zameer ahemad – Peepal Media

ಮುಸ್ಲಿಂ ಸಮುದಾಯ ಮತ ಕೊಡಲಿಲ್ಲ ಎಂದು ಜೆಡಿಎಸ್ ಶಾಸಕರು ಬಹಿರಂಗವಾಗಿ ಹೇಳಲಿ – ಜಮೀರ್ ಅಹಮದ್ ಖಾನ್ ಅಗ್ರಹ
ಬೆಂಗಳೂರು :ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದು ಹೇಳಲಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಗ್ರಹಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಇವರು ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಲಿ ಎಂದು ಪ್ರೆಶ್ನೆ ಮಾಡಿದ್ದಾರೆ.

ಹೊಳೆನರಸೀಪುರದಲ್ಲಿ ಎಚ್. ಡಿ. ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನ ರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ. ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ ಆರು ಸ್ಥಾನ ಬರುತ್ತಿತ್ತು ಎಂದು ಹೇಳಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ಅವರು ಬಿಜೆಪಿ ಜತೆ ಹೋಗುವ ಸಲುವಾಗಿ ಮುಸ್ಲಿಂ ಮತ ಕೊಡಲಿಲ್ಲ ಎಂದು ಹೇಳುವುದು ಎಷ್ಟರ ಮಟ್ಟಿಗೆ ಸರಿ. ಇದು ಮುಸ್ಲಿಂ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಜಮೀರ್ ಅಹಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಇದ್ದವರು. ಆದರೆ ಕುಮಾರಸ್ವಾಮಿ ತಮ್ಮ ರಾಜಕಾರಣಕ್ಕೆ ಗೌಡರ ತತ್ವ ಸಿದ್ದಾಂತ ಬಲಿ ಕೊಟ್ಟಿದ್ದಾರೆ ಎಂದು ದೂರಿದ್ದಾರೆ.

ಬಡವರ ವಸತಿ ಮನೆಗಳಿಗೆ ಸರ್ಕಾರದ್ದೇ ಸಂಪೂರ್ಣ ವೆಚ್ಚದ ಚಿಂತನೆ : ಸಚಿವ ಜಮೀರ್
ಬೆಂಗಳೂರು : ಮುಂದಿನ ದಿನಗಳಲ್ಲಿ ವಸತಿ ಯೋಜನೆಗಳಲ್ಲಿ ಸಂಪೂರ್ಣ ಮೊತ್ತ ಸರ್ಕಾರವೇ ಪಾವತಿಸಿ ಬಡವರಿಗೆ ಉಚಿತವಾಗಿ ಸೂರು ಕಲ್ಪಿಸಲು ಕ್ರಮ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಲು ನಿರ್ಧಾರಿಸಲಾಗಿದೆ ಎಂದು ಶುಕ್ರವಾರ ನಡೆದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ರವರು ತಿಳಿಸಿದ್ದಾರೆ.

ಈ ಕುರಿತು ಪ್ರಸ್ತಾಪ ಮಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಸಬ್ಸಿಡಿ ಹೊರತುಪಡಿಸಿ ಉಳಿದ ಮೊತ್ತ ಸರ್ಕಾರವೇ ಭರಿಸಿ ಫಲಾನುಭವಿಗಳಿಂದ ಯಾವುದೇ ಮೊತ್ತ ಪಡೆಯದೆ ಮನೆ ಕೊಟ್ಟರೆ ಬಡವರಿಗೆ ಅನುಕೂಲ ಕಲ್ಪಿಸದಂತಾಗುತ್ತದೆ. ಈ ಬಗ್ಗೆ ಪ್ರಸ್ತಾವನೆ ಸಿದ್ದಪಡಿಸಿ ಸರ್ಕಾರಕ್ಕೆ ಕಳುಹಿಸೋಣ ಎಂದು ಹೇಳಿದರು.

