vijaya nagara – Peepal Media

ಹಂಪಿ ವಿವಿ- ಅಹೋರಾತ್ರಿ ಧರಣಿಯ ವೇಳೆ ವಿದ್ಯಾರ್ಥಿಯ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು
ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತಿದ್ದು, ಧರಣಿಯ ವೇಳೆ ವಿದ್ಯಾರ್ಥಿಯೊಬ್ಬರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಮದ್ಯರಾತ್ರಿ ನಡೆದಿದೆ.

ಹಂಪಿ ವಿಶ್ವಾವಿದ್ಯಾಯದ ಸಂಶೋಧನಾ ವಿದ್ಯಾರ್ಥಿಗಳು ಹಲವಾರು ತಿಂಗಳುಗಳಿಂದ ಬಾಕಿ ಇರುವ ಸಹಾಯಧನವನ್ನು ನೀಡುವಂತೆ ಒತ್ತಾಯಿಸಿ ಭಾನುವಾರದಿಂದ ಅಹೋರಾತ್ರಿ ಧರಣಿ ಕೈಗೊಂಡಿದ್ದು, ಹೀಗಾಗಿ ಸೋಮವಾರ ರಾತ್ರಿ ಚಳಿಗೆ ಎರಿಸ್ವಾಮಿ ಎಂಬ ಸಂಶೋಧನ ವಿಧ್ಯಾರ್ಥಿಗೆ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಳಲಿಸಲಾಗಿದೆ ಎಂದು ಅಲ್ಲಿನ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಮೂರನೇ ದಿನದ ಧರಣಿ ಕುರಿತು ʼಪೀಪಲ್‌ ಮೀಡಿಯಾʼದೊಂದಿಗೆ ಮಾತನಾಡಿದ ಸಂಶೋಧನಾ ವಿದ್ಯಾರ್ಥಿ  ದೇವೇಂದ್ರರವರು, ಎಸ್‌ಸಿ/ಎಸ್‌ಟಿ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಹಮ್ಮಿಕೊಂಡು ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದ್ದೇವೆ. ಧರಣಿಗೆ ಕೂತಿದ್ದ ಸಂಶೋಧನ ವಿದ್ಯಾರ್ಥಿ ಎರಿಸ್ವಾಮಿ ಎಂಬಾತನಿಗೆ ಸೋಮವಾರ ರಾತ್ರಿ ಚಳಿ ಇರುವ ಕಾರಣ ಎದೆ ನೋವು ಕಾಣಿಸಿಕೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಚರ್ಚೆ ನಡೆಸಿ, ಮಾಧ್ಯಮ ಮಿತ್ರರನ್ನು ಭೇಟಿ ಮಾಡಿ ಸಹಾಯ ಕೋರಲಾಯಿತು. ಹೀಗಾಗಿ ಮಾಧ್ಯಮ ಮಿತ್ರರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಮಾಡಿದಾಗ, ಅವರು ವಿದ್ಯಾರ್ಥಿಗಳ ಸಹಾಯಧನವು ಕಾಮಗಾರಿಗೆ ಬಂದಿದೆ ಎನ್ನುವ ಮಾಹಿತಿ ನೀಡಿದರು ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟಂತೆ ಹಾಗೂ ಸರ್ಕಾರವು ಆದೇಶ ಪತ್ರದಲ್ಲಿ ತಿಳಿಸಿರುವಂತೆ. 11,89 ಕೋಟಿ ಹಣ ಬಿಡುಗಡೆಯಾಗಿರುವ ಹಣ ಮತ್ತು 3,42 ಕೋಟಿ ಹಾಗೂ 1,17 ಕೋಟಿ ರೂ. ಲ್ಯಾಪ್‌ಟಾಪ್‌, ಶಿಷ್ಯವೇತನ, ಎಲ್ಲವನ್ನು ಸೇರಿ ಒಟ್ಟು 15 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಆದರೂ ಕೂಡ ಕುಲಪತಿಗಳು ವಿದ್ಯಾರ್ಥಿಗಳ ಮನವಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡಿದ ಅವರು 21 ನವೆಂಬರ್‌ 2022 ರಂದು ಮುಖ್ಯಮಂತ್ರಿಗಳ ಆದೇಶದಂತೆ, ಸರ್ಕಾರ ಬಿಡುಗಡೆ ಮಾಡಿರುವ 11,89 ಕೋಟಿ ರೂ. ಹಣವನ್ನು ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕೊಡಿ ಎಂದು ತಿಳಿಸಿದ್ದರೂ ಕೂಡ, ಕುಲಪತಿಗಳು ಆ ಹಣವನ್ನು ವಿಶ್ವವಿದ್ಯಾಲಯದ ಕಾಮಗಾರಿಗೆ ಬಲಸಲಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಯ ಸಂಶೋಧನಾ ವಿದ್ಯಾರ್ಥಿಯೊಬ್ಬರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದಾಗ, ಬಸವರಾಜ ಬೊಮ್ಮಾಯಿಯವರು ʼನಾನು ಯಾವ ಆದೇಶವನ್ನು ಹಿಂಪಡೆದಿಲ್ಲ ಆ ಹಣವನ್ನು ಶಿಷ್ಯವೇತನಕ್ಕೆ ನೀಡಿರುವುದಾಗಿ  ತಿಳಿಸಿದ್ದೇನೆʼ ಎಂದು ಹೇಳಿದ್ದಾರೆ. ಆದರೆ ಇಲ್ಲಿನ ಕುಲಪತಿಗಳು ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ಕೊಡುವ ಯಾವುದೇ ಗಟ್ಟಿ ನಿರ್ಧಾರವನ್ನು ಕೈಗೊಳ್ಳತ್ತಿಲ್ಲ ಹಾಗೂ ಹಣ ನೀಡುವ ಭರವಸೆಯನ್ನು ಸಹ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಸಂಶೋಧನಾ ವಿದ್ಯಾರ್ಥಿಗಳು ನಾಲ್ಕು ವರ್ಷಗಳಿಂದ, ವಿಶ್ವವಿದ್ಯಾಲಯಕ್ಕೆ ಯಾವುದೇ, ಹಾನಿ, ಗೌರವ ಕಡೆಸುವಂತಹ ಕೆಲಸಗಳನ್ನು ಮಾಡದೆ, ಶಾಂತಿಯುತವಾಗಿ ಮನವಿ, ಪ್ರತಿಭಟನೆ ಮಾಡಿದರೂ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಈ ಬಾರಿ ಇದಕ್ಕೆ ಒಂದು ಪರಿಹಾರ ನೀಡುವವರೆಗೂ ಮೌನವಾಗಿಯೇ ಪ್ರತಿಭಟನೆ ಮುಂದುವರೆಸುತ್ತೇವೆ ಎಂದರು.

