Uddhav Thackeray – Peepal Media

ʼಇಂಡಿಯಾʼ ಕೂಟದಿಂದ ಪ್ರಧಾನಿ ಅಭ್ಯರ್ಥಿ ಯಾರೆಂದು ಇಂದು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ
ಮುಂಬೈ: ‌ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸುವುದು ಮತ್ತು ಮತ್ತು ಸಂವಿಧಾನವನ್ನು ಉಳಿಸುವುದು ನಮ್ಮ ಉದ್ದೇಶ. ಹೀಗಾಗಿ ಇಂಡಿಯಾ ಕೂಟದಿಂದ ಕಾರ್ಯತಂತ್ರ ಜಾರಿಯಲ್ಲಿದ್ದು, ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಇಂದಿನ ಸಭೆಯಲ್ಲಿ ನಿರ್ಧರಿಸಲಿದ್ದೇವೆ ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

543 ಸದಸ್ಯ ಬಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 291 ಸ್ಥಾನಗಳನ್ನು ಹಾಗೂ ‘ಇಂಡಿಯಾ’ ಮೈತ್ರಿಕೂಟ 234 ಸ್ಥಾನಗಳು ಸಾಧಿಸಿವೆ. ಸರ್ಕಾರ ರಚಿಸುವ ಕಸರತ್ತು ಎರಡು ಕೂಟಗಳಲ್ಲೂ ಜಾರಿಯಲ್ಲಿದ್ದು, ಈ ಸಂಬಂಧ ಎನ್‌ಡಿಎ ಹಾಗೂ ಇಂಡಿಯಾ ನಾಯಕರು ಇಂದು ಸಭೆ ಸೇರಲಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ‘ಇಂಡಿಯಾ’ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗಾಣಿಸುವುದರ ಜತೆಗೆ ಸಂವಿಧಾನವನ್ನು ಉಳಿಸಬೇಕೆಂದು ನಮ್ಮ ಕೂಟದ ಉದ್ದೇಶವಾಗಿತ್ತು ಎಂದು ಹೇಳಿದ್ದಾರೆ.

ಈ ಬಾರಿ ಮಹಾರಾಷ್ಟ್ರದಲ್ಲಿ 45 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಕೇವಲ 17 ಸ್ಥಾನಗಳು ಸಿಕ್ಕಿವೆ. ಆದರೆ, ನಾವು (ಇಂಡಿಯಾ ಬಣ) 28 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡುಗೆ ಕಿರುಕುಳ ನೀಡುತ್ತಿದೆ ಎಂದು ಠಾಕ್ರೆ ಆರೋಪಿಸಿದ್ದಾರೆ.

ಸಂವಿಧಾನ ವಿರೋಧಿಗಳು ಮತ್ತು ಪ್ರಜಾಪ್ರಭುತ್ವ ವಿರೋಧಿ ಶಕ್ತಿಗಳಿಗೆ ದೇಶದಲ್ಲಿ ಸ್ಥಾನವಿಲ್ಲ ಎಂಬುದನ್ನು ದೇಶದ ಜನರು ತೋರಿಸಿಕೊಟ್ಟಿದ್ದಾರೆ ಎಂದು ಶಿವಸೇನಾ  ಮತ್ತೊಬ್ಬ ನಾಯಕ ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.