ವಸತಿ ಯೋಜನೆಗಳಲ್ಲಿ ಫಲಾನುಭವಿಗಳು ವಂತಿಗೆ ಪಾವತಿಸದೆ ಅನುಷ್ಠಾನ ಕಷ್ಟ ಆಗುತ್ತಿದೆ. ಹೀಗಾಗಿ ಹತ್ತು ಸಾವಿರ ಮನೆ ನಿರ್ಮಾಣದ ಬದಲು ಐದು ಸಾವಿರ ಮನೆ ನಿರ್ಮಾಣದ ಗುರಿ ಹಾಕಿಕೊಂಡು ಪೂರ್ಣಗೊಳಿಸಿದರೆ ಯೋಜನೆ ಸಾಕಾರಗೊಳ್ಳುತ್ತದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಲು ಸರ್ಕಾರಕ್ಕೆ ಮನವಿ ಮಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಆದರೆ ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಇದು ಅನ್ವಯ ಆಗದು. ಫಲಾನುಭವಿಗಳ ವಂತಿಗೆ ಪಾವತಿಸಲೇಬೇಕಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ವಾಂಬೆ, ಹುಡ್ಕೋ ಸೇರಿದಂತೆ ವಿವಿಧ ಯೋಜನೆಗಳಡಿ ವಸತಿ ಸಂಕೀರ್ಣ ನಿರ್ಮಿಸಿ ಶಿಥಿಲಗೊಂಡು ಪುನರ್ ನಿರ್ಮಾಣ ಮಾಡಬೇಕಾದರೆ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಕೊಡಲು ಒಪ್ಪಿ ಪಾವತಿಸಿದ ನಂತರವೇ ಗುದ್ದಲಿ ಪೂಜೆ ನೆರವೇರಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ಸ್ಥಳೀಯ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಫಲಾನುಭವಿಗಳನ್ನು ಒಪ್ಪಿಸಿ ವಂತಿಗೆ ಪಾವತಿಸಲು ಬೇಕಾದರೆ ಕಂತುಗಳಲ್ಲಿ ಪಾವತಿಸಲು ಅವಕಾಶ ಕೊಡಿ. ಆದರೆ ವಂತಿಗೆ ಪಾವತಿಗೆ ಒಪ್ಪಿಕೊಳ್ಳದಿದ್ದರೆ ಯಾವುದೇ ಕಾರಣಕ್ಕೂ ಹಳೇ ವಸತಿ ಸಂಕೀರ್ಣ ಕೆಡವಬಾರದು ಎಂದು ಸೂಚನೆ ನೀಡಿದರು.

ಕೊಳೆಗೇರಿ ನಿವಾಸಿಗಳ ಸಂಘಟನೆಗಳು ಶುಕ್ರವಾರ ಸಚಿವರನ್ನು ಭೇಟಿ ತಮ್ಮ ಸಮಸ್ಯೆ ಹೇಳಿಕೊಂಡು ಮನವಿ ಸಲ್ಲಿಸಿದರು. ಬಜೆಟ್ ನಲ್ಲಿ ಕೊಳೆಗೇರಿ ಅಭಿವೃದ್ಧಿ ಗೆ ಒಂದು ಸಾವಿರ ಕೋಟಿ ರೂ. ಮೀಸಲು ಇಡುವಂತಾಗಬೇಕು ಎಂದು ಅಗ್ರಹಿಸಿತು. ರಾಜ್ಯದಲ್ಲಿರುವ ಒಟ್ಟಾರೆ ಕೊಳೆಗೇರಿ, ಘೋಷಿತ, ಅಘೋಷಿತ, ವಾರಸು ದಾರ ರು ಇಲ್ಲದ ಖಾಸಗಿ ಜಮೀನು ಗಳಲ್ಲಿರುವ ಕೊಳೆಗೇರಿ, ನ್ಯಾಯಾಲಯದಲಿರುವ ಪ್ರಕರಣ ಗಳ ಬಗ್ಗೆ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಗೃಹ ಮಂಡಳಿ ಆಯುಕ್ತರಾದ ಕವಿತಾ ಮನ್ನಿಕೇರಿ, ರಾಜೀವ್ ಗಾಂಧಿ ವಸತಿ ನಿಗಮ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ವೆಂಕಟೇಶ್, ಪ್ರಧಾನ ಅಭಿಯಂತರ ಬಾಲರಾಜು ಉಪಸ್ಥಿತರಿದ್ದರು.

