village administrative officer – Peepal Media

ಗ್ರಾಮಲೆಕ್ಕಿಗರಿಗೆ ಈಗ ಹೊಸ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಗ್ರಾಮಲೆಕ್ಕಿಗರ ಹುದ್ದೆಯ ವೇತನ ಶ್ರೇಣಿ ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಬ್ದಾರಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮಲೆಕ್ಕಿಗರು ಎಂಬ ಪದನಾಮವನ್ನು ʼಗ್ರಾಮ ಆಡಳಿತ ಅಧಿಕಾರಿʼ ಎಂದು ಬದಲಾಯಿಸುವಂತೆ ಸರ್ಕಾರ ಆದೇಶಿಸಿದೆ.

ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು ಪದನಾಮವನ್ನು ʼಗ್ರಾಮ ಆಡಳಿತ ಅಧಿಕಾರಿʼ ಎಂದು ಬದಲಾಯಿಸುವಂತೆ ಕಂದಾಯ ಸಚಿವರು ಮೇಲಾಧಿಕಾರಿಗಳಿಗೆ ಟಿಪ್ಪಣಿ ಸಲ್ಲಿಸಿದ್ದರು. ಟಿಪ್ಪಣಿಯಲ್ಲಿ ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪದನಾಮವನ್ನು ಬದಲಾವಣೆ ಮಾಡುವ ಸಂಬಂಧ ಅಭಿಪ್ರಾಯ ನೀಡುವಂತೆ ಕೋರಲಾಗಿದ್ದು, ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಈ ನಾಲ್ಕು ವಿಭಾಗದ ಪ್ರಾದೇಶಿಕ ಆಯುಕ್ತರುಗಳು ಗ್ರಾಮಲೆಕ್ಕಿಗರು ಎಂಬ ಪದನಾಮವನ್ನು ʼಗ್ರಾಮ ಆಡಳಿತ ಅಧಿಕಾರಿʼ ಎಂದು ಬದಲಾಯಿಸುವಂತೆ ವರದಿ ಸಲ್ಲಿಸಿದ್ದರು ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿತ್ತು.

ಈ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಸರ್ಕಾರ ಪರಿಶೀಲಿಸಿದ್ದು, ಕಂದಾಯ ಇಲಾಖೆಯ ಗ್ರಾಮಲೆಕ್ಕಿಗರು(village accountant) ಎಂಬ ಪದನಾಮವನ್ನು ʼಗ್ರಾಮ ಆಡಳಿತ ಅಧಿಕಾರಿʼ(Village Administrative Officer) ಎಂದು ಪದನಾಮೀಕರಿಸಿ ಎಂದು ಆದೇಶಿಸಿದೆ.

ಅಲ್ಲದೇ, ಗ್ರಾಮ ಆಡಳಿತ ಅಧಿಕಾರಿ ಎಂಬ ಪದನಾಮೀಕರಿಸಿದರೂ ಅವರ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಬ್ದಾರಿಗಳಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಸರ್ಕಾರ ತನ್ನ ನಡವಳಿಯಲ್ಲಿ ತಿಳಿಸಿದೆ.

ಸದರಿ ಪದನಾಮ ಬದಲಾವಣೆಯ ಪ್ರಸ್ತಾವನೆಯನ್ನು ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕವಾಗಿ ಕ್ರಮವಹಿಸಲಾಗುವುದು ಎಂದು ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ, ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಡಿಸೆಂಬರ್‌ 6 ರಂದು ಆದೇಶ ನೀಡಿದ್ದಾರೆ.