“ರಾಮಮಂದಿರ ಯಾವುದೇ ಪಕ್ಷದ ಆಸ್ತಿ ಅಲ್ಲ” – ಉದ್ಧವ್ ಠಾಕ್ರೆ
ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಆಹ್ವಾನದ ವಿಚಾರವಾಗಿ ಶಿವಸೇನೆ ಪಕ್ಷದ ನಾಯಕ ಉದ್ದವ್ ಠಾಕ್ರೆ ಬಿಜೆಪಿ ಸರ್ಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಮಮಂದಿರ ಯಾವುದೇ ಪಕ್ಷದ ಕಾರ್ಯಕ್ರಮ ಅಲ್ಲ, ಅಲ್ಲಿಗೆ ಹೋಗಲು ಆಹ್ವಾನದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ನಾಯಕರು ರಾಮಮಂದಿರ ಉದ್ಘಾಟನೆಯನ್ನು ರಾಜಕೀಯದ ಸರಕಾಗಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರಲ್ಲೂ ಮಾಧ್ಯಮಗಳ ಕಡೆಯಿಂದ ಬಿಜೆಪಿ ನಾಯಕರೇ ಹೆಚ್ಚು ಪ್ರಚಾರಕ್ಕೆ ಬರುವಂತೆ ಸುದ್ದಿ ಬಿತ್ತರಿಸಲಾಗುತ್ತಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರ ಉದ್ಘಾಟನೆ ಹೆಸರಿನಲ್ಲಿ ವಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಮಾಧ್ಯಮಗಳನ್ನು ಬಳಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.

ಇದರ ನಡುವೆ ಮಂದಿರ ಉದ್ಘಾಟನೆ ನೆಪದಲ್ಲಿ ಬಿಜೆಪಿ ಮಂದಿಗೆ ಮಾತ್ರ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ ಎಂಬ ನಡುವೆ ಇಂದು ಮಹಾರಾಷ್ಟ್ರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಉದ್ದವ್ ಠಾಕ್ರೆ.. ರಾಮಮಂದಿರ ಯಾವ ಪಕ್ಷದ ಸರಕಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉದ್ದವ್ ಠಾಕ್ರೆ ‘”ಮೊದಲನೆಯದಾಗಿ, ನನಗೆ ಯಾವುದೇ ಆಹ್ವಾನ ಬಂದಿಲ್ಲ, ಎರಡನೆಯದಾಗಿ, ಅಲ್ಲಿಗೆ ಹೋಗಲು ನನಗೆ ಆಹ್ವಾನದ ಅಗತ್ಯವಿಲ್ಲ. ರಾಮ್ ಲಲ್ಲಾ ಯಾವುದೇ ಪಕ್ಷದ ಆಸ್ತಿ ಅಲ್ಲ. ರಾಮ್ ಲಲ್ಲಾ ಎಲ್ಲರಿಗೂ ಸೇರಿದವರು. ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸಬಾರದು ಎಂದು ನಾನು ಬಯಸುತ್ತೇನೆ … ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್ ನೀಡಿದೆ, ಸರ್ಕಾರವಲ್ಲ … ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ‌.

ಸಂಚಲನ ಮೂಡಿಸಿದ ಅಜಿತ್ ಪವಾರ್-ಉದ್ಧವ್ ಠಾಕ್ರೆ ಭೇಟಿ: ಏನು ನಡೆಯುತ್ತಿದೆ ಮಹಾರಾಷ್ಟ್ರದಲ್ಲಿ?
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಶಿವಸೇನೆ (ಉದ್ಧವ್ ಬಣ) ನಾಯಕರನ್ನು ಭೇಟಿ ಮಾಡಿದ್ದಾರೆ. ಇದರಲ್ಲಿ ಶಿವಸೇನೆಯ ಉದ್ಧವ್ ಬಣದ ಶಾಸಕರೊಂದಿಗೆ ಸ್ವತಃ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಭಾಗಿಯಾಗಿದ್ದರು.

ಈ ಸಭೆಯ ನಂತರ ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗುವ ಸಾಧ್ಯತೆಗಳ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಈಗಾಗಲೇ ಶಿವಸೇನೆ ಮತ್ತು ರಾಷ್ಟ್ರೀಯ ಪಕ್ಷಗಳ ನಡುವೆ ಒಡಕು ಉಂಟಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಈ ಸಭೆ ಮಹಾರಾಷ್ಟ್ರದ ರಾಜಕಾರಣಕ್ಕೆ ಯಾವ ರಂಗು ತರಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡಬೇಕಿದೆ.

ವಿಧಾನ ಭವನದಲ್ಲಿ ಅಜಿತ್ ಪವಾರ್ ಮತ್ತು ಉದ್ಧವ್ ಠಾಕ್ರೆ ಭೇಟಿಯ ನಂತರ ಉದ್ಧವ್ ಅವರು ಸಭೆಯ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಜಿತ್ ಪವಾರ್ ನನ್ನೊಂದಿಗೆ ಎರಡೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದಾರೆ ಮತ್ತು ಅವರ ಕಾರ್ಯಶೈಲಿ ನನಗೆ ತಿಳಿದಿದೆ ಎಂದು ಠಾಕ್ರೆ ಹೇಳಿದರು. ಈ ಕಾರಣಕ್ಕಾಗಿಯೇ ನಾನು ಸಭೆಯಲ್ಲಿ ರಾಜ್ಯದ ನಾಗರಿಕರು ಮತ್ತು ರೈತರ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿದೆ. ಅಜಿತ್ ಪವಾರ್ ಅವರು ಪ್ರಸ್ತುತ ಉಪ ಮುಖ್ಯಮಂತ್ರಿಯಾಗಿ ಹಣಕಾಸು ಮತ್ತು ಯೋಜನಾ ಸಚಿವಾಲಯದ ಜವಾಬ್ದಾರಿಯನ್ನು ಹೊಂದಿದ್ದಾರೆ. ರಾಜ್ಯಕ್ಕಾಗಿ ಒಳ್ಳೆಯ ಕೆಲಸ ಮಾಡುವಂತೆ ನಾನು ಅವರನ್ನು ಕೇಳಿಕೊಂಡಿದ್ದೇನೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಖಜಾನೆಯ ಕೀಲಿಕೈಗಳು ಅಜಿತ್ ಪವಾರ್ ಬಳಿ ಇರುವುದರಿಂದ ರಾಜ್ಯದ ಜನತೆಗೆ ಸಾಕಷ್ಟು ನೆರವು ಸಿಗಲಿದೆ ಎಂದು ಠಾಕ್ರೆ ವಿಶ್ವಾಸ ವ್ಯಕ್ತಪಡಿಸಿದರು.

ಎರಡು ಹೋಳಾಗಿರುವ ಶಿವಸೇನೆ-ಎನ್‌ಸಿಪಿ

ಶಿವಸೇನೆಯ ಬಗ್ಗೆ ಮಾತನಾಡುವುದಾದರೆ ಹಾಲಿ ಸಿಎಂ ಏಕನಾಥ್ ಶಿಂಧೆಯವರು ಶಿವಸೇನೆ ವಿರುದ್ಧ ಬಂಡಾಯವೆದ್ದು ಬಿಜೆಪಿ ಜೊತೆ ಸೇರಿ ಹೊಸ ಸರ್ಕಾರ ರಚಿಸಿದ್ದಾರೆ. ಶಿಂಧೆ ಶಿವಸೇನೆ ಪಕ್ಷ ಮತ್ತು ಚುನಾವಣಾ ಚಿಹ್ನೆಯ ಮೇಲೆ ಹಕ್ಕು ಸಾಧಿಸಿದ್ದಾರೆ. ಮತ್ತೊಂದೆಡೆ, ಅಜಿತ್ ಪವಾರ್ ಕೆಲವು ದಿನಗಳ ಹಿಂದೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯವೆದ್ದು, ಪಕ್ಷದ ಹೆಚ್ಚಿನ ಶಾಸಕರೊಂದಿಗೆ ಬಿಜೆಪಿ ಸರ್ಕಾರಕ್ಕೆ ಸೇರಿದ್ದಾರೆ. ಅವರನ್ನು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿಯೂ ಮಾಡಲಾಗಿದೆ.

ಶರದ್ ಪವಾರ್ ಮತ್ತು ಉದ್ಧವ್ ನಡುವೆ ಏನಾದರೂ ನಡೆದಿದೆಯೇ?