ಮಣಿಪುರ ಸಂತ್ರಸ್ತರ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಜಮೀರ್ ಅಹಮದ್
ಬೆಂಗಳೂರು : ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬೆಂಗಳೂರಿಗೆ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು.

ಚಾಮರಾಜ ಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆ ಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಆಸರೆಯ ವೆಚ್ಚ ಭರಿಸುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿ ಎರಡು ಲಕ್ಷ ರೂ. ನೀಡಿದ್ದಾರೆ.

ಮಣಿಪುರ ವಿದ್ಯಾರ್ಥಿಗಳ ಜತೆ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಸಚಿವರು, ಇಲ್ಲಿ ಸುರಕ್ಷಿತ ವಾಗಿರಿ ನಿಮಗೆ ಏನೇ ಬೇಕಾದರೂ ನಾನೇ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಮಣಿಪುರ ವಿದ್ಯಾರ್ಥಿಗಳ ಜತೆಯೇ ಉಪಹಾರ ಸೇವಿಸಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ 250 ಮಕ್ಕಳಿಗೂ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ರಾತ್ರಿ ಊಟದ ವ್ಯವಸ್ಥೆ ಮಾಡಿದರು.

ಒಟ್ಟು ಮಣಿಪುರದಿಂದ 200 ವಿದ್ಯಾರ್ಥಿಗಳು ಆಶ್ರಯ ಪಡೆಯಲು ಬಂದಿದ್ದು 29 ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದು ಉಳಿದವರಿಗೆ ಇದೇ ಸಂಸ್ಥೆಯ ಬೇರೆ ಕಡೆ ಆಶ್ರಯ ನೀಡಲಾಗಿದೆ. ಈ ವಿದ್ಯಾರ್ಥಿಗಳು ಮುಂದಿನ ಏಳು ವರ್ಷ ಇಲ್ಲೇ ವಿದ್ಯಾಭ್ಯಾಸ ಪಡೆಯಲಿದ್ದಾರೆ. ಈ ಸಂದರ್ಭದಲ್ಲಿ ಸೆಂಟ್ ತೆರೇಸಾ ವಿದ್ಯಾ ಸಂಸ್ಥೆಯ ಶಿಕ್ಷಕ ವರ್ಗ ಉಪಸ್ಥಿತರಿದ್ದರು.

ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿ ವೇತನ ಪುನರರಂಭಕ್ಕೆ ಕೃತಜ್ಞತೆ : ಸಚಿವ ಜಮೀರ್ ಅಹಮದ್
ಬೆಂಗಳೂರು : ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮೂಲ ಮಂತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬಜೆಟ್ನಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬದ್ಧತೆ ತೋರಿರುವ ಜತೆಗೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನೀಲ ನಕ್ಷೆ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು ನೀಡಿರುವುದರ ಜತೆಗೆ 2,101 ಕೋಟಿ ರೂ. ಒದಗಿಸಿ ಬಿಜೆಪಿ ಅವಧಿಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಪುನರಾರಂಭಗೊಳಿಸಸಲು 60 ಕೋಟಿ ರೂ. , ಅರ್ಧಕ್ಕೆ ನಿಂತಿರುವ ಶಾದಿ ಮಹಲ್ ಹಾಗೂ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು 54 ಕೋಟಿ ರೂ. ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಅದೇ ರೀತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೇಲ್ದರ್ಜೆಗೇರಿಸಲು 30 ಕೋಟಿ ರೂ., ಅರಿವು ಶಿಕ್ಷಣ ಸಾಲ ಕ್ಕೆ 73 ಕೋಟಿ ರೂ., ಅಲ್ಪಸಂಖ್ಯಾತ ಸಮುದಾಯದ ಕಾಲೋನಿಗಳ ಅಭಿವೃದ್ಧಿ ಗೆ 360 ಕೋಟಿ ರೂ. ಅಲ್ಪಸಂಖ್ಯಾತ ಸಮುದಾಯದ ಶಾಲಾ ಕಾಲೇಜುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಕಲಿಸುವ ಭಾಷಾ ಲ್ಯಾಬ್ ಗಳಿಗೆ 5 ಕೋಟಿ ರೂ., ಸ್ವಾವಲಂಭಿ ಸಾರಥಿ ಯೋಜನೆಯಡಿ 3 ಲಕ್ಷ ರೂ. ನೆರವು, ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ವಖ್ಫ್ ಆಸ್ತಿ ಸಂರಕ್ಷಣೆಗೆ 40 ಕೋಟಿ ರೂ. ಒದಗಿಸಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ಬದ್ಧತೆ ಮೆರೆದಿದ್ದಾರೆ ಎಂದು ಹೇಳಿದ್ದಾರೆ.