ಧರಣಿ ಕೈಗೊಂಡಬಳಿಕ , ವಿಶ್ವವಿದ್ಯಾಲಯದ ಕುಲಪತಿಗಳಾದ ಸ.ಚಿ.ರಮೇಶ್‌ ರವರು ಏನು ಪತ್ರಿಕ್ರಿಯೆ ನೀಡಿದರು ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಲಪತಿಗಳಿಂದ ಇನ್ನೂ ಯಾವುದೇ ರೀತಿಯ ಸ್ಪಂದನೆ ನೀಡುತ್ತಿಲ್ಲ ಎಂದು ತಿಳಿಸಿದರು.

‘SC/ST ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡದ ಕನ್ನಡ ವಿವಿ ಉಪಕುಲಪತಿ ತಾರತಮ್ಯ ಮಾಡುತ್ತಿದ್ದಾರೆ’: ವಿ ಎಸ್‌ ಉಗ್ರಪ್ಪ ಆಕ್ರೋಶ
ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹಂಪಿ ಕನ್ನಡ ವಿವಿ ಉಪಕುಲಪತಿ ಸ.ಚಿ.ರಮೇಶ್ ವಿರುದ್ಧ ಮಾಜಿ ಲೋಕಸಭಾ ಸದಸ್ಯರಾದ ವಿ.ಎಸ್‌. ಉಗ್ರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಧರಣಿಗೆ ಬೆಂಬಲ ಸೂಚಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ, ವಿದ್ಯಾರ್ಥಿಗಳು ಎರಡನೇ ದಿನ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಅನೇಕ ಬಾರಿ ಮನವಿಗಳನ್ನು ಸಲ್ಲಿಸಿ, ವಿದ್ಯಾರ್ಥಿಗಳು ಪ್ರತಿಭಟನೆ, ಧರಣಿ ನಡೆಸಿದರು ಕೂಡ, ಈ ಬಗ್ಗೆ ಸರ್ಕಾರವಾಗಲಿ, ಕುಲಪತಿಗಳಾಗಲಿ ಕ್ರಮ ತೆಗೆದುಕೊಳ್ಳದಿರುವುದು ವಿದ್ಯಾರ್ಥಿಗಳಿಗಲ್ಲದೆ, ಇಡೀ ಕರ್ನಾಟಕಕ್ಕೆ ಆಗುತ್ತಿರುವ ಅಪಮಾನ ಎಂದು ಕಿಡಿಕಾರಿದರು.

ಧರಣಿ ಬೆಂಬಲಿಸಿ ಉಗ್ರಪ್ಪನವರು ಮಾತನಾಡುತ್ತಿರುವ ದೃಶ್ಯ

‘ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವಂತದ್ದು ಬಿಕ್ಷೆ ಅಲ್ಲ. ಏಕೆಂದರೆ ಅದು ಯಾರಪ್ಪನ ಸ್ವತ್ತು ಅಲ್ಲ. ಇದು ನಮ್ಮೇಲ್ಲರ ಹಕ್ಕು ಎಂದ ಅವರು, ಸಂವಿಧಾನದ ವಿಧಿ 17ರ ಪ್ರಕಾರ ಯಾವುದೇ ರೀತಿಯಲ್ಲಿ, ಜನರಿಗೆ, ವಿದ್ಯಾರ್ಥಿಗಳಿಗೆ, ತಾರತಮ್ಯ ನಡೆದರೆ, ಕಾನೂನು ಅದನ್ನು ಗಂಭೀರವಾಗಿ ಪರಗಣಿಸುತ್ತದೆ. ಹೀಗಾಗಿ ತಾರತಮ್ಯ ನಡೆದಲ್ಲಿ, ಆ ಕುರಿತು ಪ್ರಕರಣ ದಾಖಲಿಸಬಹುದು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ‘ಇಲ್ಲಿ ಯಾರಿಗೆ ಪ್ರೋತ್ಸಾಹ ಧನ ಕೊಟ್ಟಿದ್ದಾರೆಯೋ ಅದು ಒಳ್ಳೆಯದೇ, ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ಆದರೆ ಇವರು ಇಂದಿನ ದಿನಮಾನಗಳಲ್ಲಿ 24% ಮತ್ತು 7% ವ್ಯಕ್ತಿಗಳು 17% ಇರುವಂತಹ ಎಸ್‌ಟಿ, ಎಸ್‌ಸಿಯವರಿಗೆ ತಾರತಮ್ಯ ಮಾಡುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ನಾನು ಒಬ್ಬ ವಕೀಲನಾಗಿ ಹೇಳಲು ಬಯಸುವುದಾದರೆ, ಈ ವಿಶ್ವವಿದ್ಯಾಲಯದ ಅಧಿಕಾರಿಗಳು ಮತ್ತು ಎಸ್‌ಟಿ/ಎಸ್‌ಸಿ ಅನ್ನುವ ಕಾರಣದಿಂದ ತಾರತಮ್ಯ, ಅಥವಾ ಅಸ್ಪೃಶ್ಯತೆಯನ್ನು ಆಚರಣೆ ಮಾಡುತ್ತಿದ್ದರೆ, ನಾನು ಒಬ್ಬ ವಕೀಲನಾಗಿ ಹೇಳಲು ಬಯಸುತ್ತೇನೆ ಎಂದ ಅವರು, ಈ ಭಾಗದ ಪೊಲೀಸ್‌ ಅಧಿಕಾರಿಗಳು ಜೀವಂತವಾಗಿ ಇದ್ದರೆ, ಇಲ್ಲಿ ತಾರತಮ್ಯ ಮತ್ತು ಅಸ್ಪೃಶ್ಯತೆಯನ್ನು ನಡೆಸಿದಂತಹ ಎಲ್ಲಾ ಅಧಿಕಾರಿಗಳ ಮೇಲೆ ಕೂಡಲೇ ಕೇಸನ್ನು ದಾಖಲು ಮಾಡಿಕೊಳ್ಳಬೇಕಿತ್ತು. ಕ್ರಿಮಿನಲ್ ಪ್ರೊಸೀಜರ್ ಕೋಡ್ ಪ್ರಕಾರ, ಸೋಮೋಟೋ ಕೇಸ್‌ ದಾಖಲಿಸಬಹುದಿತ್ತು’ ಎಂದರು.