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ವಿರೋಧ ಪಕ್ಷಗಳ ಸಭೆಯಲ್ಲಿ ಎರಡನೇ ದಿನ ಶರದ್ ಪವಾರ್ ಕೂಡ ಭಾಗವಹಿಸಿದ್ದರು. ಈ ಸಭೆಯಲ್ಲಿ ಉದ್ಧವ್ ಠಾಕ್ರೆ ಈಗಾಗಲೇ ಉಪಸ್ಥಿತರಿದ್ದರು. ಇಬ್ಬರು ನಾಯಕರು ಸೇರಿ ರಾಜ್ಯಕ್ಕೆ ಹೊಸ ಸಮೀಕರಣ ಸಿದ್ಧಪಡಿಸಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಈಗ ಉದ್ಧವ್ ಮತ್ತು ಅಜಿತ್ ಪವಾರ್ ಭೇಟಿಯ ನಂತರ, ಅಂತಹ ಚರ್ಚೆಗಳು ಬಲಗೊಳ್ಳಲು ಪ್ರಾರಂಭಿಸಿವೆ.

ಭಾರತೀಯ ಚುನಾವಣಾ ಆಯೋಗದ ವಿರುದ್ಧ ಉದ್ಧವ್ ಠಾಕ್ರೆ ಸಲ್ಲಿಸಿದ ಅರ್ಜಿ ವಜಾ: ದೆಹಲಿ ಹೈಕೋರ್ಟ್
ಹೊಸದಿಲ್ಲಿ: ಶಿವಸೇನೆಯ ‘ಬಿಲ್ಲು ಬಾಣ’ ಪಕ್ಷದ ಚಿಹ್ನೆಯನ್ನು ಸ್ಥಗಿತಗೊಳಿಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರದ ವಿರುದ್ಧ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಅಕ್ಟೋಬರ್ 8 ರಂದು ಠಾಕ್ರೆ ಮತ್ತು ಏಕನಾಥ್ ಶಿಂಧೆ ಅವರ ಬಣಕ್ಕೆ ಅಧಿಕೃತ ಮಾನ್ಯತೆಗಾಗಿ ತಮ್ಮ ಪ್ರತಿಸ್ಪರ್ಧಿ ಹಕ್ಕುಗಳನ್ನು ಅಂತಿಮವಾಗಿ ನಿರ್ಧರಿಸುವವರೆಗೂ ʼಶಿವಸೇನೆʼ ಅಥವಾ “ಬಿಲ್ಲು ಮತ್ತು ಬಾಣ” ಎಂಬ ಚಿಹ್ನೆಯನ್ನು ಬಳಸದಂತೆ ಚುನಾವಣಾ ಆಯೋಗವು ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ, ಇತ್ತೀಚೆಗೆ ನಡೆದ ಅಂಧೇರಿ ಪೂರ್ವ ಉಪಚುನಾವಣೆಯಲ್ಲಿ, ಪಕ್ಷದ ಬಣಗಳಿಗೆ ವಿಭಿನ್ನ ಚಿಹ್ನೆಗಳನ್ನು ನೀಡಲಾಗಿತ್ತು.

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ಎರಡೂ ಪಕ್ಷಗಳು ಮತ್ತು ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಬಾಕಿ ಉಳಿದಿರುವ ವಿವಾದವನ್ನು ಸಾಧ್ಯವಾದಷ್ಟು ಬೇಗ ಇತ್ಯರ್ಥಪಡಿಸುವಂತೆ ಇಸಿಐಗೆ ನಿರ್ದೇಶನ ನೀಡಿದ್ದಾರೆ.

ಉದ್ಧವ್ ಠಾಕ್ರೆ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ ಕಾಮತ್ ಮತ್ತು ಏಕನಾಥ್ ಶಿಂಧೆ ಪರ ಹಿರಿಯ ವಕೀಲರಾದ ರಾಜೀವ್ ನಾಯರ್ ಮತ್ತು ನೀರಜ್ ಕಿಶನ್ ಕೌಲ್ ಅವರ ವಾದ-ವಿವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತು.

