಿ 2023ರ ಸೆಪ್ಟೆಂಬರ್ 3ರಂದು ನಡೆದಿದ್ದ, ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದರು. ಇದು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತದೆ ಎಂದು  ಬೆಂಗಳೂರಿನ ಬೆಳತ್ತೂರು ಕಾಲೋನಿಯ ವಿ.ಪರಮೇಶ್‌ ಖಾಸಗಿ ದೂರು ದಾಖಲಿಸಿದ್ದರು.

ದೂರಿನಲ್ಲಿ ‘ಸ್ಟಾಲಿನ್‌ ಹೇಳಿಕೆಯು ಸಮಾಜದಲ್ಲಿ ಅಶಾಂತಿ, ದಂಗೆ ಎಬ್ಬಿಸಲು ಪ್ರಚೋದನೆ ನೀಡುವಂತಿದೆ. ಇದರಿಂದ ನನ್ನ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗಿದೆ’ ಎಂದು ಆರೋಪಿಸದ್ದರು.

ದೂರಿನ ಅನುಸಾರ ಭಾರತೀಯ ದಂಡ ಸಂಹಿತೆ–1860ರ ಕಲಂ 153, 298 ಮತ್ತು 500ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ವಿಚಾರಣಾ ನ್ಯಾಯಾಲಯ ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿತ್ತು.

ಈ ಸಂಬಂಧ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಸಚಿವ ಉದಯ ನಿಧಿ ಸ್ಟಾಲಿನ್ ಅವರು ಮಂಗಳವಾರ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ‌ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಮುಂದೆ ಖುದ್ದು ಹಾಜರಾಗಿದ್ದರು.

ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು, ₹5 ಸಾವಿರ ನಗದು ಹಾಗೂ ₹50 ಸಾವಿರ ಮೊತ್ತದ ಆರೋಪಿಯ ವೈಯಕ್ತಿಕ ಬಾಂಡ್ ಮೇರೆಗೆ ಜಾಮೀನು ನೀಡಿದರು. ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ.

ಉದಯನಿಧಿ ಪರ ಹೈಕೋರ್ಟ್ ವಕೀಲರಾದ ಬಾಲಾಜಿ ಸಿಂಗ್, ಚೆನ್ನೈನ ವಿಲ್ಸನ್ ಹಾಗೂ ದೂರುದಾರರ ಪರ ಕರ್ನಾಟಕ ಹೈಕೋರ್ಟ್ ವಕೀಲ ಧರ್ಮಪಾಲ್ ಹಾಜರಿದ್ದರು.

ಕರ್ನಾಟಕದ ನಂತರ ತಮಿಳುನಾಡಿನಲ್ಲಿ ಸದ್ದಾದ ಕೇಂದ್ರದ ತೆರಿಗೆ ನೀತಿ ; ’28 ಪೈಸೆ ಪಿಎಂ’ ಎಂದ ಉದಯನಿಧಿ ಸ್ಟಾಲಿನ್
ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಹಂಚಿಕೆ ವಿರುದ್ಧ ಕರ್ನಾಟಕದಲ್ಲಿ ಎದ್ದ ದನಿಯ ನಂತರ ಈಗ ತಮಿಳುನಾಡಿನಲ್ಲಿ ಈ ಬಗ್ಗೆ ಚರ್ಚೆ ಶುರುವಾಗಿದೆ. ಕೇಂದ್ರದ ತೆರಿಗೆ ಹಂಚಿಕೆಯ ವಿರುದ್ಧ ತಮಿಳುನಾಡು ಸಚಿವ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಶನಿವಾರ(ಮಾ.23 ರಂದು) ವಾಗ್ದಾಳಿ ನಡೆಸಿದ್ದಾರೆ.

ರಾಮನಾಥಪುರಂ ಮತ್ತು ಥೇಣಿಯಲ್ಲಿ ಪ್ರತ್ಯೇಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇವಲ 28 ಪೈಸೆಗಳನ್ನು ಮಾತ್ರ ಕೇಂದ್ರ ರಾಜ್ಯಕ್ಕೆ ಪಾವತಿಸಿದೆ. ಬಿಜೆಪಿ ಆಡಳಿತದ ರಾಜ್ಯಗಳು ಇದಕ್ಕಿಂತ ಹೆಚ್ಚು ಹಣವನ್ನು ಪಡೆಯುತ್ತವೆ ಎಂದು ಆರೋಪಿಸಿದ್ದಾರೆ.

ಹೀಗಾಗಿ ಇನ್ನು ಮುಂದೆ ನಾವು ಪ್ರಧಾನಿಯನ್ನು 28 ಪೈಸೆ ಪಿಎಂ ಎಂದು ಕರೆಯಬೇಕು ಎಂದು ಸ್ಟಾಲಿನ್‌ ವ್ಯಂಗ್ಯವಾಡಿದ್ದಾರೆ. ತಮಿಳುನಾಡಿನಲ್ಲಿ ಮಕ್ಕಳ ಭವಿಷ್ಯವನ್ನು ನಾಶಮಾಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ತಂದಿದ್ದಾರೆ. ಹಣ ಹಂಚಿಕೆ, ಅಭಿವೃದ್ಧಿ ಯೋಜನೆಗಳು ಮತ್ತು ರಾಜ್ಯದಲ್ಲಿ ನೀಟ್‌ ಅನ್ನು ನಿಷೇಧಿಸುವ ವಿಷಯದಲ್ಲಿ ತಮಿಳುನಾಡು ವಿರುದ್ಧ ತಾರತಮ್ಯ ಮಾಡಲಾಗಿದೆ ಎಂದರು.