‘ವಿದ್ಯಾರ್ಥಿಗಳ ಹೋರಾಟ ಸಂವಿಧಾನ ಬದ್ದವಾಗಿದೆ ಈ ಧರಣಿ ಮುಂದುವರಿಯಲಿ ಇಲ್ಲಿನ ಕೆಟ್ಟ ವ್ಯವಸ್ಥೆಗೆ ನೀವೆಲ್ಲ ಬುದ್ದಿ ಕಲಿಸುವವರಾಗಬೇಕು. ಇವರೆಲ್ಲ ಕನ್ನಡ ವಿಶ್ವವಿದ್ಯಾಲಯದ ಗಣತೆಯನ್ನು ಹಾಳು ಮಾಡುತಿದ್ದಾರೆ ಎಂದು ಸ್ಥಳದಲ್ಲಿದ್ದ ಉಪಕುಲಸಚಿವರಾದ ಎ.ವೆಂಕಟೇಶ್ ಅವರನ್ನು ವಿದ್ಯಾರ್ಥಿಗಳು ವಿವರ ಕೇಳಿದರು ಅವರು ಯಾವುದೇ ಮಾಹಿತಿಯನ್ನು ಸರಿಯಾಗಿ ಕೊಡಲಿಲ್ಲ. ಅದಕ್ಕೆ ಅವರು ನೀವು ಮಕ್ಕಳಿಗೆ ನ್ಯಾಯ ಕೊಡಲಾರರು. ಅಧಿಕಾರ ಎನ್ನುವುದು ಎನ್ನುವುದು ಶಾಶ್ವತ ಅಲ್ಲ ಮಾನವೀಯತೆ ಮುಖ್ಯ ಎಂದು’ ಹೇಳಿದರು.
‘ಹೀಗಾಗಿ ಇವರು ಯಾವ ಯಾವ ಮೂಲದಿಂದ ಭ್ರಷ್ಟಾಚಾರ ಮಾಡಬಹುದೆಂದು ಯೋಚಿಸಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಸ.ಚಿ.ರಮೇಶ್ ಅವರು, ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ಬಾಕಿ ಇರುವ 47 ತಿಂಗಳ ಫೆಲೋಶಿಪ್ ದೊರಕಿಸಿಕೊಡಬೇಕು’ ಎಂದು ಆಗ್ರಹಿಸಿದರು.

‘ನಾನು ಇಲ್ಲಿ ರಾಜಕಾರಣ ಮಾಡಲ್ಲ. ಆದರೆ ಇಂದಿನ ಸರ್ಕಾರ ಹಣ ಬಿಡುಗಡೆ ಮಾಡಿದ್ದು ಅಭಿನಂದನಿಯ ಆದರೆ ಇವರು ಹಣವನು ಕೂಡಲೆ ಕೊಡದಿದ್ದರೆ ಇವರುಗಳನ್ನು ಹೇಗೆ ನೀರಿಳಿಸಬೇಕು ನಮಗೆ ಚನ್ನಾಗಿ ಗೊತ್ತಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿಯವರಿಗೆ ಎಚ್ಚರಿಕೆ ನೀಡಿದರು.

ಇಂದಿನಿಂದ ಹಂಪಿ ಕನ್ನಡ ವಿ.ವಿ. ವಿದ್ಯಾರ್ಥಿಗಳ ಅಹೋರಾತ್ರಿ ಧರಣಿ : ರಕ್ಷಣೆ ಕೋರಿ ಪೊಲೀಸರಿಗೆ ಮನವಿ
ಹೊಸಪೇಟೆ: ಪರಿಶಿಷ್ಟ ಜಾತಿ, ಪಂಗಡದ ಸಂಶೋಧನಾರ್ಥಿಗಳ ಬಾಕಿ ಇರುವ 47 ತಿಂಗಳ ಫೆಲೋಶಿಪ್ ನೀಡುವಂತೆ ಒತ್ತಾಯಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರದಿಂದ ಅಹೋರಾತ್ರಿ ಧರಣಿ ನಡೆಸಲಿದ್ದು,  ತಮಗೆ ರಕ್ಷಣೆ ಒದಗಿಸಿಬೇಕೆಂದು ಕಮಲಾಪುರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗಳು ಮನವಿ ಪತ್ರದಲ್ಲಿ ತಿಳಿಸಿರುವ ಮಾಹಿತಿ ಪ್ರಕಾರ, ಕಳೆದ ನಾಲ್ಕು ವರ್ಷಗಳಿಂದ ಫೆಲೋಶಿಪ್ ನೀಡುವಂತೆ ವಿವಿ ಆಡಳಿತಾಂಗಕ್ಕೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದು, ಅಗತ್ಯವಿದ್ದಾಗ ಪ್ರತಿಭಟನೆ, ಧರಣಿ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಏಪ್ರಿಲ್‌ತಿಂಗಳಲ್ಲಿ ಮುಖ್ಯಮಂತ್ರಿಗಳು ವಿವಿಯಲ್ಲಿ ವಿವಿಧ ಕಾಮಗಾರಿ, ಕಟ್ಟಡಗಳ ಉದ್ಘಾಟನೆಗೆ ಬಂದಿದ್ದ ಸಮಯದಲ್ಲಿ ನಾಲ್ಕು ವರ್ಷಗಳಿಂದ ಬಾಕಿ ಇರುವ ಫೆಲೋಶಿಪ್ ನೀಡುವಂತೆ ಮನವಿ ಮಾಡಲಾಗಿತ್ತು. ಅಲ್ಲದೆ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಫೆಲೋಶಿಪ್‌ಗೆ ಅಗತ್ಯವಿರುವ ಅನುದಾನವನ್ನು ತಮ್ಮ ವಿವೇಚನಾ ನಿಧಿಯಿಂದ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ.