ವಸತಿ ಇಲಾಖೆ ಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಧಕ್ಕೆ ನಿಂತಿರುವ 12 ಲಕ್ಷ ಮನೆಗಳ ಪೈಕಿ ಈ ವರ್ಷ 3 ಲಕ್ಷ ಮನೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು 2,450 ಕೋಟಿ ರೂ. ಒದಗಿಸಿರುವುದುu ಸ್ವಾಗತ ಎಂದು ತಿಳಿಸಿದ್ದಾರೆ.

ಒಟ್ಟಾರೆ ಬಜೆಟ್ ಆರ್ಥಿಕತೆ ಮತ್ತು ಅಭಿವೃದ್ಧಿ ಗೆ ವೇಗ ನೀಡಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಹೊಂದಿದೆ ಎಂದು ಹೇಳಿದ್ದಾರೆ.

ಉದ್ಯೋಗ ಮೇಳ ಪ್ರಾಯೋಜಕತ್ವಕ್ಕೆ 1.50 ಲಕ್ಷ ರೂ.ನೀಡಿ ಪ್ರೋತ್ಸಾಹಿಸಿದ ಸಚಿವ ಜಮೀರ್ ಅಹಮದ್ ಖಾನ್
ಬೆಂಗಳೂರು : ಬಿಎಂಎಸ್ ಮಹಿಳಾ ಕಾಲೇಜು ವತಿಯಿಂದ ಆಯೋಜಿಸಿರುವ ಉದ್ಯೋಗ ಮೇಳ ಪ್ರಯೋಜಕತ್ವ ಮನವಿಗೆ ಸ್ಪಂದಿಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ವೈಯಕ್ತಿಕವಾಗಿ 1.50 ಲಕ್ಷ ರೂ. ನೀಡಿ ಪ್ರೋತ್ಸಾಹಿಸಿದರು.

ಜುಲೈ 21 ರಂದು ಆಯೋಜಿರುವ ಉದ್ಯೋಗ ಮೇಳಕ್ಕೆ ನಿರ್ವಹಣೆ ವೆಚ್ಚ ಹತ್ತು ಲಕ್ಷ ರೂ.ವೆಚ್ಚ ಆಗಲಿದ್ದು ಪ್ರಾಯೋಜಕತ್ವ ಕ್ಕಾಗಿ ವಿದ್ಯಾರ್ಥಿಗಳ ನಿಯೋಗ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿತು.
60 ಕಂಪನಿ ಗಳು ಮೇಳದಲ್ಲಿ ಭಾಗವಹಿಸುತ್ತಿದ್ದು 50 ಕಾಲೇಜುಗಳ 20 ಸಾವಿರ ಅಭ್ಯರ್ಥಿ ಗಳು ಮೇಳದಲ್ಲಿ ಭಾಗವಹಿಸುತ್ತಿರುವುದಾಗಿ ಮಾಹಿತಿ ನೀಡಿದರು.

ಇದಕ್ಕೆ ಸ್ಪಂದಿಸಿದ ಸಚಿವರು ವೈಯಕ್ತಿಕವಾಗಿ 1.50 ಲಕ್ಷ ರೂ. ಚೆಕ್ ನೀಡಿ ಶುಭ ಹಾರೈಸಿದರು. ನಂತರ ವಿದ್ಯಾರ್ಥಿಗಳ ಜತೆ ಊಟ ಸವಿದರು.