ಅರ್ಜಿಯ ವಿವರವಾದ ಆದೇಶವನ್ನು ಕಾರಣಗಳೊಂದಿಗೆ ನಂತರ ಅಪ್‌ಲೋಡ್ ಮಾಡಲಾಗುವುದು ಎಂದು ನ್ಯಾಯಮೂರ್ತಿ ನರುಲಾ ಹೇಳಿದರು.

ವಕೀಲರಾದ ವಿವೇಕ್ ಸಿಂಗ್, ದೇವಯಾನಿ ಗುಪ್ತಾ ಮತ್ತು ತನ್ವಿ ಆನಂದ್ ಅವರ ಮೂಲಕ ಸಲ್ಲಿಸಲಾದ ಮನವಿಯಲ್ಲಿ, ಕಕ್ಷಿದಾರರಿಗೆ ಸಾಕ್ಷ್ಯವನ್ನು ಮುನ್ನಡೆಸಲು ಯಾವುದೇ ವಿಚಾರಣೆ ಅಥವಾ ಅವಕಾಶವನ್ನು ನೀಡದೆ, ನೈಸರ್ಗಿಕ ನ್ಯಾಯದ ತತ್ವಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂಬ ಆಧಾರದ ಮೇಲೆ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಲಾಗಿದೆ.

ಜುಲೈ 19 ರಿಂದ ಅಕ್ಟೋಬರ್ 8 ರವರೆಗೆ, ಪಕ್ಷದ ಬಹುಮತ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎರಡೂ ಗುಂಪುಗಳು ಸ್ಥಾಪಿಸಿದ ಹಕ್ಕೊತ್ತಾಯಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂಬ ಅಂಶವನ್ನು ಪರಿಗಣಿಸಲು ಇಸಿಐ ವಿಫಲವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಚಿಹ್ನೆಯ ಕಲ್ಪನೆಯು ರಾಜಕೀಯ ಪಕ್ಷದ ಸಿದ್ಧಾಂತಗಳು, ನೀತಿಗಳು ಮತ್ತು ತತ್ವಗಳನ್ನು ಪ್ರತಿಬಿಂಬಿಸುತ್ತದೆ, ಈ ಸಂದರ್ಭದಲ್ಲಿ ಶಿವಸೇನೆಯ ರಾಜಕೀಯ ಪಕ್ಷ ಮತ್ತು ರಾಜಕೀಯ ಪಕ್ಷದ ಆಕಾಂಕ್ಷೆಗಳು ಮತ್ತು ಮೌಲ್ಯಗಳನ್ನು ಪ್ರದರ್ಶಿಸಲು ಸೂಕ್ತ ಸಾಧನವಾಗಿದೆ ಎಂದು ಠಾಕ್ರೆ ವಾದಿಸಿದ್ದರು.

ಸೆಪ್ಟೆಂಬರ್ 27 ರಂದು, ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಶಿಂಧೆ ಅವರು ಪ್ರಾರಂಭಿಸಿದ ಇಸಿಐ ಮುಂದೆ ವಿಚಾರಣೆಯನ್ನು ತಡೆಹಿಡಿಯುವಂತೆ ಕೋರಿ ಉದ್ಧವ್ ಗುಂಪು ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿತ್ತು.

ಸಚಿವ ಸಂಪುಟ ವಿಸ್ತರಣೆ: ಪ್ರಮಾಣ ವಚನ ಸ್ವೀಕರಿಸಲಿರುವ 18 ಸಚಿವರು
ಮುಂಬೈ: ಮುಂಬೈನಲ್ಲಿ ಇಂದು ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಒಟ್ಟು 18 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪಟ್ಟಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಿಜೆಪಿ ಮತ್ತು ಶಿವಸೇನೆ ಬಣದ ತಲಾ 9 ಶಾಸಕರು ಇದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಉರುಳಿಸಿದ ಶ್ರೀ ಶಿಂಧೆ ನೇತೃತ್ವದ ಸೇನಾ ಬಣದ ಒಂದು ತಿಂಗಳ ನಂತರ ಈ ವಿಸ್ತರಣೆಯಾಗಿದೆ.