ನ.11ರಂದು ಸರ್ಕಾರ 7 1189.61 ಲಕ್ಷ ವಿವಿಯ ಪರಿಶಿಷ್ಟ ಜಾತಿ, ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳಿಗೆ ಬಾಕಿ ಇರುವ ಮಾಸಿಕ ಆರ್ಥಿಕ ನೆರವು ನೀಡಬೇಕೆಂದು ಕನ್ನಡ ವಿಶ್ವವಿದ್ಯಾಲಯಕ್ಕೆ ಅನುದಾನ ಬಿಡುಗಡೆಯ ಆದೇಶ ನೀಡಿದೆ.ಆದರೆ ಕುಲಪತಿಗಳು ಹಾಗೂ ಕುಲಸಚಿವರು ಕಳೆದ ನಾಲೈದು ದಿನಗಳಿಂದ ಭೇಟಿ ಮಾಡಿ ಸರ್ಕಾರ ನೀಡಿರುವ ಅನುದಾನ ಕೂಡಲೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕೆಂದು ಮನವಿ ಮಾಡುತ್ತಾ ಬಂದಿದ್ದೇವೆ. ಆದರೆ ಮನವಿಗೆ ಸ್ಪಂದಿಸದೆ ಬಂದಿರುವ ಹಣವನ್ನು ನಿಮಗೆ ಕೊಡುವುದಿಲ್ಲ ಎಂದು ಹೇಳುತ್ತಿದ್ದಾರೆಂದು ವಿದ್ಯಾರ್ಥಿಗಳು ದೂರಿದ್ದಾರೆ.

ಮನವಿಗೆ ಸ್ಪಂದಿಸಿದ ಕಾರಣ, ಸಂಶೋಧನಾ ವಿದ್ಯಾರ್ಥಿಗಳ ಖಾತೆಗೆ ಹಣ ಬಿಡುಗಡೆಯಾಗುವವರೆಗೆ ಭಾನುವಾರ ಬೆಳಿಗ್ಗೆ 10ಗಂಟೆಯಿಂದ ಆಹೋರಾತ್ರಿ ಧರಣಿ ನಡೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಹಂಪಿ ವಿವಿ ವಿದ್ಯಾರ್ಥಿಗಳು ರಕ್ಷಣೆ ಕೋರಿ ಸಲ್ಲಿಸಿರುವ ಮನವಿ ಪತ್ರ

ರಾಜ್ಯದಲ್ಲಿ ಮತ್ತೆ ಐಪಿಎಸ್, ಐಎಎಸ್‌ ಅಧಿಕಾರಿಗಳ ವರ್ಗಾವಣೆ: ಆದೇಶ ಪತ್ರದಲ್ಲಿ ಏನಿದೆ ಗೊತ್ತೇ?
ವಿಜಯನಗರ:  ವಿಜಯನಗರ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್‌ ಕೆ. ಅವರನ್ನು ರಾಜ್ಯ ಸರ್ಕಾರ ಶುಕ್ರವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಲೋಕಾಯುಕ್ತದಲ್ಲಿ ಎಸ್‌ ಪಿ ಯಾಗಿದ್ದ ಶ್ರೀಹರಿ ಬಾಬು ಬಿ.ಎಲ್ ಅವರನ್ನು ವಿಜಯನಗರ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಇದಲ್ಲದೆ ವಿಜಯನಗರದ ಜಿಲ್ಲಾಧಿಕಾರಿಯಾಗಿದ್ದ ಅನಿರುದ್ಧ್‌ ಶ್ರವಣ್‌ ಪಿ. ಅವರನ್ನು ಕೂಡ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಇವರ ಸ್ಥಾನಕ್ಕೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಟಿ. ವೆಂಕಟೇಶ್‌ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಮಾಡಿ, ತಕ್ಷಣವೆ ಜಾರಿ ಬರುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಮಳೆಹಾನಿ ಪರಿಹಾರ ವಿತರಣೆಯಲ್ಲಿ ಲೋಪ ಸಲ್ಲದು: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ
ಹೊಸಪೇಟೆ: ರಾಜ್ಯದಲ್ಲಿ ಹಿಂದೆಂದಿಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು. ಮಳೆಹಾನಿ ಸಂಭವಿಸಿದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.

ಬೊಮ್ಮಾಯಿ ಅವರು,  ಇಂದು ಹೊಸಪೇಟೆಯಿಂದ ಮಳೆಹಾನಿ ಸಂಭವಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದರು. ಈ ವೇಳೆ ಮನೆಗಳಿಗೆ ಸಂಬಂಧಿಸಿದ ಹಾನಿಯನ್ನು ದಾಖಲಿಸುವ ಹಂತದಲ್ಲಿಯೇ ಕೆಲವೆಡೆ ಲೋಪಗಳಾಗುತ್ತಿರುವುದು ಗಮನಕ್ಕೆ ಬಂದಿದ್ದು, ಇಂತಹ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಕರ್ತವ್ಯ ಲೋಪ ಎಸಗಿದ ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಮನೆ ಹಾನಿಗೆ ಸಂಬಂಧಿಸಿದಂತೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿಗಿಂತ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು.

ಮಳೆಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಸೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಲಾಯಿತು.

ಮೂಲಸೌಲಭ್ಯ ಹಾನಿ ವರ್ಗೀಕರಣ

ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಅವ್ಯಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ವರ್ಗ ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಲಾಯಿತು.

ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಸಹ ಸೂಚನೆ ನೀಡದ ಬೊಮ್ಮಾಯಿ ಅವರು, ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್‌ ಪಾರ್ಮೋಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಬೊಮ್ಮಾಯಿ ತಿಳಿಸಿದರು.

ದಿಢೀರ್ ಪ್ರವಾಹದ ವಿರುದ್ಧ ಮುನ್ನೆಚ್ಚರಿಕೆ

ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.