ಕೊಳೆಗೇರಿ ನಿವಾಸಿಗಳಿಗೆ ಶಾಶ್ವತ ಸೂರು ಯೋಜನೆ – ವಸತಿ ಸಚಿವ ಜಮೀರ್ ಅಹಮದ್
ಬೆಂಗಳೂರು : ಹಲವಷ್ಟು ವರ್ಷಗಳಿಂದ ಕೊಳೆಗೇರಿ ಪ್ರದೇಶದಲ್ಲಿ ವಾಸವಿದ್ದರೂ ಶಾಶ್ವತ ಮನೆಯ ವ್ಯವಸ್ಥೆ ಇಲ್ಲದ ಸುಮಾರು ಮೂರು ಸಾವಿರ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಯೋಜನೆ ರೂಪಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದ ಕೊಳೆಗೇರಿ ವಾಸಿಗಳ ಪರ ಸಂಘ – ಸಂಸ್ಥೆಗಳ ಅಹವಾಲು ಸ್ವೀಕರಿಸಿ ಮಾತನಾಡಿದ ವಸತಿ ಸಚಿವ ಜಮೀರ್ ಅಹಮದ್ ಖಾನ್ ರವರು, ಹತ್ತಾರು ವರ್ಷಗಳಿಂದ ಗುಡಿಸಲು ಹಾಗೂ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿರುವವರು, ಕೆಲವೆಡೆ ನೆಲ ಬಾಡಿಗೆ ನೀಡಿ ಜೀವನ ಮಾಡುತ್ತಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಡಲು ಪ್ರಸ್ತಾವನೆ ಸಿದ್ದಪಡಿಸಲು ನಿರ್ದೇಶನ ನೀಡಿದರು.

ಸಭೆಯ ನಂತರ ಮಾತನಾಡಿದ ಸಚಿವರು, ಕೊಳೆಗೇರಿ ಎಂದು ಘೋಷಣೆ ಆಗಿದ್ದರೂ ಕೆರೆಯಂಗಳ, ಮಳೆ ನೀರು ಹರಿಯುವ ಕಾಲುವೆ, ವಿದ್ಯುತ್ ತಂತಿ ಹಾದು ಹೋಗಿರುವ ಮಾರ್ಗ, ಅರಣ್ಯ ಪ್ರದೇಶ ಎಂಬ ಕಾರಣಕ್ಕೆ ಮನೆ ಕಟ್ಟಿಕೊಡಲು ಸಾಧ್ಯವಾಗಿಲ್ಲ. ಯಾವುದೇ ಮೂಲ ಸೌಕರ್ಯ ಇಲ್ಲದೆ ಹತ್ತಾರು ವರ್ಷ ಗಳಿಂದ ಸಾವಿರಾರು ಕುಟುಂಬಗಳು ಸಂಕಷ್ಟ ದಲ್ಲಿ ಅಲ್ಲಿ ವಾಸಿಸುತ್ತಿವೆ.  ಹೀಗಾಗಿ ಅವರಿಗೆಲ್ಲ ಶಾಶ್ವತ ಸೂರು ಕಲ್ಪಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಕೆ.ಆರ್.ಪುರ ಹೋಬಳಿಯ ಬಿದರಹಳ್ಳಿಯಲ್ಲಿ ಎಂಟು ಎಕರೆ ಈಗಾಗಲೇ ಗುರುತಿಸಲಾಗಿದೆ. ಇದೇ ರೀತಿ ನಗರದ ಇತರೆಡೆ  ಇರುವ ಸರ್ಕಾರಿ ಜಮೀನು ಪಡೆಯುವ ಬಗ್ಗೆ ಕಂದಾಯ ಸಚಿವರ ಜತೆ ಚರ್ಚಿಸಲಾಗುವುದು. ಅಲ್ಲಿ ಪಡೆದು ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ವಸತಿ ಸಮುಚ್ಚಯ ನಿರ್ಮಿಸಿ ಎಲ್ಲ ಕುಟುಂಬಗಳನ್ನು ಶಿಫ್ಟ್ ಮಾಡಲಾಗುವುದು ಎಂದು ತಿಳಿಸಿದರು.