ಚುನಾವಣೆ ಹತ್ತಿರವಿರುವಾಗ ಮಾತ್ರ ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುತ್ತಿದ್ದಾರೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

39 ಲೋಕಸಭಾ ಸ್ಥಾನಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಏಪ್ರಿಲ್ 19 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.

ಸನಾತನ ಧರ್ಮದ ಕುರಿತು ಟೀಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾ
ಚನೈ: ಸನಾತನ ಧರ್ಮದ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗಳಿಗೆ ಒಳಗಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಮದ್ರಾಸ್ ಹೈಕೋರ್ಟ್‌ ಎರಡು ದಿನಗಳವರೆಗೆ ತರಾಟೆಗೆ ತೆಗೆದುಕೊಂಡು ಇಂದು ಬುಧವಾರ ಅರ್ಜಿಯನ್ನು ವಜಾಗೊಳಿಸುವ ಮೂಲಕ ಅವರಿಗೆ ಸಣ್ಣ ರಿಲೀಫ್ ನೀಡಿದೆ.

ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ಇಂದು ವಜಾಗೊಳಿಸಿದೆ.ಆದರೆ, ‘ಸ್ಟಾಲಿನ್ ಅವರ ಹೇಳಿಕೆಗಳನ್ನು ತಪ್ಪು’ ಎಂದು ಗಮನಿಸಿದ ಹೈಕೋರ್ಟ್ ಅವರಿಗೆ ಛೀಮಾರಿ ಹಾಕಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರಾಗಿರುವ 46 ವರ್ಷದ ಡಿಎಂಕೆ ನಾಯಕ, ಕಳೆದ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ನೀಡಿದ ಹೇಳಿಕೆಯನ್ನು ಬಲಪಂಥೀಯರು ಮತ್ತು ಹಿಂದುತ್ವವಾದಿಗಳು ವಿವಾದ ಮಾಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ, ಅದನ್ನು ವಿರೋಧಿಸುವ ಬದಲು ನಿರ್ಮೂಲನೆ ಮಾಡಬೇಕು’ ಎಂಬ ಅವರು ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಉದಯನಿಧಿ ಸ್ಟಾಲಿನ್ ಅಲ್ಲದೆ, ಅರ್ಜಿದಾರರು ರಾಜ್ಯ ಸಚಿವ ಪಿಕೆ ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ ರಾಜಾ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದರು. ಉದಯನಿಧಿ ಹೇಳಿಕೆ ನೀಡಿದಾಗ ಬಾಬು ಉಪಸ್ಥಿತರಿದ್ದರು. ರಾಜಾ ಅವರು ಉದಯ್ ಹೇಳಿದ್ದನ್ನು ಅನುಮೋದಿಸಿದ್ದರು. ಈ ಕಾರಣಕ್ಕಾಗಿ ಇವರಿಬ್ಬರ ಮೇಲೂ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದ್ದರು.
ಅವರ ಹೇಳಿಕೆಯನ್ನು ಬೆಂಬಲಿಸಿದ್ದ ರಾಜಾ, ‘ಸ್ಟಾಲಿನ್ ಅವರು ಜಾತಿ ಆಧಾರಿತ ತಾರತಮ್ಯವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಹಿಂದೂ ಧರ್ಮವನ್ನು ಅಲ್ಲ. ಅವರು ಕಾನೂನು ಕ್ರಮ ಎದುರಿಸಲು ಸಿದ್ಧ; ಆದರೆ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ ಎಂದಿದ್ದರು.

ಅವರ ಹೇಳಿಕೆಯ ಮೇಲಿನ ಗಲಾಟೆ ನಂತರ ದೇಶದ ಹಲವಾರು ರಾಜ್ಯಗಳಲ್ಲಿ ಪೊಲೀಸ್ ದೂರುಗಳು ದಾಖಲಾಗಿದ್ದವು. ಹಲವು ಎಫ್‌ಐಆರ್‌ಗಳನ್ನು ಒಟ್ಟಿಗೆ ಸೇರಿಸಿ ವಿಚಾರಣೆ ನಡೆಸಬೇಕೆಂದು ಉದಯ್‌ ಸ್ಟಾಲಿನ್ ಈಗ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು.
ಇದಕ್ಕೆ ಸುಪ್ರೀಂ ಕೋರ್ಟ್ ಕಟುವಾಗಿ ಪ್ರತಿಕ್ರಿಯಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ಪೀಠವು ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಸಚಿವರಾಗಿ ನೀವು ತಮ್ಮ ಮಾತಿನ ಪರಿಣಾಮಗಳ ಬಗ್ಗೆ ತಿಳಿದಿರಬೇಕಿತ್ತು. ನೀವು ಹೇಳಿದ್ದರ ಪರಿಣಾಮ ಏನು ಗೊತ್ತಾ? ನೀವು ಜನಸಾಮಾನ್ಯರಲ್ಲ, ಮಂತ್ರಿಯಾಗಿದ್ದೀರಿ ಅನ್ನುವುದು ನೆನಪಿನಲ್ಲಿರಲಿ ಎಂದು ಸೋಮವಾರ ಎಂದು ಬುದ್ಧಿವಾದ ಹೇಳಿತ್ತು.