ಅನುದಾನ ಕೊರತೆ ಇಲ್ಲ

ಬೆಳೆಹಾನಿ ಹಾಗೂ ಮನೆಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಲಾಯಿತು. ಮೂಲಸೌಕರ್ಯ ಹಾನಿಗೆ ಸಂಬಂಧಿಸಿದಂತೆ ಮೂರು ದಿನಗಳ ನಂತರ ಮತ್ತೊಮ್ಮೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮುಖ್ಯಮಂತ್ರಿಯವರೊಂದಿಗೆ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು.

ವಿಜಯನಗರದಲ್ಲಿ ಪಿಕೆ ಹಳ್ಳಿ ಹೋಬಳಿಯಾಗಿ ಪರಿವರ್ತನೆ: ಸಿಎಂ
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಕೆ ಹಳ್ಳಿಯನ್ನು ಹೋಬಳಿ ಯಾಗಿ ಪರಿವರ್ತಿಸಿ ಆದೇಶ ಹೊರಡಿಸಲಾಗುವುದು ಎಂದು  ತಿಳಿಸಿದರು.

ಜಿಲ್ಲೆಯ ಮರಿಯಮ್ಮನಹಳ್ಳಿ ಕುಡಿಯುವ ನೀರಿನ ಯೋಜನೆ ಡಿಪಿಆರ್ ಆಗಿದ್ದು, ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಎರಡೂ ಜಿಲ್ಲೆಯಿಂದ 10 ಸೀಟು ಗೆಲ್ಲಿಸಬೇಕು. ಎರಡು‌ ಜಿಲ್ಲೆಗಳಿಗೆ ಸುಪ್ರೀಂ ಕೊರ್ಟ್ ಆದೇಶದಿಂದ 20 ಸಾವಿರ ಕೋಟಿ ಬಂದಿದ್ದು, ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಮಾಡಿ, ಮಾದರಿ ಜಿಲ್ಲೆಗಳನ್ನಾಗಿ ಮಾಡಲಾಗುವುದು. ವಿಜಯನಗರ ಗತವೈಭವವನ್ನು ಪುನರ್ ಸ್ಥಾಪಿಸಲು ಭಾಜಪ ಸರ್ಕಾರ ಶ್ರಮವಹಿಸಲಿದ್ದು, ಜನರ ಆಶೀರ್ವಾದವಿರಲಿ ಎಂದು ತಿಳಿಸಿದರು.

ಆನಂದ ಸಿಂಗ್ ಅವರು ಹೃದಯ ಶ್ರೀಮಂತಿಕೆಯುಳ್ಳವರು. ಎಲ್ಲ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ‌. ಜಿಲ್ಲೆಯ ರಚನೆಗೆ ಕಾರಣೀಭೂತರಾಗಿದ್ದಾರೆ. ಜಿಲ್ಲೆಯಲ್ಲಿ ಅವರ ನಾಯಕತ್ವದಲ್ಲಿ ಎಲ್ಲರೂ ಮುಂದುವರೆಯಬೇಕು.75 ಸಮುದಾಯಗಳ ನಾಯಕರನ್ನು ಈ ವೇದಿಕೆಯಲ್ಲಿ ಒಗ್ಗೂಡಿಸಿದ್ದಾರೆ. ಆನಂದ್ ಸಿಂಗ್ ಹಾಗೂ ರಾಮುಲು ಅವರ ಸಂಘಟನಾ ಶಕ್ತಿ ಇದೆ. ಸೋಮಲಿಂಗಪ್ಪ, ಗೋಪಾಲಕೃಷ್ಣ, ಸೋಮಶೇಖರ್ ರೆಡ್ಡಿ ಎಲ್ಲರು ಇದ್ದಾರೆ. ಈ ಭಾಗದ ಜನರ ಒಳಿತಿಗಾಗಿ ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದರು.

ಎಸ್ಸಿ ಎಸ್ಟಿ ಸಮುದಾಯವರಿಗೆ ನ್ಯಾಯ ಕೊಡಿಸುತ್ತೇನೆ: ಸಿಎಂ ಬೊಮ್ಮಾಯಿ
ಹೊಸಪೇಟೆ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯವರ ಕಲ್ಯಾಣ ಕಾರ್ಯಕ್ರಮಗಳ ಮೂಲಕ ಈ ಸಮುದಾಯಗಳಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಭಯವಿಲ್ಲ. ನಮ್ಮ ಸರ್ಕಾರ ರೈತ ಕೂಲಿಕಾರ್ಮಿಕರಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋಚಾಲಕರ ಮಕ್ಕಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾರರು ಸೇರಿದಂತೆ ಕುಶಲಕರ್ಮಿಗಳಿಗೆ 50 ಸಾವಿರ ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.

ಈಗ ಜನರಿಗೆ ಭಯವಿಲ್ಲ:

ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ. ಎಸ್ಸಿ ಎಸ್ಟಿ ಸಮುದಾಯವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಾ. ನಮಗೂ ಕಾನೂನು ಗೊತ್ತಿದೆ.‌ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ‌ ಎಂಬ ವಚನ ಕೊಡುತ್ತೇನೆ.
ಬಿಜೆಪಿ ಸರ್ಕಾರದಲ್ಲಿ ದೀನ ದಲಿತರು ಭಯಭೀತರಾಗಿದ್ದಾರೆ‌. ಅಂತ ಹೇಳಿದ್ದಿರಿ, ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ.
ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು ಜನರು ಭಯಭೀತರಾಗಿದ್ದರು‌ . ಆ ಭಯ ಈಗ ಇಲ್ಲ ಎಂದರು.