ಶಾಶ್ವತ ಸೂರು ಕಲ್ಪಿಸಿದರೆ ನಾವು ಬೇರೆಡೆ ಶಿಫ್ಟ್ ಆಗಲು ಸಿದ್ದ ಎಂದು ಅಲ್ಲಿನ ನಿವಾಸಿಗಳು ಒಪ್ಪಿಗೆ ನೀಡಿದ್ದಾರೆ. ಹೀಗಾಗಿ ಆದಷ್ಟು ಬೇಗ ಈ ಯೋಜನೆ ಸಂಬಂಧ ಪ್ರಸ್ತಾವನೆ ಸಿದ್ದ ಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಕಾಚರಕನಹಳ್ಳಿ ಕೆರೆ ವ್ಯಾಪ್ತಿ, ಗೋವಿಂದರಾಜ ನಗರದ ವಿನಾಯಕ ನಗರ, ಉತ್ತರಹಳ್ಳಿಯ ರಸ್ತೆಯ ಕೊಡಿಪಾಳ್ಯ, ದೊಡ್ಡ ಆಲದ ಮರ ಸಮೀಪದ ಭೀಮನಕುಪ್ಪೆ, ದಾಸರಹಳ್ಳಿ, ಮಹಾಲಕ್ಷ್ಮೀ ಲೇ ಔಟ್, ಬ್ಯಾಟರಾಯನಪುರ ಭಾಗದ ಕೊಳೆಗೇರಿಗಳಲ್ಲಿ ಶೆಡ್, ಗುಡಿಸಲು, ಕಚ್ಚಾ ಮನೆ ಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಇದರಿಂದ ನೆರವಾಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರೇ ನಮಗೆ ಮಾದರಿ – ಜಮೀರ್ ಅಹಮದ್
ಬೆಂಗಳೂರು : ವಿಧಾನಮಂಡಲ ಕಲಾಪದಲ್ಲಿ ಭಾಗವಹಿಸುವಿಕೆ ಹಾಗೂ ಸದನದಲ್ಲಿ ಹಾಜರಾತಿ ವಿಚಾರದಲ್ಲಿ ನಮಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾದರಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ತಿಳಿಸಿದ್ದಾರೆ.
ಬೆಂಗಳೂರಿನ ಹೊರವಲಯದ ಕ್ಷೇಮವನದಲ್ಲಿ ಮೊದಲ ಬಾರಿಗೆ ಆಯ್ಕೆಯಾದ ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡು ಮಾತನಾಡಿದ ಅವರು, ತುರ್ತು ಸಂದರ್ಭ ಹೊರತುಪಡಿಸಿ ಸದನದ ಕಲಾಪಕ್ಕೆ ಸಿದ್ದರಾಮಯ್ಯ ಸಾಹೇಬರು ಗೈರು ಆಗಿದ್ದು ಕಡಿಮೆ. ಹೀಗಾಗಿ ಅವರೇ ನಮಗೆಲ್ಲ ಮಾದರಿ ಎಂದು ಹೇಳಿದರು.

ಅಧಿವೇಶನ ಸಂದರ್ಭದಲ್ಲಿ ನಾವು ಒಂದು ದಿನ ಸದನಕ್ಕೆ ಬಾರದಿದ್ದರೆ ಏಕೆ ಬರಲಿಲ್ಲ ಎಂದು ಕೇಳುತ್ತಾರೆ. ಇದು ಸದನ ಕಾರ್ಯಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವರ ಕ್ರಿಯಾಶೀಲತೆ ಮತ್ತು ಉತ್ಸಾಹಕ್ಕೆ ಸಾಕ್ಷಿ ಎಂದು ತಿಳಿಸಿದರು.

ಕಲಿಕೆ ಎಂಬುದು ನಿರಂತರ. ಅದರಲ್ಲೂ ಶಾಸನ ರೂಪಿಸುವ ಮಹತ್ತರ ಜವಾಬ್ದಾರಿ ಹೊಂದಿರುವ ಶಾಸಕರು ಅಧ್ಯಯನ ಶೀಲರಾಗಬೇಕು. ಈ ಮೂರು ದಿನಗಳ ತರಬೇತಿ ಅತಿ ಉಪಯುಕ್ತ. ಇಂತಹ ತರಬೇತಿ ಶಿಬಿರದ ಅಗತ್ಯತೆ ಇದೆ. ಶಿಬಿರ ಆಯೋಜಿಸಿರುವ ಸ್ಪೀಕರ್ ಖಾದರ್ ಅವರಿಗೆ ನಾನು ಶಾಸಕರ ಪರವಾಗಿ ಧನ್ಯವಾದ ತಿಳಿಸುತ್ತೇನೆ ಎಂದರು.

ಶಾಸಕರು ಏನೇ ಕೆಲಸ ಇದ್ದರೂ ಮೂರು ದಿನ ಶ್ರದ್ದೆಯಿಂದ ತರಬೇತಿಯಲ್ಲಿ ಪಾಲ್ಗೊಂಡು ಎಲ್ಲ ಹಿರಿಯರ ಮಾತು ಆಲಿಸಿ. ಇದು ನಿಮಗೆ ಮುಂದಿನ ಐದು ವರ್ಷ ಕ್ಷೇತ್ರದ ಜನರ ಸಮಸ್ಯೆ ಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು

ಮೊದಲನೇ ಬಾರಿ ಶಾಸಕರಾಗುವುದು ಸುಲಭ. ಅನುಕಂಪ, ವಿರೋಧಿ ಅಲೆ, ಹೊಸಮುಖಕ್ಕೆ ಅವಕಾಶ ಹೀಗೆ ಹಲವು ಅಂಶಗಳು ಕಾರಣವಾಗುತ್ತದೆ. ಆದರೆ ಎರಡನೇ ಬಾರಿಗೆ ಆಯ್ಕೆ ಆಗಬೇಕಾದರೆ ಜನರ ಸೇವೆ ಮಾಡಿದ್ದರಷ್ಟೇ ಗೆಲ್ಲಲು ಸಾಧ್ಯ. ಅಧಿವೇಶನ ಸಂದರ್ಭದಲ್ಲಿ ಕ್ಷೇತ್ರದ ಸಮಸ್ಯೆ ಗಳ ಬಗ್ಗೆ ಸರ್ಕಾರ ಹಾಗೂ ಸಚಿವರ ಗಮನಕ್ಕೆ ತರುವುದು ಹೇಗೆ, ಕ್ಷೇತ್ರದ ಜನರ ಧ್ವನಿಯಾಗಿ ಕೆಲಸ ಮಾಡುವುದು ಹೇಗೆ ಎಂಬ ಬಗ್ಗೆಯೂ ತರಬೇತಿ ಶಿಬಿರದಲ್ಲಿ ನಿಮಗೆ ಉಪಯುಕ್ತ ಮಾಹಿತಿ ಸಿಗಲಿದೆ. ನಿಮಗೆಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಸ್ಪೀಕರ್ ಯು. ಟಿ. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಚ್. ಕೆ. ಪಾಟೀಲ್, ವಿಧಾನ ಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಕ್ಷೇಮ ವನದ ಸುರೇಂದ್ರ ಹೆಗ್ಡೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸ್ಪೀಕರ್ ಅವರು ಜಮೀರ್ ಅಹಮದ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಚುನಾವಣೆಗೂ ಮುನ್ನವೆ ರಾಜಕೀಯ ನಾಯಕರುಗಳ ʼಹೈ ಡ್ರಾಮʼ
ಬೆಂಗಳೂರು; 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಆದರೆ ಮುಂಬರುವ ಚುನಾವಣೆಯ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಇಂದಿನಿಂದಲೇ ರಾಜಕೀಯ ನಾಯಕರುಗಳು ರೇಸ್ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು 10 ತಿಂಗಳುಗಳು ಬಾಕಿ ಇದ್ದು, ಅದರ ಸಲುವಾಗಿ ಈಗಾಗಲೇ ಕಾಂಗ್ರೆಸ್‌ ಪಕ್ಷದ ನಾಯಕರುಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಕಾದಾಟ ಶುರುವಾಗಿದೆ,
ಕಳೆದ ವಾರ ನಡೆದ ಒಕ್ಕಲಿಗರ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿದ್ದು, ಎಸ್.ಎಂ. ಕೃಷ್ಣ ಬಳಿಕ ಒಕ್ಕಲಿಗರೊಬ್ಬರಿಗೆ ಸಿಎಂ ಆಗುವ ಅವಕಾಶವಿದೆ, ಹಾಗಾಗಿ ಒಕ್ಕಲಿಗ ಸಮಾಜ ಈ ಅವಕಾಶ ತಪ್ಪಿಸಿಕೊಳ್ಳಬಾರದು ಎಂದು ಹೇಳುವ ಮೂಲಕ ಒಕ್ಕಲಿಗ ಸಮಾಜದ ಬೆಂಬಲವನ್ನ ಚುನಾವಣೆಗೆ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ.