ಏಕ್ ಭಾರತ ಶ್ರೇಷ್ಟ ಭಾರತ:

ಪ್ರಧಾನಿ ನರೇಂದ್ರ ಮೊದಿಯವರು ಏಕ್ ಭಾರತ ಶ್ರೇಷ್ಟ ಭಾರತ ಎಂದು ಹೇಳಿದ್ದಾರೆ‌. ಪ್ರಧಾನಿಮೋದಿಯವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್, ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಸಿಎಂ ಬೊಮ್ಮಾಯಿ
ಹೊಸಪೇಟೆ: ಕಾಂಗ್ರೆಸ್ ನವರಿಗೆ ರಾಜಕೀಯವಾಗಿ ಭಯವಿದೆ. ಮಾಡಿದುಣ್ಣೋ ಮಹಾರಾಯ ಎನ್ನುವಂತೆ, ನಿಮಗೆ ಅಧಿಕಾರ ಬಂದಾಗ, ಜನರನ್ನು ಮರೆತಿರಿ, ಈಗ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ವಿಜಯನಗರ ಜಿಲ್ಲೆ, ಹೊಸಪೇಟೆಯ ಡಾ. ಪುನಿತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜನ ಸಂಕಲ್ಪ ಯಾತ್ರೆ ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರ ಭವಿಷ್ಯ ಭದ್ರಗೊಳಿಸಲಾಗಿದ್ದು ಅವರಿಗೆ ಯಾವುದೇ ಭಯವಿಲ್ಲ. ಆದರೆ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಭಯ ಇದೆ ಎಂದರು.

ಕಾಂಗ್ರೆಸ್ ನ ಭ್ರಷ್ಟಾಚಾರ ಬಣ್ಣ ಬಯಲಾಗುತ್ತದೆ:

ನಿಮ್ಮ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿ ಹಾಕಲು ಎಸಿಬಿ ರಚನೆ ಮಾಡಿ ಲೋಕಾಯುಕ್ತ ಮುಚ್ಚುವ ಕೆಲಸ ಮಾಡಿದ್ದಿರಿ.ಈಗ ‌ಲೋಕಾಯುಕ್ತ ಬಲಗೊಂಡಿದೆ. ನೀವು ಮಾಡಿರುವ ಎಲ್ಲ ಹಗರಣಗಳು ಬೆಳಕಿಗೆ ಬರುತ್ತಿವೆ. ನಿಮ್ಮ ವಿರುದ್ದದ ಪ್ರಕರಣಗಳ ತನಿಖೆಯಾಗುತ್ತದೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ. ಆಗ ಕಾಂಗ್ರೆಸ್ ನ ಭ್ರಷ್ಟಾಚಾರದ ಬಣ್ಣ ಬಯಲಾಗುತ್ತದೆ ಎಂದರು.

ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್ ತತ್ತರ:

ನಿನ್ನೆ ನಮ್ಮ ರಾಜಾಹುಲಿಯ ಘರ್ಜನೆಗೆ ಕಾಂಗ್ರೆಸ್ ನವರು ತತ್ತರಿಸಿದ್ದಾರೆ‌ ಎಂದರು. ಅದಕ್ಕೆ ಯಡಿಯೂರಪ್ಪ ನವರ ಬಗ್ಗೆ ಒಂದು ಮಾತನಾಡಿದ್ದಾರೆ‌ ಯಡಿಯೂರಪ್ಪ ಅವರಿಗೆ ಅರಳು ಮರಳು ಅಂತ ಹೇಳಿದ್ದಾರೆ. ಆದರೆ ರಾಜಾ ಹುಲಿ ಯಾವುದಕ್ಕೂ ಜಗ್ಗುವುದಿಲ್ಲ ಬಗ್ಗುವುದಿಲ್ಲ. ಅವರನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೀರಿ, ಅವರನ್ನು ಅಧಿಕಾರದಿಂದ ದೂರ ಇಡಲು ಅವರ ಮೇಲೆ ಸುಳ್ಳು ಕೇಸ್ ಹಾಕಿಸಿದಿರಿ. ಅವರು ಮತ್ತೆ ಪುಟಿದೆದ್ದು ಮತ್ತೆ ಸಿಎಂ ಆದರು ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ಅರಳು ಮರಳು:

ಮೋದಿಯವರು ನೆಹರು ಅವರ ಪಾದದ ಧೂಳಿನ ಸಮಾನಾನ ಅಂತ ಕೇಳಿದ್ದಾರೆ‌ ನಾವೂ ಕೇಳಬಹುದು ನೆಹರೂ ಗಾಂಧೀಜಿ ಪಾದದ ಧೂಳಿಗೆ ಸಮಾನಾನಾ . ಕೊರೊನಾ ಸಂದರ್ಭದಲ್ಲಿ ಇಡೀ ದೇಶಕ್ಕೆ ಲಸಿಕೆ ಕೊಡಿಸಿ, ವಿಶ್ವವೇ ಮೆಚ್ಚುವ ಕೆಲಸ ಮಾಡಿದ್ದಾರೆ. ಅನೇಕ ದೇಶಗಳಿಗೆ ಲಸಿಕೆ ನೀಡಿದ್ದಾರೆ‌ ಉಜ್ವಲ ಯೋಜನೆ ಬೇಟಿ ಬಚಾವೋ ಬೇಟಿ ಪಢಾವೋ ಅಂತ ಯೋಜನೆ ಮಾಡಿದರು. ಕಿಸಾನ್ ಸಮ್ಮಾನ ಯೋಜನೆ ಜಾರಿಗೆ ತಂದರು. ಇಡೀ ವಿಶ್ವವೇ ಆರ್ಥಿಕ ಹಿಂಜರಿತ ಕಾಣುತ್ತಿದೆ ಆದರೆ ಭಾರತ ಮಾತ್ರ ಆರ್ಥಿಕವಾಗಿ ಸದೃಢವಾಗಿದೆ. ಸಿದ್ದರಾಮಯ್ಯ ನವರೇ ನಿಮಗೆ ಅರಳು ಮರಳಾಗಿದೆ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ : ಬಿಜೆಪಿ ಮುಖಂಡರಿಗೆ ಸಿದ್ದು ಸವಾಲು

ಅಧಿಕಾರಕ್ಕಾಗಿ ದೇಶ ಒಡೆದ ಕಾಂಗ್ರೆಸ್:

ರಾಹುಲ್ ಗಾಂಧಿಗೆ ಡಿಕೆಶಿ ಸಿದ್ದರಾಮಯ್ಯ ಅವರನ್ನು ಜೋಡಿಸುವುದರಲ್ಲಿ ಸುಸ್ತಾಗಿ ಹೋಗಿದ್ದಾರೆ‌. ಎರಡು ದೇಶದ ಕಲ್ಪನೆ ಮೌಂಟ್ ಬ್ಯಾಟನ್ ಹಾಗೂ ಮಹಮದ್ ಅಲಿ ಜಿನ್ನಾ ಇಟ್ಟರು.‌ ಅವರ ಮಾತಿಗೆ ಒಪ್ಪಿ ಅಧಿಕಾರದ ಆಸೆಗೆ ಗಾಂಧಿಜಿ ಮಾತು ದಿಕ್ಕರಿಸಿ ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಿತು. ನಿಮ್ಮ ಅಧಿಕಾರಕ್ಕಾಗಿ ದೇಶವನ್ನು ಒಡೆದು, ಈಗ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದೀರಿ. ಕಲಿಸ್ತಾನಕ್ಕೆ ಬೆಂಬಲ ಕೊಟ್ಟವರು ಇಂದಿರಾಗಾಂಧಿ , ತಮಿಳುನಾಡಿನಲ್ಲಿ ಎಲ್.ಟಿ.ಟಿ.ಇ ಗೆ ಬೆಂಬಲ ಕೊಟ್ಡವರು ಕಾಂಗ್ರೆಸ್ ನವರು, ನಿಮ್ಮ ಸ್ವಾರ್ಥಕ್ಕಾಗಿ ದೇಶದ ಹೃದಯದ ಮೇಲೆ ಗಾಯದ ಬರೆಗಳನ್ನು ಹಾಕಿದಿರಿ ಎಂದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಗೋವಿಂದ್ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ರಾಜು ಗೌಡ, ಬಸವರಾಜ ದಡೆಸುಗೂರು, ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿಗಳು ಸಿದ್ದೇಶ್ ಯಾದವ್,ವಿಜಯನಗರ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮತ್ತಿತರರು ಹಾಜರಿದ್ದರು.

ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯ ಬಿಜೆಪಿಯ ಮೂಲ ಸಿದ್ಧಾಂತ: ಸಿಎಂ ಬೊಮ್ಮಾಯಿ
ಹೊಸಪೇಟೆ: ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದವೇ BJP ಸರ್ಕಾರ ಮೂಲ ಸಿದ್ಧಾಂತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೊಸಪೇಟೆಯಲ್ಲಿ ಏರ್ಪಡಿಸಲಾಗಿದ್ದ ಜನಸಂಕಲ್ಪಯಾತ್ರೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಎಸ್ ಸಿ, ಎಸ್ ಟಿ ಮೀಸಲಾತಿ ಅವಧಿಯನ್ನು ವಿಸ್ತರಣೆ ಮಾಡುವ ದಿಟ್ಟ ನಿಲುವನ್ನು ತೆಗೆದುಕೊಂಡರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಉದಯದ ಆಶಯದಂತೆ ದೀನದಯಾಳ್ ಉಪಾಧ್ಯಾಯ ಅವರು ಅಂತ್ಯೋದಯ ಕಾರ್ಯಕ್ರಮ ಕೈಗೊಂಡರು. ಅಂತ್ಯೋದಯ ಮೂಲ ಸಿದ್ಧಾಂತವೇ ಬಿಜೆಪಿಯದ್ದು. ಸಿದ್ದರಾಮಯ್ಯ ಅವರಿಗೆ ಇದು ಗೊತ್ತಿಲ್ಲ ಎಂದರು.

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಕ್ರಾಂತಿಕಾರಿ ಹೆಜ್ಜೆ:

ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಿಸುವ ಮೂಲಕ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದ್ದೇವೆ. ಮುಂದಿನ ಹೆಜ್ಜೆಗಳನ್ನು ಕೂಡ ಇಡುತ್ತೇವೆ. ಇದರ ಬಗ್ಗೆ ಸಂಪೂರ್ಣ ಅರಿವಿದೆ. 50 ವರ್ಷ ಈ ನಿರ್ಣಯ ತೆಗೆದುಕೊಳ್ಳಲು ಆಗಿರಲಿಲ್ಲ. ಈಗ ಮುಂದಿನ ಪ್ರಕ್ರಿಯೆಗೆ .ಇಂದಿನ ನಿರ್ಣಯ ಕಾರಣವಾಗುತ್ತದೆ. ಕಾನೂನು ತಜ್ಞರೊಂದಿಗೆ ನಾವು ಚರ್ಚೆ ನಡೆಸಿದ್ದು, ಇದನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದರು

ಮೀಸಲಾತಿ ಹೆಚ್ಚಳ ಸಂವಿಧಾನಬದ್ಧ:

ಶಾಸಕ ಅರವಿಂದ ಬೆಲ್ಲದ್ ಅವರ ಧರ್ಮಾಧಾರಿತ ಮೀಸಲಾತಿ ಕಡಿತಗೊಳಿಸಬೇಕೆಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಏನೇ ಮಾಡಿದರೂ ಸಂವಿಧಾನಬದ್ಧವಾಗಿ ಮಾಡುತ್ತೇವೆ. ಅದನ್ನು ಬಿಟ್ಟು ಏನೂ ಮಾಡಲಾಗುವುದಿಲ್ಲ. ಹಲವಾರು ಜನ ಹಲವಾರು ವಿಚಾರಗಳನ್ನು ಹೇಳುತ್ತಾರೆ. ಆದರೆ ಯಾವುದಾದರೂ ಒಂದು ವರದಿ , ಚಿಂತನೆ , ಅಂಕಿಅಂಶಗಳ ಆಧಾರದ ಮೇಲೆ ಮಾಡಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವಾಗಲೂ ನ್ಯಾ. ನಾಗಮೋಹನ್ ದಾಸ್ ಅವರ ವರದಿ ಅಧ್ಯಯನ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ವೈಯಕ್ತಿಕ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

‘ಭಾರತ್ ತೋಡೋ’ ಯಾತ್ರೆಗೂ ನಮಗೂ ಸಂಬಂಧವಿಲ್ಲ:

ಜನಸಂಕಲ್ಪ ಯಾತ್ರೆಯ ತಯಾರಿ ಒಂದೂವರೆ ತಿಂಗಳ ಮುನ್ನವೇ ಆಗಿತ್ತು. ಮಳೆ ಬಂದಿದ್ದರಿಂದ ಸ್ವಲ್ಪ ಮುಂದೂಡಿಕೆಯಾಯಿತು. ಅಷ್ಟು ಬಿಟ್ಟರೆ, ‘ಭಾರತ್ ತೋಡೋ’ ಯಾತ್ರೆಗೂ ನಮಗೂ ಸಂಬಂಧವಿಲ್ಲ ಎಂದರು.