ಅದೇ ರೀತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಸಿಎಂ ಆಗಬೇಕು ಎಂಬುದು ಅವರ ಬೆಂಬಲಿಗರ ಅಭಿಪ್ರಾಯ.ಆಗಸ್ಟ್‌ 12ಕ್ಕೆ 75 ವರ್ಷಕ್ಕೆ ಕಾಲಿಡಲಿರುವ ಸಿದ್ದರಾಮಯ್ಯ ಅವರ ಜನುಮದಿನದ ಅಮೃತ ಮಹೋತ್ಸವವನ್ನು ಅವರ ಅಭಿಮಾನಿಗಳು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಜನ ಸೇರುತಿದ್ದು ಇದರ ಮುಖ್ಯ ಉದ್ದೇಶವೇ ಸಿದ್ದರಾಮಯ್ಯನವರನ್ನು ಇನ್ನೊಮ್ಮೆ ಮುಖ್ಯಮಂತ್ರಿ ಮಾಡಬೇಕೆಂಬುದಾಗಿದೆ. ಹೀಗಾಗಿ ಚುನಾವಣೆಗೂ ಮನ್ನವೆ ಸಿದ್ದರಾಮಯ್ಯ ಮತ್ತುಡಿಕೆಶಿ ಅಭಿಮಾನಿಗಳ ನಡುವೆ ದಿನದಿಂದ ದಿನಕ್ಕೆ ಮಾತಿನ ಸಮರ ಹೆಚ್ಚಾಗುತ್ತಿದೆ.

ಹಾಗೆಯೇ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸಂಪೂರ್ಣ ಜನರ ಆರ್ಶೀವಾದದೊಂದಿಗೆ ಬಹುಮತದಿಂದ ಆಡಳಿತ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದ ಬಗ್ಗೆ ಬಿಜೆಪಿ ಟೀಕಿಸಿದ್ದುಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯದ ಟ್ವೀಟ್ ಮಾಡಿದೆ.

ಕಳೆದ ವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ . ಕುಮಾರಸ್ವಾಮಿ, ನಾಡಿನಲ್ಲಿ ಬಹಳ ಜನ ಸಿಎಂ ಆಗಬೇಕೆಂದು ಆಸೆ ಪಟ್ಟಿದ್ದಾರೆ. ಆದರೆ ಅದರ ವಾಸ್ತವವೇ ಬೇರೆ ಇದೆ. ತಾಯಿ ಚಾಮುಂಡೇಶ್ವರಿ ಮತ್ತು ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ, ನಿಮ್ಮ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಬರುತ್ತೇನೆ ಎಂದಿದ್ದಾರೆ ಹೀಗೆ ದಿನದಿಂದ ದಿನಕ್ಕೆ ರಾಜಕೀಯ ನಾಯಕರುಗಳು ಮುಖ್ಯಮಂತ್ರಿ ಗಾದಿಯ ಮೇಲೆ ಕಣ್ಣಿಟ್ಟಿದ್ದು, ಮಗು ಹುಟ್ಟುವ ಮುನ್ನ ಕುಲಾಯಿ ಹೊಲೆಸುವ ಹಾಗೆ ಪರಿಸ್ಥಿತಿ ನಿರ್ಮಾಣವಾಗಿದೆ.