ಕಾಂಗ್ರೆಸ್ ನವರ ಎಸ್ ಸಿ, ಎಸ್ ಟಿ ವಿರೋಧಿ ಧೋರಣೆ:

ಮೀಸಲಾತಿ ಹೆಚ್ಚಳದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಪ್ರಿಯಾಂಕ ಖರ್ಗೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 50 ವರ್ಷದ ಬೇಡಿಕೆಯನ್ನು ಅವರು ಈಡೇರಿಸಲಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಅವಧಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಮಿತಿ ರಚಿಸಿದರು. ವರದಿಯನ್ನು ಅನುಷ್ಠಾನ ಮಾಡುವ ಶಕ್ತಿ ಭಾಜಪ ಸರ್ಕಾರಕ್ಕಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಏಳಿಗೆಗೆ ಬದ್ಧತೆ ಇದೆ. ಕಾಂಗ್ರೆಸ್ ಅವರು ಮೀಸಲಾತಿ ಬಗ್ಗೆ ಎತ್ತಿರುವ ಅಪಸ್ವರ, ಅವರ ಎಸ್ ಸಿ, ಎಸ್ ಟಿ ವಿರೋಧಿ ಧೋರಣೆಯನ್ನು ತೋರಿಸುತ್ತದೆ ಎಂದು ತಿಳಿಸಿದರು.

ಜನಸಂಕಲ್ಪ ಯಾತ್ರೆಗೆ ಜನರ ಆಶೀರ್ವಾದವಿದೆ:

ರಾಯಚೂರು ಗ್ರಾಮಾಂತರ ಪ್ರದೇಶದಲ್ಲಿ ಜನಸಂಕಲ್ಪ ಯಾತ್ರೆ ಪ್ರಾರಂಭವಾಗಿದೆ. ಅಭೂತಪೂರ್ವ ಉತ್ಸಾಹ , ಬೆಂಬಲ ಮತ್ತು ಸಂಕಲ್ಪ ದೊರೆತಿದೆ. ಇಂದೂ ಕೂಡ ಬಹಳ ದೊಡ್ಡ ಪ್ರಮಾಣದ ಜನಸ್ತೋಮ ಸೇರಿ ಜನಸಂಕಲ್ಪ ಯಾತ್ರೆಗೆ ಆಶೀರ್ವಾದ ಮಾಡುತ್ತಿದ್ದಾರೆ. ಬರುವ ದಿನಗಳಲ್ಲಿ ಎಲ್ಲಾ ಕ್ಷೇತ್ರ ಗಳಿಗೂ ನಾವು ಭೇಟಿ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮಗಳು ನಮ್ಮ ರಾಜ್ಯ ಸರ್ಕಾರದ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ಸರ್ಕಾರದ ಕಾರ್ಯಕ್ರಮ ಗಳು ಎಲ್ಲವೂ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದೇವೆ. ಬರುವ ದಿನಗಳಲ್ಲಿ ಸರ್ಕಾರದ ಕಾರ್ಯಕ್ರಮ ಗಳನ್ನು ಮುಂದಿಟ್ಟು ಕೊಂಡು ನಾವು ಜನರ ಆಶೀರ್ವಾದವನ್ನು ಕೇಳುತ್ತಿದ್ದೇವೆ. ಜನರೂ ಕೂಡ ಸ್ಪಂದಿಸುತ್ತಿದ್ದಾರೆ. ಜನಸಂಕಲ್ಪ ಯಾತ್ರೆ ಅಂತಿಮವಾಗಿ ವಿಜಯಸಂಕಲ್ಪವಾಗಿ ಪೂರ್ಣ ಗೊಳ್ಳುವ ವಿಶ್ವಾಸವಿದೆ ಎಂದರು.

ವಿಜಯನಗರ: ದಲಿತರ ಆತಿಥ್ಯ ಸ್ವೀಕರಿಸಿದ ಸಿ.ಎಂ ಬೊಮ್ಮಾಯಿ
ಹೊಸಪೇಟೆ: ಇಂದು ಕಮಲಾಪುರ ಗ್ರಾಮದ ಅಂಬೇಡ್ಕರ್ ನಗರದ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಿಗ್ಗೆಯಿಂದಲೇ ಸಡಗರದ ವಾತಾವರಣ ಮನೆಮಾಡಿತ್ತು. ಅಡುಗೆ ಮನೆಯಲ್ಲಿ ಅವರ ಪುತ್ರಿಯರಾದ ಹುಲಿಗೆಮ್ಮ ಹಾಗೂ ರೇಣುಕಾ ಬೆಳಗಿನ ಉಪಾಹಾರದ ತಯಾರಿಯಲ್ಲಿ ನಿರತರು.

ಕೆಲವೇ ಕ್ಷಣದಲ್ಲಿ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗಾಗಿ ಕೇಸರಿಬಾತ್, ಮಂಡಕ್ಕಿ ಒಗ್ಗರಣೆ, ಮಿರ್ಚಿ, ಉಪ್ಪಿಟ್ಟಿನ ತಯಾರಿಯಲ್ಲಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್ ಅವರೊಂದಿಗೆ ಆಗಮಿಸಿದ ಮುಖ್ಯಮಂತ್ರಿಗಳು ಕಮಲಾಪುರ ಅಂಬೇಡ್ಕರ್ ನಗರದ ದಲಿತ ಹಿರಾಳ ಕೊಲ್ಲಾರಪ್ಪ ಅವರ ಮನೆಯಲ್ಲಿ ಬೆಳಗಿನ ಉಪಾಹಾರ ಸವಿದರು.

ಕೊಲ್ಲಾರಪ್ಪ ಕುಟುಂಬದವರೊಂದಿಗೆ ಕುಶಲೋಪರಿ ವಿಚಾರಿಸಿ, ಕೊಲ್ಲಾರಪ್ಪ ನವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು.

ಕಾಲೇಜು ಚೆನ್ನಾಗಿದೆ, ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು.

ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಾಹಾರ, ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.